“ರೋಟಿ ಕಪಡಾ ಔರ್ ಮಕಾನ್ ನಿಂದ ಹೊಸ ಆಶೋತ್ತರದತ್ತ ಯುವ ಸಮೂಹ”
– ಪ್ರೊ. ಪುನೀತ್‌ರಾಜ್ ಕೆ. ಎನ್
ಜೈನ್ ಯೂನಿವರ್ಸಿಟಿ
ವಿಶ್ವದ ಐದನೇ ಒಂದರಷ್ಟು ಯುವಜನರು ಭಾರತದಲ್ಲಿದ್ದಾರೆ. ದೇಶದ ಅರ್ಧದಷ್ಟು ಜನರ ವಯೋಮಾನ 25 ವರ್ಷಕ್ಕಿಂತ ಕಡಿಮೆ ಇದೆ. ದೇಶ ಮುನ್ನಡೆ ಸಾಧಿಸಬೇಕು ಎಂದರೆ ಈ ಯುವಜನರ ಆಶೋತ್ತರಗಳನ್ನು ಈಡೇರಿಸುವುದು ಬಹಳ ಮುಖ್ಯವಾದ ಸಂಗತಿ. ಕೈಬೆರಳ ತುದಿಯಲ್ಲಿ ಸಿಗುತ್ತಿರುವ ತಂತ್ರಜ್ಞಾನದ ಪರಿಣಾಮವಾಗಿ ಯುವಜನರ ಆಶೋತ್ತರಗಳಲ್ಲಿ ಗಣನೀಯ ಬದಲಾವಣೆ ಆಗಿರುವುದು ಗೋಚರಿಸುತ್ತದೆ. ವಿಶ್ವಾದಾದ್ಯಂತ ಏನಾಗುತ್ತಿದೆ ಎಂಬುದನ್ನು ಅರಿಯುವುದರ ಮೂಲಕ ಜೀವನದ ಬಗ್ಗೆ ತಮ್ಮದೇ ಆದ ವಿಶ್ವನೋಟವನ್ನು ಬೆಳೆಸಿಕೊಳ್ಳಲು ತಂತ್ರಜ್ಞಾನ ಸಹಕರಿಸುತ್ತ್ತಿದೆ. ಇತ್ತೀಚಿನ ವರ್ಷಗಳಲ್ಲಿ “ಸಫಲತೆ” ಎಂಬ ಅಂಶವೇ ಸಾಕಷ್ಟು ಬದಲಾವಣೆ ಕಂಡಿರುವುದನ್ನು ನಾವು ನೋಡಬಹುದು. ಇಂದಿನ ಯುವಕರು ಧೈರ್ಯಶಾಲಿಗಳು, ನಿರ್ಧಾರ ಕೈಗೊಳ್ಳಲು ಹಿಂಜರಿಯದ, ಖಂಡಿಸುವ, ಮುಕ್ತವಾಗಿ ಟೀಕಿಸುವ, ತಮಗೆ ಯಾವುದು ಉತ್ತಮ ಎಂಬುದನ್ನು ಅರಿಯುವ ಸಾಮರ್ಥ್ಯ ಹೊಂದಿದ್ದಾರೆ. ಆದರೆ 20 ವರ್ಷಗಳ ಮುನ್ನ ಪರಿಸ್ಥಿತಿ ಹೀಗೆ ಇರಲಿಲ್ಲ. ಅದು ಐಐಟಿ/ಐಐಎಂಗಳಿಂದ ಪದವಿ ಪಡೆಯುವುದು, ಅಧಿಕಾರಿಯಾಗಿ ನೇಮಕವಾಗುವುದು, ಉತ್ತಮ ಸಂಬಳ ಹೊಂದಿರುವ ಸುರಕ್ಷಿತ ಕೆಲಸ ಅರಸುವುದು, ವಿದೇಶಗಳಲ್ಲಿರಬಹುದಾದ ಕೆಲಸದ ಅವಕಾಶಗಳತ್ತ ಆಕರ್ಷಣೆಗಳೇ ಸಫಲತೆಗೆ ಮಾನದಂಡವಾಗಿದ್ದವು. ಇದಕ್ಕೆ ತದ್ವಿರುದ್ಧವಾಗಿ, ಕುಟುಂಬ ಆಡಳಿತಕ್ಕೆ ಸಮಾನವಾಗಿದ್ದ ಹಾಗೂ ಸಫಲತೆಯ ಪ್ರಮಾಣ ಕಡಿಮೆಯಿದ್ದ ಕ್ರೀಡೆ, ಸಿನಿಮಾ ಹಾಗೂ ರಾಜಕೀಯ ಕ್ಷೇತ್ರಗಳು ಬಹುತೇಕಯುವಕ/ಯುವತಿಯರ ಆಯ್ಕೆಯೇ ಆಗುತ್ತಿರಲಿಲ್ಲ. ಕ್ರೀಡಾತಾರೆಯ ಪುತ್ರನೊಬ್ಬ ತನ್ನ ಕ್ರೀಡಾ ಸಾಮರ್ಥ್ಯಕ್ಕಿಂತಲೂ ತನ್ನ ತಂದೆಯ ಪ್ರಭಾವದ ಕಾರಣಕ್ಕೆ ಕ್ರೀಡಾಪಟುವಾಗುವ ಅವಕಾಶ ಹೊಂದಿರುತ್ತಿದ್ದ. ಸಿನಿಮಾತಾರೆಯ ಪುತ್ರನನ್ನು ತನ್ನ ಪ್ರಭಾವದ ಕಾರಣದಿಂದಲೇ ಬೆಳ್ಳಿತೆರೆಗೆ ಕರೆತರುವ ಹಾಗೂ ರಾಜಕಾರಣಿಯ ಪ್ರಭಾವದಿಂದಲೇ ತನ್ನ ಪುತ್ರನನ್ನು ರಾಜಕೀಯಕ್ಕೆ ಕರೆತರುತ್ತಿದ್ದರು. ವಿಫಲವಾಗುವ ಹಾಗೂ ತಿರಸ್ಕಾರಕ್ಕೆ ಒಳಗಾಗುವ ಅಪಾಯಕ್ಕೆ ಹೆದರುತ್ತಿದ್ದ ಬಹುಪಾಲು ಯುವಕರು ಈ ಕ್ಷೇತ್ರಗಳಿಂದ ದೂರವೇ ಉಳಿಯುತ್ತಿದ್ದರು. ನಂತರದ ದಿನಗಳಲ್ಲಿ, ಅಷ್ಟೇನೂ ಉತ್ಸಾಹದಿಂದ ಸ್ವಾಗತಿಸದ ಪರಿಸ್ಥಿತಿ ಬಂದಿತು. ಘಟಾನುಘಟಿಗಳನ್ನು ದಾಟಿ ಈ ಬಾಗಿಲುಗಳನ್ನು ದಾಟಿ ಒಳಹೋಗುವುದು ಅಸಾಧ್ಯ ಎಂಬಷ್ಟೇ ಕಠಿಣ ಕೆಲಸವಾಗಿತ್ತು. ಈ ಪ್ರವಾಹದ ವಿರುದ್ಧ ಈಜಿ ದಡ ಸೇರಿದವರು ಬೆರಳೆಣಿಕೆ ಮಂದಿ ಮಾತ್ರ. ಶಾರೂಖ್‍ಖಾನ್, ಅಕ್ಷಯಕುಮಾರ್‌ನಂತಹ ಕೆಲ ಸಿನಿಮಾ ಸ್ಟಾರ್‍ಗಳು ಹಾಗೂ ಕೆಲವೇ ಕ್ರೀಡಾಪಟುಗಳು ಮಾತ್ರವೇ ಎಲ್ಲ ಅಡೆತಡೆಗಳನ್ನು ದಾಟಿ ಸಫಲರಾಗಲು ಸಾಧ್ಯವಾಯಿತೇ ಹೊರತು ಬಹುತೇಕ ಯುವಕರು ಇದು ತಮ್ಮ ಕೈಲಾಗುವ ಕೆಲಸವಲ್ಲ ಎಂದುಕೊಂಡು ಈ ಕ್ಷೇತ್ರಗಳಿಂದ ದೂರವುಳಿಯುತ್ತಿದ್ದರು. ಮತ್ತಷ್ಟು ಓದು
ಮಾನಹೀನ ಮಾತುಗಳಿಂದ ಬದುಕಬೇಕಿದೆಯೇ ನಮ್ಮ ಡೆಮಾಕ್ರಸಿ…?
– ಸುಜಿತ್ ಕುಮಾರ್
ಸಣ್ಣವರಿದ್ದಾಗ ಶಿಕ್ಷಕರು ನಮಗೆ ಕಲಿಸಿದ್ದ ಅಮೋಘ ಶಿಕ್ಷಣಗಳಲ್ಲಿ ಸರಿಯೆನಿಸದ್ದಿದ್ದನ್ನು ಪ್ರಶ್ನಿಸುವುದೂ ಒಂದು. ಅದು ‘ಏನಲೇ..!?’ ಎಂದು ಕೊಳಪ್ಪಟ್ಟಿಯನ್ನು ಹಿಡಿದು ಜಾಡಿಸಿ ಕೇಳುವುದಕ್ಕಿಂತ ಮಿಗಿಲಾಗಿ, ಹರಿತವಾದ ಮಾತಿನಿಂದ ಸತ್ಯವೆಂಬ ಹಿಡಿತದೊಂದಿಗೆ ಮುಂದಿರುವವನ ಕಪಟ ವಂಚಕ ಮನಸ್ಥಿತಿಯನ್ನು ಬೆದರುಗೊಳಿಸುವ ಬಗೆಯಾಗಿದ್ದಿತು. ಅರ್ಥಾತ್ ಅವು ವೈಚಾರಿಕ ಬಗೆಯ ನೇರ ಪ್ರಶ್ನೆಗಳಾಗಿದ್ದವು. ಆದರೆ ಅಂದಿನ ಆ ಪಾಠವನ್ನು ಮರೆತ ಬಹುಮಂದಿ ಜನರು ಇಂದು ಕೇಳುವ ಪ್ರಶ್ನೆಗಳು ಏಕವಚನ ಪದಗುಚ್ಛಗಳ ಚಪ್ಪಲಿ ಏಟಿನಂತೆ ಮುಂದಿರುವ ವ್ಯಕ್ತಿಯ ಮಾನಹರಣ ಮಾಡುವ ಅಸ್ತ್ರಗಳಾಗಿವೆ. ಪುಕ್ಕಟೆಯಾಗಿ ಸಿಗುವ ಹೊಲಸು ಪದಗಳ ವಿಶೇಷಣಗಳನ್ನು ಬಳಸಿ ಮುಂದಿರುವವರ ಸ್ಥಾನ ಜೊತೆಗೆ ಮಾನವನ್ನೂ ತಿವಿದು ಹಾಕುವ ಇಂದಿನ ದಿನಗಳಲ್ಲಿ ವಿಷಯಕ್ಕೆ ತಕ್ಕನಾದಂತಹ ನೇರವಾದ ಪ್ರಶ್ನೆಗಳನ್ನೂ ಕೇಳುವವರ ಸಂಖ್ಯೆ ಕ್ಷೀಣಿಸುತ್ತಿದೆ! ಒಂದೋ ಆತ/ಅವಳು ಸಮಾಜದ ಅತಿ ಪ್ರಭಾವಿ ಗುಂಪಿನ ಇಂಪಾರ್ಟೆಂಟ್ ವ್ಯಕ್ತಿಗಳೆನಿಸಿಕೊಂಡಿರಬೇಕು ಅಥವಾ ಯಾರಿಗೂ ಕ್ಯಾರೇ ಎನ್ನದ ಖಡಕ್ ಅಧಿಕಾರಿಗಳಾಗಿರಬೇಕು. ಅಂತವರಿಗಷ್ಟೇ ಇಂದು ಪ್ರಶ್ನೆಗಳನ್ನು ಕೇಳುವ ‘ಅಧಿಕಾರ’ ಹಾಗು ‘ಧೈರ್ಯ’ ಸೀಮಿತವಾಗುತ್ತಿದೆ ಎಂದರೆ ಸುಳ್ಳಾಗದು. ಸಾಮಾನ್ಯನೊಬ್ಬನಿಗೆ ಇಂದು ಪ್ರಶ್ನಿಸುವ ಧೈರ್ಯವನ್ನು ತುಂಬುವ ಸಮಾಜವೇ ಇಲ್ಲವಾದರೆ ವಿಧ್ಯಾವಂತರಾಗಿಯೂ ಕುರಿಗಳು ಸಾರ್ ಕುರಿಗಳು ಎಂಬಂತೆ ಪ್ರಶ್ನಿಸುವ ನರಗಳನ್ನೇ ಕಳೆದುಕೊಂಡು ಒಬ್ಬರ ಬಾಲವನ್ನು ಇನ್ನೊಬ್ಬರು ಮೂಸುತ್ತಾ ಸಾಗುವ ಪಯಣ ಇದಾದಿತು. ಪೀಠಿಕೆ ಇಷ್ಟಿರಲಿ. ಈಗ ವಿಷಯಕ್ಕೆ ಬರೋಣ. ಅದಕ್ಕೂ ಮೊದಲು ಒಂದೆರೆಡು ನೇರ ನುಡಿ. ಇಲ್ಲಿ ಕೇಳಲಾಗಿರುವ ಪ್ರಶ್ನೆಗಳಿಗೆ ಪಕ್ಷ, ಜಾತಿ, ಪಂಥ ಎಂಬ ಯಾವುದೇ ಬಗೆಯ ತುರಿಕೆಗಳಾಗಲಿ, ಖಾಯಿಲೆಯಗಳಾಗಲೀ ಅಂಟಿಕೊಂಡಿಲ್ಲ. ಭಾರತೀಯರಾಗಿ ಅದಕ್ಕಿಂತಲೂ ಹೆಚ್ಚಾಗಿ ಸ್ವಸ್ಥ ಮಾನವರಾಗಿ ಕೇಳಲೇ ಬೇಕಾದ ಪ್ರಶ್ನೆಗಳಿವು. ಮುಂದಿರುವ ಇನ್ನೊಬ್ಬರಿಗಲ್ಲದಿದ್ದರೂ ತಮಗೆ ತಾವೇ ಚುಚ್ಚಿಕೊಳ್ಳಬೇಕಾದದ ಸೂಜಿಗಳಿವು! ಮತ್ತಷ್ಟು ಓದು
ಮೋದಿಯವರನ್ನು ಪ್ರಶ್ನಿಸುವ ನೈತಿಕತೆ ಸಿದ್ಧರಾಮಯ್ಯನವರಿಗೆ ಇದೆಯೇ?
– ರಾಕೇಶ್ ಶೆಟ್ಟಿ
ನೈತಿಕತೆ ಎಂದರೆ ಕೇಜಿಗೆಷ್ಟು ಎಂದು ಬದುಕುವ ಜನರು ಯಾರನ್ನು ಬೇಕಾದರೂ, ಏನನ್ನೂ ಬೇಕಾದರೂ ನಾಚಿಕೆ ಬಿಟ್ಟು ಪ್ರಶ್ನಿಸಬಲ್ಲರು. ಉದಾಹರಣೆಗೆ, ಮುಖ್ಯಮಂತ್ರಿ ಸಿದ್ಧರಾಮಯ್ಯ ಮೊನ್ನೆ ಟ್ವಿಟರಿನಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು “ಲೋಕಪಾಲ್’ ಯಾಕ್ರೀ ನೇಮಕ ಮಾಡಿಲ್ಲ ಅಂತ ಪ್ರಶ್ನಿಸುತ್ತಿದ್ದಿದ್ದು! ಇಡೀ ದೇಶಕ್ಕೆ ಮಾದರಿಯಾಗಿದ್ದ ಕರ್ನಾಟಕ ಲೋಕಾಯುಕ್ತವನ್ನು ನುಂಗಿ ನೀರು ಕುಡಿದ ಸಿಎಂ ಸಾಹೇಬರು ಪ್ರಧಾನಿಯವರನ್ನು ಆ ಪರಿ ಅಧಿಕಾರವಾಣಿಯಲ್ಲಿ ಪ್ರಶ್ನಿಸುವುದನ್ನು ನೋಡಿದಾಗ, ಇವರಿಗೆ ಪಾಪ ಪ್ರಜ್ಞೆಯೇ ಇಲ್ಲವೇನೋ ಎನ್ನಿಸುತ್ತಿತ್ತು. ಮತ್ತಷ್ಟು ಓದು
ಅನಾಣ್ಯೀಕರಣ, ಎಡಪಂಥೀಯ ಬುದ್ಧಿಜೀವಿಗಳು ಮತ್ತು ಮಾಧ್ಯಮಗಳು
ಜಿ. ಪದ್ಮನಾಭನ್
ಸಹಾಯಕ ಪ್ರಾಧ್ಯಾಪಕ
ತಮಿಳು ಭಾಷೆ ಮತ್ತು ಅನುವಾದ ಅಧ್ಯಯನ ವಿಭಾಗ
ದ್ರಾವಿಡ ವಿಶ್ವವಿದ್ಯಾಲಯ,
ಕುಪ್ಪಂಆಂಧ್ರ ಪ್ರದೇಶ.
[ತಮಿಳಿನ ಖ್ಯಾತ ಸಾಹಿತಿ, ಚಿಂತಕ ಬಿ.ಜಯಮೋಹನ್‍ರವರು, ಈ ಹಿಂದೆ ತಮ್ಮ ವೆಬ್‍ಸೈಟ್‍ನಲ್ಲಿ ಅನಾಣ್ಯೀಕರಣ ಮತ್ತು ಬುದ್ಧಿಜೀವಿಗಳ ದ್ವಿಮುಖ ನೀತಿಯ ಬಗೆಗಿನ ಲೇಖನವೊಂದನ್ನು ಪ್ರಕಟಿಸಿದ್ದರು. ಅದನ್ನು ದ್ರಾವಿಡ ವಿಶ್ವವಿದ್ಯಾಲಯದ, ತಮಿಳು ಬಾಷೆ ಮತ್ತು ಅನುವಾದ ಅಧ್ಯಯನ ವಿಭಾಗದ, ಸಹಾಯಕ ಪ್ರಾಧ್ಯಾಪಕ ಶ್ರೀ ಜಿ.ಪದ್ಮನಾಭನ್ ಅವರು ಕನ್ನಡಕ್ಕೆ ತಂದಿದ್ದಾರೆ. ಅನಾಣ್ಯೀಕರಣಕ್ಕೆ ಒಂದು ವರ್ಷ ಸಂದ ಹಿನ್ನೆಲೆಯಲ್ಲಿ ಈ ಲೇಖನ ಮತ್ತೆ ಚರ್ಚೆಯಾಗುತ್ತಿದೆ.] ಮತ್ತಷ್ಟು ಓದು
ಇದು ಆರಂಭ ಅಷ್ಟೇ; ಕಾದು ನೋಡೋಣ
– ಮು ಅ ಶ್ರೀರಂಗ
‘ಹಳ್ಳಿಗಳ ಮನೆಯಲ್ಲಿನ ಹೆಂಗಸರು’ ಆಪದ್ಧನ ಎಂದು ಕೂಡಿಡುವ ಹಣ ಸಾವಿರಾರು ರೂಪಾಯಿಗಳು ಇರಬಹುದು. ಆದರೆ ಲಕ್ಷಾಂತರ ರೂಪಾಯಿಗಳ ತನಕ ಇರುತ್ತದೆ ಎಂಬುದು ಕೇವಲ ಉತ್ಪ್ರೇಕ್ಷೆ. ಇದಕ್ಕೆ ಕಾರಣಗಳು ಹೀಗಿವೆ..
(೧). ಹಿಂದಿದ್ದಂತೆ ಈಗ ಹಳ್ಳಿಗಳಲ್ಲಿ ಅವಿಭಕ್ತ ಕುಟುಂಬಗಳು ಇಲ್ಲ. ತಾವು ಪಟ್ಟ ಹಳ್ಳಿಯ ಕಷ್ಟಗಳು ತಮ್ಮ ಮಕ್ಕಳಿಗೆ ಬೇಡ ಎಂದು ತಾಯಿತಂದೆಯರೇ ತಮ್ಮ ಮಕ್ಕಳನ್ನು ಓದು, ಕೆಲಸ ಎಂದು ಪಟ್ಟಣಕ್ಕೆ ಕಳಿಸುತ್ತಿದ್ದಾರೆ ಅಥವಾ ಮಕ್ಕಳೇ ಸ್ವತಃ ಹುಟ್ಟಿದೂರನ್ನು ಬಿಟ್ಟು ಪಟ್ಟಣಕ್ಕೆ ವಲಸೆ ಹೋಗಿಯಾಗಿದೆ. ಅವರು ಮತ್ತೆ ಬಂದು ಹಳ್ಳಿಯಲ್ಲಿ ತಮ್ಮಂತೆ ವ್ಯವಸಾಯ ಮಾಡಿಕೊಂಡಿರುವುದಿಲ್ಲ ಎಂದು ತಾಯಿ-ತಂದೆಯರಿಗೂ ಗೊತ್ತು; ಊರು ಬಿಟ್ಟು ಬಂದ ಮಕ್ಕಳು ಒಮ್ಮೆ ಪಟ್ಟಣ ವಾಸದ ರುಚಿ ಹತ್ತಿದ ಮೇಲೆ ಹಳ್ಳಿಗೆ ಹೋಗುವುದು ವರ್ಷಕ್ಕೊಮ್ಮೆ ಊರ ಜಾತ್ರೆಗೋ ಅಥವಾ ತಾಯಿ ತಂದೆಯರು ತೀವ್ರವಾದ ಕಾಯಿಲೆಯಿಂದ ಬಳಲುತ್ತಿದ್ದಾರೆ ಎಂಬ ಸುದ್ದಿ ಬಂದ ಮೇಲೆ ಅಷ್ಟೇ. ಮತ್ತಷ್ಟು ಓದು
ನೋಟುಗಳ ಅಮಾನ್ಯೀಕರಣ – ಭಾರತೀಯರ ಪ್ರತಿಸ್ಪಂದನೆ
– ವಿನಾಯಕ ಹಂಪಿಹೊಳಿ
ಪಾಶ್ಚಿಮಾತ್ಯರಿಂದ ಆಮದು ಮಾಡಿಕೊಂಡಿರುವ “ಸಿಸ್ಟಂ”ಗಳ ಜೊತೆ ನಾವು ಭಾರತೀಯರು ಮುಂಚಿನಿಂದಲೂ ಅಗತ್ಯವಿದ್ದರೆ ಮಾತ್ರ ಹೊಂದಿಸಿಕೊಳ್ಳುವ ಗುಣವನ್ನು ಹೊಂದಿದ್ದೇವೆ. ಇದು ವಾಸ್ತವವಾಗಿ ನಮ್ಮ ತಪ್ಪಲ್ಲ. ಸಿಸ್ಟಂನ ತಪ್ಪೂ ಅಲ್ಲ. ಭಾರತೀಯ ಸಮಾಜಗಳ ಸಂರಚನೆಗೆ ಪಾಶ್ಚಿಮಾತ್ಯರ “ಸಿಸ್ಟಂ” ಸಂಪೂರ್ಣ ಸಾಂಗತ್ಯವನ್ನು ಹೊಂದಿಲ್ಲ. ಯಾವುದೇ ಸಿಸ್ಟಂನ ಜೊತೆಗೆ ನಾವು ವರ್ತಿಸುವ ರೀತಿಯನ್ನು ಗಮನಿಸಿದರೆ ನಮಗಿದು ಅರ್ಥವಾಗುತ್ತದೆ.
ವಿದ್ಯಾರ್ಥಿ ಜೀವನವನ್ನೇ ತೆಗೆದುಕೊಳ್ಳಿ. ಎಜುಕೇಶನ್ ಸಿಸ್ಟಂ ನಡೆಸುವ ಪರೀಕ್ಷೆಗಳ ಜೊತೆಗೆ ನಾವು ಹೇಗೆ ವರ್ತಿಸಿದ್ದೇವೆ? ನೂರು ಜನ ವಿದ್ಯಾರ್ಥಿಗಳಲ್ಲಿ, ಅಂದಂದಿನ ಪಾಠವನ್ನು ಅಂದಂದಿಗೇ ಓದಿಕೊಂಡು, ಪರೀಕ್ಷೆಯ ಸಮಯದಲ್ಲಿ ಕೇವಲ ಕಣ್ಣಾಡಿಸಿಕೊಂಡಿರುವ ವಿದ್ಯಾರ್ಥಿಗಳು, ಕೇವಲ ಬೆರಳೆಣಿಕೆಯಷ್ಟು ಮಾತ್ರ. ಅದು ಬಿಟ್ಟರೆ ಉಳಿದೆಲ್ಲ ವಿದ್ಯಾರ್ಥಿಗಳು ಪರೀಕ್ಷೆ ಸಮೀಪಿಸುತ್ತಿದ್ದಂತೆ, ಅಭ್ಯಾಸದ ವೇಗವನ್ನು ಹೆಚ್ಚಿಸಿಕೊಳ್ಳುವವರೇ. ಶಿಕ್ಷಕರೂ ಹಾಗೆಯೇ. ಮೊದಲಿನ ಪಾಠಗಳನ್ನು ಎಳೆದೂ ಎಳೆದೂ ಕಲಿಸಿ, ಸೆಮಿಸ್ಟರ್ ಮುಗಿಯಲು ಬಂದಂತೆ, ಸ್ಪೆಷಲ್ ಕ್ಲಾಸುಗಳನ್ನು ಇರಿಸಿ, ಕೊನೆಯ ಪಾಠಗಳನ್ನೆಲ್ಲ ಮುಗಿಸುತ್ತಾರೆ. ಮತ್ತಷ್ಟು ಓದು
ಸದ್ಯದ ಸನ್ನಿವೇಶದಲ್ಲಿ ನಮ್ಮ ಮಾಧ್ಯಮಗಳ ನಡೆ ಸರಿಯಾಗಿದೆಯೇ..?
– ಮು ಅ ಶ್ರೀರಂಗ
ದಿನ ನಿತ್ಯ ಮಾಮೂಲಾಗಿ ಸಾಗುತ್ತಿದ್ದ ಜೀವನಕ್ಕೆ ಸ್ವಲ್ಪ ತಡೆ ಉಂಟಾದಾಗ ಮನಸ್ಸಿಗೆ ಕಸಿವಿಸಿ ಆಗುವುದು ಸಹಜ. ೫೦೦ ಮತ್ತು ೧೦೦೦ ನೋಟುಗಳ ಚಲಾವಣೆಯ ನಿಷೇಧದ ಪರಿಣಾಮದಿಂದಲೂ ಹೀಗಾಗಿದೆ. ಬಸ್ಸು, ರೈಲು, ವಿಮಾನ, ನೀರು, ವಿದ್ಯುತ್ತು ಇವುಗಳ ದರ ಇಷ್ಟನೇ ತಾರೀಖಿನಿಂದ ಹೆಚ್ಚಾಗುತ್ತದೆ ಎಂದು ಮುಂಚಿತವಾಗಿ ಘೋಷಣೆ ಮಾಡಿದಂತೆ ನೋಟಿನ ವಿಷಯದಲ್ಲಿ ಮಾಡಲು ಸಾಧ್ಯವಿಲ್ಲ. ಹಾಗೆ ಮಾಡಿದರೆ ಅದರ ಹಿಂದಿನ ಉದ್ದೇಶವೇ ನಿರರ್ಥಕವಾಗುತ್ತದೆ. ಇದು ಸಾಮಾನ್ಯ ಜ್ಞಾನ. ಆ ಎರಡು ನೋಟುಗಳ ಬದಲಾವಣೆಗಾಗಿ ೫೦ ದಿನಗಳ ಕಾಲಾವಕಾಶವಿದೆ. ಆದರೆ ಹೆಚ್ಚಿನ ಪತ್ರಿಕೆ ಮತ್ತು ಟಿ ವಿ ಸುದ್ದಿ ಮಾಧ್ಯಮಗಳು ನೆಗೆಟಿವ್ ಧೋರಣೆಗೆ ಕೊಟ್ಟಷ್ಟು ಮಹತ್ವವನ್ನು ಧನಾತ್ಮಕ ಸುದ್ದಿಗಳಿಗೆ ಕೊಡದೆ ಇರುವುದು ಸಮಸ್ಯೆಯು ಜಟಿಲವಾಗುತ್ತಿದೆ ಎಂಬ ಭಾವನೆಯನ್ನು ಜನರಲ್ಲಿ ಹರಡುತ್ತಿದೆ. ಮತ್ತಷ್ಟು ಓದು
ಹೊಣೆಗಾರಿಕೆ ಮರೆತಿರುವ ಮಾಧ್ಯಮಗಳು…!
– ಸಂತೋಷಕುಮಾರ ಮೆಹೆಂದಳೆ.
(ಇವತ್ತು ಮನೆಯಲ್ಲೊಂದು ಮದುವೆ ನಡೆಯುತ್ತಿದೆ ಎಂದಾದರೆ ಅನಾಮತ್ತು ತಿಂಗಳಗಟ್ಟಲೆಯಿಂದ ತಯಾರಿ ಮಾಡಿಕೊಳ್ಳುವ ಯಜಮಾನ ಮತ್ತವನ ಕುಟುಂಬ ಕೊನೆಯ ಕ್ಷಣದಲ್ಲಿ ಎನೋ ಮರೆತು ಬಿಟ್ಟಿರುತ್ತದೆ. ಮಂಟಪದಲ್ಯಾರೊ ಅದಕ್ಕಾಗಿ ಓಡಾಡುತ್ತಾರೆ. ಕೊನೆಗೆಲ್ಲಾ ಸಾಂಗವಾಗುತ್ತದೆ. ಒಂದು ಟೂರ್ ಅಂತಾ ಹೊರಟವರು ಅಯ್ಯೋ ಅದನ್ನು ಮರೆತು ಬಂದೆನೆನ್ನುವುದೇ ಸಾಮಾನ್ಯ ಆಗಿರುವಾಗ ನೂರೂ ಚಿಲ್ರೆ ಕೋಟಿ ಜನರನ್ನು ಸಂಭಾಳಿಸುವ ನಾಯಕ ಭವಿಷ್ಯಕ್ಕಾಗಿ ಅನಿವಾರ್ಯವಾಗಿ ಧೃಢ ನಿರ್ಧಾರ ಕೈಗೊಂಡು ಅಲ್ಲಲ್ಲಿ ಕೊಂಚ ಕ್ಯೂ ನಿಲ್ಲಿಸಿದಾಗಲೂ ಅದು ಕಾಮನ್ ಮ್ಯಾನ್‍ಗೆ ಹಬ್ಬದಂತೆ ಅನ್ನಿಸುತ್ತಿದ್ದಾಗಲೂ, ಏನು ಪ್ರಕಟಿಸಬೇಕು ಪ್ರಕಟಿಸಬಾರದು ಎನ್ನುವ ಪರಿಜ್ಞಾನ ಮಾಧ್ಯಮಗಳಿಗಿರಲೇ ಬೇಕಿತ್ತು.. ) ಮತ್ತಷ್ಟು ಓದು
ಪ್ರಧಾನಿಗಳ ನಡೆಯ ಹಿಂದೆ ಎಷ್ಟೆಲ್ಲ ಚಿಂತನೆ ಇದೆಯೆಂದರೆ…
– ರೋಹಿತ್ ಚಕ್ರತೀರ್ಥ
ಪ್ರಧಾನಿ ನರೇಂದ್ರ ಮೋದಿ ನವೆಂಬರ್ 8ರಂದು ಸಂಜೆ ಮಾಡಿದ ಭಾಷಣದಲ್ಲಿ ಐನೂರು ಮತ್ತು ಸಾವಿರ ರುಪಾಯಿ ಮುಖಬೆಲೆಯ ನೋಟುಗಳನ್ನು ಸರಕಾರ ವಾಪಸು ಪಡೆಯಲಿದೆ ಎಂಬ ಘೋಷಣೆ ಮಾಡಿದರು. ಈ ಕಾರ್ಯಾಚರಣೆ 4 ವಿಷಯಗಳನ್ನು ಗುರಿಯಾಗಿಟ್ಟುಕೊಂಡಿದೆ: ಭ್ರಷ್ಟಾಚಾರ, ಕಪ್ಪುಹಣ, ಭಯೋತ್ಪಾದನೆ ಮತ್ತು ಖೋಟಾನೋಟು. ಈ ನಾಲ್ಕೂ ವಿಷಯಗಳು ಒಂದಕ್ಕೊಂದು ತಳುಕು ಹಾಕಿಕೊಂಡಿರುವುದರಿಂದ ಅವನ್ನು ಒಟ್ಟಾಗಿ ಪರಿಹರಿಸುವ ಇಲ್ಲವೇ ನಿಶ್ಶಕ್ತಗೊಳಿಸುವ ಅತ್ಯಂತ ಪ್ರಬಲ, ಪರಿಣಾಮಕಾರಿ ಪರಿಹಾರದ ಅಗತ್ಯ ಹಲವು ವರ್ಷಗಳಿಂದ ಇತ್ತು. ಹತ್ತು ವರ್ಷ ದೇಶವನ್ನು ಆಳಿದ ನಾಮಕಾವಾಸ್ತೆ ಆರ್ಥಿಕತಜ್ಞರಿಗಾಗದ ಗಟ್ಟಿ-ದಿಟ್ಟ ನಡೆಯನ್ನು ಮೋದಿ ತೋರಿಸಿ ನಾಯಕತ್ವದಲ್ಲಿ ಜ್ಞಾನದ ಜೊತೆ ಧೈರ್ಯವೂ ಬೇಕೆಂಬ ಸಂದೇಶ ರವಾನಿಸಿದ್ದಾರೆ. ಮತ್ತಷ್ಟು ಓದು
ಸಾಮಾಜಿಕ ಪ್ರಜ್ಞೆ ಮತ್ತು ನಾವು
-ರಾಜಕುಮಾರ.ವ್ಹಿ.ಕುಲಕರ್ಣಿ
ಮುಖ್ಯಗ್ರಂಥಪಾಲಕ
ಎಸ್.ನಿಜಲಿಂಗಪ್ಪ ವೈದ್ಯಕೀಯ ಮಹಾವಿದ್ಯಾಲಯ
ಬಾಗಲಕೋಟ
ಒಮ್ಮೆ ಹೀಗಾಯ್ತು, ಮನೆಗೆ ಬರುತ್ತಿರುವಾಗ ದಾರಿಯಲ್ಲಿ ನನ್ನ ಸ್ನೇಹಿತ ಜಗಳವಾಡಿದ. ಅವನ ಜಗಳಕ್ಕೂ ಕಾರಣವಿತ್ತು. ಮನೆಕಟ್ಟಿಸುತ್ತಿದ್ದ ಯಜಮಾನರೊಬ್ಬರು ರಸ್ತೆ ಬದಿಯ ಚರಂಡಿಗೆ ಮರಳು, ಜಲ್ಲಿಕಲ್ಲುಗಳನ್ನು ತುಂಬಿಬಿಟ್ಟಿದ್ದರು. ಕೊಳಚೆ ನೀರು ಹರಿದು ಹೋಗದೆ ಚರಂಡಿ ತುಂಬಿ ನಿಂತಿತ್ತು. ಅಂಥದ್ದೊಂದು ಘಟನೆ ಅವನ ಆಕ್ರೋಶಕ್ಕೆ ಕಾರಣವಾಗಿತ್ತು. ಚರಂಡಿಯಲ್ಲಿ ತುಂಬಿರುವ ಮರಳು ಮತ್ತು ಜಲ್ಲಿಕಲ್ಲುಗಳನ್ನು ಕೂಡಲೇ ತೆಗೆದುಹಾಕುವಂತೆ ಅಲ್ಲಿ ಕೆಲಸ ಮಾಡುತ್ತಿದ್ದ ಕೆಲಸಗಾರರಿಗೆ ಹೇಳಿದ. ಅಲ್ಲೇ ಸಮೀಪದಲ್ಲಿ ನಿಂತಿದ್ದ ಯಜಮಾನರು ಮನೆ ಕೆಲಸ ಪೂರ್ಣಗೊಳ್ಳುವವರೆಗೆ ಅದು ಸಾಧ್ಯವಿಲ್ಲವೆಂದು ಬಿರುಸಾಗಿಯೇ ನುಡಿದರು. ಮಾತಿಗೆ ಮಾತು ಬೆಳೆಯಿತು. ಗಲಾಟೆ ಕೇಳಿ ಸುತ್ತಮುತ್ತಲಿನ ಮನೆಯವರು ಹೊರಗೆ ಬಂದರು. ಆಶ್ಚರ್ಯವೆಂದರೆ ಯಾರೊಬ್ಬರೂ ನನ್ನ ಗೆಳೆಯನ ಬೆಂಬಲಕ್ಕೆ ನಿಲ್ಲಲಿಲ್ಲ. ಅವನನ್ನೆ ವಿಚಿತ್ರ ಎನ್ನುವಂತೆ ನೋಡಿದರು. ಆದ ತಪ್ಪನ್ನು ತಪ್ಪು ಎಂದು ಹೇಳುವ ಧೈರ್ಯ ಅಲ್ಲಿದ್ದ ಯಾರೊಬ್ಬರಲ್ಲೂ ಇರಲಿಲ್ಲ. ಅಷ್ಟಕ್ಕೂ ಅದು ತಪ್ಪೆಂದು ಜಗಳಕ್ಕೆ ನಿಂತವನು ಅಸಲಿಗೆ ಆ ಕಾಲೋನಿಯವನೂ ಆಗಿರಲಿಲ್ಲ. ಆ ನಿಂತ ನೀರಿನ ಪಕ್ಕದ ಮನೆಯೂ ಅವನದಾಗಿರಲಿಲ್ಲ. ಆದರೂ ಆ ಸಂದರ್ಭ ಅವನಲ್ಲಿನ ಸಾಮಾಜಿಕ ಪ್ರಜ್ಞೆ ಜಾಗೃತಗೊಂಡಿತ್ತು. ತಪ್ಪನ್ನು ಸರಿಪಡಿಸಲು ಪ್ರಯತ್ನಿಸಿದ. ಯಾರು ಸಮಸ್ಯೆಯ ಸಮೀಪದಲ್ಲಿದ್ದರೋ ಅವರಲ್ಲಿ ಮಾತ್ರ ಸಾಮಾಜಿಕ ಸಮಸ್ಯೆ ಸಂಪೂರ್ಣವಾಗಿ ನಿಷ್ಕ್ರಿಯವಾಗಿತ್ತು. ಆದರೆ ಅದೇ ಜನ ಅಣ್ಣಾ ಹಜಾರೆ ಹೆಸರಿನ ಟೊಪ್ಪಿಗೆ ಧರಿಸಿ ಭೃಷ್ಟಾಚಾರ ವಿರೋಧಿ ಆಂದೋಲನದಲ್ಲಿ ಭಾಗವಹಿಸಿದ್ದು ವ್ಯವಸ್ಥೆಯೊಂದರ ವ್ಯಂಗ್ಯಕ್ಕೆ ಹಿಡಿದ ಕೈಗನ್ನಡಿಯಾಗಿತ್ತು. ಮತ್ತಷ್ಟು ಓದು