ಉತ್ತರ ಕನ್ನಡ ಹವ್ಯಕರ ದೊಡ್ಡಬ್ಬ (ದೀಪಾವಳಿ) ದ ಆಚರಣೆ
– ಗೀತಾ ಹೆಗ್ಡೆ
ನಮ್ಮ ಹವ್ಯಕ ಜನಾಂಗದಲ್ಲಿ ದೀಪಾವಳಿ ಹಬ್ಬ ಎಂದು ಕರೆಯುವ ವಾಡಿಕೆ ಇಲ್ಲ. ಚೌತಿ ಹಬ್ಬ (ಗಣೇಶ ಚತುರ್ಥಿ) ಮಾರ್ನೋಮಿ ಹಬ್ಬ ಅಥವಾ ನವರಾತ್ರಿ ಹಬ್ಬ ( ದಸರಾ ಹಬ್ಬ) ದೊಡ್ಡಬ್ಬ (ದೀಪಾವಳಿ ಹಬ್ಬ) ಹೀಗೆ ತಮ್ಮದೆ ಶೈಲಿಯಲ್ಲಿ ಹಬ್ಬಗಳನ್ನು ಕರೆಯುವ ವಾಡಿಕೆ ಅನಾದಿ ಕಾಲದಿಂದ ನಡೆದುಕೊಂಡು ಬಂದಿದೆ. ಹಾಗೂ ಈ ಹಬ್ಬಗಳನ್ನು ಆಚರಿಸುವ ರೀತಿ ಕೂಡಾ ವಿಭಿನ್ನವಾಗಿದೆ. ಯಾವುದೇ ಹವ್ಯಕರ ಮನೆಗೆ ತೆರಳಿದರೂ ಹಬ್ಬ ಆಚರಿಸುವ ರೀತಿ, ಅಡುಗೆ ಮಾಡುವ ರೀತಿ, ಹವ್ಯಕ ಭಾಷೆ, ನಡೆ, ನುಡಿ, ಆದರಾಥಿತ್ಯ ಎಲ್ಲವೂ ಒಂದೇ ರೀತಿ ಇರುತ್ತದೆ. ಇದು ಉತ್ತರ ಕನ್ನಡದ ಹವ್ಯಕರ ನಡೆಯಾದರೆ ದಕ್ಷಿಣ ಕನ್ನಡದ ಕಡೆ ಹವ್ಯಕ ಭಾಷೆ, ಹಬ್ಬದ ಆಚರಣೆ ವಿಭಿನ್ನವಾಗಿ ಇರುತ್ತದೆ. ಅಡುಗೆ ಊಟ ಉಪಚಾರ ಪೂಜೆ, ಶಾಸ್ತ್ರ ಎಲ್ಲವೂ ವಿಭಿನ್ನವಾಗಿದೆ. ಎಲ್ಲರೂ ಹವ್ಯಕ ಬ್ರಾಹ್ಮಣರೇ ಆದರೂ ಸ್ವಲ್ಪ ವ್ಯತ್ಯಾಸ. Read more
ದಲಿತರ ಹೆಗಲ ಮೇಲೆ ಬಂದೂಕಿಟ್ಟಿರುವ ಕೈಗಳು ಯಾರದ್ದು?
– ರಾಕೇಶ್ ಶೆಟ್ಟಿ
‘ಅಧಿಕಾರದಲ್ಲಿರುವ ಕಾಂಗ್ರೆಸ್ಸಿಗಿಂತಲೂ, ಅಧಿಕಾರದಲ್ಲಿರದ ಕಾಂಗ್ರೆಸ್ಸ್ ದೇಶಕ್ಕೆ ಅಪಾಯಕಾರಿ’ ಅಂತ ಗೆಳೆಯನೊಬ್ಬ ಆಗಾಗ್ಗೆ ಹೇಳ್ತಾ ಇರ್ತಾನೆ. 2014ರ ಮೇ 16 ರಂದು ಬಿಜೆಪಿ ಅಧಿಕಾರ ಹಿಡಿದ ದಿನದಿಂದ ಇವತ್ತಿನವರೆಗೂ ಕಾಂಗ್ರೆಸ್ಸ್ ಪಕ್ಷದವರ ಆರ್ಭಟಗಳನ್ನು ನೋಡಿದರೇ, ಗೆಳೆಯನ ಮಾತು ನಿಜವೆನಿಸುತ್ತದೆ. 2014ರ ಲೋಕಸಭಾ ಚುನಾವಣೆಯ ಫಲಿತಾಂಶ ಈ ಹಿಂದಿನ ಯಾವುದೇ ಚುನಾವಣೆಗಳಂತಿರಲಿಲ್ಲ. ಕಾಂಗ್ರೆಸ್ ಎಂಬ ಪುರಾತನ ಪಕ್ಷ ಮಕಾಡೆ ಮಲಗಿದರೇ, ಉಳಿದ ಅವಕಾಶವಾದಿ ಪ್ರಾದೇಶಿಕ, ಕೌಟುಂಬಿಕ, ಸೆಕ್ಯುಲರ್, ಕಮ್ಯುನಿಸ್ಟ್ ಪಕ್ಷಗಳು ಹೇಳ ಹೆಸರಿಲ್ಲದಂತಾದವು. Read more