ವಿಷಯದ ವಿವರಗಳಿಗೆ ದಾಟಿರಿ

Archive for

20
ಫೆಬ್ರ

ಆಚರಣೆ ಮತ್ತು ನಂಬಿಕೆಗಳ ಟೀಕೆ: ಅಂದು ಹಾಗೂ ಇಂದು ( ಭಾಗ – ೩ )

– ವಿನಾಯಕ ವಿಶ್ವನಾಥ ಹಂಪಿಹೊಳಿ

muslim-talakಮುಸ್ಲಿಂ ಪರಂಪರೆಗಳಲ್ಲಿ ಮೂರು ಬಾರಿ ತಲಾಕ್ ಹೇಳಿ ಇದ್ದಕ್ಕಿದ್ದಂತೇ ಹೆಂಡತಿಯನ್ನು ತ್ಯಜಿಸುವ ಕ್ರಿಯೆ ಭಾರತೀಯರಿಗೆ ಅನೈತಿಕವಾಗಿ ಕಾಣಲು ಆ ಕ್ರಿಯೆಯಿಂದ ಒಂದು ಹೆಣ್ಣಿನ ಮನಸ್ಸಿಗೆ ಉಂಟಾಗುವ ನೋವಷ್ಟೇ ಸಾಕಾಗಿರುತ್ತದೆ. ಆದರೆ ನಾವು ಆ ಕ್ರಿಯೆಯನ್ನು ಸಮಾನತೆಯ ತತ್ತ್ವದ ಉಲ್ಲಂಘನೆಯಾಗಿ ವ್ಯಾಖ್ಯಾನಿಸುವರ ಮೂಲಕ ಟೀಕಿಸುತ್ತೇವೆ. ಮೂಲತಃ ಪ್ರೊಟೆಸ್ಟಂಟ್ ಕ್ರಿಶ್ಚಿಯನ್ ಪರಿಕಲ್ಪನೆಯಿಂದ ಬಂದ ಈ ಸಮಾನತೆಯ ಪರಿಕಲ್ಪನೆಯು ಭಾರತೀಯ ಮುಸ್ಲಿಮರಿಗೆ ಅರ್ಥವಾಗುವುದಿಲ್ಲ. ಹೀಗಾಗಿ ಈ ವಿರೋಧವನ್ನು ಮುಸ್ಲಿಮರು ಇಸ್ಲಾಂ ವೈಯಕ್ತಿಕ ಕಾನೂನಿನ ವಿರುದ್ಧ ನಡೆಯುತ್ತಿರುವ ಷಡ್ಯಂತ್ರದ ಅನುಷ್ಠಾನವಾಗಿ ನೋಡುತ್ತಾರೆ. ಲಿಬರಲ್ ವಿಚಾರವಂತರು ಮುಸ್ಲಿಮರ ನಿಲುವನ್ನು ಸಮಾನತೆಯ ತತ್ತ್ವದ ಉಲ್ಲಂಘನೆಯಾಗಿ ನೋಡುತ್ತಾರೆ. ನಾವು ನಮ್ಮ ಸಂಪ್ರದಾಯಗಳ ಕುರಿತು ಹಿಂದಿನಿಂದ ಬೆಳೆದು ಬಂದ ಟೀಕೆಗಳ ಪರಂಪರೆಗಳನ್ನು ಹೇಗೆ ಅರ್ಥೈಸಿಕೊಳ್ಳಬೇಕು, ಈಗ ಬರುತ್ತಿರುವ ಹೊಸ ಟೀಕೆಗಳನ್ನು ಹೇಗೆ ಸ್ವೀಕರಿಸಬೇಕು ಹಾಗೂ ಪ್ರತಿಕ್ರಿಯಿಸಬೇಕು ಎನ್ನುವುದರ ಸ್ಪಷ್ಟತೆಯನ್ನು ನಾವು ಕಂಡುಕೊಳ್ಳಬೇಕಿದೆ. ಮತ್ತಷ್ಟು ಓದು »

20
ಫೆಬ್ರ

ಪ್ರಬಂಧ ಸ್ಪರ್ಧೆ – ೧ : ನಮ್ಮೂರ ಹಬ್ಬ


ಭಾರತದ ಪ್ರತಿಯೊಂದು ಹಳ್ಳಿಯೂ ತನ್ನದೇ ಆದ ವಿಶಿಷ್ಟ ಹಬ್ಬಗಳನ್ನು ರೂಢಿಸಿ ಆಚರಿಸಿಕೊಂಡು ಬಂದಿದೆ. ಈ ಹಬ್ಬಗಳಲ್ಲಿ ಊರಿನ ಎಲ್ಲ ಜನರೂ ಭಾಗವಹಿಸುತ್ತಾರೆ. ಪೀಳಿಗೆಯಿಂದ ಪೀಳಿಗೆಗೆ ಹರಿದುಬಂದಿರುವ ಈ ಹಬ್ಬಗಳು ಆಯಾ ಊರಿನ ಅವಿಭಾಜ್ಯ ಅಂಗಗಳಾಗಿರುತ್ತವೆ. ಒಂದೊಂದು ಹಳ್ಳಿಯ ಹಬ್ಬವೂ ತನ್ನದೇ ವಿಶಿಷ್ಟವಾದ ಆಚರಣೆಗಳಿಂದ ಕೂಡಿರುತ್ತವೆ. ಆದರೆ ಇಂತಹ ಅನೇಕ ಹಬ್ಬಗಳು ಹಾಗೂ ಅವುಗಳಲ್ಲಿ ಆಚರಿಸಲ್ಪಡುವ ನೂರಾರು ಸೂಕ್ಷ್ಮ ಆಚರಣೆಗಳ ವಿವರಗಳು ಇಂದಿಗೂ ಕೂಡ ಕನ್ನಡಿಗರಿಗೆ ಗೊತ್ತಿಲ್ಲ. ಪತ್ರಿಕೆಗಳಲ್ಲಿ, ಮಾಧ್ಯಮಗಳಲ್ಲಿ ಕೇವಲ ಕೆಲವೇ ಕೆಲವು ಜಾತ್ರೆಗಳ ಹಾಗೂ ಹಬ್ಬಗಳ ಸುದ್ದಿಗಳು ಬರುತ್ತವೆ. ಇನ್ನು ನಮ್ಮ ಹಬ್ಬಗಳ ಕುರಿತ ಸಮಾಜ ಶಾಸ್ತ್ರೀಯ ವಿವರಣೆಗಳಂತೂ ಬುದ್ಧಿಜೀವಿಗಳಿಗೇ ಪ್ರೀತಿ. ಮತ್ತಷ್ಟು ಓದು »

20
ಫೆಬ್ರ

ಬೆಲೆಯಿಲ್ಲದ ಬದುಕು..!

– ಗೀತಾ ಹೆಗ್ಡೆ

21happy1ಇದು ಕಾಲನ ನಿಯಂತ್ರಣದಲ್ಲಿ ಕಳೆಯುತ್ತಿರುವ ಕಾಲವೊ ಅಥವಾ ಮನುಜ ತಾನಾಗಿ ತಂದುಕೊಂಡ ಅತಿ ಆಸೆಯ ಫಲವೊ ಯಾವುದು ನನ್ನ ನಿರ್ಧಾರಕ್ಕೆ ಸಿಗುತ್ತಿಲ್ಲ. ಯೋಚಿಸುತ್ತ ಕುಳಿತರೆ ಹಗಲಂತೂ ನಿದ್ದೆ ಬರೋಲ್ಲ ಬಿಡಿ ; ರಾತ್ರಿಯ ನಿದ್ರೆಯನ್ನೂ ಕಸಿದು ಕೊಳ್ಳುವಷ್ಟು ಕ್ರೂರಿ.  ನಿರಾತಂಕವಾದ ಬದುಕು ಕಾಣುವ ಹಂಬಲ ಕೊನೆ ಗಾಲದಲ್ಲಿ ಅದೆಷ್ಟು ಮನೆ ಮಾಡಿತ್ತೊ ಹರೆಯದಲ್ಲಿ ; ಅದೆ ರೀತಿ ಹಿಂದೆ ತಿರುಗಿ ನೋಡಿದಾಗ ಹರೆಯದ ಕನಸೂ ಅಂದುಕೊಂಡಂತೆ ಸಾಕಾರವಾಗದ ನೆನಪು ಬಿಚ್ಚಿಕೊಳ್ಳುವುದು ಇಳಿ ವಯಸ್ಸಿನಲ್ಲಿ.. ಆದರೂ ಬದುಕಿನೊಂದಿಗಿನ ಪ್ರೀತಿ ಸಾಯೋದೆ ಇಲ್ಲ.  ಮತ್ತೆ ವಯಸ್ಸಿಗೆ ತಕ್ಕಂತೆ ಅಥವಾ ಕಾಲಕ್ಕೆ ತಕ್ಕಂತೆ ಮನಸ್ಸು ಬದಲಾಯಿಸಿಕೊಳ್ಳುತ್ತ ತೃಪ್ತಿ ಕಾಣಲು ಹವಣಿಸುತ್ತದೆ ಮನ.  ಗಾದೆ ಇದೆಯಲ್ಲ “ಬಿದ್ದರೂ ಮೂಗು ಮೇಲೆ” ಸಮರ್ಥಿಸಿಕೊಳ್ಳುವುದರಲ್ಲಿ ನಿಸ್ಸೀಮ ಈ ಮನಸ್ಸು. ಆದರೆ ಜೀವನ ಯಾವಾಗ, ಹೇಗೆ, ಯಾವ ರೀತಿ ತಿರುವು ಪಡೆಯುತ್ತದೆ ಅನ್ನುವುದು ಯಾರಿಗೂ ಗೊತ್ತಾಗುವುದೆ ಇಲ್ಲ.  ನಾವಂದು ಕೊಂಡಂತೆ ಯಾವುದೂ ನಡೆಯುವುದಿಲ್ಲ.  ನಮ್ಮೆದುರಿಗೆ ಕಾಣುವುದೆಲ್ಲ ಸತ್ಯ ಅಂತ ನಾವಂದುಕೊಳ್ಳುತ್ತೇವೆ.  ಆದರೆ ಅಲ್ಲಿ ಹಾಗಿರೋದೆ ಇಲ್ಲ.  ಆ ನಿಯಾಮಕ ಇನ್ನೇನೊ ಬರೆದಿರುತ್ತಾನೆ.  ಅದು ಗೊತ್ತಾಗುವುದು ಕಾಲ ಸರಿದಂತೆ ಅದರ ಪ್ರಭಾವ ಅರಿವಾಗುತ್ತ ನಡೆಯುತ್ತದೆ.  ಅದಕ್ಕೆ ಮನುಷ್ಯನಿಗೆ. ಜೀವನದ ಅರಿವಾಗುತ್ತ ನಡೆಯುವುದು ವಯಸ್ಸಾದಂತೆ.  ಹರೆಯದಲ್ಲಿ ಅದೆಷ್ಟು ಬಿಸಿ ರಕ್ತದ ಉಮೇದಿಯಲ್ಲಿ ಉರಿದಿರುತ್ತಾನೊ ವಯಸ್ಸಾದಂತೆ ಅಷ್ಟೆ ಪಾತಾಳದತ್ತ ಅವನ ಮನಸ್ಸು.  ಆಗ ಅವನ ಬಾಯಲ್ಲಿ ವೇದಾಂತ, ಸತ್ಸಂಗ, ಆಶ್ರಮ ಕಾಣುವುದು.  ಮಾತು, ನಡೆ, ನುಡಿ ಎಲ್ಲ ಬದಲಾಗುವುದು. ಮತ್ತಷ್ಟು ಓದು »