ವಿಷಯದ ವಿವರಗಳಿಗೆ ದಾಟಿರಿ

Archive for

16
ಆಗಸ್ಟ್

ಡೊಕ್ಲಮ್ ಸದ್ದು, ಚೀನಾ ದರ್ದು: ಭಾರತ-ಚೀನ ಪ್ರಚಲಿತ ಕಥನ

– ಶ್ರೇಯಾಂಕ ಎಸ್ ರಾನಡೆ

ಡೊಕ್ಲಮ್ ಒಳಗಿರ್ದುಂ ಬೆವರ್ದನಾ ಡ್ರ್ಯಾಗನ್ ಪತಾಕಂ

ನಾವು ನಮ್ಮ ಸ್ನೇಹಿತರನ್ನು ಆಯ್ಕೆಗೆ ತಕ್ಕಂತೆ ಬದಲಾಯಿಸಬಹುದು ಆದರೆ ಭೌಗೋಳಿಕವಾಗಿ ಬೆಸೆದುಕೊಂಡಿರುವ ನೆರೆಹೊರೆಯ ದೇಶ-ಪ್ರದೇಶಗಳನ್ನಲ್ಲ. “ನಾ ಕೊಡೆ ಎನ್ನುವ ಭಾರತ, ತಾ ಬಿಡೆ ಎನ್ನುವ ಚೀನಾ ಹಠ. ಮಧ್ಯದಲ್ಲಿ ಬಿಕ್ಕಟ್ಟಿಗೆ ಸಿಲುಕಿರುವ ಡೊಕ್ಲಮ್ ಪ್ರದೇಶದ ವಾರಸುದಾರ ಭೂತಾನ್”. 1962ರ ಪರಿಸ್ಥಿತಿ ಈಗಿಲ್ಲ. ಎರಡೂ ಪರಮಾಣುಶಕ್ತಿಯ ಶಕ್ತಿಶಾಲಿ ದೇಶಗಳು. ಅದೇ ಹೊತ್ತಿಗೆ ಇಬ್ಬರೂ ನ್ಯೂಕ್ಲಿಯರ್ ಶಸ್ತ್ರಗಳ “ಮೊದಲ ಬಳಕೆ ಇಲ್ಲ”(ನೋ ಫಸ್ಟ್ ಯೂಸ್) ಎಂಬ ತತ್ವ ಪಾಲಿಸುವ ಜವಾಬ್ದಾರಿ ಹೊತ್ತಿವೆ. ಅಂದಿಗೆ “ಹುಲ್ಲುಕಡ್ಡಿಯೂ ಬೆಳೆಯದ ಬರಡು ಭೂಮಿ”(1962, ಅಂದಿನ ಪ್ರಧಾನ ಮಂತ್ರಿ, ನೆಹರೂ ಜವಾಹರ್ ಲಾಲ್ ಮಾತುಗಳು, ಚೀನಾದ ಅತಿಕ್ರಮಣ ಪ್ರವೇಶಕ್ಕೆ ಸಂಬಂಧಿಸಿದಂತೆ ಲೋಕಸಭೆಯಲ್ಲಿ ನಡೆದ ಚರ್ಚೆಯಲ್ಲಿನ ಹೇಳಿಕೆ) ಎಂದು ನಿರ್ಲಕ್ಷಿಸಲಾಗಿದ್ದ, ಆದರೆ ಇಂದಿಗೆ ಚೀನಾದ ಸಾರ್ವಭೌಮತೆಯ ಪ್ರತಿಷ್ಟೆ ಹಾಗೂ ಭಾರತದ ಆಂತರಿಕ ಭದ್ರತೆಯ ಅನಿವಾರ್ಯತೆಯ ದೃಷ್ಟಿಯಿಂದ ಅಸ್ಪಷ್ಟ ಗಡಿಯಲ್ಲಿನ ಆಯಕಟ್ಟಿನ ಪ್ರದೇಶಗಳು ಈವರೆಗಿನ ಭಾರತ-ಚೀನಾ ಗಡಿ ವಿವಾದದ ಜ್ವಲಂತತೆಗೆ ಮೂಲ. ಅದೀಗ “ಡೊಕ್ಲಮ್” ಕಾರಣದಿಂದ ಮತ್ತೆ ಮುನ್ನೆಲೆಗೆ ಬಂದಿದೆ. ಬೂದಿಮುಚ್ಚಿದ ಕೆಂಡದಂತಿರುವ ಈ ಸರ್ವಋತು ಸಮಸ್ಯೆ 52 ದಿನಗಳ ಬಿಗಿ ಸಂಘರ್ಷಾತ್ಮಕ ವಾತಾವರಣದಿಂದ ಬದಲಾವಣೆಯ ಮುಂದಿನ ದಾರಿಕಾಣದೆ ವಿಚಲಿತವಾಗಿದೆ. ಮತ್ತಷ್ಟು ಓದು »