ಲಡಾಖ್ ಹಾಗು ಭಾರತೀಯ ಸೇನೆ
– ಪಲ್ಲವಿ ಭಟ್
ಬೆಂಗಳೂರು
ಇದೀಗಷ್ಟೇ ಸ್ವಾತಂತ್ರ್ಯ ದಿನ ಕಳೆದು ಹೋಗಿದೆ. ಪ್ರತಿ ವರುಷದಂತೆ ಈ ಬಾರಿಯೂ ಅದೇ ಸಂಭ್ರಮ ಸಡಗರದಿಂದ ಎಲ್ಲೆಲ್ಲೂ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಈ ಸಂಭ್ರಮಗಳೆಲ್ಲಾ ಮುಗಿಯುತ್ತಿದ್ದಂತೆ ಅದೊಂದು ವಾರ್ತೆ ನಮ್ಮ ವಾರ್ತಾಪತ್ರಿಕೆಗಳ ಮುಖಪುಟ ಸೇರಿಕೊಂಡಿತ್ತು. ಇನ್ನೂ ಮಾಸದ ನನ್ನ ಕೆಲ ಹೊಸ ನೆನಪುಗಳನ್ನು ಅದು ಕೆದಕತೊಡಗಿತು. “ಲಡಾಖ್’ನಲ್ಲಿ ಭಾರತ, ಚೀನಾ ಯೋಧರ ಸಂಘರ್ಷ: ಭಾರತದೊಳಗೆ ನುಗ್ಗಲು ಚೀನಾ ಸೈನಿಕರ ಯತ್ನ” ಎಂಬುದಾಗಿತ್ತು ಶೀರ್ಷಿಕೆ. ಲಡಾಖ್ ಪ್ರವಾಸ ಮುಗಿಸಿ ಇನ್ನೂ ೧೦ ದಿನಗಳಾಗಿಲ್ಲ. ಅಷ್ಟರಲ್ಲೇ ಇಂತಹ ವಾರ್ತೆಯನ್ನು ಓದಬೇಕಾಗಿ ಬಂತು. ಮತ್ತಷ್ಟು ಓದು
ನನ್ನ ಚೊಚ್ಚಲ ಪರ್ವತಾರೋಹಣ
– ಅಭಿಜಿತ್ ಕೆ ಜಾಯಕ್ಕನವರ
ನನಗೆ ತುಂಬಾ ಖುಷಿಯಾದಾಗ ಬರೆಯಬೇಕೆನಿಸುತ್ತದೆ. ಈಗ ಬರೆಯುತ್ತಿರುವ ಖುಷಿಗೆ ಕಾರಣ ಮೂರು. ಒಂದು ಸತತ ೭೦ ಘಂಟೆಗಳ ನಂತರ ಸುಖವಾಗಿ ನಿದ್ರೆ ಮಾಡಿದ್ದು, ಎರಡು ನನ್ನ ಮೊದಲ ಪರ್ವತಾರೋಹಣವನ್ನು ಯಶಸ್ವಿಯಾಗಿ ಮುಗಿಸಿದ್ದು, ಮೂರು ಈ ಎರಡಕ್ಕಿಂತಲೂ ಮುಖ್ಯವಾದದ್ದು ಅದೆಂದರೆ ಪರ್ವತಾರೋಹಣದ ಸಮಯದಲ್ಲಿ ನಾನು ಮತ್ತು ನನ್ನ ನಾಲ್ಕು ಜನ ಗೆಳೆಯರು ಕೈಗೊಂಡ ಒಂದು ಸಣ್ಣ ಕಾರ್ಯ ( an initiative ). ಈ ನನ್ನ ಪರ್ವತಾರೋಹಣದ ಮೇಲೆ ಒಂದು ಸುದೀರ್ಘವಾದ ಪ್ರಭಂದವನ್ನೇ ಬರೆಯಬಹುದಾದರೂ, ನನ್ನ ಮನಸ್ಸು ಆ ಚಿಕ್ಕ ಘಟನೆಯೊಂದನ್ನು ಮಾತ್ರ ಪ್ರಸ್ತಾಪಿಸಲು ಹಾತೊರೆಯುತ್ತಿದೆ. ಮತ್ತಷ್ಟು ಓದು
ನೋಡುವ ‘ದೃಷ್ಟಿ’ ಬದಲಿಸಬಲ್ಲ ‘ನೈನ್ ಲೈಫ್ಸ್’
– ಡಾ.ಅಶೋಕ್ ಕೆ ಆರ್
ಪ್ರವಾಸಕಥನವೆಂದರೆ ಭೇಟಿ ನೀಡಿದ ತಾಣಗಳ ಮಾಹಿತಿ, ಆ ಜಾಗಕ್ಕೆ ಹೋಗಲಿರುವ ಸಾರಿಗೆ ವ್ಯವಸ್ಥೆಯ ಬಗೆಗಿನ ಮಾಹಿತಿ, ಅಲ್ಲಿ ಸಿಗುವ ವಿಧವಿಧದ ಭೋಜನಗಳ ಮಾಹಿತಿ, ಅಬ್ಬಬ್ಬಾ ಎಂದರೆ ಆ ಸ್ಥಳದ ಪೂರ್ವೇತಿಹಾಸದ ಮಾಹಿತಿ – ಇವು ಸಿದ್ಧರೂಪದ ಬಹುತೇಕ ಪ್ರವಾಸಕಥನಗಳ ಹೂರಣ. ಈ ಸಿದ್ಧ ರೂಪವನ್ನು ಹೊರತುಪಡಿಸಿದ ಪ್ರವಾಸಕಥನಗಳೂ ಉಂಟು, ಅವು ಆತ್ಮರತಿಯೊಡನೆ ತಮ್ಮದೇ ಸ್ವಂತ ಸಂಗತಿಗಳನ್ನು, ಸಣ್ಣಪುಟ್ಟ ಸಮಸ್ಯೆಗಳನ್ನು ವೈಭವೀಕರಿಸಿಕೊಂಡು ಬರೆಯಲ್ಪಟ್ಟ ಹೆಸರಿಗಷ್ಟೇ ಪ್ರವಾಸಕಥನವೆನ್ನಿಸಿಕೊಳ್ಳುವ ಬರವಣಿಗೆಗಳು. ಇವೆಲ್ಲ ರೀತಿಯ ಪ್ರವಾಸಕಥನಗಳು ನಾಚುವಂತೆ ಇರುವ ಪುಸ್ತಕ “ನೈನ್ ಲೈಫ್ಸ್” (Nine Lives). ಪ್ರಕೃತಿ ಸೌಂದರ್ಯದ ವರ್ಣನೆ, ಸ್ಥಳಪುರಾಣದ ಜೊತೆಜೊತೆಗೆ ಆಯ್ದ ಒಂಭತ್ತು ಜನರ ಮತ್ತವರ ಸುತ್ತಲಿನವರ ಕಥೆಯಿದೆ. ಪ್ರಾಚೀನ ಭಾರತದಿಂದ ಇಂದಿನವರೆಗೂ ಸಾಗಿ ಬಂದಿರುವ ‘ವೃತ್ತಿ’ಯಲ್ಲಿ ಕಾಲ ಸರಿದಂತೆ ಆದ ಬದಲಾವಣೆಗಳಿವೆ. ತನ್ನ ಇಪ್ಪತ್ತೈದು ವರುಷಗಳ ಭಾರತದ ಪ್ರವಾಸದಲ್ಲಿ ಭಾರತದ ಸಾಂಸ್ಕೃತಿಕ – ಬಹಿಷ್ಕೃತ ಲೋಕದರ್ಶನ ಮಾಡಿಸುವವನು ವಿಲಿಯಂ ಡ್ಯಾಲ್ರಿಂಪಲ್ (William Dalrymple) ಎಂಬ ಸ್ಕಾಟಿಷ್ ಲೇಖಕ! ಭಾರತೀಯನಾಗದೇ ಹೋದ ಕಾರಣಕ್ಕೆ ಇಂಥದೊಂದು ಒಳನೋಟ ಈ ಲೇಖಕನಿಗೆ ಲಭ್ಯವಾಯಿತಾ? ಒಳಗಿದ್ದು ನೋಡುವವರ ಭಾವಪರಿಧಿಗೆ ದಕ್ಕದ ವಿಷಯಗಳು ಹೊರಗಿನಿಂದ ನೋಡುವವರಿಗೆ ದಕ್ಕುತ್ತದೆ.
ಜೈನ ಧರ್ಮದ ಸನ್ಯಾಸಿನಿ, ಕಣ್ಣೂರಿನ ನೃತ್ಯಪಟು, ಕರ್ನಾಟಕದ ದೇವದಾಸಿಯರು, ಸಾವಿರಾರು ಪುಟದ ಗೀತೆಗಳನ್ನು ಹಾಡುವ ಅನಕ್ಷರಸ್ಥರು, ಸೂಫಿ ಪಂತದ ಹೆಂಗಸು, ಟಿಬೆಟ್ಟಿನಿಂದ ಭಾರತಕ್ಕೆ ವಲಸೆ ಬಂದ ಬೌದ್ಧ ಬಿಕ್ಕು, ಚೋಳರ ಕಾಲದ ಶೈಲಿಯ ಕೆತ್ತುವ ಶಿಲ್ಪಿ, ಮಾಟಗಾತಿ, ಕುರುಡು ಹಾಡುಗಾರ – ಇವಿಷ್ಟು ನೈನ್ ಲೈಫ್ಸ್ ಪುಸ್ತಕದಲ್ಲಿ ಲೇಖಕ ನಮ್ಮೊಡನೆ ಮುಖಾಮುಖಿಯಾಗಿಸುವ ವ್ಯಕ್ತಿಗಳು. ಓದುಗರೊಡನೆ ಮುಖಾಮುಖಿಯಾಗುವುದು ಕೇವಲ ವ್ಯಕ್ತಿ ಮಾತ್ರವಲ್ಲ; ಆ ವ್ಯಕ್ತಿಯ ವ್ಯಕ್ತಿತ್ವ, ಅವರ ಮನೆಯವರ ತಲ್ಲಣ – ಸಂತಸ, ಆ ವ್ಯಕ್ತಿಯ ಸಾಮಾಜಿಕ ಆರ್ಥಿಕ ಸ್ಥಿತಿ – ಸಮಸ್ಯೆ, ಹೀಗೆ ಒಬ್ಬ ವ್ಯಕ್ತಿಯ ಬಗ್ಗೆ ತಿಳಿಸುತ್ತೇನೆಂದು ಹೇಳುವ ಲೇಖಕ ಆ ವ್ಯಕ್ತಿಯ ಮೂಲಕ ಒಂದಿಡೀ ಪ್ರಾದೇಶಿಕತೆಯ ವಿವರವನ್ನು ಧರ್ಮ – ಧರ್ಮಗಳ ನಡುವಿನ ತಿಕ್ಕಾಟ – ಸಾಮರಸ್ಯಗಳನ್ನು ಸುಲಲಿತ ಓದಿನ ಮೂಲಕ ಮನಸ್ಸಿಗೆ ತಲುಪಿಸುತ್ತಾರೆ. ಹೊರಗಣನವನಾದ ಕಾರಣಕ್ಕೋ ಏನೋ ಯಾವೊಂದು ಪೂರ್ವಾಗ್ರಹವೂ ಇಲ್ಲದೆ ಕಂಡದ್ದನ್ನು ಕೇಳಿದ್ದನ್ನು ಯಥಾವತ್ತಾಗಿ ಬರೆದಿರುವ ಪ್ರಯತ್ನವನ್ನೂ ಗಮನಿಸಬಹುದು.
ಟಾಯ್ಲೆಟ್ ವಾಸು ಅಂದ್ರೆ ಯಾರು ಗೊತ್ತಾ?
-ಚಕ್ರವರ್ತಿ ಸೂಲಿಬೆಲೆ
”ಪ್ರಚಾರದ ಹೆಸರಲ್ಲಿ ಹೊಸಹೊಸ ಮಾರ್ಗಗಳನ್ನು ಹುಡಕಲಾಯ್ತು. ನಾಟಕಗಳು, ಕಥೆಗಳು, ಎಲ್ಲವೂ ಶೌಚಾಲಯದ ಕುರಿತಂತೆಯೇ. ಕುಂತರೂ ನಿಂತರೂ ಶೌಚಾಲಯಗಳೇ. ಕೊನೆಗೆ ಕನಸಿನಲ್ಲೂ ವಾಸು ದೇಶ್‌ಪಾಂಡೆ ಶೌಚಾಲಯವನ್ನೆ ಕಂಡಿದ್ದರೆ ಅಚ್ಚರಿಯಿಲ್ಲ! ಈ ಕಾರಣದಿಂದಲೇ ಸ್ಥಳೀಯ ಆರು ಜಿಲ್ಲೆಗಳಲ್ಲಿ ವಾಸು ದೇಶ್‌ಪಾಂಡೆ `ಟಾಯ್ಲೆಟ್ ವಾಸು’ವಾಗಿಯೇ ಜನಪ್ರಿಯರಾದರು”
ವಾಸು ದೇಶ್‌ಪಾಂಡೆ ಅಲಿಯಾಸ್ ಟಾಯ್ಲೆಟ್ ವಾಸು! ಗುಲ್ಬರ್ಗಾದ ಸೇಡಮ್ಮಿನ ಹುಡುಗ. ಬಡತನದಲ್ಲಿ ಬೆಳೆದ, ಕಷ್ಟಪಟ್ಟು ಓದಿದ. ಕೊನೆಗೆ ಇಂಜಿನಿಯರ್ರೂ ಆದ. ಇನ್ಫೋಸಿಸ್‌ನಲ್ಲಿ ಕೆಲಸಕ್ಕೆ ಸೇರಿಕೊಂಡು ಚೆನ್ನಾಗಿ ದುಡಿದ. ಇಷ್ಟೇ ಆಗಿದ್ದರೆ ಇದೊಂದು ಕನ್ನಡ ಫಿಲಮ್ಮಿನ ಕಥೆಯಂತಾಗಿ ಮುಗಿದುಹೋಗುತ್ತಿತ್ತು. ಹಾಗಾಗಲಿಲ್ಲ. ಊರಿನ ಕೆಲಸ ವಾಸುವನ್ನು ಬಿಡಲಿಲ್ಲ. ಬೆಂಗಳೂರು ಎಲ್ಲರನ್ನು ಕಾಡಿದಂತೆ ಮೋಹವಾಗಿ ಕಾಡಲಿಲ್ಲ.
ಉತ್ತರ ಕರ್ನಾಟಕಕ್ಕೆ ನೆರೆ ಹಾವಳಿ ಅಪ್ಪಳಿಸಿದಾಗ ಇನ್ಫೋಸಿಸ್ ಗುಲ್ಬರ್ಗಾದ ನೆರೆ ಪೀಡಿತ ಪ್ರದೇಶಗಳಲ್ಲಿ ಯೋಜನೆಗಳನ್ನು ಕೈಗೆತ್ತಿಕೊಂಡಿತು. ಮನೆ ಕಟ್ಟಿಕೊಡುವ ಸಾಮಾಜಿಕ ಜವಾಬ್ದಾರಿ ನಿರ್ವಹಿಸಲು ಮುಂದೆ ಬಂತು. ಸ್ಥಳೀಯವಾಗಿ ಸಾಥ್ ಕೊಡಲು ಕೊತ್ತಲ ಬಸವೇಶ್ವರ ಶಿಕ್ಷಣ ಸಂಸ್ಥೆಯಂತಹ ಪ್ರಾಮಾಣಿಕ ಸಂಸ್ಥೆಯೇನೋ ಸಿಕ್ಕಿತು. ಆದರೆ ಈ ಕೆಲಸವನ್ನು ತನ್ನದೆಂದುಕೊಂಡು ಸಮರ್ಥವಾಗಿ ಮಾಡುವವರು ಯಾರಾದರೊಬ್ಬರು ಬೇಕಲ್ಲ? ಆಗ ಇನ್ಫೋಸಿಸ್‌ಗೆ ಕಂಡ ಬೆರಗುಗಣ್ಣಿನ ಇಂಜಿನಿಯರ್ ವಾಸು ದೇಶ್‌ಪಾಂಡೆ. ಅಮೆರಿಕಾದಲ್ಲೆಲ್ಲ ಇದ್ದು ಬಂದ ಹುಡುಗ; ಮತ್ತೆ ಮರಳಿ ಹೊರಡಲು ಸಜ್ಜಾಗಿದ್ದ. ಆದರೆ ಈಗ ಹೊಸತೊಂದು ಆಸಕ್ತಿಕರ ಯೋಜನೆ ಕೈಬೀಸಿ ಕರೆಯಿತು. ಹುಟ್ಟೂರಿನ, ಜಿಲ್ಲೆಯ, ಕೊನೆಗೆ ಹಿಂದುಳಿದ ಎಂಬ ಹಣೆಪಟ್ಟಿ ಹೊತ್ತ ತನ್ನ ಭಾಗದ ಸೇವೆ ಮಾಡುವ ಅವಕಾಶ ಬಯಸಿಬಂದಾಗ ಆಗುವುದಿಲ್ಲ ಎನ್ನುವುದು ಹೇಗೆ?
ರಾಮಲೀಲಾ ಮೈದಾನದಿಂದ, ನೇರವಾಗಿ….
-ಚಕ್ರವರ್ತಿ ಸೂಲಿಬೆಲೆ
ನಾನೀಗ ರಾಮಲೀಲಾ ಮೈದಾನದಲ್ಲಿದ್ದೇನೆ. ೭ನೇ ತಾರೀಖಿನಿಂದಲೇ ಆಂದೋಲನಕ್ಕಾಗಿ ಜನಸಾಗರ ಹರಿದುಬರತೊಡಗಿತ್ತು. ಇಂದು ಇಲ್ಲಿ ಸೇರಿರುವ ಸಂಖ್ಯೆ ನಿರೀಕ್ಷೆಗೂ ಮೀರಿದ್ದು. ರಾಮದೇವ ಬಾಬಾ ನೇತೃತ್ವದ ಈ ಆಂದೋಲನದ ಕುರಿತಂತೆ ಕೆಲವು ಒಳನೋಟಗಳು ಇಲ್ಲಿವೆ…
ಎಲ್ಲರ ಚಿತ್ತ ರಾಮಲೀಲಾ ಮೈದಾನದತ್ತ! ಹಾಗಂತ ನೋಡಿದರೆ ಅನ್ನಿಸುತ್ತಿದೆ. ಒಂಭತ್ತನೆ ತಾರೀಖಿನ ಭ್ರಷ್ಟಾಚಾರ ವಿರೋಧಿ ಆಂದೋಲನಕ್ಕೆ ಅದಾಗಲೇ ಜನಸಾಗರ ಬಂದು ಸೇರುತ್ತಿದೆ. ಏಳನೆ ತಾರೀಖಿನ ವೇಳೆಗಾಗಲೇ ಐದಾರು ಸಾವಿರ ಕಾರ್ಯಕರ್ತರು ವೇದಿಕೆಯ ಹಿಂದೆ ಮುಂದೆ ಗಿಜಿಗುಡುತ್ತ ನಿಂತಿದ್ದರು. ತಯಾರಿಗಳು ಬಿರುಸಾಗಿ ನಡೆದಿದ್ದವು. ಕಾರ್ಯಕರ್ತರ ಹೆಸರು ನೋಂದಾಯಿಸುವುದರಿಂದ ಹಿಡಿದು ವೇದಿಕೆಯ ರಕ್ಷಣೆಯವರೆಗೆ ಕೆಲಸಗಳನ್ನು ಹಂಚಲಾಗುತ್ತಿತ್ತು. ಅಚ್ಚರಿಯೆಂದರೆ ಪ್ರತಿ ವಿಭಾಗಕ್ಕೂ ನೂರು- ನೂರೈವತ್ತು ಜನರ ತಂಡ. ಒಟ್ಟಾರೆ ಲೆಕ್ಕ ಹಾಕಿದರೆ, ಅಣ್ಣಾ ತಂಡದ ಹೋರಾಟಕ್ಕೆ ಅದೆಷ್ಟು ಜನ ಬಂದಿದ್ದರೋ ಅಷ್ಟು ಕಾರ್ಯಕರ್ತರು ಪೂರ್ವ ತಯಾರಿಗೆಂದೇ ಇಲ್ಲಿಗೆ ಬಂದಿದ್ದಾರೆ. ಬಾಬಾ ರಾಮದೇವ್‌ಜೀ ಇದನ್ನೊಂದು ಐತಿಹಾಸಿಕ ನಿರ್ಣಾಯಕ ಹೋರಾಟ ಎಂದಿದ್ದು ತಪ್ಪಲ್ಲವೇನೋ ಎಂದು ಇಲ್ಲಿನ ಜನರನ್ನು ನೋಡಿದಾಗ ಭಾಸವಾಗಿಬಿಡುತ್ತದೆ.
ಯಾವುದೇ ಹೋರಾಟ ಒಂದು ದಿನ ಅಥವಾ ಕೆಲವು ವಾರಗಳದ್ದಲ್ಲ. ಅದೊಂದು ಸುದೀರ್ಘ ಯಾತ್ರೆ. ಅದರಲ್ಲೂ ಈ ಬಗೆಯ ಕಾದಾಟಗಳಂತೂ ದಶಕಗಳಷ್ಟು ಆಳದ ಬೇರುಗಳನ್ನು ಇಳಿ ಬಿಟ್ಟುಕೊಳ್ಳಲಿಲ್ಲವೆಂದರೆ ಫಲ ನೀಡುವುದು ಕಷ್ಟ. ಸಾಮರ್ಥ್ಯ ನರ ನಾಡಿಗಳಲ್ಲಿ ಬೆರೆತುಕೊಂಡು ಹರಿಯಲಿಲ್ಲವೆಂದರೆ, ಹೋರಾಟ ದೀರ್ಘ ಕಾಲದವರೆಗೆ ಮುಂದುವರೆಯುವುದೂ ಅಷ್ಟೇ ಕಷ್ಟ. ಅದಕ್ಕೇ ಗಾಂಧೀಜಿ ವಿಶೇಷ ಅನ್ನಿಸೋದು. ಹತ್ತಿಪ್ಪತ್ತು ವರ್ಷಗಳ ಕಾಲ ಜನರ ನಾಡಿ ಹಿಡಿಹಿಡಿದು ಅಧ್ಯಯನ ಮಾಡಿ ವಿಶ್ವಾಸ ಬಲಿತಾಗ ಹೋರಾಟಕ್ಕಿಳಿಯುತ್ತಿದ್ದವರು ಅವರು. ಹಾಗೆ ಹೋರಾಟಕ್ಕಿಳಿವಾಗ ಅತ್ಯಂತ ಸಹಜ ಹಾಗೂ ಜನರಿಗೆ ಹತ್ತಿರವಾದ ವಿಚಾರಗಳನ್ನಿಟ್ಟುಕೊಂಡೇ ಕದನ ಭೂಮಿಗೆ ಬರುತ್ತಿದ್ದರು. ಹೋರಾಟ ಕಾವು ಪಡಕೊಳ್ಳುತ್ತಿತ್ತು. ಉಪ್ಪಿನ ಸತ್ಯಾಗ್ರಹ ಅಂಥದ್ದೇ ಹೋರಾಟ ತಾನೆ? ಸ್ವತಃ ಗಾಂಧೀಜಿಯ ಕಮ್ಯಾಂಡರ್ ಇನ್ ಚೀಫ್ ಪಟೇಲರು ಲೇವಡಿ ಮಾಡಿದ್ದ ಹೋರಾಟ ಅದು. ಆದರೆ ಜನರು ತೆರಿಗೆಯ ವಿರುದ್ಧ ತಿರುಗಿಬಿದ್ದರು. ಕ್ರಮೇಣ ದೊಡ್ಡ ಆಂದೋಲನವೆ ಶುರುವಾಯ್ತು. ದೇಶ ಗೆಲುವಿನತ್ತ ಹೊರಳಿತು.
ಮತ್ತಷ್ಟು ಓದು
ಜನಶತಾಬ್ದಿ ರೈಲಿನೊಳಗೆ
-ಶಿವು.ಕೆ
ಹತ್ತಾರು ಬಾರಿ ಅರಸೀಕೆರೆಯಲ್ಲಿ ಈ ರೈಲಿಗೆ ಟಿಕೆಟ್ ಕೇಳಿದ್ದೇನೆ. ಕಣ್ಣ ಮುಂದೆ ನಿಂತು ಹೊರಡಲು ಸಿದ್ದವಾಗಿದ್ದರೂ ಒಮ್ಮೆಯೂ ಟಿಕೆಟ್ ಸಿಗದಿರುವುದು! ವಾರಕ್ಕೆ ಮೊದಲೇ ಟಿಕೆಟ್ಟುಗಳು ಬುಕ್ ಆಗಿಬಿಡುವ, ಅತ್ಯಂತ ವೇಗವಾಗಿ ಚಲಿಸುವ ಈ ರೈಲಿನ ಬಗ್ಗೆ ನನಗೆ ವಿಚಿತ್ರವಾದ ಕಲ್ಪನೆಯಿತ್ತು. ಈ ರೈಲು ಪ್ರಾರಂಭವಾಗಿ ಎರಡು ವರ್ಷಗಳಾದರೂ ಒಮ್ಮೆಯೂ ಪ್ರಯಾಣಿಸುವ ಅವಕಾಶ ಸಿಗಲಿಲ್ಲವಲ್ಲ ಎನ್ನುವ ನಿರಾಶೆ ಆಗಾಗ ಕಾಡುತ್ತಿತ್ತು. ಅದು ಮತ್ಯಾವುದು ಅಲ್ಲ ಬೆಂಗಳೂರು-ಹುಬ್ಬಳ್ಳಿ ನಡುವೆ ಚಲಿಸುವ ಜನಶತಾಬ್ದಿ ರೈಲು.
ಈ ರೈಲಿನ ಬಗ್ಗೆ ನನಗೆ ಕುತೂಹಲ ಹೆಚ್ಚಾಗಲು ಅನೇಕ ಕಾರಣಗಳಿವೆ. ರಾತ್ರಿ ಊಟ ಮುಗಿದ ಮೇಲೆ ಮುಕ್ಕಾಲು ಗಂಟೆ ನಮ್ಮ ಮಲ್ಲೇಶ್ವರಂ ರೈಲು ನಿಲ್ಡಾಣದ ಪ್ಲಾಟ್ ಫಾರ್‍ಂನಲ್ಲಿ ನನ್ನ ಶ್ರೀಮತಿ ಜೊತೆ ವಾಕಿಂಗ್ ಮಾಡುವಾಗ ಸರಿಯಾಗಿ ಒಂಬತ್ತು ವರೆಯ ಹೊತ್ತಿಗೆ ದೂರದಿಂದಲೇ ಕೂಗೆಬ್ಬಿಸಿಕೊಂಡು ನಿಲ್ಡಾಣದಲ್ಲಿ ನಿಂತು ಕುಳಿತವರೆಲ್ಲರ ಗಮನವನ್ನು ಸೆಳೆಯುತ್ತಾ, ಆಗಿನ ಕಾಲದಲ್ಲಿ ಪಾಳೆಯಗಾರನೊಬ್ಬ ಊರ ನಡುವಿನ ರಸ್ತೆಯಲ್ಲಿ ಧೂಳೆಬ್ಬಿಸಿಕೊಂಡು ವೇಗವಾಗಿ ಕುದುರೆ ಮೇಲೆ ಸಾಗುವಾಗ ಆ ರಬಸಕ್ಕೆ ತಲ್ಲಣಗೊಂಡು ದಿಗಿಲಿನಿಂದ ಒಬ್ಬರಿಗೊಬ್ಬರು ಗುಸುಗುಸು ಮಾತಾಡಿಕೊಳ್ಳುವಂತೆ ಇಲ್ಲಿಯೂ ಈ ಜನಶತಾಬ್ಧಿ ರೈಲು ಅದೇ ವೇಗದಲ್ಲಿ ಬಂದುಬಿಡುತ್ತದೆ. ನನ್ನ ಶ್ರೀಮತಿ ” ರೀ ಸ್ವಲ್ಪ ಇರ್ರೀ….ಆ ಧನ ಶತಾಬ್ಧಿ ಹೋಗಿಬಿಡಲಿ” ಎಂದು ನನ್ನ ತೋಳನ್ನು ತನ್ನ ಕೈಗಳಲ್ಲಿ ಗಟ್ಟಿಯಾಗಿ ಹಿಡಿದು ನಿಂತುಬಿಡುವಳು. ಹಾಗೆ ನೋಡಿದರೆ ನಮ್ಮ ಮಲ್ಲೇಶ್ವರಂ ರೈಲು ನಿಲ್ದಾಣದಲ್ಲಿ ಸಾಗುವಾಗ ಇತರೆಲ್ಲಾ ರೈಲಿಗಿಂತ ಇದು ವೇಗವಾಗಿಯೇ ಚಲಿಸುತ್ತದೆ. ಮತ್ತಷ್ಟು ಓದು
ವಿಶಿಷ್ಟ ಸ್ಯೆಕಲ್ಲಿನ ಬೆಲ್ಜಿಯಂ ಜೋಡಿ
-ಗೋವಿಂದ ನೆಲ್ಯಾರು
ನಡುರಾತ್ರೆ ಎಪಿ ಸುಬ್ರಮಣ್ಯಂ ಅವರಿಂದ ಸತತ ನನ್ನ ಸಂಪರ್ಕ ಪ್ರಯತ್ನ. ನಾನು ರಾತ್ರಿ ಬೇಗ ಮಲಗುವ ವ್ಯಕ್ತಿ. ಅದುದರಿಂದ ನಿದ್ದೆಯ ಮದ್ಯೆ ಕಿವಿಗೊಟ್ಟು ಎಲ್ಲಕ್ಕೂ ಹೂಂಗುಟ್ಟಿದೆ. ಎರಡು ಜನ ಎರಡು ಪೆಡಲ್ ಎರಡು ಚಕ್ರದ ಗಾಡಿ ಯಾವುದೂ ಸ್ಪಷ್ಟವಾಗಿ ಅರ್ಥವಾಗಿರಲಿಲ್ಲ. ಕಿವಿ ಸಮಸ್ಯೆಯೂ ನನಗುಂಟು. ಮರುದಿನ ಮಾಮೂಲಿ ಒಂಬತ್ತು ಕಿಮಿ ದೂರದ ತ್ರಿಚಕ್ರ ತಿರುಗಾಟದಿಂದ ಹಿಂತಿರುಗಿದ ನಂತರ ನಮ್ಮ ಸುಬ್ಬಣ್ಣ ಮೊದಲು ಮಾತನಾಡಿದ ಅನಿಲ ಪರದೇಶಿ ಸೈಕಲಿಗರ ಬೇಟಿಯಾದೆಯಾ ? ಎನ್ನುವಾಗಲೇ ನನಗೆ ಎಚ್ಚರವಾದುದು, ಒಂದು ಅವಕಾಶ ತಪ್ಪಿಸಿಕೊಂಡೆನಾ ? ಕೂಡಲೇ ಸುಬ್ರಮಣ್ಯಂ ಅವರ ಪುನಹ ಸಂಪರ್ಕಿಸಿದೆ. ಅವರು ಸೈಕಲ್ ಸವಾರರ ಜಾಲತಾಣದ ವಿಳಾಸವೂ ಚೂರು ಪ್ರವಾಸದ ವಿವರವನ್ನೂ ಕೊಟ್ಟರು. http://eurasia.cyclic.eu/
ನೋಡಿದರೆ ಅವರಿರುವುದು ಜರ್ಮನಿಯ ಪ್ರಖ್ಯಾತ ಹೇಸ್ ಕಂಪೇನಿಯ ಪಿನೊ ಎನ್ನುವ ಇಬ್ಬರು ಪ್ರಯಾಣಿಸಬಹುದಾದ ಸೈಕಲು. ಪ್ರಾಯುಶ: ಈ ಸೈಕಲು ಇನ್ನೊಮ್ಮೆ ನೋಡುವ ಅವಕಾಶ ಸಿಗುವುದು ದುರ್ಲಬ. ಕೂಡಲೆ ಪೆಡಲಿಸಿದೆ ರಸ್ತೆ ಬದಿಗೆ. ಕಾಲು ಗಂಟೆಯೊಳಗೆ ಅವರು ಆಗಮಿಸಿದರು. ಒಬ್ಬ ಸೈಕಲ್ ಆಸಕ್ತ ನಿಮಗೆ ದಾರಿಯಲ್ಲಿ ಸಿಗಬಹುದೆಂಬ ಸೂಚನೆ ಮೊದಲೇ ಸುಬ್ಬಣ್ಣ ಅವರಿಗಿತ್ತಿದ್ದರು ಅನಿಸುತ್ತದೆ.
ಮತ್ತಷ್ಟು ಓದು
ಹೇಳುವುದು ಒಂದು……
-ಅಭಿನಂದನ್
ಆದರೆ ಒಂದೊಂದ್ ಸಲ ಅದು ಕೇಳಿಸೋದೇ ಇನ್ನೊಂದು ಥರ!!
ಮೊನ್ನೆ ಟ್ರೈನಿನಲ್ಲಿ ಶಿವಮೊಗ್ಗಕ್ಕೆ ಹೋಗ್ತಾ ಇದ್ದೆ. ಮುಂಜಾನೆ ಮಂಪರು..ಯಥಾ ಪ್ರಕಾರ ಮಲಗಿದ್ದೆ.
“ಮಲ್ಗೋರ್ರಿ..ಮಲ್ಗೋರ್ರಿ….!” ಅಂತ ಕೂಗಿಕೊಂಡು ಹೋದ ನಾಸಿಕ ವಾಣಿಯೊಂದು ಮಲಗಿದ್ದ ನನ್ನನ್ನು ಎಬ್ಬಿಸಿತು. ಯಾರಪ್ಪ pirvate ಆಗಿ ಮಲ್ಗಿರೋದನ್ನ public ಮಾಡ್ತಿದಾರೆ ಅಂತ ಕಣ್ಣು ತೆಗೆದು ನೋಡಿದಾಗ ಗೊತ್ತಾಯ್ತು, ಮಲ್ಲಿಗೆ ಹೂವು ಮಾರುವವ ಅವನ ಸಂಕ್ಷಿಪ್ತ, ಕ್ಷಿಪ್ರ, ಗೌಪ್ಯ ಶೈಲಿಯಲ್ಲಿ, “ಮಲ್ಲಿಗೆ ಹೂವು ರೀ, ಮಲ್ಲಿಗೆ ಹೂವು ರೀ….” ಅಂತಿದ್ರು ಅಂತ. ಅವರ speed ಗೆ ಒದ್ದಾಡಿ ಹೋಗಿ, ಬಾಯಿಂದ ಹೊರಗೆ ಬೀಳೋ ಹೊತ್ತಿಗೆ ಅದು “ಮಲ್ಗೋರ್ರಿ” ಆಗೋಗಿತ್ತು.
ಈ ಆಸಾಮಿ ಎಷ್ಟೋ ಪರವಾಗಿಲ್ಲ. ನಮ್ಮ ಮನೆ ಹತ್ತಿರ ಹೂವು ಮಾರುವವ ಏನು ಹೇಳುತ್ತಾರೋ ಇದುವರೆಗೂ ನಂಗೆ ಗೊತ್ತಾಗಿಲ್ಲ. ಒಟ್ಟಿನಲ್ಲಿ “ನಾನು ಹೂವು ಮಾರುತ್ತಿದ್ದೀನಿ” ಅನ್ನೋದನ್ನ ಅವ ಭಾರೀ effective ಆಗಿ ವರ್ಷಗಳಿಂದ communicate ಮಾಡುತ್ತಾ ಬಂದಿದ್ದಾರೆ…ಅದೂ ಅವರದೇ ಬಾಯಿಂದ.
ಇನ್ನು ಎಳನೀರಿನ ಗತಿಯಂತೂ ಬ್ಯಾಡ್ವೇ ಬ್ಯಾಡ. “ಎನ್ನೀರ್ರು”, “ನ್ನೀರ್ರು”, “ಈರ್ರು”, “…ರ್ರು”…ಅದಕ್ಕೇ ಒಂದು ತತ್ಸಮ ತದ್ಭವ ಗ್ರಂಥ ಬರೀಬೋದೇನೋ.
ಬಸ್ಸಿನಲ್ಲಿ ಕಂಡಕ್ಟರ್ರು “ಓಲ್ಡೈನ್” ಅಂತಿದ್ದಿದ್ದು ನನಗೆ ಚಿಕ್ಕಂದಿನಲ್ಲಿ ಸುಮಾರು ವರ್ಷಗಳ ಕಾಲ ತಲೆ ಕೆಡೆಸಿತ್ತು, ಅದ್ಯಾವ ಭಾಷೆಯಲ್ಲಿ ಅದರ ಅರ್ಥ ಎನು ಅಂತ. ಯಾರೋ ಪುಣ್ಯಾತ್ಮೆ sophisticated ಅಜ್ಜಿ ಒಂದು ದಿನ ಸ್ಟಾಪಿನಲ್ಲಿ ನಿಲ್ಲಿಸದೆ ಮುಂದೆ ಹೋಗುತ್ತಿದ್ದ ಬಸ್ಸಿನಿಂದ ಇಳೀಬೇಕಾದ್ರೆ ದಯನೀಯವಾಗಿ “HOLD ON PLEASE” ಅಂತ ಕೂಗಿದಾಗ್ಲೇ ಗೊತ್ತಾಗಿದ್ದು , ಓಲ್ಡೈನ್ ಎಲ್ಲಿಂದ ದಾರಿ ತಪ್ಪಿ ಬಂತು ಅಂತ.
ರೈಲು, ಬಸ್ಸು ಸ್ಟೇಷನ್ನುಗಳಲ್ಲಿ ಇಡ್ಲೀನ ಹೇಗೆಲ್ಲಾ ಚಿತ್ರಾನ್ನ ಮಾಡಲ್ಲ. “ಯಾರ್ರೀಡ್ಲಿ?”, “ಯಾರ್ಗಿಡ್ಲಿ?”, “ಎಲ್ರೀಡ್ಲಿ?”…
ಅಮೇರಿಕ ಕಡೆ ವಿಮಾನಗಳಲ್ಲಂತೂ orange juice ಅಂದ್ರೆ ಅರ್ಥ ಆಗದೆ ಇರೋ ಅಷ್ಟರ ಮಟ್ಟಿಗೆ ಅದು “onjuce” ಆಗೋಗಿದೆ. ಮತ್ತಷ್ಟು ಓದು
ಕಲಸೆ (ನಾಡಕಲಸಿ) ದೇವಸ್ಥಾನ
-ಪ್ರಹಸ್ತಿ ಪಿ
ಸಾಗರ ತಾಲೂಕಿನ ಇತಿಹಾಸ ಪ್ರಸಿದ್ದ ದೇವಸ್ಥಾನಗಳಲ್ಲಿ ಕಲಸೆ, ನಾಡಕಲಸಿಯೂ ಒಂದು. ಸಾಗರದವನಾಗಿಯೂ ಅದನ್ನು ನೋಡಲಾಗಿರದ ಬಗ್ಗೆ ಸ್ವಲ್ಪ ಬೇಸರವಿತ್ತು. ಬೆಳಗ್ಗೆ ೮ಕ್ಕೆ, ಮಧ್ಯಾಹ್ನ ಒಂದಕ್ಕೆ ಮಾತ್ರ ಅಲ್ಲಿಗೆ ಬಸ್ಸಿನ ಸೌಕರ್ಯವಿದೆ ಎಂಬ ಗೆಳೆಯರ ಮಾತೂ ನೋಡದಿರುವುದಕ್ಕೊಂದು ಪಿಳ್ಳೆ ನೆವವಾಗಿತ್ತು. ಆದರೆ ಅಲ್ಲಿಗೆ ಹೋದ ಮೇಲೆಯೇ ತಿಳಿದಿದ್ದು. ಅದೆಷ್ಟು ಸುಂದರ ಎಂದು.
ಹೋಗುವ ಮಾರ್ಗ:
ಸಾಗರದಿಂದ ಸುಮಾರು ಎಂಟು ಕಿ.ಮೀ ದೂರವಷ್ಟೇ ನಾಡಕಲಸಿ ಅಥವಾ ಕಲಸಿಯ ದೇವಸ್ಥಾನ. ಸಾಗರದಿಂದ ಹೋಗುವುದಾದರೆ ಸೊರಬ ಮಾರ್ಗದಲ್ಲಿ ಸುಮಾರು ೫ ಕಿ.ಮೀ ಹೋದ ಕೂಡಲೇ ಕಲಸಿ ರಾಮೇಶ್ವರ ದೇವಸ್ಥಾನಕ್ಕೆ ದಾರಿ ಅಂತ ಬೋರ್ಡೊಂದು ಸಿಗುತ್ತದೆ. ಅಲ್ಲಿಂದ ಸುಮಾರು ಮೂರು ಕಿ.ಮೀ ಬಲಕ್ಕೆ ಹೋದರೆ ಸಿಗುವುದು ಕಲಸಿ ಊರು. ಅಲ್ಲಿಂದ ಸ್ವಲ್ಪ ಒಳಗಡೆ ಇದೆ ದೇವಸ್ಥಾನ. ಸೊರಬಕ್ಕೆ ತುಂಬಾ ಬಸ್ಸುಗಳಿವೆ. ಹಾಗಾಗಿ ಸೊರಬ ಬಸ್ಸಿನಲ್ಲಿ ಕಲಸಿ ಬೋರ್ಡಿನಲ್ಲಿ ಇಳಿದುಕೊಂಡರೆ ಮೂರು ಕಿ.ಮೀ ನಡೆದು ಕಲಸಿ ದೇವಸ್ಥಾನಕ್ಕೆ ಯಾವಾಗಲಾದರೂ ಹೋಗಬಹುದು. ಸ್ವಂತ ವಾಹನವಿದ್ದರೆ ಇನ್ನೂ ಉತ್ತಮ.
ಇತಿಹಾಸ:
ಇಲ್ಲಿ ಶ್ರೀ ಮಲ್ಲಿಕಾರ್ಜುನ ಮತ್ತು ರಾಮೇಶ್ವರ ದೇವಸ್ಥಾನಗಳಿವೆ. ಈ ಜೋಡಿ ದೇಗುಲಗಳನ್ನು ಹೊಯ್ಸಳ ರಾಜ ಬಳೆಯಣ್ಣ ಹೆಗ್ಗಡೆ ಕ್ರಿ.ಶ ೧೨೧೮ ರಲ್ಲಿ ಕಟ್ಟಿಸಿದನೆಂದು ಸಂಶೋಧನಕಾರರು ಹೇಳುತ್ತಾರೆ.
ಮೊದಲಿಗೆ ಹೋಗುತ್ತಿದ್ದಂತೆಯೇ ನಿಮ್ಮನ್ನು ಸ್ವಾಗತಿಸುವುದು ದೇಗುಲದ ಎದುರಿಗೆ ಅಥವಾ ಹೋಗುವವರ ಬಲಗಡೆಗೆ ಇರುವ ನಾಗರ ಬನ.ಅದಕ್ಕೆ ನಮಸ್ಕರಿಸಿ ಮೊದಲು ಶ್ರೀ ಮಲ್ಲಿಕಾರ್ಜುನ ದೇವಸ್ಥಾನಕ್ಕೆ ಹೋದೆವು.
ಬೈಲೂರ ಬಸ್ಸು ಹತ್ತಿ
ಪ್ರಶಸ್ತಿ.ಪಿ, ಸಾಗರ
ಮನೇಲಿ ಕಾರ್ಯಕ್ರಮ ಇದೆ, ಬರಲೇ ಬೇಕು ಅಂತ ಕರೆದಿದ್ರು ಅನ್ಸತ್ತೆ. ಹನ್ನೊಂದೂಕಾಲಿಗೆ ಹಸಿರು ಬಣ್ಣದ ಬಸ್ಸು ಬರತ್ತೆ , ಅದ್ರಲ್ಲಿ ಬಾ ಅಂತ ಸೂಚನೆ. ಸರಿ, ವಿಶ್ವಾಸದ ಮೇಲೆ ಕರೆದ ಮೇಲೆ ಬಿಡೋಕಾಗತ್ತಾ? ಹೂಂ ಜೈ ಅಂತ ಹನ್ನೊಂದ್ಘಂಟೆಗೇ ಬಸ್ಟಾಂಡಲ್ಲಿ ಹಾಜರು.ಎಲ್ಲಿಳ್ಯದು, ಯಾವ ಬಸ್ಸು ಎಂತನೂ ಗೊತ್ತಿಲ್ಲ. ಫೋನಲ್ಲಿ ಕೇಳಿದ್ದಷ್ಟೆ. ಹೋಗ್ಬೇಕಾಗಿರೋ ಊರ ಹೆಸ್ರನ್ನೇಳಿ ಕಂಡಕ್ಟ್ರಣ್ಣಂಗೆ ಕೇಳ್ದಾಗ “ಬೇಲೂರು ಗಾಡಿ ಬರತ್ತೆ ಹನೊಂದು ಕಾಲಿಗೆ. ಅದ್ರಲ್ಲೋಗಿ” ಅಂದ. ನಾ ಹೋಗ್ಬೇಕಾಗಿದ್ದು ಸೈದೂರು ದಾರಿ. ಬೇಲೂರಿಗೂ ಸೈದೂರಿಗೂ ಎಲ್ಲಿಂದೆಲ್ಲಿ ಸಂಬಂಧ ಅಂತ ಅರ್ಥ ಆಗ್ಲಿಲ್ಲ.ಹಂಗಂತಾ? ಗಣೇಶ ಸ್ಟೈಲಲ್ಲಿ ತಲೆ ಕೆರ್ಕಳಕೆ ಆಗತ್ತಾ? ಅದೂ ಬಸ್ಟಾಂಡ್ ಬೇರೆ 🙂
ಹನ್ನೊಂದು ಕಾಲಾಯ್ತು. ಬಂದಿರ್ಲಿಲ್ಲ ಬಸ್ಸು. ಬಿಸಿಲು ಬೇರೆ ಏರ್ತಾ ಇತ್ತು. ಬಸ್ಟಾಂಡಲ್ಲೊಂದು ಅಂಗಡಿ ಎದ್ರಿದ್ದ ನೆರಳಲ್ಲಿ ಜಾಗ ಖಾಲಿ ಇತ್ತು. ನಂತರನೇ ನೆರಳನರಸಿ ಸುಮಾರು ಜನ್ರಿದ್ರು ಬಿಡ್ರಿ.. ಕಾದ ತಗಡ ಶೀಟು. ಕೆಳಗೆ ನಾನು. ಕೇಳಬೇಕೆ? ಸೆಖೆ ಹೊಡ್ತ. ಬೆವ್ರೊರ್ಸದು, ಗಡಿಯಾರ ನೋಡದು ಇದೇ ಕೆಲ್ಸ ಆಯ್ತು. ಹನ್ನೊಂದು ಇಪ್ಪತ್ತೈದು. ಅಲ್ಲಿದ್ದೋರಲ್ಲಿ ಅನ್ಸತ್ತೆ ಊರಿಗೋಗೋರೂ ಇದ್ರು ಹೇಳೋದು ಅವರ ಮಾತಿಂದ ಗೊತ್ತಾಯ್ತು. ಇದ್ದಿದ್ರಲ್ಲಿ ಅದೊಂದು ಸಮಾಧಾನ. ಅದೇ ಊರಿಗಂತೂ ಹೋಗ್ತಾರೆ. ಅವ್ರ ಮನೇಗೆ ಹೋಗ್ಬೋದು ಅಂತ ಮನ್ಸು ಹೇಳಕ್ಕಿಡೀತು. ಆದ್ರೂ ಕೇಳಕ್ಕೆ ಬಾಯಿ ಬರ್ಲಿಲ್ಲ. ಫಿಲ್ಮಲ್ಲಿ ಹೀರೋಗೆ ಹೀರೋಯಿನ್ ಎದ್ರು ಮಾತು ಬರಲ್ವಲ ಹಂಗೆ ಅಂದ್ಕಂಡ್ರಾ? ಥೋ..ಅವ್ರೆಲ್ಲಾ ವಯಸ್ಸಾದವ್ರು 🙂 ಮತ್ತಷ್ಟು ಓದು