ವಿಷಯದ ವಿವರಗಳಿಗೆ ದಾಟಿರಿ

Archive for

6
ಜನ

ಬಡವರ ಮಕ್ಕಳ ಭವಿಷ್ಯದ ಜೊತೆಗೆ ಬರಗೂರು ಭಂಡಾಟ

– ರಾಕೇಶ್ ಶೆಟ್ಟಿ

baraguruಕಾಲಕ್ಕೆ ತಕ್ಕಂತೆ ಮನುಷ್ಯ Update ಆಗಲಿಲ್ಲಾಂದ್ರೆ Outdated ಆಗಿಬಿಡ್ತಾನೆ ಎನ್ನುವುದಕ್ಕೆ ರಾಜ್ಯದ ಬುದ್ಧಿಜೀವಿಗಳೇ ಸಾಕ್ಷಿ. ಉದಾಹರಣೆಗೆ, ಪಠ್ಯಪುಸ್ತಕ ಪುನರ್ ರಚನಾ ಸಮಿತಿಯ ಅಧ್ಯಕ್ಷರಾಗಿರುವ ಬರಗೂರು ರಾಮಚಂದ್ರಪ್ಪ ಅವರನ್ನೇ ತೆಗೆದುಕೊಳ್ಳಬಹುದು. ಬರಗೂರು ಅವರೇ ಯಾಕೆಂದರೆ, ಸಿದ್ಧರಾಮಯ್ಯನವರ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣ,ಬಿಜೆಪಿಯ ಕಾಲದಲ್ಲಿ ಪಠ್ಯಪುಸ್ತಕಗಳ ಕೇಸರಿಕರಣವಾಗಿದೆ ಎಂಬ ಬುದ್ಧಿಜೀವಿಗಳ ಹುಯಿಲನ್ನು ಬೆಂಬಲಿಸಿ, ತಮ್ಮ ಆಸ್ಥಾನ ಸಾಹಿತಿಗಳಲ್ಲೊಬ್ಬರಾದ ಬರಗೂರು ರಾಮಚಂದ್ರಪ್ಪ ಅವರ ನೇತೃತ್ವದಲ್ಲಿ ಸಮಿತಿಯೊಂದನ್ನು ೨೦೧೪ರಲ್ಲಿ ರಚಿಸಿದ್ದರು.ಈ ಸಮಿತಿಯ ಕೆಲಸ ಮುಗಿಯಬೇಕಾದ ಸಮಯಕ್ಕೆ ಮುಗಿದ್ದರಿಂದ ಅವಧಿಯ ವಿಸ್ತರಣೆಯನ್ನೂ ಮಾಡಲಾಯಿತು. ಸಮಿತಿಯೊಂದರ ಅವಧಿಯ ವಿಸ್ತರಣೆಯಾಗುವಾಗ ಅಲ್ಲಿಯವರೆಗೂ ಆಗಿರುವ ಕಾರ್ಯಗಳ ವರದಿ ನೀಡುವುದು ವಾಡಿಕೆ.ಆದರೆ,ಮುಖ್ಯಮಂತ್ರಿಗಳ ಆಸ್ಥಾನ ಸಾಹಿತಿಗಳ ನೇತೃತ್ವದ ಈ ಸಮಿತಿಯನ್ನು ಹಾಗೆಲ್ಲ ಪ್ರಶ್ನಿಸಲಾದೀತೆ? ಈ ಸಮಿತಿ ರಚನೆಯಾದ ನಂತರ, ಹಿಂದಿನ ಪಠ್ಯಗಳಲ್ಲಿನ ಯಾವೆಲ್ಲ ಲೋಪದೋಷಗಳನ್ನು ಪತ್ತೆ ಮಾಡಲಾಗಿದೆ,ಏನನ್ನು ಪುನರ್ ರಚನೆ ಮಾಡುತ್ತಿದ್ದಾರೆ ಎಂಬ ಬಗ್ಗೆ ಯಾವುದೇ ಮಾಹಿತಿಯನ್ನು ಕೊಡದೆ ಎಲ್ಲವನ್ನೂ ನಿಗೂಢವಾಗಿಡಲಾಗುತ್ತಿದೆ.

ಈ ಪರಿ ನಿಗೂಢತೆಯನ್ನಿಟ್ಟುಕೊಂಡು ಬರಗೂರು ರಾಮಚಂದ್ರಪ್ಪನವರೇನು ವಿದ್ಯಾರ್ಥಿಗಳ ಭವಿಷ್ಯದ ಮೇಲೆ ಸರ್ಜಿಕಲ್ ಸ್ಟ್ರೈಕ್ ಮಾಡಲು ಹೊರಟಿದ್ದಾರೆಯೇ? ಎಲ್ಲಾ ಪಠ್ಯ ಪುಸ್ತಕಗಳ ಪರಿಷ್ಕರಣೆಯಾದರೂ ಆಗಿದೆಯೇ ಎಂದರೆ ಅದೂ ಇಲ್ಲ ಜನವರಿ ೧೫ರೊಳಗೆ ನೀಡುತ್ತಾರಂತೆ.ಬಹುಶಃ ಎಲ್ಲಾ ಪ್ರಿಂಟ್ ಆದ ನಂತರವೇ ಬರಗೂರರ ನಿಗೂಢ ಪ್ರಪಂಚದಿಂದ ಈ ಪುಸ್ತಕ ಹೊರಬರುತ್ತದೆನಿಸುತ್ತದೆ. ಇಂತಹ ನಿಗೂಢತೆಯನ್ನಿಟ್ಟುಕೊಂಡೇನೂ ಮಕ್ಕಳ ಭವಿಷ್ಯವನ್ನು ಉಜ್ವಲಗೊಳಿಸಲು ಹೊರಟಿದ್ದರೆಯೇ ಎಂದು ನಿರೀಕ್ಷೆಯಿಟ್ಟುಕೊಂಡರೇ ಆಘಾತವಾಗುತ್ತದೆ.

ಮತ್ತಷ್ಟು ಓದು »