ಕಾರಂತ ಸಾಹಿತ್ಯ: ಪರಿಸರ ವಿನಾಶ ಮತ್ತು ವಲಸೆ ರಾಜಕಾರಣ (ಭಾಗ-೩)
– ದೇವು ಹನೆಹಳ್ಳಿ
ಬಂಡಿಮಠ, ಹನೆಹಳ್ಳಿ ಗ್ರಾಮ,
ಬಾರಕೂರು, ಉಡುಪಿ ತಾಲೂಕು-ಜಿಲ್ಲೆ.
ಪರಿಸರ ವಿನಾಶ ಮತ್ತು ವಲಸೆ ರಾಜಕಾರಣ (ಭಾಗ-೧)
ಪರಿಸರ ವಿನಾಶ ಮತ್ತು ವಲಸೆ ರಾಜಕಾರಣ (ಭಾಗ-೨)
ಸ್ವಾತಂತ್ರ್ಯಾ ನಂತರದ ಭಾರತದಲ್ಲಿ ಇಬ್ಬರು, ಅಪ್ಪಳಸ್ವಾಮಿ ಮತ್ತು ಆರೋಕ್ಯಸ್ವಾಮಿ ಎಂಬ ಅಧಿಕಾರಿಗಳ ಹುನ್ನಾರದಲ್ಲಿ ಸಹ್ಯಾದ್ರಿಯ ಮಲೆ, ಇಳಿಜಾರು ಮತ್ತು ತಪ್ಪಲಿನ ಅರಣ್ಯವೆಲ್ಲ ಕೇರಳೀಯರ ವಶವಾದ ಪ್ರಸ್ತಾಪದೊಂದಿಗೆ ನಿರೂಪಣೆ ಮುಖ್ಯ ಮಜಲನ್ನು ತಲುಪುತ್ತದೆ. ಇದಕ್ಕೆ ಎರಡು ಮುಖ. ಒಂದು, ಅರಣ್ಯ ನಾಶ ಇನ್ನೊಂದು, ಸ್ಥಳೀಯರಿಗಾಗುವ ವಂಚನೆ. ಈ ಹಿಂದೆ ಹೇಳಿದ ಸೌಂದರ್ಯ, ಪರಿಪೂರ್ಣತೆ, ಪಂಥಾಹ್ವಾನ ಈ ಯಾವ ಸೆಲೆ, ಸೆಳೆತವೂ ಇಲ್ಲದ, ಲಾಭಕೋರತನವೊಂದೇ ಮಾರ್ಗದರ್ಶಿಯಾಗಿರುವ ರೂಕ್ಷ ಪ್ರಪಂಚದ ಒಂದು ಬೀಭತ್ಸ ಚಿತ್ರಣವನ್ನು ಈ ಕಾದಂಬರಿಯಲ್ಲಿ ಕಾಣುತ್ತೇವೆ. ಕಾರಂತರು ಬಳಸುವ ಅವರ ಇಷ್ಟದ ಪದ `ಚೆಲುವು’ ಒಮ್ಮೆಯೂ ಈ ಕಾದಂಬರಿಯಲ್ಲಿ ಬಂದಿಲ್ಲ. ಪರಿಸರ ನಾಶದ ಜತೆಗೆ ಹೊರಗಿನ ಜನರ ಅವ್ಯಾಹತ ನುಸುಳುವಿಕೆಯಿಂದ ಜನಸಂಖ್ಯಾನುಪಾತ demography, ಏರುಪೇರಾಗಿ ಸಾಂಸ್ಕೃತಿಕ ಅವನತಿಯನ್ನೂ ಕಾಣುತ್ತೇವೆ. ನಿಸರ್ಗವೆಂದರೆ ವಿಶ್ವಾತ್ಮಕ ವ್ಯಕ್ತಿತ್ವವೆಂಬ ಭಾವ ಅಳಿದು ಅದು ಕೇವಲ ಒಂದು ಕಚ್ಚಾವಸ್ತುಗಳ ಮಂಡಿ ಎಂದಾಯಿತು. ಮತ್ತಷ್ಟು ಓದು