ಕಲೆ ಮತ್ತು ಸಾಹಿತ್ಯಗಳು ಐಡಿಯಾಲಜಿಯ ಬಂಧನದಿಂದ ಎಂದು ಹೊರಬಂದಿತು?
– ಬಾಲಚಂದ್ರ ಭಟ್
“ಸಾಹಿತ್ಯವನ್ನು ಕೆಡಿಸಿದ್ದೇ ಈ ಮಾರ್ಕ್ಸಿಸ್ಟುಗಳು. ರಸಾನುಭೂತಿ ಅನ್ನೋದನ್ನು ಮರೆತು ಸಮಾಜಕ್ಕೆ ನಿಮ್ಮ ಕೊಡುಗೆ ಏನು ಅಂತ ಕವಿಗಳಿಗೆ, ಕತೆಗಾರರಿಗೆ ಕೇಳೋಕೆ ಶುರು ಮಾಡಿದ್ದೇ ಅವರು. ಶಾಸ್ತ್ರೀಯ ಸಂಗೀತ ಒಂದು ಅವರಿಗೆ ಅರ್ಥ ಆಗ್ತಿರಲಿಲ್ಲ ನೋಡ್ರೀ. ಒಂದು ವೇಳೆ ಅರ್ಥ ಆಗಿದ್ದರೆ ಬೆಳಗ್ಗೆ ಹಾಡೋ ತೋಡೀ ರಾಗದಿಂದ ಸಮಾಜಕ್ಕೆ ಏನು ಕೊಡುಗೆ ಸಿಕ್ಕಿದೆ ಅಂತಾನೂ ಕೇಳಿರೋರು. ಪುಣ್ಯಕ್ಕೆ ಬಹುತೇಕ ಮಾರ್ಕ್ಸಿಸ್ಟರಿಗೆ ಸಂಗೀತದ ಗಂಧವೇ ಇಲ್ಲ”
ಹೀಗಂತ ಎಸ್ ಎಲ್ ಭೈರಪ್ಪನವರು ಜೈಪುರ ಲಿಟರರಿ ಫೆಸ್ಟಿವಲ್ ನಲ್ಲಿ ಹೇಳಿದ್ದರೆಂದು ಜೋಗಿಯವರು ಇತ್ತೀಚೆಗೆ ಫೇಸ್ಬುಕ್ ನಲ್ಲಿ ಹಾಕಿಕೊಂಡಿದ್ದರು. ಭೈರಪ್ಪನವರ ಈ ಹೇಳಿಕೆಗೆ ವಿರುದ್ಧ ಪ್ರತಿಕ್ರಿಯಿಸಿದವರೆಲ್ಲರೂ ಅವರು ನೋಡಿದ ಸಾಹಿತ್ಯಾಸಕ್ತ ಹಾಗೂ ಸಂಗೀತಾಸಕ್ತ ಮಾರ್ಕ್ಸಿಸ್ಟರನ್ನು ಉದಾಹರಿಸುವದರ ಮೂಲಕ ಭೈರಪ್ಪನವರ ಹೇಳಿಕೆಯನ್ನು ಅಲ್ಲಗೆಳೆದಿದ್ದರು. ಭೈರಪ್ಪನವರು ಏನೆ ಹೇಳಿದರೂ ಅದಕ್ಕೆ ಉಗ್ರ ಪ್ರತಿರೋಧ ಬರುವದು ಸಾಮಾನ್ಯ. ಅದರಲ್ಲೂ ಮಾರ್ಕ್ಸಿಸ್ಟರ ಬಗ್ಗೆ ಇಂತಹ ಹೇಳಿಕೆ ಕೊಟ್ಟರೆ ಮಾರ್ಕ್ಸಿಸಂ ನ್ನು ಗುತ್ತಿಗೆ ತೆಗೆದುಕೊಂಡವರು ಮುಗಿಬೀಳುವದನ್ನು ಊಹಿಸಬಹುದಾದದ್ದೆ. ಆದರೆ ಈ ಕುರಿತ ಪರ ವಿರೋಧ ಅಭಿಪ್ರಾಯಗಳ ಹೊರತಾಗಿಯೂ ಭೈರಪ್ಪನವರ ಹೇಳಿಕೆ ಮಾರ್ಕ್ಸಿಸಂ ನ ವಿಷ್ಲೇಷಣೆಗೆ ಪ್ರಸ್ತುತವಂತೂ ಹೌದು. ಮತ್ತಷ್ಟು ಓದು