ಕಟು ಸತ್ಯ
– ಗೀತಾ ಹೆಗ್ಡೆ
ಇದು ಕಲಿಗಾಲ. ಇಲ್ಲಿ ಏನು ನಡೆಯುತ್ತಿದೆ ಅನ್ನುವುದು ಎಲ್ಲರಿಗೂ ಗೊತ್ತು. ಗೊತ್ತಿದ್ದೂ ಕಣ್ಣು ಮುಚ್ಚಿ ಕುರುಡರಂತೆ ಅಸಹಾಯಕತೆಯಲ್ಲಿ ಬದುಕಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಇನ್ನೂ ಆಗುತ್ತಲೇ ಇದೆ. ಇದರ ಅಂತ್ಯ ಎಲ್ಲಿಗೆ ಹೋಗಿ ತಲುಪುತ್ತದೊ ಅನ್ನುವ ಆತಂಕ , ಜಿಜ್ಞಾಸೆ ಮನದಲ್ಲಿ. ಈ ಜಗತ್ತು, ದೇಶ ಯಾರೊಬ್ಬರ ಸ್ವತ್ತಲ್ಲ. ಆದರೆ ಬರಬರುತ್ತಾ ಈ ದೇಶದ, ರಾಜ್ಯದ ಸ್ಥಿತಿ ಹದಗೆಡುತ್ತಲಿದೆ. ಹುಟ್ಟಿದ ಶಿಶುವಿನಿಂದ ಹಿಡಿದು ಸಾಯುವ ಮುದುಕರವರೆಗೂ ತೊಳಲಾಟ ತಪ್ಪಿದ್ದಲ್ಲ. ಎಲ್ಲಿ ನೋಡಿದರೂ ಅರಾಜಕತೆ. ಮನುಷ್ಯ ಪ್ರತಿಯೊಂದು ಕ್ಷಣವೂ ಕತ್ತಿಯ ಅಲಗಿನ ಮೇಲೆ ಬದುಕುವಂತ ಸ್ಥಿತಿ ನಿರ್ಮಾಣವಾಗುತ್ತಿದೆ. ಹಸುಳೆಗೆ ಹಾಲು ಕುಡಿಸುವಾಗಲೂ ತಂದ ಹಾಲು, ಹಾಲೋ ಅಥವ ಹಾಲಾಹಲವೊ ಅನ್ನುವ ಸಂಕಟದಲ್ಲಿ ಹೆತ್ತ ಕರುಳು ಸಂಕಟ ಪಡುವಂತಾಗಿದೆ. ಉಪಾಯ ಇಲ್ಲ. ಮನದೊಳಗಿನ ಆತಂಕ ಬದಿಗೊತ್ತಿ ಮಗುವಿನ ಹೊಟ್ಟೆ ತುಂಬಿಸುತ್ತಾಳೆ. ತಿನ್ನುವ ತರಕಾರಿ, ಹಣ್ಣು, ಬೇಳೆ ಕಾಳುಗಳಿಗೂ ವಿಷ ಮಿಶ್ರಿತ. ಕೆಡದೆ ಹಾಳಾಗದಿರಲು, ಫ್ರೆಶ್ ಆಗಿ ಕಾಣಲು. ಕಾಯಿ ಹಣ್ಣಾಗಲು ಎಲ್ಲದಕ್ಕೂ ತೀರ್ಥ ಪ್ರೋಕ್ಷಣೆ, ಗಂಧ ಲೇಪನ, ಅಕ್ಷತೆ ಹಾಕಿ ಜನರ ಕಣ್ಣಿಗೆ ಮಣ್ಣೆರಚುವ ಧಂದೆ ಅವ್ಯಾಹತವಾಗಿ ನಡೆಯುತ್ತಲೇ ಇದೆ. ಟೀವಿ ಮಾಧ್ಯಮಗಳಲ್ಲಿ ಕಣ್ಣಾರೆ ಕಂಡ ಜನ ತುತ್ತು ಅನ್ನ ತಿನ್ನುವಾಗಲೂ ನಾಳೆ ನನ್ನ ಆರೋಗ್ಯ ಏನಾಗುತ್ತೊ ಎಂದು ಯೋಚಿಸುವಂತಾಗಿದೆ. ಪಿಜ್ಜಾ ಬರ್ಗರ್ ಹಾವಳಿ ಯುವಕ ಯುವತಿಯರ ಬಾಯಿ ಚಪಲಕ್ಕೆ ಮನೆಯ ತಿಂಡಿ ರುಚಿಸದಂತಾಗಿದೆ. ಮತ್ತಷ್ಟು ಓದು