ಕಾಲು ಶತಮಾನ ಜನಮಾನಸವನ್ನು ಆಳಿದ ಕತೆಯೊಂದರ ಕತೆ!
– ಸುಜಿತ್ ಕುಮಾರ್
ಭಾರತೀಯರ ಸಿನಿಮಾ ಕ್ರೆಝೇ ಅಂತಹದ್ದು. ಜನಜೀವನದ ವಿವಿಧ ಸ್ತರಗಳಲ್ಲಿ ಸಿಕ್ಕಾಪಟ್ಟೆ ಹಾಸುಹೊಕ್ಕಿರುವ ಈ ಸಿನಿಮಾ ಎಂಬ ಮಾಯೆ ಒಂಥರ ಊಟಕ್ಕೆ ಬೇಕಾದ ಉಪ್ಪಿನಕ್ಕಾಯಿಯಂತೆ. ಉಪ್ಪಿನಕ್ಕಾಯಿ ಇಲ್ಲದೆಯೇ ಊಟ ಮಾಡಬಹುದಾದರೂ ನಮ್ಮಲ್ಲಿ ಕೆಲವೆಡೆ ಅದೇ ಊಟವಾಗಿಬಿಡುತ್ತದೆ! ಜೀವನದ ಅಷ್ಟೂ ಸಂಕಷ್ಟಗಳಿಗೆ ಆಧ್ಯಾತ್ಮದ ಮೊರೆ ಹೋಗುವ ಗುಂಪು ಒಂದೆಡೆಯಾದರೆ ಅದಕ್ಕಿಂತಲೂ ನೂರು ಪಟ್ಟು ದೊಡ್ಡ ಗುಂಪು ತಮ್ಮ ತಮ್ಮ ಕಷ್ಟ ದುಃಖಗಳಿಗೆ ಆ ಸಿನಿಮಾಗಳ ಹಿಂದೆ ಬೀಳುವುದನ್ನು ಇಲ್ಲಿ ಅಲ್ಲಗೆಳೆಯಲಾಗುವುದಿಲ್ಲ. ಅದ್ಯಾವುದೋ ಕ್ರಿಸ್ತ ಪೂರ್ವ ಜಮಾನದಲ್ಲಿ ಕೈಕೊಟ್ಟ ಹುಡುಗಿಯ ನೆನಪಲ್ಲಿ ಮೀಯಲು ಅಥವಾ ಗುಡುಗು ಸಿಡಿಲುಗಳ ಆರ್ಭಟದ ನಡುವೆಯೂ ಕಿಲೋಮೀಟರ್ಗಟ್ಟಲೆ ದೂರ ನಿಂತು ಪ್ರೀತಿ ನಿವೇದನೆ ಮಾಡುವ ಮ್ಯಾಜಿಕನ್ನು ಕಂಡು ಬೆರಗಾಗಲು ಅಥವ ಪಠ್ಯ ಪುಸ್ತಕಗಳ ಬದನೇಕಾಯಿ ಎನುತ ಮೂರು ನಿಮಿಷದಲ್ಲಿ ಕೋಟ್ಯಾದಿಪತಿಯಾಗುವ ‘ಇಸ್ಟೈಲ’ನ್ನು ನೋಡಿ inspire ಆಗಲು ಅಥವಾ ಆಫೀಸಿನಲ್ಲಿ ತನ್ನ ಬಾಸಿನ ಮೇಲಿನ ಸಿಟ್ಟನ್ನು ಇಲ್ಲಿ ಹೀರೊ ವಿಲನ್ಸ್ ಗಳಿಗೆ ತದುಕುವ ಪೆಟ್ಟುಗಳಲ್ಲಿ ದಮನಮಾಡಿಕೊಳ್ಳಲು ಅಥವಾ ವಯಸ್ಸಿನ ಹುಡುಗ ಹುಡುಗಿಯರಿಗೆ ಆ ಹೊರಗಿನ ಕೆಟ್ಟ ಜಗತ್ತಿನಲ್ಲಿ ಕಪ್ಪುಕೋಣೆಯ ನಾಲ್ಕಡಿ ಜಾಗ ಸ್ವರ್ಗಲೋಕವಾಗಲು.. ಒಂದೇ ಎರಡೇ ಇಂತಹ ಹಲವಾರು ಕಾರಣಗಳಿಂದ ಸಿನಿಮಾ ಹಾಗು ಥಿಯೇಟರ್ ಗಳು ನಮ್ಮವರಿಗೆ ವಿಪರೀತ ಹತ್ತಿರವಾಗಿವೆ. ಇನ್ನು ನಟ ನಟಿಯರ ವಿಚಾರಕ್ಕೆ ಬಂದರಂತೂ ಕತೆಬರೆದು, ಸೆಟ್ ಹಾಕಿ, ಸಂಗೀತ ಕರೆದು, ಹಾಡಿ, ಹಣ ಸುರಿದು, ಬೆಳಕಿಡಿದು ದುಡಿಯುವ ನೂರಾರು ಜನರನ್ನೂ ಮರೆತು ಕ್ಯಾಮರಾದ ಮುಂದೆ ಕಾಣುವ ಆ ಒಂದು ಚಹರೆಗೆ ಕಠೋರ ತಪಸ್ಸಿಗೆ ದೊರಕುವ ಭಗವಂತನ ದರ್ಶನದಂತೆ ಆಡುವ ಜನರ ಗುಂಪು ಒಂದೆಡೆಯಾದರೆ ಕೆಲವೆಡೆ ಅಂತಹ ಚಹರೆಗಳು ಅಂತಹ ದೇವರೆಂಬ ಪವರ್ಫುಲ್ ಶಕ್ತಿಗೇ ಒಂದು ಗೇಣು ಕೀಳು! ಇಂತಹ ಹತ್ತಾರು ನೂರಾರು ಕಾರಣಗಳಿಂದಲೇ ಇಂದು ಭಾರತೀಯ ಸಿನಿಮಾ ಇಂಡಸ್ಟ್ರಿ ಇಡೀ ವಿಶ್ವದಲ್ಲಿಯೇ ಅತಿ ಶ್ರೀಮಂತ ಇಂಡಸ್ಟ್ರಿ ಎನಿಸಿಕೊಂಡಿದೆ. ಇದು ವಿಪರ್ಯಾಸವೋ, ಹಾಸ್ಯವೋ ಅಥವಾ ಆಯಾಸವವೋ ಹೇಳುವುದು ಕಷ್ಟ. ಆದರೆ ಒಂದು ಮಾತ್ರ ಸತ್ಯ. ಒಂದು ಕಾಲು ಬಿಲಿಯನ್ ಜನರ ನಮ್ಮ ದೇಶದಲ್ಲಿ ಒಬ್ಬೊಬ್ಬರಿಗೆ ಇರುವ ಹತ್ತಾರು ಕನಸುಗಳು ನನಸಾಗದ ನೋವುಗಳಿಗೆ, ಹತಾಶೆಗಳಿಗೆ ತೆರೆಯ ಮೇಲೆ ಕಾಣುವ ಆ ಕಾಲ್ಪನಿಕ ಚಿತ್ರ ಒಂದು ಬಗೆಯ ಸಾಂತ್ವಾನವನ್ನು ನೀಡಬಲ್ಲದು. ಅದಕ್ಕೆ ಆ ಶಕ್ತಿ ಇದೆ! ಕೆಲಚಿತ್ರಗಳನಂತೂ ನಮ್ಮವರು ಅದ್ಯಾವ ಪರಿ ಹಚ್ಚಿಕೊಳ್ಳುತ್ತಾರೆ ಎಂದರೆ ದಶಕಗಳವರೆಗೂ ಅದನ್ನು ಥಿಯೇಟರ್ ಗಳಿಂದ ತೆಗೆಯಲು ಬಿಡುವುದಿಲ್ಲ. ಯಸ್ ದಶಕ I mean ಡೇಕೇಡ್ಸ್! ಮತ್ತಷ್ಟು ಓದು