ಮೋದಿಜಿ ಮಾಡುವುದೆಲ್ಲ ವೋಟಿಗಲ್ಲಾ…!
– ವಿಕ್ರಮ್ ಎಂ.ಆರ್
ನಲವತ್ತು ವರ್ಷಗಳಿಂದ ಹಾಗೆಯೇ ಮೂಲೆ ಗುಂಪಾಗಿ ಬಿದ್ದಿತ್ತು. 1973ರಲ್ಲಿ ಇಂದಿರಾಗಾಂಧಿ OROP ಪ್ರಸ್ತಾಪವನ್ನೇ ಕಿತ್ತು ಎಸೆದಿದ್ದರು. ಇಂದು ಮೋದಿ ಸರ್ಕಾರ ದೇಶಕ್ಕಾಗಿ ಜೀವನವನ್ನೇ ಮುಡುಪಾಗಿಟ್ಟ ಸೈನಿಕರ ಕನಸನ್ನು ನನಸು ಮಾಡಿದೆ. GST ಎಷ್ಟು ವರ್ಷದಿಂದ ಚರ್ಚೆಯಲ್ಲಿತ್ತು, ನೀವೇ ವಿಚಾರ ಮಾಡಿ! ಗಾಂಧಿ ಮನೆತನದ ತಂದಿಟ್ಟ ನೂರೆಂಟು ವಿಘ್ನಗಳ ನಡುವೆಯೂ ಮೋದಿಜಿ GST ಬಿಲ್ಲನ್ನು ಸಂಸತ್ತಿನಲ್ಲಿ ತಂದು ಎರಡೂ ಸದನದಲ್ಲಿ ಮಂಡನೆ ಮಾಡಿ ಎಲ್ಲರ ಒಪ್ಪಂದ ಪಡೆದು ಪಾಸು ಮಾಡಲಾಗಿದೆ. ಪ್ರಧಾನಮಂತ್ರಿ ಧನ ಜನ ಯೋಜನೆ ಅಸ್ತಿತ್ವಕ್ಕೆ ಬಂದಾಗಿನಿಂದ ಎಷ್ಟೋ ಕೋಟಿ ಬಡ ಜನರು ಬ್ಯಾಂಕಿನಲ್ಲಿ ತಮ್ಮ ಖಾತೆ ಹೊಂದಿದ್ದಾರೆ. ಮೊದಲು ಅವರಿಗೆ ಸಿಗಬೇಕಾದ ಹಣ ಕೈಗೆ ಬರುತ್ತಿರಲಿಲ್ಲ ಆದರೆ ಈಗ ನೇರವಾಗಿ ಅವರ ಖಾತೆಗೆ ಜಮಾ ಆಗುತ್ತದೆ. ನಮ್ಮ ಕಂಪನಿಯಲ್ಲಿರುವ ಕಾಂಟ್ರಾಕ್ಟ್ ಕೆಲಸಗಾರನೊಬ್ಬ ಹೀಗೆ ಹೇಳುತ್ತಾನೆ “ಸರ್, ಮೊದಲು ನೂರು ರೂಪಾಯಿ ವೇತನ ಇದ್ದರೆ ಅದರಲ್ಲಿ ಇಪ್ಪತ್ತು ರೂಪಾಯಿಯನ್ನು ಮೇಲ್ವಿಚಾರಕ ಇಟ್ಟುಕೊಂಡು ಉಳಿದಿದ್ದನ್ನು ನನಗೆ ಕೊಡುತ್ತಿದ್ದ ಆದರೆ ಈಗ ನೇರವಾಗಿ ನೂರು ರುಪಾಯಿ ನನ್ನ ಬ್ಯಾಂಕಿಗೆ ಬರುತ್ತದೆ”. ಇದು ಒಂದು ಉದಾಹರಣೆ ಅಷ್ಟೇ, ಇಂತಹ ಸಾವಿರ ನಿದರ್ಶನಗಳನ್ನು ಹಂಚಿಕೊಳ್ಳಬಹುದು. ಇವೆಲ್ಲ ಒಂದಲ್ಲಾ ಒಂದುಕಡೆ ದೇಶದ ಅಭಿವೃದ್ಧಿಗೆ ಪೂರಕವಾಗಿದೆ. ಆದರೆ ಮೋದಿ ಸರ್ಕಾರ ಏನೇ ಮಾಡಿದರೂ ಕೆಲವರಿಗೆ ಉರಿ. ವಿರೋಧ ಪಕ್ಷ ಅಥವಾ ಕೆಲವು ಬುದ್ಧಿಜೀವಿಗಳು ಮೋದಿಜಿಯವರ ಪ್ರತಿ ಪ್ರಯತ್ನವನ್ನೂ ವಿರೋಧಿಸುವುದು ಯಾತಕ್ಕೆ? ಮಾಡಬೇಕು ಇಲ್ಲವೇ ಮಾಡಲು ಬಿಡಬೇಕು. ಅರವತ್ತು ವರ್ಷವಾಯಿತು, ಇನ್ನೂ ದೇಶ ಎಷ್ಟು ಮುಂದುವರಿಯಬೇಕೋ ಅಷ್ಟು ಮುಂದುವರಿದಿಲ್ಲ. ಮೋದಿಜಿ ಬಂದಾಗಿನಿಂದ ಒಂದು ರಿದಮ್ ಸಿಕ್ಕಿದೆ ಅದನ್ನು ಹಾಳು ಮಾಡಲು ಕಾರಣಗಳೇನು? ಏನೇ ಮಾಡಿದರೂ ಅದು ಚುನಾವಣೆಯಲ್ಲಿ ಮತ ಗಳಿಸಲೇ ಮಾಡಿದ್ದು ಎಂದು ಡಂಗುರ ಬಾರಿಸುತ್ತ ಸಾರುವ ಈ ಎಡಬಿಡಂಗಿಗಳ ಉದ್ದೇಶವಾದರೂ ಏನು? ಮತ್ತಷ್ಟು ಓದು