ಭೈರಪ್ಪನವರ ಬದುಕು ನಮಗೇಕೆ ಮಾದರಿ
– ರಾಜಕುಮಾರ.ವ್ಹಿ.ಕುಲಕರ್ಣಿ
ಮುಖ್ಯ ಗ್ರಂಥಪಾಲಕರು
ಎಸ್.ನಿಜಲಿಂಗಪ್ಪ ವೈದ್ಯಕೀಯ ಮಹಾವಿದ್ಯಾಲಯ
ಬಾಗಲಕೋಟ
ಎಸ್.ಎಲ್. ಭೈರಪ್ಪ ಕನ್ನಡದ ಪ್ರಮುಖ ಬರಹಗಾರರಲ್ಲೊಬ್ಬರು. ಇಪ್ಪತ್ತೈದು ಕಾದಂಬರಿಗಳು, ಆತ್ಮವೃತ್ತಾಂತ, ನಾಲ್ಕು ಸಾಹಿತ್ಯ ಚಿಂತನ ಗ್ರಂಥಗಳು ಮತ್ತು ಎರಡು ಸಂಪಾದಿತ ಕೃತಿಗಳ ಲೇಖಕರಾದ ಎಸ್.ಎಲ್.ಭೈರಪ್ಪನವರು ಕನ್ನಡ ಮಾತ್ರವಲ್ಲದೆ ಇತರ ಭಾಷೆಗಳಲ್ಲೂ ಓದುಗರ ದೊಡ್ಡ ಸಮೂಹವನ್ನು ಹೊಂದಿರುವ ವಿಶಿಷ್ಟ ಬರಹಗಾರ. ಭೈರಪ್ಪನವರ ಕಾದಂಬರಿಗಳು ತೆಲುಗು, ಮರಾಠಿ, ಹಿಂದಿ ಭಾಷೆಗಳೂ ಸೇರಿ ಭಾರತದ ಎಲ್ಲ 14 ಭಾಷೆಗಳಿಗೂ ಅನುವಾದಗೊಂಡಿವೆ. ಭೈರಪ್ಪನವರ ಬದುಕು ಮತ್ತು ಸಾಹಿತ್ಯ ಕುರಿತೇ ಇಪ್ಪತ್ತಕ್ಕೂ ಹೆಚ್ಚು ಕೃತಿಗಳು ಬೇರೆ ಬೇರೆ ಲೇಖಕರಿಂದ ರಚನೆಗೊಂಡಿರುವುದು ಇನ್ನೊಂದು ವಿಶೇಷ. ಕಾಲಕಾಲಕ್ಕೆ ತಮ್ಮ ಬರವಣಿಗೆಯಿಂದ ಭೈರಪ್ಪನವರು ಕನ್ನಡದ ಓದುಗರನ್ನು ಚಿಂತನೆಗೆ ಹಚ್ಚುತ್ತಲೇ ಬಂದಿರುವರು. ಅವರ ಕೃತಿಗಳು ಮನೋರಂಜನೆಗಾಗಿಯೋ ಇಲ್ಲವೇ ಸಮಯ ಕಳೆಯುವುದಕ್ಕಾಗಿಯೋ ಓದುವಂಥ ಪುಸ್ತಕಗಳ ಸಾಲಿನಲ್ಲಿ ನಿಲ್ಲುವ ಕೃತಿಗಳಲ್ಲ. ಭೈರಪ್ಪನವರ ಕಾದಂಬರಿಯೊಂದನ್ನು ಓದಿದ ನಂತರ ಅದು ಓದುಗನ ಮನಸ್ಸನ್ನು ಅನೇಕ ದಿನಗಳವರೆಗೆ ಕಾಡುತ್ತ ಹೊಸ ಚಿಂತನೆಯನ್ನು ಸೃಷ್ಟಿಸಿ ಬದುಕಿನ ಪರಿವರ್ತನೆಗೆ ಕಾರಣವಾಗುತ್ತದೆ. ಮತ್ತಷ್ಟು ಓದು