ವಿಷಯದ ವಿವರಗಳಿಗೆ ದಾಟಿರಿ

ಸೆಪ್ಟೆಂಬರ್ 11, 2024

ಟಿಪ್ಪುವಿನ‌ ಮುಚ್ಚಿಟ್ಟ ಅಸಲಿ ಕಥೆಯನ್ನು ಬಿಚ್ಚಿಟ್ಟ ನಿಲುಮೆ ಪ್ರಕಾಶನದ ಹೊಸ ಪುಸ್ತಕ “ಮುಚ್ಚಿಟ್ಟಕರ್ನಾಟಕಚರಿತ್ರೆ”

‍ನಿಲುಮೆ ಮೂಲಕ

ಪುರುಷೋತ್ತಮ ಸಾಲಿಯಾನ್

ಅಸಲಿ ಚರಿತ್ರೆಯನ್ನು ಚಾಲ್ತಿಗೆ ತರುವ ಭಾಗವಾಗಿ ಹಲವಾರು ಪುಸ್ತಕಗಳ ಅಧ್ಯಯನದ ಜೊತೆಗೆ, ಕ್ಷೇತ್ರ ಕಾರ್ಯವನ್ನೂ ಕೈಗೊಂಡು ಬರೆದಿರುವ ಈ ಪುಸ್ತಕದಲ್ಲಿ ಮನಸ್ಸಿಗೆ ಮುಟ್ಟುವಂತೆ ಅಕ್ಷರಗಳು ಅಚ್ಚೊತ್ತಿದೆ.

ಹೆಣ್ಣು ಒಲಿದರೆ ನಾರಿ ಮುನಿದರೆ ಮಾರಿ ಎಂಬ ನಾಣ್ಣುಡಿ ಈ ಪುಸ್ತಕದಲ್ಲಿ ಮತ್ತೆ ರುಜುವಾತಗಿದೆ. ಒಂದು ಕಡೆ ಟಿಪ್ಪು ಹೈದರಾಲಿ ಜತೆಗೆ ಸೇರ್ಕೊಂಡ ಪೂರ್ಣಯ್ಯ ಇವರೆಲ್ಲರೂ ಸೇರಿ ಮೈಸೂರು ಸಂಸ್ಥಾನ ಮುಗಿಸಬೇಕೆಂಬ ಆಸೆಗೆ ಬಿದ್ದಾಗಲೇ ನೋಡಿ ರಾಣಿಯಾಗಿದ್ದವಳು ಆ ಮೂವರ ಪಾಲಿಗೆ ಮಾರಿಯಾಗಿ ಬಿಟ್ಟರು.

ಅದ್ಭುತವಾಗಿ ಅಕ್ಷರಗಳನ್ನು ಪೋಣಿಸಿ ಹೊರಬಂದಿರುವ ಕರ್ನಾಟಕದ ಮುಚ್ಚಿಟ್ಟ ಚರಿತ್ರೆ ಸದ್ಯ ಎರಡನೇ ಮುದ್ರಣಕ್ಕೆ ಅಣಿಯಾಗಿದೆ.

ನಮ್ಮದು ಶಕ್ತಿ ಆರಾಧಕರ ದೇಶ. ಮಹಾರಾಣಿಯವರ ಮೂಲಕ ಆ ಶಕ್ತಿ ಇಡೀ ಮೈಸೂರು ರಾಜ್ಯವನ್ನು ಉಳಿಸಿದ ಅಸಲಿ ಕಥೆಯನ್ನು ಈ ಪುಸ್ತಕದಲ್ಲಿ ಉಲ್ಲೇಖಿಸಲಾಗಿದೆ.

ಅದರ ಜತೆಗೆ ಅರಮನೆಯ ದಿವಾನರಾಗಿದ್ದ ಪೂರ್ಣಯ್ಯ ಮಾಡಿದ್ದ ಕುತಂತ್ರ ಹಾಗೂ ಮೋಸದಾಟವನ್ನು ಕೂಡ ಉಲ್ಲೇಖಿಸಲಾಗಿದೆ.

ಒಬ್ಬ ಒಡೆಯ(ಅರಸ)ನಾಗಬೇಕಾದ ವ್ಯಕ್ತಿ, ಶ್ರೀರಂಗಪಟ್ಟಣ ರಂಗನಾಥಸ್ವಾಮಿ ದೇಗುಲದ ಬದಿಯಲ್ಲಿರುವ ಶ್ರೀ ಕೃಷ್ಣ ದೇವಸ್ಥಾನದಲ್ಲಿ ಗುಟ್ಟಾಗಿ ಹುಟ್ಟಿದ !
ಯಾಕೇ ಹುಟ್ಟಿದ? ಗುಟ್ಟಾಗಿ ಕೃಷ್ಣ ದೇವಾಲಯದಲ್ಲಿ ಜನಿಸಲು ಕಾರಣ ಏನು ಎಂಬುದನ್ನು ಸ್ಪಷ್ಟವಾಗಿ ಬರೆದಿದ್ದಾರೆ.

ಬಸಿರಾದ ಹೆಣ್ಣು ಮಗಳೊಬ್ಬಳು ತಾಯ್ತನ ಪಡೆಯಲು ಎಷ್ಟು ಕಷ್ಟ ಪಡುತ್ತಾಳೆ, ಮಗುವನ್ನು ಉಳಿಸಲು ಪಟ್ಟ ಹರಸಾಹ ಅಂದರೆ, ಮುಮ್ಮಡಿಯ ಜನನಕ್ಕಾಗಿ ಪಟ್ಟ ಕಷ್ಟ, ಟಿಪ್ಪು ಮಾಡಿದ ಅನ್ಯಾಯ ಕಣ್ಣಮುಂದೆ ಹಾಗೇಯೆ ಹಾದುಹೋಗಿದೆ “#ಮುಚ್ಚಿಟ್ಟಕರ್ನಾಟಕಚರಿತ್ರೆ” ಪುಸ್ತಕದಲ್ಲಿ.

ನಾವು ನೀವುಗಳು ಇವತ್ತು ನಾಡಿನ ಅಧಿದೇವತೆ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಕೈ ಮುಗಿಯುವ ಚಾಮುಂಡಿ ವಿಗ್ರಹ ಏನಿದೆ ನೋಡಿ ಅದನ್ನ ಮತಾಂಧರಿಂದ ಉಳಿಸಲು ಪಟ್ಟ ಶ್ರಮಕ್ಕಿಂತಲೂ ಯುಕ್ತಿ ಪ್ರದರ್ಶಸಿದ ಬಗ್ಗೆಯೂ ಕೂಲಂಕಷವಾಗಿ ಅಧ್ಯಯನ ಮಾಡಿ ಪುಸ್ತಕದ ಲೇಖಕ #ರಾಕೇಶ್ ಬರೆದಿದ್ದಾರೆ.

ಒಂದು ವ್ಯಕ್ತಿಗೆ ಶಿಕ್ಷಣ ಸಿಕ್ಕರೆ ಆತ ಏನು ಬೇಕಾದರೂ ಮಾಡಬಲ್ಲ ರಾಜನಾದರೂ ಸರಿ ಕೂಲಿಯಾದರೂ ಸರಿ. ಆದರೆ, ದಿವಾನ ಪೂರ್ಣಯ್ಯ ಮುಮ್ಮಡಿಯವರಿಗೆ ಶಿಕ್ಷಣ ಕೊಡುವಲ್ಲಿ ಮಾಡಿದ ನಾಟಕ ಮತ್ತು ಅದರ ಹಿಂದಿನ ಅಸಲಿ ಕಥೆ ಇರುವುದು ಈ ಪುಸ್ತಕದಲ್ಲಿ ಮಾತ್ರ ಅನಿಸುತ್ತದೆ.

ಸ್ವಾರ್ಥದ ಈ ಪ್ರಪಂಚ ಜಾತಿಯ ಹಿಂದೆ ಓಡುತ್ತಿದೆ. ಅದರಂತೆಯೇ ಪೂರ್ಣಯ್ಯನು ಅದನ್ನೇ ಮಾಡಿದ, ದಿವಾನ ಹುದ್ದೆ ಆನುವಂಶಿಕವಾಗಿಯೇ ಉಳಿಯಬೇಕೆಂಬ ಆಸೆಯಿಂದ ಆಸೆ ಪಟ್ಟಿರಬಹುದೇ‌ ಮತ್ತು ಆತನೂ 43 ಲಕ್ಷ ರೂಪಾಯಿಗಳ ಲೆಕ್ಕಾಚಾರದಲ್ಲಿ ಎಡವಿದ್ದಾನೇಯೇ ಎಂಬುದು ಕೂಡ ಇಲ್ಲಿ ಪ್ರಮುಖವಾಗುತ್ತೆ ಅದೂ ದಾಖಲೆ ಸಮೇತವಾಗಿ ಮುದ್ರಣವಾಗಿದೆ.

ಟಿಪ್ಪುವನ್ನು ವಧೆ ಮಾಡಲು ಸೀತಾ ದಂಡು ಹುಟ್ಟಿಕೊಂಡಿತೆ ಅಥವಾ ಈ ದಂಡಿನ ಹಿಂದೆ ರೋಚಕವಾದ ಕಥಾ ಸಂಕಲನ ಯಾವುದಿದೆ? ಸೀತಾ ದಂಡು ಎಂಬ ಹೆಸರು ಹುಟ್ಟಲು ಮೂಲ ಕಾರಣವಾದರೂ ಯಾವುದು? ದಂಡು ನಿರ್ವಹಿಸುತ್ತಿದ್ದ ಕೆಲಸವಾದರೂ ಏನು? ಇರ್ವರು ಗೌಡರ ಟೆಕ್ನಿಕ್ ಟಿಪ್ಪುವಿನ ವಧೆಗೆ ಕಾರಣವಾಗಿರಬಹುದೇ ಅಥವಾ ಬ್ರಿಟಿಷರೇ ಕೊಂದರೇ? ಅಲ್ಲದೆ ಈ ದಂಡಿಗೆ ತರಬೇತಿ ನೀಡಲು ಬಂದಿರುವ ಸಿಖ್ಖ್ ಕುಟುಂಬಗಳು ಅಥವಾ ಸೈನ್ಯಗಳು ಮುಂದೆ ಏನಾದವು? ಎಂಬ ಊಹಾಪೋಹಕ್ಕೆ ಈ ಪುಸ್ತಕದಲ್ಲಿ ತೆರೆ ಎಳೆಯಾಲಾಗಿದೆಂದರು ತಪ್ಪಾಗದು.

ಟಿಪ್ಪುವಿನ ಮನಸ್ಥಿತಿ ಬಗ್ಗೆ ಜೊಲ್ಲು ಸುರಿಸಿಕೊಂಡು ಪರವಾದ ಮಂಡಿಸುತ್ತಿರುವ ಬುದ್ದಿ ಜೀವಿಗಳ ಮುಖಕ್ಕೆ ಕರಿಮಸಿ ಬಳಿದಂತೆ ಶ್ರೀರಂಗಪಟ್ಟಣದ ಹನುಮಂತ ದೇವಸ್ಥಾನ ಮಸೀದಿಯಾಗಿ ಪರಿವರ್ತನೆಯಾದ ಕುರಿತು ಅತ್ಯಂತ ಸೂಕ್ಷ್ಮವಾಗಿ ಲೇಖಕ #ರಾಕೇಶ್ ಶೆಟ್ಟಿ ಅಕ್ಷರಗಳನ್ನು ಪೋಣಿಸಿ, ಈ ಪುಸ್ತಕದಲ್ಲಿ ಬರೆಯುವುದರಲ್ಲಿ ಯಶಸ್ವಿಯಾಗಿದ್ದಾರೆ ಮತ್ತು ಮುಂದಿನ‌ ತಲಾ ತಲೆಮಾರುಗಳಿಗೂ ಇದೊಂದು ಮಸೀದಿಯೋ ಮಂದಿರವೋ ಎಂಬುದುದರ ಅನುಮಾನಗಳಿಗೆ ಎಡೆಕೊಡದಷ್ಟು ಪ್ರಿಂಟ್ ಆಗಿಬಿಟ್ಟಿದೆ ಪುಸ್ತಕ ” #ಮುಚ್ಚಿಟ್ಟ #ಕರ್ನಾಟಕಚರಿತ್ರೆ “.

ಟಿಪ್ಪು ಎಂಬ ವ್ಯಕ್ತಿ ಕನ್ನಡವನ್ನು ಎಷ್ಟರಮಟ್ಟಿಗೆ ನೆಲಕಚ್ಚಿಸಲು ಪ್ರಯತ್ನ ಪಟ್ಟ ಎಂಬುದನ್ನು ಸುಲ್ತಾನನ ಬೆನ್ನಿಗೆ ನಿಂತು ಬೆಂಬಲಿಸಿ ಕನ್ನಡ ಹೋರಾಟಗಾರರು, ಸ್ಸಾರಿ ಸೋ ಕಾಲ್ಡ್ ಹೋರಾಟಗಾರರು ಓದಬೇಕು. ಎಟ್ಲೀಸ್ಟ್ ಕನ್ನಡಾಂಬೆಯ ಮುಂದಿನ ಮಕ್ಕಳಾದರೂ ಇದನ್ನು ತಿಳಿದುಕೊಂಡರೆ ಉತ್ತಮ.ಆತನ ಖುದಾದಾದ್ ಸರ್ಕಾರ್ ಕನ್ನಡದ ಜಾಗದಲ್ಲಿ ಪರ್ಷಿಯನ್ ಭಾಷೆ ಜಿರಳೆ ಮೀಸೆ ಹೊಕ್ಕಂತೆ ಹೊಕ್ಕಿಲ್ಲ ಬದಲಾಗಿ ಲಾಗಮಿಲ್ಲದ ಕುದುರೆ ಓಡಿದಂತೆ ಕನ್ನಡದ “ಬಹುಳ ಪುಷ್ಯ ಕಾಲಯುಕ್ತಿ ” ರಜಬ್ ” ಆಗಿ ಬದಲಾಗಿದ್ದು ವಿಪರ್ಯಾಸ, ಅಷ್ಟು ಮಾಡಿದ ಟಿಪ್ಪುವನ್ನು ಮತ್ತೆ ಮತ್ತೆ ಹೊಗಲಿ ಕರ್ನಾಟಕದಲ್ಲಿ ಕಿಂಗ್ ಮಾಡಲು ಹೊರಟಿರುವ ಹೋರಾಟಗಾರರಿಗೂ ಲೇಖಕ‌ ತನ್ನ ತೀಕ್ಷ್ಣವಾದ ನುಡಿಗಳಿಂದ ಅಚ್ಚು ಒತ್ತಿದ್ದು ಮಾತ್ರವಲ್ಲದೇ, ನಮ್ಮ ನಿಮ್ಮ ಪ್ರಾಂತ್ಯದ ಭಾಗವೂ ಯಾವ ರೀತಿ ಮರುನಾಮಕರಣ ಮಾಡಿದ್ದ ಅಲ್ಲದೆ ಇಸ್ಲಾಮಿನ ಅಮಲನ್ನು ಯಾವ ಯಾವ ಜಾಗದಲ್ಲಿ ತುರುಕಿಸಲು ಪ್ರಯತ್ನ ಪಟ್ಟ ಎಂಬುದರ ಬಗ್ಗೆ ಪುಟಪುಟಗಳಲ್ಲಿ ಸ್ಪುಟವಾಗಿ ಅಕ್ಷರಗಳನ್ನು ಸ್ಪೋಟಿಸಿದ್ದಾರೆ ಶೆಟ್ರು..!!

ಮೈಸೂರಿಗೆ ತೆರಳುವ ಪ್ರತಿಯೊಂದು ಪ್ರವಾಸಿಗನು ಕೂಡ ಈ ವಿಚಾರವನ್ನೊಮ್ಮೆ ತಿಳ್ಕೋಬೇಕು, ನಾವೂ ನೀವೂ ಯಾರೇ ಪ್ರವಾಸಿಗರು ಬಂದರು ನಮ್ಮ ವಾಹನವನ್ನು ಪಾರ್ಕ್ ಮಾಡುವ ಜಾಗವಿದೆ. ಅಲ್ಲಿಯೇ ಪಕ್ಕದಲ್ಲೊಂದು ಮೇಲ್ಚಾವಣಿಯಿಲ್ಲದ ಸಣ್ಣ ಗುಡಿಯಿದೆ ಆ ಗುಡಿಯ ಮಹಾತ್ಮೆ, ಅಲ್ಲಿನ ಶಕ್ತಿ, ಕಾರಣಿಕ ಪೂಜೆ, ಪುರಸ್ಕಾರ ಆ ಗುಡಿಗೂ ಮೈಸೂರು ಸೀಮೆಗೂ ವಿಶೇಷವಾಗಿ ಅರಮನೆಗೂ ಇರುವ ಸಂಬಂಧ ಮತ್ತು ಅಲ್ಲಿ ಇಂದು ನಡೆಯುತ್ತಿರುವ ಪೂಜೆಗಾಗಿ ನೀಡಿರುವ ತಾಮ್ರದ ಪತ್ರದ ದಾಖಲೆ ಸಮೇತವಾಗಿ ನೈಜಘಟನೆಯನ್ನು ಕೂಲಂಕಷವಾಗಿ ಪರಿಶೀಲಿಸಿ ಲೇಖಕ ರಾಕೇಶ್ ಶೆಟ್ಟಿ ಸಂಶೋಧನೆ ನಡೆಸಿ “#ಮುಚ್ಚಿಟ್ಟಕರ್ನಾಟಕಚರಿತ್ರೆಯಲ್ಲಿ” ಬರೆದಿರುವುದು ನನಗಂತೂ ಅಚ್ಚರಿ ತಂದುಬಿಟ್ಟಿದೆ .

ಹಾಗಾಗಿ ಓದಲು ಕುಳಿತರೆ ಬೆರಳುಗಳು ಪುಟಗಳನ್ನು ತನ್ನಿಂದ ತಾನೇ ಮೆದುಳಿನ ಆಜ್ಞೆಯನ್ನು ಆಲಿಸಿಕೊಂಡು ತಿರುಗಿಸಿಕೊಂಡು ಹೋಗುತ್ತಿತ್ತು.
ಹೀಗೆ ಒಂದು ಗುಡಿಯಲ್ಲ ಪ್ರವಾಸಕ್ಕೆಂದು ಹೋಗಿ ಅರಮನೆ ಮುಂದೆ ಸೆಲ್ಫಿಹೊಡೆದು ಕೊಂಡು ಸಾಮಾಜಿಕ ಜಾಲಾತಾಣದಲ್ಲಿ “I am in Mysore palace” ಎಂದು ಬರೆದುಕೊಳ್ಳುವ ನಾವಿಂದು ಒಂದು ವಿಚಾರ ಅರ್ಥಮಾಡಿಕೊಂಡು ಸಾಗಬೇಕಿದೆ ಅರಮನೆಯ ಸುತ್ತಮುತ್ತಲಿನ ಪ್ರತಿಯೊಂದು ಗುಡಿಗೋಪುರಕ್ಕೂ ಇತಿಹಾಸವಿದೆ. ಮತಾಂಧ ಟಿಪ್ಪುವಿನ ಕ್ರೂರತೆ ಎಷ್ಟರ ಮಟ್ಟಿಗೆ ಇತ್ತು ಎಂಬುದು ತಿಳಿಯಬೇಕೆಂದರೆ ಈ ಪುಸ್ತಕದ ಓದು ಅತ್ಯಂತ ಅನಿವಾರ್ಯವಾಗಿದೆ.

ಸುಮಾರು ಮೂನ್ನೂರ ಎಪ್ಪತ್ತು ಪುಟಗಳ ಪುಸ್ತಕ ನನಗಂತೂ ಎರಡು ದಿನಗಳಲ್ಲಿ ಓದಿ ಮುಗಿಸಿಯಾಗಿದೆ. ಕಾರಣ ಒಬ್ಬ ಓದುಗನಾದವನಿಗೆ ಪುಸ್ತಕ ಓದಿಸಿಕೊಂಡು ಹೋಗಬೇಕು ಆವಾಗಷ್ಟೆ ಮಜಾ ಬರುತ್ತೆ. ಪುಟ ತಿರುವಿ ಹಾಕಿದಷ್ಟು ಕುತೂಹಲ ಮೂಡಿಸುತ್ತಿದೆ ,ಅಚ್ಚೊತ್ತಿದ ಚಿತ್ರಗಳು ನೈಜ ಚಿತ್ರಣವನ್ನು ಕಣ್ಣಮುಂದೆ ಹಾಗೇಯೆ ಹಾದು ಹೋಗುವಂತೆ ಮಾಡಿದೆ. ನನಗಂತೂ ಬಡತನದ ಕ್ರೂರತೆ ಮತಾಂಧನ ಕ್ರೌರ್ಯದ ನಡುವೆಯೂ ಹುಟ್ಟಿ ಬೆಳೆದ ಸಣ್ಣ ಮಗುವಿನ (ಮುಮ್ಮಡಿ)ಯ ಚಿತ್ರ ನೋಡಿ ಕಥೆ ಓದಿ ಕಣ್ಣಂಚಲಿ ಹನಿಬಿಂದುವೊಂದು ಪುಟದೊಳಗಿನ ಭೂಗರ್ಭವನ್ನು ಸೇರಿಬಿಟ್ಪಿತು. ರಾಣಿಯಾದವಳು ಅವತ್ತು ಅಂತಹ ನಿರ್ಧಾರ ಕೈಗೊಳ್ಳದೆ ಇದ್ದಿದ್ದರೆ ಇವತ್ತು ಮೈಸೂರೆಂಬ ಅರಮನೆ ವಂಶಸ್ಥರು ಇದ್ದರು ಎಂಬುದು ಶಿಲಾಶಾಸನದಲ್ಲಿ ಓದ ಬೇಕಿತ್ತೋ ಏನೋ….?? ಅಥವಾ ಶಾಲೆಯಲ್ಲಿ ಹೇಳಿದ ಹಾಗೆ ಟಿಪ್ಪುವೇ ಪುಣ್ಯಾತ್ಮ ಅಂತ ಒಪ್ಕೊ ಬೇಕಿತ್ತೋ…ಮಹಾರಾಣಿ ಲಕ್ಷ್ಮೀ ಅಮ್ಮಣ್ಣಿ ಅಂದು ಹರಸಾಹಸ ಪಡದಿದ್ದರೆ ಏನಾಗುತ್ತಿತ್ತೋ ಎಂದು ನೆನೆದು ಆಕೆಯ ಪಾದಕಮಲಗಳಿಗೆ ಶಿರ ಭಾಗಬೇಕೆಂದು ಅನ್ನಿಸಿಬಿಡುವಷ್ಟು “#ಮುಚ್ಚಿಟ್ಟಕರ್ನಾಟಕಚರಿತ್ರೆ ” ಹೊರಬಂದಿದೆ.

ಇತಿಹಾಸ-ಶಕ್ತಿ ಮುಚ್ಚಿಡಲು ಸಾಧ್ಯವೇ? ಖಂಡಿತವಾಗಿಯೂ ಇಲ್ಲ ಅದೆಷ್ಟೋ ಶಕ್ತಿ-ಇತಿಹಾಸ ಕಾಲಗಳು ಕಳೆದುಹೋದಂತೆ ಮತ್ತೆ ಮತ್ತೆ ಹೊರಬಿದ್ದಿದೆ ಅದಕ್ಕಾಗಿಯೇ ಆ ಚಾಮುಂಡಿ ಬೆಟ್ಟದ ಮೇಲೆ ಕುಳಿತು ನಿಲುಮೆ ರಾಕೇಶ್ ಶೆಟ್ಟಿಯಂತ ಲೇಖಕನನ್ನು ಹುಟ್ಟಿಸಿದ್ದಾರೆ ಅನಿಸುತ್ತಿದೆ. ಕಾರಣ ಇಷ್ಟೇ ಬರೆಯುವುದು ಸುಲಭ ಅನ್ನಿಸಬಹುದು ಆದರೆ ಸಂಶೋಧನೆ ನಡೆಸಿ ದಾಖಲೇ I mean ಸಾಕ್ಷಿ ಕೇಳುವ ಪುಣ್ಯಾತ್ಮರ ಮುಂದೆ ದಾಖಲೆ ಸಮೇತವಾಗಿ ಬರೆದು ಮನಕೆ ಮುದ ನೀಡುವಷ್ಟು ಅಕ್ಷರಗಳನ್ನು ಪೋಣಿಸುವುದಿದ್ಯಲ್ಲ, ಅದ್ರಲ್ಲೂ ಎಲ್ಲಾ ಕಡೆ ಬಚ್ಚಿಟ್ಟು -ಕತ್ತರಿಸಿಟ್ಟ ಇತಿಹಾಸವನ್ನು ಪುನರುತ್ಥಾನಗೊಳಿಸುವುದು ಸುಲಭದ ಮಾತಲ್ಲ.!

ಕಡೆಯಾದಾಗಿ ಒಂದು ಮಾತು “#ಮುಚ್ಚಿಟ್ಟಕರ್ನಾಟಕಚರಿತ್ರೆ ” ಹೊಸ ಇತಿಹಾಸ ಬರೆಯುವಲ್ಲಿ ಮುನ್ನುಡಿಯಾಗಬೇಕು,ಮೈಸೂರಿಗೆ ಹೋಗಿಬಂದವರು ಹೋಗಬೇಕಾದವರು ಇದನ್ನು ಓದಬೇಕು. ಟಿಪ್ಪುವನ್ನು ಅಪ್ಪಾ ಎಂದು ಕೊಂಡಾಡುವ ಎಡಬಿಡಂಗಿಗಳ ಮುಂದೆ ಪುಸ್ತಕ ತೆರೆದಿಡಬೇಕು. ಕನ್ನಡವನ್ನು ನಿಜವಾಗಿಯೂ ಪ್ರೀತಿಸುವ ಗೌರವಿಸುವ ಕನ್ನಡಿಗರಿಗೆ ನಿಜವಾದ ಅಸ್ಮಿತೆ ಗೊತ್ತಾಗಬೇಕೆಂದರೆ ಈ ಪುಸ್ತಕ ನಿಮ್ಮ ಮನೆಯೊಳಗೆ ಪ್ರವೇಶ ಮಾಡಬೇಕು, ನಾಟಕ- ಹೈಡ್ರಾಮ- ರಾಜಕಾರಣ ನಡೆಸಿ ಏನೇನೋ ಕಥೆ ಹೇಳಿ ದುಡ್ಡು ಕೊಳ್ಳೆಹೊಡೆಯುವವ ಇದನ್ನೊಮ್ಮೆ ಓದಿ ಬೆಚ್ಚಗೆ ನಿದ್ರಿಸಲು ಸಾಧ್ಯವೇ ಎಂದು ತಿಳಿಯಬೇಕು. because ಇದು ಅಸಲಿ ಕಥೆಯನ್ನು ಬಿಚ್ಚಿಟ್ಟಿದೆ,ನೈಜತೆ ಜೀವಂತವಾಗಿದೆ. ದಾಖಲೆ ಸಮೇತವಾದ ಪ್ರತಿಗಳು ಮುದ್ರಿತವಾಗಿದೆ. ಮರೂನ್ ಬಣ್ಣದ ಮುಖ ಪುಟದಲ್ಲಿ ಮುದ್ರಿತವಾದ ಬಂಗಾರ ಬಣ್ಣದ ಶೀರ್ಷಿಕೆ ,ಮುದ್ದಾದ ಮಗು,ಮತಾಂಧ ಟಿಪ್ಪು, ವೀರ ನಾರಿ ರಾಣಿಯ ಚಿತ್ರಗಳು ಹಾಗೇಯೇ ಮತ್ತೊಮ್ಮೆ ಕಣ್ಣಮುಂದೆ ಹಾದುಹೋಯಿತು.
ಕಣ್ಣು ಮನಸ್ಸು ತೇವಗೊಂಡಿತು.
“#ಮುಚ್ಚಿಟ್ಟಕರ್ನಾಟಕಚರಿತ್ರೆ” ಪುಸ್ತಕ ನನ್ನ ಮನಗೆದ್ದಿತು.

“ಪುಸ್ತಕ ಓದಿಯಾಗಿದೆ -ವಿಮರ್ಶೆ ಬರೆದಾಗಿದೆ ಹಾಗಾಗಿ ಮುಂದಿನ ಪಯಣ ಶ್ರೀರಂಗಪಟ್ಟಣಕ್ಕೆ ಮುಮ್ಮಡಿ ಹುಟ್ಟಿದ ಕೃಷ್ಣನ ದೇಗುಲ ನೋಡಲಿಕ್ಕೆ ” ದರುಶನ ತೋರಯ್ಯ ಕೃಷ್ಣಾ…. “
ನಮಸ್ಕಾರ

ನಿಮ್ಮ ಅನಿಸಿಕೆ...

Note: HTML is allowed. Your email address will never be published.

Subscribe to comments