ವಿಷಯದ ವಿವರಗಳಿಗೆ ದಾಟಿರಿ

Archive for

11
ನವೆಂ

ಸರ್ಕಾರದಿಂದ ವೀರಪ್ಪನ್ ಜಯಂತಿಗೆ ಸಕಲ ಸಿದ್ಧತೆ: ಬರುವ ಯುಗಾದಿಗೆ ದಿನ ನಿಗದಿ (ಸುಳ್ಸುದ್ದಿ)

– ಪ್ರವೀಣ್ ಕುಮಾರ್, ಮಾವಿನಕಾಡು

730232277ಬೆಂಗಳೂರು: ರಾಜ್ಯದಲ್ಲಿ ವೀರಪ್ಪನ್ ಜಯಂತಿಯನ್ನು ಆಚರಿಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಗೃಹ ಸಚಿವರು ತಿಳಿಸಿದ್ದಾರೆ. ವೀರಪ್ಪನ್ ಜಯಂತಿ ಅಂಗವಾಗಿ ಮೊನ್ನೆ ವಿಧಾನಸೌಧದ ತಮ್ಮ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮಾನ್ಯ ಮುಖ್ಯಮಂತ್ರಿಗಳ ಆಶಯದಂತೆ ಈ  ಸಾಲಿನಿಂದ ಸರ್ಕಾರದ ಹಣದಲ್ಲಿ ವೀರಪ್ಪನ್ ಜಯಂತಿಯನ್ನು ಆಚರಿಸಲಾಗುವುದು ಮತ್ತು ಮೊದಲ ವರ್ಷದ ವೀರಪ್ಪನ್ ಜಯಂತಿಯನ್ನು ಬರುವ ಯುಗಾದಿಯಂದು ಹಮ್ಮಿಕೊಳ್ಳಲಾಗಿದೆ ಎಂದು ಅವರು ತಿಳಿಸಿದರು. ಅಂದು ರಾಜ್ಯದಾದ್ಯಂತ ವೀರಪ್ಪನ್ ಗೆ ಗೌರವ ಸಲ್ಲಿಸುವ ಕಾರ್ಯಕ್ರಮ ಮಾಡಲಾಗುತ್ತಿದ್ದು, ಎಲ್ಲೆಡೆ ವೀರಪ್ಪನ್ ಅವರ ಭಾವಚಿತ್ರದ ಮೆರವಣಿಗೆಯನ್ನು ಮಾಡಲಾಗುವುದು ಎಂದರು.    ಮತ್ತಷ್ಟು ಓದು »

11
ನವೆಂ

ನಿದ್ದೆಯ ಖರಾಮತ್ತು..!

– ಗೀತಾ ಹೆಗಡೆ

m_id_401088_kids_sleepನಿದ್ದೆ ಪರಮಾತ್ಮನ ವರಪ್ರಸಾದ. ಅದಿಲ್ಲ ಅಂದಿದ್ದರೆ ಜಗತ್ತು ಹೇಗಿರುತ್ತಿತ್ತು?  ಜೀವನದ ಗತಿ ಏನಾಗಿರುತ್ತಿತ್ತು? ಆಹಾರ, ವ್ಯವಹಾರ, ಕೆಲಸ, ಕಾರ್ಯ ಯಾವ ರೀತಿ ನಡೀತಿತ್ತು? ಜನ ಸಂಖ್ಯೆ ಕಡಿಮೆ ಆಗಿರುತ್ತಿತ್ತೆ? ಸೂರ್ಯನಿಲ್ಲದ ಕತ್ತಲೆಯ ಸಾಮ್ರಾಜ್ಯದಲ್ಲಿ ಜನ ಇನ್ನೂ ಹೆಚ್ಚಿನ ಮೋಜು ಮಸ್ತಿಯಲ್ಲಿ ಪಾಲ್ಗೊಳ್ಳುತ್ತಿದ್ದರೆ? ಒಂದಾ ಎರಡಾ? ತಲೆತುಂಬಾ ಹುಳುಗಳ ಹರಿದಾಟ. ಇಂಥ ಯೋಚನೆ ಬರೋದೆ ನಿದ್ದೆಯಿಲ್ಲದ ರಾತ್ರಿಗಳಲ್ಲಿ.. ಭಗವಂತನ ಸಾಕ್ಷಾತ್ಕಾರ ಆದ ಹಾಗೆ. ಮತ್ತಷ್ಟು ಓದು »