ವಿಷಯದ ವಿವರಗಳಿಗೆ ದಾಟಿರಿ

Archive for

10
ಆಕ್ಟೋ

ದಲಿತರ ‘ದೇಗುಲದ ಪ್ರವೇಶ’ದ ಸುತ್ತಾಮುತ್ತ… ( ಭಾಗ ೨ )

– ಡಾ. ಮಾಧವ ಪೆರಾಜೆ

ಮಧ್ಯಕಾಲದಲ್ಲಿ ಗುಡಿಗಳು:

tirumalaದೇವಾಲಯಗಳಿಗೆ ಇದ್ದಕ್ಕಿದ್ದಂತೆ ಪ್ರಸಿದ್ಧಿ ಬಂದಿರುವುದೇ ಮಧ್ಯಯುಗದಲ್ಲಿ ಎನ್ನುವುದು ಇನ್ನೊಂದು ಗಮನಾರ್ಹ ಅಂಶವಾಗಿದೆ. ಪುರಾಣಗಳು ಕಾವ್ಯಗಳು ದೇವಾಲಯಗಳ ಕುರಿತು ಹಾಡಿಹೊಗಳುವುದಕ್ಕೆ ಈ ಕಾಲದಲ್ಲಿ ಪ್ರಾರಂಭ ಮಾಡುತ್ತವೆ. ಅಗ್ನಿಪುರಾಣದ ಪ್ರಕಾರ ದೇವಾಲಯಗಳನ್ನು ಕಟ್ಟಿಸುವ ಬಯಕೆ ಬಂತೆಂದರೆ ಸಾಕು – ಅವರ  ಪಾಪ ಪರಿಹಾರವಾಗುತ್ತದೆಯಂತೆ. ದೇವಾಲಯಕ್ಕೆ ಒಂದು ಇಟ್ಟಿಗೆಯನ್ನು ಇಟ್ಟರೆ ಅದು ಅವನಿಗೆ ಸಾಯುವಾಗ ಒಂದು ಯಜ್ಞವನ್ನು ಮಾಡಿದ ಪುಣ್ಯವನ್ನು ಕೊಡುತ್ತದೆಯಂತೆ – ಹಾಗೆಂದು ಹಯಶೀರ್ಷ ಸಂಹಿತೆ ಹೇಳುತ್ತದೆ. ಯಾವುದಾದರೊಂದು ಮಗು ಆಟದ ನೆಪದಲ್ಲಿ ಮರಳಿನಲ್ಲಿ ಗುಡಿ ಕಟ್ಟಿದರೂ ಆ ಮಗುವಿಗೆ ಸ್ವರ್ಗ ಲಭಿಸುತ್ತದೆ ಎಂದು ವಿಷ್ಣು ರಹಸ್ಯವು ತಿಳಿಸುತ್ತದೆ. ಹೀಗೆ ಇಲ್ಲಿಂದ ದೇವಾಲಯಗಳಿಗೆ ಮಹತ್ವವೂ ಪ್ರಸಿದ್ಧಿಯೂ ದೊರೆಯುತ್ತದೆ. ಶ್ರೀಮಂತರು,ಚಕ್ರವರ್ತಿಗಳು, ದಂಡನಾಯಕರು ದೇವಾಲಯಗಳನ್ನು ಕಟ್ಟಿಸುತ್ತಾರೆ. ದೇವಾಲಯಗಳನ್ನು ಕಟ್ಟಿಸುವುದು, ಅಂತಹ ದೇವಾಲಯಗಳಿಗೆ ಪೂಜಾರಿಗಳನ್ನು ನೇಮಕ ಮಾಡುವುದು, ದೇವಾಲಯಗಳ ಸಂದರ್ಶನಕ್ಕಾಗಿ ಹೋಗುವುದು, ಅಲ್ಲಿ ಪ್ರಾರ್ಥನೆ ಮಾಡುವುದು, ಯಾರು ಪೂಜೆ ಮಾಡಬಹುದು, ಮಾಡಬಾರದು ಎನ್ನುವುದು ಮೊದಲಾದವುಗಳೆಲ್ಲ ಈ ಕಾಲದಿಂದಲೇ ಆರಂಭವಾಗುತ್ತವೆ. ನಮ್ಮ ಕನಕದಾಸರು ಈ ಕಾಲದವರೆಂಬುದನ್ನು ಇಲ್ಲಿ ನೆನಪಿಸಿಕೊಳ್ಳೋಣ. ಹೀಗಾಗಿ ಮಧ್ಯಕಾಲೀನ ವಿಷಯಗಳಿಗೆ ಸಂಬಂಧಿಸಿದ ಈಗ ನಾವು ನಿರ್ದಿಷ್ಟವಾಗಿ ಕರ್ನಾಟಕಕ್ಕೆ ಮಾತ್ರ ಸೀಮಿತಗೊಳಿಸಿರುವುದರಿಂದ, ಈ ವಿವರಗಳು ಇನ್ನಷ್ಟು ಸ್ಪಷ್ಟವಾಗಬಲ್ಲವು. ಹಾಗಾದುದರಿಂದ ನಿರ್ದಿಷ್ಟವಾಗಿ ದೇವಾಲಯಕ್ಕೆ ಸಂಬಂಧಿಸಿದಂತೆ ಕರ್ನಾಟಕವನ್ನೇ ಲಕ್ಷಿಸಿ ಇನ್ನು ಮುಂದೆ ಈ ವಿಷಯವನ್ನು ಇನ್ನಷ್ಟು ವಿಸ್ತರಿಸೋಣ. ಮತ್ತಷ್ಟು ಓದು »

10
ಆಕ್ಟೋ

ಕಾವೇರಿ = ಕನ್ನಡ/ಕನ್ನಡಿಗ?

– ಚೇತನಾ ಹೆಗಡೆ

ಕಾವೇರಿ = ಕನ್ನಡ/ಕನ್ನಡಿಗ?

river_cauvery_enಈ ಪ್ರಶ್ನೆ ನನ್ನನ್ನು ಚಿಕ್ಕಂದಿನಿಂದಲೂ ಕಾಡಿದೆ. ಕಾರಣ ನಮ್ಮ ಸಿನಿಮಾಗಳು ಮತ್ತು ಅವುಗಳ ಹಾಡುಗಳು. ಕನ್ನಡ ಭಾಷೆ ಮತ್ತು ಕರ್ನಾಟಕಕ್ಕೆ ಸಂಬಂಧಿಸಿದ ಯಾವುದೇ ಹಾಡು ಇದ್ದರೂ ಅದರಲ್ಲಿ ಕಾವೇರಿಯ ಉಲ್ಲೇಖ ಪಕ್ಕಾ. ಯಾಕೆ ಕಾವೇರಿ ನದಿಗೆ ಇಷ್ಟೊಂದು ಪ್ರಾಮುಖ್ಯತೆ ಎಂಬುದು ದೇವರಾಣೆಗೂ ಅರ್ಥವಾಗಿರಲಿಲ್ಲ.

ಸತ್ಯ ಹೇಳುತ್ತೇನೆ, ಅಪ್ಪಟ ಮಲೆನಾಡಾದ ಶಿರಸಿಯಲ್ಲಿ ಹುಟ್ಟಿ ಬೆಳೆದ ನನಗೆ ನೀರಿನ ಕೊರತೆ ಎಂಬುದು ಅಷ್ಟಾಗಿ ಕಾಡಿರಲಿಲ್ಲ. ಪ್ರತೀ ಮನೆಯೂ ಒಂದೊಂದು ಸಿಹಿನೀರಿನ ಬಾವಿ ಹೊಂದಿರುವುದು ವಿಶೇಷವೇ ಅಲ್ಲ. ಹಳ್ಳಿಗಳಲ್ಲಿ ಮನೆಯ ಹಿಂದುಗಡೆಯೇ ಗುಡ್ಡದಿಂದ ಇಳಿದು ಬರುವ ನೀರಿನ ಝರಿಗಳು ಬಹು ಸಾಮಾನ್ಯವಾಗಿದ್ದ ಕಾಲ. ಹಾಗಾಗಿ ಉತ್ತರಕನ್ನಡ ಜಿಲ್ಲೆಯಲ್ಲಿ ಹುಟ್ಟಿದ/ಹರಿಯುವ ನದಿಗಳಾದ ಅಘನಾಶಿನಿ, ಶರಾವತಿ, ಬೇಡ್ತಿ, ಕಾಳಿ, ವರದಾ ಮುಂತಾದ ಯಾವ ನದಿಯ ನೀರನ್ನೂ ಕುಡಿದು ಬೆಳೆದವಳಲ್ಲ ನಾನು… ಮತ್ತಷ್ಟು ಓದು »