“ಪಟ್ಟಭದ್ರಹಿತಾಸಕ್ತಿಗಳ ಕೈಗಳಲ್ಲಿ ಸಿಕ್ಕಿ ಒದ್ದಾಡುತ್ತಿದೆ ಕನ್ನಡ ಚಿತ್ರರಂಗ”
– ಸುರೇಶ್ ಮುಗಬಾಳ್
ಗೆಳೆಯನೊಬ್ಬ ತಮಿಳು ನಟ ವಿಜಯ್ ನಟಿಸಿರುವ ‘ಕತ್ತಿ’ ಸಿನೆಮಾವನ್ನು ವೀಕ್ಷಿಸುವಂತೆ ಹೇಳಿದ, ಆ ಸಿನೆಮಾದಲ್ಲೇನಿದೆ ಅಂತಹ ವಿಶೇಷತೆ? ಎಂದು ಕೇಳಿದಾಗ, ‘ಸಾಮಾಜಿಕ ಕಳಕಳಿಯುಳ್ಳ ಅತ್ಯುತ್ತಮ ನಿನೆಮಾ, ಸಾಧ್ಯವಾದರೆ ವೀಕ್ಷಿಸು’ ಎಂದ, ಸರಿ ನಾನೂ Hotstar ನಲ್ಲಿ ಚಿತ್ರಕ್ಕಾಗಿ ತಡಕಾಡಿದೆ, ಸಿನೆಮಾವೇನೋ ವೀಕ್ಷಿಸಲು ಸಿಕ್ಕಿತು, ಆದರೆ ಚಿತ್ರವನ್ನು ಮಲೆಯಾಳಂ ಭಾಷೆಯಲ್ಲಿ ಡಬ್ಬ್ ಮಾಡಲಾಗಿತ್ತು. ಭಾಷೆ ಬಾರದವನಿಗೆ ತಮಿಳು ಭಾಷೆಯಾದರೇನು? ಮಲೆಯಾಳಂ ಭಾಷೆಯಾದರೇನು? ಅದು ಒತ್ತಟ್ಟಿಗಿರಲಿ, ಭಾಷೆಯ ಗಂಧವೇ ಗೊತ್ತಿರದ ಅರೇಬಿಕ್ ಭಾಷೆಯ ಅಲ್ ಲೈಲ್, ಕೋರಿಯನ್ ಭಾಷೆಯ Miracle in cell No. 7 ಸಿನೆಮಾಗಳನ್ನೂ ವೀಕ್ಷಿಸಿದ್ದೇನೆ, ಈ ಚಿತ್ರಗಳಲ್ಲಿ ನನಗೆ ಅರ್ಥವಾಗುತ್ತಿದ್ದದ್ದು ಕೇವಲ ಮುಖಭಾವ, ಆಂಗಿಕ ಚಲನೆ, ಚಿತ್ರದ ನಿರೂಪಣೆಗಳು ಮಾತ್ರ. ಇವುಗಳ ಸಹಾಯದಿಂದಲೇ ಚಿತ್ರಕಥೆಯನ್ನು ಅರ್ಥಮಾಡಿಕೊಳ್ಳು ಪ್ರಯತ್ನಿಸುತ್ತಿದ್ದೆ. ಒಂದು ವೇಳೆ English ಅಡಿಬರಹಗಳಿಲ್ಲದಿದ್ದರೆ ಸಿನೆಮಾ ಅರ್ಥವೇ ಆಗುತ್ತಿರಲಿಲ್ಲ. Miracle in cell No. 7 ಚಿತ್ರವನ್ನು ಇತ್ತೀಚೆಗೆ ರಮೇಶ್ ಅರವಿಂದ್ ಮುಖ್ಯಭೂಮಿಕೆಯಲ್ಲಿ ಕನ್ನಡಕ್ಕೆ ‘ಪುಷ್ಫಕ ವಿಮಾನ’ ಎಂಬ ಹೆಸರಿನಲ್ಲಿ ರಿಮೇಕ್ ಕೂಡ ಮಾಡಲಾಯಿತು. ನಾಯಕನ ನಟನೆ ಅದ್ಭುತವಾಗಿದ್ದರೂ ಚಿತ್ರವು ನಿರೀಕ್ಷೆಯನ್ನು ಹುಸಿಗೊಳಿಸಿತು. ಕೊರಿಯನ್ ಭಾಷೆಯಲ್ಲಿ ನಿರ್ಮಾಣವಾದ ಚಿತ್ರ ನನ್ನ ಅಂತರಂಗವನ್ನು ಕಲುಕಿದಷ್ಟೂ ಕನ್ನಡದಲ್ಲಿ ರಿಮೇಕ್ ಮಾಡಿದ ಚಿತ್ರ ಅಂತರಂಗಕ್ಕಿಳಿಯಲಿಲ್ಲ. ಪ್ರಾಯಶಃ ಕೊರಿಯನ್ ಭಾಷೆಯ ಚಿತ್ರವನ್ನೇ ಕನ್ನಡದಲ್ಲಿ ಡಬ್ಬಿಂಗ್ ಮಾಡಿದ್ದರೆ ಚಿತ್ರ ಇನ್ನಷ್ಟು ಅರ್ಥಗಳನ್ನು ಮೂಡಿಸುತ್ತಿತ್ತೇನೋ. ಮತ್ತಷ್ಟು ಓದು