ವಿಷಯದ ವಿವರಗಳಿಗೆ ದಾಟಿರಿ

Archive for

6
ಡಿಸೆ

ಕೋಟಿ ಜನರ ಕಷ್ಟದಲ್ಲಿ ಕೋಟಿ-ಕೋಟಿಯನ್ನೆಣಿಸುವ ಮುನ್ನ..!!

– ಸುಜಿತ್ ಕುಮಾರ್

ಕೆಳಗಿನ ಕೆಲ ಪ್ರಶ್ನೆಗಳಿಗೆ ಸಾದ್ಯವಾದರೆ ನಿಮ್ಮ ಎದೆಯ ಮೇಲೆ ಕೈಯಿರಿಸಿ ಉತ್ತರಿಸಿ. ಕಳೆದ ತಿಂಗಳು ರಾಜ್ಯದಾದ್ಯಂತ ನಡೆದ ವೈದ್ಯರ ಮುಷ್ಕರವನ್ನು ನಿಜವಾಗಿಯೂ ನೀವು ಬೆಂಬಲಿಸುತ್ತೀರಾ? ಇಂದು ಕೆಲಸ ಮಾಡಿದರಷ್ಟೇ ನಾಳಿನ ಕೂಳನ್ನು ಕಾಣುವ ಕೋಟ್ಯಂತರ  ಹೊಟ್ಟೆಗಳ ಮೇಲೆ ಲಕ್ಷ ಲಕ್ಷ ಹೊರೆಯನ್ನೊರಿಸುವ ಖಾಸಗಿ ಆಸ್ಪತ್ರೆಗಳ ದಬ್ಬಾಳಿಕೆಗೆ ಕಾನೂನಿನ ಚೌಕಟ್ಟಿನಲ್ಲಿ ಕಡಿವಾಣ ಹಾಕುವ ಒಂತಿನಿತು ಕಾನೂನು ನಿಮಗೆ ಬೇಡವೆನಿಸುವುದೇ? ವೈದ್ಯ ಹೇಳಿದ್ದೆ ರೋಗ, ನೀಡಿದ್ದೆ ಮದ್ದು ಎಂಬಂತಾಗಿರುವ ಸಂದರ್ಭದಲ್ಲಿ, ರೋಗಿಗಳ/ಜನತೆಯ ಹಿತದೃಷ್ಟಿಯಿಂದ ತರಲೆತ್ನಿಸುತ್ತಿರುವ ಕಾಯಿದೆಯ ನಿಜವಾದ ಉದ್ದೇಶ ನಿಮಗೆ ತಿಳಿದಿದೆಯೇ? ನಿಮ್ಮ ಹತ್ತಿರದವರೇ ಒಬ್ಬರು ತಕ್ಷಣಕ್ಕೆ ಯಾವುದಾದರೊಂದು ಪ್ರೈವೇಟ್ ಆಸ್ಪ್ರತ್ರೆಗೆ ಸೇರಿ ನಂತರ ಹಣ ಸಾಲುತ್ತಿಲ್ಲವೆನ್ನುತ್ತ ಜಿಲ್ಲೆಯ ಅಥವಾ ತಾಲೂಕಿನ ಸರ್ಕಾರಿ ಆಸ್ಪತ್ರೆಗೆ ಬಂದು ಪಡುವ ವಿಪರ್ಯಾಸವನ್ನು ಕಣ್ಣು ಮುಚ್ಚಿಕೊಂಡು ನೀವು ಸಹಿಸುತ್ತೀರಾ? ಅದೇ ಪ್ರೈವೇಟ್ ಆಸ್ಪತ್ರೆಯಲ್ಲಿ ಸತ್ತ ಒಂದು ಬಡ ಹೆಣವನ್ನು ಹಿಂದಿರುಗಿಸಲೂ ಹಣದ ಬಿಲ್ಲನ್ನೇ ಮುಂದಿಟ್ಟು ಸತಾಯಿಸುವ ಕಟು ಹೃದಯಿಗಳನ್ನು ನೀವು ಹೊತ್ತು ಮೆರವಣಿಗೆ ಮಾಡುತ್ತೀರಾ? ಯಾರೋ ಪುಡಾರಿ ರಾಜಕಾರಣಿ ತನ್ನ ಬೇಳೆಯನ್ನು ಬೇಯಿಸಿಕೊಳ್ಳಲು ಅಂತಹ ಸಂಸ್ಥೆಗಳನ್ನು ವಿರೋಧಿಸಲಾರ ಎಂಬುದಾದರೆ ನೀವುಗಳು ಸಹ ‘ಕುರಿಗಳು ಸಾರ್ ಕುರಿಗಳು’ ಎಂಬಂತೆ ಆತನನ್ನೇ ಹಿಂಬಾಲಿಸುತ್ತೀರಾ? ಹೇಳಿ. ಇಂದು ಒಂದು ಸಾಧಾರಣ ಜ್ವರಕ್ಕೆ ಪ್ಯಾರಾ-ಅಸಿಟಮೋಲ್  ಮಾತ್ರೆಯನ್ನು ಕೊಡಲೇ ಸಾವಿರ ಸಾವಿರ ರೂಪಾಯಿಗಳನ್ನು ಪೀಕುವ ಆಸ್ಪತ್ರೆಗಳು ದಿನಕ್ಕೆ ಇನ್ನೂರು ರೂಪಾಯಿ ಹಣವನ್ನು ಸಂಪಾದಿಸುವ ವ್ಯಕ್ತಿಯನ್ನು ಅಂತಹ ಆಸ್ಪತ್ರೆಗಳ ಹತ್ತಿರವೂ ಸುಳಿಯದಂತೆ ಮಾಡುತ್ತಿರುವುದು ಎಷ್ಟು ಮಟ್ಟಿನ ನ್ಯಾಯ? ಇವರಿಗೆ ಜಾಗ, ಓದು, ಕಟ್ಟಡ ಎಲ್ಲವೂ ಬಡ ಜನರ ದುಡ್ಡಿನಲ್ಲಿ ನಡೆಯುವ ರಾಜ್ಯಸರ್ಕಾರದ್ದೇ ಬೇಕು ವಿನಃ ಅಂತಹ ಬಡ ಜನರ ಶೂಶ್ರುಷೆಯಲ್ಲ. ದಿನಪೂರ್ತಿ ಇಂಗ್ಲಿಷಿನ ಪೋಷಾಕುಗಳನ್ನೇ ತೋರುತ್ತ 1 ನಿಮಿಷ ತೋರ್ಪಡಿಕೆಗೆ ಏನೋ ಎಂಬಂತೆ ಕನ್ನಡ ಕನ್ನಡ ಎಂದು ಬೊಬ್ಬೆಯೊಡೆಯುವ ಹಲವರು ಇದೇ ಕನ್ನಡ ನಾಡಿನಲ್ಲಿ ಅವೇ ಇಂಗ್ಲಿಷ್ ಔಷಧಗಳು ತಮ್ಮ ರಣಬೆಲೆಯ ಬಲದಲ್ಲಿ ನಮ್ಮವರನ್ನು ಕಬ್ಬಿನ ಜಲ್ಲೆಯಂತೆ ಅರೆಯುತ್ತಿರುವುದು ನಿಮಗೆ ತಪ್ಪು ಎನಿಸುವುದಿಲ್ಲವೇ? ಮತ್ತಷ್ಟು ಓದು »