ಸ್ವಾತಂತ್ರ್ಯೋತ್ಸವ ವಿಶೇಷ ಸರಣಿ – ದಿನಕ್ಕೊಬ್ಬ ದೇಶಭಕ್ತರ ಸ್ಮರಣೆ
ದಿನ – 27:
‘ಮಾಸ್ಟರ್ ದಾ’ ಸೂರ್ಯ ಸೇನ್
– ರಾಮಚಂದ್ರ ಹೆಗಡೆ
ಬಂಗಾಳದ ಮತ್ತೊಬ್ಬ ಕ್ರಾಂತಿಕಿಡಿ, ಬ್ರಿಟಿಷರ ಎದೆ ನಡುಗಿಸಿದ ‘ಚಿತ್ತಗಾಂಗ್ ಶಸ್ತ್ರಾಗಾರ ದಾಳಿ’ ಯ ರೂವಾರಿ ಸೂರ್ಯ ಸೇನ್. ಜನರು, ಕ್ರಾಂತಿಕಾರಿ ಸಹವರ್ತಿಗಳು ಪ್ರೀತಿಯಿಂದ ಕರೆಯುತ್ತಿದ್ದ ಹೆಸರು ಮಾಸ್ಟರ್ ದಾ. ಪ್ರಸ್ತುತ ಬಾಂಗ್ಲಾದೇಶದಲ್ಲಿರುವ ಚಿತ್ತಗಾಂಗ್ ನ ಸುತ್ತಮುತ್ತಲಿನ ಪ್ರದೇಶದಲ್ಲಿ ಬ್ರಿಟಿಷರ ವಿರುದ್ಧ ದೊಡ್ಡಮಟ್ಟದ ಹೋರಾಟವನ್ನು ರೂಪಿಸುವಲ್ಲಿ ಸೂರ್ಯ ಸೇನ್ ರ ಪಾತ್ರ ಪ್ರಮುಖವಾದದ್ದು. ಬಿಎ ವಿದ್ಯಾರ್ಥಿಯಾಗಿದ್ದಾಗ ಭಾರತ ಸ್ವಾತಂತ್ರ್ಯ ಸಮರದ ಕುರಿತು ಅರಿತ ಸೇನ್, ಕ್ರಾಂತಿಕಾರಿ ಸಂಘಟನೆ ಅನುಶೀಲನ ಸಮಿತಿಯೆಡೆಗೆ ಆಕರ್ಷಿತರಾದರು. ೧೯೧೮ ರಲ್ಲಿ ಚಿತ್ತಗಾಂಗ್ ನಲ್ಲಿ ಶಿಕ್ಷಕನಾಗಿ ವೃತ್ತಿ ಆರಂಭಿಸಿದ ಸೇನ್ ಆರಂಭದಲ್ಲಿ ಗಾಂಧೀಜಿಯವರ ಅಸಹಕಾರ ಚಳುವಳಿಯ ಭಾಗವಾಗಿದ್ದರು. ಆದರೆ ಅದು ಮಧ್ಯದಲ್ಲೇ ಸ್ಥಗಿತವಾದಾಗ ಬೇಸರಗೊಂಡ ಸೇನ್ ಭಾರತದ ಸ್ವಾತಂತ್ರ್ಯಕ್ಕೆ ಕ್ರಾಂತಿಮಾರ್ಗವೇ ಸರಿ ಎಂದು ನಿಶ್ಚಯಿಸಿದರು. ಕ್ರಾಂತಿಕಾರಿ ಸಂಘಟನೆ ಯುಗಾಂತರದ ಕಾರ್ಯಕರ್ತನಾಗಿ ಕ್ರಾಂತಿಕಾರ್ಯದಲ್ಲಿ ತೊಡಗಿಸಿಕೊಂಡ ಅವರು ಚಿತ್ತಗಾಂಗ್ ಜಿಲ್ಲೆಯಾದ್ಯಂತ ಕ್ರಾಂತಿ ಚಟುವಟಿಕೆ ಪಸರಿಸುವಲ್ಲಿ ಹಾಗೂ ಕ್ರಾಂತಿಕಾರಿಗಳ ಬಹುದೊಡ್ಡ ಯುವಪಡೆಯನ್ನು ಕಟ್ಟುವಲ್ಲಿ ಅವಿರತವಾಗಿ ದುಡಿದರು. ಮತ್ತಷ್ಟು ಓದು
ಗುರು – ಶಿಷ್ಯ
– ಗೀತಾ ಹೆಗ್ಡೆ
ಅರಿವು ಅಂದರೆ ತಿಳುವಳಿಕೆ. ಇದು ನಮಗೆ ಹುಟ್ಟಿನಿಂದ ಬರಲು ಸಾಧ್ಯವಿಲ್ಲ. ಇದಕ್ಕೆ ಒಬ್ಬ ಗುರುವಿನ ಅಗತ್ಯ ಇದೆ. ಒಂಬತ್ತು ತಿಂಗಳು ಹೊತ್ತು ಹೆತ್ತು ಸಾಕಿದ ತಾಯಿ ಮೊದಲ ಗುರು. ಎಳೆ ಕಂದಮ್ಮನಿಗೆ ಹಾಲುಣಿಸುವ ತರಬೇತಿಯಿಂದ ಹಿಡಿದು ತನ್ನ ಜೀವಿತಾವಧಿಯ ಕೊನೆಯವರೆಗೂ ಒಂದಲ್ಲಾ ಒಂದು ಗಳಿಗೆಗಳ ಸಂದರ್ಭದಲ್ಲಿ ಜೊತೆಯಾಗಿ ನಿಂತು ಸಲಹುವ ಗುರು ರಕ್ಷೆ ಅವಳು. ಹಾಗಾದರೆ ತಂದೆ? ಮುದ್ದು ಮಾಡಿ ಎತ್ತಿ ಹಾರಿಸಿ ಕಂದನ ಲಾಲನೆ ಪಾಲನೆ ಕಡೆ ಕಣ್ಣಿಟ್ಟು ಬೇಕಾದ್ದೆಲ್ಲ ತನ್ನ ಶಕ್ತ್ಯಾನುಸಾರ ತಂದು ಕೊಡುವ; ತರಲಾರದ್ದಕ್ಕೆ ಸಂಕಟ ಪಡುತ್ತ ಹಪಹಪಿಸಿ ಮರೆಯಲ್ಲಿ ಕಣ್ಣೊರೆಸಿಕೊಂಡು ಜವಾಬ್ದಾರಿ ಹೊತ್ತು ಮಕ್ಕಳಿಗೆ ಶ್ರೀ ರಕ್ಷೆ ನೀಡಿ, ಬೆಳೆಯುವ ಮಕ್ಕಳ ಏಳಿಗೆಯ ನೋಡಿ ಬೀಗುವ ಕಣ್ಣಿಗೆ ಕಾಣದ ಗುರು ಎಂದರೂ ತಪ್ಪಾಗಲಾರದು. ಏಕೆಂದರೆ ಸಂಸಾರದಲ್ಲಿ ಮಕ್ಕಳಿಂದ ಏನೆ ತಪ್ಪು ಒಪ್ಪಿದ್ದರೂ ಸಾಮಾನ್ಯವಾಗಿ ತಾಯಿ ಕಲಿಸಿದ ಬುದ್ಧಿ ಹೇಳೋದೆ ಜಾಸ್ತಿ. ತಂದೆ, ತಾಯಿ ಕಲಿಸಿದ ಬುದ್ಧಿ ಹೇಳೋದು ಅಪರೂಪ. ತಂದೆ ತಾಯಿಯಾದವರೂ ಹೇಳುವುದೂ ಹಾಗೆ, ಒಳ್ಳೆದಾದರೆ ನಾ ಕಲಿಸಿದ್ದು ಅದೆ ತಪ್ಪಾದರೆ ಅವರಮ್ಮ ಕಲಿಸಿದ ಬುದ್ಧಿ. ಎಷ್ಟು ವಿಪರ್ಯಾಸ! ಮತ್ತಷ್ಟು ಓದು