ಮರಳುಗಾಡಿನಲ್ಲಿ ಹಸಿರನ್ನೊತ್ತಿಸಿದ ದೇಶವೊಂದು ನಡೆದ ಹಾದಿಯಲ್ಲಿ…
– ಸುಜಿತ್ ಕುಮಾರ್
ಅರಬ್ಬರ ಹಾಗು ಜ್ಯೂವರ (ಯಹೂದಿ) ಕಿತ್ತಾಟವನ್ನು ನೋಡಲಾರದೆ ವಿಶ್ವಸಂಸ್ಥೆ ಅಂದು ಯಹೂದಿಗಳಿಗೊಂದಷ್ಟು ಹಾಗು ಅರಬ್ಬರಿಗೊಂದಿಷ್ಟು ನೆಲವನ್ನು ಪಾಲುಮಾಡಿ ಕೊಟ್ಟಿತ್ತು. ಇಬ್ಬರ ಕಿತ್ತಾಟದ ನಡುವೆ ಮೂರನೆಯವರ ಉಸಾಬರಿಯನ್ನು ಒಪ್ಪದ ಅರಬ್ ಪಡೆ (ಈಜಿಪ್ಟ್, ಸಿರಿಯಾ, ಜೋರ್ಡನ್, ಲೆಬನಾನ್) ತಮ್ಮ ಪಾಲು ಸಣ್ಣದೆಂದು ಕೊರಗಿ ವಿಶ್ವಸಂಸ್ಥೆ ಗೊತ್ತುಮಾಡಿದ್ದ ಯಹೂದಿಯರ ಅಷ್ಟೂ ನೆಲವನ್ನು ನುಂಗಿ ಹಾಕಲು ರಣತಂತ್ರವೊಂದನ್ನು ರೂಪಿಸಿದವು. ಜಾಗತಿಕ ಮಟ್ಟದಲ್ಲಿ ತನ್ನ ಪಿಳಿ ಪಿಳಿ ಕಣ್ಣುಗಳನ್ನು ಬಿಡುತ್ತಿರುವಷ್ಟರಲ್ಲೇ ವೈರಿ ಸೇನೆ ಯಹೂದಿಯರ ಪ್ರದೇಶವನ್ನು ಮೂರು ದಿಕ್ಕಿನಿಂದಲೂ ಆವರಿಸಿತು. ಮಾಡು ಇಲ್ಲವೇ ಮಡಿ ಸ್ಥಿತಿಯಲ್ಲಿ ತನ್ನೆಲ್ಲಾ ಶಕ್ತಿಯನ್ನು ಬಸಿದು ಹೋರಾಡಿದ ಪಡೆ, ವೈರಿಸೇನೆ ಕನಸ್ಸಿನಲ್ಲಿಯೂ ಊಹಿಸಲಾಗದ ಮಟ್ಟಿಗೆ ಸದೆಬಡಿಯಿತು. ಯುದ್ಧದಲ್ಲಿ ಸೋತು ಓಡತೊಡಗಿದ್ದ ವೈರಿಪಡೆಯ ಒಂದೊಂದೇ ಪ್ರದೇಶಗಳನ್ನು ‘ಗೆದ್ದ’ ಯಹೂದಿಯರು 1948 ರಲ್ಲಿ ಹೊಸ ದೇಶವೊಂದನ್ನು ಹುಟ್ಟುಹಾಕಿ ಪ್ರಪಂಚಕ್ಕೆ ಪರಿಚಯ ಮಾಡಿಕೊಟ್ಟರು. ಇಂದು ಯುದ್ಧ ಸಾಮಗ್ರಿಗಳ ತಯಾರಿ ಹಾಗು ಅವುಗಳ ರಪ್ತಿನಲ್ಲಿ ವಿಶ್ವದಲ್ಲೇ ಮುಂಚೂಣಿಯಲ್ಲಿರುವ, ಹಾಗು ಅಭಿವೃದ್ದಿ ಹೊಂದಿರುವ ದೇಶಗಳ ಪಟ್ಟಿಯಲ್ಲಿ ಝಳಪಿಸುವ ಆ ದೇಶದ ಹೆಸರೇ ಇಸ್ರೇಲ್. ಮತ್ತಷ್ಟು ಓದು