ವಿಷಯದ ವಿವರಗಳಿಗೆ ದಾಟಿರಿ

Posts from the ‘ಕರ್ನಾಟಕ’ Category

3
ಡಿಸೆ

ಸಾಹಿತಿ, ಬುದ್ಧಿಜೀವಿಗಳ ಆತ್ಮ ಸಾಕ್ಷಿ ಯಾರ ಪಾದಾರುವಿಂದವನ್ನು ಸೇರಿದೆ?

ಕಿರಣ್ ಕಿಜೋ
ಸಂಶೋಧನಾ ವಿದ್ಯಾರ್ಥಿ
ದ್ರಾವಿಡ ವಿಶ್ವವಿದ್ಯಾಲಯ, ಕುಪ್ಪಂ
ಆಂಧ್ರ ಪ್ರದೇಶ

15203330_1161962633852199_2178590942366491034_nಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಅರೆನಗ್ನ ಚಿತ್ರ ನೋಡಿ, ಸಾಕಷ್ಟು ಛೀಮಾರಿಗೆ ಒಳಗಾಗಿರುವ ಶಿಕ್ಷಣ ಸಚಿವ ತನ್ವೀರ್ ಸೇಠ್, “ಮೂರೂ ಬಿಟ್ಟವರು ಊರಿಗೆ ದೊಡ್ಡವರು” ಎನ್ನುವ ಹಾಗೇ ಓಡಾಡಿಕೊಂಡಿರುವುದನ್ನು ನೋಡಿದರೆ ನಿಜಕ್ಕೂ ಖೇದವೆನಿಸುತ್ತದೆ. ಈ ನಡುವೆ ಸರ್ಕಾರವು ಸಚಿವ ಮಹಾಶಯರ ಬೆನ್ನಿಗೆ ನಿಂತು, ಸಿ.ಐ.ಡಿ.ಯಿಂದ ತನಿಖೆಯ ನಾಟಕವಾಡಿಸಿ ಕ್ಲೀನ್‍ಚೀಟ್ ನೀಡುವ ಉಮ್ಮೇದಿಯಲ್ಲಿದೆ. ನಿಷ್ಠ ಪೋಲಿಸ್ ಅಧಿಕಾರಿ ಗಣಪತಿ ಸಾವಿನ ವಿಚಾರದಲ್ಲೇ ಜಾರ್ಜ್‍ಗೆ ಕ್ಲೀನ್‍ಚೀಟ್ ನೀಡಿದವರಿಗೆ, ಈ ಪ್ರಕರಣ ಹೂವೆತ್ತಿದಷ್ಟೇ ಸಲೀಸು ಬಿಡಿ! ಇರಲಿ, ಇದೆಲ್ಲಾ ರಾಜಕಾರಣದ ಕೇಡಿನ ಭಾಗ. ನನ್ನ ಪ್ರಶ್ನೆ ಆ ಕುರಿತದ್ದಲ್ಲ, ಆ ಉದ್ದೇಶವೂ ನನ್ನಲ್ಲಿಲ್ಲ. ಆದರೆ ಸಭ್ಯ, ಪ್ರಜ್ಞಾವಂತ ಸಮಾಜವನ್ನು ಕಾಡುತ್ತಿರುವುದು ಹಾಗೂ ಸಂಕಟಕ್ಕೆ ದೂಡಿರುವುದು, ಈ ಮನುಷ್ಯ ನಾಡಿದ್ದು ರಾಯಚೂರಿನಲ್ಲಿ ನಡೆಯುತ್ತಿರುವ 82 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿಯ ಅಧ್ಯಕ್ಷನೆಂಬುದು! ಮತ್ತಷ್ಟು ಓದು »

10
ನವೆಂ

ನನ್ನ ಚೊಚ್ಚಲ ಪರ್ವತಾರೋಹಣ

– ಅಭಿಜಿತ್ ಕೆ ಜಾಯಕ್ಕನವರ

kp4ನನಗೆ ತುಂಬಾ ಖುಷಿಯಾದಾಗ ಬರೆಯಬೇಕೆನಿಸುತ್ತದೆ. ಈಗ ಬರೆಯುತ್ತಿರುವ ಖುಷಿಗೆ ಕಾರಣ ಮೂರು. ಒಂದು ಸತತ ೭೦ ಘಂಟೆಗಳ ನಂತರ ಸುಖವಾಗಿ ನಿದ್ರೆ ಮಾಡಿದ್ದು, ಎರಡು ನನ್ನ ಮೊದಲ ಪರ್ವತಾರೋಹಣವನ್ನು ಯಶಸ್ವಿಯಾಗಿ ಮುಗಿಸಿದ್ದು, ಮೂರು ಈ ಎರಡಕ್ಕಿಂತಲೂ ಮುಖ್ಯವಾದದ್ದು ಅದೆಂದರೆ ಪರ್ವತಾರೋಹಣದ ಸಮಯದಲ್ಲಿ ನಾನು ಮತ್ತು ನನ್ನ ನಾಲ್ಕು ಜನ ಗೆಳೆಯರು ಕೈಗೊಂಡ ಒಂದು ಸಣ್ಣ ಕಾರ್ಯ ( an initiative ). ಈ ನನ್ನ ಪರ್ವತಾರೋಹಣದ ಮೇಲೆ ಒಂದು ಸುದೀರ್ಘವಾದ ಪ್ರಭಂದವನ್ನೇ ಬರೆಯಬಹುದಾದರೂ, ನನ್ನ ಮನಸ್ಸು ಆ ಚಿಕ್ಕ ಘಟನೆಯೊಂದನ್ನು ಮಾತ್ರ ಪ್ರಸ್ತಾಪಿಸಲು ಹಾತೊರೆಯುತ್ತಿದೆ. ಮತ್ತಷ್ಟು ಓದು »

7
ನವೆಂ

ಭವಿಷ್ಯತ್ತಿನಲ್ಲಿ ಯಾವ ಹಬ್ಬ ಕೈಬಿಡಲಿದೆಯೋ…?

– ಸಂತೋಷಕುಮಾರ ಮೆಹೆಂದಳೆ. ಕೈಗಾ 

dsc8476_tipu_sultan_m
( ನಾನು ನನ್ನ ಸಮಾಜ ಮತ್ತು ಧರ್ಮಾಧಾರಿತ ವೃತ್ತದಲ್ಲಿ ನನ್ನ ಹಿರಿಮೆಯನ್ನು ಸ್ಥಾಪಿಸಿಕೊಳ್ಳುವುದು ಹೇಗೆ..? ಇನ್ನೊಂದು ಧರ್ಮವನ್ನು ಮುಗಿಸಿ ಹಾಕುವುದರ ಮೂಲಕ. ಇದು ಸುಲಭದ ದಾರಿ ಮತ್ತು ಸರಿಯಾಗಿ ಇನ್ನೂರು ವರ್ಷಗಳ ಹಿಂದೆ ಟಿಪ್ಪು ಮಾಡಿದ್ದೂ ಅದೇ. ಅನಾಮತ್ತಾಗಿ ಲಕ್ಷಗಟ್ಟಲೇ ಹಿಂದೂಗಳನ್ನು ವರ್ಷವಧಿಯೊಳಗೆ ಮುಗಿಸಿ ಹಾಕಿ, ಕೊಡವರ ಒಂದು ತಲೆಮಾರನ್ನೇ ನಿರ್ನಾಮ ಮಾಡಿ, ಅದನ್ನು ಸಾಧನೆ ಎಂಬಂತೆ ಪತ್ರಗಳ ಮೂಲಕ ಪ್ರಚುರಪಡಿಸಿದ ಕೂಡಾ. ಆದರೆ ಇವತ್ತಿಗೂ ಅವನ ಭಜನೆ ಮಾಡುತ್ತಿರುವ ಭಟ್ಟಂಗಿಗಳಿಗೆ ತಾವೂ ಮುಂದೊಮ್ಮೆ ಇಂತಹದ್ದೇ ಪರಿಸ್ಥಿತಿಗೆ ಈಡಾಗಲಿದ್ದೇವೆ ಎನ್ನುವ ಅರಿವಾದರೂ ಬೇಡವಾ…? )   ಮತ್ತಷ್ಟು ಓದು »

3
ನವೆಂ

ಸಮಾಜ ಒಡೆಯುವ ಜಯಂತಿ, ಉತ್ಸವಗಳು ಬೇಕೆ…?

– ಸಂತೋಷಕುಮಾರ ಮೆಹೆಂದಳೆ.

dsc8476_tipu_sultan_m( ಬುದ್ಧಿಜೀವಿಗಳು ಆಳುವವರನ್ನು ಮೆಚ್ಚಿಸಲು ಬರೆದ ಲೇಖನಗಳನ್ನು ನಾನು ನೋಡಿದ್ದೇನೆ. ಟಿಪ್ಪು ರಾಕೇಟ್ ಹಾರಿಸಿದ, ಟಿಪ್ಪು ತನ್ನ ಮಕ್ಕಳನ್ನು ಬಲಿಕೊಟ್ಟ ಎನ್ನುವವರಿಗೆ, ಸಾಲುಸಾಲಾಗಿ ತಮ್ಮ ಗಂಡಂದಿರನ್ನೇ ಇವತ್ತು ಕಾಶ್ಮೀರ ಗಡಿಯಲ್ಲಿ ನಮ್ಮ ಮಹಿಳೆಯರು ತ್ಯಾಗಮಾಡುತ್ತಿದ್ದರೆ, ಅವರ ಮಕ್ಕಳು ಅಪ್ಪನ ಹೆಣಕ್ಕೆ ಸೆಲ್ಯೂಟ್ ಹೋಡೆದು `..ಜೈ ಹಿಂದ್..’ ಎಂದು ಕಿರುಚುತ್ತಾ ಕಣ್ಣೀರು ಹಾಕುತ್ತವಲ್ಲ ಅದು ಯಾವನಿಗೂ ಕಾಣುತ್ತಲೇ ಇಲ್ಲವಲ್ಲ. )

ಇಂದು ಜಯಂತಿ, ಒಂದು ಹಬ್ಬ ಹರಿದಿನ ಎನ್ನುವುದು ಖುಶಿಯಾಗಿ ಮನೆ ಮತ್ತು ಕುಟುಂಬ ಕೊನೆಗೆ ಸಮಾಜವೊಂದು ಸಂಪೂರ್ಣವಾಗಿ ಪಾಲ್ಗೊಳ್ಳುವಿಕೆಯ ಸಾಮೂಹಿಕ ಹಬ್ಬವಾಗಿರುತ್ತದೆಯೇ ಹೊರತಾಗಿ ಮುಖ ತಿರುವುವ, ಇದ್ದಬದ್ದ ಸಾಮರಸ್ಯದ ಸಂಬಂಧವೂ ಮುರಿದುಕೊಳ್ಳುವ ಜಾಡ್ಯವಾಗಬಾರದು. ಇವತ್ತು ಮನೆ, ವಠಾರಗಳಲ್ಲಿ ನಡೆಯುವ ಸಮಾರಂಭಗಳನ್ನು ಗಮನಿಸಿ. ಮನೆಯಲ್ಲಿಷ್ಟು ಸಂತಸ, ನೆಂಟರಿಷ್ಟರಿಗೆ ಸಿಹಿ, ಮಾಂಸಾಹಾರಿಗಳಾಗಿದ್ದರೆ ಕೊನೆಯ ದಿನ ಬಾಡೂಟ ಹಾಕಿಸಿ ಹಿಂದಿನ ಇದ್ದಬದ್ದ ಕಹಿಯನ್ನೂ ಮರೆಯುವ ಸಂಪ್ರದಾಯ ಮತ್ತು ಸಾಮಾಜಿಕ ಅಗತ್ಯತೆಗಳನ್ನು ಗಮನಿಸಿಯೇ ನಮ್ಮ ನಮ್ಮಲ್ಲಿ ಆಯಾ ಕಾಲವಾರು ಮತ್ತು ಸಾಮಾಜಿಕ ನಡವಳಿಕೆ ಜಾತಿ ಧರ್ಮಾಧಾರಿತ ಆಚರಣೆಗಳು ಬೆಳಕಿಗೆ ಬಂದವು. ಮತ್ತಷ್ಟು ಓದು »

30
ಆಕ್ಟೋ

ದೀಪಾವಳಿಯ ಬೆಳಕಿಗೆ ಶಾಶ್ವತ ಕತ್ತಲೆ ತುಂಬಿದ ಸೈತಾನ

– ಸಂತೋಷ್ ತಮ್ಮಯ್ಯ

dsc8476_tipu_sultan_mಮಂಡ್ಯದಲ್ಲಿ ಅಕಸ್ಮಾತ್ತಾಗಿ ಪರಿಚಯವಾದ ಒಬ್ಬರು ತನ್ನನ್ನು ಸೂರಜ್ ರಂಗಯ್ಯನ್ ಎಂದು ಹೇಳಿಕೊಂಡರು. ಕನ್ನಡದ್ದಲ್ಲದ ಕನ್ನಡದ ಹೆಸರು. ಕನ್ನಡದಂತೆಯೇ ಕೇಳಿಸುವ ಆ ಹೆಸರಿನ ಮೂಲವನ್ನು ಹೇಳುತ್ತಾ ಹೋದಂತೆ ಅದೊಂದು ಕಥೆಯೇ ಆದೀತು. ಆ ಕಥೆ ಮತ್ತೆಲ್ಲಿಗೋ ತಿರುವನ್ನು ಪಡೆದುಕೊಳ್ಳತೊಡಗಿತು. ಆ ಕಥೆ ಇತಿಹಾಸವಾಯಿತು. ಇತಿಹಾಸ ಭೀಕರತೆಯನ್ನು ಹೇಳಿತು. ಭೀಕರತೆ ಸೂತಕವನ್ನು ಹೇಳಿತು. ಆ ಇತಿಹಾಸ ವಿಚಿತ್ರವಾಗಿತ್ತು. ಅಪರೂಪವಾಗಿತ್ತು. ನೋವಿನಿಂದ ಕೂಡಿತ್ತು. ಆ ಇತಿಹಾಸ, ಭೀಕರತೆ, ನೋವಿನ ಉಳಿಕೆಯಂತೆ ಸೂರಜ್ ರಂಗಯ್ಯನ್ ಕಂಡರು. ಸೂಕ್ಷ್ಮವಾಗಿ ನೋಡಿದರೆ ಇನ್ನೂರು ವರ್ಷಗಳ ಹಿಂದಿನ ನೋವು ಇಂದೂ ಅವರ ಮುಖದಲ್ಲಿ ಇಣುಕುತ್ತಿತ್ತು. ಇತಿಹಾಸವನ್ನು ಹೇಳುತ್ತಾ ಹೇಳುತ್ತಾ ಸೂರಜ್ “ಹಾಗಾಗಿ ನಾವು ಇಂದಿಗೂ ದೀಪಾವಳಿ ಆಚರಿಸುತ್ತಿಲ್ಲ” ಎಂದು ಮುಗಿಸಿದರು. ಸೌಜನ್ಯಕ್ಕೂ ಹಬ್ಬಕ್ಕೆ ಕರೆಯಲಾರದ ಸ್ಥಿತಿ ಅವರದ್ದು. ಅವರು ಮಂಡ್ಯದ ಸದ್ಗಹಸ್ಥರು. ಅತಿ ವಿರಳ ಸಂಖ್ಯೆಯಲ್ಲಿರುವ ಮಂಡಯಂ ಅಯ್ಯಂಗಾರರರು ಎಂಬ ಬ್ರಾಹ್ಮಣ ಸಮುದಾಯಕ್ಕೆ ಸೇರಿದವರು. ಮತ್ತಷ್ಟು ಓದು »

28
ಆಕ್ಟೋ

ಉತ್ತರ ಕನ್ನಡ ಹವ್ಯಕರ ದೊಡ್ಡಬ್ಬ (ದೀಪಾವಳಿ) ದ ಆಚರಣೆ

– ಗೀತಾ ಹೆಗ್ಡೆ

download-1ನಮ್ಮ ಹವ್ಯಕ ಜನಾಂಗದಲ್ಲಿ ದೀಪಾವಳಿ ಹಬ್ಬ ಎಂದು ಕರೆಯುವ ವಾಡಿಕೆ ಇಲ್ಲ. ಚೌತಿ ಹಬ್ಬ (ಗಣೇಶ ಚತುರ್ಥಿ) ಮಾರ್ನೋಮಿ ಹಬ್ಬ ಅಥವಾ ನವರಾತ್ರಿ ಹಬ್ಬ ( ದಸರಾ ಹಬ್ಬ) ದೊಡ್ಡಬ್ಬ (ದೀಪಾವಳಿ ಹಬ್ಬ) ಹೀಗೆ ತಮ್ಮದೆ ಶೈಲಿಯಲ್ಲಿ ಹಬ್ಬಗಳನ್ನು ಕರೆಯುವ ವಾಡಿಕೆ ಅನಾದಿ ಕಾಲದಿಂದ ನಡೆದುಕೊಂಡು ಬಂದಿದೆ. ಹಾಗೂ ಈ ಹಬ್ಬಗಳನ್ನು ಆಚರಿಸುವ ರೀತಿ ಕೂಡಾ ವಿಭಿನ್ನವಾಗಿದೆ. ಯಾವುದೇ ಹವ್ಯಕರ ಮನೆಗೆ ತೆರಳಿದರೂ ಹಬ್ಬ ಆಚರಿಸುವ ರೀತಿ, ಅಡುಗೆ ಮಾಡುವ ರೀತಿ, ಹವ್ಯಕ ಭಾಷೆ, ನಡೆ, ನುಡಿ, ಆದರಾಥಿತ್ಯ ಎಲ್ಲವೂ ಒಂದೇ ರೀತಿ ಇರುತ್ತದೆ. ಇದು ಉತ್ತರ ಕನ್ನಡದ ಹವ್ಯಕರ ನಡೆಯಾದರೆ ದಕ್ಷಿಣ ಕನ್ನಡದ ಕಡೆ ಹವ್ಯಕ ಭಾಷೆ, ಹಬ್ಬದ ಆಚರಣೆ ವಿಭಿನ್ನವಾಗಿ ಇರುತ್ತದೆ. ಅಡುಗೆ ಊಟ ಉಪಚಾರ ಪೂಜೆ, ಶಾಸ್ತ್ರ ಎಲ್ಲವೂ ವಿಭಿನ್ನವಾಗಿದೆ. ಎಲ್ಲರೂ ಹವ್ಯಕ ಬ್ರಾಹ್ಮಣರೇ ಆದರೂ ಸ್ವಲ್ಪ ವ್ಯತ್ಯಾಸ. ಮತ್ತಷ್ಟು ಓದು »

13
ಆಕ್ಟೋ

ಪಕ್ಷ ರಾಜಕಾರಣದ ಮರ್ಮಗಳು

ಡಾ. ಸಂತೋಷ್ ಕುಮಾರ್ ಪಿ.ಕೆ
ಶಿವಮೊಗ್ಗ

mar2214udupichik01ರಾಜಕಾರಣವೆಂಬುದು ಇಂದಿಗೆ ಪಕ್ಷಕ್ಕೆ ಮಾತ್ರ ಸೀಮಿತವಾಗಿ, ಪ್ರದೇಶಗಳು ಎರಡನೇ ಪ್ರಾಮುಖ್ಯತೆಯನ್ನು ಪಡೆಯುತ್ತಿವೆ. ಕರ್ನಾಟಕ ಸರ್ಕಾರವೆಂಬುದು ಕಾಂಗ್ರೆಸ್ ಸರ್ಕಾರ ಎಂಬ ಮಿತಿಯ ಒಳಗೆ ಕಾರ್ಯನಿರ್ವಹಿಸಲು ಇಚ್ಚಿಸುತ್ತದೆಯೇ ಹೊರತು ರಾಜ್ಯ ಸರ್ಕಾರವಾಗಿ ಅಲ್ಲ. ಇದು ಕಾಂಗ್ರೆಸ್‍ ಪಕ್ಷದ ಮಿತಿ ಎಂದು ಭಾವಿಸದೆ ಆಡಳಿತಕ್ಕೆ ಬರುವ ಬಹುತೇಕ ಪಕ್ಷಗಳ ಹಣೆಬರಹವಾಗಿದೆ. ಆದ್ದರಿಂದ ಸರ್ವತೋಮುಖ ಅಭಿವೃದ್ಧಿಯ ಬದಲು ಭಾಗಶಃ ಅಭಿವೃದ್ಧಿಯ ಕಾರ್ಯಚಟುವಟಿಕೆಗಳನ್ನು ಸರ್ಕಾರಗಳು ಕೈಗೆತ್ತಿಕೊಳ್ಳುತ್ತವೆ. ಹಾಗಾಗಿ ತುಷ್ಟೀಕರಣದ ರಾಜಕಾರಣ ಹೆಚ್ಚಾಗಿ ಇಂದು ಕಾಣಬಹುದಾಗಿದೆ. ಮತ್ತಷ್ಟು ಓದು »

26
ಸೆಪ್ಟೆಂ

ರಾಜಕೀಯದಲ್ಲಿ ಚಾಣಾಕ್ಷರೂ ಸಹ ಅಪ್ರಸ್ತುತರಾಗಲು, ಒಂದು ತಲೆಕೆಟ್ಟ ನಿರ್ಧಾರ ಸಾಕು||

– ರಾಘವೇಂದ್ರ ನಾವಡ
ki28lotus_jpg_g_ki_2599608fಏನೇ ಹೇಳಿ… ರಾಜ್ಯ ರಾಜಕೀಯದಲ್ಲಿ ದೇವೇಗೌಡರನ್ನು “ಫೀನಿಕ್ಸ್” ಅಂತ ಯಾಕೆ ಕರೀತಾರೆ? ಅನ್ನೋದಕ್ಕೆ ಮತ್ತೊಮ್ಮೆ ನಿದರ್ಶನ ದೊರಕಿತು! ತನ್ನ ಮುಂಪಡೆ ನಾಯಕರ ಸೋಮಾರಿತನ, ಅಂತಃಕಲಹ, ಅಹಂಕಾರ ಮುಂತಾದವುಗಳಿಂದ ಮಕಾಡೆ ಮಲಗಿದ್ದ ಜಾತ್ಯಾತೀತ ಜನತಾದಳ, ತನ್ನ ಮೇರು ಪ್ರಭೃತಿ ದೇವೇಗೌಡರು ತೆಗೆದುಕೊಂಡ ಒಂದು ಚಾಣಾಕ್ಷತನದ ನಿರ್ಧಾರದಿಂದ ಕುಂಭಕರ್ಣ ನಿದ್ರೆಯಿಂದ ದಢಾಲ್ಲನೆ ಎದ್ದರೆ, ಯಡಿಯೂರಪ್ಪನವರ ನಾಯಕತ್ವದಲ್ಲಿ ಸ್ವಲ್ಪ-ಸ್ವಲ್ಪವೇ ಮೇಲೇಳುತ್ತಿದ್ದ (ಇಲ್ಲಿಯೂ ಅಂತಃ ಕಲಹವಿದೆ. ಆದರೆ ನಾಯಕರು ಸ್ವಲ್ಪ ಚುರುಕಾಗಿದ್ದರು) ರಾಜ್ಯ ಭಾಜಪಾ, ಮುಖ್ಯಮಂತ್ರಿ ಸಿದ್ಧರಾಮಯ್ಯ ಕರೆದಿದ್ದ ಸರ್ವಪಕ್ಷ ಸಭೆಯನ್ನು ಬಹಿಷ್ಕರಿಸುವುದರ ಮೂಲಕ ಮಕಾಡೆ ಮಲಗಿತು!! ಒಬ್ಬರು ಫೀನಿಕ್ಸ್ ನಂತೆ ಎದ್ದರೆ ಮತ್ತೊಬ್ಬರು ಶವದಂತೆ ಬಿದ್ದರು!! ಮತ್ತಷ್ಟು ಓದು »

14
ಸೆಪ್ಟೆಂ

ಸ್ವಾತಂತ್ರ್ಯೋತ್ಸವ ವಿಶೇಷ ಸರಣಿ – ದಿನಕ್ಕೊಬ್ಬ ದೇಶಭಕ್ತರ ಸ್ಮರಣೆ

ದಿನ – 28:
ಮೆಣಸಿನಹಾಳ ತಿಮ್ಮನಗೌಡ
– ರಾಮಚಂದ್ರ ಹೆಗಡೆ

11slide2ಶ್ರೀಮಂತ ಕುಟುಂಬದಲ್ಲಿ ಜನಿಸಿದರೂ ಬ್ರಿಟಿಷರ ವಿರುದ್ಧ ಕ್ರಾಂತಿ ಕಹಳೆ ಮೊಳಗಿಸಿ ಹುತಾತ್ಮನಾದ ವೀರ ಕನ್ನಡಿಗ ಮೆಣಸಿನಹಾಳ ತಿಮ್ಮನಗೌಡರು. ಇಂದಿನ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಮೆಣಸಿನಹಾಳದಲ್ಲಿ ಶ್ರೀಮಂತ ಪಾಟೀಲ ಕುಟುಂಬದಲ್ಲಿ ಜನಿಸಿದ ತಿಮ್ಮನಗೌಡ ಬ್ಯಾಡಗಿಗೆ ಸುಭಾಷಚಂದ್ರ ಬೋಸರು ಬಂದಾಗ ಸ್ವಾತಂತ್ರ್ಯ ಹೋರಾಟದ ಕುರಿತ ಅವರ ಭಾಷಣ ಕೇಳಿ ರೋಮಾಂಚಿತರಾಗಿ ತ್ಯಾಗ ಮತ್ತು ಬಲಿದಾನದ ದೀಕ್ಷೆ ತೊಟ್ಟು ತನ್ನ 21ರ ವಯಸ್ಸಿನಲ್ಲೇ ಕಾನೂನು ಭಂಗ ಚಳುವಳಿಗೆ ಧುಮುಕಿದರು. ಆ ಹೊತ್ತಿಗೆ ಬ್ರಿಟಿಷರ ದರ್ಪ ದೌರ್ಜನ್ಯಗಳು ಮಿತಿಮೀರಿದ್ದವು. ಸಾಮಾನ್ಯ ಬಡ ರೈತರನ್ನು ದುಪ್ಪಟ್ಟು ಕಂದಾಯ ಹಾಕಿ ಶೋಷಿಸಲಾಗುತ್ತಿತ್ತು. ಅದನ್ನು ಪ್ರತಿಭಟಿಸಿ ಶೋಷಣೆಯ ವಿರುದ್ಧ ದನಿಯೆತ್ತಿದ ತಿಮ್ಮನಗೌಡರನ್ನು ಬ್ರಿಟಿಷರು ಇನ್ನೂ ಅನೇಕ ಹೋರಾಟಗಾರರೊಂದಿಗೆ ಬಂಧಿಸಿ ಎರಡು ವರ್ಷಕಾಲ ಯರವಾಡ ಜೈಲಿನಲ್ಲಿ ಸೆರೆಯಲ್ಲಿಟ್ಟರು. ಅಲ್ಲಿ ತಿಮ್ಮನಗೌಡರು ಚರಖಾದಿಂದ ನೂಲು ತೆಗೆಯುವುದನ್ನು ಕಲಿತರು. ಜೈಲಿನಿಂದ ಬಿಡುಗಡೆಗೊಂಡ ತಿಮ್ಮನಗೌಡರಿಗೆ ಅವರ ಊರಿನಲ್ಲಿ ಭವ್ಯ ಸ್ವಾಗತ ದೊರೆಯಿತು. ಜೈಲಿನಿಂದ ಬಂದ ಮೇಲೆ ಮತ್ತೆ ತಿಮ್ಮನಗೌಡರು ತಮ್ಮ ಕ್ರಾಂತಿ ಚಟುವಟಿಕೆಗಳನ್ನು ಮುಂದುವರೆಸಿದರು. ಬ್ರಿಟಿಷ್ ದೌರ್ಜನ್ಯದ ವಿರುದ್ಧ ತರುಣರ ಗುಂಪು ಕಟ್ಟಿಕೊಂಡು ಊರೂರು ತಿರುಗಿ ಭಾಷಣ ಮಾಡುತ್ತಾ ಜನರಲ್ಲಿ ಜಾಗೃತಿ ಮೂಡಿಸುತ್ತಾ ಜನರನ್ನು ಬಡಿದೆಬ್ಬಿಸತೊಡಗಿದರು. ಮತ್ತಷ್ಟು ಓದು »

10
ಸೆಪ್ಟೆಂ

ಸ್ವಾತಂತ್ರ್ಯೋತ್ಸವ ವಿಶೇಷ ಸರಣಿ – ದಿನಕ್ಕೊಬ್ಬ ದೇಶಭಕ್ತರ ಸ್ಮರಣೆ

ದಿನ – 24:
ವಿದುರಾಶ್ವತ್ಥದ ಬಲಿದಾನಿಗಳು
– ರಾಮಚಂದ್ರ ಹೆಗಡೆ

image012ಸ್ವಾತಂತ್ರ್ಯ ಸಮರದಲ್ಲಿ ಕರ್ನಾಟಕದಲ್ಲಿ ನಡೆದ ಅತೀ ಭೀಕರ ಹತ್ಯಾಕಾಂಡಗಳಲ್ಲಿ ಒಂದಾದ ‘ವಿದುರಾಶ್ವತ್ಥದ ಬಲಿದಾನ’ ಕರ್ನಾಟಕದ ಜಲಿಯನ್ ವಾಲಾ ಬಾಗ್ ಹತ್ಯಾಕಾಂಡ ಎಂದೂ ಹೆಸರಾಗಿದೆ. ಒಬ್ಬ ಗರ್ಭಿಣಿಯೂ ಸೇರಿದಂತೆ 32 ಜನ ದೇಶಭಕ್ತರು ಬ್ರಿಟಿಷರ ಗುಂಡಿಗೆ ಬಲಿಯಾಗಿ ಪ್ರಾಣಾರ್ಪಣೆ ಮಾಡಿದ್ದು, ಈ ನೆಲದ ಜನರ ಅಪ್ರತಿಮ ದೇಶಭಕ್ತಿಗೆ ಹಾಗೂ ಬ್ರಿಟಿಷ್ ಆಡಳಿತದ ಬರ್ಬರತೆಗೆ ಸಾಕ್ಷಿಯಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಇತಿಹಾಸ ಪ್ರಸಿದ್ಧ ಕ್ಷೇತ್ರ ‘ವಿದುರಾಶ್ವತ್ಥ’ ದೇಶದ ಸ್ವಾತಂತ್ರ್ಯ ಹೋರಾಟಗಾರರ ಚಳುವಳಿಯ ಕೇಂದ್ರವಾಗಿತ್ತೆಂಬುದು ಗಮನಾರ್ಹ ಸಂಗತಿ. ಮಹಾಭಾರತ ಕಾಲದಲ್ಲಿ ವಿದುರ ನೆಟ್ಟಿದ್ದನೆಂದು ನಂಬಲಾಗುವ ಅಶ್ವತ್ಥ ವೃಕ್ಷ ಸ್ವಾತಂತ್ರ್ಯ ಹೋರಾಟದ ಕಾಲದಲ್ಲಿ ಬ್ರಿಟಿಷರ ಪೈಶಾಚಿಕ ದೌರ್ಜನ್ಯಕ್ಕೂ ಸಾಕ್ಷಿಯಾಗಿದ್ದು ದುರಂತದ ಸಂಗತಿ. ಮತ್ತಷ್ಟು ಓದು »