ಸ್ವದೇಶೀ ಆಂದೋಲನದ ಭಗೀರಥ: ರಾಜೀವ ದೀಕ್ಷಿತ!
– ತುರುವೇಕೆರೆ ಪ್ರಸಾದ್
ಕಂಪ್ಯೂಟರ್ ಇಂಜನಿಯರಿಂಗ್‍ನಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದ ಒಬ್ಬ ಪ್ರತಿಭಾವಂತ ಯುವಕ, ಇಲೆಕ್ಟ್ರಾನಿಕ್ ಹಾಗೂ ಟೆಲಿಕಮ್ಯುನಿಕೇಶನ್‍ನಲ್ಲಿ ಉನ್ನತ ಶಿಕ್ಷಣ ಪಡೆದಿದ್ದ ಒಬ್ಬ ಮೇಧಾವಿ,ಹೆಸರಾಂತ ಸಂಶೋಧನಾ ಸಂಸ್ಥೆ ಸಿ.ಎಸ್.ಐ.ಆರ್‍ನಲ್ಲಿ ಸೆಟೆಲೈಟ್ ಕಮ್ಯುನಿಕೇಶನ್‍ನಲ್ಲಿ ವಿಜ್ಞಾನಿಯಾಗಿ ದುಡಿದಿದ್ದವರು, ಮನಸ್ಸು ಮಾಡಿದ್ದರೆ ವಿದೇಶಗಳಲ್ಲಿ ವೈಭವದ ಐಶಾರಾಮಿ ಜೀವನ ನಡೆಸಬಹುದಾಗಿದ್ದ ಒಬ್ಬ ಯುವಕ ಈ ದೇಶದ ದುರ್ಘಟನೆಯೊಂದರ ಸಂತ್ರಸ್ತರಿಗಾಗಿ ತನ್ನ ಸುಖ, ಸಂತೋಷ ಎಲ್ಲಾ ತ್ಯಾಗ ಮಾಡುತ್ತಾರೆ. ಸಂತ್ರಸ್ತರಿಗೆ, ಅನ್ಯಾಯಕ್ಕೊಳಗಾದವರಿಗೆ ನ್ಯಾಯ ದೊರಕಿಸಿಕೊಡುವುದಕ್ಕಾಗಿ ಒಂದು ಅಂದೋಲನವನ್ನೇ ಆರಂಭಿಸಿ ತನ್ನ ಜೀವನವನ್ನೇ ಅದಕ್ಕಾಗಿ ಮೀಸಲಿಡುತ್ತಾರೆ. ಭಾರತ ಎದೆಂದಿಗೂ ಎದೆಯುಬ್ಬಿಸಿ, ತಲೆಎತ್ತಿ ಹೆಮ್ಮೆಯಿಂದ ಕೂಗಿ ಹೇಳಿಕೊಳ್ಳಬಹುದಾದ ಆ ಅದಮ್ಯ ಚೇತನವೇ ದೇಶಭಕ್ತ ರಾಜೀವ್ ದೀಕ್ಷಿತ್, ಅವರು ಪ್ರಾರಂಭಿಸಿದ ಆಂದೋಲನವೇ ‘ಆಜಾದಿ ಬಚಾವೋ’ ಆಂದೋಲನ. ಮತ್ತಷ್ಟು ಓದು