ವಿಷಯದ ವಿವರಗಳಿಗೆ ದಾಟಿರಿ

Archive for

11
ಫೆಬ್ರ

ಶಿಕ್ಷಣದಿಂದ ಸ್ತ್ರೀ ಮತ್ತು ಉಕ್ಕಿನ ತರುಣ ಪಡೆ; ಎರಡು ತತ್ವಗಳ ಸಂಗಮ ಈ ಸಾಹಿತ್ಯ ಸಮ್ಮೇಳನ

– ಅಕ್ಷತಾ ಬಜ್ಪೆ

sister-niveditaವಿವೇಕಾನಂದರ ಪಶ್ಚಿಮದ ದಿಗ್ವಿಜಯದ ಕಥೆ ನಮಗೆಲ್ಲ ಗೊತ್ತೇ ಇದೆ. ಆದರೆ ಈ ಒಂದು ದಿಗ್ವಿಜಯ ಗುರು–ಶಿಷ್ಯೆಯರ ಅಪೂರ್ವ ಸಂಗಮಕ್ಕೆ ಸಾಕ್ಷಿಯಾಯಿತು. ದೇಶಕ್ಕೆ ಶುಭಶಕುನವಾಯಿತು. ಸ್ವಾಮಿ ವಿವೇಕಾನಂದರು ಹೋದಲ್ಲೆಲ್ಲಾ ಅವರನ್ನು ಅನುಸರಿಸುತ್ತಾ ಅವರ ಉಪನ್ಯಾಸಗಳನ್ನು ಕೇಳುತ್ತಿದ್ದ ಐಯರ್ಲೆಂಡಿನ ಮಾರ್ಗರೆಟ್ ಗೆ ಭಾರತದ ಬಗ್ಗೆ ಇದ್ದ ಕುತೂಹಲ ಹೆಚ್ಚಾಗುತ್ತಲೇ ಹೋಯಿತು. ಭಾರತಕ್ಕೆ ಬರಲು ಉತ್ಸುಕರಾಗತೊಡಗಿದರು. ಇದಕ್ಕಾಗಿ ಸ್ವಾಮೀಜಿಯವರಲ್ಲಿ ನಿವೇದನೆಯನ್ನು ಸಲ್ಲಿಸಿದರು. ಆದರೆ ಸ್ವಾಮೀಜಿ ಒಪ್ಪಲಿಲ್ಲ. ಸ್ವಾಮೀಜಿಯವರು ತಮ್ಮ ಮೊದಲ ಯುರೋಪ್ ಪ್ರವಾಸ ಮುಗಿಸಿ ಆಗಷ್ಟೇ ಭಾರತಕ್ಕೆ ಹಿಂದಿರುಗಿದ್ದರು. ಪರಿಸ್ಥಿತಿಗೆ ಸ್ಪಂದಿಸಿದ ಸ್ವಾಮೀಜಿ ಮಾರ್ಗರೆಟ್ ಗೆ ಪತ್ರ ಬರೆದು ಭಾರತಕ್ಕೆ ಬರುವಂತೆ ಸೂಚನೆಯಿತ್ತರು. ಮತ್ತಷ್ಟು ಓದು »

11
ಫೆಬ್ರ

ಶಿಕ್ಷಣದಿಂದ ಸ್ತ್ರೀ ಮತ್ತು ಉಕ್ಕಿನ ತರುಣ ಪಡೆ; ಎರಡು ತತ್ವಗಳ ಸಂಗಮ ಈ ಸಾಹಿತ್ಯ ಸಮ್ಮೇಳನ

– ಅಕ್ಷತಾ ಬಜ್ಪೆ

img-20170209-wa0003ವಿವೇಕಾನಂದರ ಪಶ್ಚಿಮದ ದಿಗ್ವಿಜಯದ ಕಥೆ ನಮಗೆಲ್ಲ ಗೊತ್ತೇ ಇದೆ. ಆದರೆ ಈ ಒಂದು ದಿಗ್ವಿಜಯ ಗುರು–ಶಿಷ್ಯೆಯರ ಅಪೂರ್ವ ಸಂಗಮಕ್ಕೆ ಸಾಕ್ಷಿಯಾಯಿತು. ದೇಶಕ್ಕೆ ಶುಭಶಕುನವಾಯಿತು. ಸ್ವಾಮಿ ವಿವೇಕಾನಂದರು ಹೋದಲ್ಲೆಲ್ಲಾ ಅವರನ್ನು ಅನುಸರಿಸುತ್ತಾ ಅವರ ಉಪನ್ಯಾಸಗಳನ್ನು ಕೇಳುತ್ತಿದ್ದ ಐಯರ್ಲೆಂಡಿನ ಮಾರ್ಗರೆಟ್ ಗೆ ಭಾರತದ ಬಗ್ಗೆ ಇದ್ದ ಕುತೂಹಲ ಹೆಚ್ಚಾಗುತ್ತಲೇ ಹೋಯಿತು. ಭಾರತಕ್ಕೆ ಬರಲು ಉತ್ಸುಕರಾಗತೊಡಗಿದರು. ಇದಕ್ಕಾಗಿ ಸ್ವಾಮೀಜಿಯವರಲ್ಲಿ ನಿವೇದನೆಯನ್ನು ಸಲ್ಲಿಸಿದರು. ಆದರೆ ಸ್ವಾಮೀಜಿ ಒಪ್ಪಲಿಲ್ಲ. ಸ್ವಾಮೀಜಿಯವರು ತಮ್ಮ ಮೊದಲ ಯುರೋಪ್ ಪ್ರವಾಸ ಮುಗಿಸಿ ಆಗಷ್ಟೇ ಭಾರತಕ್ಕೆ ಹಿಂದಿರುಗಿದ್ದರು. ಪರಿಸ್ಥಿತಿಗೆ ಸ್ಪಂದಿಸಿದ ಸ್ವಾಮೀಜಿ ಮಾರ್ಗರೆಟ್ ಗೆ ಪತ್ರ ಬರೆದು ಭಾರತಕ್ಕೆ ಬರುವಂತೆ ಸೂಚನೆಯಿತ್ತರು.

ಚಾತಕ ಪಕ್ಷಿಯಂತೆ ಕಾಯುತ್ತಿದ್ದ ಸೋದರಿ ನಿವೇದಿತಾ ಭೋಗ ಭೂಮಿಯನ್ನು ತೊರೆದು ಯೋಗ ಭೂಮಿಯತ್ತ ಪಯಣಿಸಿದರು. ಹೊರಡುವ ಮುಂಚೆಯೇ ಭಾರತದಲ್ಲಿನ ದಯನೀಯ ಪರಿಸ್ಥಿತಿಯನ್ನು ವಿವರಿಸಿದ್ದ ಸ್ವಾಮೀಜಿಗೆ ‘ನಿಮ್ಮ ಜನರೇ ಇನ್ನು ನಮ್ಮ ಜನರು’ ಎಂದು ಸಮಾಧಾನ  ಪಡಿಸಿದ್ದರು.ಒಂದು ರೆಕ್ಕೆಯಿಂದ ಹಕ್ಕಿ ಹಾರಲಾರದು ಅಂತೆಯೇ ಪುರುಷರ ಜೊತೆಯಾಗಿ ಸ್ತ್ರೀಯರೂ ಶಿಕ್ಷಿತರಾಗಿ ಬಲಿಷ್ಟರಾದರೆ ಮಾತ್ರ ಸಧೃಡ ಭಾರತವನ್ನು ಕಟ್ಟಲು ಸಾಧ್ಯ ಎಂಬ ಚಿಂತನೆ ಹೊಂದಿದ್ದರು. ಸ್ವಾಮೀಜಿ ‘ತಾಯಿಯ ಮೃದು ಹೃದಯ, ಯೋಧನ ವಿರ್ಯೋತ್ಸಾಹಗಳು, ತತ್ವಜ್ಞಾನಿಯ ಬೌದ್ಧಿಕ ಪ್ರತಿಭೆ, ಸಂತನ ದಿವ್ಯದೃಷ್ಟಿ, ದೇಶ ಪ್ರೇಮಿಯ ರಾಷ್ಟ್ರಪ್ರಜ್ಞೆ ಇದೆಲ್ಲಾ ಏಕತ್ರ ಕಲಿತ ನಾರೀಮಣಿ ನಿವೇದಿತಾ, ಸ್ವಾಮೀಜಿಗೆ ತಮ್ಮ ಇಂಗ್ಲೆಂಡ್ ಕಾರ್ಯದ ಪರಿಣಾಮವಾಗಿ ದೊರೆತಂತಹ ಅತ್ಯಂತ ಶ್ರೇಷ್ಟ ಪುಷ್ಪ.

ಮತ್ತಷ್ಟು ಓದು »