ಬಾರ್ಡರ್-ಗವಾಸ್ಕರ್ ಸರಣಿ : ಅಂದು – ಇಂದು!
– ಸುಜಿತ್ ಕುಮಾರ್
ಸ್ಥಳ : ಕೊಲ್ಕತ್ತಾ. ಮಾರ್ಚ್ 15, 2001.
ಮೊದಲ ಇನ್ನಿಂಗ್ಸ್ :
ಆಸ್ಟ್ರೇಲಿಯ : 445/10
ಭಾರತ : 212/10
ಎರಡನೇ ಇನ್ನಿಂಗ್ಸ್ 😦 ಫಾಲೋ ಆನ್ )
ಭಾರತ : 657/7 (D)
ಆಸ್ಟ್ರೇಲಿಯ : 171/10
ಆ ದಿನದ ಸೂರ್ಯ ಪಶ್ಚಿಮದಲ್ಲಿ ಮರೆಯಾಗುತ್ತಾ ಕ್ರಿಕೆಟ್ ಲೋಕದ ಮಹಾ ಅಚ್ಚರಿಯೊಂದಕ್ಕೆ ಸಾಕ್ಷಿಯಾದನು. ಕ್ರಿಕೆಟ್ ಇತಿಹಾಸದ ಪುಟಗಳಲ್ಲಿ ಅಚ್ಚಳಿಯದೆ ಉಳಿದ ಆ ಟೆಸ್ಟ್ ಭಾರತದ ಪಾಲಿಗಂತೂ ವಿಶ್ವಕಪ್ನನ್ನೇ ಗೆದ್ದು ಬೀಗಿದ ಅನುಭವವನ್ನು ನೀಡಿತು. ಅಂದು ಕೋಲ್ಕತ್ತದ ಆಗಸ ರಂಗು ರಂಗಿನ ಪಟಾಕಿಗಳಿಂದ ಶೃಂಗಾರಗೊಳ್ಳುತ್ತಿದ್ದರೆ ಇತ್ತ ಕಡೆ ಇಡೀ ದೇಶವೇ ಹಬ್ಬದ ವಾತಾವರಣವೇನೋ ಎಂಬ ಸಂಭ್ರಮದಲ್ಲಿ ನಲಿಯಿತು. V V S ಲಕ್ಷ್ಮಣ್, ಹರ್ಭಜನ್ ಸಿಂಗ್ ಹಾಗು ರಾಹುಲ್ ದ್ರಾವಿಡ್ ಅಂದು ಖಾನ್, ರೋಷನ್ ಹಾಗು ಬಚ್ಚನ್ ರೆಲ್ಲರನ್ನೂ ಹಿಂದಿಕ್ಕಿ ದೇಶದ ಜನಮಾನಸದಲ್ಲಿ ಹೀರೋಗಳಾಗಿಬಿಟ್ಟರು. ಒಟ್ಟು 557 ರನ್ಗಳು ಹಾಗು 13 ವಿಕೆಟ್ಗಳ ಈ ಮೂವರ ಆಟ ಅಂದು ವಿಶ್ವ ಕ್ರಿಕೆಟ್ನಲ್ಲಿ ಮ್ಯಾಚ್ ಫಿಕ್ಸಿಂಗ್ ಎಂಬ ಸ್ಲೋ ಪಾಯಿಸನ್ನಿಂದ ನೇಪಥ್ಯಕ್ಕೆ ಸೇರುತ್ತಿದ್ದ ಭಾರತೀಯ ಕ್ರಿಕೆಟ್ನ ಪುನರ್ಜನ್ಮಕ್ಕೆ ಕಾರಣವಾಯಿತು. ಹೈಡೆನ್, ಲ್ಯಾಂಗರ್, ಪಾಂಟಿಂಗ್, ವಾ ಬ್ರದರ್ಸ್, ಗಿಲ್ಕ್ರಿಸ್ಟ್, ವಾರ್ನ್, ಗಿಲ್ಲೆಸ್ಪಿ, ಮೆಗ್ರಾತ್ ಎಂಬ ಕ್ರಿಕೆಟ್ ದಂತಕತೆಗಳೇ ತುಂಬಿದ್ದ ತಂಡವೊಂದನ್ನು ಫಾಲೋ ಆನ್ ನ ಹೊರತಾಗಿಯೂ ಸಿನಿಮೀಯ ರೀತಿಯಲ್ಲಿ ಸೋಲಿಸುವುದು ಅಂದಿನ ಕಾಲಕಷ್ಟೆ ಅಲ್ಲದೆ ಇಂದಿಗೂ ಸಹ ಸಾಮಾನ್ಯದ ಮಾತಲ್ಲ. ಮೊದಲ ಟೆಸ್ಟ್ ನಲ್ಲಿ ಸೋತು ಎರಡನೇ ಟೆಸ್ಟನ್ನು ಇಲ್ಲಿ ದಾಖಲೆಯ ಅಂಕಿ ಅಂಶಗಳೊಟ್ಟಿಗೆ ಗೆದ್ದ ಭಾರತ ಅದೇ ಆತ್ಮವಿಶ್ವಾಸದಲ್ಲಿ ಮೂರನೆಯ ಹಾಗು ಅಂತಿಮ ಟೆಸ್ಟನ್ನು ಗೆದ್ದು ಸರಣಿಯನ್ನು ವಶಪಡಿಸಿಕೊಂಡಿತು. ಆ ಮೂಲಕ ಭಾರತದ ನೆಲದಲ್ಲಿ ಟೆಸ್ಟ್ ಸರಣಿ ಗೆಲ್ಲುವ ಕಾಂಗರೂಗಳ ಮೂರು ದಶಕದ ಕನಸಿಗೆ ತಣ್ಣಿರೆರಚಿತು! ಮತ್ತಷ್ಟು ಓದು