ವಿಷಯದ ವಿವರಗಳಿಗೆ ದಾಟಿರಿ

Archive for

9
ಸೆಪ್ಟೆಂ

ತಮಿಳುನಾಡು, ಕಾವೇರಿ, ಜಯಲಲಿತ, ದೇವೇಗೌಡರು ಮತ್ತು ನಾನು

– ಪ್ರೇಮಶೇಖರ

jayನೆರೆಯ ತಮಿಳುನಾಡಿನಲ್ಲಿ ಹಲವು ಅಚ್ಚರಿ ಹುಟ್ಟಿಸುವ ವಿರೋಧಾಭಾಸಗಳು ಕಾಣಸಿಗುತ್ತವೆ. ತಮಿಳರು ಮಹಾ ಭಾಷಾಭಿಮಾನಿಗಳು. ತಮ್ಮ ನಾಡು ನುಡಿಯ ಬಗ್ಗೆ ಅವರ ಪ್ರೀತಿ, ಅಭಿಮಾನ, ಕಾಳಜಿಗೆ ಸಮಕಾಲೀನ ಭಾರತೀಯ ಇತಿಹಾಸದಲ್ಲಿ ದಂತಕತೆಯ ಆಯಾಮವೊದಗಿಬಿಟ್ಟಿದೆ. ಆದರೆ, ಇಂತಹ ಸ್ವಾಭಿಮಾನಿ ತಮಿಳರು ಕಳೆದ ನಲವತ್ತು-ನಲವತ್ತೈದು ವರ್ಷಗಳಿಂದಲೂ ತಮಿಳೇತರರನ್ನು ತಮ್ಮ ರಾಜಕೀಯ ನಾಯಕರನ್ನಾಗಿ ಒಪ್ಪಿಕೊಂಡು ಅವರ ಕೈಯಲ್ಲಿ ತಮ್ಮ ರಾಜ್ಯವನ್ನಿಟ್ಟುಬಿಟ್ಟಿದ್ದಾರೆ. ಕರುಣಾನಿಧಿ ಕಳೆದ ನಾಲ್ಕು ದಶಕಗಳಿಂದಲೂ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಪಕ್ಷದ ಅನಭಿಷಿಕ್ತ ಸಾಮ್ರಾಟರಾಗಿ ಮೆರೆಯುತ್ತಿದ್ದಾರೆ, ನಾಲ್ಕು ಬಾರಿ ತಮಿಳುನಾಡಿನ ಮುಖ್ಯಮಂತ್ರಿಯಾಗಿದ್ದಾರೆ. ಈ ಕರುಣಾನಿಧಿ ತೆಲುಗು ಮೂಲದವರು. ಡಿಎಂಕೆ ಪಕ್ಷವನ್ನು ಒಡೆದು ಅದಕ್ಕೆ ಪರ್ಯಾಯವಾಗಿ “ಆಲ್ ಇಂಡಿಯಾ ಅಣ್ಣಾ ದ್ರಾವಿಡ ಮುನ್ನೇತ್ರ ಕಳಗಂ” (ಎಐಎಡಿಎಂಕೆ) ಪಕ್ಷ ಕಟ್ಟಿ ಸತತ ಹತ್ತು ವರ್ಷಗಳವರೆಗೆ ತಮಿಳುನಾಡನ್ನು ಆಳಿದ ಎಂ. ಜಿ. ರಾಮಚಂದ್ರನ್ (ಎಂಜಿಆರ್) ಒಬ್ಬ ಮಲೆಯಾಳಿ. ಅವರ ಸಹವರ್ತಿ ಮತ್ತು ಉತ್ತರಾಧಿಕಾರಿ, ಕೋಟ್ಯಂತರ ತಮಿಳರ ಪ್ರೀತಿಯ “ಅಮ್ಮ” ಜಯಲಲಿತಾರ ಮೂಲ ಕರ್ನಾಟಕದಲ್ಲಿ. ಅದಕ್ಕೂ ಹಿಂದೆ ಹೋಗುವುದಾದರೆ ದ್ರಾವಿಡ ಚಳುವಳಿಯ ಅಧ್ವರ್ಯು, ತಮಿಳುನಾಡಿನ ಇತಿಹಾಸದ ದಿಕ್ಕನ್ನೇ ಬದಲಿಸಿದ “ಪೆರಿಯಾರ್” ಬಿರುದಾಂಕಿತ ಇ. ವಿ. ರಾಮಸ್ವಾಮಿ ನಾಯಕರ್ ಕನ್ನಡಿಗರಂತೆ. ಇವರೆಲ್ಲರೂ ತಮಿಳನ್ನು ತಮ್ಮದಾಗಿಸಿಕೊಂಡು, ತಮಿಳುನಾಡಿಗೆ ತಮ್ಮನ್ನರ್ಪಿಸಿಕೊಂಡು ತಮಿಳರ ಹೃದಯಗಳಲ್ಲಿ ಸ್ಥಾನ ಗಳಿಸಿಕೊಂಡುಬಿಟ್ಟರು. ಮತ್ತಷ್ಟು ಓದು »

9
ಸೆಪ್ಟೆಂ

ಕಾಶ್ಮೀರ ಸಮಸ್ಯೆಯ ವರ್ತಮಾನ

– ಪ್ರೊ. ರಾಜಾರಾಮ ಹೆಗಡೆ

12-kashmir-protest-2ಕಾಶ್ಮೀರವು ಇಂದು ಕೇವಲ ಭಾರತ ಪಾಕಿಸ್ತಾನ ಎಂಬ ಎರಡು ರಾಷ್ಟ್ರಗಳ ನಡುವಿನ ಹಗೆಯ ಕಾರಣವಷ್ಟೇ ಅಲ್ಲ, ಭಾರತದಲ್ಲೇ ಆಂತರಿಕ ಹಗೆಯ ಹೊಗೆಯೆಬ್ಬಿಸುತ್ತಿರುವ ಒಂದು ವರ್ತಮಾನದ ಸಮಸ್ಯೆಯಾಗಿದೆ. ಹಾಗಾಗಿ ಕಾಶ್ಮೀರ ವಿವಾದವು ಹೇಗೆ ಪ್ರಾರಂಭವಾಯಿತು, ನಮ್ಮ ಮುತ್ಸದ್ದಿಗಳು ಎಲ್ಲಿ ಎಡವಿದರು ಎಂಬ ಹಿಸ್ಟರಿಗಿಂತ ಅದರ ತೆಕ್ಕೆಯೊಳಗೆ ಬರಲು ಸೋಲುವ ಅಥವಾ ನಿರಾಕರಿಸುವ ವರ್ತಮಾನದ ಆಯಾಮಗಳು ನನಗೆ ಸೋಜಿಗ ಹುಟ್ಟಿಸುತ್ತಿವೆ. ಇಂದು ಕಾಶ್ಮೀರವು ಭಾರತ ಪಾಕಿಸ್ತಾನಗಳ ಗಡಿ ಸಮಸ್ಯೆಯಾಗಿ ಉಳಿದಿಲ್ಲ, ಬದಲಾಗಿ ಅದು ದೇಶದ ಸಮಸ್ತ ಪ್ರಗತಿಪರ ಹೋರಾಟಗಾರರಿಗೂ, ಆಜಾದಿಯ ಕರೆಯಾಗಿ ಕಾಣಿಸುತ್ತಿದೆ ಎಂಬುದನ್ನು ಗಮನಿಸುವುದು ಅಗತ್ಯ. ಕೇವಲ ಮುಸ್ಲಿಂ ಸಂಘಟನೆಗಳೊಂದೇ ಅಲ್ಲ ಭಾರತದ ಪ್ರಗತಿಪರ ಸಂಘಟನೆಗಳೂ, ಕಾಶ್ಮೀರಿ ಮುಸ್ಲಿಂ ಹೋರಾಟಗಾರರ ಜೊತೆಗೆ ಆಜಾದಿಯ ಘೋಷಣೆ ಕೂಗುತ್ತಿವೆ. ದೇಶದ ಬರ್ಬಾದಿಯ ಕುರಿತು ಮಾತನಾಡುವುದು ಈ ಸಂಘಟನೆಗಳಿಗೆ ರಾಷ್ಟ್ರೀಯತೆಯ ಸಮಸ್ಯೆಯಾಗಿ ಕಾಣಿಸುತ್ತಿಲ್ಲ. ಬದಲಾಗಿ ಬಿಡುಗಡೆಯ ಕರೆಯಾಗಿ ಕಾಣಿಸುತ್ತಿದೆ. ಇಂಥ ಚಳವಳಿಗಳನ್ನು ಬೆಂಬಲಿಸುವ ಬುದ್ಧಿಜೀವಿಗಳಿಗೆ ಇಂಥ ಘೋಷಣೆಗಳು ನ್ಯಾಯಯುತವೆನಿಸತೊಡಗಿವೆ. ಈ ಪರಿಸ್ಥಿತಿಯು ನಮಗೆ ಎರಡು ಸವಾಲುಗಳನ್ನು ಸೃಷ್ಟಿಸಿದೆ: ಮತ್ತಷ್ಟು ಓದು »

9
ಸೆಪ್ಟೆಂ

ಕಾವೇರಿ ವಿವಾದ : ನಾಲಾಯಕ್ ನಾಯಕರ ನಡುವಿನ ಜನನಾಯಕರು

800x480_image57629329ಕಾವೇರಿ ವಿವಾದ ಮತ್ತೆ ಭುಗಿಲೆದ್ದಿದೆ. ಸೆಪ್ಟಂಬರ್ ೯ರಂದು ಕರ್ನಾಟಕ ಬಂದ್ ಗೂ ಕರೆ ನೀಡಲಾಗಿದೆ. ನಮಗೆ ಕುಡಿಯಲಿಕ್ಕೇ ನೀರಿಲ್ಲದಿರುವಾಗ ಕೈಲಾಗದ ಸರ್ಕಾರ ತಮಿಳುನಾಡಿನ ಬೆಳೆಗಳಿಗೆ ನೀರು ಹರಿಸುತ್ತಿದೆ. ನಮ್ಮಲ್ಲೇ ಹೆಚ್ಚಾಗಿರುವ ನಾಲಾಯಕ್ ನಾಯಕರ ನಡುವೆ, ಅಪರೂಪಕ್ಕೆ ದಿಟ್ಟತನ ಹಾಗೂ ಚಾಣಾಕ್ಷತನ ತೋರಿದ ಇಬ್ಬರು ಜನನಾಯಕರ ನೆನಪುಗಳು ನಿಮಗಾಗಿ – ನಿಲುಮೆ

ನೆನಪು ೧ :
ನಿಜವಾದ ಗಂಡಸು ಎಂದರೆ ಅದು ಬಂಗಾರಪ್ಪ
1991ರಲ್ಲಿ, ತಮಿಳುನಾಡಿಗೆ 205 ಟಿಎಂಸಿ ನೀರು ಬಿಡುವಂತೆ ಕಾವೇರಿ ನ್ಯಾಯಾಧಿಕರಣವು ಮಧ್ಯಂತರ-ತೀರ್ಪನ್ನು ನೀಡಿತು. ಈ ತೀರ್ಪಿಗೆ ವಿರುದ್ಧವಾಗಿಯೇ ಮುಖ್ಯಮಂತ್ರಿ ಬಂಗಾರಪ್ಪನವರು ಸುಗ್ರೀವಾಜ್ಞೆ ಹೊರಡಿಸಿ ಕಾವೇರಿ ಕೊಳ್ಳದ ಅಣೆಕಟ್ಟುಗಳಲ್ಲಿನ ನೀರನ್ನು ರಕ್ಷಿಸಿ, ನಮ್ಮ ರಾಜ್ಯದ ರೈತರಿಗೇ ಉಳಿಸಿಕೊಳ್ಳುವಂತೆ ಅಣೆಕಟ್ಟುಗಳ ಉಸ್ತುವಾರಿಯ ಅಧಿಕಾರಿಗಳಿಗೆ ಆದೇಶಿಸಿದರು. ಮತ್ತಷ್ಟು ಓದು »

8
ಸೆಪ್ಟೆಂ

ಪ್ರೇತದ ಆತ್ಮ ಚರಿತೆ! (ಭಾಗ ೧)

– ಶ್ರೀಕಾಂತ್ ಶೆಟ್ಟಿ

14141689_1078140602281548_6643720140016381041_nಒಂದು ಪ್ರೇತದ ಕತೆ. ಆ ಒಂದು ಪ್ರೇತ ಮಾಡಿದ ಆವಾಂತರಕ್ಕೆ ಇತಿಹಾಸವೇ ಹೊಸ ತಿರುವು ಪಡೆದುಕೊಂಡು ಬಿಟ್ಟಿತು. ಈ ಭೂತ ಪ್ರೇತ ಇದೆಲ್ಲಾ ಇದೆಯೋ ಇಲ್ಲವೋ, ಇದ್ದರೆ ವೈಜ್ಞಾನಿಕ ಕಾರಣ ಕೊಡಿ. ಅದರ ಇರುವನ್ನು ಸಾಬೀತು ಮಾಡಿ ಎನ್ನುವವರಿಗೆ ಈ ಕತೆ ಹೇಳಿ ಮಾಡಿಸಿದ್ದಲ್ಲ. ಇತಿಹಾಸದ ಪುಟಗಳಲ್ಲಿ ಅಚ್ಚಳಿಯದೆ ಉಳಿದುಕೊಂಡು ಬಂದಿರುವ ದಂತಕತೆಯನ್ನು ಆಧಾರವಾಗಿಟ್ಟುಕೊಂಡು ಈ ಸರಣಿಯನ್ನು ಬರೆಯುತ್ತಿದ್ದೇನೆ. ಇದರಲ್ಲಿ ಕೇವಲ ಪ್ರೇತ ಮಾತ್ರ ಬಂದು ಹೋಗುವುದಿಲ್ಲ. ಹದಿನೆಂಟನೇ ಶತಮಾನದಲ್ಲಿ ಭೂಮಿ ನಡುಗಿಸುವಷ್ಟು ಸೇನೆ ಕಟ್ಟಿಕೊಂಡು, ಮೊಘಲರನ್ನು ಬೇರು ಸಮೇತ ಕಿತ್ತೊಗೆದ ಮರಾಟಾ ಪೇಶ್ವಾಗಳು ಬರುತ್ತಾರೆ. ಉತ್ತರದ ಹಿಮಾಲಯದಿಂದ ದಕ್ಷಿಣದ ಕೃಷ್ಣಾ ನದಿ ದಂಡೆಯವರೆಗೆ ಪೇಶ್ವಾಗಳ ಕತ್ತಿಯ ಅಬ್ಬರ, ಕುದುರೆಗಳ ಹೇಷಾರವ, ಮದೋನ್ಮತ್ತ ಆನೆಗಳ ಹೂಂಕಾರ.. ನಭವನ್ನೇ ನಡುಗಿಸುವ ಮರಾಠಾ ಮಾವಳಿಗಳ ಹರಹರಾ ಮಹಾದೇವ ರಣಘರ್ಜನೆ.. ಚಿತ್ಪಾವನ ಬ್ರಾಹ್ಮಣ ರಣಕಲಿಗಳ ಅಪ್ರತಿಮ ರಣತಂತ್ರ.. ಒಂದು ಶತಮಾನ ಕಾಲ ವಿಜೃಂಭಿಸಿದ ಮರಾಠ ಶಕ್ತಿಯ ವಿವಿಧ ಮುಖ ಪರಿಚಯ ಇಲ್ಲಿ ನಿಮಗಾಗಲಿದೆ.

ಮತ್ತಷ್ಟು ಓದು »

8
ಸೆಪ್ಟೆಂ

ಸ್ವಾತಂತ್ರ್ಯೋತ್ಸವ ವಿಶೇಷ ಸರಣಿ – ದಿನಕ್ಕೊಬ್ಬ ದೇಶಭಕ್ತರ ಸ್ಮರಣೆ

ದಿನ – 22
ಚಿದಂಬರಂ ಪಿಳ್ಳೈ
– ರಾಮಚಂದ್ರ ಹೆಗಡೆ

downloadಭಾರತ-ಶ್ರೀಲಂಕಾ ನಡುವಿನ ಸಮುದ್ರದಲ್ಲಿ ನೌಕಾಯಾನದ ಹೆಸರಿನಲ್ಲಿ ಜನರ ಸುಲಿಗೆ ಮಾಡುತ್ತಿದ್ದ ಬ್ರಿಟಿಷರ ಆಟಾಟೋಪಕ್ಕೆ ಉತ್ತರವಾಗಿ ‘ಸ್ವದೇಶಿ ನ್ಯಾವಿಗೇಷನ್ ಕಂಪೆನಿ’ ಹುಟ್ಟುಹಾಕಿದ ಧೀರ ಸಾಹಸಿ ತಮಿಳುನಾಡಿನ ಚಿದಂಬರಂ ಪಿಳ್ಳೈ. ತಮ್ಮದೇ ಆದ ಸಂಪೂರ್ಣ ಸ್ವದೇಶಿ ನೌಕಾಯಾನ ಸಂಸ್ಥೆಯನ್ನು 1906 ರ ಸಮಯದಲ್ಲೇ ಹುಟ್ಟುಹಾಕಿ ಈಸ್ಟ್ ಇಂಡಿಯಾ ಕಂಪನಿಯೇ ಪತರಗುಟ್ಟುವಂತೆ ಮಾಡಿದ, ಭಾರತೀಯರ ಪ್ರತಿರೋಧ ಕೇವಲ ಯುದ್ಧ ಬಲಿದಾನಗಳಲ್ಲಷ್ಟೇ ಅಲ್ಲ ಎಂದು ನಿರೂಪಿಸಿದ ಅಪ್ರತಿಮ ದೇಶಭಕ್ತ ಪಿಳ್ಳೈ. ಆಗಿನ ಕಾಲದಲ್ಲಿ ತಮಿಳುನಾಡಿನಲ್ಲಿ ಸ್ವರಾಜ್ಯ ಎಂಬ ಶಬ್ದವನ್ನು ಉಚ್ಚಾರ ಮಾಡಲೂ ಜನರು ಹೆದರುತ್ತಿದ್ದರು. ‘ಸ್ವಾತಂತ್ಯ್ರ’ ಎಂದು ಅಪ್ಪಿ ತಪ್ಪಿ ಹೇಳಿದರೆ ಅದು ರಾಜದ್ರೋಹವಾಗುತ್ತದೆ ಎಂದು ಜನರಿಗೆ ಅಂಜಿಕೆ. ಅಂಥ ಒಂದು ಕಾಲದಲ್ಲಿ ಚಿದಂಬರಂ ಪಿಳ್ಳೈಯವರು ತಮಿಳುನಾಡಿನಲ್ಲಿ ‘ವಂದೇ ಮಾತರಂ’ ಎಂದು ಘೋಷಣೆ ಕೂಗಿದರು. ಬ್ರಿಟಿಷರ ಚಕ್ರಾಧಿಪತ್ಯದ ವಿರುದ್ಧ ಜನರನ್ನು ಎತ್ತಿಕಟ್ಟಿದರು. ಸಹಸ್ರಾರು ಸ್ವಾತಂತ್ಯ್ರ ವೀರರನ್ನು ಹುರಿಗೊಳಿಸಿದ ಚಿದಂಬರಂ ಪಿಳ್ಳೈಯವರು ರಾಜದ್ರೋಹದ ಆಪಾದನೆ ಹೊತ್ತು ಆರು ವರ್ಷಗಳ ಕಾಲ ಸೆರೆಮನೆಯಲ್ಲಿ ಕಷ್ಟಪಟ್ಟರು. ಮತ್ತಷ್ಟು ಓದು »

7
ಸೆಪ್ಟೆಂ

ಫ್ರಾನ್ಸಿನ ಸೆಕ್ಯುಲರಿಸಂ ಮತ್ತು ಇಸ್ಲಾಮಿನ ಜಗಳದಲ್ಲಿ ಭಾರತಕ್ಕೇನು ಪಾಠ?

– ವಿನಾಯಕ ಹಂಪಿಹೊಳಿ

726567-burqaಸದ್ಯಕ್ಕೆ ಫ್ರಾನ್ಸಿನಲ್ಲಿ ಬುರ್ಕ ಬ್ಯಾನ್ ಕುರಿತು ಚರ್ಚೆ ನಡೆಯುತ್ತಿದೆ. ಬುರ್ಕಾ ಬ್ಯಾನ್ ತುಂಬಾ ಹಿಂದೆಯೇ ಆಗಿದೆ. ಈ ರೀತಿಯ ನಿಷೇಧಗಳಿಗೆ ಫ್ರಾನ್ಸ್ ಕೊಡುತ್ತಿರುವ ಕಾರಣ ರಿಲಿಜನ್ನುಗಳು ಪ್ರತಿಪಾದಿಸುವ ವಸ್ತ್ರಸಂಹಿತೆಯನ್ನು ಪಬ್ಲಿಕ್ ವಲಯದಲ್ಲಿ ಪಾಲಿಸುವುದು ಅಲ್ಲಿನ ಸೆಕ್ಯುಲರಿಸಂ ಐಡಿಯಾಲಜಿಯೊಂದಿಗೆ ಸರಿಹೊಂದದಿರುವದು. ಫ್ರಾನ್ಸಿನಲ್ಲಿ ಪ್ರಜಾಪ್ರಭುತ್ವದ ಆಡಳಿತವನ್ನು ಚರ್ಚಿನಿಂದ ಪ್ರತ್ಯೇಕಿಸುವ ಪ್ರಕ್ರಿಯೆ ತುಂಬ ಕಟ್ಟುನಿಟ್ಟಾಗಿತ್ತು. ಫ್ರಾನ್ಸಿನ ಸೆಕ್ಯುಲರಿಸಂ ರಿಲಿಜನ್ನನ್ನು ಕೇವಲ ರಾಜಕೀಯದಿಂದಷ್ಟೇ ಪ್ರತ್ಯೇಕಿಸುವದಷ್ಟೇ ಅಲ್ಲ, ಫ್ರಾನ್ಸ್ ದೇಶವು ಯಾವ ರಿಲಿಜನ್ನಿನೊಂದಿಗೂ ಗುರುತಿಸಿಕೊಳ್ಳಬಾರದು ಎನ್ನುವದು ಅದರ ಆಶಯ. ಆದ್ದರಿಂದ ಫ್ರಾನ್ಸ್ ದೇಶವು ತನ್ನನ್ನು ತಾನು ರಿಪಬ್ಲಿಕ್ ಮತ್ತು ಸೆಕ್ಯುಲರ್ ದೇಶವೆಂದು ಘೋಷಿಸಿಕೊಂಡಿತ್ತು. ಈ ರೀತಿಯ ಲಿಬರಲ್ ಸೆಕ್ಯುಲರಿಸಂ ಅನ್ನು ಬರೀ ಕ್ರಿಶ್ಚಿಯನ್ನರೇ ತುಂಬಿಕೊಂಡಿದ್ದ ದೇಶದಲ್ಲಿ ಈ ರೀತಿಯ ಸೆಕ್ಯುಲರಿಸಂ ಅನ್ನು ಜಾರಿಗೆ ತರುವದು ಅಷ್ಟು ಕಷ್ಟವಾಗಿರಲಿಲ್ಲ. ಮತ್ತಷ್ಟು ಓದು »

6
ಸೆಪ್ಟೆಂ

ಸ್ವಾತಂತ್ರ್ಯೋತ್ಸವ ವಿಶೇಷ ಸರಣಿ – ದಿನಕ್ಕೊಬ್ಬ ದೇಶಭಕ್ತರ ಸ್ಮರಣೆ

ದಿನ – 21:
ಲಾಲಾ ಹರದಯಾಳ್
– ರಾಮಚಂದ್ರ ಹೆಗಡೆ

IMG26‘ಬೇಕಾಗಿದ್ದಾರೆ – ಭಾರತದಲ್ಲಿ ಬಂಡಾಯವೆಬ್ಬಿಸಲು ಸೈನಿಕರು.
ವೇತನ – ಸಾವು
ಬಹುಮಾನ – ಹುತಾತ್ಮತೆ
ಪೆನ್ಷನ್ – ಸ್ವಾತಂತ್ರ್ಯ
ಯುದ್ಧ ಕ್ಷೇತ್ರ – ಭಾರತ’

ಹೀಗೆ ದಪ್ಪ ದಪ್ಪ ಅಕ್ಷರಗಳಲ್ಲಿ ಈ ಜಾಹೀರಾತು, 1914ರ ಸೆಪ್ಟೆಂಬರ್ ತಿಂಗಳಲ್ಲಿ ಹೊರಬಿದ್ದ “ಗದರ್” ಪತ್ರಿಕೆಯ ಮುಖಪುಟದಲ್ಲಿ ಅಚ್ಚಾಗಿತ್ತು. ಗದರ್ (ಬಂಡಾಯ) ಪಕ್ಷ, ಗದರ್ ಪತ್ರಿಕೆ – ಮೊದಲನೆಯ ಮಹಾಯುದ್ಧ ಆರಂಭವಾಗುವುದಕ್ಕೆ ಸ್ವಲ್ಪ ಮುಂಚೆ ಸ್ಥಾಪಿತವಾಗಿ, ಸಶಸ್ತ್ರ ಬಂಡಾಯವೆಬ್ಬಿಸಿ ಭಾರತವನ್ನು ಸ್ವತಂತ್ರಗೊಳಿಸಲು ಮಹಾನ್ ಪ್ರಯತ್ನ ನಡೆಸಿದವು. ಈ ಕ್ರಾಂತಿಯ ಉರಿಯೆಬ್ಬಿಸಿದ ಸಾಹಸಿ ಲಾಲಾ ಹರದಯಾಳ್. ವಿದೇಶದಲ್ಲಿರುವ ಭಾರತೀಯರನ್ನು ಸಂಘಟಿಸಿ ಅವರಲ್ಲಿ ತಾಯ್ನಾಡಿನ ಸ್ವಾತಂತ್ರ್ಯ ಭಾವನೆ ಅರಳಿಸಿ ಅವರೆಲ್ಲರೂ ಸ್ವದೇಶಕ್ಕೆ ತೆರಳಿ ದಂಗೆಯೇಳುವಂತೆ ಮಾಡಬೇಕು ಎಂಬುದು ಲಾಲನ ಅಪೇಕ್ಷೆಯಾಗಿತ್ತು. 1884 ರಲ್ಲಿ ಜನಿಸಿದ ಹರದಯಾಳ್ ಚಿಕ್ಕಂದಿನಲ್ಲೇ ಭಾರತೀಯ ಸಂಸ್ಕೃತಿ ಮತ್ತು ಪರಂಪರೆಯ ಬಗ್ಗೆ ತಮ್ಮ ತಂದೆ ತಾಯಿಯಿಂದ ಕೇಳಿ ತಿಳಿದಿದ್ದರು. ಬ್ರಿಟಿಷ್ ಸರ್ಕಾರದಿಂದಲೇ ವಿದ್ಯಾರ್ಥಿ ವೇತನ ಪಡೆದು ಉನ್ನತ ವ್ಯಾಸಂಗಕ್ಕಾಗಿ ಆಕ್ಸ್ಫರ್ಡ್ ಗೆ ತೆರಳಿದ ಲಾಲಾ ಅಲ್ಲಿ ಸಾವರ್ಕರ್, ಶ್ಯಾಮಜಿ ಕೃಷ್ಣವರ್ಮ, ಭಾಯಿ ಪರಮಾನಂದರ ಸಂಪರ್ಕಕ್ಕೆ ಬಂದು ಭಾರತ ಭಕ್ತರಾಗಿ ಬದಲಾದರು. ಮತ್ತಷ್ಟು ಓದು »

6
ಸೆಪ್ಟೆಂ

ಕನಸು ನನಸಾದಾಗ….!

-ನಾಗರಾಜ ಅಡಿಗ, ಕೈಗಾ.

download (2)ಸುಮಾರು ೩೫ ವರ್ಷಗಳ  ಹಿಂದಿನ ಮಾತು. ರೋಹಿತ್ ನ ಬಾಲ್ಯದ ದಿನಗಳವು. ಆ ದಿನಗಳಲ್ಲಿಯೇ ರೋಹಿತ್ ಗೆ ಬಾಹ್ಯಾಕಾಶ , ಆಕಾಶಕಾಯಗಳು, ಉಪಗ್ರಹಗಳು ಇವುಗಳ ಬಗ್ಗೆ ಅತ್ಯಂತ ಆಸಕ್ತಿ.  ಕರೆಂಟಿಲ್ಲದ ಆ ಕತ್ತಲ ರಾತ್ರಿಯಲ್ಲಿ ಆಕಾಶವನ್ನು ವೀಕ್ಷಿಸುವುದು ಒಂದು ಹವ್ಯಾಸವಾಗಿತ್ತು. ಸಪ್ತಋಷಿ ಮಂಡಲ, ದ್ರುವ ನಕ್ಷತ್ರ,  ನಕ್ಷತ್ರ ಪುಂಜಗಳು, ಶುಕ್ರ, ಮಂಗಳ, ಗುರು ಗ್ರಹಗಳನ್ನು ಬಾಲ್ಯದಲ್ಲಿಯೇ ಗುರುತಿಸಿಕೊಂಡು ಅವುಗಳ ಚಲನವಲನಗಳನ್ನು ವೀಕ್ಷಿಸುತ್ತಿದ್ದ.  ಪುತ್ತೂರಿನಲ್ಲಿ ನಡೆದ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಒಬ್ಬ ಖಗೋಳ ವೀಕ್ಷಕನಿಂದ ರಾತ್ರಿ “ಆಕಾಶ ವೀಕ್ಷಣೆ” ಕಾರ್ಯಕ್ರಮದಲ್ಲಿ ಪಾಲ್ಗೊಂಡ ಮೇಲಂತೂ ಆಸಕ್ತಿ ಇನ್ನೂ  ಹೆಚ್ಚಾಯಿತು. ಹೈಸ್ಕೂಲಿನಲ್ಲಿರುವಾಗ ಕಾಣಿಸಿದ ಧೂಮಕೇತು ಅವನ ಕುತೂಹಲವನ್ನು ಇನ್ನೂ  ಕೆರಳಿಸಿತ್ತು. ರೋಹಿತ್ ನು ಬಾಲ್ಯವನ್ನು ಕಳೆದ ಊರು ಕುಗ್ರಾಮ ಅಲ್ಲದಿದ್ದರೂ ಪ್ರಾಥಮಿಕ ಅಗತ್ಯತೆಗಳನ್ನೂ ಹೊಂದಿರದ ಚಿಕ್ಕ ಗ್ರಾಮ. ಒಂದೆರಡು ವರ್ಷಗಳ ಹಿಂದಷ್ಟೇ ಅಲ್ಲಿ ಸರಕಾರಿ ಹೈಸ್ಕೂಲ್ ಹುಟ್ಟಿಕೊಂಡಿದೆ. ಸಾಮಾನ್ಯ ಸರಕಾರಿ ಶಾಲೆಗಳಲ್ಲಾಗುವಂತೆ ಶಾಲೆಯ ಬಹುತ್ತಮ ಅಧ್ಯಾಪಕರು ನಿರಾಸಕ್ತಿಯಿಂದ ಪಾಠ ಹೇಳಿಕೊಡುತ್ತಿದ್ದರೆ, ವಿಜ್ಞಾನ ಅಧ್ಯಾಪಕರು ಅದಕ್ಕೆ ತದ್ವಿರುಧ್ಧ. ಹೈಸ್ಕೂಲಿನ ನೆಚ್ಚಿನ ವಿಜ್ಞಾನ ಅಧ್ಯಾಪಕರು ರೋಹಿತ್ ನ ಆಸಕ್ತಿಗಳಿಗೆ ಹೆಚ್ಚಿನ ಬೆಂಬಲ ಕೊಟ್ಟು ತಮ್ಮ ಕೈಲಾದ ಸಹಾಯವನ್ನು ಮಾಡುತ್ತಿದ್ದರು. “Children’s knowledge bank” ಮತ್ತು ವಿಜ್ಞಾನಕ್ಕೆ ಸಂಬಂಧಪಟ್ಟ ಪುಸ್ತಕಗಳನ್ನು ತಂದುಕೊಟ್ಟು ರೋಹಿತ್ ಗೆ ಅರ್ಥವಾಗದ ವಿಷಯಗಳನ್ನು ವಿವರವಾಗಿ ತಿಳಿಸುತ್ತಿದ್ದರು. ಆಸಕ್ತಿ ತೋರುತ್ತಿದ್ದ ವಿದ್ಯಾರ್ಥಿಗಳೆಂದರೆ ಮುತುವರ್ಜಿವಹಿಸಿ ಹೇಳಿಕೊಡುವುದು ಅವರ ಇಷ್ಟದ ವಿಷಯವಾಗಿತ್ತು. ಅಕ್ಕ-ಪಕ್ಕದ ಶಾಲೆಗಳಲ್ಲಾಗುವ ವಿಜ್ಞಾನ ವಸ್ತುಪ್ರದರ್ಶನಗಳಲ್ಲಿ ಅಧ್ಯಾಪಕದ ಸಹಾಯ-ಪ್ರೋತ್ಸಾಹದಿಂದ ಭಾಗವಹಿಸಿ, ಸೌರವ್ಯೂಹ, ಚಂದ್ರಗ್ರಹಣ-ಸೂರ್ಯಗ್ರಹಣಗಳ ಮಾದರಿಗಳನ್ನು ಮಾಡಿ ಪ್ರದರ್ಶಿಸಿ ಹಲವವಾರು ಬಹುಮಾನಗಳನ್ನೂ ಪ್ರಶಸ್ತಿಗಳನ್ನೂ ಪಡೆದುಕೊಂಡಿದ್ದ. ಶಾಲೆಯಲ್ಲಿರುವ ದೂರದರ್ಶಕದಿಂದ ಕ್ಲಾಸಿನ ಎಲ್ಲ ಮಕ್ಕಳಿಗೆ ಚಂದ್ರನನ್ನು ಮಾತ್ರ ತೋರಿಸುತ್ತಿದ್ದ ಅಧ್ಯಾಪಕರು,  ರೋಹಿತ್ ಅನ್ನು ರಾತ್ರಿಯಲ್ಲೂ ಕರೆದು ಗ್ರಹಗಳ ವೀಕ್ಷಣೆ ಮಾಡಿಸುತ್ತಿದ್ದರು. ಹೈಸ್ಕೂಲಿನ್ನಲಿರುವಾಗಲೇ ಗುರು, ಮಂಗಳ ಶುಕ್ರ ಗ್ರಹಗಳ ಚಲನಯನ್ನು ಅಂದಾಜಿಸುತ್ತಿದ್ದ. ಹಾಗೆಯೇ ಭಾರತೀಯ ಪಂಚಾಂಗ ಮತ್ತು ಖಗೋಳ ವಿಜ್ಞಾನಗಳ ಸಂಬಂಧವನ್ನು ಹಲವರನ್ನು ಕೇಳಿ ತನ್ನ ಸ್ವಯಂ ಜ್ಞಾನಾರ್ಜನೆ ಮಾಡುತ್ತಿದ್ದ. “ಬೆಳೆಯುವ ಸಿರಿ ಮೊಳಕೆಯಲ್ಲಿ” ಎಂಬಂತೆ ತನ್ನ ಕನಸನ್ನೂ  ತಂದೆ-ತಾಯಿ, ಅಧ್ಯಾಪಕರ ಅಲ್ಲದೆ ಊರಿನವರ ನಿರೀಕ್ಷೆಯನ್ನೂ  ಆಕಾಶದೆತ್ತರಕ್ಕೆ ಏರಿಸಿಟ್ಟಿದ್ದ.! ಮತ್ತಷ್ಟು ಓದು »

5
ಸೆಪ್ಟೆಂ

ಸ್ವಾತಂತ್ರ್ಯೋತ್ಸವ ವಿಶೇಷ ಸರಣಿ – ದಿನಕ್ಕೊಬ್ಬ ದೇಶಭಕ್ತರ ಸ್ಮರಣೆ

ದಿನ – 20:
ಬಿನೋಯ್ ಬಾದಲ್ ದಿನೇಶ್:
– ರಾಮಚಂದ್ರ ಹೆಗಡೆ

Binoy-Badal-Dineshಭಾರತ ಸ್ವಾತಂತ್ರ್ಯ ಸಮರದ ಪುಟಗಳನ್ನು ತೆರೆಯುತ್ತಾ ಹೋದಂತೆ ಅಲ್ಲಿ ಒಂದಕ್ಕಿಂತ ಒಂದು ರೋಚಕ ಅಧ್ಯಾಯವನ್ನು ಕಾಣುತ್ತ ಹೋಗಬಹುದು. ದೇಶವನ್ನು ದಾಸ್ಯದ ಕಪಿಮುಷ್ಟಿಯಿಂದ ರಕ್ಷಿಸಲು ಈ ದೇಶದ ಬಿಸಿರಕ್ತದ ಯುವಕರು ಜೀವ ನೀಡಲಿಕ್ಕೂ ಹಿಂದೇಟು ಹಾಕದ ಸ್ಪೂರ್ತಿದಾಯಕ ಸಾಹಸಗಾಥೆ ನಮಗಲ್ಲಿ ಸಿಗುತ್ತವೆ. ದೇಶದ ರಕ್ಷಣೆಯ ವಿಚಾರ ಬಂದಾಗ ರಕ್ತವೇನು, ಜೀವವನ್ನೂ ಕೊಟ್ಟೇವು ಎಂದಿದ್ದಷ್ಟೇ ಅಲ್ಲ, ಸ್ವಯಂ ತಮ್ಮನ್ನು ಅರ್ಪಿಸಿಕೊಂಡು ನಗುನಗುತ್ತಾ ನೇಣುಗಂಬವೇರಿದ ರೋಮಾಂಚಕಾರಿ ಸಾಹಸಗಳು ಸ್ವಾತಂತ್ರ್ಯ ಸಮರದ ಇತಿಹಾಸವನ್ನು ರಕ್ತರಂಜಿತವಾಗಿ, ವರ್ಣರಂಜಿತವಾಗಿ ಮಾಡಿವೆ. ಬಂಗಾಳದ ಈ ಮೂವರು ಬಿಸಿರಕ್ತದ ದೇಶಪ್ರೇಮಿ ತರುಣರು ಬಿನೋಯ್ ಬಸು, ಬಾದಲ್ ಗುಪ್ತಾ, ದಿನೇಶ್ ಗುಪ್ತಾ ಹಾಗೆ ಸ್ವಾತಂತ್ರ್ಯದ ಕನಸಿನಲ್ಲಿ ಕ್ರಾಂತಿಯ ಕಹಳೆ ಊದಿ ಸಾವಿನ ಕದ ತಟ್ಟಿದಾಗ ಅವರಿಗಿನ್ನೂ 22, 19, 18 ವರ್ಷಗಳಷ್ಟೇ. ಮತ್ತಷ್ಟು ಓದು »

5
ಸೆಪ್ಟೆಂ

ಇದು ಹೆಣ್ಣಿನ ಕಥೆ

– ಗೀತಾ ಹೆಗ್ಡೆ

Nanna-Ajjiಅವಳಿಗೆ ಕೇವಲ ಹದಿಮೂರು ವರ್ಷ. ಹುಟ್ಟೂರು ಪುತ್ತೂರು, ಉಡುಪಿ ತಾಲ್ಲೂಕು. ಅವಳಿಗೆ ಮದುವೆ ಗಂಡು ಗೊತ್ತಾಯಿತು. ಅವನಿಗೆ ವಯಸ್ಸು ಮೂವತ್ತೆರಡು. ಅವನ ಊರು ಉತ್ತರ ಕನ್ನಡದ ಒಂದು ಚಿಕ್ಕ ಹಳ್ಳಿ. ಆಗ ಮದುವೆಗೆ ಹೆಣ್ಣಿನ ಬರ. ತಿರಾ ಕೊಟ್ಟು(ವಧು ದಕ್ಷಿಣೆ ) ಹೆಣ್ಣನ್ನು ಮದುವೆ ಆಗುತ್ತಿದ್ದರಂತೆ. ಇನ್ನೂ ದೊಡ್ಡವಳಾಗಿಲ್ಲ; ಆಗಲೇ ಮದುವೆ ಮಾಡಿದರು. ಮೈ ತುಂಬಾ ಒಡವೆ ಗೆಜ್ಜೆಟಿಕ್ಕಿ, ತೋಳಬಂಧಿ, ಸೊಂಟಕ್ಕೆ ಬೆಳ್ಳಿ ಡಾಬು, ಕಿವಿ ಓಲೆ ಬುಗುಡಿ, ಕೈ ತುಂಬಾ ಬಳೆಗಳು ಇನ್ನೂ ಮುಂತಾದ ಆಭರಣ ಸುಂದರಿ. ದಕ್ಷಿಣದಿಂದ ಉತ್ತರಕ್ಕೆ ಅವಳ ಪಯಣ. ಗೊತ್ತಿಲ್ಲದ ಊರು. ಶಾಸ್ತ್ರ ಸಂಪ್ರದಾಯದ ಮನೆ. ಒಟ್ಟು ಕುಟುಂಬ. ಗಂಡನ ಮನೆ ಸೇರಿದಳು ವರ್ಷ ಹದಿನಾಲ್ಕಕ್ಕೆ ದೊಡ್ಡವಳಾಗಿ. ಅವಳ ಭಾಷೆ ತುಳು. ಶಿವಳ್ಳಿ ಬ್ರಾಹ್ಮಣ ಕುಟುಂಬದವಳು. ನಿಧಾನವಾಗಿ ಕನ್ನಡ ಭಾಷೆ ಕಲಿತಳು. ಹದಿನಾರರ ವಯಸ್ಸಿನಲ್ಲಿ ಗಂಡು ಮಗುವಿನ ಜನನ. ಮಗಳು ಬಾಳಂತನ ಮುಗಿಸಿಕೊಂಡು ಗಂಡನ ಮನೆ ಸೇರಿದಳು. ಮತ್ತಷ್ಟು ಓದು »