ವಿಷಯದ ವಿವರಗಳಿಗೆ ದಾಟಿರಿ

Archive for

12
ಸೆಪ್ಟೆಂ

ಸ್ವಾತಂತ್ರ್ಯೋತ್ಸವ ವಿಶೇಷ ಸರಣಿ – ದಿನಕ್ಕೊಬ್ಬ ದೇಶಭಕ್ತರ ಸ್ಮರಣೆ

ದಿನ – 26:
ಸರ್ದಾರ್ ಅಜಿತ್ ಸಿಂಗ್
– ರಾಮಚಂದ್ರ ಹೆಗಡೆ

ajitsinghಪಂಜಾಬ್ ಪ್ರಾಂತ್ಯದಲ್ಲಿ ಬ್ರಿಟಿಷ್ ಸರ್ಕಾರದ ದೌರ್ಜನ್ಯದ ವಿರುದ್ಧ ದನಿಯೆತ್ತಿದ, ಜನರನ್ನು ಸಂಘಟಿಸಿದ ಅಗ್ರಶ್ರೇಣಿಯ ಕ್ರಾಂತಿಕಾರಿ ಸರ್ದಾರ್ ಅಜಿತ್ ಸಿಂಗ್. ಇವರು ಕ್ರಾಂತಿಸಿಂಹ ಸರ್ದಾರ್ ಭಗತ್ ಸಿಂಗ್ ರ ಚಿಕ್ಕಪ್ಪ. 1947 ರ ಆಗಸ್ಟ್ 15 ರಂದು ಭಾರತ ಸ್ವತಂತ್ರವಾದಾಗ ‘ಥ್ಯಾಂಕ್ ಗಾಡ್, ನಮ್ಮ ಕೆಲಸ, ಹೋರಾಟ ಯಶಸ್ವಿಯಾಯಿತು’ ಎಂದು ಖುಷಿಯಿಂದ, ಸಂಭ್ರಮದಿಂದ ಆ ಕ್ಷಣಗಳನ್ನು ಕಂಡು ಅಂದೇ ‘ಧನ್ಯತೆಯ ಸಾವು’ ಕಂಡವರು ಅಜಿತ್ ಸಿಂಗರು. ಸ್ವತಂತ್ರ ಭಾರತದ ಕನಸು ಕಂಡು ಅದಕ್ಕಾಗಿ ತಮ್ಮ ಬದುಕನ್ನೇ ಸಮರ್ಪಿಸಿ ಆ ಕನಸು ನನಸಾಗುವ ಮುನ್ನವೇ ಮರೆಯಾದವರು ಕೋಟ್ಯಾಂತರ ಮಂದಿ. ಹಾಗೆ ಕನಸು ನನಸಾದ ಕ್ಷಣವನ್ನು ಕಣ್ತುಂಬಿಕೊಳ್ಳುವ ಭಾಗ್ಯ ಅನೇಕರಿಗೆ ಸಿಗಲೇ ಇಲ್ಲ. ಸರ್ದಾರ್ ಅಜಿತ್ ಸಿಂಗರು ಆ ವಿಷಯದಲ್ಲಿ ಅದೃಷ್ಟವಂತರು. ಹಾಗಾಗಿ ಅವರದು ಧನ್ಯತೆಯ ಸಾವು. ಮತ್ತಷ್ಟು ಓದು »

12
ಸೆಪ್ಟೆಂ

ಭವಿಷ್ಯದ ಅರಮನೆಯ ಕನಸೇನೋ ಚಂದ, ಆದರೆ….

– ಗುರುರಾಜ ಕೋಡ್ಕಣಿ. ಯಲ್ಲಾಪುರ

images‘ಕಂಗ್ರಾಟ್ಸ್ ಅನಿತಾ.. ನೀನು ಸಾಧಿಸಿಬಿಟ್ಟೆ ಮಗಳೇ, ನೀನು ಸಾಧಿಸಿ ಬಿಟ್ಟೆ. ನಿನಗೀಗ ಕ್ಯಾಂಪಸ್ ಸಂದರ್ಶನದಲ್ಲಿ ಕೆಲಸ ಸಿಕ್ಕಿರುವ ಕಂಪನಿ ಎಂಥಹ ಅದ್ಭುತ ಸಂಸ್ಥೆ ಗೊತ್ತೆ..?? ಈ ಒಂದು ವರ್ಷದ ಅವಧಿಯಲ್ಲೇ ಅದು ಸಾವಿರಾರು ಕೋಟಿಗಳಷ್ಟು ಲಾಭ ಪಡೆದುಕೊಂಡಿದೆ. ನಿನ್ನ ಶ್ರಮ ಸಾರ್ಥಕವಾಯಿತು ಮಗು. ದೀಪಾ, ಎಲ್ಲರಿಗೂ ಐಸ್ ಕ್ರೀಮ್ ತರಿಸು, ನಮ್ಮ ಮಗಳ ಈ ಯಶಸ್ಸನ್ನು ಖುಷಿಯಾಗಿ ಆಚರಿಸೋಣ’ ಎಂದು ಕೈಯಲ್ಲಿದ್ದ ಪತ್ರವನ್ನು ಅಪ್ಪ ಸಂತಸದಿಂದ ಓದುತ್ತಿದ್ದಾಗ ಅನಿತಾಳದ್ದು ನಿರ್ವಿಕಾರ ಮುಖಭಾವ. ಪದವಿ ಮುಗಿಯುವ ಮುನ್ನವೇ ಆಕೆಯ ಪ್ರತಿಭೆಯನ್ನು ಗಮನಿಸಿದ್ದ ಪ್ರತಿಷ್ಟಿತ ಕಂಪನಿಯೊಂದು ಆಕೆಗೆ ಉದ್ಯೋಗವನ್ನು ನೀಡಿತ್ತು. ಉದ್ಯೋಗ ಖಾತ್ರಿಯ ಪತ್ರವನ್ನೋದುತ್ತಿದ್ದ ಅಪ್ಪನಿಗೆ ಹೆಮ್ಮೆಯಿಂದ ಕೊರಳುಬ್ಬಿದ ಅನುಭವ. ಸಂತಸದ ಹಿಂದೆಯೇ ಅಮ್ಮನದ್ದೊಂದು ಸಣ್ಣ ಎಚ್ಚರಿಕೆ,’ಈಗ ಕೇವಲ ಐಸ್ ಕ್ರೀಮ್ ತಿಂದು ಸಂಭ್ರಮಿಸೋಣ ಮಗಳೇ, ನೀನು ಇನ್ನಷ್ಟು ಶ್ರಮಪಡು. ಹೆಚ್ಚು ಹೆಚ್ಚು ಏಕಾಗ್ರತೆಯಿಂದ ಓದು. ಕಡಿಮೆಯೆಂದರೂ ತೊಂಬತ್ತೈದು ಪ್ರತಿಶತ ಅಂಕಗಳನ್ನು ನೀನು ಗಳಿಸಬೇಕು. ನಿನ್ನ ಅಂಕಗಳನ್ನು, ಪ್ರತಿಭೆಯನ್ನು ನೋಡಿ ಕಂಪನಿ ನಿನಗೆ ಒಂದೇ ವರ್ಷದಲ್ಲಿ ಡಬ್ಬಲ್ ಪ್ರಮೋಷನ್ ಕೊಟ್ಟು ಬಿಡಬೇಕು. ಹಾಗೆ ಅಭ್ಯಾಸದಲ್ಲಿ ನಿನ್ನನ್ನು ನೀನು ತೊಡಗಿಸಿಕೊ ಮಗಳೇ, ಓದುವುದೊಂದೇ ನಿನ್ನ ಗುರಿಯಾಗಬೇಕು ಈಗ. ಇದು ಕಷ್ಟಪಡುವ ಕಾಲ. ಮುಂದೆ ಭವಿಷ್ಯದಲ್ಲಿ ನೀನು ಸಾಧನೆಯ ಶಿಖರದೆತ್ತರಕ್ಕೆ ನಿಂತಾಗ ಈಗ ಪಟ್ಟ ಶ್ರಮವೂ ನಿನಗೆ ಸಿಹಿಯಾದ ಅನುಭವವಾಗಿ ಭಾಸವಾಗುತ್ತದೆ ಮಗು. ಈಗ ಕೇವಲ ಓದುವುದೊಂದೇ ನಿನ್ನ ಗಮ್ಯ, ಶ್ರಮಪಡು ಅಷ್ಟೇ’ ಎನ್ನುವ ಅಮ್ಮನ ಮಾತುಗಳನ್ನು ಕೇಳಿದ ಅನಿತಾಳ ಮುಖದಲ್ಲಿ ಭಾವಹೀನ ಶುಷ್ಕನಗೆಯೊಂದು ಮೂಡಿದ್ದನ್ನು ಆಕೆಯ ಸಾಧನೆಯನ್ನು ಆಸ್ವಾಧಿಸುವ ಸಂಭ್ರಮದಲ್ಲಿದ್ದ ಪೋಷಕರು ಗಮನಿಸಲೇ ಇಲ್ಲ. ಮತ್ತಷ್ಟು ಓದು »