ಸಂಸದರ ಸಮೇತ ಇಡೀ ಪಾರ್ಲಿಮೆಂಟನ್ನೇ ಮಾರಿದ ಭೂಪನೀತ!!
– ಸುಜಿತ್ ಕುಮಾರ್
ಪ್ರತಿಭೆ. ಎಲ್ಲೆಂದರಲ್ಲಿ ಎಲ್ಲರಿಗೂ ಸಿಗುವ ವಸ್ತುವಂತು ಇದು ಅಲ್ಲವೇ ಅಲ್ಲ. ಹುಟ್ಟುತ್ತಲೇ ಬರುವ ಪ್ರತಿಭೆಯನ್ನು ಹೇಗೆ ಪ್ರತಿಭೆಯೆಂದೆನ್ನಲಾಗದೋ ಹಾಗೆಯೇ ಕಷ್ಟ ಪಟ್ಟು ಗಿಟ್ಟಿಸಿಕೊಳ್ಳುವ ಪ್ರತಿಭೆಯನ್ನು ಪ್ರತಿಭೆಯೆಂದೆನ್ನಲಾಗದಿರದು! ಹಾಗೆ ಅದನ್ನು ಅದನ್ನು ಗಿಟ್ಟಿಸಿಕೊಳ್ಳಲು ಸವೆಸಬೇಕಾದ ಹಾದಿಯೂ ಸಹ ಬಲು ದುರ್ಘಮ. ಒಮ್ಮೆ ದೊರೆತರೆ ಮೇಲು-ಕೀಳು, ಬಡವ-ಬಲ್ಲಿದ, ಕಳ್ಳ ಕಾಕರ್ಯಾರನ್ನೂ ಸಹ ಅದು ಪರಿಗಣಿಸುವುದಿಲ್ಲ. ಕಾರ್ಯಗಳು ಒಳ್ಳೆವೋ, ಕೆಟ್ಟವೋ ಅಥವಾ ಉಪಯೋಗ ದುಷ್ಪಾರಿಣಾಮಗಳೇನೇ ಇದ್ದರೂ ಲೆಕ್ಕಿಸದೆ ಆಡಿಸುವವನ ಕೈಚಳಕದಲ್ಲಿ ಪ್ರತಿಭೆಯೂ ಕೂಡ ಆಡತೊಡಗುತ್ತದೆ. ವಿಶ್ವೇಶ್ವರೈಯ್ಯ, ಸತ್ಯಜಿತ್ ರೇ, ವಿರಾಟ್ ಕೊಹ್ಲಿ ಅಥವಾ ಧೀರೂಭಾಯಿ ಅಂಬಾನಿಯಂತಹ ಹಲವರೊಟ್ಟಿಗಿದ್ದ/ಇರುವ ವಿಭಿನ್ನ ಹಾಗು ವಿಶಿಷ್ಟ ಪ್ರತಿಭೆಯೇ ಅವರನ್ನು ಇಂದು ದೇಶದ ಇತಿಹಾಸದಲ್ಲಿ ದಂತಕತೆಗಳನ್ನಾಗಿ ಮಾಡಿದೆ. ಅಂತೆಯೇ ವೀರಪ್ಪನ್, ಸದ್ದಾಂ ಹುಸೇನ್, ಒಸಾಮಾ ಬಿನ್ ಲಾಡೆನ್ರಂತಹ ನರರಾಕ್ಷಸರ ಕೈಯ ಬೆಂಕಿಯ ಉಂಡೆಯಂತೆಯೂ ಅದು ಸಾವಿರಾರು ಜನರ ವಂಚನೆ ಹಾಗು ಮಾರಣಹೋಮದಲ್ಲಿ ಪರೋಕ್ಷವಾಗಿಯೂ ಸಹಕರಿಸಿದೆ! ಇಂತಹದ್ದೇ ಪ್ರತಿಭೆಯನ್ನು ಬೆಳೆಸಿಕೊಂಡು ಬಂದ ಹಲವರು ದೇಶದ ನಾನಾ ಜೈಲುಗಲ್ಲಿ ಬಂದಿಯಾಗಿ, ಶಿಕ್ಷೆಗಳೆಲ್ಲವನ್ನೂ ಅನುಭವಿಸಿದರೆ ಕೆಲವರು ಅಲ್ಲಿಯೇ ಕೊಳೆತು ಕೊನೆಯುಸುರೆಳೆದಿದ್ದಾರೆ. ಇನ್ನು ಕೆಲವರು ತಮ್ಮ ಕೊನೆಗಾಲದಲ್ಲಿ ಕುಂಟುತ್ತಾ ಕೊರಗುತ್ತಾ ಹೊರಬರುತ್ತಾರೆ ಮತ್ತೂ ಕೆಲವರು ಮಾತ್ರ ಒಂದಲ್ಲ, ಎರಡಲ್ಲ ಹತ್ತಾರು ಭಾರಿ ಅಂತಹ ಭಾರಿ ಜೈಲುಗಳಿಗೇ ಚಳ್ಳೆಹಣ್ಣನು ತಿನ್ನಿಸಿ ಹೊರ ಓಡಿರುವುದೂ ಉಂಟು. ಅಲ್ಲೂ ಇದ್ದ ಆ ಅಮೂಲ್ಯ ಅಂಶವೇ ಪ್ರತಿಭೆ! ಇಂತಹ ಪ್ರತಿಭೆಗಳ ಮಾಸ್ಟರ್ ಗೇಮ್ಗಳನ್ನು ನಾವು ಹಲವಾರು ಚಿತ್ರಗಳಲ್ಲಿ ಕಂಡು ಬೆರಗಾಗಿದ್ದೇವೆ. ಅಂತಹ ಪ್ರತಿಭೆಯುಳ್ಳವನು ಒಬ್ಬ ವಿಲನ್ ನಂತಾದರೂ ನೋಡುಗರನೇಕರಿಗೆ ಮಾತ್ರ ನಾಯಕಶ್ರೇಷ್ಠ! ಮತ್ತಷ್ಟು ಓದು