ವಿಷಯದ ವಿವರಗಳಿಗೆ ದಾಟಿರಿ

Archive for

9
ಏಪ್ರಿಲ್

ಆಡುವ ಮಾತು….!!

– ಗೀತಾ ಜಿ.ಹೆಗಡೆ
ಕಲ್ಮನೆ

ಕೆಲವೊಮ್ಮೆ ಮನುಷ್ಯರ ಮಾತು, ನಡವಳಿಕೆ ಎಷ್ಟೊಂದು ಇರುಸು ಮುರುಸು ತರಿಸುತ್ತದೆ. ಕೆಲವರು ಆಡುವ ಮಾತುಗಳು ಅದೆಷ್ಟು ಕಿರಿ ಕಿರಿ ಬೇಸರ ತರಿಸುವುದೆಂದರೆ ಕೇಳೋದಕ್ಕೇ ಆಗೋದಿಲ್ಲ. ಏನಾದರೂ ತಿರುಗಿ ಹೇಳೋದಕ್ಕೂ ಸ್ವಲ್ಪ ಕಷ್ಟ. ಅದರಲ್ಲೂ ಕೆಲವು ಹತ್ತಿರದ ಸಂಬಂಧಿಕರಾದರಂತೂ ಮುಗಿದೇ ಹೋಯಿತು.  ಅವರ ವಾಕ್ ಚಾತುರ್ಯ ಸದಾ ಕಿವಿಗೆ ಬೀಳುತ್ತಲೇ ಇರುತ್ತದೆ. ತಪ್ಪಿಸಿಕೊಳ್ಳಲು ಸಾಧ್ಯವೇ ಇಲ್ಲ. ಈ ರೀತಿಯ ಮಾತುಗಳು ಅವರಿಗೆ ಅದೇನೋ ಅಚ್ಚು ಮೆಚ್ಚು. ತಾನೇನೊ ಗಹನವಾಗಿ ಮಾತನಾಡುವವರೆಂಬ ಹುಸಿ ಭ್ರಮೆ ಮನೆ ಮಾಡಿರಬಹುದೇನೊ? ಏಕೆಂದರೆ ಕೇಳಿಸಿಕೊಳ್ಳುವ ಎದುರಾಳಿಯ ಕಡೆ ಕಿಂಚಿತ್ತೂ ಗಮನವಿಲ್ಲದೆ ತಮ್ಮದೇ ಮಾತಿನ ದಾಟಿ ಮುಂದುವರಿಸಿಕೊಂಡು ಹೋಗುತ್ತಿರುತ್ತಾರೆ. ಇದು ಅವರ ಹುಟ್ಟು ಗುಣವಾದರೂ ಇದು ಎಷ್ಟು ಸರಿ? ವಯಸ್ಸಾಗುತ್ತ ಮನುಷ್ಯನಿಗೆ ತಿಳಿವಳಿಕೆ ಬಂದಂತೆ ನಮ್ಮ ಮಾತು ನಡೆಯಲ್ಲಿ ತಿದ್ದುಪಡಿ ಮಾಡಿಕೊಳ್ಳಬೇಕೆಂಬ ಪರಿಜ್ಞಾನವೂ ಇದ್ದಂತೆ ಕಾಣುವುದಿಲ್ಲ. ಆನೆ ನಡೆದಿದ್ದೇ ದಾರಿ ಅನ್ನುವಂತೆ ಅವರ ಮಾತು ಮುಂದುವರಿದಿರುತ್ತದೆ. Read more »