820 ಗುಳಿಗೆಗಳನ್ನು ತಿನ್ನಿಸಿ ಪರಾರಿಯಾದ 420
– ಸುಜಿತ್ ಕುಮಾರ್
ತಿಹಾರ್ ಜೈಲು. ಬಹುಶಃ ಈ ಹೆಸರನ್ನಿಂದು ಕೇಳಿರದವರಿರಲು ಸಾಧ್ಯವೇ ಇಲ್ಲ. ದೇಶ-ವಿದೇಶದ ಹೈ ಪ್ರೊಫೈಲ್ ನಟೋರಿಯಸ್ ಕ್ರಿಮಿನಲ್ ಗಳನ್ನು ಬಂಧಿಸುವ ಈ ಕಾರಾಗೃಹ ದೇಶದ ಅಷ್ಟೂ ಜೈಲುಗಳಿಗಿಂತಲೂ ಅತಿ ಹೆಚ್ಚಿನ ಭದ್ರತೆಯನ್ನೊಳಗೊಂಡ ಚಕ್ರವ್ಯೂಹವೆಂದೇ ಹೇಳಬಹುದು! ಅಪ್ಪಿ-ತಪ್ಪಿ ಒಂದು ಇಲಿಮರಿಯೂ ಸಹ ಒಳಹೊಕ್ಕರೆ ಹೊರ ಬರಲು ಪೇಚಾಡುವಂತಹ ಭದ್ರತೆಯ ಈ ಜೈಲಿನಿಂದ ಎಸ್ಕೇಪ್ ಆಗುವುದೆಂದರೆ ಆತ ಒಬ್ಬ ದೇವದೂತನಾಗಿರಬೇಕೇ ವಿನಃ ಸಾಮಾನ್ಯ ವ್ಯಕ್ತಿಯಾಗಿರಲಂತೂ ಸಾಧ್ಯವೇ ಇಲ್ಲ! ಆದರೂ, ಅಲ್ಲೊಬ್ಬ ಇಲ್ಲೊಬ್ಬ ಕೋಟಿಗೊಬ್ಬನಂತಹ ಕಿಲಾಡಿಗಳು ಇಲ್ಲೂ ಸಹ ತಮ್ಮ ಕೈಚಳಕವನ್ನು ತೋರಿ ಅಂತಹ ಭಾರಿ ಭದ್ರತೆಯ ಕೋಟೆಯನ್ನೇ ಮೀಟಿ ಪರಾರಿಯಾದದ್ದುಂಟು. ಇಂತಹ ಪ್ರತಿಭಾನ್ವಿತ ದೇಹದೂತರ ಕೆಲ ರೋಚಕ ಕತೆಗಳು ದೇಶದ ಇತಿಹಾಸದಲ್ಲಿ ಇಂದು ಹಚ್ಚಳಿಯಾಗಿ ಉಳಿದುಕೊಂಡಿವೆ. ಆ ಪ್ರತಿಭಾನ್ವಿತ ಕ್ರಿಮಿನಲ್ಗಳ ದೇಶೀ / ವಿದೇಶಿ ಕ್ಯಾರೆಕ್ಟರ್ ಗಳು ಇಂದು ದೇಶ ವಿದೇಶದ ಹಲವಾರು ಚಿತ್ರಗಳಲ್ಲಿ ನಾಯಕನಟರಾಗಿ ನಟಿಸಿ ಹಲವೆಡೆ ‘ಸ್ಫೂರ್ತಿ’ದಾಯಕವೂ ಆಗಿವೆ ಎಂದರೆ ಅದು ನಮ್ಮೆಲ್ಲರ ವಿಪರ್ಯಾಸವೇ ಸರಿ! ಮತ್ತಷ್ಟು ಓದು