ವಿಷಯದ ವಿವರಗಳಿಗೆ ದಾಟಿರಿ

Archive for

25
ಜನ

ಕಂಬಳ : ಸಂಸ್ಕೃತಿ ಉಳಿಸಲು ಬೇಕು ನಿಮ್ಮ ಬೆಂಬಲ

– ಡಾ. ಸಂತೋಷ್ ಕುಮಾರ್ ಪಿ.ಕೆ

860897a4867e00f161e4236fd7fe5aeeಕಂಬಳ : ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ನಡೆಯುವ ಈ ಜಾನಪದ ಶೈಲಿಯ ಕ್ರೀಡೆಯು ಕೇವಲ ಮನೊರಂಜನೆ ಸರಕಾಗಿ ಮಾತ್ರ ಉಳಿದಿರದೆ, ಸಂಸ್ಕೃತಿಯ ಭಾಗವಾಗಿಯೂ ತನ್ನ ಅಸ್ತಿತ್ವವನ್ನು ಉಳಿಸಿಕೊಂಡುಬಂದಿದೆ. ಜನಮಾನಸದಲ್ಲಿ ಹಚ್ಚಹಸುರಾಗಿ ಉಳಿಯುವ ಹಲವಾರು ಸಂಗತಿಗಳಲ್ಲಿ ಸಂಸ್ಕೃತಿಯ ಭಾಗವಾಗಿರುವ ಇಂತಹ ಕೆಲವಾರು ಸಂಗತಿಗಳು ಎನ್ನಬಹುದು. ಕರ್ನಾಟಕದ ಹಲವಾರು ಭಾಗಗಳಲ್ಲಿ ಇಂತಹ ವಿಶೇಷ ಸಾಂಸ್ಕೃತಿಕ ಆರಣೆಗಳು ಇನ್ನೂ ಅಸ್ತಿತ್ವದಲ್ಲಿವೆ. ಅವುಗಳ ಮೂಲಕವೆ ಆಯಾ ಭಾಗದ ಸಂಸ್ಕೃತಿ ಮೆರುಗು ಪಡೆಯುವ ಜೊತೆಗೆ, ತನ್ನನ್ನು ತಾನು ಬಿಂಬಿಸಿಕೊಳ್ಳುತ್ತದೆ. ಇವುಗಳನ್ನು ಸರಿಯಾದ ಕ್ರಮದಲ್ಲಿ ಅರ್ಥೈಸಿಕೊಂಡರೆ ಭಾರತೀಯ ಸಂಪ್ರದಾಯ ಮತ್ತು ಅದರ ಸತ್ವದ ನೈಜ ಅರಿವು ನಮಗೆ ದೊರಕುತ್ತದೆ. ಆದರೆ, ಆಧುನಿಕರಾಗುವ ಭರದಲ್ಲಿ ಅವುಗಳನ್ನು ಬದಿಗೆ ತಳ್ಳುತ್ತಿರುವ ಸೋ ಕಾಲ್ಡ್ ಆಧುನೀಕರು ಒಂದೆಡೆಯಾದರೆ, ಅದನ್ನು ಶತಾಯಗತಾಯ ಹತ್ತಿಕ್ಕುವ ನಶೆ ಸರ್ಕಾರಗಳಿಗೆ ಮತ್ತು ದಯಾ ಪರಪರ ಸಂಘಗಳಿಗೆ ಏರಿರುವುದು ಮತ್ತೊಂದು ಕಡೆ. ಸಂಪ್ರದಾಯ ಸಂಸ್ಕೃತಿಗಳಿಗೆ ಬಲವಾದ ಪೆಟ್ಟು ನೀಡುವುದು ಬ್ರಿಟೀಷರ ಸರ್ಕಾರದಿಂದ ಹಿಡಿದು ಆಧುನಿಕ ಸರ್ಕಾರ, ನ್ಯಾಯಾಂಗಗಳವರೆಗೂ ಯಾವುದೇ ಅಡೆತಡೆಯಿಲ್ಲದೆ ಬೆಳೆದುಕೊಂಡುಬಂದಿದೆ. ಇದರ ಒಂದು ಝಲಕ್ ಇತ್ತೀಚೆಗೆ ಕಂಬಳದಿಂದ ಪ್ರಾರಂಭವಾಗಿದೆ. ಮತ್ತಷ್ಟು ಓದು »