Skip to content

Posts from the ‘ನಿಲುಮೆ ಪ್ರಕಾಶನ’ Category

15
ಜನ

7ನೇ ವರ್ಷದ ಹೊಸ್ತಿಲಲ್ಲಿ ನಿಲುಮೆ…

nilume-7-yearsನಿಲುಮೆ ವೆಬ್ ತಾಣ ಶುರುವಾಗಿ 6ವರ್ಷಗಳನ್ನು ಪೂರೈಸಿ 7ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವ ಸಂಕ್ರಮಣದ ದಿನವಿದು. 5ನೇ ವರ್ಷದ ಸಂಭ್ರಮದಲ್ಲಿ,ನಿಲುಮೆ ಪ್ರಕಾಶನ ಶುರುವಾಗುವ ಹಂತದಲ್ಲಿದ್ದಾಗ,ನಿಲುಮೆಯ ಮೇಲೆ ಕರ್ನಾಟಕದ ಬೌದ್ಧಿಕ ಫ್ಯಾಸಿಸಂನ ದಾಳಿಯಾಗಿತ್ತು.ಹಾಗೇ ದಾಳಿ ಮಾಡಿದವರ ಪೈಕಿ ಹೇಗಿದೆ 5ನೇ ವರ್ಷದ ಗಿಫ್ಟು ಎಂದು ಕುಹುಕವಾಡಿದ್ದರು.ಅದಾದ ನಂತರದ ವಿಷಯಗಳೆಲ್ಲ ನಿಮಗೇ ತಿಳಿದಿವೆ.ಕನ್ನಡ ಪ್ರಭ ಪತ್ರಿಕೆಯೂ ಆ ಎಪಿಸೋಡಿನ ಬಗ್ಗೆ ವಿಸ್ತೃತ ವರದಿ ಮಾಡಿತು.ಸುವರ್ಣ ನ್ಯೂಸ್ ಚಾನೆಲ್ಲಿನಲ್ಲಿ ಮುಖಾಮುಖಿ ಚರ್ಚೆಯೂ ನಡೆಯಿತು.

ಆ ಚರ್ಚೆಯ ಅಂತ್ಯದಲ್ಲಿ, ”ಇವರಂತೆ ನಮ್ಮದು ವಿಧ್ವಂಸಕ ಮಾರ್ಗವಲ್ಲ;ನಮ್ಮದು ಜ್ಞಾನ ಮಾರ್ಗ” ಎಂದು ಹೇಳಿ,ನಿಲುಮೆಯು ಸಾಗಿ ಬಂದ ಮತ್ತು ಸಾಗಲಿರುವ ಮಾರ್ಗದ ಬಗ್ಗೆ ಸ್ಪಷ್ಟ ಸಂದೇಶವನ್ನು ಕೊಟ್ಟೆವು. ನಾವು ಹೇಳಿದ ಮಾರ್ಗದಲ್ಲಿಯೇ ಸಾಗುತಿದ್ದೇವೆ.ಎನ್ನುವುದಕ್ಕೆ ಸಾಕ್ಷಿಯಾಗಿ,5ನೇ ವರ್ಷಾಚರಣೆಯ ಸಂದರ್ಭದಲ್ಲಿ,ನಾಡಿನ ಬೌದ್ಧಿಕ ಕ್ಷೇತ್ರಕ್ಕೆ ನಿಲುಮೆಯಿಂದ 3 ಪುಸ್ತಕಗಳನ್ನು ನಿಮ್ಮ ಕೈಯಲ್ಲಿಟ್ಟಿದ್ದೇವೆ.ಕನಿಷ್ಟ ಐದು ಪುಸ್ತಕಗಳನ್ನಾದರೂ ನಾವು ಪ್ರಕಟಿಸುವ ಇರಾದೆಯಿತ್ತು. ಆದರೆ,ನಮ್ಮ ಇತರೆ ಕೆಲಸ-ಕಾರ್ಯಗಳು ಮತ್ತು ಪುಸ್ತಕ ಮುದ್ರಣಕ್ಕೆ ಬೇಕಾಗುವ ಸಂಪನ್ಮೂಲಗಳ ಕೊರತೆ ಇತ್ಯಾದಿ ಕಾರಣಗಳಿಂದ ಮೂರು ಪುಸ್ತಕಗಳಷ್ಟೇ ಸಾಧ್ಯವಾಗಿದ್ದು. 2016ರಲ್ಲಿ ನಿಲುಮೆ ಪ್ರಕಾಶನ ಸ್ತಬ್ಧವಾಗಿತ್ತು ಎಂಬುದನ್ನು ನಿಮ್ಮ ಮುಂದೆ ಮಂಡಿಯೂರಿ ಒಪ್ಪಿಕೊಳ್ಳುತ್ತೇವೆ.

ಈ ವರ್ಷ ನಿಲುಮೆಯ ಹೆಜ್ಜೆ ಗುರುತುಗಳು….

1.ಹೈದರಾಬಾದಿನ ಯುನಿವರ್ಸಿಟಿಯಲ್ಲಿ ರೋಹಿತ್ ವೇಮುಲಾ ಎಂಬ ವಿದ್ಯಾರ್ಥಿಯ ಆತ್ಮಹತ್ಯೆ ಪ್ರಕರಣವನ್ನಿಡಿದುಕೊಂಡು ದೇಶಾದಾದ್ಯಂತ ಗಂಜಿಗಿರಾಕಿಗಳು ಬೊಬ್ಬೆಯಿಟ್ಟಾಗ,ನಿಲುಮೆ ಬಳಗ ಸಾಮಾಜಿಕ ಜಾಲತಾಣಗಳಲ್ಲಿ ಸತ್ಯಾಂಶವನ್ನು ಓದೌಗರ ಮುಂದೆ ಇಡುವ ಕೆಲಸವನ್ನು ಮಾಡಿದೆ.
2.ಉಗ್ರ ಅಫ್ಜಲ್ ಗುರುವನ್ನು ಬೆಂಬಲಿಸಿ,ಕಾಶ್ಮೀರದ ಆಜಾದಿ ಘೋಷಣೆಗಳನ್ನು ಕೂಗಿದ್ದ ಜೆ.ಎನ್.ಯು ವಿವಿಯ ಕನ್ನಯ್ಯ ಕುಮಾರನ ಪಟಾಲಂನ ವಿರುದ್ಧ ನಡೆದ ಆನ್ಲೈನ್ ಹೋರಾಟದಲ್ಲು ನಿಲುಮೆ ಬಳಗ ಸಕ್ರೀಯವಾಗಿತ್ತು.
3.೨೦೧೬ರ ಫೆಬ್ರವರಿ ತಿಂಗಳಿನಲ್ಲಿ ದೆಹಲಿಯ JNUವಿನಲ್ಲಿ ದೇಶವಿರೋಧಿ ಘೋಷಣೆಗಳು ಕೇಳಿ ಬಂದಾಗ ದೇಶದಾದ್ಯಂತ ದೊಡ್ಡ ಮಟ್ಟದಲ್ಲಿ ಚರ್ಚೆಯಾಗಿತ್ತು.ಅದಾದ ಕೆಲವೇ ದಿನಗಳಲ್ಲಿ ಬಂಗಾಳದಲ್ಲೂ ಇದೇ ಬಗೆಯ ಘೋಷಣೆಗಳ ಸುದ್ದಿಯಾಗಿತ್ತು. ಜುಲೈ ೯ನೇ ತಾರೀಖು ಜಮ್ಮುಕಾಶ್ಮೀರ ರಾಜ್ಯದಲ್ಲಿ ಉಗ್ರ ಬರ್ಹನ್ ವಾನಿಯ ಹತ್ಯೆಯಾದ ನಂತರ,ಆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಪಾಕಿಸ್ತಾನಿ ಪ್ರಾಯೋಜಿತ ಗಲಭೆ ಶುರುವಾಗಿ ಒಂದು ವಾರ ಕಳೆಯುವಷ್ಟರಲ್ಲೇ, ಕೆಲವು ಅರ್ಬನ್ ನಕ್ಸಲರು ನಮ್ಮ ಕರ್ನಾಟಕದಲ್ಲಿ ಅದರಲ್ಲೂ ಬೆಂಗಳೂರಿನಲ್ಲಿ (ಜುಲೈ15,16) We Stand with Kashmir ಎನ್ನುವ ಹೆಸರಿನೊಂದಿಗೆ ಟೌನ್ ಹಾಲ್ ಮುಂದೆ ನಿಂತು “ಕಾಶ್ಮೀರದ ಆಜಾದಿ” ಕೇಳಲು ತಯಾರಾಗಿದ್ದ ಹೊರಟಿದ್ದರು. ಇವರ ಆಸೆಗೆ ನಾವೊಂದಿಷ್ಟು ಜನರು ಸೇರಿ ತಣ್ಣಿರೇರಚಿದ್ದೆವು.

Read more »

Advertisements
15
ಜನ

6ನೇ ವರ್ಷದ ಹೊಸ್ತಿಲಲ್ಲಿ ನಿಲುಮೆ…

Nilume @6ಕಳೆದ ವರ್ಷ ಈ ಸಮಯದಲ್ಲಿ, “5ನೇ ವರ್ಷದ ಸಂಭ್ರಮದಲ್ಲಿ ಶುರುವಾಗಲಿದೆ, ನಿಲುಮೆ ಪ್ರಕಾಶನ” ಎಂದು ನಾವು ಘೋಷಿಸಿದ್ದ ದಿನವೇ,ನಿಲುಮೆಯ ಮೇಲೆ ಕರ್ನಾಟಕದ ಬೌದ್ಧಿಕ ಫ್ಯಾಸಿಸಂನ ದಾಳಿಯಾಗಿತ್ತು.ಹಾಗೇ ದಾಳಿ ಮಾಡಿದವರ ಪೈಕಿ ಹೇಗಿದೆ 5ನೇ ವರ್ಷದ ಗಿಫ್ಟು ಎಂದು ಕುಹುಕವಾಡಿದ್ದರು. ಅದಾದ ನಂತರದ ವಿಷಯಗಳೆಲ್ಲ ನಿಮಗೇ ತಿಳಿದಿವೆ.ಕನ್ನಡ ಪ್ರಭ ಪತ್ರಿಕೆಯೂ ಆ ಎಪಿಸೋಡಿನ ಬಗ್ಗೆ ವಿಸ್ತೃತ ವರದಿ ಮಾಡಿತು.ಸುವರ್ಣ ನ್ಯೂಸ್ ಚಾನೆಲ್ಲಿನಲ್ಲಿ ಮುಖಾಮುಖಿ ಚರ್ಚೆಯೂ ನಡೆಯಿತು.

ಆ ಚರ್ಚೆಯ ಅಂತ್ಯದಲ್ಲಿ, ”ಇವರಂತೆ ನಮ್ಮದು ವಿಧ್ವಂಸಕ ಮಾರ್ಗವಲ್ಲ;ನಮ್ಮದು ಜ್ಞಾನ ಮಾರ್ಗ” ಎಂದು ಹೇಳಿ,ನಿಲುಮೆಯು ಸಾಗಿ ಬಂದ ಮತ್ತು ಸಾಗಲಿರುವ ಮಾರ್ಗದ ಬಗ್ಗೆ ಸ್ಪಷ್ಟ ಸಂದೇಶವನ್ನು ಕೊಟ್ಟೆವು. ನಾವು ಹೇಳಿದ ಮಾರ್ಗದಲ್ಲಿಯೇ ಸಾಗುತಿದ್ದೇವೆ.ಎನ್ನುವುದಕ್ಕೆ ಸಾಕ್ಷಿಯಾಗಿ,5ನೇ ವರ್ಷಾಚರಣೆಯ ಸಂದರ್ಭದಲ್ಲಿ,ನಾಡಿನ ಬೌದ್ಧಿಕ ಕ್ಷೇತ್ರಕ್ಕೆ ನಿಲುಮೆಯಿಂದ 3 ಪುಸ್ತಕಗಳನ್ನು ನಿಮ್ಮ ಕೈಯಲ್ಲಿಟ್ಟಿದ್ದೇವೆ.ಕನಿಷ್ಟ ಐದು ಪುಸ್ತಕಗಳನ್ನಾದರೂ ನಾವು ಪ್ರಕಟಿಸುವ ಇರಾದೆಯಿತ್ತು. ಆದರೆ,ನಮ್ಮ ಇತರೆ ಕೆಲಸ-ಕಾರ್ಯಗಳು ಮತ್ತು ಪುಸ್ತಕ ಮುದ್ರಣಕ್ಕೆ ಬೇಕಾಗುವ ಸಂಪನ್ಮೂಲಗಳ ಕೊರತೆ ಇತ್ಯಾದಿ ಕಾರಣಗಳಿಂದ ಮೂರು ಪುಸ್ತಕಗಳಷ್ಟೇ ಸಾಧ್ಯವಾಗಿದ್ದು.ಕಳೆದ ವರ್ಷ ಸಾಧಿಸಲಾಗದ್ದನ್ನು ಈ ವರ್ಷದಲ್ಲಿ ಸಾಧಿಸುತ್ತೇವೆ ಎಂಬ ವಿಶ್ವಾಸವಿದೆ.
Read more »

16
ಆಗಸ್ಟ್

ವಿಜಯವಾಣಿಯಲ್ಲಿ ’ಬುದ್ಧಿಜೀವಿಗಳ ಮೂಢನಂಬಿಕೆಗಳು’ ಪುಸ್ತಕ ಪರಿಚಯ

ಬುದ್ಧಿಜೀವಿಗಳ ಮೂಢನಂಬಿಕೆಗಳು - ವಿಜಯವಾಣಿ

9
ಆಗಸ್ಟ್

ಕೊಟ್ಟ ಕುದುರೆಯನೇರಲರಿಯದೆ : ಓದುಗರ ಕಣ್ಕಾಪು ತೆರೆಯಿಸುವ ಕೃತಿ

– ಡಾ. ಶ್ರೀಪಾದ ಭಟ್,ಸಹಾಯಕ ಪ್ರಾಧ್ಯಾಪಕ
ಡಾ. ಡಿ ವಿ ಗುಂಡಪ್ಪ ಕನ್ನಡ ಅಧ್ಯಯನ ಕೇಂದ್ರ,ತುಮಕೂರು ವಿಶ್ವವಿದ್ಯಾನಿಲಯ, ತುಮಕೂರು

ಕೊಟ್ಟ ಕುದುರೆಯನೇರಲರಿಯದೆಇಂದಿನ ಕನ್ನಡ ಸಾಹಿತ್ಯ ಚರ್ಚೆ ಮತ್ತು ವಿಮರ್ಶೆಗಳು ಯಾವುದೇ ಕೃತಿ ಅಥವಾ ಅದಕ್ಕಿಂತ ಹೆಚ್ಚಾಗಿ ಅದರ ಕೃತಿಕಾರನನ್ನು ಹೇಗೆ ನೋಡಬೇಕು ಎಂದು ಮೊದಲೇ ನಿರ್ಧರಿಸಿ ಓದುಗರೂ ಹಾಗೆಯೇ ತಿಳಿಯತಕ್ಕದ್ದು ಎಂದು ಆಗ್ರಹಿಸುತ್ತವೆ. ಇಂಥ ಆಗ್ರಹಕ್ಕೆ ಕೆಲವೇ ಕೆಲವು ವರ್ಷಗಳ ಪರಂಪರೆ ಹಾಗೂ ಅಳ್ಳಕವಾದ ಬೇರು ಇದ್ದರೂ ಇದು ಬೀಸಿದ ಪ್ರಭಾವ ಮಾತ್ರ ತುಸು ಹೆಚ್ಚಿನದು. ಕುವೆಂಪು, ಭೈರಪ್ಪ, ಅನಂತಮೂರ್ತಿ ಮೊದಲಾಗಿ ಯಾರ್ಯಾರ ಕೃತಿಯನ್ನು ಹಾಗೂ ಆಯಾ ಕೃತಿಕಾರರನ್ನು ಹೇಗೆ ನೋಡಬೇಕು, ತಿಳಿಯಬೇಕು ಹಾಗೂ ಅವರನ್ನು ಎಲ್ಲಿ ಇಡಬೇಕು ಎಂದು ‘ನಿರ್ದೇಶಿಸುವ’ ಪ್ರವೃತ್ತಿ ಸಾಹಿತ್ಯಕ ವಲಯದಲ್ಲಿ ಕಾಣಿಸಿಕೊಂಡಿದೆ. ಇದು ತನ್ನ ಹಾಸುಬೀಸನ್ನು ಹೊಸಗನ್ನಡಕ್ಕೆ ಮಾತ್ರ ಸೀಮಿತಗೊಳಿಸಿಲ್ಲ. ಅದರ ತೆಕ್ಕೆಗೆ ಹನ್ಮಿಡಿ ಶಾಸನಾದಿಯಾಗಿ ಎಲ್ಲವೂ ಸೇರಿವೆ! ಹೀಗಾಗಿ ಸಹಜವಾಗಿಯೇ ಹನ್ನೆರಡನೆಯ ಶತಮಾನದ ವಚನ ಸಾಹಿತ್ಯವೂ ಇಂಥ ನಿರ್ದೇಶನದ ವ್ಯಾಪ್ತಿಯಲ್ಲಿ ಬಂದುಬಿಟ್ಟಿದೆ. ಓದುಗನ ಮೇಲೆ ಹೇರಲಾಗುವ ಈ ಬಗೆಯ ನಿರ್ದೇಶನದಿಂದ ಸಾಹಿತ್ಯಕ್ಕಾಗಲೀ ಓದುಗನಾಗಲೀ ಲಾಭಕ್ಕಿಂತ ನಷ್ಟವೇ ಹೆಚ್ಚು. ವಚನ ಸಾಹಿತ್ಯ ಕುರಿತು ಹೀಗೆ ಹೇರಲಾಗಿರುವ “ಓದುವ-ತಿಳಿಯುವ ಕ್ರಮದ ನಿರ್ದೇಶನ”ದಿಂದಾಗಿ ಸಾಹಿತ್ಯವನ್ನು ಸಹಜವಾಗಿ ಓದುವವರಿಗೆ ಹುಟ್ಟುವ ಪ್ರಶ್ನೆಗಳಿಗೆ ಸಮಂಜಸ ಉತ್ತರ ದೊರಕದಿದ್ದರೂ ಉತ್ತರ ದೊರಕಿದಂತೆ ನಟಿಸಬೇಕಾಗುತ್ತದೆ. ಆದರೆ ಅನುಮಾನ ಪರಿಹಾರವಾಗದು. ಅಂಥ ಸಂದರ್ಭದಲ್ಲಿ ಓದುಗರು ತಮ್ಮ ಓದಿನ ದೋಷವನ್ನು ಅರ್ಥಮಾಡಿಕೊಂಡು ಬೇರೆ ರೀತಿಯಲ್ಲಿ ಓದಿಕೊಳ್ಳುವ ಮಾರ್ಗ ಹುಡುಕಬೇಕಾಗುತ್ತದೆ. ಸ್ಥಾಪಿತ ನಿರ್ದೇಶನಗಳ ಹಿನ್ನೆಲೆಯಲ್ಲಿ ವಚನಗಳನ್ನು ಓದಿದಾಗ ಉಂಟಾಗುವ ಸಮಸ್ಯೆ ಇಂಥ ಹೊಸ ಮಾರ್ಗವನ್ನು “ಕೊಟ್ಟಕುದುರೆಯನೇರಲರಿಯದೆ…” ಕೃತಿಯ ಮೂಲಕ ಈಗ ತೆರೆದಿದೆ.

ಹನ್ನೆರಡನೆಯ ಶತಮಾನದಲ್ಲಿ ಹುಟ್ಟಿಕೊಂಡ ವಚನಗಳ ಹಿನ್ನೆಲೆ, ಅವುಗಳ ಸ್ವರೂಪ, ಭಾಷೆ, ವಿಷಯ ವೈವಿಧ್ಯಗಳನ್ನು ಗಮನಿಸಿದಾಗ ಓದುಗನಲ್ಲಿ ಸಹಜವಾಗಿಯೇ ಅನೇಕಾನೇಕ ಪ್ರಶ್ನೆಗಳು ಹುಟ್ಟುತ್ತವೆ: ‘ವಚನಗಳ ನಿರ್ದಿಷ್ಟ ಸಂಖ್ಯೆ ಯಾಕೆ ಲಭ್ಯವಿಲ್ಲ? ‘ಕಲ್ಯಾಣ ಕ್ರಾಂತಿಯಾದಾಗ ವಚನಗಳ ಕಟ್ಟುಗಳನ್ನು ತಲೆ ಮೇಲೆ ಹೊತ್ತು ಹುಬ್ಬಳ್ಳಿಯ ಮೂರು ಸಾವಿರ ಮಠಕ್ಕೂ ಉಳವಿಗೂ ಸಾಗಿಸಲಾಯಿತು’ ಎಂಬ ಹೇಳಿಕೆ ಸರಿಯಾಗಿದ್ದರೆ ಆ ಕಟ್ಟುಗಳು ಏನಾದವು?

Read more »

7
ಆಗಸ್ಟ್

5ನೇ ವರ್ಷಕ್ಕೆ,ನಾಡಿನ ಬೌದ್ಧಿಕ ಕ್ಷೇತ್ರಕ್ಕೆ ನಿಲುಮೆಯಿಂದ 3 ಪುಸ್ತಕಗಳು

Nilume Publication Booksಅಂದು ಸುವರ್ಣ ನ್ಯೂಸ್ ಸ್ಟುಡಿಯೋದಲ್ಲಿ,”ಇವರಂತೆ ನಮ್ಮದು ವಿಧ್ವಂಸಕ ಮಾರ್ಗವಲ್ಲ;ನಮ್ಮದು ಜ್ಞಾನ ಮಾರ್ಗ”ವೆಂದಾಗ,ನನ್ನ ಮುಖಾಮುಖಿಯಾಗಿದ್ದವರು “ಮೊದಲ ಬಾರಿ ಕ್ಯಾಮೆರಾ ಮುಂದೆ ಬಂದಿರುವ ಜೋಷ್ ಹೀಗೆಲ್ಲ ಮಾತನಾಡಿಸುತ್ತದೆ” ಅನ್ನುವ ಅರ್ಥದಲ್ಲೆನೋ ವ್ಯಂಗ್ಯವಾಡಿದ್ದರು.ನನಗದು ಕೇಳಿಸಿತಾದರೂ,ಉತ್ತರಿಸಬೇಕಾದ ಸಮಯ ಅದಲ್ಲ ಅಂತ ಸುಮ್ಮನಾಗಿದ್ದೆ…
Read more »

4
ಆಗಸ್ಟ್

“ಕೊಟ್ಟಕುದುರೆಯನೇರಲರಿಯದೆ…” ಪುಸ್ತಕ ದೊರೆಯುವ ಮಾಹಿತಿ

ಕೊಟ್ಟ ಕುದುರೆಯನೇರಲರಿಯದೆ೨೦೧೩ರಲ್ಲಿ ನಡೆದ “ವಚನ ಸಾಹಿತ್ಯ ಮತ್ತು ಜಾತಿ ವ್ಯವಸ್ಥೆ”ಯ ಚರ್ಚೆ,ರಾಜ್ಯದ ಪ್ರಗತಿಪರರ ನಿದ್ದೆಗೆಡಿಸಿದ್ದು ಸುಳ್ಳಲ್ಲ.ಮೊದಲಿಗೆ ಈ ಜನರು ಪತ್ರಿಕೆಯಲ್ಲಿ ಚರ್ಚೆಯೇ ಆಗದಂತೆ ತಡೆಯಲು ಪ್ರಯತ್ನಿಸಿದರು.ಅದೂ ಸಫಲವಾಗದಿದ್ದಾಗ,ಯಾವ CSLC ಎಂಬ ಸಂಶೋಧನಾ ಕೇಂದ್ರದಿಂದಾಗಿ ಈ ಚರ್ಚೆ ಶುರುವಾಯಿತೋ,ಆ ಕೇಂದ್ರವನ್ನೇ ಮುಚ್ಚಿಸುವ ಮೂಲಕ ಗೆದ್ದೆವೆಂದು ಬೀಗಿದರು ಈ ಬುದ್ಧಿಜೀವಿಗಳು. ಪಾಪ! ಸೂರ್ಯನಿಗೆ ಅಡ್ಡಲಾಗಿ ಕೊಡೆಹಿಡಿದು ಭೂಮಿಗೆ ಬೆಳಕು ಬರದಂತೆ ತಡೆದೆವು ಎಂಬ “ಬುದ್ಧಿಜೀವಿಗಳ ಮೌಢ್ಯ”! ಸಂಶೋಧನಾ ಕೇಂದ್ರ ಮುಚ್ಚಿಸಿದರೂ,ಚಿಂತನೆಯನ್ನು ನಿಲ್ಲಿಸಲು ಸಾಧ್ಯವಿಲ್ಲವೆಂದು ಅವರಿಗೆ ಅರಿವಾಗಲೇ ಇಲ್ಲ.ಅರಿವಾಗಿದ್ದರೆ ಅವರು ನಿಲುಮೆಯ ಮೇಲೆ ಮುಗಿಬೀಳುತ್ತಲಿರಲಿಲ್ಲ.

ಈ ಜನರು ಅಷ್ಟೆಲ್ಲಾ ಹರಸಾಹಸ ಪಟ್ಟು ನಿಲ್ಲಿಸಿದ್ದ ಆ ಚರ್ಚೆ ಮತ್ತು ವಚನ ಸಾಹಿತ್ಯಗಳು ನಿಜವಾಗಿ ಏನು ಹೇಳುತ್ತವೆ ಎಂಬುದರ ಕುರಿತ ನಿಲುಮೆ ಪ್ರಕಾಶನದ ಪುಸ್ತಕವೇ “ಕೊಟ್ಟ ಕುದುರೆಯನೇರಲರಿಯದೆ…”

ವಚನಸಾಹಿತ್ಯಗಳ ಕುರಿತು ನಮ್ಮ ಗೌರವವನ್ನು ಇನ್ನಷ್ಟು ಹೆಚ್ಚಿಸುವ,ವಚನಗಳ ಹಿರಿಮೆಯನ್ನು ಜಗತ್ತಿಗೆ ಸಾರುವ ಪುಸ್ತಕ.

mybookadda.in ನಲ್ಲಿ ಪುಸ್ತಕ ಆನ್ಲ್ಲೈನಲ್ಲಿ ಲಭ್ಯವಿದೆ.ಕೊಂಡು ಓದಿ

http://mybookadda.in/products/kottakudureyaneralariyade

4
ಆಗಸ್ಟ್

“ಬೌದ್ಧಿಕ ದಾಸ್ಯದಲ್ಲಿ ಭಾರತ” ಪುಸ್ತಕದ ಕುರಿತ ಓದುಗರ ಅಭಿಪ್ರಾಯಗಳು

– ವಿನಾಯಕ್ ಹಂಪಿಹೊಳಿ

ಬೌದ್ಧಿಕ ದಾಸ್ಯದಲ್ಲಿ ಭಾರತಬೌದ್ಧಿಕ ದಾಸ್ಯದಲ್ಲಿ ಭಾರತವನ್ನು ಬಹಳ ಮುಂಚೆಯೇ ಖರೀದಿಸಿದ್ದೆನಾದರೂ ಅದನ್ನು ಮರುದಿನವೇ ಮನೆಯಲ್ಲಿ ಇಟ್ಟು ಬರಬೇಕಾಯಿತು. ಹೀಗಾಗಿ ಸರಿಯಾಗಿ ಓದಲು ಆಗಿರಲಿಲ್ಲ. ಹೀಗಾಗಿ ನಿನ್ನೆ ಇನ್ನೊಂದು ಪ್ರತಿಯನ್ನು ಖರೀದಿಸಿ ಇವತ್ತು ಅದನ್ನು heathen in his blindness ಮತ್ತು ಸ್ಮೃತಿ ವಿಸ್ಮೃತಿ: ಭಾರತೀಯ ಸಂಸ್ಕೃತಿ ಪುಸ್ತಕಗಳ ಪಿಡಿಎಫ಼್ ಪ್ರತಿಗಳೊಂದಿಗೆ ತಾಳೆ ಮಾಡಿ ಸರಿಯಾಗಿ ಓದಿದೆ. ಪುಸ್ತಕ ಚೆನ್ನಾಗಿ ಮೂಡಿ ಬಂದಿದೆ. ಪುಸ್ತಕದ ಶೀರ್ಷಿಕೆ ಅಕ್ಷರಶಃ ಸಿದ್ಧವಾಗುತ್ತದೆ.

ಮೊದಲನೇಯದಾಗಿ ಸ್ಥಳೀಯ ಸಂಸ್ಕೃತಿಗಳ ಅಧ್ಯಯನ ಕೇಂದ್ರವನ್ನು ಬುದ್ಧಿಜೀವಿಗಳು ಏಕೆ ಮುಚ್ಚಿಸಿದ್ದಾರೆ ಎಂಬುದು ಈಗ ತಿಳಿಯಿತು. ಏಕೆಂದರೆ ಹಿಂದೂ-ಸಂಪ್ರದಾಯಗಳನ್ನು ರಿಲಿಜನ್ನಿನ ಅಡಿಯಲ್ಲಿ ತಂದರಷ್ಟೇ ಅಲ್ಲವೇ, ಅದರಲ್ಲಿನ ಗ್ರಂಥಗಳ ಆಧಾರವಿಲ್ಲದ ಸಂಪ್ರದಾಯಗಳನ್ನು ತೆಗಳಿ, ಪ್ರಗತಿಪರರೆಂದೆನಿಸಿಕೊಂಡು ಇವರು “ಬುದ್ಧಿಜೀವಿ”ಗಳಾಗುವದು? ರಿಲಿಜನ್ನೇ ಇಲ್ಲದ ಸಮಾಜದಲ್ಲಿ ಬುದ್ಧಿಜೀವಿಗೇನು ಕೆಲಸ?

ನನಗೆ ತುಂಬ ಮೆಚ್ಚಿಗೆಯಾದ ಅಂಶ ಕ್ರಿಯೆಯಿಂದ ಜ್ಞಾನವನ್ನು ಪಡೆಯುವದು ಭಾರತೀಯ ಪದ್ಧತಿ ಎಂಬ ಅಂಶವನ್ನು ಇದು ತೋರಿಸಿರುವದು. ನನ್ನ+ಅಣ್ಣ=ನನ್ನಣ್ಣ ಆಗುವದರಿಂದ ಕನ್ನಡದಲ್ಲಿ ಲೋಪಸಂಧಿ ಹುಟ್ಟಿಕೊಂಡಿದೆಯೋ ಅಥವಾ ಲೋಪಸಂಧಿ ಇರುವದರಿಂದ ನನ್ನ+ಅಣ್ಣ=ನನ್ನಣ್ಣ ಎಂದು ಮಾಡಲು ಭಾಷೆ ಅನುಮತಿ ನೀಡುತ್ತದೆಯೋ ಎಂಬ ಪ್ರಶ್ನೆ ನನ್ನನ್ನು ಕಾಡುತ್ತಿತ್ತು. ಮೊದಲು ಪ್ರಯೋಗ, ನಂತರ ವ್ಯಾಕರಣ ಎಂಬುದು ಅನುಭವಕ್ಕೆ ಸರಿಹೊಂದುತ್ತಿದ್ದರೂ ಅದಕ್ಕೆ ಸರಿಯಾದ ವಾದ ಇಲ್ಲಿ ಸಿಕ್ಕಿತು.
Read more »

3
ಆಗಸ್ಟ್

ನಿಲುಮೆ ಪ್ರಕಾಶನದ ಪುಸ್ತಕ ಬಿಡುಗಡೆಯ ಬಗ್ಗೆ “ನಿಲುಮಿಗನ” ವರದಿ

– ಹರೀಶ್ ಆತ್ರೇಯ

ನಿಲುಮೆ ಪುಸ್ತಕ ಬಿಡುಗಡೆನಿಲುಮೆ ಬಳಗದ ಎರಡನೆಯ ಕಾಣ್ಕೆಯಾಗಿ ’ಬುದ್ಧಿಜೀವಿಗಳ ಮೂಢನಂಬಿಕೆಗಳು’ ಮತ್ತು ’ಕೊಟ್ಟಕುದುರೆಯನೇರಲರಿಯದೆ’ ಎಂಬ ಪುಸ್ತಕಗಳ ಲೋಕಾರ್ಪಣೆಯ ಕಾರ್ಯಕ್ರಮ ದಿನಾಂಕ ೦೨ ಆಗಸ್ಟ್ ೨೦೧೫ ರಂದು ಮಿಥಿಕ್ ಸೊಸೈಟಿಯಲ್ಲಿ ನೆರವೇರಿತು. ಕಾರ್ಯಕ್ರಮದ ಅಧ್ಯಕ್ಷರಾಗಿ ಶ್ರೀ ಷಣ್ಮುಖರವರು, ಮುಖ್ಯ ಅಥಿತಿಗಳಾಗಿ ಶ್ರೀ ವಿಶ್ವೇಶ್ವರ ಭಟ್ ರವರು ವೇದಿಕೆಯಲ್ಲಿ ಆಸೀನರಾಗಿದ್ದರು. ಅನುವಾದಕ ಲೇಖಕ ಪ್ರೊ ರಾಜಾರಾಮ್ ಹೆಗಡೆಯವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.ಕಾರ್ಯಕ್ರಮವು ಚಿತ್ರ ಪ್ರಸನ್ನ ಅವರ ಪ್ರಾರ್ಥನೆಯೊಂದಿಗೆ ಆರಂಭವಾಗಿ ನವೀನ್ ಕುಮಾರ್ ರವರ ಸ್ವಾಗತದಿಂದ ಮುನ್ನಡೆದು ಯಶಸ್ವಿನಿಯವರ ನಿರೂಪಣೆಯಲ್ಲಿ ಕಳೆಗಟ್ಟಿತು.

ಕಳೆದ ಆರು ವರ್ಷಗಳಿಂದ ಬೌದ್ಧಿಕ ವಿಷಯಗಳನ್ನು ಮಂಡಿಸುತ್ತಿರುವ ನಿಲುಮೆ ಬ್ಲಾಗಿಗರು ತಮ್ಮ ಸಿದ್ದಾಂತಗಳಿಂದ ಮತ್ತು ಬೌದ್ಧಿಕತೆಯಿಂದ ಹೆಚ್ಚು ಪ್ರಕಾಶಗೊಂಡಿದ್ದಾರೆ. ಕಳೆದ ವರ್ಷ ’ಬೌದ್ಧಿಕ ದಾಸ್ಯದಲ್ಲಿ ಭಾರತ’ ಎಂಬ ಪುಸ್ತಕದ ಲೋಕಾರ್ಪಣೆಯ ನಂತರ ಅದರ ಮುಂದುವರೆದ ಭಾಗವಾಗಿ ಬುದ್ಧಿಜೀವಿಗಳ ಮೂಡನಂಬಿಕೆಗಳು ಲೋಕಾರ್ಪಣೆಯಾಗಿದೆ. ’ಬೌದ್ಧಿಕ ದಾಸ್ಯದಲ್ಲಿ ಭಾರತ’ ಬ್ರಿಟಿಶ್ ವಸಾಹತು ಪ್ರಜ್ಞೆಯ ಪ್ರವೇಶಿಕೆಯಾದರೆ ’ಬುದ್ಧಿಜೀವಿಗಳ ಮೂಡ ನಂಬಿಕೆಗಳು’ ಪುಸ್ತಕವು ಮೊದಲ ಬೆಳಕಿನ ಕಿರಣವಾಗಿದೆ. ಕ್ರಿಶ್ಚಿಯನ್ ಥಿಯಾಲಜಿಯ ನೆಲೆಗಟ್ಟಲ್ಲಿ ನೋಡಿದ ಮತ್ತು ನೋಡುತ್ತಿರುವ ನಮ್ಮ ಬುದ್ಧಿಜೀವಿಗಳ (ಕು)ತರ್ಕಗಳಿಗೆ ಪ್ರಶ್ನೆಗಳನ್ನು ಕೇಳುವ ಮೂಲಕ ತಮ್ಮ ಸಿದ್ದಾಂತವನ್ನು ಪ್ರೊ ಬಾಲು ರವರು ಬಲವಾದ ಪೆಟ್ಟು ಕೊಟ್ಟಿದ್ದಾರೆ. ಅವರು ತಮ್ಮ The Heathen in his blindness ಎಂಬ ಸಂಶೋಧನಾ ಗ್ರಂಥದಲ್ಲಿ ಎಲ್ಲ ಕುತರ್ಕಗಳಿಗೂ ಸಮಗ್ರವಾಗಿ ಸಾದಾರವಾಗಿ ಉತ್ತರಿಸಿದ್ದರೂ ಅದು ಹೆಚ್ಚು ಜನರಿಗೆ ತಲುಪದಿದ್ದುದ್ದರಿಂದ ಮತ್ತು ಅರ್ಥೈಸಿಕೊಳ್ಳಲು ಸುಲಭದ ತುತ್ತಲ್ಲವಾದ್ದರಿಂದ ಪ್ರೊ ರಾಜಾರಾಮ ಹೆಗಡೆಯವರು ಅದನ್ನು ಇನ್ನೂ ಸರಳಗೊಳಿಸಿ ಕನ್ನಡದಲ್ಲಿ ತಂದಿದ್ದಾರೆ.

Read more »

3
ಆಗಸ್ಟ್

ನಿಲುಮೆ ಪ್ರಕಾಶನದ ಪುಸ್ತಕ ಬಿಡುಗಡೆಯ ಬಗ್ಗೆ “ವಿಜಯವಾಣಿ” ವರದಿ

ವಿಜಯವಾಣಿ ವರದಿ

1
ಆಗಸ್ಟ್

ನಾಳೆ ಬಿಡುಗಡೆಯಾಗಲಿರುವ ನಿಲುಮೆ ಪ್ರಕಾಶನದ ಪುಸ್ತಕಗಳ ಪರಿಚಯ

ಬುದ್ಧಿಜೀವಿಗಳ ಮೂಢನಂಬಿಕೆಗಳು :

ಬುದ್ಧಿಜೀವಿಗಳ ಮೂಢ ನಂಬಿಕೆಗಳು

ಭಾರತೀಯ ಸಮಾಜದ ಕುರಿತು ಇಂದು ಪ್ರಚಲಿತದಲ್ಲಿರುವ ಥಿಯರಿಗಳು ಕ್ರೈಸ್ತ ಥಿಯಾಲಜಿಯ ಪೂರ್ವಗ್ರಹಗಳೇ ವಿನಃ ನಿಜವಾದ ಥಿಯರಿಗಳಲ್ಲ. ನಿಜವಾದ ಥಿಯರಿಗಳನ್ನು ಕಟ್ಟುವ ಕೆಲಸ ಇನ್ನು ಮುಂದೆ ನಡೆಯಬೇಕಿದೆ. ಈಗ ಸಮಾಜ ವಿಜ್ಞಾನಿಗಳಿಂದ ಆಗಬೇಕಾಗಿರುವ ಕೆಲಸವೆಂದರೆ ನಿಜವಾದ ಸಾಮಾಜಿಕ ಸಿದ್ಧಾಂತಗಳನ್ನು ರೂಪಿಸುವುದು. ಅಂದರೆ ಪಾಶ್ಚಾತ್ಯರು ಪ್ರಾರಂಭಿಸಿದ ಸಮಾಜ ವಿಜ್ಞಾನದ ತಿಳಿವಳಿಕೆಯನ್ನು ನಮ್ಮ ಅನುಭವದ ಬೆಳಕಿನಲ್ಲಿ ಪರಿಷ್ಕರಿಸುತ್ತ ಬೆಳೆಸುವುದು. ಇದೊಂದು ಅಗಾಧವಾದ ಕೆಲಸ ಹಾಗೂ ಅನೇಕ ತಲೆಮಾರುಗಳ ಕೆಲಸ.

ಇಂದು ಸಮಾಜ ವಿಜ್ಞಾನದ ಸತ್ಯಗಳು ಒಬ್ಬನು ಯಾವ ಜಾತಿ, ಲಿಂಗ ಅಥವಾ ಮತಕ್ಕೆ ಸೇರಿದ್ದಾನೆ ಎಂಬುದನ್ನು  ಅವಲಂಬಿಸಿ ನಿರ್ಣಯವಾಗುವ ಪರಿಸ್ಥಿತಿ ಇದೆ. ಇದೊಂದು ರೀತಿಯ ಕುರುಡು. ಇದನ್ನೇ ಬುದ್ಧಿಜೀವಿಗಳ ಮೌಢ್ಯ ಎಂದು ಕರೆಯಲು ಬಯಸುತ್ತೇನೆ. ಅಂದರೆ ಇದು ನಿಜವಾಗಿಯೂ ವೈಜ್ಞಾನಿಕ ಚಿಂತನೆಯ ಕುರಿತ ಹಾಗೂ ಸಾಮಾಜಿಕ ಥಿಯರಿಗಳನ್ನು ಕಟ್ಟುವ ಕುರಿತ ಮೌಢ್ಯ. ಇವರೆಲ್ಲ ಭಾರತೀಯ ಸಂಸ್ಕೃತಿಯಲ್ಲಿರುವ ಮೂಢನಂಬಿಕೆಗಳನ್ನು ತೊಡೆಯುವ ಕುರಿತು ಮಾತನಾಡುತ್ತಿದ್ದಾರೆ. ಆದರೆ ಅಂಥ ಭಾರತೀಯ ಸಂಸ್ಕೃತಿ ಹಾಗೂ ಸಮಾಜದ ಕುರಿತ ಇವರ ವಿಚಾರಗಳೇ ಮೂಢನಂಬಿಕೆಗಳ ಸರಣಿಯಾಗಿವೆ ಎಂಬುದು ಒಂದು ವಿಪರ್ಯಾಸ.

ಕೊಟ್ಟಕುದುರೆಯನೇರಲರಿಯದೆ :
ಕೊಟ್ಟ ಕುದುರೆಯನೇರಲರಿಯದೆವಚನಗಳು ಜಾತಿ ವಿರೋಧಿ ಚಳವಳಿಯೆಂದು ಒತ್ತಾಯಿಸುವ ಚಿಂತಕರು, ಆಧ್ಯಾತ್ಮ ಸಾಧನೆಯ ಆರಂಭದ ಹಂತದಲ್ಲಿ ಬರುವ ಕೆಲವೇ ಕೆಲವು ವಚನಗಳಲ್ಲಿನ ವಿಚಾರವನ್ನೇ ಇಡಿಯಾಗಿ ವಚನ ಸಂಪ್ರದಾಯಕ್ಕೆ ಆರೋಪಿಸುವ ತಪ್ಪು ಮಾಡುತ್ತಾರೆ. ಷಟ್ ಸ್ಥಲ ಕಲ್ಪನೆಯ ಮೂಲಕ ನೋಡುವುದಾದರೆ, ಅಲ್ಲಮ ಬಸವಣ್ಣನವರಂಥ ಆತ್ಮಜ್ಞಾನಿಗಳನ್ನು ಇವರು ಭಕ್ತಸ್ಥಲ ಮತ್ತು ಮಾಹೇಶ್ವರಸ್ಥಲದ ಆಚೆಗೆ ಹೋಗದ, ಅಂದರೆ ತಮ್ಮ ಭವವೇ ಹಿಂಗಿರದ ಹೊಡೆಯುತ್ತಿರುವ ಸಾಧಾರಣ ಭಕ್ತರು ಎಂಬಂತೆ ಚಿತ್ರಿಸಿ ಅದನ್ನು ಜಗತ್ತಿನಲ್ಲೆಲ್ಲಾ ಸಾರುತ್ತಿದ್ದಾರೆ. ಅಷ್ಟೇ ಅಲ್ಲ ಅದೇ ಅವರ ಹೆಚ್ಚುಗಾರಿಕೆ ಎಂದು ಒತ್ತಾಯಿಸುತ್ತಿದ್ದಾರೆ. ನಮಗೆ ಇಂದು ಯಾವ ಚಿತ್ರಣ ಬೇಕು? ಬಸವಣ್ಣನವರ ಕುರಿತು ಭಾರತೀಯ ಪರಂಪರೆಯು ಒದಗಿಸುವ ಚಿತ್ರಣವೊ ಅಥವಾ ಪಾಶ್ಚಾತ್ಯ ಪರಂಪರೆಯು ಒದಗಿಸುವ ಚಿತ್ರಣವೊ?

ವಚನಗಳ ಈಗಿನ ಓದಿನಲ್ಲಿರುವ ಕೊರತೆಯನ್ನು ತೆಗೆದು ತೋರಿಸಿ ಅವನ್ನು ಸರಿಪಡಿಸುವ ತುರ್ತು ಅಗತ್ಯ ಇಂದು ನಮ್ಮ ಮುಂದಿದೆ.ಈ ಕೃತಿಯಲ್ಲಿರುವ ಲೇಖನಗಳು ಈ ನಿಟ್ಟಿನಲ್ಲಿ ಬಾಲಗಂಗಾಧರರ ಸಂಶೋಧನಾ ತಂಡದ ಅಲ್ಪ ಕಾಣಿಕೆಗಳು. ನಾವು ಬೆಳೆದು ಬಂದ ಸಂಪ್ರದಾಯಗಳು ಸತ್ತ ಪಳೆಯುಳಿಕೆಗಳಲ್ಲ, ಅವನ್ನು ನಮಗೆ ಬೇಕಾದಂತೇ ಬೇಕಾಬಿಟ್ಟಿಯಾಗಿ ಉಪಯೋಗಿಸಿ ಬಿಸಾಡಲು ಬರುವುದಿಲ್ಲ, ಹಾಗೂ 21ನೆಯ ಶತಮಾನದಲ್ಲೂ ಕೂಡ ಅವು ತಮ್ಮ ಸತ್ವವನ್ನು ಹಾಗೂ ಪ್ರಸ್ತುತತೆಯನ್ನು ಉಳಿಸಿಕೊಂಡಿವೆ ಎಂದು ನಮ್ಮಂತೆ ನಂಬುವವರನ್ನು ಉದ್ದೇಶಿಸಿ ಈ ಲೇಖನಗಳನ್ನು ಬರೆಯಲಾಗಿದೆ

ನಮ್ಮ ಪ್ರಕಾಶನದ ಮೊದಲ ಪುಸ್ತಕ, “ಬೌದ್ಧಿಕ ದಾಸ್ಯದಲ್ಲಿ ಭಾರತ” ಪುಸ್ತಕ ದೊರೆಯುವ ಬಗ್ಗೆ ಮಾಹಿತಿ