ವಿಷಯದ ವಿವರಗಳಿಗೆ ದಾಟಿರಿ

Archive for

27
ಆಗಸ್ಟ್

ನಮ್ಮೂರ ಹಬ್ಬ : ಚೌತ

– ಸುಜೀತ್ ಕುಮಾರ್

ಸಾಂದರ್ಭಿಕ ಚಿತ್ರ

ನಮ್ಮೂರ ಹಬ್ಬ ಪ್ರಬಂಧ ಸ್ಪರ್ಧೆಯಲ್ಲಿ ಐದನೇ ಸ್ಥಾನ ಪಡೆದ ಲೇಖನ

ಕಾಲ ವಸಂತವನ್ನು ಕಳೆದು ಉರಿ ಬೇಸಿಗೆಗೆ ಒಗ್ಗತೊಡಗಿತ್ತು. ರೆನೊಲ್ಡ್ಸ್ ಹಾಗು ‘ಟಿಕ್- ಟಿಕ್’ ಪೆನ್ನುಗಳೊಟ್ಟಿಗೆ ಗಾಜಿನ ದೇಹದಂತಹ ಪ್ಲಾಸ್ಟಿಕ್ನ ಪೆನ್ನುಗಳೂ ಮಕ್ಕಳ ಕೈಸೇರತೊಡಗಿದ್ದವು. ಟಿ.ವಿ.ಎಸ್ ಹಾಗು ಬಜಾಜ್ ಬೈಕುಗಳೊಟ್ಟಿಗೆ ಓತಿಕ್ಯಾತದ ಮುಖಕ್ಕೆ ಹೋಲುವ ಹೆಡ್ಲೈಟ್ ನ  ನವ ಮಾದರಿಯ ಬೈಕುಗಳು ರಸ್ತೆಯ ಮೇಲೆ ಕಾಣತೊಡಗಿದ್ದವು, ಫೋನೆಂದರೆ ರಸ್ತೆ ಬದಿಯ ಬೋರವೆಲ್ ನ ಕುತ್ತಿಗೆಯನ್ನು ಸಾಧ್ಯವಾದಷ್ಟು ಮೇಲಕ್ಕೆಳೆದು ನಿಲ್ಲಿಸಿರಿವ ಕಂಬಗಳು ಹಾಗು ಅವುಗಳ ಬುಡದಲ್ಲಿ ಶಾವಿಗೆ ಪಾಯಸದ ಶಾವಿಗೆಗಳಂತೆ ನುಲಿದುಕೊಂಡಿರುವ ರಾಶಿ ರಾಶಿ ವೈರುಗಳು ಎಂದರಿತ್ತದ್ದ ಎಷ್ಟೋ ಜನರಿಗೆ ಇವುಗಳ್ಯಾವುದರ  ಕಿರಿ- ಕಿರಿ ಇಲ್ಲದೆ ಜೇಬಿನ ಒಳಗೆ ಎಲ್ಲೆಂದರಲ್ಲಿಗೆ ಕೊಡೊಯ್ಯಬಲ್ಲ ಫೋನುಗಳು ಬರುತ್ತಿದೆ ಎಂದು ಕೇಳಿ ಆಶ್ಚರ್ಯ ಚಕಿತವಾಗುತ್ತಿದ್ದ ಕಾಲವದು.. ಅಲ್ಲದೆ ಪ್ರಪಂಚದ ಯಾವುದೇ ಸಮಸ್ಯೆಗಳಿಗೂ ಒಂದಿಲ್ಲೊಂದು ಉತ್ತರವನ್ನು ಕೊಡಬಲ್ಲ ‘ಗೂಗಲ್’ ಎಂಬೊಂದು ಯಂತ್ರವಿದೆ ಎಂದರೆ ಕೇಳಿದವರು ಗಹಗಹನೇ ನಕ್ಕಿ ಸುಮ್ಮನಾಗಿಬಿಡುತ್ತಿದ್ದರು. ಒಟ್ಟಿನಲ್ಲಿ ಕಾಲ ವಸಂತವನ್ನು ಕಳೆದು ಉರಿ ಬೇಸಿಗೆಗೆ ಒಗ್ಗತೊಡಗಿತ್ತು. ಮತ್ತಷ್ಟು ಓದು »

27
ಆಗಸ್ಟ್

ನಮ್ಮೂರ ಹಬ್ಬ : ಪರಿಸರಸ್ನೇಹಿ ದೊಡ್ಡಹಬ್ಬ

– ಮಾಲತಿ ಹೆಗಡೆ

ನಮ್ಮೂರ ಹಬ್ಬ ಪ್ರಬಂಧ ಸ್ಪರ್ಧೆಯಲ್ಲಿ ಏಳನೇ ಸ್ಥಾನ ಪಡೆದ ಲೇಖನ

ಬಾಲ್ಯದಲ್ಲಿ ಕಂಡ ಮಲೆನಾಡಿನ ಪರಿಸರದ ಸ್ನೇಹಿಯಾದ ದೀಪಾವಳಿ ಮನದಲ್ಲಿ ನಂದಾದೀಪದಂತೆ ಬೆಳಗುತ್ತಲೇ ಇರುತ್ತದೆ. ಅಲ್ಲಿ ದೀಪಾವಳಿಗೆ ದೊಡ್ಡಹಬ್ಬ ಎಂದು ಕರೆಯುವ ವಾಡಿಕೆ. ಮಳೆಗಾಲದ ಆರಂಭದಲ್ಲಿ ಗೊಂಡೆರು ಹೂವಿನ (ಚೆಂಡು ಹೂವಿನ) ಬೀಜ ಹಾಕಿದರೆ ದೀಪಾವಳಿಯಲ್ಲಿ ಹೂವು ಸಿಗುತ್ತದೆ ಎಂಬ ಕರಾರುವಾಕ್ಕಾದ ಲೆಕ್ಕಾಚಾರದಲ್ಲಿ ಹಬ್ಬದ ತಯಾರಿ ಶುರುವಾಗುತ್ತಿತ್ತು. ಹಬ್ಬಕ್ಕೆ ವಾರದ ಮೊದಲು ಮನೆಯ ಹೊರ ಗೋಡೆಗೆ ಹಳದಿ ಮಣ್ಣು, ಅಡುಗೆ ಮನೆಗೆ ಕೆಮ್ಮಣ್ಣು, ಕಟ್ಟಿಗೆ ಒಲೆ ಇರುವೆಡೆಗೆ ಕಪ್ಪು ಮಸಿಯನ್ನೆ ಸಾರಣೆ ಮಾಡುತ್ತಿದ್ದೆವು. ಅಣಲೆಕಾಯಿ ಮಸಿ, ಕೆಮ್ಮಣ್ಣು, ಹಳದಿ ಮಣ್ಣು ಎಲ್ಲಾ ನೀರಿನಲ್ಲಿ ಕದಡಿ ಹತ್ತಿಯ ಬಟ್ಟೆ ಮುಳುಗಿಸಿ ಮಣ್ಣಿನ ಗೋಡೆಗೆ ಬರೆಸುತ್ತಾ ಹೋಗುವ ಸಂಭ್ರಮದಲ್ಲಿ ಹಿರಿಯರೊಂದಿಗೆ ನಾವೂ ಭಾಗಿಗಳು. ಮತ್ತಷ್ಟು ಓದು »