ವಿಷಯದ ವಿವರಗಳಿಗೆ ದಾಟಿರಿ

Archive for

21
ಸೆಪ್ಟೆಂ

ಪ್ರೇತದ ಆತ್ಮ ಚರಿತೆ! (ಭಾಗ ೪)

– ಶ್ರೀಕಾಂತ್ ಶೆಟ್ಟಿ
ಪ್ರೇತದ ಆತ್ಮ ಚರಿತೆ! (ಭಾಗ ೧)
ಪ್ರೇತದ ಆತ್ಮ ಚರಿತೆ! (ಭಾಗ ೨)
ಪ್ರೇತದ ಆತ್ಮ ಚರಿತೆ! (ಭಾಗ 3)

14117697_1080861882009420_308061420913968049_nಆಗಷ್ಟ್ ೩೦ ೧೭೭೩ ಇಡಿ ಪುಣೆ ಗಣೇಶ ಉತ್ಸವದ ಸಂಭ್ರಮದಲ್ಲಿ ಮುಳುಗೇಳುತ್ತಿದೆ. ಕೇಸರಿ ಗುಲಾಬಿ ರಂಗಿನೋಕುಳಿಗೆ ನಗರ ನವಶೃಂಗಾರಗೊಂಡಿದೆ. ಶನಿವಾರವಾಡೆಯಲ್ಲೂ ಉತ್ಸವ ಕಳೆಗಟ್ಟಿತ್ತು. ಹಾಡು, ಕುಣಿತ, ಕೀರ್ತನೆ,ಆರತಿ, ಸಂತರ್ಪಣೆ ಭರ್ಜರಿಯಾಗಿ ನಡೆದಿತ್ತು. ಪೇಶ್ವಾಗಳ ಆರಾಧ್ಯಮೂರ್ತಿ ಚಿಂತಾಮಣಿ ಗಣಪತಿಯ ಪೂಜೆ ಆಗ‍ಷ್ಟೆ ಮುಗಿದು ಎಲ್ಲರೂ ವರ್ಷಕ್ಕಾಗುವಷ್ಟು ಸಂಭ್ರಮವನ್ನು ಮನದಲ್ಲಿ ತುಂಬಿಕೊಂಡು ಮರಳಿದರು. ವಾಡೆಯಲ್ಲಿ ಕಾವಲು ಭಟರು ಮತ್ತು ಪರಿಚಾರಕ ವರ್ಗವನ್ನು ಬಿಟ್ಟು ಉಳಿದವರೆಲ್ಲರೂ ತಮ್ಮ ತಮ್ಮ ಸ್ವಸ್ಥಾನ ಸೇರಿಕೊಂಡಿದ್ದರು. ಮಹಾ ದುರಂತವೊಂದು ನಡೆಯುವ ಮೊದಲು ಆವರಿಸುವ ಅಸಾದ್ಯ ನೀರವತೆ ವಾಡೆಯನ್ನು ಆವರಿಸಿಕೊಂಡಿತ್ತು. ರಂಗ ಮಹಲ್ ಕಡೆಯಿಂದ ಐದಾರು ದೀವಟಿಕೆಗಳು ಒಳಪ್ರವೇಶಿಸಿದವು. ಖಿಡ್ಕಿ ದರವಾಜಾ ಬಳಿ ಎರಡು ಬಟ್ಟೆ ಸುತ್ತಿದ ಮುಖಗಳು ಗೋಚರಿಸಿದವು. ಕ್ಷಣಮಾತ್ರದಲ್ಲೇ ಶನಿವಾರವಾಡೆಯ ಹಜಾರಗಳಲ್ಲಿ ಹತ್ತಾರು ಗುಂಪುಗಳ ಹೆಜ್ಜೆಯ ಸಪ್ಪಳ ಮೊಳಗಿತು. ವಾಡೆಯ ಮುಖ್ಯದ್ವಾರದ ಬಳಿ ಐವತ್ತು ಜನರಿದ್ದ ಸೇನಾ ತುಕುಡಿಯೊಂದು ಬಂದು ನಿಂತಿತು. ಗುಂಪಿನ ನಾಯಕ ಸುಮೇರು ಸಿಂಗ್ ಕಾವಲುಗಾರನ ಬಳಿ ಬಂದು ಕೂಡಲೆ ಪೇಶ್ವಾ ಅವರನ್ನು ಕಾಣಬೇಕು ತುರ್ತು ಕೆಲಸವಿದೆ ಎಂದ. ಈಗ ಪೇಶ್ವಾ ಅವರು ನಿದ್ದೆಯಲ್ಲಿದ್ದಾರೆ. ನಾಳೆ ಬಂದು ಭೇಟಿಯಾಗಿ ಎಂದ ಮುಖ್ಯದ್ವಾರದ ರಕ್ಷಣೆಯಲ್ಲಿದ್ದ ಮಹಾದಜಿ ಗೋರೆ… ಮಾತು ಪೂರ್ಣಗೊಳ್ಳುವ ಮೊದಲೇ ಸುಮೇರು ಸಿಂಗ್ ಓರೆಯಿಂದ ಕತ್ತಿ ಹೊರಬಂದು ಗೋರೆಯ ಹೊಟ್ಟೆ ಸೀಳಿ ಹಾಕಿತು. ತುಕುಡಿಯನ್ನು ಒಳನುಗ್ಗುವಂತೆ ಸುಮೇರ್ ಆದೇಶಿಸಿದ ಕೇವಲ ಹತ್ತು ನಿಮಿಷದಲ್ಲೇ ವಾಡೆ ಸುಮೇರು ಸಿಂಗ್ ಕೈವಶವಾಯಿತು. ಆ ವಾಡೆಯ ಕೆಳ ಅಂತಸ್ತಿನಲ್ಲೇ ರಘುನಾಥ ರಾವ್, ಆನಂದಿ ಬಾಯಿ ವಾಸವಾಗಿದ್ದರು. ಸುಮೇರು ಸಿಂಗ್ ಹಿಂಬಾಲಕರು ವಾಡೆಯ ಕಾವಲಿಗಿದ್ದವರನ್ನು ತರಿದು ಹಾಕಿದರು. ಘನಘೊರ ರಕ್ತಪಾತ ನಡೆಯಿತು. ಕೆಲವೇ ಗಂಟೆಗಳ ಮೊದಲು ಚೌತಿಯ ಸಡಗರದಲ್ಲಿ ಗಿಜಿಗುಟ್ಟುತ್ತಿದ್ದ ಶನಿವಾರವಾಡೆ ಈಗ ಅಕ್ಷರಶಃ ಸ್ಮಶಾನವಾಗಿ ಮಾರ್ಪಟ್ಟಿತ್ತು. ವಾಡೆಯ ಮೊದಲ ಅಂತಸ್ತಿನ ತೇಗದ ಮುಚ್ಚಿಗೆಗಳಿಂದ ರಕ್ತ ಒಸರ ತೊಡಗಿತು. ಸುಮೇರು ಸಿಂಗ್ ನಾರಾಯಣ ಪೇಶ್ವಾ ಮಲಗಿದ್ದ ಕೋಣೆಗೆ ನುಗ್ಗಿದ. ವಾಡೆಯಲ್ಲಿ ಆಹಾಕಾರ ಚೀತ್ಕಾರಗಳು ಎದ್ದಿರುವುದನ್ನು ಕಂಡು ನಾರಾಯಣನಿಗೆ ಪರಿಸ್ಥಿತಿಯ ಅರಿವಾಯಿತು. ಮತ್ತಷ್ಟು ಓದು »