ವಿಷಯದ ವಿವರಗಳಿಗೆ ದಾಟಿರಿ

Archive for

30
ಆಗಸ್ಟ್

ನಮ್ಮೂರ ಹಬ್ಬ : ನಮ್ಮೂರ ಜಾತ್ರೆ

– ಆದರ್ಶ

ಸಾಗರ ಮಾರಿಕಾಂಬ ದೇವಸ್ಥಾನ

ನಮ್ಮೂರ ಹಬ್ಬ ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ಲೇಖನ

ಜಾತ್ರೆಯೆಂದರೆ ಸಾಕು.. ಥಟ್ಟನೆ ಮನಸ್ಸು ಬಾಲ್ಯಕ್ಕೋಡುತ್ತದೆ!

ಅಪ್ಪನ ಬೆನ್ನುಹತ್ತಿ ಹೆಗಲ ಮೇಲೆ ಕೂತು ಪುಟ್ಟ ಕಣ್ಣುಗಳನ್ನ ಇಷ್ಟಗಲ ಅರಳಿಸಿ ನೋಡಿದ್ದ ಇಡೀ ಜಾತ್ರೆಯ ಪನೋರಮಿಕ್ ನೋಟ ಮತ್ತೆ ಅಷ್ಟೇ ರಂಗು ರಂಗಾಗಿ ತೆರೆದುಕೊಳ್ಳುತ್ತದೆ..

ಶಿವಮೊಗ್ಗದಿಂದ ಸಾಗರ, ಹೊಸನಗರ, ಶಿಕಾರಿಪುರಗಳಿಗೆ ಹೋಗುವ ಮಾರ್ಗದಲ್ಲಿ ಮಲೆನಾಡಿನ ಪ್ರವೇಶ ದ್ವಾರದಂತಿರುವ ನಮ್ಮೂರು “ಆನಂದಪುರ”ದ ಕಡ್ಲೆಹಕ್ಲು ಮಾರಿಕಾಂಬಾ ಜಾತ್ರೆಯೆಂದರೆ ನಮ್ಮ ಮಟ್ಟಿಗೆ ಅದು ಬಹುದೊಡ್ಡ ಹಬ್ಬ! ಶಿರಸಿ ಮಾರಿಕಾಂಬಾ, ಸಾಗರದ ಮಾರಿಕಾಂಬಾ, ಆನಂದಪುರದ ಕಡ್ಲೆಹಕ್ಲು ಮಾರಿಕಾಂಬಾ ಈ ಮೂವರೂ ಅಕ್ಕ ತಂಗಿಯರೆಂಬ ಪ್ರತೀತಿಯಿದೆ. ಹಾಗಾಗಿ 3 ವರ್ಷಕ್ಕೊಮ್ಮೆ ಮೊದಲಿಗೆ ಶಿರಸಿಯ ಹಿರಿಯಕ್ಕನ ಜಾತ್ರೆ, ನಂತರ ಸಾಗರದ ಜಾತ್ರೆ, ಕೊನೆಯಲ್ಲಿ ನಮ್ಮೂರ ಜಾತ್ರೆ ನಡೆಯುತ್ತದೆ. ನಮ್ಮ ಸಂಸ್ಕೃತಿಯಲ್ಲಿ ದೈವವನ್ನೂ ಮರ್ತ್ಯ ಸಂಬಂಧಗಳಲ್ಲಿ(ಅಕ್ಕ-ತಂಗಿ) ಬೆಸೆದು ವಾತ್ಸಲ್ಯದಿಂದ ಕಾಣುವುದು ಸೋಜಿಗವಲ್ಲದೇ ಮತ್ತೇನು?! ಮತ್ತಷ್ಟು ಓದು »

30
ಆಗಸ್ಟ್

ಹಿಂದೂ ಮುಸ್ಲಿಂ ಸಮ್ಮಿಲನಕ್ಕೆ ಸೆಕ್ಯಲರಿಸಮ್ಮೇ ಬೇಕೆ? ಅಲಾದಿ ಹಬ್ಬ ಸಾಕೆ?

-ವೀಣಾ. ಈ
(ರಾಜ್ಯಶಾಸ್ತ್ರ ವಿಭಾಗ, ಕುವೆಂಪು ವಿಶ್ವವಿದ್ಯಾನಿಲಯ, ಶಂಕರಘಟ್ಟ.)

ನಮ್ಮೂರ ಹಬ್ಬ ಪ್ರಬಂಧ ಸ್ಪರ್ಧೆಯಲ್ಲಿ ಎರಡನೆಯ ಸ್ಥಾನ ಪಡೆದ ಲೇಖನ..

ಪ್ರಸ್ತುತ ಐಡಿಯಾಲಜಿಗಳ ಯುಗದಲ್ಲಿ ಹಿಂದೂ ಮುಸಲ್ಮಾನ ಎನ್ನುವುದು ಎರಡು ವೈರಿ ಗುಂಪುಗಳೆಂದು ಪರಿಗಣಿಸಲ್ಪಡುತ್ತಿವೆ. ಕೆಲವು ಚಿಂತಕರು ಮತ್ತು ಹಾಗೆನ್ನಿಸಿಕೊಳ್ಳಲು ಹಾತೊರೆಯುವವರು ಎಲ್ಲಾ ಘಟನೆಗಳಲ್ಲೂ ಈ ವೈರತ್ವವನ್ನೇ ಕಾಣುತ್ತಿರುತ್ತಾರೆ. ಹೀಗಿರುವಾಗ ಹಬ್ಬಗಳು, ಆಚರಣೆಗಳು ಅವರಿಗೆ ಒದಗಿದ ಸದಾವಕಾಶಗಳಂತೆ ಭಾವಿಸುತ್ತಾರೆ. ಗಣೇಶ ಹಬ್ಬ ಎಂದರೆ ಗಣೇಶನ ಆಗಮನದಿಂದ ವಿಸರ್ಜನೆಯವರೆಗೆ ಆರಕ್ಷಕರ ಕಾವಲಿನೊಂದಿಗೇ ನಡೆಯುವ ಸ್ಥಿತಿ ಬಂದೊದಗಿದೆ. ಉದ್ದೇಶಪೂರ್ವಕವಾಗಿಯೇ ಮುಸ್ಲಿಂ ಕೇರಿಗಳಲ್ಲಿ ಗಣೇಶನ ಮೆರವಣಿಗೆ ಮಾಡುವುದು, ಮಸೀದಿಗಳ ಮುಂದೆ ಪಟಾಕಿ ಸಿಡಿಸುವುದು ಮಾಡಿದರೆ, ಮುಸ್ಲೀಮರು ಇದಕ್ಕೆ ಹೊರತಾಗಿಲ್ಲದಂತೆ ಇದ್‍ಮೀಲಾದ್‍ನಂತಹ ಹಬ್ಬದ ಮೆರವಣಿಗೆಯಲ್ಲಿ ಇವೇ ಪ್ರವೃತ್ತಿಗಳು ಪುನಾರವರ್ತನೆಯಾಗುತ್ತವೆ. ಇದರಿಂದ ಹಬ್ಬಗಳೆಂದರೆ ಭಯದ ವಾತಾವರಣ ಸೃಷ್ಟಿಯಾಗುವ ಕಾಲ ಅಲ್ಲಲ್ಲಿ ಕಂಡುಬರುತ್ತಿದೆ. ಇದು ಹೀಗೆ ಮುಂದುವರೆದರೆ ಹಬ್ಬಗಳೆಂದರೆ ಗಲಾಟೆಯುಂಟು ಮಾಡುವ ಸಂಗತಿಗಳೆಂದು ಕಾನೂನು ಮೂಲಕವೇ ಅವುಗಳನ್ನು ನಿಷೇಧ ಮಾಡುವ ಸಂದರ್ಭ ಬಂದರೂ ಬರಬಹುದು. ಆದರೆ ಹಬ್ಬಗಳು ಈ ಕೆಲಸವನ್ನು ಮಾಡುತ್ತವೆಯೇ? ಅವುಗಳ ಸ್ವರೂಪವೇನು? ಮತ್ತಷ್ಟು ಓದು »

30
ಆಗಸ್ಟ್

ನಮ್ಮೂರ ಹಬ್ಬ : ಶ್ರೀ ಸಿದ್ದಿ ವಿನಾಯಕನ ಜಾತ್ರೆ

– ಮನುಶ್ರೀ ಕೆ.ಎಸ್

ನಮ್ಮೂರ ಹಬ್ಬ ಪ್ರಬಂಧ ಸ್ಪರ್ಧೆಯಲ್ಲಿ ಮೂರನೇ ಸ್ಥಾನ ಪಡೆದ ಲೇಖನ

ಸಾಂದರ್ಭಿಕ ಚಿತ್ರ

‘ಊರು’ ಅಂದರೆ ನಮಗೆಲ್ಲರಿಗೂ ಮನೆಯ ನಂತರ ಮನಸಿಗೆ ಹತ್ತಿರವಾಗುವ ಮತ್ತೊಂದು ಅಚ್ಚು ಮೆಚ್ಚಿನ ಜಾಗ. ಇಲ್ಲಿಯೂ ಕೂಡ ನಮ್ಮ ಮನೆಯ ಹಾಗೆಯೇ ಒಂದು ದೊಡ್ಡ ಸಂಸಾರವಿದೆ. ಅದರಲ್ಲಿ ಸುಖ ದುಃಖಗಳ ಕಥೆಯಿದೆ, ನೆಮ್ಮದಿಯ ಆಚರಣೆಯಿದೆ, ನಂಬುವ ಸಂಪ್ರದಾಯವಿದೆ, ದುಡಿಯುವ ಕಸುಬಿದೆ, ಕಣ್ಣೀರಿಡಿಸುವ ಪ್ರೀತಿಯಿದೆ, ಕಂಡರಾಗದ ದ್ವೇಷವಿದೆ, ದೆವ್ವದ ಭಯವಿದೆ, ದೈವದ ಭಕ್ತಿಯಿದೆ ಎಲ್ಲಾ ಕೂಡಿ ಕೊಂಡಿರುವ ಒಂದು ಹಳೇ ಆಲದ ಮರದ ಹಾಗೆ. ಮತ್ತಷ್ಟು ಓದು »