ವಿಷಯದ ವಿವರಗಳಿಗೆ ದಾಟಿರಿ

Archive for

11
ಡಿಸೆ

ಗಳಿಸಬೇಕು ಒಂದು ದಿನ, ಗಳಿಸಿದ್ದನ್ನು ಕೊಡಲೂಬೇಕು ಎಮ್ಮ ಮನ!

– ಸುಜಿತ್ ಕುಮಾರ್

ಆತ ಪ್ರಪಂಚದ ಅತಿರಥ ಶ್ರೀಮಂತ. ಆಸ್ತಿಯ ಮೊತ್ತ ಸುಮಾರು ಐದುಕಾಲು ಲಕ್ಷ ಕೋಟಿ ರೂಪಾಯಿಗಳಿಗಿಂತಲೂ ಹೆಚ್ಚು! ಕಾಲೇಜಿನಿಂದ ಹೊರಬಿದ್ದು ಮುಂದೆ ಇನ್ನೇನೂ ಸಾಧ್ಯವಲ್ಲ ಎಂಬಂತಿದ್ದ ಹುಡುಗನೊಬ್ಬನಿಂದ ಈ ಮಟ್ಟಿನ ಬೆಳವಣಿಗೆ ಸಾಧ್ಯವೆ ಎಂಬುದು ಇಂದಿಗೂ ಹಲವರಲ್ಲಿ ಕಾಡುತ್ತಿರುವ ಜಟಿಲ ಪ್ರಶ್ನೆ. ಇವನೊಟ್ಟಿಗೆ ಮತ್ತೊಬ್ಬನಿದ್ದಾನೆ. ಇಂದಿಗೂ ಕೀಲಿಮಣೆಯ ದಶಕದಷ್ಟು ಹಳೆಯ ಮೊಬೈಲ್ ಫೋನನ್ನೇ ಉಪಯೋಗಿಸುವ ಈತ ಸುಮಾರು ನಾಲ್ಕುವರೆ ಲಕ್ಷ ಕೋಟಿ ರೂಪಾಯಿಗಳ ಒಡೆಯ! ಕೋಕಾ ಕೋಲಾ, ವೀಕ್ಲಿ ಮ್ಯಾಗಜಿನ್, ಚೆವಿಂಗ್-ಗಮ್ ಗಳನ್ನು ಮಾರುತ್ತಿದ್ದ ಈ ಪೋರ ‘ಲಕ್ಷ ಗಳಿಕೆಗಿರುವ ಸಾವಿರ ಮಾರ್ಗಗಳು’ ಎಂಬಂತಹ ಒಂದು ಪುಸ್ತಕದಿಂದ ಪ್ರೇರಣೆ ಪಡೆದು ಈ ಮಟ್ಟಿಗೆ ಬೆಳೆದ ಎಂದರೆ ನೀವು ನಂಬಲೇಬೇಕು! Read more »