ಕಾಲು ಶತಮಾನ ಜನಮಾನಸವನ್ನು ಆಳಿದ ಕತೆಯೊಂದರ ಕತೆ!
– ಸುಜಿತ್ ಕುಮಾರ್
ಭಾರತೀಯರ ಸಿನಿಮಾ ಕ್ರೆಝೇ ಅಂತಹದ್ದು. ಜನಜೀವನದ ವಿವಿಧ ಸ್ತರಗಳಲ್ಲಿ ಸಿಕ್ಕಾಪಟ್ಟೆ ಹಾಸುಹೊಕ್ಕಿರುವ ಈ ಸಿನಿಮಾ ಎಂಬ ಮಾಯೆ ಒಂಥರ ಊಟಕ್ಕೆ ಬೇಕಾದ ಉಪ್ಪಿನಕ್ಕಾಯಿಯಂತೆ. ಉಪ್ಪಿನಕ್ಕಾಯಿ ಇಲ್ಲದೆಯೇ ಊಟ ಮಾಡಬಹುದಾದರೂ ನಮ್ಮಲ್ಲಿ ಕೆಲವೆಡೆ ಅದೇ ಊಟವಾಗಿಬಿಡುತ್ತದೆ! ಜೀವನದ ಅಷ್ಟೂ ಸಂಕಷ್ಟಗಳಿಗೆ ಆಧ್ಯಾತ್ಮದ ಮೊರೆ ಹೋಗುವ ಗುಂಪು ಒಂದೆಡೆಯಾದರೆ ಅದಕ್ಕಿಂತಲೂ ನೂರು ಪಟ್ಟು ದೊಡ್ಡ ಗುಂಪು ತಮ್ಮ ತಮ್ಮ ಕಷ್ಟ ದುಃಖಗಳಿಗೆ ಆ ಸಿನಿಮಾಗಳ ಹಿಂದೆ ಬೀಳುವುದನ್ನು ಇಲ್ಲಿ ಅಲ್ಲಗೆಳೆಯಲಾಗುವುದಿಲ್ಲ. ಅದ್ಯಾವುದೋ ಕ್ರಿಸ್ತ ಪೂರ್ವ ಜಮಾನದಲ್ಲಿ ಕೈಕೊಟ್ಟ ಹುಡುಗಿಯ ನೆನಪಲ್ಲಿ ಮೀಯಲು ಅಥವಾ ಗುಡುಗು ಸಿಡಿಲುಗಳ ಆರ್ಭಟದ ನಡುವೆಯೂ ಕಿಲೋಮೀಟರ್ಗಟ್ಟಲೆ ದೂರ ನಿಂತು ಪ್ರೀತಿ ನಿವೇದನೆ ಮಾಡುವ ಮ್ಯಾಜಿಕನ್ನು ಕಂಡು ಬೆರಗಾಗಲು ಅಥವ ಪಠ್ಯ ಪುಸ್ತಕಗಳ ಬದನೇಕಾಯಿ ಎನುತ ಮೂರು ನಿಮಿಷದಲ್ಲಿ ಕೋಟ್ಯಾದಿಪತಿಯಾಗುವ ‘ಇಸ್ಟೈಲ’ನ್ನು ನೋಡಿ inspire ಆಗಲು ಅಥವಾ ಆಫೀಸಿನಲ್ಲಿ ತನ್ನ ಬಾಸಿನ ಮೇಲಿನ ಸಿಟ್ಟನ್ನು ಇಲ್ಲಿ ಹೀರೊ ವಿಲನ್ಸ್ ಗಳಿಗೆ ತದುಕುವ ಪೆಟ್ಟುಗಳಲ್ಲಿ ದಮನಮಾಡಿಕೊಳ್ಳಲು ಅಥವಾ ವಯಸ್ಸಿನ ಹುಡುಗ ಹುಡುಗಿಯರಿಗೆ ಆ ಹೊರಗಿನ ಕೆಟ್ಟ ಜಗತ್ತಿನಲ್ಲಿ ಕಪ್ಪುಕೋಣೆಯ ನಾಲ್ಕಡಿ ಜಾಗ ಸ್ವರ್ಗಲೋಕವಾಗಲು.. ಒಂದೇ ಎರಡೇ ಇಂತಹ ಹಲವಾರು ಕಾರಣಗಳಿಂದ ಸಿನಿಮಾ ಹಾಗು ಥಿಯೇಟರ್ ಗಳು ನಮ್ಮವರಿಗೆ ವಿಪರೀತ ಹತ್ತಿರವಾಗಿವೆ. ಇನ್ನು ನಟ ನಟಿಯರ ವಿಚಾರಕ್ಕೆ ಬಂದರಂತೂ ಕತೆಬರೆದು, ಸೆಟ್ ಹಾಕಿ, ಸಂಗೀತ ಕರೆದು, ಹಾಡಿ, ಹಣ ಸುರಿದು, ಬೆಳಕಿಡಿದು ದುಡಿಯುವ ನೂರಾರು ಜನರನ್ನೂ ಮರೆತು ಕ್ಯಾಮರಾದ ಮುಂದೆ ಕಾಣುವ ಆ ಒಂದು ಚಹರೆಗೆ ಕಠೋರ ತಪಸ್ಸಿಗೆ ದೊರಕುವ ಭಗವಂತನ ದರ್ಶನದಂತೆ ಆಡುವ ಜನರ ಗುಂಪು ಒಂದೆಡೆಯಾದರೆ ಕೆಲವೆಡೆ ಅಂತಹ ಚಹರೆಗಳು ಅಂತಹ ದೇವರೆಂಬ ಪವರ್ಫುಲ್ ಶಕ್ತಿಗೇ ಒಂದು ಗೇಣು ಕೀಳು! ಇಂತಹ ಹತ್ತಾರು ನೂರಾರು ಕಾರಣಗಳಿಂದಲೇ ಇಂದು ಭಾರತೀಯ ಸಿನಿಮಾ ಇಂಡಸ್ಟ್ರಿ ಇಡೀ ವಿಶ್ವದಲ್ಲಿಯೇ ಅತಿ ಶ್ರೀಮಂತ ಇಂಡಸ್ಟ್ರಿ ಎನಿಸಿಕೊಂಡಿದೆ. ಇದು ವಿಪರ್ಯಾಸವೋ, ಹಾಸ್ಯವೋ ಅಥವಾ ಆಯಾಸವವೋ ಹೇಳುವುದು ಕಷ್ಟ. ಆದರೆ ಒಂದು ಮಾತ್ರ ಸತ್ಯ. ಒಂದು ಕಾಲು ಬಿಲಿಯನ್ ಜನರ ನಮ್ಮ ದೇಶದಲ್ಲಿ ಒಬ್ಬೊಬ್ಬರಿಗೆ ಇರುವ ಹತ್ತಾರು ಕನಸುಗಳು ನನಸಾಗದ ನೋವುಗಳಿಗೆ, ಹತಾಶೆಗಳಿಗೆ ತೆರೆಯ ಮೇಲೆ ಕಾಣುವ ಆ ಕಾಲ್ಪನಿಕ ಚಿತ್ರ ಒಂದು ಬಗೆಯ ಸಾಂತ್ವಾನವನ್ನು ನೀಡಬಲ್ಲದು. ಅದಕ್ಕೆ ಆ ಶಕ್ತಿ ಇದೆ! ಕೆಲಚಿತ್ರಗಳನಂತೂ ನಮ್ಮವರು ಅದ್ಯಾವ ಪರಿ ಹಚ್ಚಿಕೊಳ್ಳುತ್ತಾರೆ ಎಂದರೆ ದಶಕಗಳವರೆಗೂ ಅದನ್ನು ಥಿಯೇಟರ್ ಗಳಿಂದ ತೆಗೆಯಲು ಬಿಡುವುದಿಲ್ಲ. ಯಸ್ ದಶಕ I mean ಡೇಕೇಡ್ಸ್! ಮತ್ತಷ್ಟು ಓದು
ರಾಝೀ..
– ಅನಘಾ ನಾಗಭೂಷಣ
ಭಾರತೀಯ ಗುಪ್ತಚರ ದಳದ ಆಫೀಸರುಗಳು, ಗೂಢಚಾರಿಗಳ(spy) ಬಗ್ಗೆ ಸಾಕಷ್ಟು ಸಿನಿಮಾಗಳು ಬಂದಿವೆಯಾದರೂ ಇತ್ತೀಚೆಗೆ ಬಿಡುಗಡೆಯಾಗಿ ದೇಶಾದ್ಯಂತ ಜನಮೆಚ್ಚುಗೆ ಗಳಿಸಿದ್ದು ಸಲ್ಮಾನ್ ಖಾನನ ಟೈಗರ್ ಸಿನಿಮಾಗಳು, ಅಕ್ಷಯ್ ಕುಮಾರನ ಬೇಬಿ ಮತ್ತು ಆಲಿಯಾ ಭಟ್ ಳ ರಾಝೀ…
ಇವತ್ತು ರಾಝೀ ಸಿನಿಮಾ ನೋಡಿದೆ.. ನೈಜ ಘಟನೆಗಳಿಂದ ಸ್ಫೂರ್ತಿ ಪಡೆದು ಹರಿಂದರ್ ಎಸ್. ಸಿಕ್ಕಾ ಅವರು 2008ರಲ್ಲಿ ಬರೆದಿದ್ದ ‘Calling Sehmat’ ಎಂಬ ಕಾದಂಬರಿಯನ್ನಾಧರಿಸಿರುವ ಈ ಚಿತ್ರ ವಾಸ್ತವಕ್ಕೆ ಹತ್ತಿರವಾಗಿ, ಮನಮುಟ್ಟುವಂತಿದೆ.. ಏಕ್ ಥಾ ಟೈಗರ್, ಟೈಗರ್ ಜಿಂದಾ ಹೈ ಸಿನಿಮಾಗಳ ಬಗ್ಗೆ ನನಗೆ ಅಂಥಾ ಒಳ್ಳೆ ಅಭಿಪ್ರಾಯವೇನೂ ಇಲ್ಲವಾದರೂ ಬೇಬಿ ಇಷ್ಟವಾಗಿತ್ತು.. ಆದರೆ ವಸ್ತುನಿಷ್ಠತೆಯ ದೃಷ್ಟಿಯಿಂದ ನೋಡುವಾಗ ರಾಝೀ ಗೆ ಮೊದಲ ಸ್ಥಾನ.. ಈ ಚಿತ್ರದ ಮುಖ್ಯಪಾತ್ರ ಸಹಮತ್ ಸಯ್ಯದ್ ಳಾಗಿ ನಟಿಸಿರುವ ಆಲಿಯಾ ಭಟ್ ನಿಜಕ್ಕೂ ಅಭಿನಂದನಾರ್ಹಳು! ಹೈವೇ, ಉಡ್ತಾ ಪಂಜಾಬ್ ನಂತರ ಪ್ರಬುದ್ಧವೂ, ಸವಾಲೂ ಎನಿಸುವಂಥ ಪಾತ್ರವನ್ನ ಇದರಲ್ಲಿ ಅತ್ಯಂತ ಸಮರ್ಥವಾಗಿ ನಿರ್ವಹಿಸಿದ್ದಾಳಾಕೆ.. ಟೈಗರ್, ಬೇಬಿಗಳಲ್ಲಿರುವಂತೆ ಅತಿಮಾನುಷವೆನಿಸುವ ಯಾವುದೇ ಸ್ಟಂಟ್ಸ್, ಫೈಟಿಂಗ್, ಅನಾವಶ್ಯಕ ಹಾಡುಗಳು, ಹೀರೋಯಿಸಂ ಇವೇನೂ ಇಲ್ಲದೇ ರಾಝೀ ಸಹಜವಾಗಿ ಮೂಡಿಬಂದಿದೆ.. ಮತ್ತಷ್ಟು ಓದು
ನಕಲಿ ಜಾತಿ ಪ್ರಮಾಣ ಪತ್ರ ತೋರಿಸಿ 5 ಮೊಟ್ಟೆ ತಿಂದ ವಿದ್ಯಾರ್ಥಿ (ಸುಳ್ಸುದ್ದಿ)
– ಪ್ರವೀಣ್ ಕುಮಾರ್ ಮಾವಿನಕಾಡು
ಬಾಹುಬಲಿ ಹಾಗೂ ಬುದ್ಧಿಜೀವಿಗಳು
– ವಿನಾಯಕ ಹಂಪಿಹೊಳಿ
ಇತ್ತೀಚೆಗೆ ಬಿಡುಗಡೆಯಾದ ಬಾಹುಬಲಿ-೨ ಚಿತ್ರವು ಉಳಿದೆಲ್ಲ ಚಿತ್ರಗಳ ದಾಖಲೆಗಳನ್ನೆಲ್ಲ ಮುರಿದು ಇತಿಹಾಸವನ್ನು ಸೃಷ್ಟಿಸಿತು. ಒಂದು ಸಾವಿರ ಕೋಟಿ ಗಳಿಸಿದ ಮೊತ್ತಮೊದಲ ಭಾರತೀಯ ಚಿತ್ರವೆಂಬ ಹೆಗ್ಗಳಿಕೆಗೆ ಪಾತ್ರವಾಯಿತು. ಜನರು ಬಾಹುಬಲಿ ಚಿತ್ರದ ಎರಡೂ ಸರಣಿಗಳನ್ನು ಮನಸಾರೆ ಆನಂದಿಸಿದರು. ಬಾಹುಬಲಿಯ ಮೊದಲ ಭಾಗದಲ್ಲಿ ಕಂಡು ಬಂದಿದ್ದ ಹಲವಾರು ತಾಂತ್ರಿಕ ಹಾಗ ನಟನೆಯ ನ್ಯೂನತೆಗಳನ್ನೆಲ್ಲ ತಿದ್ದಿಸಿ, ರಾಜಮೌಳಿ ಎರಡನೇ ಭಾಗವನ್ನು ಬಹಳ ಸುಂದರವಾಗಿ ಕಟ್ಟಿಕೊಟ್ಟರು. ಕಥೆಯ ಮೊದಲ ಭಾಗದಲ್ಲಿ ಕಾಡುವ ಎಲ್ಲ ಪ್ರಶ್ನೆಗಳಿಗೂ ಕಾರಣವನ್ನು ಒದಗಿಸಿ, ಯಾವ ಪ್ರಶ್ನೆಯನ್ನೂ ಹಾಗೇ ಉಳಿಸಿಕೊಳ್ಳದೇ, ಕಥೆಯನ್ನು ಮುಗಿಸಿದ ಕೀರ್ತಿ ರಾಜಮೌಳಿಗೆ ಸಲ್ಲಬೇಕು.
ಯುದ್ಧದ ದೃಶ್ಯಗಳಂತೂ ಎರಡೂ ಚಿತ್ರಗಳಲ್ಲಿ ಬಹಳ ಚೆನ್ನಾಗಿ ಮೂಡಿಬಂದಿವೆ. ನಮ್ಮ ಪೂರ್ವಜರು ಯಾವೆಲ್ಲ ತಂತ್ರಗಳನ್ನು ಅನುಸರಿಸಿ ಯುದ್ಧಗಳನ್ನು ನಡೆಸಿದ್ದಾರೋ, ಅವೆಲ್ಲವುಗಳನ್ನೂ ರಾಜಮೌಳಿಯವರು ಕಲಾತ್ಮಕವಾಗಿ ತೋರಿಸಿದ್ದಾರೆ. ಮೇಲ್ನೋಟಕ್ಕೆ ಈ ಎಲ್ಲ ಯುದ್ಧತಂತ್ರಗಳೂ ರಾಜಮೌಳಿಯ ಕಲ್ಪನೆಯಂತೆ ಕಂಡರೂ, ಅವುಗಳಲ್ಲಿ ಬಹಳಷ್ಟು ತಂತ್ರಗಳನ್ನು ಹಿಂದೆ ನಮ್ಮ ಕ್ಷತ್ರಿಯರು ಅನುಸರಿಸಿರುವದಕ್ಕೆ ಚಾರಿತ್ರಿಕ ದಾಖಲೆಗಳಿವೆ. ಶಿವಗಾಮಿ, ದೇವಸೇನಾ, ಅವಂತಿಕಾ ಅಂಥ ಸ್ತ್ರೀ ಪಾತ್ರಗಳೂ ಕ್ಷಾತ್ರಗುಣಗಳಿಂದ ಕೂಡಿದ್ದವು. ಇದೂ ಕೂಡ ನಮ್ಮ ಚರಿತ್ರೆಯಲ್ಲಿ ಹೋರಾಡಿದ ವೀರ ವನಿತೆಯರನ್ನೇ ಬಿಂಬಿಸುತ್ತದೆ.
“ಪಟ್ಟಭದ್ರಹಿತಾಸಕ್ತಿಗಳ ಕೈಗಳಲ್ಲಿ ಸಿಕ್ಕಿ ಒದ್ದಾಡುತ್ತಿದೆ ಕನ್ನಡ ಚಿತ್ರರಂಗ”
– ಸುರೇಶ್ ಮುಗಬಾಳ್
ಗೆಳೆಯನೊಬ್ಬ ತಮಿಳು ನಟ ವಿಜಯ್ ನಟಿಸಿರುವ ‘ಕತ್ತಿ’ ಸಿನೆಮಾವನ್ನು ವೀಕ್ಷಿಸುವಂತೆ ಹೇಳಿದ, ಆ ಸಿನೆಮಾದಲ್ಲೇನಿದೆ ಅಂತಹ ವಿಶೇಷತೆ? ಎಂದು ಕೇಳಿದಾಗ, ‘ಸಾಮಾಜಿಕ ಕಳಕಳಿಯುಳ್ಳ ಅತ್ಯುತ್ತಮ ನಿನೆಮಾ, ಸಾಧ್ಯವಾದರೆ ವೀಕ್ಷಿಸು’ ಎಂದ, ಸರಿ ನಾನೂ Hotstar ನಲ್ಲಿ ಚಿತ್ರಕ್ಕಾಗಿ ತಡಕಾಡಿದೆ, ಸಿನೆಮಾವೇನೋ ವೀಕ್ಷಿಸಲು ಸಿಕ್ಕಿತು, ಆದರೆ ಚಿತ್ರವನ್ನು ಮಲೆಯಾಳಂ ಭಾಷೆಯಲ್ಲಿ ಡಬ್ಬ್ ಮಾಡಲಾಗಿತ್ತು. ಭಾಷೆ ಬಾರದವನಿಗೆ ತಮಿಳು ಭಾಷೆಯಾದರೇನು? ಮಲೆಯಾಳಂ ಭಾಷೆಯಾದರೇನು? ಅದು ಒತ್ತಟ್ಟಿಗಿರಲಿ, ಭಾಷೆಯ ಗಂಧವೇ ಗೊತ್ತಿರದ ಅರೇಬಿಕ್ ಭಾಷೆಯ ಅಲ್ ಲೈಲ್, ಕೋರಿಯನ್ ಭಾಷೆಯ Miracle in cell No. 7 ಸಿನೆಮಾಗಳನ್ನೂ ವೀಕ್ಷಿಸಿದ್ದೇನೆ, ಈ ಚಿತ್ರಗಳಲ್ಲಿ ನನಗೆ ಅರ್ಥವಾಗುತ್ತಿದ್ದದ್ದು ಕೇವಲ ಮುಖಭಾವ, ಆಂಗಿಕ ಚಲನೆ, ಚಿತ್ರದ ನಿರೂಪಣೆಗಳು ಮಾತ್ರ. ಇವುಗಳ ಸಹಾಯದಿಂದಲೇ ಚಿತ್ರಕಥೆಯನ್ನು ಅರ್ಥಮಾಡಿಕೊಳ್ಳು ಪ್ರಯತ್ನಿಸುತ್ತಿದ್ದೆ. ಒಂದು ವೇಳೆ English ಅಡಿಬರಹಗಳಿಲ್ಲದಿದ್ದರೆ ಸಿನೆಮಾ ಅರ್ಥವೇ ಆಗುತ್ತಿರಲಿಲ್ಲ. Miracle in cell No. 7 ಚಿತ್ರವನ್ನು ಇತ್ತೀಚೆಗೆ ರಮೇಶ್ ಅರವಿಂದ್ ಮುಖ್ಯಭೂಮಿಕೆಯಲ್ಲಿ ಕನ್ನಡಕ್ಕೆ ‘ಪುಷ್ಫಕ ವಿಮಾನ’ ಎಂಬ ಹೆಸರಿನಲ್ಲಿ ರಿಮೇಕ್ ಕೂಡ ಮಾಡಲಾಯಿತು. ನಾಯಕನ ನಟನೆ ಅದ್ಭುತವಾಗಿದ್ದರೂ ಚಿತ್ರವು ನಿರೀಕ್ಷೆಯನ್ನು ಹುಸಿಗೊಳಿಸಿತು. ಕೊರಿಯನ್ ಭಾಷೆಯಲ್ಲಿ ನಿರ್ಮಾಣವಾದ ಚಿತ್ರ ನನ್ನ ಅಂತರಂಗವನ್ನು ಕಲುಕಿದಷ್ಟೂ ಕನ್ನಡದಲ್ಲಿ ರಿಮೇಕ್ ಮಾಡಿದ ಚಿತ್ರ ಅಂತರಂಗಕ್ಕಿಳಿಯಲಿಲ್ಲ. ಪ್ರಾಯಶಃ ಕೊರಿಯನ್ ಭಾಷೆಯ ಚಿತ್ರವನ್ನೇ ಕನ್ನಡದಲ್ಲಿ ಡಬ್ಬಿಂಗ್ ಮಾಡಿದ್ದರೆ ಚಿತ್ರ ಇನ್ನಷ್ಟು ಅರ್ಥಗಳನ್ನು ಮೂಡಿಸುತ್ತಿತ್ತೇನೋ. ಮತ್ತಷ್ಟು ಓದು
ಬಿಗ್ ಬಾಸ್ ನಲ್ಲೂ ಮೀಸಲಾತಿಗೆ ಒತ್ತಾಯ (ಸುಳ್ಸುದ್ದಿ)
– ಪ್ರವೀಣ್ ಕುಮಾರ್, ಮಾವಿನಕಾಡು
ಬಿಗ್ ಬಾಸ್ ನಲ್ಲೂ ಮೀಸಲಾತಿ ಕಲ್ಪಿಸುವಂತೆ ಒತ್ತಾಯಿಸಿ ಪ್ರಗತಿಪರ ಹೋರಾಟಗಾರರ ಸಂಘದ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು.
ಬೆಂಗಳೂರು: ಖಾಸಗಿ ಚ್ಯಾನಲ್ ಗಳು ನಡೆಸುವ ಬಿಗ್ ಬಾಸ್ ಸ್ಪರ್ಧೆಗಳಲ್ಲೂ ಮೀಸಲಾತಿ ಕಲ್ಪಿಸುವಂತೆ ಒತ್ತಾಯಿಸಿ ಪ್ರಗತಿಪರ ಹೋರಾಟಗಾರರ ಸಂಘದ ಕಾರ್ಯಕರ್ತರು ನಗರದಲ್ಲಿ ನಿನ್ನೆ ಬೃಹತ್ ಪ್ರತಿಭಟನೆ ನಡೆಸಿದರು. ಚಿನ್ನಮ್ಮ ವೃತ್ತದಿಂದ ಮೆರವಣಿಗೆಯಲ್ಲಿ ಬಂದ ಪ್ರ.ಹೋ.ಸಂ. ಕಾರ್ಯಕರ್ತರು, ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದರು. ಕೇಂದ್ರ ಹಾಗೂ ರಾಜ್ಯ ಸರ್ಕಾರ ಮೀಸಲಾತಿ ವಿರೋಧಿ ನೀತಿ ಅನುಸರಿಸುತ್ತಿವೆ ಎಂದು ಘೋಷಣೆಗಳನ್ನು ಕೂಗಿದರು. ಮತ್ತಷ್ಟು ಓದು
ರಾಹುಲ್ ಗಾಂಧಿಗೆ ಬಿ.ಪಿ.ಎಲ್ ಕಾರ್ಡ್ ನೀಡಲು ನಿರ್ಧಾರ: ಸಿಎಂ (ಸುಳ್ಸುದ್ದಿ)
– ಪ್ರವೀಣ್ ಕುಮಾರ್, ಮಾವಿನಕಾಡು
ರಾಹುಲ್ ಗಾಂಧಿ ಅವರಿಗೆ ರಾಜ್ಯ ಸರ್ಕಾರದ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯ ಮೂಲಕ ಬಿ.ಪಿ.ಎಲ್ ಕಾರ್ಡ್ ನೀಡಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ. ಅವರು ಇಂದು ಮೂರನೇ ಮಹಡಿಯಲ್ಲಿ ನಡೆದ ತುರ್ತು ಸಚಿವ ಸಂಪುಟದ ಸಭೆಯ ನಂತರ ಕರೆದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡುತ್ತಿದ್ದರು.ಈ ಬಗ್ಗೆ ಸಚಿವ ಸಂಪುಟ ಒಮ್ಮತದ ನಿರ್ಧಾರ ಕೈಗೊಂಡಿದ್ದು ಮುಂದಿನ ಶುಕ್ರವಾರ ನವದೆಹಲಿಯಲ್ಲಿ ಅವರನ್ನು ಭೇಟಿಯಾಗಿ ಅವರಿಗೆ ಬಿ.ಪಿ.ಎಲ್ ಕಾರ್ಡ್ ನೀಡಲಾಗುವುದು ಎಂದು ತಿಳಿಸಿದರು. ಅದಕ್ಕಾಗಿ ಅಂದು ಅರ್ಧ ಗಂಟೆ ಭೇಟಿಯಾಗಲು ಅವರ ಬಳಿ ಸಮಯ ಕೇಳಿ ಪತ್ರ ಬರೆದಿದ್ದು ಪಕ್ಷಾಧ್ಯಕ್ಷರ ರಾಜಕೀಯ ಕಾರ್ಯದರ್ಶಿ ಅಹ್ಮದ್ ಪಟೇಲ್ ಅವರ ಅನುಮತಿಯ ನಿರೀಕ್ಷೆಯಲ್ಲಿದ್ದೇವೆ ಎಂದು ತಿಳಿಸಿದರು. ಮತ್ತಷ್ಟು ಓದು
ಚೇಂಜ್‍ಗೆ ಗಂಡ, ಎಕ್ಸ್’ಚೇಂಜ್‍ಗೆ ಪರಗಂಡ..! ( ಹಾಸ್ಯ )
– ತುರುವೇಕೆರೆ ಪ್ರಸಾದ್
ಬ್ರಹ್ಮಚಾರಿಯಾದ ಮೋದಿಗೆ ನಮ್ಮಂತಹ ಸದ್ (ಸತ್?) ಗೃಹಸ್ಥರ ಕಷ್ಟ ಹೇಗೆ ಗೊತ್ತಿರಲಿಕ್ಕೆ ಸಾಧ್ಯ ? ಎಂದು ನಾವು ಹಲವು ಬಾರಿ ಬಹಳ ಬೇಸತ್ತುಕೊಂಡಿದ್ದೆವು. ದೊಡ್ಡ ದೇಶದ ಪ್ರಧಾನಿ ಆಗುವುದು ದೊಡ್ಡದಲ್ಲ, ಚಿಕ್ಕ ಸಂಸಾರದಲ್ಲಿ ನಿಧಾನಿಯಾಗಿ ಎಲ್ಲವನ್ನೂ ನಿಭಾಯಿಸುವುದೇ ಕಷ್ಟ ಎಂದು ಮೊದಲಿನಿಂದಲೂ ನಮಗೆ ಅನುಭವವೇದ್ಯವಾದ ಅರಿವು ಮೂಡಿತ್ತು. ಅಂತದ್ದೊಂದು ಅರಿವಿಲ್ಲದೆ ಮೋದಿ ಎಲ್ಲಂದರಲ್ಲಿ ಓಡಾಡಿಕೊಂಡು, ದೇಶ ಸುತ್ತಿಕೊಂಡು ನೆಮ್ಮದಿಯಾಗಿದ್ದಾರಲ್ಲ ಎಂದು ನಮಗೆ ಸಿಕ್ಕಾಪಟ್ಟೆ ಹೊಟ್ಟೆ ಉರಿಯಿತ್ತು. ನಮ್ಮಂತಹ ಗೃಹಸ್ಥರಿಗೆ ಯಾವುದೇ ಪ್ಯಾಕೇಜ್ ಘೋಷಿಸಿರಲಿಲ್ಲ ಎಂದು ಮುಂದಿನ ಬಾರಿ ಅವರಿಗೆ ಓಟ್ ಮಾಡುವುದೇ ಬೇಡ ಎಂದು ನಿರ್ಧರಿಸಿದ್ದೆವು. ಈಗ ಅವರು ಏಕಾಏಕಿ 1000, 500ರ ನೋಟುಗಳನ್ನು ಬ್ಯಾನು ಮಾಡಿ ನಮಗೆ ದೊಡ್ಡ ಉಪಕಾರ ಮಾಡಿದ್ದಾರೆ. ಮಡದಿ ಇದ್ದಿದ್ದರೆ ಇಷ್ಟೆಲ್ಲಾ ಗುಟ್ಟು ಕಾಯ್ದಿಟ್ಟುಕೊಂಡು ಮೋದಿ ದೊಡ್ಡ ದೊಡ್ಡ ನೋಟುಗಳನ್ನು ಬ್ಯಾನ್ ಮಾಡಲು ಆಗುತ್ತಿರಲಿಲ್ಲ. ಹೇಗೋ ದೊಡ್ಡ ದೊಡ್ಡ ನೋಟುಗಳನ್ನು ಬ್ಯಾನ್ ಮಾಡಿ ಕೋಟ್ಯಂತರ ಗೃಹಸ್ಥರನ್ನು ಸಂಕಟದಿಂದ ಪಾರು ಮಾಡಿದ್ದಾರೆ. ನಮ್ಮಲ್ಲೂ ಹೊಸ ಆಸೆ ಭರವಸೆ ಮೂಡಿಸಿದ್ದಾರೆ. ಕೋಟ್ಯಂತರ ಪತ್ನೀ ಶೋಷಿತ ಗಂಡಸರ ಪರವಾಗಿ ಮೋದಿಗೆ ಕೋಟಿಕೋಟಿ ವಂದನೆಗಳು.. ಮತ್ತಷ್ಟು ಓದು
ಮೋದಿ ಭಾರತದಲ್ಲಿ ತೀವ್ರಗೊಂಡ ನಿರುದ್ಯೋಗ ಸಮಸ್ಯೆ : ಚಿಂತಾಜನಕ ಮಾಹಿತಿ (ಸುಳ್ಸುದ್ದಿ)
ಪ್ರವೀಣ್ ಕುಮಾರ್, ಮಾವಿನಕಾಡು
ನವದೆಹಲಿ, ಡಿಸೆಂಬರ್ 2 : ದೇಶದಲ್ಲಿ ನಿರುದ್ಯೋಗ ಸಮಸ್ಯೆ ಹಿಂದೆಂದಿಗಿಂತಲೂ ತೀವ್ರವಾಗಿದೆ. ಕಳೆದ ಹನ್ನೆರಡು ವರ್ಷಗಳಲ್ಲೇ ಅತ್ಯಧಿಕ ಪ್ರಮಾಣದ ನಿರುದ್ಯೋಗ ದೇಶದಲ್ಲಿ ತಾಂಡವವಾಡುತ್ತಿರುವುದು ಸಮೀಕ್ಷೆಯೊಂದರಿಂದ ಬಹಿರಂಗವಾಗಿದೆ.
ಕಳೆದ ನವೆಂಬರ್.8 ನೇ ತಾರೀಕಿನಿಂದ ದೇಶದಲ್ಲಿ ಇಲ್ಲಿಯವರೆಗೆ 15 ರಿಂದ 65 ರ ವಯಸ್ಸಿನ ಸುಮಾರು 8% ಜನರು ತಮ್ಮ ಉದ್ಯೋಗ ಕಳೆದುಕೊಂಡಿದ್ದಾರೆ ಎಂದು ಸೆಂಟ್ರಲ್ ಗಂಜಿ ಬ್ಯೂರೋ ನಡೆಸಿದ ಉದ್ಯೋಗ-ನಿರುದ್ಯೋಗ ಸಮೀಕ್ಷಾ ವರದಿಯಲ್ಲಿ ಹೇಳಲಾಗಿದೆ. ಮತ್ತಷ್ಟು ಓದು
ಸರ್ಕಾರದಿಂದ ವೀರಪ್ಪನ್ ಜಯಂತಿಗೆ ಸಕಲ ಸಿದ್ಧತೆ: ಬರುವ ಯುಗಾದಿಗೆ ದಿನ ನಿಗದಿ (ಸುಳ್ಸುದ್ದಿ)
– ಪ್ರವೀಣ್ ಕುಮಾರ್, ಮಾವಿನಕಾಡು
ಬೆಂಗಳೂರು: ರಾಜ್ಯದಲ್ಲಿ ವೀರಪ್ಪನ್ ಜಯಂತಿಯನ್ನು ಆಚರಿಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಗೃಹ ಸಚಿವರು ತಿಳಿಸಿದ್ದಾರೆ. ವೀರಪ್ಪನ್ ಜಯಂತಿ ಅಂಗವಾಗಿ ಮೊನ್ನೆ ವಿಧಾನಸೌಧದ ತಮ್ಮ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮಾನ್ಯ ಮುಖ್ಯಮಂತ್ರಿಗಳ ಆಶಯದಂತೆ ಈ ಸಾಲಿನಿಂದ ಸರ್ಕಾರದ ಹಣದಲ್ಲಿ ವೀರಪ್ಪನ್ ಜಯಂತಿಯನ್ನು ಆಚರಿಸಲಾಗುವುದು ಮತ್ತು ಮೊದಲ ವರ್ಷದ ವೀರಪ್ಪನ್ ಜಯಂತಿಯನ್ನು ಬರುವ ಯುಗಾದಿಯಂದು ಹಮ್ಮಿಕೊಳ್ಳಲಾಗಿದೆ ಎಂದು ಅವರು ತಿಳಿಸಿದರು. ಅಂದು ರಾಜ್ಯದಾದ್ಯಂತ ವೀರಪ್ಪನ್ ಗೆ ಗೌರವ ಸಲ್ಲಿಸುವ ಕಾರ್ಯಕ್ರಮ ಮಾಡಲಾಗುತ್ತಿದ್ದು, ಎಲ್ಲೆಡೆ ವೀರಪ್ಪನ್ ಅವರ ಭಾವಚಿತ್ರದ ಮೆರವಣಿಗೆಯನ್ನು ಮಾಡಲಾಗುವುದು ಎಂದರು. ಮತ್ತಷ್ಟು ಓದು