ದೇಶಾಭಿಮಾನದ ಮುಂದೆ ದೇಹಾಭಿಮಾನವನ್ನು ಮರೆಯಾಗಿಸಿದ ನಾಯಕ..
– ಸುಜಿತ್ ಕುಮಾರ್
ಗುಡಾಣ ದೇಹದ ಮೇಲಿನ ಕರಿ ಕೋಟು, ತಲೆಯ ಮೇಲೊಂದು ಹಾಂಬರ್ಗ್ ಹ್ಯಾಟು, ಹುಟ್ಟುವಾಗಲೇ ಅಂಟಿಕೊಂಡು ಬಂದಿತ್ತೇನೋ ಎಂಬಂತೆ ಬಾಯನ್ನು ಬಿಟ್ಟಿರದ ಹೊಗೆಯಾರದ ಸಿಗಾರಿನೊಂದು ತುಂಡು, ಕೈಯಲ್ಲೊಂದು ಭಯ ಹುಟ್ಟಿಸುವ ವಾಕಿಂಗ್ ಸ್ಟಿಕ್ಕು. ಇವಿಷ್ಟೇ ಸಾಕು ಇಪ್ಪತ್ತನೇ ಶತಮಾನದ ಕಾಂಟ್ರವೇರ್ಷಿಯಲ್ ವ್ಯಕ್ತಿತ್ವವೊಂದನ್ನು ಬಣ್ಣಿಸಲು. ಭಾರತೀಯರ ಮಟ್ಟಿಗೆ ಗಾಂಧಿಯನ್ನು ಜರಿಯುತ್ತಿದ್ದ, ಭಾರತವನ್ನು ನಿಂತ ನೆರಳಿಗೆ ಆಗದ ಅಲ್ಲದೆ ನಲ್ವತ್ತು ಲಕ್ಷ ಭಾರತೀಯರ ಮರಣ ಮೃದಂಗಕ್ಕೆ ಪ್ರತ್ಯಕ್ಷವಲ್ಲವಾದರೂ ಪರೋಕ್ಷವಾಗಿ ಕಾರಣನಾದ ಈತ ದೇಶಪ್ರೇಮಿಗಳಿಗೆ ಅಕ್ಷರ ಸಹ ವಿಲನ್ನಂತಾದರೂ ಬ್ರಿಟನ್ನಿಗರ ಪಾಲಿಗೆ ಮಾತ್ರ ಸಾಕ್ಷಾತ್ ದೇವಧೂತ! ಪ್ರಪಂಚವನ್ನೇ ನುಂಗಿ ನೀರು ಕುಡಿಯುವಂತೆ ಧಾವಿಸುತಿದ್ದ ಹಿಟ್ಲರ್ ಎಂಬ ರಾಕ್ಷಸನಿಂದ ಬ್ರಿಟನ್ನನ್ನು ರಕ್ಷಿಸಿದನಲ್ಲದೆ ಎರಡನೇ ಮಹಾಯುದ್ದಕ್ಕೂ ಅಂತ್ಯವನ್ನು ಹಾಡಿಸಿದವನೀತ. ಎರಡು ಬಾರಿ ಬ್ರಿಟನಿನ್ನ ಪ್ರಧಾನಿಯಾಗಿ ದೇಶವನ್ನು ಮುನ್ನೆಡೆಸಿದ ಈತ ಒಬ್ಬ ಬರಹಗಾರ, ಅಧಿಕೃತ ಪತ್ರಕರ್ತ, ಸೇನಾನಾಯಕ ಹಾಗು ಒಬ್ಬ ಖ್ಯಾತ ಚಿತ್ರಗಾರನೂ ಹೌದು. ಕೆಲವು ನೆಗೆಟಿವ್ ಅಂಶಗಳನ್ನು ಬದಿಗಿರಿಸಿ ಈತನನ್ನು ನೋಡಬಯಸಿದವರಿಗೆ ವಿಶ್ವವನ್ನೇ ಆಳಿದ ದೇಶವೊಂದು ಹಿಟ್ಲರ್ನ ನಾಝಿ ಜರ್ಮನಿಯ ಗುಲಾಮನಾಗಬೇಕಿದ್ದ ಸಂದಿಗ್ಧ ಘಳಿಗೆಯಲ್ಲಿಯೂ ತಲೆ ತಗ್ಗಿಸದೆ ಹೋರಾಡಿದ ಧೈರ್ಯಶಾಲಿ ನಾಯಕನೊಬ್ಬ ಅನಾವರಣಗೊಳ್ಳುತ್ತಾನೆ. ಅವನ ಹೆಸರು ವಿನ್ಸ್ಟನ್ ಲಿಯೊನಾರ್ಡ್ ಸ್ಪೆನ್ಸರ್ ಚರ್ಚಿಲ್. ಮತ್ತಷ್ಟು ಓದು
ಎಲೆಕ್ಷನ್ ಪುರಾಣ
– ಎಸ್ ಜಿ ಅಕ್ಷಯ್ ಕುಮಾರ್
“ಅಜ್ಜಿ, ಅಂಗಡಿಗೆ ಯಾರೋ ಪೋಲಿಸರು ಬಂದ” ಹೇಳಿ ಕೂಗಿ ವಿನಾಯಕ ಹಗುರ ಅಂಗಡಿ ಮತ್ತು ಮನೆಯ ಮಧ್ಯವಿದ್ದ ಅರ್ಧ ಗೋಡೆಯ ಹತ್ರ ಬಂದು ಬದಿಗೆ ನಿಂತುಕೊಂಡ. ಆನೊಳ್ಳಿಯಂತಹ ಹಳ್ಳಿಗೆ ಪೋಲಿಸರು ಇಪ್ಪತ್ತು ಕಿಮೀ ದೂರದ ಹೊನ್ನಾವರದಿಂದ ಬರುವಂತಹದ್ದು ಎಂತಾ ಆಗಿದೆ ಹೇಳಿ ತಿಳಕಳುವ ಕುತೂಹಲ ಇದ್ದರೂ ಓದುತ್ತಿದ್ದ ಪುಸ್ತಕ ತುಂಬಾ ಇಂಟರೆಸ್ಟಿಂಗ್ ಆಗಿದ್ರಿಂದ ನಾನು ಅಂಗಳದಲ್ಲಿ ಕುಳಿತಲ್ಲೇ ಮಾತುಕತೆ ಕೇಳಿದರಾಯ್ತು ಅಂತ ಅಲ್ಲೇ ಕೂತಿದ್ದೆ. ಹಿಂದೆ ಅಡುಗೆ ಮನೆಯ ಹತ್ರ ಇದ್ದ ಅಜ್ಜಿ ಅಲ್ಲಿಂದಲೇ, ಮತ್ತಷ್ಟು ಓದು
ಪುಕಾರೋ ದಿಲೇ ಸೇ , ನಮೋ ಫಿರ್ ಸೇ
– ರಾಕೇಶ್ ಶೆಟ್ಟಿ
ರಾಜ್ಯ ವಿಧಾನಸಭೆಯ ಚುನಾವಣೆಯ ನಂತರ ಕಚೇರಿಯಲ್ಲಿ, ನನ್ನ ತಂಡದವರು ಹೀಗೆ ಹರಟೆ ಹೊಡೆಯುತ್ತ ಕುಳಿತಿದ್ದರು. ಮಾತಿನ ಮಧ್ಯೆ, ನೀನು ಯಾವ ಪಕ್ಷಕ್ಕೆ ವೋಟ್ ಹಾಕಿದ್ದು? ಒಬ್ಬಳನ್ನು ಕೇಳಿದರು. ಆಕೆ ಕಾಂಗ್ರೆಸ್ಸಿಗೆ ಎಂದಳಷ್ಟೇ! ಸುತ್ತ ಮುತ್ತಲಿದ್ದವರೆಲ್ಲಾ, OMG!, What? ಅಂತೆಲ್ಲಾ ಉದ್ಗಾರ ತೆಗೆದರು. ಈ ಕಾಲದಲ್ಲೂ ಕಾಂಗ್ರೆಸ್ಸಿಗೆ ಮತ ನೀಡುವ ವಿದ್ಯಾವಂತರಿದ್ದಾರಲ್ಲಪ್ಪ ಎನ್ನುವುದು ಅವರ ಆಶ್ಚರ್ಯಕ್ಕೆ ಕಾರಣವಾಗಿತ್ತು. ಕಾಂಗ್ರೆಸ್ಸಿಗೆ ಯಾಕೆ ಮತ ನೀಡಿದೆ ಎಂದು ಕೇಳಿದರೆ,ಮೊದಲಿಗೆ ಅವಳದು ಶುದ್ಧ ಕಾರ್ಪೊರೇಟ್ ಜಗತ್ತಿನವರ ಡಿಪ್ಲೋಮಾಟಿಕ್ ಉತ್ತರದಂತೆ,ಅವೆಲ್ಲಾ ಟೂ ಪರ್ಸನಲ್ ಯು ನೋ ಎಂದಳು,ನಂತರ ಮುಂದುವರೆದು ನನಗೆ ಮೋದಿಯವರ ವಿರುದ್ಧ ಕಂಪ್ಲೇಂಟುಗಳಿವೆ ಅದಕ್ಕೆ ಎಂದಳು. ಅದೇನು ಕಂಪ್ಲೇಂಟು? ಅಂತ ಕೇಳಿದರೆ ಉತ್ತರವಿಲ್ಲ.
ಮತ್ತೊಬ್ಬರು ಆಂಧ್ರದವರು.ಫಲಿತಾಂಶದ ದಿನ, ಬಿಜೆಪಿ ಗೆಲ್ಲಬಾರದು ಎನ್ನುತ್ತಿದ್ದರು. ಬಿಜೆಪಿ ಯಾಕೆ ಗೆಲ್ಲಬಾರದು? ಅಂತ ಕೇಳಿದೆ.ನನಗೆ ಮೋದಿ ಕಂಡರೆ ಆಗುವುದಿಲ್ಲ ಎಂದರು.ಯಾಕೆ ಎಂದರೇ ಅವರು ಆಂಧ್ರಕ್ಕೆ ವಿಶೇಷ ಸ್ಥಾನಮಾನ ನೀಡದೇ ಮೋಸ ಮಾಡಿದ್ದಾರೆ ಆ ಕಾರಣಕ್ಕೆ ಅವರು ಇಲ್ಲೂ ಗೆಲ್ಲಬಾರದು ಎನ್ನುವ ಉತ್ತರ. ಆಂಧ್ರಕ್ಕೆ ಅವರು ಮೋಸ ಮಾಡಿದ್ದಾರೆ ಅಂತ ನಿನಗೆ ಹೇಗೆ ಗೊತ್ತು? ಎಂದರೆ,ಎಲ್ಲರೂ ಹೇಳುತ್ತಿದ್ದಾರಲ್ಲ ಎನ್ನುವ ಉತ್ತರ.ತಕ್ಷಣವೇ, ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನದ ಕುರಿತು ಅರುಣ್ ಜೈಟ್ಲಿ ಏನು ಹೇಳಿದ್ದಾರೆ ಎನ್ನುವುದನ್ನು ಅವರ ಗಮನಕ್ಕೆ ತಂದು ತೋರಿಸಿದೆ. ಯುಪಿಎ ಎಡವಟ್ಟಿನಿಂದ ವಿಭಜನೆಯಾಗಿ ಆರ್ಥಿಕವಾಗಿ ದುರ್ಬಲವಾಗಿರುವ ಆಂಧ್ರಪ್ರದೇಶಕ್ಕೆ ಸಂಪೂರ್ಣ ಹಣಕಾಸಿನ ನೆರವು ನೀಡಲು ಕೇಂದ್ರ ಬದ್ಧವಾಗಿದೆ. ಆದರೆ,ರಾಜ್ಯಗಳಿಗೆ ವಿಶೇಷ ಸ್ಥಾನಮಾನ ನೀಡುವುದನ್ನು ೧೪ನೇ ಹಣಕಾಸು ಸಮಿತಿ ಕೇವಲ ಈಶಾನ್ಯ ರಾಜ್ಯಗಳಿಗೆ ಮಾತ್ರ ಸೀಮಿತಗೊಳಿಸಿದೆ.ಹಾಗಾಗಿ ಆ ಸ್ಥಾನಮಾನ ನೀಡಲು ಸಾಧ್ಯವಿಲ್ಲ. ವಿಶೇಷ ಸ್ಥಾನಮಾನ ಪಡೆದ ರಾಜ್ಯಕ್ಕೆ ಕೇಂದ್ರದಿಂದ ಶೇ.೯೦ರಷ್ಟು ಅನುದಾನ ಸಿಗುತ್ತದೆ,ಉಳಿದ ರಾಜ್ಯಗಳಿಗೆ ಶೇ. ೬೦ರಷ್ಟು ಸಿಗುತ್ತದೆ.ಆಂಧ್ರಪ್ರದೇಶಕ್ಕೂ ಕೇಂದ್ರದಿಂದ ಶೇ.೯೦ ರಷ್ಟು ಅನುದಾನ ಕೊಡಲು ನಾವು ಬದ್ಧರಿದ್ದೇವೆ ಎಂದಿದ್ದರು. ಒಟ್ಟಾರೆಯಾಗಿ ವಿಶೇಷ ರಾಜ್ಯದ ಸ್ಥಾನಮಾನ ನೀಡಲು ೧೪ನೇ ಹಣಕಾಸು ಆಯೋಗದ ಅಡ್ಡಿಯಿದ್ದರೂ,ಅದಕ್ಕೆ ಸರಿಸಮಾನವಾದ ವಿಶೇಷ ಪ್ಯಾಕೇಜ್ ನೀಡಲು ಕೇಂದ್ರ ಸರ್ಕಾರ ಸಿದ್ಧವಾಗಿತ್ತು. ನಿಮ್ಮ ಚಂದ್ರಬಾಬು ನಾಯ್ಡು ಅವರೇ ರಾಜಕೀಯ ಲಾಭಕ್ಕಾಗಿ,ಎನ್ಡಿಎ ತೊರೆದು ಈಗ ಸುಳ್ಳು ಹೇಳಿಕೊಂಡು ತಿರುಗುತ್ತಿದ್ದಾರೆ ಎಂದೇ.ಎಂತ ಲಾಭ ಎಂದರು? ನಿಮ್ಮ ವೈಎಸಾರ್ ಪಕ್ಷದ ಜಗನ್, ಈ ವಿಶೇಷ ಸ್ಥಾನಮಾನದ ನಿರಾಕರಣೆಯ ಕತೆ ಹೇಳಿಕೊಂಡೇ ಆಡಳಿತ ವಿರೋಧಿ ಅಲೆ ಎಬ್ಬಿಸಿ ಬಿಡುತ್ತಾನೋ ಎಂಬ ಭಯದಿಂದಲೂ ಇದ್ದಿರಬಹುದು ಎಂದೇ. ನಾಯ್ಡು ಅಭಿಮಾನಿಯಾದ ಅವರು ಒಪ್ಪಲು ಸಿದ್ಧರಿರಲಿಲ್ಲ,ಆದರೆ ಕೇಂದ್ರ ಸರ್ಕಾರ ಕೊಡಲು ಸಿದ್ಧವಿತ್ತು,ಆಂಧ್ರವೇ ಪಡೆಯಲಿಲ್ಲ ಎನ್ನುವುದು ಅವರಿಗೆ ಅರ್ಥವಾಗಿತ್ತು. ಮತ್ತಷ್ಟು ಓದು
ಮಾನಹೀನ ಮಾತುಗಳಿಂದ ಬದುಕಬೇಕಿದೆಯೇ ನಮ್ಮ ಡೆಮಾಕ್ರಸಿ…?
– ಸುಜಿತ್ ಕುಮಾರ್
ಸಣ್ಣವರಿದ್ದಾಗ ಶಿಕ್ಷಕರು ನಮಗೆ ಕಲಿಸಿದ್ದ ಅಮೋಘ ಶಿಕ್ಷಣಗಳಲ್ಲಿ ಸರಿಯೆನಿಸದ್ದಿದ್ದನ್ನು ಪ್ರಶ್ನಿಸುವುದೂ ಒಂದು. ಅದು ‘ಏನಲೇ..!?’ ಎಂದು ಕೊಳಪ್ಪಟ್ಟಿಯನ್ನು ಹಿಡಿದು ಜಾಡಿಸಿ ಕೇಳುವುದಕ್ಕಿಂತ ಮಿಗಿಲಾಗಿ, ಹರಿತವಾದ ಮಾತಿನಿಂದ ಸತ್ಯವೆಂಬ ಹಿಡಿತದೊಂದಿಗೆ ಮುಂದಿರುವವನ ಕಪಟ ವಂಚಕ ಮನಸ್ಥಿತಿಯನ್ನು ಬೆದರುಗೊಳಿಸುವ ಬಗೆಯಾಗಿದ್ದಿತು. ಅರ್ಥಾತ್ ಅವು ವೈಚಾರಿಕ ಬಗೆಯ ನೇರ ಪ್ರಶ್ನೆಗಳಾಗಿದ್ದವು. ಆದರೆ ಅಂದಿನ ಆ ಪಾಠವನ್ನು ಮರೆತ ಬಹುಮಂದಿ ಜನರು ಇಂದು ಕೇಳುವ ಪ್ರಶ್ನೆಗಳು ಏಕವಚನ ಪದಗುಚ್ಛಗಳ ಚಪ್ಪಲಿ ಏಟಿನಂತೆ ಮುಂದಿರುವ ವ್ಯಕ್ತಿಯ ಮಾನಹರಣ ಮಾಡುವ ಅಸ್ತ್ರಗಳಾಗಿವೆ. ಪುಕ್ಕಟೆಯಾಗಿ ಸಿಗುವ ಹೊಲಸು ಪದಗಳ ವಿಶೇಷಣಗಳನ್ನು ಬಳಸಿ ಮುಂದಿರುವವರ ಸ್ಥಾನ ಜೊತೆಗೆ ಮಾನವನ್ನೂ ತಿವಿದು ಹಾಕುವ ಇಂದಿನ ದಿನಗಳಲ್ಲಿ ವಿಷಯಕ್ಕೆ ತಕ್ಕನಾದಂತಹ ನೇರವಾದ ಪ್ರಶ್ನೆಗಳನ್ನೂ ಕೇಳುವವರ ಸಂಖ್ಯೆ ಕ್ಷೀಣಿಸುತ್ತಿದೆ! ಒಂದೋ ಆತ/ಅವಳು ಸಮಾಜದ ಅತಿ ಪ್ರಭಾವಿ ಗುಂಪಿನ ಇಂಪಾರ್ಟೆಂಟ್ ವ್ಯಕ್ತಿಗಳೆನಿಸಿಕೊಂಡಿರಬೇಕು ಅಥವಾ ಯಾರಿಗೂ ಕ್ಯಾರೇ ಎನ್ನದ ಖಡಕ್ ಅಧಿಕಾರಿಗಳಾಗಿರಬೇಕು. ಅಂತವರಿಗಷ್ಟೇ ಇಂದು ಪ್ರಶ್ನೆಗಳನ್ನು ಕೇಳುವ ‘ಅಧಿಕಾರ’ ಹಾಗು ‘ಧೈರ್ಯ’ ಸೀಮಿತವಾಗುತ್ತಿದೆ ಎಂದರೆ ಸುಳ್ಳಾಗದು. ಸಾಮಾನ್ಯನೊಬ್ಬನಿಗೆ ಇಂದು ಪ್ರಶ್ನಿಸುವ ಧೈರ್ಯವನ್ನು ತುಂಬುವ ಸಮಾಜವೇ ಇಲ್ಲವಾದರೆ ವಿಧ್ಯಾವಂತರಾಗಿಯೂ ಕುರಿಗಳು ಸಾರ್ ಕುರಿಗಳು ಎಂಬಂತೆ ಪ್ರಶ್ನಿಸುವ ನರಗಳನ್ನೇ ಕಳೆದುಕೊಂಡು ಒಬ್ಬರ ಬಾಲವನ್ನು ಇನ್ನೊಬ್ಬರು ಮೂಸುತ್ತಾ ಸಾಗುವ ಪಯಣ ಇದಾದಿತು. ಪೀಠಿಕೆ ಇಷ್ಟಿರಲಿ. ಈಗ ವಿಷಯಕ್ಕೆ ಬರೋಣ. ಅದಕ್ಕೂ ಮೊದಲು ಒಂದೆರೆಡು ನೇರ ನುಡಿ. ಇಲ್ಲಿ ಕೇಳಲಾಗಿರುವ ಪ್ರಶ್ನೆಗಳಿಗೆ ಪಕ್ಷ, ಜಾತಿ, ಪಂಥ ಎಂಬ ಯಾವುದೇ ಬಗೆಯ ತುರಿಕೆಗಳಾಗಲಿ, ಖಾಯಿಲೆಯಗಳಾಗಲೀ ಅಂಟಿಕೊಂಡಿಲ್ಲ. ಭಾರತೀಯರಾಗಿ ಅದಕ್ಕಿಂತಲೂ ಹೆಚ್ಚಾಗಿ ಸ್ವಸ್ಥ ಮಾನವರಾಗಿ ಕೇಳಲೇ ಬೇಕಾದ ಪ್ರಶ್ನೆಗಳಿವು. ಮುಂದಿರುವ ಇನ್ನೊಬ್ಬರಿಗಲ್ಲದಿದ್ದರೂ ತಮಗೆ ತಾವೇ ಚುಚ್ಚಿಕೊಳ್ಳಬೇಕಾದದ ಸೂಜಿಗಳಿವು! ಮತ್ತಷ್ಟು ಓದು
ರಾಝೀ..
– ಅನಘಾ ನಾಗಭೂಷಣ
ಭಾರತೀಯ ಗುಪ್ತಚರ ದಳದ ಆಫೀಸರುಗಳು, ಗೂಢಚಾರಿಗಳ(spy) ಬಗ್ಗೆ ಸಾಕಷ್ಟು ಸಿನಿಮಾಗಳು ಬಂದಿವೆಯಾದರೂ ಇತ್ತೀಚೆಗೆ ಬಿಡುಗಡೆಯಾಗಿ ದೇಶಾದ್ಯಂತ ಜನಮೆಚ್ಚುಗೆ ಗಳಿಸಿದ್ದು ಸಲ್ಮಾನ್ ಖಾನನ ಟೈಗರ್ ಸಿನಿಮಾಗಳು, ಅಕ್ಷಯ್ ಕುಮಾರನ ಬೇಬಿ ಮತ್ತು ಆಲಿಯಾ ಭಟ್ ಳ ರಾಝೀ…
ಇವತ್ತು ರಾಝೀ ಸಿನಿಮಾ ನೋಡಿದೆ.. ನೈಜ ಘಟನೆಗಳಿಂದ ಸ್ಫೂರ್ತಿ ಪಡೆದು ಹರಿಂದರ್ ಎಸ್. ಸಿಕ್ಕಾ ಅವರು 2008ರಲ್ಲಿ ಬರೆದಿದ್ದ ‘Calling Sehmat’ ಎಂಬ ಕಾದಂಬರಿಯನ್ನಾಧರಿಸಿರುವ ಈ ಚಿತ್ರ ವಾಸ್ತವಕ್ಕೆ ಹತ್ತಿರವಾಗಿ, ಮನಮುಟ್ಟುವಂತಿದೆ.. ಏಕ್ ಥಾ ಟೈಗರ್, ಟೈಗರ್ ಜಿಂದಾ ಹೈ ಸಿನಿಮಾಗಳ ಬಗ್ಗೆ ನನಗೆ ಅಂಥಾ ಒಳ್ಳೆ ಅಭಿಪ್ರಾಯವೇನೂ ಇಲ್ಲವಾದರೂ ಬೇಬಿ ಇಷ್ಟವಾಗಿತ್ತು.. ಆದರೆ ವಸ್ತುನಿಷ್ಠತೆಯ ದೃಷ್ಟಿಯಿಂದ ನೋಡುವಾಗ ರಾಝೀ ಗೆ ಮೊದಲ ಸ್ಥಾನ.. ಈ ಚಿತ್ರದ ಮುಖ್ಯಪಾತ್ರ ಸಹಮತ್ ಸಯ್ಯದ್ ಳಾಗಿ ನಟಿಸಿರುವ ಆಲಿಯಾ ಭಟ್ ನಿಜಕ್ಕೂ ಅಭಿನಂದನಾರ್ಹಳು! ಹೈವೇ, ಉಡ್ತಾ ಪಂಜಾಬ್ ನಂತರ ಪ್ರಬುದ್ಧವೂ, ಸವಾಲೂ ಎನಿಸುವಂಥ ಪಾತ್ರವನ್ನ ಇದರಲ್ಲಿ ಅತ್ಯಂತ ಸಮರ್ಥವಾಗಿ ನಿರ್ವಹಿಸಿದ್ದಾಳಾಕೆ.. ಟೈಗರ್, ಬೇಬಿಗಳಲ್ಲಿರುವಂತೆ ಅತಿಮಾನುಷವೆನಿಸುವ ಯಾವುದೇ ಸ್ಟಂಟ್ಸ್, ಫೈಟಿಂಗ್, ಅನಾವಶ್ಯಕ ಹಾಡುಗಳು, ಹೀರೋಯಿಸಂ ಇವೇನೂ ಇಲ್ಲದೇ ರಾಝೀ ಸಹಜವಾಗಿ ಮೂಡಿಬಂದಿದೆ.. ಮತ್ತಷ್ಟು ಓದು
ಆ ಕ್ಷಣ..
– ಗೀತಾ ಜಿ.ಹೆಗಡೆ
ಜೀವನ ಅನ್ನೋದು ಎಷ್ಟು ವಿಚಿತ್ರ. ಕೆಲವೊಮ್ಮೆ ಎಷ್ಟೊಂದು ಅಸಹಾಯಕರಾಗಿಬಿಡುತ್ತೇವೆ. ಕಣ್ಣ ಮುಂದಿರುವ ಹತ್ತಾರು ಕೆಲಸಗಳು, ಹೇಗೆ ನಿಭಾಯಿಸಲಿ ಅನ್ನುವ ಚಿಂತೆ ಮನವನಾವರಿಸಿ ದಿಕ್ಕು ತೋಚದಂತಾಗಿ ತುಂಬಾ ತುಂಬಾ ಸಂಕಟವಾಗುತ್ತದೆ. ಕಣ್ಣು ಕಟ್ಟಿ ಕಾಡಿನಲ್ಲಿ ಬಿಟ್ಟ ಅನುಭವ. ಏನು ಮಾಡ್ಲಿ? ಯಾರ ಹತ್ತಿರ ಹೇಳಿಕೊಳ್ಳಲಿ? ಯಾರಿದ್ದಾರೆ ನನಗೆ ಸಹಾಯ ಮಾಡುವವರು? ಮನಸ್ಸು ಬರೀ ಹುಡುಕಾಟದಲ್ಲಿ ಯಾರಿಲ್ಲಪ್ಪ ನನಗೆ. ತೀರಾ ತೀರಾ ಸೋತ ಅನುಭವ. ಹತಾಶೆ, ನೋವು, ಸಂಕಟ. ಯಾರೊಂದಿಗೆ ಮಾತು ಬೇಡಾ, ಎಲ್ಲಿ ಹೋಗೋದು ಬೇಡಾ, ಯಾವುದರಲ್ಲೂ ಆಸಕ್ತಿನೇ ಇಲ್ಲ. ಹೇಳಿಕೊಳ್ಳಲು ನೂರಾರು ಜನ ಇರ್ತಾರೆ. ಒಬ್ಬೊಬ್ಬರನ್ನೇ ನೆನಪಿಸಿಕೊಳ್ಳುವ ಮನಸ್ಸು ತನ್ನಷ್ಟಕ್ಕೇ ತಟಸ್ತವಾಗುತ್ತ ಬೇಡಾ ಬೇಡಾ ಇವರತ್ತಿರ ಏನೂ ಹೇಳೋದು ಬೇಡಾ. ನನ್ನಿಂದ ಅವರಿಗೆಲ್ಲ ಯಾಕೆ ತೊಂದರೆ. ಒಂದೊಮ್ಮೆ ಏನಾರೂ ಹೇಳಿದರೆ ತೋರುಗಾಣಿಕೆಯ ಕಾಟಾಚಾರಕ್ಕೆ ಬರ್ತಾರೊ ಏನೊ? ಇಷ್ಟಕ್ಕಾಗಿ ಯಾಕೆ ಹೇಳಿಕೊಳ್ಳಬೇಕು. ನಾಳೆ ಇದೂ ಒಂದು ಹಂಗಾಗುತ್ತೋ ಏನೋ? ಆದದ್ದು ಆಗಲಿ. ಹುಟ್ಟಿಸಿದ ದೇವರು ಹುಲ್ಲು ಮೇಯಿಸುವುದಿಲ್ಲ. ನಂಬಿದ ಆ ದೇವರೆ ದಾರಿ ತೋರಿಸುತ್ತಾನೆ. ಮತ್ತಷ್ಟು ಓದು
ಕರ್ನಾಟಕದ ರಮಣರು,ಬಿಜೆಪಿಯೆಂಬ ಯು.ಜಿ ಕೃಷ್ಣಮೂರ್ತಿ
– ರಾಕೇಶ್ ಶೆಟ್ಟಿ
ಕಳೆದೊಂದು ವಾರದಲ್ಲಿ ರಾಜ್ಯದ ಜನ ಸಾಕ್ಷಿಯಾಗಿದ್ದ ರಾಜಕೀಯ ಹಗ್ಗ-ಜಗ್ಗಾಟಕ್ಕೆ ತಾತ್ಕಾಲಿಕ ಪರದೆ ಬಿದ್ದಿದೆ. ರಾಜಕಾರಣಿಗಳ ಬೃಹನ್ನಾಟಕದಿಂದಾಗಿ ಟಿಆರ್ಪಿ ಕಳೆದುಕೊಂಡಿದ್ ಮೆಗಾ ಸಿರಿಯಲ್ಲುಗಳ ನಿರ್ಮಾಪಕರು ನಿಟ್ಟುಸಿರು ಬಿಟ್ಟಿರಬಹುದು.ಗೋವಾದ ಚುನಾವಣಾ ಫಲಿತಾಂಶದಲ್ಲಿ ಬಿಜೆಪಿಯಿಂದ ಹಲ್ವಾ ತಿಂದಿದ್ದ ಕಾಂಗ್ರೆಸ್ ಕರ್ನಾಟಕದಲ್ಲಿ ಮತ್ತೆ ಅಂತ ಉದಾಸೀನಕ್ಕೆ ಜಾರಲಿಲ್ಲ.ಜಾರಲಿಲ್ಲ ಎನ್ನುವುದಕ್ಕಿಂತಲೂ ಮುಖ್ಯವಾಗಿ ಕಾಂಗ್ರೆಸ್ ಅಧಿಕಾರದಲ್ಲಿ ಉಳಿಯಬಹುದಾದ ಸಾಧ್ಯತೆಯಿರುವ ದೇಶದ ದೊಡ್ಡ ರಾಜ್ಯಗಳಲ್ಲಿ ಕರ್ನಾಟಕ ಮಾತ್ರವೇ ಉಳಿದಿದ್ದರಿಂದ,ಕರ್ನಾಟಕವೆನ್ನುವುದು ಕಾಂಗ್ರೆಸ್ ಪಾಲಿಗೆ ಅಸ್ತಿತ್ವದ ಪ್ರಶ್ನೆಯೂ ಆಗಿತ್ತು. PIN ಇಲ್ಲದ ATMನಂತಾಗಿರುವ ರಾಜ್ಯವನ್ನು ಅವರಾದರೂ ಹೇಗೆ ಬಿಟ್ಟುಕೊಟ್ಟಾರು ಹೇಳಿ?
ಚುನಾವಣಾ ಪ್ರಚಾರದಲ್ಲಿ, ಕುಮಾರಸ್ವಾಮಿಯವರ ಬಗ್ಗೆ ‘ಅವರಪ್ಪನಾಣೆ ಮುಖ್ಯಮಂತ್ರಿಯಾಗಲ್ಲ” ಎಂದು ಪದೇ ಪದೇ ಹೀಯಾಳಿಸಿದ್ದ ಸಿದ್ಧರಾಮಯ್ಯನವರೇ ಖುದ್ದಾಗಿ ಮುಂದೆ ಬಂದು ನೀವೇ ನಮ್ ಸಿಎಂ ಎಂದೂ ನಡುಬಗ್ಗಿಸಿ ನಿಲ್ಲಬೇಕಾದ ಸ್ಥಿತಿಗೆ ತಂದು ನಿಲ್ಲಿಸಿದ್ದು ಚುನಾವಣಾ ಫಲಿತಾಂಶ.ಕಳೆದ ೫ ವರ್ಷಗಳಲ್ಲಿ ಉಡಾಫೆ,ಅಹಂಕಾರವೇ ಮೈವೆತ್ತಂತೆ ವರ್ತಿಸುತ್ತಿದ್ದ ವ್ಯಕ್ತಿಗೆ ಮತದಾರ ಮಹಾಪ್ರಭು ಭರ್ಜರಿ ಏಟನ್ನೇ ಕೊಟ್ಟಿದ್ದಾನೆ. ಚಾಮುಂಡೇಶ್ವರಿಯಲ್ಲಿ ಸಿದ್ಧರಾಮಯ್ಯನವರು ದೊಡ್ಡ ಮಟ್ಟದ ಅಂತರದಲ್ಲಿ ಸೋತಿದ್ದಾರೆ, ಇನ್ನು ಬಾದಾಮಿಯಲ್ಲಿ 2000 ದಷ್ಟು NOTA ಚಲಾವಣೆಯಾಗಿದೆ,ಸಿದ್ಧರಾಮಯ್ಯ ಗೆದ್ದಿರುವುದು 1600 ಚಿಲ್ಲರೆ ಮತಗಳ ಅಂತರದಲ್ಲಿ ಮಾತ್ರ.ಎರಡು ಕಡೆ ಏಕೆ ನಿಲ್ಲುತ್ತಿದ್ದೀರಿ ಎನ್ನುವ ಪ್ರಶ್ನೆಗೆ ಸಿದ್ಧರಾಮಯ್ಯನವರು ನಿಂತರೆ ಆ ಭಾಗದಲ್ಲಿ ಹೆಚ್ಚು ಸೀಟು ಗೆಲ್ಲಬಹುದು ಎನ್ನುತ್ತಿದ್ದರು ಅವರ ಬೆಂಬಲಿಗರು. ಬಾಗಲಕೋಟೆ ಜಿಲ್ಲೆಯ 7 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆದ್ದಿದ್ದು 2 ಮಾತ್ರ ಉಳಿದೆಲ್ಲವೂ ಬಿಜೆಪಿಯ ಪಾಲಾಗಿದೆ? ಎಲ್ಲೋಯ್ತು ಸಿದ್ಧರಾಮಯ್ಯನವರ ಪ್ರಭಾವಳಿ? ಖುದ್ದು ಮುಖ್ಯಮಂತ್ರಿ ಹಾಗೂ ಮುಖ್ಯಮಂತ್ರಿ ಅಭ್ಯರ್ಥಿಯೇ ಸೋತಿದ್ದು ಆಡಳಿತ ವಿರೋಧಿ ಅಲೆಯ ಸಂದೇಶ ಅಲ್ಲವೇ? ಸಿದ್ಧರಾಮಯ್ಯನವರ ಸಂಪುಟದ 16 ಸಚಿವರು ಸೋತು ಮನೆ ಸೇರಿದ್ದಾರೆ.ಸಿದ್ಧರಾಮಯ್ಯ ಆಪ್ತ ಬಳಗದಲ್ಲಿದ್ದ ಮಹದೇವಪ್ರಸಾದ್,ಆಂಜನೇಯ,ಉಮಾಶ್ರಿಯಂತವರು ಸೋಲಿನ ರುಚಿ ಸವಿದಿದ್ದಾರೆ.ಮುಖ್ಯಮಂತ್ರಿಗಳ ತವರು ಜಿಲ್ಲೆಯಲ್ಲೂ ಕಾಂಗ್ರೆಸ್ ಮೂಲೆ ಸೇರಿದೆ.
ಮತದಾರರಿಂದ ಮುಖಕ್ಕೆ ಮಂಗಳಾರತಿ ಮಾಡಿಸಿಕೊಂಡ ಕಾಂಗ್ರೆಸ್ ಪಕ್ಷಕ್ಕೆ ನೈತಿಕತೆಯಿದ್ದಿದ್ದರೆ ವಿರೋಧ ಪಕ್ಷದಲ್ಲಿ ಕೂರಬೇಕಾಗಿತ್ತು. ಆದರೆ ಪಕ್ಷದ ಅಳಿವು-ಉಳಿವಿನ ಪ್ರಶ್ನೆಯಾದ್ದರಿಂದ, “ಕೋಮುವಾದಿಗಳನ್ನು ದೂರವಿಡಲು,ಸೆಕ್ಯುಲರಿಸಂ ರಕ್ಷಿಸಲು’ ಎಂಬ ತಗಡು ಸ್ಲೋಗನ್ ಇಟ್ಟುಕೊಂಡು ಕಾಂಗ್ರೆಸ್-ಜೆಡಿಎಸ್ ಮೈತ್ರಿಗೆ ಮುಂದಾಗಿವೆ. ತುಘಲಕ್ ಸರ್ಕಾರವನ್ನು ಜನರು ತಿಪ್ಪೆಗೆ ಎಸೆದರೂ, ತಿಪ್ಪೆಯಿಂದ ಎದ್ದು ಬಂದು ಜೆಡಿಎಸ್ ಜೊತೆ ಕೈಜೋಡಿಸಿ ಕಾಂಗ್ರೆಸ್ ಉಸಿರಾಡುತ್ತಿದೆ,ಜೆಡಿಎಸ್ ಪಕ್ಷದ ಕತೆಯೂ ಅಸ್ತಿತ್ವ ಉಳಿಸಿಕೊಳ್ಳುವ ವಿಚಾರದಲ್ಲಿ ಕಾಂಗ್ರೆಸ್ಸಿಗಿಂತ ಭಿನ್ನವಾಗೇನೂ ಇಲ್ಲ. ಹತ್ತು ವರ್ಷಗಳಿಂದ ಅಧಿಕಾರದಿಂದ ದೂರ ಇರುವ ಪಕ್ಷ ತನ್ನ ಅಸ್ತಿತ್ವ ಉಳಿಸಿಕೊಳ್ಳಲು ಇನ್ನೇನೂ ಮಾಡೀತು ಹೇಳಿ?ಚುನಾವಣೆಗೆ ಮೊದಲು ಕಾಂಗ್ರೆಸ್ ಸರ್ಕಾರದ ಅಧ್ವಾನಗಳ ಬಗ್ಗೆ ಮಾತನಾಡಿ ಮತ ಪಡೆದ ಜೆಡಿಎಸ್ ಇಂದು ಕಾಂಗ್ರೆಸ್ ಜೊತೆ ಕೈ ಜೋಡಿಸಿದೆ. ಈಗ ಇಬ್ಬರೂ ಸೇರಿಕೊಂಡು ಪ್ರಜಾಪ್ರಭುತ್ವ ಉಳಿಸುವ ತುತ್ತೂರಿ ಊದಿದರೆ ಜನರಿಗೆ ಸತ್ಯ ಅರ್ಥವಾಗುವುದಿಲ್ಲವೇ?
ದಲಿತರನ್ನು ಇತರರಿಂದ ದೂರವಿಡಲು ನಡೆಸುತ್ತಿರುವ ಹುನ್ನಾರ ಇನ್ನೆಷ್ಟು ದಿನ ಮುಂದುವರೆಯುವುದು?
– ಶಿವಾನಂದ ಸೈದಾಪೂರ
ಪಿ.ಜಿ ಡಿಪ್ಲೊಮಾ ಇನ್ ಅಂಬೇಡ್ಕರ್ ಸ್ಟಡಿಸ್
ಆರ್. ಸಿ. ಯು ಬೆಳಗಾವಿ.
ಈಗಲೇ ಎರಡು ದಿನಗಳಲ್ಲಿ ನಡೆದ ಘಟನೆಗಳು; ನೂರಕ್ಕೆ ನೂರರಷ್ಟು ಮತದಾನದ ಜಾಗೃತಿಗಾಗಿ ಊರೂರುಗಳಿಗೆ ಸಂಪರ್ಕ ಮಾಡುತ್ತಿರುವ ಹೊತ್ತಲ್ಲಿ ಆದ ಸ್ವಂತ ಅನುಭವ. ದಲಿತರ ಓಣಿಗಳನ್ನು ಪ್ರವೇಶಿಸುವಾಗ ನಡೆದಂತದ್ದವುಗಳು.
ಘಟನೆ ೧ : ಓಣಿಯ ಪ್ರವೇಶಕ್ಕೂ ಮೊದಲು ಗಮನಿಸಿದಾಗ ಕಣ್ಣಿಗೆ ರಾಚುವಂಥದ್ದು; ಈ ಕೇರಿಯಲ್ಲಿ ಕಾಂಗ್ರೆಸ್ ಒಂದನ್ನು ಬಿಟ್ಟು ಬಿಜೆಪಿಯವರಿಗೆ ಪ್ರವೇಶವಿಲ್ಲ! ಈ ರೀತಿ ಫಲಕ ನೇತಾಡುತಿತ್ತು. ಇಂತಹ ವಾತಾವರಣ ಇನ್ನೂ ಯಾಕೆ ಹೀಗಿದೆ? ಚುನಾವಣೆ ಸಂದರ್ಭದಲ್ಲಿಯೇ ಯಾಕೆ ಹೀಗೆ? ಇದನ್ನು ಏನು ಅಂತ ತರ್ಕಿಸಬಹುದು? ಸ್ವಾತಂತ್ರ್ಯ ಬಂದು ಇಷ್ಟು ವರ್ಷಗಳು ಕಳೆದರೂ ಯಾಕೆ ಈ ವಾತಾವರಣ? ಅಸ್ಪೃಶ್ಯತೆ ನಿವಾರಣೆಗಾಗಿ ಒಂದು ಕಡೆ ಹೋರಾಟಗಳು ನಡೆಯುತ್ತಿದ್ದರೆ, ಮತ್ತೊಂದು ಕಡೆ ಅವರನ್ನು ಸ್ವೃಶ್ಯ ಸಮಾಜ ವಾಸಿಯಾಗಲು ಬಿಡದೆ ನಡೆಸುತ್ತಿರುವ ರಾಜಕೀಯ ಷಡ್ಯಂತ್ರವೇ ಬಹಳಷ್ಟಿವೆ. ಮತ್ತಷ್ಟು ಓದು
ಮುಧೋಳ ನಾಯಿಯ ಜೊತೆಯ ಹೋಲಿಕೆಗೆ ಇವರು ಅರ್ಹರೇ?

ಲಾಲ್ ಬಹೂದ್ದೂರ್ ಶಾಸ್ತ್ರಿಗಳ ಬಾಯಿಂದ ಭಾರತ್ ಕೀ ಆಯೂಬ್ ಎಂದು ಬೆನ್ನು ತಟ್ಟಿಸಿಕೊಂಡ ಒರ್ವ ಯೋಧ ಕ್ಯಾ.ಆಯೂಬ್ ಖಾನ್. ವೀರ ಚಕ್ರ ಪುರಷ್ಕೃತ ಕ್ಯಾ.ಖಾನ್‌ಗೆ ಶಾಸ್ತ್ರಿ ಮೇಲೆ ಅದೆಷ್ಟು ಅಭಿಮಾನವಿತ್ತೆಂದರೆ ನಿವೃತ್ತಿಯ ನಂತರ ಅವರು ಕಾಂಗ್ರೆಸ್‌ಗೆ ಸೇರಿದರು. ಎರಡು ಬಾರಿ ರಾಜಾಸ್ಥಾನದ ಜುಂಜುನು ಲೋಕಸಭಾ ಕ್ಷೇತ್ರದಿಂದ ಸ್ಫರ್ಧಿಸಿ ಸಂಸದರೂ ಆದರು. ಆದರೆ ಆಯೂಬ್ ಖಾನರಿಗೆ ಶಾಸ್ತ್ರಿಗಳ ನಿಧನಾನಂತರ ಯಾಕೋ ತನ್ನ ಆಯ್ಕೆ ತಪ್ಪಿದೆ ಎನಿಸತೊಡಗಿತು. ಇಂದಿರಾ ಸರ್ವಾಧಿಕಾರ ಮತ್ತು ರಾಜೀವ್ ಗಾಂಧಿ ಪಟಾಲಮ್ಮಿನ ಸೈನಿಕ ವಿರೋಧಿ ನೀತಿಗಳನ್ನು ಸಹಿಸುವಷ್ಟು ದಿನ ಸಹಿಸಿದರು. ಕೊನೆಗೆ ಶಾಸ್ತ್ರಿಗಳಿಗಾದ ಸ್ಥಿತಿ ನರಸಿಂಹರಾಯರಿಗೂ ಬಂದಾಗ ಹಿಂದೆ ಮುಂದೆ ನೋಡದೆ ಕಾಂಗ್ರೆಸ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ರಾಜಕೀಯ ಸಂನ್ಯಾಸ ಸ್ವೀಕರಿಸಿದರು. ಕೊನೆ ಕಾಲದಲ್ಲಿ ಆಯೂಬ್ ಖಾನರಿಗೆ ಕಾಂಗ್ರೆಸ್ ಸೇರಿದ್ದ ಬಗ್ಗೆ ಎಷ್ಟು ಪಾಪಪ್ರಜ್ಞೆ ಕಾಡುತ್ತಿತ್ತೆಂದರೆ ಆರೋಗ್ಯ ವಿಚಾರಿಸಲು ಬಂದ ವಾಜಪೇಯಿಯವರ ಪಾದಸ್ಪರ್ಶಕ್ಕೆ ಅನುಮತಿಯನ್ನೂ ಆ ಯೋಧ ಕೇಳಿದ್ದರು. ಏಕೆಂದರೆ ಒಬ್ಬ ದೇಶಭಕ್ತ ಯೋಧ ಮತ್ತು ಕಾಂಗ್ರೆಸಿಗ ಏಕಕಾಲಕ್ಕೆ ಆಗಲು ಸಾಧ್ಯವಿಲ್ಲ ಎಂಬ ಸತ್ಯ ಆಯೂಬ್ ಖಾನರಿಗೆ ತಮ್ಮ ಕೊನೆಕಾಲದಲ್ಲಿ ಅರ್ಥವಾಗಿತ್ತು.
ಹಿಟ್ಲರನ ಗೊಬೆಲ್ಸ್ ಮತ್ತು ನೆಹರೂವಿನ ಗಂಜಿಗಿರಾಕಿಗಳು
– ರಾಕೇಶ್ ಶೆಟ್ಟಿ
‘ಸುಳ್ಳನ್ನೇ ಪದೇ ಪದೇ ಜನರ ಕಿವಿಗೆ ಬೀಳುವಂತೆ ಬೊಬ್ಬೆ ಹೊಡೆಯುತ್ತಾ ಹೋದರೆ ಅದೇ ಸತ್ಯವಾಗುತ್ತ ಹೋಗುತ್ತದೆ’ ಹೀಗೊಂದು ಮಾತನ್ನು ಜರ್ಮನಿಯ ಸರ್ವಾಧಿಕಾರಿ ಹಿಟ್ಲರ್ ಸರ್ಕಾರದಲ್ಲಿ Public Enlightenment & Propaganda ಸಚಿವನಾಗಿದ್ದ ಗೊಬೆಲ್ಸ್ ಹೇಳಿದ್ದನೆಂಬ ಮಾತಿದೆ.ಈ ಮಾತನ್ನು ಗೊಬೆಲ್ಸ್ ಹೇಳಿದ್ದನೋ ಇಲ್ಲವೋ,ಆದರೆ ಈ ಮಾತು ಪ್ರಾಕ್ಟಿಕಲಿ ಸತ್ಯವಂತೂ ಹೌದು.ಬೇಕಿದ್ದರೆ ಗೊಬೆಲ್ಸ್ ಹೇಳಿಕೊಟ್ಟ ಈ ಸೂತ್ರವನ್ನು ಬಳಸುತ್ತಿರುವ ಭಾರತದ ಗಂಜಿಗಿರಾಕಿಗಳನ್ನು ಈ ಬಗ್ಗೆ ಕೇಳಿ ನೋಡಿ. ಉದಾಹರಣೆಗೆ, ಕಳೆದ ಲೋಕಸಭಾ ಚುನಾವಣೆಯ ಪ್ರಚಾರದ ಸಮಾವೇಶವೊಂದರಲ್ಲಿ ನರೇಂದ್ರ ಮೋದಿಯವರು ಮಾತನಾಡುತ್ತ ‘ ಲೂಟಿಕೋರ-ಕಳ್ಳರು ವಿದೇಶದ ಬ್ಯಾಂಕುಗಳಲ್ಲಿ ಎಷ್ಟು ಪ್ರಮಾಣದ ಕಪ್ಪು ಹಣವಿಟ್ಟಿದ್ದಾರೆಂದರೆ,ಅದನ್ನು ವಾಪಸ್ ತಂದರೆ ಭಾರತದ ಪ್ರತಿ ಬಡವನಿಗೆ ೧೫ ಲಕ್ಷದಷ್ಟು ಹಣವನ್ನು ಉಚಿತವಾಗಿ ಕೊಡುವಷ್ಟಿದೆ’ ಎಂದಿದ್ದರು(ಈ ವಿಡಿಯೋ ಈಗಲೂ ಅಂತರ್ಜಾಲದಲ್ಲಿ ಲಭ್ಯವಿದೆ).ಇದೇ ಮಾತನ್ನು ಈಗ ಗಂಜಿಗಿರಾಕಿಗಳೆಂಬ ಗೊಬೆಲ್ಸ್ ಗಳು ‘ಮೋದಿ ಅಧಿಕಾರಕ್ಕೆ ಬಂದ ಮೇಲೆ ನಮ್ಮ ಅಕೌಂಟಿಗೆ ೧೫ ಲಕ್ಷ ಹಣ ಹಾಕ್ತಿನಿ ಅಂದಿದ್ರು.ಹಾಕಿಯೇ ಇಲ್ಲ’ ಎಂದು ಊರಿಡಿ ಬೊಬ್ಬೆ ಹೊಡೆಯಲು ಶುರುವಿಟ್ಟುಕೊಂಡರು. ಈಗ ಈ ಸುಳ್ಳು ಯಾವ ಪರಿ ಹರಡಿದೆಯೆಂದರೆ,ಮೋದಿಯನ್ನು ವಿರೋಧಿಸಲು ಕಾರಣವೇ ಸಿಗದವರು ಎಲ್ರಿ ನಮ್ಮ ೧೫ ಲಕ್ಷ ಎಂದು ಕೇಳುವಷ್ಟು. ವಿಚಿತ್ರವೆಂದರೆ,ಇದು ಗಂಜಿಗಿರಾಕಿಗಳ ಅಪಪ್ರಚಾರದ ಕ್ಯಾಮ್ಪೇನು ಎಂದು ಹೇಳಬೇಕಾದವರೇ ತಡಬಡಾಯಿಸುವಂತಾಗಿದೆ.ಇದೇ ನೋಡಿ GGG Lying Formula (ಗಂಜಿ ಗಿರಾಕಿ ಗೊಬೆಲ್ಸ್ ಸುಳ್ಳಿನ ಸೂತ್ರ)ದ ತಾಕತ್ತು.
ಭಾರತದ ಗಂಜಿಗಿರಾಕಿಗಳ ಗೊಬೆಲ್ಸ್ ಕಾರ್ಯಾಚರಣೆಯ ಬಗ್ಗೆ ಮಾತನಾಡುವ ಮುನ್ನ, ಜರ್ಮನಿಯ ಗೊಬೆಲ್ಸ್ ಪರಿಚಯ ಮಾಡಿಕೊಳ್ಳಬೇಕು,ಆಗ ಅವರಿಬ್ಬರ ಸಾಮ್ಯತೆ ಅರ್ಥವಾದೀತು. ಜರ್ಮನಿಯಲ್ಲಿ National Socialist German Workers’ (Nazi) Party ಹಿಟ್ಲರನ ನೇತೃತ್ವದಲ್ಲಿ ಅಧಿಕಾರಕ್ಕೆ ಬಂದಾಗ, ಪ್ರಪೋಗ್ಯಾಂಡ ಸಚಿವನಾಗಿ ಬಂದವನು ಗೊಬೆಲ್ಸ್. ಹೈಡಲ್ ಬರ್ಗ್ ವಿವಿಯಿಂದ ಸಾಹಿತ್ಯದಲ್ಲಿ ಪಿಹೆಚ್ಡಿ ಪದವಿ ಪಡೆದಿದ್ದ ಚಾಣಾಕ್ಷ ಈತ. ಈತನಿಗೆ ಯಾವುದೇ ಸುಳ್ಳನ್ನು ಸತ್ಯವೆಂದು ಓದುಗರನ್ನು ಮರುಳು ಮಾಡುವ ಬರವಣಿಗೆ ಒಲಿದಿತ್ತು. ಇದರ ಜೊತೆಗೆ ಸಾಹಿತ್ಯ,ಸಿನಿಮಾ,ಕಲೆ ಇವನ ಆಸಕ್ತಿಕರ ಕ್ಷೇತ್ರಗಳು. ಇಷ್ಟೆಲ್ಲಾ ಆಸಕ್ತಿ ಮತ್ತು ಸಾಮರ್ಥ್ಯವಿದ್ದ ವ್ಯಕ್ತಿ ದೇಶದ ಸಾಂಸ್ಕೃತಿಕ ರಾಜಕಾರಣವನ್ನು ತನ್ನ ಕಪಿಮುಷ್ಟಿಯಲ್ಲಿಟ್ಟುಕೊಳ್ಳಲು ಸಮರ್ಥ ವ್ಯಕ್ತಿಯಾಗಿ ಹಿಟ್ಲರನಿಗೆ ಅನ್ನಿಸಿದ್ದು ಸಹಜವೇ. ಅಧಿಕಾರಕ್ಕೆ ಬಂದ ಗೊಬೆಲ್ಸ್ ಕೂಡ ಹಿಟ್ಲರ್ ಸುತ್ತ ನಕಲಿ ಪ್ರಭಾವಳಿಯನ್ನು ಸೃಷ್ಟಿಸುವಲ್ಲಿ ಸಫಲನಾಗಿದ್ದ, ಇವನಿಲ್ಲದಿದ್ದರೆ ಜರ್ಮನಿ ಮತ್ತೊಮ್ಮೆ ಗೌರವಯುತವಾಗಿ ತಲೆ ಎತ್ತಲಾರದು ಎಂದ, ಜನರು ನಂಬಿದರು.