ವಿಲಕ್ಷಣ..!
– ಗುರುರಾಜ ಕೊಡ್ಕಣಿ. ಯಲ್ಲಾಪುರ
ಶಮಂತಕ ಏದುಸಿರು ಬಿಡುತ್ತಿದ್ದ. ಅದೆಷ್ಟು ದೂರದಿಂದ ಆ ದಟ್ಟ ಕಾಡಿನಲ್ಲಿ ಓಡುತ್ತ ಸಾಗಿದ್ದನೋ ಅವನಿಗೆ ತಿಳಿಯದು. ಹುಲ್ಲುಗಂಟಿಗಳನ್ನು ದಾಟಿ, ನಡುನಡುವೆ ಮರಗಳನ್ನು ತಪ್ಪಿಸಿ ಜಿಗಿಯುತ್ತ ಮುಂದೆ ಸಣ್ಣದ್ದೊಂದು ದಾರಿಯೂ ಕಾಣದ ಗೊಂಡಾರಣ್ಯ ನಡುವೆ ನಿಂತವನಿಗೆ ತಾಳಲಾಗದ ಬಾಯಾರಿಕೆ. ಸುಮ್ಮನೇ ಉಗುಳು ನುಂಗುತ್ತ ಹಿಂತಿರುಗಿ ನೋಡಿದ. ತನ್ನನ್ನು ಯಾರೋ ಹಿಂಬಾಲಿಸುತ್ತಿದ್ದಾರೆ ಎಂಬ ಅನುಮಾನ ಅವನಿಗೆ. ಆ ಸಣ್ಣದ್ದೊಂದು ಅನುಮಾನವೇ ಅವನನ್ನು ದಿಕ್ಕೆಟ್ಟು ಓಡುವಂತೆ ಮಾಡಿದ್ದು. ಅವನ ಹಿಂದೆ ಯಾರೂ ಇದ್ದಂತೆನಿಸಲಿಲ್ಲ. ಒಂದಷ್ಟು ಜೀರುಂಡೆಗಳ ಜಿರ್ ಗುಟ್ಟುವಿಕೆ, ಅಲ್ಲೊಂದು ಇಲ್ಲೊಂದು ಹಕ್ಕಿಗಳ ಹಾಡು, ದೂರದಲ್ಲೆಲ್ಲೋ ’ಘೂಕ್, ಘೂಕ್’ ಎಂದರಚುವ ಕೋತಿಗಳ ಅರಚಾಟ, ಇಷ್ಟೆಲ್ಲದರ ನಡುವೆ ಕಾಡುತ್ತಿರುವ ಅಗೋಚರ ಭಯ. ಶಮಂತಕನ ಕಾಲುಗಳಲ್ಲಿ ಅಸಾಧ್ಯವಾದ ನೋವು. ಓಡಿದ ಅಪರಿಮಿತ ಓಟದ ಪರಿಣಾಮವೋ ಏನೋ ಮೈಯೆಲ್ಲ ಅಂಟಂಟು ಬೆವರು. ಅಸಲಿಗೆ ತಾನು ಹೀಗೆ ಹುಚ್ಚನಂತೆ ಓಡುತ್ತಿದ್ದುದೇಕೆ ಎನ್ನುವುದು ಅವನಿಗೆ ನೆನಪಾಗದು. ಮತ್ತಷ್ಟು ಓದು