ವಿಷಯದ ವಿವರಗಳಿಗೆ ದಾಟಿರಿ

Archive for

10
ಆಕ್ಟೋ

ಆಗಸಕ್ಕೆ ಏಣಿ ಹಾಕಿದ ನಾಯಕರು..

– ಸುಜಿತ್ ಕುಮಾರ್

ರಿಚರ್ಡ್ ಬ್ರಾನ್ಸನ್:

104631479-GettyImages-124080917.1910x1000ಆತನ ವಯಸ್ಸು 16. ಬಾಲ್ಯವೆಲ್ಲ ಡಿಸ್ಲೆಕ್ಸಿಯಾ ಸಮಸ್ಯೆಯಿಂದ ನರಳಿದ ಆತ ತನ್ನ ಜೀವನದ ಅತಿ ಮಹತ್ವದ ಘಟ್ಟದಲ್ಲಿ ನಿಂತಿದ್ದಾನೆ. ಓದಲು, ಕಲಿಯಲು ಮನಸ್ಸಿದ್ದರೂ ದೇಹ ಸಾಥ್ ನೀಡುತ್ತಿಲ್ಲ. ಹಿಂದಿಯ ‘ತಾರೆ ಝಮೀನ್ ಪರ್’ ಚಿತ್ರವನ್ನು ನೋಡಿದವರಿಗೆ ಈ ಸಮಸ್ಯೆಯ ಆಳ ಒಂದಿಷ್ಟು ಅರಿಯಬಹುದು. ಅಂದು ಆತನ ಶಾಲೆಯ ಕೊನೆ ದಿನ. ಓದಲು ಬರೆಯಲು ಆಗದು ಎಂದರಿತ ಪೋಷಕರು ಆತನನ್ನು ಶಾಲೆಯಿಂದ ತೆಗೆಯುವ ನಿರ್ಧಾರವನ್ನು ಮಾಡಿದ್ದಾರೆ. ಆ ಎಳೆಯ ಹುಡುಗ ತನ್ನ ಸ್ನೇಹಿತರಿಂದ, ಶಾಲೆಯಿಂದ ದೂರವಾಗುತ್ತಿದ್ದಾನೆ. ಶಿಕ್ಷಕರಲೊಬ್ಬರು ಈತ ಹೊರಡುವಾಗ ‘ನೀನು ಮುಂದೆ ಒಂದೋ ಅಪರಾದಿಯಾಗಿ ಜೈಲಿನಲ್ಲಿ ಕೊಳೆಯುತ್ತೀಯ ಇಲ್ಲವಾದರೆ ಒಬ್ಬ ಕೋಟ್ಯಧಿಪತಿಯಾಗಿ ಬೆಳೆಯುತ್ತೀಯ’ ಎಂದು ದ್ವಂದ್ವದ ಹಾರೈಕೆಯೊಂದನ್ನು ನೀಡಿ ಬೀಳ್ಕೊಟ್ಟರು. ಮತ್ತಷ್ಟು ಓದು »