ಹೊಲವನು ಉಳುತಾ ಅಳುವಾ ಯೋಗಿಯ ನೋಡಿಲ್ಲಿ!
– ತುರುವೇಕೆರೆ ಪ್ರಸಾದ್
ಪಂಚವಟಿ
ನಂ.6, 13ನೇ ವಾರ್ಡ್
ಗಾಂಧಿನಗರ
ತುರುವೇಕೆರೆ-572227
ಇಂದು ಮಾಜಿ ಪ್ರಧಾನಿ ಚೌದುರಿ ಚರಣ್‍ಸಿಂಗ್ ಹೆಸರಲ್ಲಿ ನಾವು ಮತ್ತೊಂದು ರಾಷ್ಟ್ರೀಯ ರೈತ ದಿನವನ್ನು ಆಚರಿಸುತ್ತಿದ್ದೇವೆ. ಆದರೆ ಡಿ.23 ರಾಷ್ಟ್ರೀಯ ರೈತ ದಿನ ಎಂದು ಬಹುತೇಕರಿಗೆ ಗೊತ್ತಿರಲಿಕ್ಕಿಲ್ಲ. ನೆಹರು, ಇಂದಿರಾ, ರಾಜೀವ್ ಜಯಂತಿಯಂತೆ ರೈತ ದಿನಾಚರಣೆ ಬಗ್ಗೆ ಯಾವ ಪಠ್ಯಪುಸ್ತಕದಲ್ಲೂ ಉಲ್ಲೇಖವೂ ಇರಲಿಕ್ಕಿಲ್ಲ. ತಮ್ಮ ಹೆಸರಿನಲ್ಲಿ ಈ ರೀತಿ ಸರ್ಕಾರಗಳು, ಜನಪ್ರತಿನಿಧಿಗಳು ದೊಡ್ಡ ಮನುಷ್ಯರು ರೈತದಿನಾಚರಣೆ ಎಂಬ ನಾಮಕಾವಸ್ಥೆ ಆಚರಣೆ ನಡೆಸುತ್ತಾರೆಂಬುದು ಬಹುಶಃ ಲಕ್ಷಾಂತರ ರೈತರಿಗೇ ಗೊತ್ತಿರಲಿಕ್ಕಿಲ್ಲ. ಟಿಪ್ಪು ಜಯಂತಿಗೆ ಮಾಡಿಕೊಂಡಂತೆ ಸರ್ಕಾರವೇನೂ ವಾರಗಟ್ಟಲೆ ಮುಂಚೆ ರೈತ ದಿನಾಚರಣೆಗೆ ಸಕಲ ಸಿದ್ಧತೆ ಮಾಡಿಕೊಂಡ ವರದಿ, ಸುದ್ದಿ ಯಾವ ಪತ್ರಿಕೆಯಲ್ಲೂ ಬರುವುದಿಲ್ಲ. ಇಂತಹ ಒಂದು ದಿನವನ್ನು ಅರ್ಥಪೂರ್ಣವಾಗಿ ಮಾಡಬೇಕು, ಸಂಭ್ರಮದಿಂದ ಆಚರಿಸಬೇಕು, ಅದೊಂದು ರೈತರ ಹಬ್ಬವಾಗಬೇಕು ಎಂದು ಯಾವ ಬುದ್ದಿಜೀವಿಗಳ ದಂಡೂ ಸರ್ಕಾರವನ್ನು ಒತ್ತಾಯಿಸುವುದಿಲ್ಲ. ಅದರ ರೂಪರೇಷೆಗೆ ಸಂವಾದ, ಗೋಷ್ಠಿ, ಚಿಂತನೆಗಳು ನಡೆಯುವುದೂ ಇಲ್ಲ. ಇದೆಲ್ಲಾ ನಮ್ಮ ಅನ್ನದಾತನನ್ನು ನಾವು ಯಾವ ದುಸ್ಥಿತಿಯಲ್ಲಿ ಇಟ್ಟಿದ್ದೇವೆ ಮತ್ತು ಅವನಿಗೆ ನಾವು ಯಾವ ಗೌರವ ಸಲ್ಲಿಸುತ್ತಿದ್ದೇವೆ ಎಂಬುದರ ದ್ಯೋತಕ. ಮತ್ತಷ್ಟು ಓದು