ಇಂದು ಕಂಬಳ, ನಾಳೆ ಜೋಡೆತ್ತಿನ ಗಾಡಿ, ಸಂಕ್ರಾಂತಿ, ನಾಡಿದ್ದು ಇನ್ನೇನೋ…?
– ಶಿವಕುಮಾರ ಪಿ.ವಿ.
ಸಂಶೋಧನಾ ವಿದ್ಯಾರ್ಥಿ
ರಾಜ್ಯಶಾಸ್ತ್ರ ವಿಭಾಗ, ಕುವೆಂಪು ವಿಶ್ವವಿದ್ಯಾನಿಲಯ.
ಪ್ರಾಣಿಗಳಿಗೆ ಹಿಂಸೆ ನೀಡಿ ಮನರಂಜನೆ ಪಡೆಯಲಾಗುತ್ತಿದೆ ಎಂಬುದು ಕಂಬಳ, ಜಲ್ಲಿಕಟ್ಟುವಿನಂತ ಕ್ರೀಡೆಗಳನ್ನು ನಿಲ್ಲಿಸಲು ಪ್ರಾಣಿದಯಾ ಸಂಘಗಳು ನೀಡುತ್ತಿರುವ ಕಾರಣ. ನ್ಯಾಯಾಲಯವೂ ಕೂಡ ‘ಪ್ರಾಣಿ ಹಿಂಸೆ’ಯ ಮಾನದಂಡವನ್ನಾದರಿಸಿ ಈ ಕ್ರೀಡೆಗಳಿಗೆ ನಿಷೇಧಾಜ್ಞೆಯನ್ನೂ ಹೇರುತ್ತಿದೆ. ಇದನ್ನಿಟ್ಟುಕೊಂಡೇ ನೋಡಿದರೆ, ಕೋಳಿ-ಕುರಿ, ದನಗಳನ್ನು ಕಡಿದು ತಿನ್ನುವುದು ಅವುಗಳ ಮಾರಣಹೋಮವಾಗಿ ಕಾಣಿಸಬೇಕಿತ್ತು. ಆದರೆ ಹಾಗಾಗುತ್ತಿಲ್ಲ. ಆಶ್ಚರ್ಯವೆಂದರೆ, ಪ್ರಾಣಿ ಹಿಂಸೆ, ಪ್ರಾಣಿ ಬಲಿಯನ್ನು ನಿಷೇಧಿಸಬೇಕೆನ್ನುವ ಸಕಲ ಪ್ರಾಣಿಗಳ ಜೀವಪರ ದಯಾಳುಗಳೆ ಬೀಫ್, ಮತ್ತಿತರ ಮಾಂಸ ಖಾದ್ಯಗಳನ್ನು, ಅವುಗಳ ರಕ್ತದ ಸೂಪನ್ನು ಚಪ್ಪರಿಸುತ್ತಿರುತ್ತಾರೆ. ಅದಕ್ಕಾಗಿ ಹೋರಾಟಗಳನ್ನೂ ಮಾಡುತ್ತಾರೆ. ಪ್ರಾಣಿಗಳನ್ನು ಬೇಕಾದರೆ ಕಡಿದು ತಿನ್ನಿ, ಆದರೆ ಅವುಗಳಿಗೆ ಹಿಂಸೆ ಕೊಡಬೇಡಿ ಎಂಬುದು ಇವರ ಆಕ್ಷೇಪಣೆ! ಹಾಗಾದರೆ, ಪ್ರಾಣಿ ಹಿಂಸೆಯ ಗುರಾಣಿಯ ಹಿಂದಿರುವ ತರ್ಕವೇನು, ಇವರ ನಿಜವಾದ ಕಾಳಜಿ ಪ್ರಾಣಿ ಹಿಂಸೆ ಮಾಡಬಾರದೆನ್ನುವುದೇ? ಮತ್ತಷ್ಟು ಓದು
ಜಲ್ಲಿಕಟ್ಟು ಹೆಸರಿನಲ್ಲಿ ಹೊಸದೊಂದು ಸಂಸ್ಕೃತಿ ಸಾಧ್ಯವಿಲ್ಲ ಅಂತೀರಾ?
– ನರೇಂದ್ರ ಎಸ್ ಗಂಗೊಳ್ಳಿ
ನಾಡು ನುಡಿ ಸಂಸ್ಕೃತಿ ಸಂಪ್ರದಾಯದ ಅಭಿಮಾನದ ವಿಚಾರಕ್ಕೆ ಬಂದಾಗ ತಮಿಳುನಾಡಿನ ಜನರು ಯಾವತ್ತಿಗೂ ಒಂದು ಹೆಜ್ಜೆ ಮುಂದೆ ನಿಲ್ಲುತ್ತಾರೆ. ಇದು ಹೊಗಳಿಕೆ ಅಂತೇನೂ ಅಲ್ಲ. ನಮ್ಮ ಜನರ ಅಭಿಮಾನದ ನೆಲೆಯಲ್ಲಿ ನೋಡಿದಾಗ ಹಾಗನ್ನಿಸುವುದು ಸಹಜ. ಮೊನ್ನೆ ಮೊನ್ನೆ ಪ್ರಸ್ತುತ ಜಲ್ಲಿಕಟ್ಟು ವಿಚಾರಕ್ಕೆ ಸಂಬಂಧಿಸಿದಂತೆ ತಮಿಳುನಾಡಿನಲ್ಲಿ ನಡೆದ ಹೋರಾಟದ ಪರಿ ಇದೆಯಲ್ಲಾ ಅದು ನಿಜಕ್ಕೂ ಪ್ರತಿಯೊಬ್ಬರಿಗೂ ಪ್ರೇರಣೆಯನ್ನು ನೀಡುವಂತಾದ್ದು. ಅವರಿಗೊಂದು ಮೆಚ್ಚುಗೆಯಿರಲಿ. ಆದರೆ ಈ ಜಲ್ಲಿಕಟ್ಟು ವಿಚಾರವನ್ನು ತೀರಾ ಭ್ರಮೆಗಳಿಗೆ ಕಟ್ಟುಬೀಳದೆ ವಾಸ್ತವದ ನೆಲೆಗಟ್ಟಿನಲ್ಲಿ ವಿಶ್ಲೇಷಿಸಿ ತೀರ್ಮಾನಕ್ಕೆ ಬರುವ ಅವಶ್ಯಕತೆ ಇಲ್ಲ ಎನ್ನುತ್ತೀರಾ? ಮತ್ತಷ್ಟು ಓದು
ಓಡುವ ಕೋಣದ ಹಿಂದೆ ಎಷ್ಟೆಲ್ಲಾ ಅಡಗಿದೆ?
– ಸಂತೋಷ್ ತಮ್ಮಯ್ಯ
ಕರಾವಳಿಯ ಖ್ಯಾತ ಕನ್ನಡ ಮತ್ತು ತುಳು ಕಾದಂಬರಿಗಾರ ದಿವಂಗತ ಬೋಳ ಚಿತ್ತರಂಜನ್ ದಾಸ್ ಶೆಟ್ಟಿಯವರು ತಮ್ಮ “ಅಳಿದುಳಿದವರು” ಕಾದಂಬರಿಯಲ್ಲಿ ಕಂಬಳವನ್ನು ವಿವರಿಸುವುದು ಹೀಗೆ : ಎಲ್ಲಾ ಒಕ್ಕಲು ಮಕ್ಕಳು, ಮನೆಯವರೂ ಅಂದು ಸಡಗರದಿಂದಿದ್ದರು. ಏಕೆಂದರೆ ಅಂದು ಗದ್ದೆಯ ನಾಟಿ ಕಾರ್ಯದ ಕಡೆಯ ದಿನ. ನಸುಬೆಳಕಿನಲ್ಲೇ ಎತ್ತುಗಳು, ಕೋಣಗಳನ್ನು ಬಾಕಿಮಾರು ಗದ್ದೆಗೆ ಇಳಿಸಲಾಯಿತು. ಹತ್ತು ಜೋಡೆತ್ತುಗಳು ನಿಂತರೂ ತುಂಬದ ಆ ಬಾಕಿಮಾರು ಗದ್ದೆಯ ಕಡೆಯ ನಾಟಿ ಎಂದರೆ ಆ ಗುತ್ತಿಗಷ್ಟೇ ಅಲ್ಲ, ಊರಿಗೇ ಒಂದು ಸಂಭ್ರಮ. ಹೆಂಗಸರು ಗದ್ದೆಗೆ ತಣಿ ಎರೆದರು, ಸುಳಿ ಬಾಳೆ ಎಲೆಗಳಿಂದ ನಾಗನಿಗೆ ನೈವೇದ್ಯ ಅರ್ಪಿಸಿದರು.ಕೆಲವರು ಬೊಂಡಗಳನ್ನು ಇಟ್ಟು ಪ್ರಾರ್ಥನೆ ಸಲ್ಲಿಸಿದರು. ನಾಟಿಗದ್ದೆಯನ್ನು ಅದಾಗಲೇ ಉತ್ತಾಗಿತ್ತು. ಇನ್ನು ಅದನ್ನು ಹಸನು ಮಾಡಬೇಕು. ಎತ್ತು-ಕೋಣಗಳಿಗೆ ಕಟ್ಟಿದ್ದ ನೊಗವನ್ನು ಹಾಗೇ ಬಿಟ್ಟು ಹಲಗೆಯನ್ನು ಅದಕ್ಕೆ ಬಿಗಿಯಲಾಯಿತು. ಗದ್ದೆಯಲ್ಲಿ ಕೆಸರು ಎಂದರೆ ಮೂರ್ನಾಲ್ಕು ಇಂಚು ಕಾಲು ಹೂತುಹೋಗುವಷ್ಟು ಆಳ. ಆ ಹಲಗೆಯ ಮೇಲೆ ಒಂದು ಕಾಲಿಟ್ಟು. ಕೆಸರಿನಲ್ಲಿ ಇನ್ನೊಂದು ಕಾಲಿಟ್ಟು ಹಲಗೆ ಕಟ್ಟಿದ ಕೋಣಗಳನ್ನು ನಡೆಸಬೇಕು. ಅದನ್ನು ಆದಷ್ಟೂ ಬೇಗ ಮಾಡಬೇಕು. ಆ ಬಾಕಿಮಾರು ಎಂಬ ದೇವರ ಗದ್ದೆಯೋ ಉದ್ದಕ್ಕೆ ಮಲಗಿದೆ. ಬೇಗ ಸಮಾ ಮಾಡದಿದ್ದರೆ ಬೇಗ ನಾಟಿ ಆರಂಭವಾಗುವುದಿಲ್ಲ.
ಪ್ರಾಣಿಗಳ ಕ್ರೀಡೆ ಮತ್ತು ಐಡೆಂಟಿಟಿ
– ವಿನಾಯಕ ಹಂಪಿಹೊಳಿ
ಪೆಟಾ ಹಾಗೂ ಇನ್ನಿತರ ಪ್ರಾಣಿದಯಾ ಸಂಘದವರು ಪ್ರಾಣಿಗಳನ್ನು ಆಹಾರವಾಗಿ ಹೊರತುಪಡಿಸಿ ಉಳಿದೆಲ್ಲ ಕಾರ್ಯಸಾಧನೆಗಾಗಿ ಬಳಸಿಕೊಳ್ಳುವ ಪ್ರಕ್ರಿಯೆಯನ್ನು ವಿರೋಧಿಸುತ್ತಾರೆ. ಅವುಗಳನ್ನು ಮೋಜಿಗಾಗಿ ಪಂದ್ಯಗಳಲ್ಲಿ ಬಳಸುವುದನ್ನು, ಮೆರವಣಿಗೆಯಲ್ಲಿ ಉಪಯೋಗಿಸುವುದನ್ನು, ಅವುಗಳ ಚರ್ಮದಿಂದ ಉಪಯೋಗಿ ವಸ್ತುಗಳನ್ನು ನಿರ್ಮಿಸುವುದನ್ನು, ಸರ್ಕಸ್ಸಿನಲ್ಲಿ ಪ್ರಾಣಿಗಳನ್ನು ಹೊಡೆದು ಪಳಗಿಸುವುದನ್ನು ವಿರೋಧಿಸುತ್ತಾರೆ. ಮೋಜಿಗಾಗಿ ಪ್ರಾಣಿಗಳನ್ನು ಹೊಡೆದೋಡಿಸುವ ಆಟಗಳನ್ನು, ಕೊಲ್ಲುವ ಆಚರಣೆಗಳನ್ನು, ನಿಷೇಧಿಸಬೇಕೆಂದು ಈ ಪ್ರಾಣಿದಯಾ ಸಂಘಗಳು ಪ್ರಯತ್ನಿಸುತ್ತವೆ. ಪ್ರಾಣಿದಯಾ ಸಂಘಗಳ ಈ ಕಾಳಜಿಯು ಜನಸಾಮಾನ್ಯ ಭಾರತೀಯರಿಗೆ ಮೇಲ್ನೋಟಕ್ಕೆ ಅರ್ಥವಾಗಿರುವಂತೆಯೇ ಭಾಸವಾಗುತ್ತದೆ. ಮತ್ತಷ್ಟು ಓದು
ಕಂಬಳ : ಸಂಸ್ಕೃತಿ ಉಳಿಸಲು ಬೇಕು ನಿಮ್ಮ ಬೆಂಬಲ
– ಡಾ. ಸಂತೋಷ್ ಕುಮಾರ್ ಪಿ.ಕೆ
ಕಂಬಳ : ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ನಡೆಯುವ ಈ ಜಾನಪದ ಶೈಲಿಯ ಕ್ರೀಡೆಯು ಕೇವಲ ಮನೊರಂಜನೆ ಸರಕಾಗಿ ಮಾತ್ರ ಉಳಿದಿರದೆ, ಸಂಸ್ಕೃತಿಯ ಭಾಗವಾಗಿಯೂ ತನ್ನ ಅಸ್ತಿತ್ವವನ್ನು ಉಳಿಸಿಕೊಂಡುಬಂದಿದೆ. ಜನಮಾನಸದಲ್ಲಿ ಹಚ್ಚಹಸುರಾಗಿ ಉಳಿಯುವ ಹಲವಾರು ಸಂಗತಿಗಳಲ್ಲಿ ಸಂಸ್ಕೃತಿಯ ಭಾಗವಾಗಿರುವ ಇಂತಹ ಕೆಲವಾರು ಸಂಗತಿಗಳು ಎನ್ನಬಹುದು. ಕರ್ನಾಟಕದ ಹಲವಾರು ಭಾಗಗಳಲ್ಲಿ ಇಂತಹ ವಿಶೇಷ ಸಾಂಸ್ಕೃತಿಕ ಆರಣೆಗಳು ಇನ್ನೂ ಅಸ್ತಿತ್ವದಲ್ಲಿವೆ. ಅವುಗಳ ಮೂಲಕವೆ ಆಯಾ ಭಾಗದ ಸಂಸ್ಕೃತಿ ಮೆರುಗು ಪಡೆಯುವ ಜೊತೆಗೆ, ತನ್ನನ್ನು ತಾನು ಬಿಂಬಿಸಿಕೊಳ್ಳುತ್ತದೆ. ಇವುಗಳನ್ನು ಸರಿಯಾದ ಕ್ರಮದಲ್ಲಿ ಅರ್ಥೈಸಿಕೊಂಡರೆ ಭಾರತೀಯ ಸಂಪ್ರದಾಯ ಮತ್ತು ಅದರ ಸತ್ವದ ನೈಜ ಅರಿವು ನಮಗೆ ದೊರಕುತ್ತದೆ. ಆದರೆ, ಆಧುನಿಕರಾಗುವ ಭರದಲ್ಲಿ ಅವುಗಳನ್ನು ಬದಿಗೆ ತಳ್ಳುತ್ತಿರುವ ಸೋ ಕಾಲ್ಡ್ ಆಧುನೀಕರು ಒಂದೆಡೆಯಾದರೆ, ಅದನ್ನು ಶತಾಯಗತಾಯ ಹತ್ತಿಕ್ಕುವ ನಶೆ ಸರ್ಕಾರಗಳಿಗೆ ಮತ್ತು ದಯಾ ಪರಪರ ಸಂಘಗಳಿಗೆ ಏರಿರುವುದು ಮತ್ತೊಂದು ಕಡೆ. ಸಂಪ್ರದಾಯ ಸಂಸ್ಕೃತಿಗಳಿಗೆ ಬಲವಾದ ಪೆಟ್ಟು ನೀಡುವುದು ಬ್ರಿಟೀಷರ ಸರ್ಕಾರದಿಂದ ಹಿಡಿದು ಆಧುನಿಕ ಸರ್ಕಾರ, ನ್ಯಾಯಾಂಗಗಳವರೆಗೂ ಯಾವುದೇ ಅಡೆತಡೆಯಿಲ್ಲದೆ ಬೆಳೆದುಕೊಂಡುಬಂದಿದೆ. ಇದರ ಒಂದು ಝಲಕ್ ಇತ್ತೀಚೆಗೆ ಕಂಬಳದಿಂದ ಪ್ರಾರಂಭವಾಗಿದೆ. ಮತ್ತಷ್ಟು ಓದು
ಪೀರಾಯರ ಒಂದು ಕಥಾನಕ – ನೀಳ್ಗತೆ ಭಾಗ 1
– ಮು. ಅ. ಶ್ರೀರಂಗ,ಬೆಂಗಳೂರು
ಪದ್ಮನಾಭರಾಯರು (ಪೀರಾಯರು) ಕೇಂದ್ರ ಸರ್ಕಾರದ ಗ್ರಾಹಕ ಸೇವಾ ಕಚೇರಿಯೊಂದರಲ್ಲಿ ಸುಮಾರು ಮೂವತ್ತು ಮೂರು ವರುಷ ಕೆಲಸಮಾಡಿ ಸ್ವಯಂ ನಿವೃತ್ತಿ ಹೊಂದಿ (ವಿ ಆರ್ ಎಸ್ ) ಇಂದಿಗೆ ಐದು ವರುಷಗಳಾದವು. ನಿನ್ನೆಯ ವರ್ತಮಾನ ಪತ್ರಿಕೆಯಲ್ಲಿ ಕೇಂದ್ರ ಸರ್ಕಾರದ ನೌಕರರಿಗೆ ‘ಅಚ್ಛೆದಿನ್’ ಎನ್ನಬಹುದಾದ ಏಳನೇ ವೇತನ ಆಯೋಗದ ವರದಿ ಓದಿದ ಮೇಲೆ ತಾನು ಅವಸರ ಪಟ್ಟು ವಿ ಆರ್ ಎಸ್ ತೆಗೆದುಕೊಂಡು, ಮನೆಗೆ ಬರುತ್ತಿದ್ದ ಧನಲಕ್ಷ್ಮಿಗೆ ಬಾಗಿಲು ಹಾಕಿದೆನೇನೋ ಎಂಬ ಸಣ್ಣ ಎಳೆಯ ವಿಷಾದಾವೊಂದು ಅವರ ಮನಸ್ಸಿನಲ್ಲಿ ಬಂದಿದ್ದು ಸುಳ್ಳಲ್ಲ. ಇನ್ನೂ ಐದು ವರ್ಷ ಸರ್ವಿಸ್ ಬಾಕಿ ಇತ್ತು. ಕಮ್ಮಿ ಎಂದರೂ ಒಂದು ಹತ್ತು ಹನ್ನೆರೆಡು ಲಕ್ಷ ಹೆಚ್ಚಾಗಿ ಬರುತ್ತಿತ್ತು. ಅವರು ವಿ ಆರ್ ಎಸ್ ಅನ್ನು ತೀರಾ ಆತುರ ಪಟ್ಟು ತೆಗೆದುಕೊಂಡಿರಲಿಲ್ಲ. ತಮ್ಮ ಇಲಾಖೆಗೆ ಮೂರು ತಿಂಗಳ ಮುಂಚಿತವಾಗಿಯೇ ನೋಟಿಸ್ ಕೊಡಬೇಕಾಗಿತ್ತು. ಕೊಟ್ಟರು. ಆ ಅವಧಿಯಲ್ಲಿ ಒಮ್ಮೆ ತಮ್ಮ ಅರ್ಜಿಯನ್ನು ವಾಪಸ್ ತೆಗೆದುಕೊಂಡಿದ್ದರು. ಮತ್ತೆ ವಿ ಆರ್ ಎಸ್ ಗೆ ಅರ್ಜಿ ಹಾಕಿದರು. ಮೂರು ತಿಂಗಳ ಅವಧಿಯಲ್ಲಿ ಬೇಕಾದರೆ ಕೊನೆಯ ದಿನವೂ ಸಹ ವಿ ಆರ್ ಎಸ್ ಬೇಡ ಎಂದು ಅರ್ಜಿಯನ್ನು ವಾಪಸ್ ಪಡೆಯುವ ಅವಕಾಶವಿತ್ತು. ಅವರ ಮೇಲಾಧಿಕಾರಿ ದೂರವಾಣಿಯಲ್ಲಿ ಮಾತಾಡಿ ‘ರಾಯರೇ ನಿಮ್ಮ ಫೈಲಿನಲ್ಲಿ ಮೂರು ಅರ್ಜಿಗಳಿವೆ. ಇಂದು ಕೊನೆಯ ಅವಕಾಶ. ಏನು ಮಾಡೋಣ ನೀವೇ ಹೇಳಿ’ ಎಂದಾಗ ಕುರುಕ್ಷೇತ್ರದ ಯುದ್ಧ ಇನ್ನೂ ನಡೆಯುತ್ತಿರುವಾಗಲೇ ಶರ ಶಯ್ಯೆಯಲ್ಲಿ ಮಲಗುವ ಪ್ರತಿಜ್ಞೆ ಮಾಡಿದ ಭೀಷ್ಮನಂತೆ ತಮ್ಮ ಸ್ವಯಂ ನಿವೃತ್ತಿಯ ನಿರ್ಧಾರಕ್ಕೆ ಒಪ್ಪಿಗೆ ಸೂಚಿಸಿದರು.
ಐದು ವರ್ಷಗಳ ಹಿಂದೆ ಗಾಂಧೀ ಜಯಂತಿ ಆದ ಮಾರನೇ ದಿನ ಅಕ್ಟೋಬರ್ ಮೂರರಂದು ಆಫೀಸು ಪ್ರಾರಂಭವಾದ ಮೇಲೆ ಹನ್ನೊಂದು ಗಂಟೆಯ ಹೊತ್ತಿಗೆ ತಾವು ಕೆಲಸ ಮಾಡುತ್ತಿದ್ದ ಖುರ್ಚಿ ಬಿಟ್ಟು ಮೇಲೆದ್ದರು. ಅಂದು ಅವರ ಕಣ್ಣು ಸ್ವಲ್ಪ ಜಾಸ್ತಿಯೇ ಒದ್ದೆಯಾಯಿತು. ತಮ್ಮ ಕೆಲಸವನ್ನು ಅವರು ತುಂಬಾ ಇಷ್ಟಪಟ್ಟು,ಬೇಸರವಿಲ್ಲದೆ ಮಾಡಿಕೊಂಡು ಬಂದಿದ್ದರು. ರಾಯರು ತಮ್ಮ ಕೆಲವು ಮೇಲಾಧಿಕಾರಿಗಳು,ಕೆಲ ಸಹೋದ್ಯೋಗಿಗಳು ಹಾಗೂ ಗ್ರಾಹಕರ ಜತೆ ಸಾಕಷ್ಟು ಕಿರಿಕಿರಿ ಅನುಭವಿಸಿದ್ದರು. ಇಲ್ಲವೆಂದಲ್ಲ. ಆದರೆ ಅದೆಲ್ಲಾ part and parcel of the game ಎಂದು ಅಂದಂದಿಗೆ ಬಿಟ್ಟುಬಿಡುತ್ತಿದ್ದರು. ನಿನ್ನೆಯ ನ್ಯೂಸ್ ಪೇಪರ್ ಸುದ್ದಿ ನೋಡಿದ ಮೇಲೆ, ಇಂದು ಬೆಳಗ್ಗೆ ಎದ್ದು ಕಾಫಿ ಕುಡಿದ ನಂತರ ತಮ್ಮ ಲ್ಯಾಪ್ ಟಾಪ್ ತೆಗೆದು ಇಂಟರ್ನೆಟ್ ನಲ್ಲಿ ಗೂಗಲ್ ಸರ್ಚ್ ಗೆ ಹೋಗಿ ತಮ್ಮ ನಿವೃತ್ತಿ ವೇತನ ಎಷ್ಟು ಹೆಚ್ಚಾಗಬಹುದೆಂದು ನೋಡಿದರು. ಅವರು ತಮ್ಮ ಇಲಾಖೆಯ ಅಕೌಂಟ್ಸ್ ವಿಭಾಗದಲ್ಲಿ ಒಂದು ದಿನವೂ ಕೆಲಸ ಮಾಡಿದವರಲ್ಲ. ಇತರೇ ವಿಭಾಗದಲ್ಲೇ ತಮ್ಮ ಇಡೀ ಸರ್ವಿಸ್ ಮುಗಿಸಿದ್ದರು. ಹೀಗಾಗಿ ಏಳನೇ ವೇತನ ಆಯೋಗದ ಮುಖ್ಯಾಂಶಗಳನ್ನು ಓದಿದಾಗ ಆ ಗೂಢ, ತಾಂತ್ರಿಕ ಪದಗಳಾವುವೂ ಅವರಿಗೆ ಅರ್ಥವಾಗಲಿಲ್ಲ. ದುಡ್ಡು ಕೈಗೆ ಬಂದಾಗ ಹೇಗೂ ತಿಳಿಯುತ್ತದಲ್ಲ ಎಂದು ನಿರ್ಲಿಪ್ತರಾಗಿ ಪೇಪರ್ ಓದಲು ಕುಳಿತರು.
ವಿಚಿತ್ರವಾಗಿದೆ ಮನಸ್ಸು..!
– ಗೀತಾ ಹೆಗ್ಡೆ
ಒಮ್ಮೊಮ್ಮೆ ಇದ್ದಕ್ಕಿದ್ದಂತೆ ಮನಸ್ಸು ತುಂಬಾ ಬೇಸರದಲ್ಲಿ ಕಳೆದುಹೋಗುವಷ್ಟು ಮುದುಡಿಕೊಂಡು ಹೃದಯದಲ್ಲಿ ವಿಚಿತ್ರವಾದ ನೋವಿನ ತರಂಗಗಳನ್ನು ಎಬ್ಬಸಿಬಿಡುತ್ತದೆ. ಯಾಕೆ ? ಕಾರಣ ಹುಡುಕಲು ಹೋದರೆ ನಿಜವಾಗಲೂ ಅಂಥದ್ದೇನೂ ಇರುವುದಿಲ್ಲ. ಆದರೂ ಎಲ್ಲೋ ಯಾರೋ ಎಂದೋ ಹೇಳಿದ ಒಂದು ಚಿಕ್ಕ ಮಾತಿಗೂ ಯಾವತ್ತೋ ನೆನಪಿಸಿಕೊಂಡು ಸುಮ್ಮನೆ ದುಃಖ ಪಡುತ್ತದೆ. ಯಾಕೀಗೆ ? ಇದರಿಂದ ಏನು ಪ್ರಯೋಜನ ? ಯಾಕೆ ಈ ಮನಸ್ಸಿನ ಗುಣ ಹೀಗೆ ? ಮತ್ತಷ್ಟು ಓದು
ಕಾಲೇಜು – ವಿ.ವಿಗಳಲ್ಲಿ ಐಡಿಯಾಲಜಿ ಪ್ರಣೀತ ಹೋರಾಟಗಳು ಅವಶ್ಯಕವೇ?
– ಪ್ರವೀಣ ಟಿ.ಎಲ್
ಶಿವಮೊಗ್ಗ
ಭಾರತೀಯ ಶಿಕ್ಷಣ ಕ್ಷೇತ್ರದ ಸಮಸ್ಯೆಗಳ ಕುರಿತು ಹಲವು ಪ್ರಬಂಧಗಳೇ ಮಂಡನೆಯಾಗಿವೆ. ಆದರೆ ಇತ್ತೀಚಿನ ಕೆಲವು ಘಟನೆಗಳು ನಮ್ಮನ್ನು ಹೊಸ ಸಮಸ್ಯೆಯತ್ತ ಗಮನಹರಿಸುವಂತೆ ಮಾಡಿದೆ. ಅಂತಹ ಘಟನೆಗಳೆಂದರೆ;
- ರೋಹಿತ್ ವೇಮುಲಾ ಎಂಬ ಸಂಶೋಧನಾ ವಿದ್ಯಾರ್ಥಿಯ ಆತ್ಮಹತ್ಯೆಯ ಸುತ್ತ ನಡೆದ ಪ್ರಹಸನ. ಆತ ವಿವಿಯಲ್ಲಿ ಸಕ್ರಿಯವಾಗಿ ಹೋರಾಟದಲ್ಲಿ ತೊಡಗಿಸಿಕೊಂಡಿದ್ದ ಕಾರಣಕ್ಕೆ ಆತನ ಆತ್ಮಹತ್ಯೆಯನ್ನು ಕೇಂದ್ರ ಸರ್ಕಾರವೇ ವ್ಯವಸ್ಥಿತವಾಗಿ ನಡೆಸಿದೆ ಎಂಬ ಆರೋಪ.
ಗ್ರಸ್ತ
– ಪ್ರಶಾಂತ್ ಭಟ್
ಕರಣಮ್ ಪವನ್ ಪ್ರಸಾದ್ ಕರ್ಮ, ನನ್ನಿ ಕಾದಂಬರಿಗಳಿಂದ, ಬೀದಿ ಬಿಂಬ ರಂಗದ ತುಂಬ ಹಾಗೂ ಪುರಹರ ನಾಟಕಗಳಿಂದ ಕನ್ನಡ ಸಾಹಿತ್ಯದಲ್ಲಿ ಬೇರೆಯದೇ ಹೆಜ್ಜೆಗುರುತು ಮೂಡಿಸಿಕೊಂಡಿರುವ ಕರಣಮ್ ಅವರ ಹೊಸ ಕಾದಂಬರಿ ‘ಗ್ರಸ್ತ’. ಕರ್ಮದಲ್ಲಿ ಆಧುನಿಕತೆ ಮತ್ತು ಸಾಂಪ್ರದಾಯಿಕತೆಯ ನಡುವಿನ ತಿಕ್ಕಾಟವನ್ನು ಸಮರ್ಥವಾಗಿ ತೋರಿಸಿದ್ದ ಅವರು ನನ್ನಿಯಲ್ಲಿ ನನ್ ಗಳ ಜೀವನ ಕುರಿತಾದ ಹಲವಾರು ಕಹಿ ಸತ್ಯಗಳ ಅನಾವರಣಗೊಳಿಸಿದರು. ಇವೆರಡು ವಸ್ತುಗಳಿಂದ ಬಿಡಿಸಿಕೊಂಡು ಹೊಸತಾಗಿ ವಿಜ್ಞಾನ ಮತ್ತು ಕರ್ಮ ಸಿದ್ದಾಂತ ವ ಸಮೀಕರಿಸಿ ‘ಗ್ರಸ್ತ’ ಬರೆದಿದ್ದಾರೆ. ಮತ್ತಷ್ಟು ಓದು
‘ಗಾಂಧಿಬಜಾರ್’ನಲ್ಲಿ ನೆನಪುಗಳ ಸೋನೆ ಮಳೆ!
– ತುರುವೇಕೆರೆ ಪ್ರಸಾದ್
ಬೆಂಗಳೂರಿನ ಗಾಂಧಿಬಜಾರ್‍ನ ಮಧುರ ನೆನಪುಗಳನ್ನು ಯಾವತ್ತಿಗೂ ಮರೆಯಲಾಗುವುದಿಲ್ಲ. ಗಾಂಧಿಬಜಾರ್‍ನ ಬ್ಯೂಗಲ್ ರಾಕ್, ವಿದ್ಯಾರ್ಥಿ ಭವನ್ ಮಸಾಲೆ ದೋಸೆ, ಚುರ್ಮುರಿ, ಸುಬ್ಬಮ್ಮಜ್ಜಿ ಹಪ್ಪಳದ ಅಂಗಡಿ, ಪ್ರಜಾಮತ ಕಛೇರಿ ಇವೆಲ್ಲಾ ಗಾಂಧಿಬಜಾರ್ ಎಂದೊಡನೆ ದುತ್ತನೆ ಕಣ್ಮುಂದೆ ಬಂದು ನಿಲ್ಲುತ್ತವೆ. ಗಾಂಧಿಬಜಾರ್ ಇಡೀ ಬೆಂಗಳೂರಿಗೇ ಒಂದು ಘನತೆವೆತ್ತ ಶಾಂತಿಕುಟೀರ ಎಂಬಂತಂಹ ಭಾವನೆ ಮೂಡಿಸುವ ಅನುಭವಗಳು ಗಾಂಧಿಬಜಾರ್‍ನ ರಸ್ತೆಗಳಲ್ಲಿ ಸುತ್ತಾಡಿದಾಗ ನನಗಾಗಿದೆ. ಸೋನೆ ಮಳೆ ಬಂದು ನಿಂತ ಒಂದು ಮುಸ್ಸಂಜೆಯಲ್ಲಿ ಇಕ್ಕೆಲೆಗಳ ಹಸಿರು ಮರಗಳ ನಡುವೆ ಪ್ರಶಾಂತವಾಗಿ ನಡೆಯುತ್ತಾ ಗಾಂಧಿಬಜಾರ್‍ನ ಹೂವಿನಂಗಡಿಗಳ ಸೊಬಗನ್ನು ಕಣ್ತುಂಬಿಕೊಳ್ಳುವುದೇ ಒಂದು ಅನಿರ್ವಚನೀಯ ಅನುಭವ. ಬಹುಶಃ ನನಗೆ ನೆನೆಪಿರುವ ಹಾಗೆ ಮೆಜೆಸ್ಟಿಕ್‍ನಿಂದ ಆ ಕಾಲದ ಮೊದಲ ಡಬ್ಬಲ್ ಡೆಕ್ಕರ್ ಬಸ್ ಓಡಾಟ ಆರಂಭಿಸಿದ್ದೇ ಗಾಂಧಿಬಜಾರ್‍ಗೆ! ಆಹ್ಲಾದಕರ ವಾತಾವರಣ ಬೆಂಗಳೂರಿನ ಕೆಲವೇ ಬಡಾವಣೆಗಳಿಗಿರುವ ಸೌಭಾಗ್ಯ.ಅವುಗಳಲ್ಲಿ ಗಾಂಧಿಬಜಾರ್‍ಗೆ ಅಗ್ರಸ್ಥಾನ ಎಂದರೆ ತಪ್ಪಿಲ್ಲ, ಇಲ್ಲೇ ಪೂರ್ವ ಆಂಜನೇಯ ದೇವಸ್ಥಾನದ ರಸ್ತೆಯಲ್ಲಿದ್ದ ಅಜ್ಜನ ಮನೆಗೆ ವರ್ಷಕ್ಕೊಂದು ಭಾರಿ ಬಂದು ಜಾಂಡಾ ಹೊಡೆಯುತ್ತಿದ್ದ ನನಗೆ ಗಾಂಧಿಬಜಾರ್, ಡಿವಿಜಿ ರೋಡ್, ಬುಲ್ ಟೆಂಪಲ್ ರಸ್ತೆಯ ಸಂದಿಗೊಂದಿಗಳೂ ಪರಿಚಯವಾಗಿತ್ತು. ವರ್ಷಕ್ಕೊಮ್ಮೆ ನಡೆಯುತ್ತಿದ್ದ ಕಳ್ಳೆಕಾಯಿ ಪರಿಷೆಗಂತೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಬನಶಂಕರಿಯಲ್ಲಿ ನಮ್ಮೂರಿನಿಂದ ಹೋಗಿ ನೆಲೆಸಿದ್ದ ನನ್ನ ಗೆಳೆಯರು ಇದ್ದರು, ನಾವೆಲ್ಲಾ ಬ್ಯೂಗಲ್ ರಾಕ್,ಕೃಷ್ಣರಾವ್ ಪಾಕ್‍ಗಳಲ್ಲಿ ಅದೆಷ್ಟು ಕಾಲ ಕಳೆದಿದ್ದೇವೆಂಬುದಕ್ಕೆ ಲೆಕ್ಕವೇ ಇಲ್ಲ. ಮತ್ತಷ್ಟು ಓದು