ವಿಷಯದ ವಿವರಗಳಿಗೆ ದಾಟಿರಿ

Posts from the ‘ಸ್ಯಾಂಡಲ್ ವುಡ್’ Category

26
ಜುಲೈ

ಸಾವಿರ ರುಪಾಯಿಯ ಫೋಟೋ ಮತ್ತು ಲಕ್ಷದ ಪ್ರಚಾರ

ಡಾ ಅಶೋಕ್ ಕೆ ಆರ್.

ವೈಯಕ್ತಿಕ basavanna film controversyವಿಷಯದಿಂದ ಲೇಖನವೊಂದನ್ನು ಪ್ರಾರಂಭಿಸುವುದು ಅಷ್ಟೇನೂ ಸರಿಯಲ್ಲವಾದರೂ ಈ ಲೇಖನಕ್ಕೆ ಪೂರಕವಾಗಿರುವ ಘಟನೆಯಾಗಿರುವುದರಿಂದ ಹೇಳುತ್ತಿದ್ದೇನೆ, ಕ್ಷಮೆಯಿರಲಿ. ಮದುವೆಯಾಗುವ ದಿನ ಹೊಸದೇನನ್ನಾದರೂ ಮಾಡಬೇಕೆಂಬ ಆಸೆಯಿಂದ ನನ್ನ ಗೆಳೆಯನೊಬ್ಬ ಮದುವೆಗೆ ಬಂದವರಿಗೆಲ್ಲ ಒಂದೊಂದು ಗಿಡ ಹಂಚಿದ್ದ, ಒಟ್ಟು ಎರಡು ಸಾವಿರ ಗಿಡಗಳು. ಬಂದವರಿಗೆಲ್ಲ ಯಾವುದಾದರೊಂದು ಪುಸ್ತಕವನ್ನು ತಾಂಬೂಲದ ರೂಪದಲ್ಲಿ ಕೊಡಬೇಕೆಂಬುದು ನನ್ನಾಸೆಯಾಗಿತ್ತು. ಮದುವೆ ನಿಶ್ಚಿತವಾಗುವಷ್ಟರೊಳಗೆ ನನ್ನದೇ ಹದಿನೈದರಷ್ಟು ಕಥೆಗಳು ವಿವಿಧ ಪತ್ರಿಕೆಗಳಲ್ಲಿ ಪ್ರಕಟವಾಗಿದ್ದ ಕಾರಣ ನನ್ನದೇ ಕಥಾ ಸಂಕಲನ ಬಿಡುಗಡೆಗೊಳಿಸಿ ಮದುವೆಮನೆಯಲ್ಲೇ ತಾಂಬೂಲದ ಜೊತೆಗೆ ಕೊಡುವ ನಿರ್ಧಾರವೂ ಆಯಿತು. ಮಾಧ್ಯಮದವರನ್ನೂ ಕರೆಯುವ ತೀರ್ಮಾನವನ್ನೂ ಕೈಗೊಂಡೆವು. ಮದುವೆ ದಿನ ತಾಳಿ ಕಟ್ಟಿದ ಮೇಲೆ ಪುಸ್ತಕ ಬಿಡುಗಡೆ ಕಾರ್ಯಕ್ರಮವಿತ್ತು. ಮಾಧ್ಯಮದವರು ವಿಡಿಯೋ ಕ್ಯಾಮೆರಾಗಳ ಜೊತೆಗೆ ಬಂದು ಮುಂದಿನ ಸಾಲಿನಲ್ಲಿ ಆಸೀನರಾಗಿದ್ದರು. ಆಗ ಗಾಬರಿಯಾಗಿದ್ದು ಹುಡುಗಿ ಮತ್ತು ನನ್ನ ಮನೆ ಕಡೆಯ ನೆಂಟರು!! ಕೆಲವರಿಗಷ್ಟೇ ಪುಸ್ತಕ ಬಿಡುಗಡೆಯ ಬಗ್ಗೆ ತಿಳಿಸಿದ್ದೆವು, ಇನ್ನುಳಿದವರಿಗೆ ಅಂದೇ ತಿಳಿಯಲಿ ಎಂದು ಸುಮ್ಮನಿದ್ದೆವು. ಮೀಡಿಯಾದವರು ಕ್ಯಾಮೆರ ಸಮೇತ ದಾಂಗುಡಿಯಿಟ್ಟಿದ್ದು ಕಂಡು ಗಾಬರಿಗೊಂಡ ಜನ ಅವರ ಬಳಿ ಹೋಗಿ ಏನು ಸಮಾಚಾರ ಎಂದು ವಿಚಾರಿಸಿ ಪುಸ್ತಕ ಬಿಡುಗಡೆಯ ಬಗ್ಗೆ ತಿಳಿದು ನಿಟ್ಟುಸಿರುಬಿಟ್ಟರು!! ಜನ ಗಾಬರಿಗೊಂಡಿದ್ದಾದರೂ ಯಾಕೆ? ಯಾವುದೇ ದೃಶ್ಯ ಮಾಧ್ಯಮದಲ್ಲಿ ಮದುವೆಯ ಸುದ್ದಿ ಬರುವುದು ಹುಡುಗ/ಹುಡುಗಿ ಓಡಿ ಹೋದಾಗ ಅಥವಾ ಮತ್ಯಾವುದೋ ರಂಪ ರಾಮಾಯಣವಾದಾಗ. ಮಾಧ್ಯಮದವರಿದ್ದಾರೆಂದರೆ ಅಲ್ಲೇನೋ ಕೆಟ್ಟದ್ದು ನಡೆಯುತ್ತಿದೆ ಎಂಬ ಭಾವನೆಯೇ ತುಂಬಿ ಹೋಗಿದೆ ಜನರಲ್ಲಿ. ಅದೇ ಕಾರಣದಿಂದ ನನ್ನ ಮದುವೆಯ ದಿನ ನೆಂಟರಿಷ್ಟರು ಗಾಬರಿಯಾಗಿದ್ದರು! ಇದು ನಮ್ಮ ಮಾಧ್ಯಮಗಳು ಬೆಳೆಸಿಕೊಂಡಿರುವ ಪ್ರಭಾವಳಿ! ಮತ್ತಷ್ಟು ಓದು »

5
ಆಕ್ಟೋ

ಬೆಂಗಳೂರು ಕನ್ನಡಿಗರಿಗೊಂದು ಬಹಿರಂಗ ಪತ್ರ

-ಭರತ್ ಬಿಕೆ

ಬೆಂಗಳೂರಲ್ಲೀ ಇದೀರಾ ? ಬೆಂಗಳೂರಿಗೆ ಬಂದ್ರಾ ?? ಸಂತೋಷ 🙂 ಬೆಂಗಳೂರಲ್ಲೇ ಹುಟ್ಟೀ, ಬೆಂಗಳೂರಲ್ಲೇ ಬೆಳೆದ್ರಾ ?? ತುಂಬಾ ಸಂತೋಷ 🙂

ಬೆಂಗಳೂರಲ್ಲೇ ಬದುಕಬೇಕು ಅಂತಾ ಇದೀರಾ ?? ಇನ್ನೂ ಸಂತೋಷ:)

ಆದರೇ ಇಲ್ಲಿನ ಭಾಷೆ, ನೆಲ, ಜಲ, ವ್ಯವಸ್ಥೆ, ಅವಸ್ಥೆ,ಸಮಸ್ಯೆಗಳ ಬಗ್ಗೆ ಸ್ವಲ್ಪ ಯೋಚನೆ ಮಾಡಿದ್ದೀರಾ?  ಅದಕ್ಕಾಗಿ, ಅದಕ್ಕೆ ಸಂಬಂಧಿಸಿದ ವಿಚಾರಗಳಲ್ಲೀ ಭಾಗವಹಿಸಿದ್ದೀರಾ ??

ಸಾರ್ವಜನಿಕವಾಗಿ ?? ವಯಕ್ತಿಕವಾಗಿ ??

ಅಷ್ಟೆಲ್ಲಾ ಯಾಕೇ ಬಿಡಿ.. ಫೇಸ್ ಬುಕ್ ಪ್ರೋಫೈಲಲ್ಲೀ ಪೋಸ್ಟ್ ಮಾಡಿದಿರಾ ? ಸಂಬಂಧಿಸಿದ ಪೋಸ್ಟ್ ಗಳಿಗೇ ಲೈಕ್ ಮಾಡಿಡ್ಡೀರಾ ?? ಕಮೇಂಟ್ ಕೊಟ್ಟಿದ್ದೀರಾ ??

ಮತ್ತಷ್ಟು ಓದು »

27
ಸೆಪ್ಟೆಂ

ಕಾವೇರಿ ನದಿನೀರು ಹಂಚಿಕೆಯಲ್ಲಿ ನಾಡಿಗಾದ ಅನ್ಯಾಯ – ಕಿರು ವರದಿ

– ಜಯಪ್ರಕಾಶ್ ಪಿ., ಕರುನಾಡ ದನಿ

ಕಾವೇರಿ ನದಿಯು ಕರ್ನಾಟಕದ ಕೊಡಗು ಜಿಲ್ಲೆಯಲ್ಲಿರುವ ಬ್ರಹ್ಮಗಿರಿ ತಪ್ಪಲಿನ ’ತಲಕಾವೇರಿ’ ಯಲ್ಲಿ ಹುಟ್ಟಿ ಕರ್ನಾಟಕದ ಬಹುತೇಕ ಭಾಗದಲ್ಲಿ ಹರಿದು ತಮಿಳುನಾಡು ಮತ್ತು ಕೇರಳದ ಕೆಲ ಭಾಗಗಳಲ್ಲಿ ಹರಿದು ಹೋಗುತ್ತದೆ. 1883 ರಲ್ಲಿ ಅಂದಿನ ಮೈಸೂರು ಪ್ರಾಂತ್ಯದ ದಿವಾನರು ಕಾವೇರಿ ನದಿನೀರನ್ನು ನೀರಾವರಿ ಯೋಜನೆಗೆ ಬಳಸಿಕೊಳ್ಳಲು ಮುಂದಾದಾಗ, ಅಂದಿನ ಬ್ರಿಟಿಷ್ ಆಳ್ವಿಕೆಯಲ್ಲಿದ್ದ ಮದರಾಸು ಪ್ರಾಂತ್ಯ ಅದನ್ನು ಸಹಿಸದೆ, ಮದರಾಸಿಗೆ ಅನುಕೂಲವಾಗುವಂತ ಅನೇಕ ಕಟ್ಟಳೆಗಳನ್ನು ಮಾಡುವ ಮೂಲಕ ತಾರತಮ್ಯ ನೀತಿ ಆರಂಭಿಸಿತು. ಅಂದು ಆರಂಭವಾದ ಕಾವೇರಿ ನದಿನೀರಿನ ಸಮಸ್ಯೆ ಸುಮಾರು 120ವರ್ಷಗಳೇ ಕಳೆದಿದ್ದರೂ,ಸರಿಯಾದ ಒಂದು ನಿಷ್ಪಕ್ಷಪಾತ ಜಲನೀತಿ ಇಲ್ಲದ ಪರಿಣಾಮವಾಗಿ ಇಂದು ಬಗೆಹರಿಯದ ಕಗ್ಗಂಟಾಗಿ ಬೆಳೆದು ನಿಂತಿದೆ.
31
ಮೇ

ಸಾಮಾಜಿಕ ಕಳಕಳಿಯೆಂದರೆ…..

-ಡಾ.ಅಶೋಕ್ ಕೆ.ಆರ್

ತೀರ ಗಂಗಾಧರ್ ಮೊದಲಿಯಾರ್ ಕೂಡ ಈ ರೀತಿಯಾಗಿ ಬರೆಯಬಲ್ಲರು ಎಂದು ನಿರೀಕ್ಷಿಸಿರಲಿಲ್ಲ! ಪ್ರಜಾವಾಣಿಯ ಸಿನಿಮಾರಂಜನೆಯ ಫಿಲಂ ಡೈರಿ ಅಂಕಣದಲ್ಲಿ ಅಮೀರ್ ಖಾನನ ಸತ್ಯಮೇವ ಜಯತೆಯ ಬಗ್ಗೆ ಬರೆದಿದ್ದಾರೆ. ‘ಬುರುಡೆ ಪುರಾಣ’ ಎಂಬ ಶೀರ್ಷಿಕೆಯೇ ಅಸಂಬದ್ಧವಾಗಿದೆ. ಅಮೀರ್ ಖಾನನ ಕೆಲಸವನ್ನು ಮೆಚ್ಚುತ್ತಲೇ ಅವನನ್ನು ತೆಗಳುತ್ತಾ ಹೋಗುತ್ತಾರೆ. ಭಾವನೆಗಳನ್ನು ಉದ್ರಿಕ್ತಗೊಳಿಸಿ ಹಣ ಮಾಡುವ ‘ದಂಧೆ’ ಎಂದುಬಿಡುತ್ತಾರೆ. ಅಮೀರ್ ಖಾನ್ ಹೋರಾಟಗಾರನಲ್ಲ, ಸಾಮಾಜಿಕ ಕಾರ್ಯಕರ್ತನೂ ಅಲ್ಲ; ಆತ ಒಬ್ಬ ನಟ, ನಿರ್ಮಾಪಕ, ನಿರ್ದೇಶಕ. ಹಣವಿಲ್ಲದೆ ಏನೂ ಮಾಡಲಾಗದ ಚಿತ್ರರಂಗದವನು. ಯಾವ ಕಾರ್ಯಕ್ರಮ ಮಾಡಿದರೂ ಅದರಿಂದ ಲಾಭ ಬರುವುದನ್ನು ಅವನು ಗಮನಿಸಲೇಬೇಕು. ‘ಏರ್ ಟೆಲ್ನಿಂದ ಮೇಸೇಜ್ ಮಾಡಿ, ಕೇವಲ ಒಂದು ರುಪಾಯಿ’ ಎಂದವನು ಕಾರ್ಯಕ್ರಮದ ಕೊನೆಯಲ್ಲಿ ಹೇಳುವುದು ಕೂಡ ಲಾಭದ ಒಂದು ಮುಖ. ಇವೆಲ್ಲವೂ ಸತ್ಯವೇ, ಆದರೆ….
ಪತ್ರಿಕೆಗಳಿರಬಹುದು, ಅಂತರ್ಜಾಲ ತಾಣಗಳಲ್ಲಿರಬಹುದು ಇಂದು ಅಮೀರ್ ಖಾನನ ಕಾರ್ಯಕ್ರಮವನ್ನು ಅಮಿತಾಭ್ ನಡೆಸಿಕೊಟ್ಟ ಕೋಟ್ಯಧಿಪತಿ ಕಾರ್ಯಕ್ರಮಕ್ಕೆ ಹೋಲಿಸಿ ಮಾತನಾಡುತ್ತಾರೆ. ಕೋಟ್ಯಧಿಪತಿಗೆ ಹೆಚ್ಚು ಟಿ.ಆರ್.ಪಿ ಇತ್ತು ಎಂದು ಹೇಳುತ್ತಾರೆ. ಇವೆರಡೂ ಕಾರ್ಯಕ್ರಮಗಳನ್ನು ಹೋಲಿಸುವುದೇ ಹಾಸ್ಯಾಸ್ಪದ. ಎರಡರ ಉದ್ದಿಶ್ಯವೂ ಬೇರೆ. ‘ಪ್ರೈಮ್ ಟೈಮ್’ ಎಂದು ಕರೆಯಲ್ಪಡುವ ರಾತ್ರಿ ಎಂಟರ ಸಮಯವನ್ನು ಬಿಟ್ಟು ಅಮೀರ್ ಖಾನ್ ಭಾನುವಾರ ಬೆಳಿಗ್ಗೆ ಹನ್ನೊಂದರ ಸಮಯವನ್ಯಾಕೆ ಆರಿಸಿದ ಎಂಬುದನ್ನೂ ಗಮನಿಸಬೇಕಲ್ಲವೇ? ಹಣ ಮಾಡುವುದಷ್ಟೇ ಉದ್ದೇಶವಾಗಿದ್ದರೆ ಈ ‘ಮೂರ್ಖ’ ಕೆಲಸವನ್ಯಾಕೆ ಮಾಡಬೇಕಿತ್ತವನು?
29
ಮೇ

ಸುಂದರ್ ರಾಜ್ ನೆನಪಿಸಿಕೊಂಡಂತೆ ಅಂಬರೀಷ್ !

– ಶ್ರೀಧರ್ ಜಿ ಸಿ ಬನವಾಸಿ

ಅಂಬರೀಷ್ ಜೊತೆಗಿನ ನನ್ನ ಸ್ನೇಹವನ್ನು ಈ ಮೂಲಕ ವರ್ಣಿಸೋದು ತುಂಬಾ ಕಷ್ಟ. ಅಂಬರೀಷ್ ಜೊತೆಗಿನ ನನ್ನ ಒಡನಾಟ, ಸ್ನೇಹ, ಓಡಾಟ, ಕೆಲಸಮಾಡಿದ್ದು ನನಗೆ ಬೆಟ್ಟದಷ್ಟು ಅಪಾರ ನೆನಪುಗಳು ನನ್ನ ಮನಸ್ಸಿನಲ್ಲಿವೆ. ಆತ ಹೀಗೆ ಅಂತ ಹೇಳೋದು ತುಂಬಾ ಕಷ್ಟ, ಆತನ ತರಹ ನೀವಾಗಬೇಕು ಅಂತಾನೂ ಹೇಳೋದು ತುಂಬಾ ಕಷ್ಟ. ಅಂಬರೀಷನಿಗೆ ಅಂಬರೀಷನೇ ಸಾಟಿ. ಅಂಬರೀಷ್  ಯಾಕೆ ಇಷ್ಟವಾಗ್ತಾರೆ ಅಂತ ಅವರನ್ನ ಇಷ್ಟಪಡೋ ಎಲ್ಲರನ್ನು ಕೇಳಿ ಒಬ್ಬೋಬ್ಬರು ಆತನನ್ನು ಒಂದೊಂದು ರೀತಿಯಲ್ಲಿ ವರ್ಣಿಸುತ್ತಾರೆ. ಹಾಗಾಗಿ ಅಂಬರೀಷ್ ಇಷ್ಟವಾಗಲು ಬಹಳಷ್ಟು ಕಾರಣಗಳಿವೆ. ಕನ್ನಡಚಿತ್ರರಂಗವೇಕೇ, ರಾಜಕೀಯ, ಬೇರೆ ಚಿತ್ರರಂಗ, ರಾಜ್ಯ ರಾಜಕೀಯ, ದೆಹಲಿ ರಾಜಕೀಯದ ವ್ಯಕ್ತಿಗಳು ಕೂಡ ಆತನನ್ನು ಇಷ್ಟಪಡುತ್ತಾರೆ. ಆತನ ವ್ಯಕ್ತಿತ್ವೇ ಅಂತಹದ್ದು. ಅಜಾತಶತ್ರು, ಹುಂಬತನ, ಎದೆಗಾರಿಕೆ, ಬೇರೆಯವರಿಗೆ ಮರುಗುವ ಮನಸ್ಸು ಆತನ ಗುಣಗಾನ ಮಾಡುವುದು ನಿಜವಾಗಿಯೂ ಕಷ್ಟ ಸಾಧ್ಯ. ಇಂತಹ ಅಂಬರೀಷ್ ನನ್ನ ಆತ್ಮೀಯ ಸ್ನೇಹಿತ ಅನ್ನುವುದೇ ನನ್ನ ಹೆಮ್ಮೆಗೆ ಕಾರಣ.

ಅಂಬಿ ‘ನಾನೊಬ್ಬ ಅದ್ಭುತ ನಟ’ ಅಂತ ಎಲ್ಲೂ, ಯಾರ ಹತ್ತಿರವೂ ಹೇಳಿಕೊಂಡವರಲ್ಲ. ಆದರೆ, ವ್ಯಕ್ತಿಯಾಗಿ, ಸಮಾಜದ ಶಕ್ತಿಯಾಗಿ, ಉತ್ತಮ ಮನುಷ್ಯನಾಗಿ ಅಂಬಿಗೆ ಅಂಬಿಯೇ ಸಾಟಿ. ಇಂಥ ವೈವಿಧ್ಯತೆಯ ಮನುಷ್ಯನನ್ನು ಎಲ್ಲಿ ಹುಡುಕಿದರೂ ಸಿಕ್ಕುವುದಿಲ್ಲ. ಆ ದಿನಗಳಲ್ಲಿ ನನಗೆ ಅಂಬಿ ಕಂಡರೆ  ಸಣ್ಣ ಒಳ್ಳೆಯ ಹೊಟ್ಟೆಕಿಚ್ಚಂತೂ ಇತ್ತು, ಏನಪ್ಪಾ ಈ ಮನುಷ್ಯ ಪುಟ್ಟಣ್ಣನಂತಹ ನಿರ್ದೇಶಕರ ಮನಸ್ಸನ ಹೇಗಂಪಾ ಗೆದ್ದು ಬಿಟ್ಟಿದ್ದಾನೆ. ನಾವೇನೋ ಬಾಲಚಂದರ್ ಸಿನಿಮಾಗಳಲ್ಲಿ  ಗುರುತಿಸಿಕೊಂಡುಬಿಟ್ಟಿದ್ವಿ. ಆದರೆ ಪುಟ್ಟಣ್ಣರ ಸಿನಿಮಾಗಳಲ್ಲಿ ನಮಗೆ ಅವಕಾಶ ಸಿಕ್ಕಿರಲಿಲ್ಲ. ಈತನ್ನ ನೋಡಿದ್ರೆ ಪುಟ್ಟಣ್ಣನವರ ಹೆಚ್ಚಿನ ಸಿನಿಮಾಗಳಲ್ಲಿ ಚಾನ್ಸ್ ತಗೋತಾ ಇದಾನೆ. ಪುಟ್ಟಣ್ಣ ಕಣಗಾಲ್ ಗುರುಕೃಪೆಗೆ ಹೆಚ್ಚು ಒಳಗಾದ ನಟ ಅಂಬರೀಶ್ನನ್ನು ಕಂಡಾಗ ಈ ರೀತಿಯ ಅವ್ಯಕ್ತ ಅಸೂಹೆಯ ಪ್ರೀತಿ ಆತನ ಮೇಲಿತ್ತು. ಆದರೆ ಅಂಬರೀಷ್ ತನ್ನ ನಿಷ್ಕಲ್ಮಶ ಪ್ರೀತಿಯಿಂದ ನನ್ನನ್ನು ಗೆದ್ದುಬಿಟ್ಟಿದ್ದ.

ಮತ್ತಷ್ಟು ಓದು »

8
ಮೇ

ಡಬ್ಬಿಂಗ್ ಅವಶ್ಯಕವೇ?

 ಡಾ ಅಶೋಕ್. ಕೆ. ಆರ್.

ಡಬ್ಬಿಂಗ್ ವಿವಾದ ಮತ್ತೆ ಗರಿಗೆದರಿದೆ. ಕಳೆದ ಹಲವಾರು ತಿಂಗಳುಗಳಿಂದ ‘ಏನ್ ಗುರು’ವಿನಂಥ ಬ್ಲಾಗುಗಳಲ್ಲಿ, ಫೇಸ್ ಬುಕ್ ನಂಥ ಸಾಮಾಜಿಕ ತಾಣಗಳಿಗೆ ಸೀಮಿತವಾಗಿದ್ದ ಈ ಚರ್ಚೆ ಅಮೀರ್ ಖಾನನ ‘ಸತ್ಯಮೇವ ಜಯತೆ’ಯ ಕನ್ನಡದವತರಣಿಕೆಯ ತಯಾರಿಕೆಯ ಹಿನ್ನೆಲೆಯಲ್ಲಿ ಮುಖ್ಯವಾಹಿನಿಗಳಲ್ಲೂ ಚರ್ಚೆಗೊಳಪಡುತ್ತಿದೆ. ‘ಸತ್ಯಮೇವ ಜಯತೆ’ಯನ್ನು ಕನ್ನಡದಲ್ಲಿ ಪ್ರಸರಿಸಲು ಮುಂದಾಗಿದ್ದ ಸುವರ್ಣ ವಾಹಿನಿಯು ಚಿತ್ರೋದ್ಯಮದ ‘ಬೆದರಿಕೆ’ ಭರಿತ ವಿರೋಧದ ಹಿನ್ನೆಲೆಯಲ್ಲಿ ಪ್ರಸಾರದಿಂದ ಹಿಂದೆ ಸರಿದಿದೆ. ‘ಪ್ರಾಣ ಹೋದರೂ ಸರಿಯೇ ಡಬ್ಬಿಂಗಿಗೆ ಅವಕಾಶ ಕೊಡುವುದಿಲ್ಲ. ಅಪ್ಪಾಜಿಯ ಮೇಲಾಣೆ’ ಎಂದು ಶಿವರಾಜ್ ಕುಮಾರ್ ಆರ್ಭಟಿಸಿದ್ದಾರೆ. ಪ್ರಜಾವಾಣಿ ಶನಿವಾರದ ಪುಟವೊಂದನ್ನು ಡಬ್ಬಿಂಗಿನ ಚರ್ಚೆಗೆ ಮೀಸಲಿರಿಸಿದರೆ ಸುವರ್ಣ ವಾರ್ತಾ ವಾಹಿನಿಯು ನಾಗತಿಹಳ್ಳಿ ಚಂದ್ರಶೇಖರ್, ಶ್ರೀನಿವಾಸಮೂರ್ತಿ, ಮದನ್ ಪಟೇಲ್ ಮತ್ತು ಬನವಾಸಿ ಬಳಗದ ಆನಂದ್ ರನ್ನು ಕರೆಸಿ ಜುಗಲ್ ಬಂದಿ ನಡೆಸಿದ್ದಾರೆ.
ಡಬ್ಬಿಂಗ್ ಪರವಾಗಿರುವವರು ವಾದಿಸುವುದೆಂದರೆ ‘ ನಾವು ಗ್ರಾಹಕರು. ಏನು ಪಡೆಯಬೇಕು ಎಂಬುದನ್ನು ನಾವು ನಿರ್ಧರಿಸಬೇಕೆ ಹೊರತು ಚಿತ್ರರಂಗದ ಕೆಲವರಲ್ಲ. ಇತರೆ ರಾಜ್ಯದವರು ತಮ್ಮ ತಮ್ಮ ಮಾತೃಭಾಷೆಯಲ್ಲೇ ಕಾರ್ಟೂನ್, ಡಿಸ್ಕವರಿ, ಪೋಗೋದಂಥಹ ವಾಹಿನಿಗಳನ್ನು, ಆಂಗ್ಲ ಸಿನಿಮಾಗಳನ್ನು ನೋಡುತ್ತಿರುವಾಗ ನಾವ್ಯಾಕೆ ಪರಭಾಷೆಯಲ್ಲೇ ಅವುಗಳನ್ನು ವೀಕ್ಷಿಸಬೇಕು? ಕನ್ನಡಿಗನಾಗಿ ಹುಟ್ಟಿದ್ದಕ್ಕೆ ಕನ್ನಡದಲ್ಲಿ ಚಿತ್ರ – ವಾಹಿನಿಗಳನ್ನು ವೀಕ್ಷಿಸುವ ಸೌಲಭ್ಯದಿಂದ ವಂಚಿತನಾಗಬೇಕೇಕೆ? ಅರ್ಥವಾಗದ ಭಾಷೆಯ ಸಿನಿಮಾಗಳನ್ನು ನೋಡಿ ಅರ್ದಂಬರ್ಧ ತಿಳಿದುಕೊಳ್ಳುವ ಬದಲು ಡಬ್ಬಿಂಗ್ ಮಾಡಿದರೆ ನನ್ನ ಭಾಷೆಯಲ್ಲೇ ನೋಡಿ ಆನಂದಿಸಿ ಸಂಪೂರ್ಣ ಅರಿತುಕೊಳ್ಳುವುದು ಒಳ್ಳೆಯದಲ್ಲವೇ? ತಮಿಳಿನಲ್ಲೇ ಪೋಗೋ ವೀಕ್ಷಿಸುವ ಹುಡುಗನಿಗೆ ತನ್ನ ಭಾಷೆಯ ಬಗ್ಗೆ ಪ್ರೀತಿ ಬೆಳೆಯುತ್ತದೆಯೇ ಹೊರತು ಅದೇ ಕಾರ್ಯಕ್ರಮಗಳನ್ನು ಇಂಗ್ಲೀಷಿನಲ್ಲಿ ನೋಡುವ ನಮ್ಮ ಮಕ್ಕಳಿಗೆ ಕನ್ನಡದ ಬಗ್ಗೆ ಪ್ರೀತಿ ಬೆಳೆಯಲು ಹೇಗೆ ಸಾಧ್ಯ? ನಮ್ಮ ಹಕ್ಕನ್ನು ಕಸಿದುಕೊಂಡಿರುವ ಚಿತ್ರೋದ್ಯಮದ ಈ ನೀತಿ ಸಂವಿಧಾನಬಾಹಿರ’
ಇನ್ನು ಡಬ್ಬಿಂಗ್ ವಿರೋಧಿಸುವವರು ಮುಂದಿಡುವ ವಾದವೆಂದರೆ ‘ಡಬ್ಬಿಂಗ್ ವಿರೋಧಿ ಚಳುವಳಿಗೆ ದಶಕಗಳ ಇತಿಹಾಸವಿದೆ. ಅನಕೃರಂಥ ಹಿರಿಯ ಲೇಖಕರು ಆರಂಭಿಸಿದ ಈ ಚಳುವಳಿ ರಾಜ್ ಕುಮಾರ್ ರಂಥ ಮೇರು ನಟರ ನೇತೃತ್ವದಲ್ಲಿ ಮುಂದುವರಿದು ಕನ್ನಡ ಚಿತ್ರೋದ್ಯಮದ ಉಳಿವಿನ ದೃಷ್ಟಿಯಿಂದ ಡಬ್ಬಿಂಗ್ ನಿಷೇಧಿಸಲಾಗಿದೆ. ಈ ನಿಷೇಧ ತೆರವುಗೊಳಿಸಿದರೆ ಹೆಚ್ಚು ಬಂಡವಾಳದ ಪರಭಾಷಾ ಚಿತ್ರಗಳು ಕನ್ನಡಕ್ಕೆ ಡಬ್ ಆಗಿ ಕನ್ನಡ ಚಿತ್ರಗಳ ಮಾರುಕಟ್ಟೆಯನ್ನು ಕಿತ್ತುಕೊಳ್ಳುತ್ತದೆ. ಚಿತ್ರೋದ್ಯಮವನ್ನೇ ಅವಲಂಬಿಸಿದ ಜನರ ಹೊಟ್ಟೆಪಾಡಿಗೆ ಚ್ಯುತಿಯುಂಟಾಗುತ್ತದೆ. ಮೇಲಾಗಿ ಪರಸಂಸ್ಕೃತಿ ಬಿಂಬಿಸುವ ಚಿತ್ರಗಳು ಎಂದಿಗೂ ನಮ್ಮವಲಾಗಲಾರವು ಮತ್ತು ನಮ್ಮ ಕನ್ನಡ ಸಂಸ್ಕೃತಿಯನ್ನು ಅವನತಿಗೆ ದೂಡುತ್ತದೆ’ ಮತ್ತಷ್ಟು ಓದು »
28
ಏಪ್ರಿಲ್

ಡಬ್ಬಿಂಗ್ ಎಂಬ ರುಚಿಗೆಟ್ಟ ದಿಢೀರ್ ಅಡುಗೆ ಏಕೆ?

– ರೂಪ ರಾವ್

ಇತ್ತೀಚಿಗೆ ಡಬ್ಬಿಂಗ್ ಬೇಕು ಬೇಡ ಅನ್ನುವ ಹುಯಿಲು ಮತ್ತೆ ಕಾಣ್ತಿದೆ. ರಾಕೇಶ್ ಶೆಟ್ಟಿಯವರ ಲೇಖನ ಓದಿದ ಮೇಲೆ ಇದರ ಬಗ್ಗೆ ನನ್ನದೊಂದಿಷ್ಟು ಅನಿಸಿಕೆ.

ಸ್ವಾಮಿ ಡಬ್ಬಿಂಗ್ ಬೇಡ ಅನ್ನೋದು ಹಳೆಯ ರಾಗವಿರಬಹುದು. ಆದರೆ ಕಾರಣ ಮಾತ್ರ ನಿಚ್ಚಳ… ಅದು ಕನ್ನಡದ ಕಲಾವಿದರಿಗೆ ಆಗೋ ಅನ್ಯಾಯ ಅಷ್ಟೆ. ಅದು ಯಾವತ್ತಿಗೂ ಸಲ್ಲುವ ಕಾರಣ. ಚಿತ್ರರಂಗವನ್ನೇ ನಂಬಿಕೊಂಡು ನಿಂತ ಅಸಂಖ್ಯಾತ ಕಲಾವಿದರಿಗೆ. ನಾಯಕ ,ನಾಯಕಿ ಪಾತ್ರದಿಂದ ಹಿಡಿದು ಪೋಷಕ ಪಾತ್ರಧಾರಿಗಳು, ಛಾಯಾಗ್ರಾಹಕರು, ನಿರ್ದೇಶಕರು,ನೂರಾರು ಜನ ನೇರವಾಗಿ ಇಲ್ಲವೇ ಪರೋಕ್ಷವಾಗಿ ಒಂದು ಚಿತ್ರದ  ಮೇಲೆ ಅವಲಂಬಿತರಾಗಿರುತ್ತಾರೆ.. ಅಷ್ಟೂ ಜನರ ಹೊಟ್ಟೆಯ ಮೇಲೆ ಹೊಡೆಯುವ ಹುನ್ನಾರವಿದು.

ರಿಮೇಕ್ ಚಿತ್ರಗಳ ಆರ್ಭಟಕ್ಕೆ ನಿರ್ದೇಶಕರ ಸೃಜನಾತ್ಮಕತೆ ಈಗಾಗಲೇ ಕಡಿಮೆಯಾಗಿದೆ.ಒಂದು ವೇಳೆ ಡಬ್ಬಿಂಗ್ ನಿಷೇಧ ತೆರವು ಗೊಳಿಸಿದರೆ,ಕನ್ನಡದಲ್ಲಿ ನಿರ್ದೇಶಕ, ಕತೆಗಾರ, ಸತ್ತಂತೆ…..! ಉಪೇಂದ್ರ, ಸೂರಿ, ಶಶಾಂಕ್, ಚಂದ್ರು,ಯೋಗರಾಜ್ ಭಟ್ ರವರಂತೆ ಆಗಬೇಕೆನ್ನುವ ಯುವ ನಿರ್ದೇಶಕರ ಗತಿ ?

ಮತ್ತೆ ಯಾವುದೋ ಪ್ರಾದೇಶಿಕತೆಗೆ ಹೊಂದುವ ಅಲ್ಲಿನ ವಾತಾವರಣಕ್ಕೆ ನಿರ್ಮಿಸಲಾಗಿರುವ ಚಿತ್ರವೊಂದನ್ನ ಹಾಗೆಯೇ ಡಬ್ಬಿಂಗ್ ಮಾಡಿದಲ್ಲಿ ಅದನ್ನು ಕೂತು ನೋಡುವ ಕರ್ಮ ನಮ್ಮದಾಗುತ್ತದೆ.ಪಾತ್ರದ ತುಟಿಯ ಚಲನೆ ಒಂದಾದರೆ. ಹಿನ್ನಲೆ ದ್ವನಿಯ  ಮಾತು ಒಂದಾಗಿರುತ್ತದೆ. ಅದಕ್ಕೂ ಇದಕ್ಕೂ  ಜೋಡಿಸಿ ನೋಡುವ ದರ್ದು ನಮಗೆ ಬೇಕಾ?
ಮತ್ತಷ್ಟು ಓದು »

27
ಏಪ್ರಿಲ್

’ಸತ್ಯ ಮೇವ ಜಯತೇ’ ಅನ್ನಲು ಕನ್ನಡಿಗರು ಅಪ್ಪಣೆ ಪಡೆಯಬೇಕಾ?

– ರಾಕೇಶ್ ಶೆಟ್ಟಿ

ಕಳೆದ ವರ್ಷ ‘ಕನ್ನಡ ಚಲನ ಚಿತ್ರ ಅಕಾಡೆಮಿ’ಯು ಬಿಡುಗಡೆ ಮಾಡಿದ್ದ ವರದಿ ಡಬ್ಬಿಂಗ್ ಪರವಾಗಿತ್ತು.ಆ ವರದಿ ಬಿಡುಗಡೆಯಾದ ತಕ್ಷಣ ಚಿತ್ರರಂಗದ ಬಹುತೇಕ ಮಂದಿ ನಾಗಾಭರಣರ ಮೇಲೆ ಮುಗಿಬಿದ್ದರು.ಕಡೆಗೆ ಅವ್ರು ವರದಿಯನ್ನ ಹಿಂಪಡೆದರು.ಇಲ್ಲಿ ನಷ್ಟ ಆಗಿದ್ದು ಯಾರಿಗೆ? ಕನ್ನಡ ಚಿತ್ರ ರಂಗಕ್ಕಾ? ಅಲ್ಲ … ಕನ್ನಡ ಪ್ರೇಕ್ಷಕನಿಗೆ.

ಇಷ್ಟಕ್ಕೂ, ಡಬ್ಬಿಂಗ್ ಬೇಕೋ ಬೇಡವೋ ಅಂತ ನಿರ್ಧರಿಸಬೇಕಾದವನು “ಕನ್ನಡ ಪ್ರೇಕ್ಷಕನೋ?” ಇಲ್ಲ “ಕನ್ನಡ ಚಿತ್ರ ರಂಗವೋ?”

ಡಬ್ಬಿಂಗ್ ಯಾಕೆ ಬೇಡ ಅಂದ್ರೆ, ಅದರಿಂದ ಕನ್ನಡದ ಮಕ್ಕಳಿಗೆ ಕೆಲಸವಿರೋದಿಲ್ಲ ಅಂತ ಹಳೆ ಕತೆ ಹೇಳ್ತಾ ಇದ್ದಾರೆ.ಈಗ ಬರ್ತಾ ಇರೋ ಅದಿನ್ನೆಷ್ಟು ಚಿತ್ರಗಳಲ್ಲಿ ಕನ್ನಡದ ಕಲಾವಿದರು,ತಂತ್ರಜ್ಞರು,ನಟಿಯರು,ಪೋಷಕ ನಟರು,ಖಳನಟರು,ಸಂಗೀತ ನಿರ್ದೇಶಕರು,ಗಾಯಕ-ಗಾಯಕಿಯರಿಗೆ ಕೆಲ್ಸ ಇದೆ?,ಎಲ್ಲದಕ್ಕೂ ಬೇರೆ ಭಾಷೆಯವರೇ ಬೇಕು.ಆಗ ಮಾತ್ರ ಯಾರು ಕನ್ನಡ ಮಕ್ಕಳಿಗೆ ಅನ್ಯಾಯವಾಗ್ತಾ ಇದೆ ಅಂತ ಉಸಿರೆತ್ತುವುದಿಲ್ಲ. ಭಾಷೆಯ ಉಚ್ಚಾರಣೆ ಬರದೆ ಇದ್ರೂ ನಮಗೆ ಬಾಲಿವುಡ್ ಗಾಯಕರು ಬಂದು ಉಸಿರು ಕಟ್ಟಿ ಹಾಡ್ಬೇಕು,ಬಾಯಿ ಅಲ್ಲಾಡಿಸಲು ಬರದ ಖಳ ನಟರು ಅಲ್ಲಿಂದಲೇ ಬರಬೇಕು.ಒಟ್ಟಿನಲ್ಲಿ ಬೇರೆ ಕಡೆಯಿಂದ ಜನ ಆಮದಾದಷ್ಟು ಚಿತ್ರ ಅದ್ದೂರಿ ಅನ್ನೋ ಭ್ರಮೆ! ಈಗಲೂ ಕನ್ನಡದ ಮಕ್ಕಳಿಗೆ ಆಗುತ್ತಿರುವುದು ಅನ್ಯಾಯವೇ ಅಲ್ಲವೆ?

ಇಷ್ಟಕ್ಕೂ ಡಬ್ಬಿಂಗ್ಗೆ ಅವಕಾಶ ಕೊಟ್ರೆ ಎಲ್ರೂ ಅದೇ ಮಾಡ್ತಾರೆ ಅನ್ನೋ ಅತಂಕವಿದ್ದರೆ,ಅದಕ್ಕಾಗಿ ಕೆಲ ನೀತಿ ನಿಯಮಗಳನ್ನ ಮಾಡಿಕೊಳ್ಳಬಹುದು. ಡಬ್ಬಿಂಗ್ ಮಾಡುವ ಹಕ್ಕನ್ನ ಮುಕ್ತವಾಗಿಡದೆ ‘ವಾಣಿಜ್ಯ ಮಂಡಳಿ’ ಯೇ ಆಯ್ದ ಚಿತ್ರಗಳನ್ನ ಡಬ್ಬಿಂಗ್ ಮಾಡಿ ಬಿಡುಗಡೆ ಮಾಡಬಹುದು.ಹಾಗೆ ಡಬ್ಬಿಂಗ್ ಮಾಡಿದ ಸಿನೆಮಾಗಳಲ್ಲಿ ನಮ್ಮ ನೇಟಿವಿಟಿ ಇಲ್ಲ ಅಂದ್ರೆ ಅವು ಗೆಲ್ಲೋದು ಅಷ್ಟರಲ್ಲೇ ಇದೆ,ಅದರಿಂದ ಯಾವ ಅಪಾಯವು ಇಲ್ಲ. ವಿಷಯ ಹೀಗಿರುವಾಗ ಇನ್ನು ಆಗಿನ ಕಾಲದ ಕತೆಯನ್ನೇ ಹೇಳಿ ಕನ್ನಡ ಪ್ರೇಕ್ಷಕರಿಗೆ ಒಳ್ಳೊಳ್ಳೆ ಚಿತ್ರವನ್ನ ನಮ್ಮ ಭಾಷೆಯಲ್ಲಿ ನೋಡದಂತೆ ಚಿತ್ರ ರಂಗದ ಕೆಲವರು ಯಾಕೆ ಮಾಡುತಿದ್ದಾರೆ!?, ಹಾಗೆ ಡಬ್ಬಿಂಗ್ನಿಂದ ಮುಳುಗಿ ಹೋಗುವಷ್ಟು ‘ಕನ್ನಡ ಚಿತ್ರ ರಂಗ’ ದುರ್ಬಲವಾಗಿಲ್ಲ.೭೫ ವರ್ಷದ ಇತಿಹಾಸವಿರುವ ಚಿತ್ರ ರಂಗದ ಮಾರುಕಟ್ಟೆ ವ್ಯಾಪ್ತಿ ಚಿಕ್ಕದು ಅಂತ ಇನ್ನ ಎಷ್ಟು ದಿನ ಹೆದರ್ತಿರ ಸ್ವಾಮೀ?

ಮತ್ತಷ್ಟು ಓದು »

31
ಮಾರ್ಚ್

ಶಿಕಾರಿ ಮಿಸ್ ಆಯ್ತು..!

– ಶ್ರೀಧರ್ ಜಿ.ಸಿ ಬನವಾಸಿ

ಕನ್ನಡದಲ್ಲಿ ಮೊಟ್ಟಮೊದಲ ಬಾರಿಗೆ ಸಂಪೂರ್ಣನಾಯಕನಾಗಿ ಅಭಿನಯಿಸಿದ ಮಲಯಾಳಂ ಸೂಪರ್ ಸ್ಟಾರ್ ಮುಮ್ಮುಟ್ಟಿ ಅಭಿನಯದ `ಶಿಕಾರಿ’ ಬಿಡುಗಡೆಯ ಭಾಗ್ಯವನ್ನು ಕಂಡಿದೆ. ಪ್ರಶಸ್ತಿ ಪುರಸ್ಕೃತ
`ಗುಬ್ಬಚ್ಚಿಗಳು’ಸಿನಿಮಾ ಖ್ಯಾತಿಯ ಅಭಯಸಿಂಹ ನಿರ್ದೇಶಕರು. ಚಿತ್ರ ನೋಡಿಬಂದ ಮೇಲೆ ನನಗೆ ಚಿತ್ರದ ಬಗ್ಗೆ ನನಗನಿಸಿದ ಅಂಶಗಳು:
ಇಡೀ ಚಿತ್ರಕ್ಕೆ ಮುಮ್ಮಟ್ಟಿ ಬೇಕಿತ್ತೋ, ಅಥವಾ ಇಲ್ಲವೋ ಅಂತ ನಾವು ತರ್ಕ ಹಾಕಿ ನೋಡಿದಾಗ ಮುಮ್ಟಟ್ಟಿ ಬದಲು ನಮ್ಮ ಕನ್ನಡದಲ್ಲಿಯ ಯಾವುದಾದರೂ ಹೀರೋಗಳನ್ನು ಬಳಸಿಕೊಳ್ಳಬಹುದಿತ್ತು ಎಂಬುದನ್ನು  ಒಂದೇ ಮಾತಿನಲ್ಲಿ ಹೇಳಬಹುದು. ಇಲ್ಲವೇ ಕನ್ನಡದಲ್ಲಿರುವ ದೇವರಾಜ್ ರಂತಹ ಜನಪ್ರಿಯ ಗಡಸು ದನಿಯ ಕಲಾವಿದರು ಮುಮ್ಮುಟ್ಟಿ ಪಾತ್ರಕ್ಕೆ ದನಿ ನೀಡಬಹುದಿತ್ತು. ಚಿತ್ರದಲ್ಲಿ ಅದು ಆಗಲಿಲ್ಲ. ಅದಕ್ಕೆ ಕಾರಣ ಕೂಡ ಸ್ಟಷ್ಟವಾಗಿದೆ, ಮುಮ್ಮಟ್ಟಿ ಕನ್ನಡದಲ್ಲಿ ಮಾತನಾಡಲು ರಿಸ್ಕು ತೆಗೆದುಕೊಂಡಿದ್ದು, ಕೊನೆಪಕ್ಷ ಮಾತನಾಡಿಸಿದ್ದರೂ, ಡಬ್ಬಿಂಗ್ನಲ್ಲಿ ನಿರ್ದೇಶಕರು ಸ್ವಲ್ಪ ಹುಷಾರಾಗಿರಬೇಕಿತ್ತು.ಮುಮ್ಮಟ್ಟಿ ಕನ್ನಡ ಮಾತನಾಡುತ್ತಿದ್ದಾರೋ, ಮಲಯಾಳಂ ಮಾತನಾಡುತ್ತಿದ್ದಾರೋ ಎಂಬುದು ಅರ್ಥವಾಗುವುದೇ ಇಲ್ಲ. ಏಷ್ಟೋ ಸೀನ್ಗಳಲ್ಲಿ ಅವರು ಶಬ್ಗಗಳನ್ನು ನುಂಗಿ ಮಾತನಾಡುತ್ತಾರೆ. ಅವರು ಏನು ಹೇಳಿದರು ಅನ್ನುವುದೇ ಅರ್ಥವಾಗುವುದೇ ಇಲ್ಲ.  ಮುಮ್ಮಟ್ಟಿ ಮಾತನಾಡಿದ ಕನ್ನಡ,ನಮ್ಮ ಕನ್ನಡದವರಿಗೆ ಅರ್ಥವಾಗುವುದು ತುಂಬಾ ಕಷ್ಟ.  ಅದೇನಿದ್ದರೂ ಮಲಯಾಳಂ ಶೈಲಿಯಲ್ಲಿ ಕನ್ನಡ ಮಾತನಾಡುವ ಮಲ್ಲುಗಳಿಗೆ ಮಾತ್ರ ಅರ್ಥವಾದೀತು. ಹೆಚ್ಚಿನವರಿಗೆ ಇದು ಇಷ್ಟವಾಗಲೂಬಹುದು.
27
ಮಾರ್ಚ್

ಕನ್ನಡಮ್ಮನ ಹೆಮ್ಮೆಯ ಪುತ್ರನೂ ಅಣ್ಣಾವರ ಮಗನೂ

– ಜಿ.ವಿ ಜಯಶ್ರೀ

ಬಾನ ದಾರಿಯಲ್ಲಿ ಸೂರ್ಯ ಜಾರಿ ಹೋದ ಚಂದ್ರ ಮೇಲೆ ಬಂದ
ಮಿನುಗು ತಾರೆ ಅಂದ ನೋಡು ಎಂಥ ಚಂದ
ರಾತ್ರಿ ಆಯ್ತು ಮಲಗು ನನ್ನ ಪುಟ್ಟ ಕಂದ,

ಇದು ಎಂಬತ್ತರ ದಶಕದ ಹಾಡು. ತುಂಬಾ ಇಷ್ಟ ಪಟ್ಟು ಈಗಲೋ ಕೇಳುವಂತಹ ಸುಂದರ ಗೀತೆ.ಈ ಚಿತ್ರದಲ್ಲಿ ನಟಿಸಿದ ಪುನೀತ್ ರಾಜ್ ಕುಮಾರ್ ನಟನೆಯಷ್ಟೇ ಮನಸೆಳೆದ ಸಂಗತಿ ಅಂದ್ರೆ ಅವರು ಹಾಡಿದ ಈ ಹಾಡು .
ಮೊದಲಿನಿಂದ ವೀಕ್ಷಕ ದೇವರ ಮನ ಸೆಳೆದ ಕಲಾವಿದ ಪುನೀತ್. ಅವರ ಅಣ್ಣಂದಿರಾದ ಶಿವರಾಜ್ ಕುಮಾರ್, ರಾಘವೇಂದ್ರ ರಾಜ್ ಕುಮಾರ್ ಖುದ್ದು ಪುನೀತ್ ವಿಷಯದಲ್ಲಿ ತೋರುವ ಅಭಿಮಾನ ಅಪಾರ.

ಈತನ ಬಗ್ಗೆ ತಮಗೆ ತುಂಬಾ ಹೆಮ್ಮೆ ಇದೆ. ಅಪ್ಪಾಜಿಯ ನಂತರ ಬಣ್ಣ ಹಚ್ಚಿದ (ಪೂರ್ಣಿಮಾ ಸಹ ಹಚ್ಚಿದ್ದಾರೆ ) ಪುನೀತ್ ತಮಗೆ ಮಾದರಿ ಎನ್ನುವ ಮಾತು ಹೇಳಿರುವುದು ಅವರು ತಮ್ಮನ ಮೇಲೆ ಇಟ್ಟಿರುವ ಪ್ರೀತಿಯನ್ನು ಎತ್ತಿ ತೋರುತ್ತದೆ.

ಶಿವಣ್ಣ ಜೀ ಕನ್ನಡ ವಾಹಿನಿಯಲ್ಲಿ ಕಾರ್ಯಕ್ರಮ ನಡೆಸಿ ಕೊಟ್ಟಾಗ ಅಪಾರ ಸಂಖ್ಯೆಯ ವೀಕ್ಷಾಕಾಭಿಮಾನ ಹೊಂದಿದ್ದರು.ಆ ಕಾರ್ಯಕ್ರಮದ ಮೂಲಕ  ಹೆಚ್ಚು ಗೊತ್ತಾದರೂ ಶಿವಣ್ಣ. ಕಾರಣ ಇಷ್ಟೇ ಸಿನಿಮಾದಲ್ಲಿ ಗಿಣಿಗೆ ಕಲಿಸಿದ ಪಾಠದಂತೆ   ಡೈಲಾಗ್ ಹೇಳುವ ಶಿವಣ್ಣನಿಗಿಂತ  ತನ್ನ ಹೃದಯದಿಂದ ಮಾತನಾಡಿದ ಶಿವಣ್ಣ ಇಷ್ಟ ಆಗಿತ್ತು.. ಮಾತಲ್ಲಿ ಯಾವುದೇ ರೀತಿಯ ನಾಟಕೀಯತೆ, ಕಲಿತ ಮಾತು ಇರದೇ ಸಾಮಾನ್ಯ ಮನೆಕನ್ನಡ ಮಾತಾಡಿ , ತಮ್ಮ ಸರಳತೆ, ವಿಶೇಷ ವ್ಯಕ್ತಿತ್ವ್ದದಿಂದ ಗೆದ್ದಿದ್ದರು.

ಮತ್ತಷ್ಟು ಓದು »