ವಿಷಯದ ವಿವರಗಳಿಗೆ ದಾಟಿರಿ

Posts from the ‘ಭ್ರಷ್ಟಾಚಾರ ನಿರ್ಮೂಲನೆ’ Category

8
ನವೆಂ

ಅನಾಣ್ಯೀಕರಣ, ಎಡಪಂಥೀಯ ಬುದ್ಧಿಜೀವಿಗಳು ಮತ್ತು ಮಾಧ್ಯಮಗಳು

ಜಿ. ಪದ್ಮನಾಭನ್
ಸಹಾಯಕ ಪ್ರಾಧ್ಯಾಪಕ
ತಮಿಳು ಭಾಷೆ ಮತ್ತು ಅನುವಾದ ಅಧ್ಯಯನ ವಿಭಾಗ
ದ್ರಾವಿಡ ವಿಶ್ವವಿದ್ಯಾಲಯ,
ಕುಪ್ಪಂಆಂಧ್ರ ಪ್ರದೇಶ.

[ತಮಿಳಿನ ಖ್ಯಾತ ಸಾಹಿತಿ, ಚಿಂತಕ ಬಿ.ಜಯಮೋಹನ್‍ರವರು, ಈ ಹಿಂದೆ ತಮ್ಮ ವೆಬ್‍ಸೈಟ್‍ನಲ್ಲಿ ಅನಾಣ್ಯೀಕರಣ ಮತ್ತು ಬುದ್ಧಿಜೀವಿಗಳ ದ್ವಿಮುಖ ನೀತಿಯ ಬಗೆಗಿನ ಲೇಖನವೊಂದನ್ನು ಪ್ರಕಟಿಸಿದ್ದರು. ಅದನ್ನು ದ್ರಾವಿಡ ವಿಶ್ವವಿದ್ಯಾಲಯದ, ತಮಿಳು ಬಾಷೆ ಮತ್ತು ಅನುವಾದ ಅಧ್ಯಯನ ವಿಭಾಗದ, ಸಹಾಯಕ ಪ್ರಾಧ್ಯಾಪಕ ಶ್ರೀ ಜಿ.ಪದ್ಮನಾಭನ್ ಅವರು ಕನ್ನಡಕ್ಕೆ ತಂದಿದ್ದಾರೆ. ಅನಾಣ್ಯೀಕರಣಕ್ಕೆ ಒಂದು ವರ್ಷ ಸಂದ ಹಿನ್ನೆಲೆಯಲ್ಲಿ ಈ ಲೇಖನ ಮತ್ತೆ ಚರ್ಚೆಯಾಗುತ್ತಿದೆ.] ಮತ್ತಷ್ಟು ಓದು »

6
ಡಿಸೆ

ಸೈದ್ಧಾಂತಿಕ ಸಂಘರ್ಷದಡಿಯಲ್ಲಿ ಸಾಹಿತ್ಯಿಕ ಭಯೋತ್ಪಾದನೆ..?

– ಸಂತೋಷಕುಮಾರ ಮೆಹೆಂದಳೆ.

hqdefault( ಇವತ್ತು ಅರ್ಜೆಂಟಿಗೆ ಬಿದ್ದು ಸ್ಟೇಟಸ್ ಅಪ್‍ಡೇಟ್ ಮಾಡುವವರು ಅದನ್ನು ಪೂರೈಸಿ ಎದ್ದು ಹೋಗಿಬಿಡುತ್ತಿದ್ದಾರೆ. ಕೆಲವರಿಗದು ತಮ್ಮ ಟಿ.ಆರ್.ಪಿ. ಯ ಮಾನದಂಡವೂ ಆಗಿರುವುದರಿಂದ ಲಿಂಗ, ಧರ್ಮ ಸೇರಿದಂತೆ ವರ್ಗಬೇಧದ ವ್ಯತ್ಯಾಸವಿಲ್ಲದೆ, ಕಾಮ, ಕರ್ಮಗಳ ಅಭ್ಯಂತರವಿಲ್ಲದೆ ನಾಲ್ಕು ಸಾಲು ಬರೆಯುತ್ತಾರೆ ಇಲ್ಲಾ ಜಗತ್ತಿನ ಯಾವ ಮೂಲೆಯದ್ದೋ ಶೇರು ಮಾಡಿ ಚು.. ಚು.. ಎಂದು ಹಲ್ಲಿ ಲೊಚಗುಟ್ಟಿದಂತೆ ತಾವೊಂದೆರಡು ಸಾಲು ಸೇರಿಸಿಬಿಡುತ್ತಾರೆ. ಆದರೆ ಅದರ ಕೆಳಗೆ ಮುಖ ಮೂತಿ, ಪರಿಚಯವೇ ಇಲ್ಲದವರೂ, ಜಾತಿ ಪಂಥದ ಹೊರತಾಗಿ ಪರಮ ದ್ವೇಷಿಗಳಾಗಿ ಬದಲಾಗಿ, ನಿರಂತರ ಸಂಘರ್ಷಗಳಿಗಿಳಿದು ಉಳಿದುಬಿಡುತ್ತಾರಲ್ಲ ಅದರ ಹೊಣೆಗಾರಿಕೆ ಯಾರದ್ದು…? ) ಮತ್ತಷ್ಟು ಓದು »

8
ಜೂನ್

ಸಾಮಾಜಿಕ ಪ್ರಜ್ಞೆ ಮತ್ತು ನಾವು

-ರಾಜಕುಮಾರ.ವ್ಹಿ.ಕುಲಕರ್ಣಿ
ಮುಖ್ಯಗ್ರಂಥಪಾಲಕ
ಎಸ್.ನಿಜಲಿಂಗಪ್ಪ ವೈದ್ಯಕೀಯ ಮಹಾವಿದ್ಯಾಲಯ
ಬಾಗಲಕೋಟ

logo_world_conferenceಒಮ್ಮೆ ಹೀಗಾಯ್ತು, ಮನೆಗೆ ಬರುತ್ತಿರುವಾಗ ದಾರಿಯಲ್ಲಿ ನನ್ನ ಸ್ನೇಹಿತ ಜಗಳವಾಡಿದ. ಅವನ ಜಗಳಕ್ಕೂ ಕಾರಣವಿತ್ತು. ಮನೆಕಟ್ಟಿಸುತ್ತಿದ್ದ ಯಜಮಾನರೊಬ್ಬರು ರಸ್ತೆ ಬದಿಯ ಚರಂಡಿಗೆ ಮರಳು, ಜಲ್ಲಿಕಲ್ಲುಗಳನ್ನು ತುಂಬಿಬಿಟ್ಟಿದ್ದರು. ಕೊಳಚೆ ನೀರು ಹರಿದು ಹೋಗದೆ ಚರಂಡಿ ತುಂಬಿ ನಿಂತಿತ್ತು. ಅಂಥದ್ದೊಂದು ಘಟನೆ ಅವನ ಆಕ್ರೋಶಕ್ಕೆ ಕಾರಣವಾಗಿತ್ತು. ಚರಂಡಿಯಲ್ಲಿ ತುಂಬಿರುವ ಮರಳು ಮತ್ತು ಜಲ್ಲಿಕಲ್ಲುಗಳನ್ನು ಕೂಡಲೇ ತೆಗೆದುಹಾಕುವಂತೆ ಅಲ್ಲಿ ಕೆಲಸ ಮಾಡುತ್ತಿದ್ದ ಕೆಲಸಗಾರರಿಗೆ ಹೇಳಿದ. ಅಲ್ಲೇ ಸಮೀಪದಲ್ಲಿ ನಿಂತಿದ್ದ ಯಜಮಾನರು ಮನೆ ಕೆಲಸ ಪೂರ್ಣಗೊಳ್ಳುವವರೆಗೆ ಅದು ಸಾಧ್ಯವಿಲ್ಲವೆಂದು ಬಿರುಸಾಗಿಯೇ ನುಡಿದರು. ಮಾತಿಗೆ ಮಾತು ಬೆಳೆಯಿತು. ಗಲಾಟೆ ಕೇಳಿ ಸುತ್ತಮುತ್ತಲಿನ ಮನೆಯವರು ಹೊರಗೆ ಬಂದರು. ಆಶ್ಚರ್ಯವೆಂದರೆ ಯಾರೊಬ್ಬರೂ ನನ್ನ ಗೆಳೆಯನ ಬೆಂಬಲಕ್ಕೆ ನಿಲ್ಲಲಿಲ್ಲ. ಅವನನ್ನೆ ವಿಚಿತ್ರ ಎನ್ನುವಂತೆ ನೋಡಿದರು. ಆದ ತಪ್ಪನ್ನು ತಪ್ಪು ಎಂದು ಹೇಳುವ ಧೈರ್ಯ ಅಲ್ಲಿದ್ದ ಯಾರೊಬ್ಬರಲ್ಲೂ ಇರಲಿಲ್ಲ. ಅಷ್ಟಕ್ಕೂ ಅದು ತಪ್ಪೆಂದು ಜಗಳಕ್ಕೆ ನಿಂತವನು ಅಸಲಿಗೆ ಆ ಕಾಲೋನಿಯವನೂ ಆಗಿರಲಿಲ್ಲ. ಆ ನಿಂತ ನೀರಿನ ಪಕ್ಕದ ಮನೆಯೂ ಅವನದಾಗಿರಲಿಲ್ಲ. ಆದರೂ ಆ ಸಂದರ್ಭ ಅವನಲ್ಲಿನ ಸಾಮಾಜಿಕ ಪ್ರಜ್ಞೆ ಜಾಗೃತಗೊಂಡಿತ್ತು. ತಪ್ಪನ್ನು ಸರಿಪಡಿಸಲು ಪ್ರಯತ್ನಿಸಿದ. ಯಾರು ಸಮಸ್ಯೆಯ ಸಮೀಪದಲ್ಲಿದ್ದರೋ ಅವರಲ್ಲಿ ಮಾತ್ರ ಸಾಮಾಜಿಕ ಸಮಸ್ಯೆ ಸಂಪೂರ್ಣವಾಗಿ ನಿಷ್ಕ್ರಿಯವಾಗಿತ್ತು. ಆದರೆ ಅದೇ ಜನ ಅಣ್ಣಾ ಹಜಾರೆ ಹೆಸರಿನ ಟೊಪ್ಪಿಗೆ ಧರಿಸಿ ಭೃಷ್ಟಾಚಾರ ವಿರೋಧಿ ಆಂದೋಲನದಲ್ಲಿ ಭಾಗವಹಿಸಿದ್ದು ವ್ಯವಸ್ಥೆಯೊಂದರ ವ್ಯಂಗ್ಯಕ್ಕೆ ಹಿಡಿದ ಕೈಗನ್ನಡಿಯಾಗಿತ್ತು. ಮತ್ತಷ್ಟು ಓದು »

15
ಆಗಸ್ಟ್

ಅವರೆಲ್ಲರೂ ಪ್ರತಿಭಾವಂತರೇ ಆದರೆ…..

-ಡಾ ಅಶೋಕ್ ಕೆ ಆರ್
corruption

ಭಾರತದಲ್ಲಿ ಹಗರಣಗಳು ಹೊಸದಲ್ಲ, ಹಗರಣಗಳ ಕುರಿತ ರಾಜಕೀಯ ಮತ್ತು ರಾಜಕೀಯೇತರ ಗದ್ದಲ, ಪ್ರತಿಭಟನೆಗಳು ಹೆಚ್ಚಾಗಿ ಚಳುವಳಿಗಳಾಗಿ ಮಾರ್ಪಟ್ಟ ನಂತರ ಅಧಿಕಾರದಲ್ಲಿರುವ ಪಕ್ಷಗಳು ಆ ಹಗರಣದ ತನಿಖೆಗೆ ವಿವಿಧ ಹಂತದ ತನಿಖಾ ಆಯೋಗಗಳನ್ನು ರಚಿಸುವುದೂ ಹೊಸದಲ್ಲ. ಸಿ.ಐ.ಡಿ ಪೋಲೀಸರಿಂದ ಹಿಡಿದು ನ್ಯಾಯಂಗ, ಸದನ ಸಮಿತಿ, ಸಿ.ಬಿ.ಐ ಸಂಸ್ಥೆಗಳೆಲ್ಲವನ್ನೂ ತನಿಖೆ ಮಾಡಲು ನಿಯೋಜಿಸುವುದು ಸಾಮಾನ್ಯ. ವಿಪರ್ಯಾಸದ ಸಂಗತಿಯೆಂದರೆ ಇಂತಹ ಎಷ್ಟೋ ತನಿಖಾ ಸಂಸ್ಥೆಗಳು ನೀಡಿದ ಅನೇಕಾನೇಕ ವರದಿಗಳು ಅನುಷ್ಠಾನಗೊಳ್ಳದೆ ಸರಕಾರದ ಯಾವುದೋ ಒಂದು ಕಛೇರಿಯಲ್ಲಿ ಧೂಳು ಹಿಡಿದು ಹಾಳಾಗುತ್ತವೆಯೇ ಹೊರತು ತನಿಖಾ ಆಯೋಗ ನೀಡಿದ ಸಲಹೆ ಸೂಚನೆಗಳನ್ನು ಯಥಾವತ್ತಾಗಿ ಜಾರಿಗೆ ತರುವುದು ಅಪರೂಪದ ಸಂಗತಿಯೇ ಆಗಿಹೋಗಿದೆ.

ಸಲಹೆ ಸೂಚನೆಗಳು ಜಾರಿಗೆ ಬರದಿರಲು ಪಟ್ಟಭದ್ರ ಹಿತಾಸಕ್ತಿಗಳ ಕೈವಾಡ, ರಾಜಕೀಯ ಪಕ್ಷಗಳ ವೋಟ್ ಬ್ಯಾಂಕ್ ಅನಿವಾರ್ಯತೆ, ಅಧಿಕಾರಸ್ಥ ಪಕ್ಷಗಳೇ ಬದಲಾವಣೆಗೊಳ್ಳುವುದು ಮತ್ತು ಕೆಲವು ಸಂದರ್ಭದಲ್ಲಿ ಆರೋಪಕ್ಕೊಳಗಾದವರು ಮತ್ತು ವಿವಿಧ ಕಾರಣಗಳಿಂದ ಅವರಿಗೆ ಬೆಂಬಲ ನೀಡುವವರು ಪ್ರತಿಭಟನೆಯ ರೂಪದಲ್ಲಿ ವಿರೋಧ ವ್ಯಕ್ತಪಡಿಸುವುದು. ಬಿಜೆಪಿಯ ದುರಾಡಳಿತದಿಂದ ಬೇಸತ್ತು ಕಾಂಗ್ರೆಸ್ಸಿಗೆ ಅವಕಾಶ ನೀಡಿದ ಕರ್ನಾಟಕದ ಮತದಾರ ಕಳೆದೊಂದೂವರೆ ವರುಷದಿಂದ ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರದಿಂದ ಭ್ರಮನಿರಸನಕ್ಕೊಳಗಾಗಿರುವುದೇ ಅಧಿಕ. ಮತ್ತಷ್ಟು ಓದು »

1
ಆಕ್ಟೋ

ಲೋಕಾಯುಕ್ತ ಆಸ್ತಿ ವಿವರ ನೀಡುವುದೇ ಯುಕ್ತ!

– ತುರುವೇಕೆರೆ ಪ್ರಸಾದ್

RTI       ಈಚೆಗೆ ಪತ್ರಿಕೆಗಳಲ್ಲಿ ಹಲವು ಶಾಸಕರು ಹಾಗೂ ವಿಧಾನಪರಿಷತ್ ಸದಸ್ಯರು ತಮ್ಮ ಆಸ್ತಿ ವಿವರಗಳನ್ನು ಲೋಕಾಯುಕ್ತಕ್ಕೆ ಸಲ್ಲಿಸಿಲ್ಲ ಎಂಬ ಸಂಗತಿ ವರದಿಯಾಗಿತ್ತು. ಶಾಸಕರು, ವಿಧಾನಪರಿಷತ್ ಸದಸ್ಯರು ಹಾಗೂ ಮಾಜಿ ಜನಪ್ರತಿನಿಧಿಗಳು ಕಡ್ಡಾಯವಾಗಿ ಪ್ರತಿವರ್ಷ ಲೋಕಾಯುಕ್ತಕ್ಕೆ ಆಸ್ತಿ ವಿವರ ಸಲ್ಲಿಸಬೇಕಿದೆ. ಆದರೆ ಹಲವರು ಇದನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ. ಅಷ್ಟೇ ಅಲ್ಲ, ಜನಪ್ರತಿನಿಧಿಗಳು ಸಲ್ಲಿಸಿರುವ ಆಸ್ತಿ ವಿವರವೂ ಎಷ್ಟರ ಮಟ್ಟಿಗೆ ಸತ್ಯ ಎನ್ನುವುದನ್ನು ಸಾರ್ವಜನಿಕರು  ತಿಳಿಯಲಾಗುತ್ತಿಲ್ಲ. ಏಕೆಂದರೆ ಲೋಕಾಯುಕ್ತ ಜನಪ್ರತಿನಿಧಿಗಳ ಆಸ್ತಿ ವಿವರಗಳನ್ನು ಮಾಹಿತಿ ಹಕ್ಕು ಕಾಯಿದೆಯಡಿ ನೀಡಲು ನಿರಾಕರಿಸುತ್ತದೆ.

       ಕಳೆದ ಮಾರ್ಚ್ 18ರಂದು ನಾನು ವಿಧಾನಸಭಾ ಚುನಾವಣೆಗಳ ಹಿನ್ನಲೆಯಲ್ಲಿ ಕೆಲವು ಜನಪ್ರತಿನಿಧಿಗಳು ಲೋಕಾಯುಕ್ತಕ್ಕೆ ಸಲ್ಲಿಸಿರುವ ಆಸ್ತಿ ವಿವರವನ್ನು ಮಾಹಿತಿ ಹಕ್ಕು ಕಾಯಿದೆಯಡಿ  ನೀಡುವಂತೆ ಕೋರಿದ್ದೆ. ಆದರೆ ಲೋಕಾಯುಕ್ತ ಆ ಮಾಹಿತಿ ನೀಡಲು ನಿರಾಕರಿಸಿತು. ಅದಕ್ಕೆ ಲೋಕಾಯುಕ್ತ ಕೊಟ್ಟ ಕಾರಣ ಮಾಹಿತಿ ಹಕ್ಕು ಕಾಯಿದೆಯಡಿ ನಾಗರಿಕರಿಗೆ ಸಾರ್ವಜನಿಕ ಪ್ರಾಧಿಕಾರದ ಸಾರ್ವಜನಿಕ ಸಂಗತಿಗಳ ಬಗ್ಗೆ ಮಾತ್ರ ಮಾಹಿತಿ ನೀಡಲಾಗುತ್ತದೆ. ನೀವು ಕೆಲವು ವ್ಯಕ್ತಿಗಳ ಖಾಸಗಿ ವಿವರಗಳ ಬಗ್ಗೆ ಮಾಹಿತಿ ಕೇಳಿದ್ದೀರಿ. ಇದು ಸಾರ್ವಜನಿಕ ಪ್ರಾಧಿಕಾರ ಅಥವಾ ಆಢಳಿತಕ್ಕೆ ಸಂಬಂಧಿಸಿದ ಸಾರ್ವಜನಿಕ ವಿಷಯವಲ್ಲ ಎಂಬುದು.(The intention of the legislation is to provide right to information of a citizen pertaining to public affairs of the public authority, but you have sought the information of an individual which is purely personal one and is not with respect to public affairs)

ಮತ್ತಷ್ಟು ಓದು »

15
ನವೆಂ

ಒಂದು ಸೋಲಿನ ವೃತ್ತಾಂತ; ಪಾಠ ಕಲಿಯದ ದುರಂತ

-ರಾಕೇಶ್ ಏನ್  ಎಸ್

ಸೋಲು… ಸೋಲು… ಸೋಲು
ಸೋಲು ಅಕ್ಷ್ಯಮ್ಯ, ಅದರಲ್ಲಿಯೂ ಯುದ್ಧಭೂಮಿಯಲ್ಲಿನ ಅಪಜಯಕ್ಕೆ ಕ್ಷಮೆಯೇ ಇಲ್ಲ ಎಂದು ಕೊಂಡಿರುವ ಪರಂಪರೆ ನಮ್ಮದು. ಸೋತವ ಎಂಬ ಹಣೆಪಟ್ಟಿ ಯಾರಿಗೂ ಬೇಡ, ಸೋಲು ಎಂದಿಗೂ ತಬ್ಬಲಿ.

ಸರಿಯಾಗಿ ೫೦ ವರ್ಷಗಳ ಹಿಂದೆ, ಇದೇ ಸಮಯದಲ್ಲಿ ಹಿಮಾಲಯದ ಧವಳಗಿರಿಗಳ ಮಧ್ಯೆ ಭಾರತೀಯರನ್ನು ಅಪ್ಪಿಕೊಳ್ಳಲು ಇಂತಹದ್ದೆ ಒಂದು ಸೋಲು ಹೊಂಚು ಹಾಕಿ ಕುಳಿತಿತ್ತು. ಚೀನಾದ ಕೆಂಪು ಪಡೆ ಹೆದ್ದೆರೆಯೋಪಾದಿಯಲ್ಲಿ ನಡೆಸಿದ ದಾಳಿಗೆ ಗಣತಂತ್ರ ಸ್ವತಂತ್ರ ಭಾರತ ಬೆರಗಾಗಿತ್ತು, ಬೆನ್ನು ಬಾಗಿಸಿ ವಂದಿಸಿ ಸೋತು ಹೋಗಿತ್ತು.

ಭಾರತ ಮತ್ತು ಚೀನಾ ಪ್ರಾಚೀನ ನಾಗರಿಕತೆಗಳ ತವರೂರು. ಹಾಗೆಯೆ ಜಾಗತಿಕರಣಗೊಂಡ ಜಗತ್ತನ್ನು ಹೊತ್ತು ಸಾಗಿಸುವ ಗಾಲಿಗಳು. ಈ ಎರಡು ದೇಶಗಳಿಗೆ ಭೂತ ಮತ್ತು ಭವಿಷ್ಯದಲ್ಲಿರುವ ಪ್ರಾಮುಖ್ಯತೆ ಆಪಾರ. ಆದರೆ ಭಾರತ ಮತ್ತು ಚೀನಾದ ಮಧ್ಯೆ ಹುಟ್ಟಿಕೊಂಡ ಸಂಘರ್ಷದ ಕಾಲಘಟ್ಟ ಬಹಳ ವಿಚಿತ್ರವಾದದ್ದು.

೧೯೫೦ರ ದಶಕದಲ್ಲಿ ಚೀನಾವು ಮಾವೋ ತ್ಸೆತುಂಗ್‌ನ ತೆಕ್ಕೆಯಲ್ಲಿ ಅಪರಿಮಿತ ವೇಗದ ಅಭಿವೃದ್ಧಿಯ ಕನಸನ್ನು ಹೊಸೆಯುತ್ತಿದ್ದರೆ, ಭಾರತ ಬ್ರಿಟಿಷರಿಂದ ಮುಕ್ತವಾಗಿ ಪ್ರಜಾರಾಜ್ಯದ ಹೊಸ ವ್ಯವಸ್ಥೆಗೆ ಒಗ್ಗಿಕೊಳ್ಳುತ್ತಿದ್ದ ಸಮಯ, ಸಂದರ್ಭವದು. ಆಗ ಈ ಎರಡು ದೇಶಗಳಿಗೆ ಯುದ್ಧವೆಂಬ ಹೊರೆ ಬೇಕಾಗಿರಲಿಲ್ಲ.

ಭಾರತದ ಮೊದಲ ಪ್ರಧಾನಿ ಜವಾಹರ್ ಲಾಲ್ ನೆಹರು ’ಹಿಂದಿ ಚೀನಿ ಭಾಯಿ ಭಾಯಿ’ ಎಂಬ ಉದ್ಘೋಷವನ್ನು ೧೯೫೦ರ ದಶಕದಲ್ಲಿ ಮುನ್ನೆಲೆಗೆ ತಂದಿದ್ದರು. ತೈವಾನ್ ವಿವಾದದಿಂದಾಗಿ ವಿಶ್ವ ಗುಂಪಿನಲ್ಲಿ ಚೀನಾ ಮೂಲೆಗುಂಪಾದ ಸಂದರ್ಭದಲ್ಲಿ ಅದನ್ನು ಒಂದು ದೇಶವೆಂದು ಪರಿಭಾವಿಸಿ ಅದರೊಂದಿಗೆ ಸ್ನೇಹ ಸಂಬಂಧ ಬೆಳೆಸಿದ ದೇಶಗಳಲ್ಲಿ ಭಾರತವು ಒಂದು. ಇಂತಹ ಮಧುರ ಸಂಬಂಧ ಉತ್ತುಂಗಕ್ಕೇರುತ್ತಲೇ ಪರಸ್ಪರ ಅನುಮಾನದ ಪಾತಳಕ್ಕೆ ಕುಸಿದದ್ದು ಚರಿತ್ರೆಯ ವೈಚಿತ್ರ. ಮತ್ತಷ್ಟು ಓದು »

29
ಆಕ್ಟೋ

ಯಡಿಯೂರಪ್ಪರ ಹೊಸ ಪಕ್ಷವೂ..ರಾಜ್ಯ ರಾಜಕೀಯ ಜಂಜಾಟವೂ..!

– ಶಂಶೀರ್ ಬುಡೋಳಿ

ರಾಜ್ಯ ಬಿಜೆಪಿಯ ಆಡಳಿತಾವಧಿಯ ಕಾಲಾವಧಿ ಮುಗಿಯುತ್ತಾ ಬಂದಿದೆ..ಜೊತೆಗೆ ದಿ ಗ್ರೇಟ್ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪರ ಬ್ಲಾಕ್‌ಮೇಲ್ ರಾಜಕಾರಣ ಕೂಡಾ ಹೆಚ್ಚಾಗ್ತಾ ಇದೆ. ಹಗರಣದ ಆರೋಪ ಮೈಮೇಲೆ ಬಂದಾಗ ಅನಿವಾರ್ಯವಾಗಿ ಸಿಎಂ ಪಟ್ಟದಿಂದ ಕೆಳಗಿಳಿಯುವಾಗ ಬಿಜೆಪಿ ಹೈಕಮಾಂಡ್ ನಿಮಗೆ ಸೂಕ್ತ ಸ್ಥಾನಮಾನ ನೀಡುತ್ತೇವೆಂದು ಭರವಸೆ ನೀಡಿತ್ತೆಂದು ಹಲವಾರು ಬಾರಿ ಯಡಿಯೂರಪ್ಪರೇ ಹೇಳಿದ್ದರು. ಇದನ್ನೇ ಅಸ್ತ್ರವಾಗಿಟ್ಟುಕೊಂಡು ಮಾಜಿ ಸಿಎಂ ‘ಹಠ’(ಯಡಿ)ಯೂರಪ್ಪ ಬಿಜೆಪಿಯನ್ನ ತೊರೆದು ಕೆಜೆಪಿ ಎಂಬ ಸ್ವಪಕ್ಷ ಕಟ್ಟುವ ಮೂಲಕ ಬಿಜೆಪಿ ಹೈಕಮಾಂಡ್‌ಗೆ ಸವಾಲು ಎಸೆದಿದ್ದಾರೆ..ಅದಕ್ಕೂ ಮುನ್ನಾ ಹೈಕಮಾಂಡ್‌ಗೆ ತನಗೆ ಸೂಕ್ತ ಸ್ಥಾನಮಾನ ನೀಡುವುದರ ಬಗ್ಗೆ ಬೇಗ ಯೋಚಿಸಿ ಅಂತಾ ಎಚ್ಚರಿಕೆ ಕೊಟ್ಟು ತಾನೇ ಕರ್ನಾಟಕ ರಾಜ್ಯದಲ್ಲಿ ಬಿಜೆಪಿಯನ್ನ ಆಡಳಿತಕ್ಕೆ ತಂದಂತೆ ವರ್ತಿಸುತ್ತಿದ್ದಾರೆ. ನಿಜಕ್ಕೂ ಯಡಿಯೂರಪ್ಪಗೆ ಮಾನ ಮರ್ಯಾದೆ ಎನ್ನುವುದು ಇಲ್ಲವೇ..?

ಮಾಜಿ ಸಿಎಂ ಯಡಿಯೂರಪ್ಪನವರು ಬಿಜೆಪಿ ಹೈಕಮಾಂಡ್‌ನಿಂದ ಮುನಿಸಿಕೊಂಡು ಪ್ರತ್ಯೇಕ ಪಕ್ಷವನ್ನ ಕಟ್ಟುವ ದೊಡ್ಡ ಸಾಹಸಕ್ಕೆ ಕೈಹಾಕಿದ್ದಾರೆ. ನಿಜಕ್ಕೂ ಇದು ರಾಜ್ಯ ರಾಜಕೀಯದಲ್ಲಿ ಹೊಸ ಶಕೆಯನ್ನ ಆರಂಭಿಸಲಿದೆಯೇ..? ಎಂಬ ಪ್ರಶ್ನೆ ಉದ್ಭವವಾಗಿದೆ. ಇದಕ್ಕೆ ಉತ್ತರ ನಿಜಕ್ಕೂ ಇಲ್ಲ..ಯಾವ ಯಡಿಯೂರಪ್ಪ ತಾನು ಬಿಜೆಪಿಯಿಂದಲೇ ಬೆಳೆದು ಬಂದಿರುವುದನ್ನೇ ಮರೆತುಕೊಂಡು ತಾನು ಕುಣಿಸಿದ ಹಾಗೇ ಶೆಟ್ಟರ್ ಹಾಗೂ ಹೈಕಮಾಂಡ್ ಆಡಿಲ್ಲವೆಂದು ಮುನಿಸಿಕೊಂಡು ಅದಕ್ಕಿಂತಲೂ ಹಠ ಮಾಡಿಕೊಂಡು ಹೊಸ ಪಕ್ಷ ಕಟ್ಟುವುದಕ್ಕೆ ಮುಂದಾಗಿದ್ದು ಇವರ ಮೂರ್ಖತನಕ್ಕೊಂದು ಸಾಕ್ಷಿ. ಬಳ್ಳಾರಿ ಗ್ರಾಮಾಂತರ ಉಪಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ ನಂತರ ಶ್ರೀರಾಮುಲು ‘ಬಿಎಸ್‌ಆರ್’ ಪಕ್ಷವನ್ನು ಸ್ಥಾಪನೆ ಮಾಡಿದ ವೇಳೆ ರಾಜ್ಯದಲ್ಲಿ ಬದಲಾವಣೆ ಆಗುತ್ತದೆಂದು ಭಾವಿಸಲಾಗಿತ್ತು. ಆದರೆ ಇಂದು ಈ ಪಕ್ಷ ಪ್ರಾಥಮಿಕ ಮಟ್ಟದಿಂದಲೇ ಬೇರೂರಲು ಇನ್ನು ಸಾಧ್ಯವಾಗಿಲ್ಲ. ಇನ್ನು ರಾಜ್ಯ ಬಿಜೆಪಿ ಹಾಗೂ ಯಡಿಯೂರಪ್ಪರ ವಿಷಯಕ್ಕೆ ಬರುವುದಾದರೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪರ ಮನದಲ್ಲಿ ಏನೇನೋ ಇದೆ..ಮಾತು ಮೊದಲೇ ಹೇಳಿಬಿಡಲು ಕಾರಣನೂ ಇದೆ. ‘ನಾನು ಪಕ್ಷ ಬಿಟ್ಟು ಹೋಗುತ್ತಿದ್ದೇನೆ. ಯಾರಿಗೆ ಬೇಕಾಗಿದೆ ಬಿಜೆಪಿ. ನನಗೆ ಮಾಡಿದ ಅಪಮಾನಕ್ಕಾಗಿ ಪಕ್ಷ ಬಿಡುತ್ತಿದ್ದೇನೆ’ ಎಂದು ತಾನು ಬೆಳೆದು ಬಂದ ಪಕ್ಷದ ವಿರುದ್ಧನೆ ಇತ್ತೀಚಿಗಷ್ಟೇ ಶಿವಮೊಗ್ಗದಲ್ಲಿ ಹೇಳಿಕೆ ನೀಡಿ ತಾನಿಲ್ಲದೇ ಬಿಜೆಪಿ ಪಕ್ಷ ರಾಜ್ಯದಲ್ಲಿರಲು ಸಾಧ್ಯನೇ ಇಲ್ಲ ಅಂತಾ ಫೋಸು ಕೊಡುತ್ತಿರುವ ಯಡಿಯೂರಪ್ಪರ ಮೊಸಳೆ ಕಣ್ಣೀರು ಜನರಿಗೆ ಅರ್ಥವಾಗಲ್ಲವೇ..? ಮತ್ತಷ್ಟು ಓದು »