ವಿಷಯದ ವಿವರಗಳಿಗೆ ದಾಟಿರಿ

Archive for

9
ಫೆಬ್ರ

ನದಿ..!

– ಶ್ರೀ ಹರಿ 
6823629-river-wallpaperಎಲ್ಲೋಮಹಾಟವಿಯ ಮಧ್ಯದಿ
ಜುಳು ಜುಳು ನಾದ
ಚಿಮ್ಮುತ ಹರಿದಳು
ಹರುಷದ ಉನ್ಮಾದ
ಹೊಳೆ ಝರಿಗಳ ಜೊತೆಗೆ
ಕಣಿವೆ ಹೆಬ್ಬಂಡೆಗಳ ನಡುವೆ
ಚೆಲ್ಲುತ ನಗೆಯ ಬಳುಕುತ ನಡುವ
ಹರಿದಳು ನವವಧುವಿನಂತೆ

Read more »

9
ಫೆಬ್ರ

ದ್ವಂದ್ವ (ಸಣ್ಣ ಕತೆ )

– ಹೆಚ್. ಎಸ್. ಅರುಣ್ ಕುಮಾರ್

thesesamescholarನಾನು ಅಪ್ಪಾಜಿ ಪಕ್ಕದಲ್ಲಿ ಕುಳಿತಿದ್ದೆ. ಸಾವಿರಾರು ಜನರ ಪ್ರಾಣ ಕಾಪಾಡಿದ ಆ ವ್ಯಕ್ತಿ ಮರಣಶಯ್ಯೇಯಲ್ಲಿ ಮಲಗಿರುವುದು ಹರಿಹರಪುರದ ನಿವಾಸಿಗಳಿಗೆ ಅತೀವ ದುಃಖದ ಸಂಗತಿ. ನಮ್ಮ ಮನೆಯಲ್ಲಿ ದೊಡ್ಡ ಗುಂಪೇ ಸೇರಿತ್ತು. ಆಯುರ್ವೇದದ ಪಂಡಿತ ರಾಮ ಜೋಯಿಸ್ ಎಂದರೆ ಸುತ್ತ ಮುತ್ತಲ ಸ್ಥಳಗಳಲ್ಲಿ ಪ್ರಖ್ಯಾತ. ಮನೆಯ ಪಕ್ಕದಲ್ಲಿ ಒಂದು ದೊಡ್ಡ ವೈದ್ಯಶಾಲೆ. ೮-೧೦ ಜನ ರೋಗಿಗಳಿಗೆ ತಂಗಲು ಕೊಠಡಿಗಳು. ಪಂಚಕರ್ಮ, ತರ್ಪಣ, ಶಿರೋಧಾರ, ಅಂಜನಾ ಚಿಕಿತ್ಸೆಗಳಲ್ಲಿ ಸಿದ್ದ ಹಸ್ತ. ಬೇರೆ ಬೇರೆ ದೇಶಗಳಿಂದ ಬಂದು “ಆರೋಗ್ಯಧಾಮ”ದಲ್ಲಿ ಚಿಕಿತ್ಸೆ ಪಡೆಯುತ್ತಾರೆ. ಜೊತೆಗೆ ಶಾರದಾಮಾತೆ ದೇವಾಲಯದ ಮುಖ್ಯ ಅರ್ಚಕ. ನನಗೂ ಆಯುರ್ವೇದದ ಚಿಕಿತ್ಸೆಯ ಜ್ಞಾನವಿದೆ. ಜೊತೆಗೆ ವೇದ ಉಪನಿಷತ್ ಭಾಗವತದ ಕುರಿತು ಆಳವಾದ ಅರಿವು ಬಂದಿದ್ದು ಅಪ್ಪಾಜಿಯವರ ಸಂಗದಿಂದಲೇ. ಶಾರದಾ ದೇವಿಯ ಪೂಜೆ ಪುನಸ್ಕಾರಗಳಲ್ಲಿ ನಾನೂ ಭಾಗಿಯಾಗುತ್ತಿದ್ದೆ. ಹಣೆಗೆ ಕುಂಕುಮ ಗಂಧ ಹಚ್ಚಿಕೊಂಡು ಬಿಳುಪಾದ ಪಂಜೆಯುಟ್ಟು ಅಪ್ಪಾಜಿಯ ಜೊತೆ ದೇವಾಲಯಕ್ಕೆ ಹೋಗುವಾಗ ಎಲ್ಲರ ಗಮನ ನನ್ನತ್ತ ಇರುತ್ತಿತ್ತು. ನನ್ನ ಹರೆಯದ ವಯಸಿನಲ್ಲಿ ಮುಖದ ಪ್ರಶಾಂತತೆಯನ್ನು ನೋಡಿ ನನಗೆ ಹಲವರು ನಮಸ್ಕಾರ ಮಾಡಿ ಮುಂದೆ ಹೋಗುತ್ತಿದ್ದರು. ನನಗೆ ತುಂಬಾ ನಾಚಿಕೆಯಾಗುತ್ತಿತ್ತು. ನನ್ನಂತ ಹರೆಯದ ಹುಡುಗನಿಗೆ ಇದು ಮುಜುಗರವಾಗುತ್ತಿತ್ತು. Read more »