ಭಾರತದ ಮುಂದಿರುವ ಡೊಕ್ಲಮ್ ಸವಾಲು…
– ಶ್ರೇಯಾಂಕ ಎಸ್ ರಾನಡೆ
ಡೊಕ್ಲಮ್, ಭಾರತ-ಭೂತಾನ್-ಚೀನಾ ಮೂರು ದೇಶಗಳ ನಡುವಿನ ಬಹು ಆಯಕಟ್ಟಿನ 89 ಚದರ ಕಿಲೋಮೀಟರ್‍ಗಳ ವ್ಯಾಪ್ತಿಯಲ್ಲಿರುವ ಸಂಕೀರ್ಣ ಪ್ರದೇಶ. ಇದು ಭೂತಾನ್‍ನ ಪಶ್ಚಿಮ ಗಡಿ ಭಾಗದಲ್ಲಿದೆ. ಅಂದರೆ ಟಿಬೆಟ್‍ನ ಆಗ್ನೇಯ ದಿಕ್ಕಿನಲ್ಲಿದೆ. ಮುಖ್ಯವಾಗಿ ಇದು ಭಾರತಕ್ಕೆ ಮುಖ್ಯವಾಗಿರುವ ಚುಂಬಿ ಕಣಿವೆಯ ಸಂಯೋಗ ಸ್ಥಾನದಲ್ಲಿದೆ. ಅದು ಅಧಿಕೃತವಾಗಿ ಭೂತಾನ್‍ನ ಭೂಭಾಗ. ಅನೇಕ ಕಾರಣಗಳಿಂದ ಮೂರು ದೇಶಗಳಿಗೂ ಬಹುಮುಖ್ಯ ಭೂಪ್ರದೇಶ. ಈ ಪ್ರದೇಶದ ಮೇಲೆ ಹಿಡಿತ ಸಾಧಿಸುವುದೆಂದರೆ ಸಿಕ್ಕಿಂನ ಬಹು ಮೌಲ್ಯಯುತ ಚುಂಬಿ ಕಣಿವೆ, ಭೂತಾನ್ ಹಾಗೂ ಇನ್ನೂ ಮುಖ್ಯವಾಗಿ ಸಿಲಿಗುರಿ ಕಾರಿಡಾರ್ ಮುಖೇನ ಈಶಾನ್ಯ ಭಾರತದ ಎಲ್ಲಾ ಚಟುವಟಿಕೆಗಳ ಪ್ರತ್ಯಕ್ಷ ನಿಗಾ ಹಾಗೂ ಪರೋಕ್ಷವಾಗಿ ತಮ್ಮ ಹಿತಾಸಕ್ತಿಗಳಿಂದ ಪ್ರಾದೇಶಿಕ ಪ್ರಾಬಲ್ಯ ಪಡೆದಂತಾಗುತ್ತದೆ. ಹಾಗಾಗಿಯೇ ಇದು ಕೇವಲ ಮೇವು ಬೆಳೆಯುವ ಖಾಲಿ ಗುಡ್ಡದ ನಿಸ್ತೇಜ ಜಾಗವಲ್ಲ. ಮೂರು ದೇಶಗಳ ಮೇಲೆ ಪ್ರಾಬಲ್ಯ ಸಾಧಿಸಬಲ್ಲ ಶಕ್ತಿಯುಳ್ಳ ಆರ್ಥಿಕ, ರಾಜಕೀಯ, ರಾಜತಾಂತ್ರಿಕ ಮತ್ತು ಮಿಲಿಟರಿ ಕಾರಣಗಳಿಂದ ಶಕ್ತಿಸಂಪನ್ನವಾಗಿರುವ ಸುರಕ್ಷಿತ, ಅನುಕೂಲಕರ ತಾಣ. ಈ ಮೂಲಭೂತ ಉದ್ದೇಶದಿಂದ ಇದರ ಮೇಲೆ ಚೀನಾ ಹಾಗೂ ಭಾರತ ಅಪಾರ ಆಸಕ್ತಿ ವಹಿಸಿವೆ. ಮತ್ತಷ್ಟು ಓದು