ನೋಡಿ ಸ್ವಾಮಿ .. ನಾವಿರೋದು ಹೀಗೆ.. !!
- ಸುಜಿತ್ ಕುಮಾರ್
ಮೊನ್ನೆ ಆ ದೃಶ್ಯಗಳನ್ನು ನೋಡಿ ಯಾಕೋ ನಮ್ಮ ಶಂಕರ್ ನಾಗ್ ನೆನಪಾದ್ರು. ಅದು ಶಂಕರ್ ನಾಗ್ ಅನ್ನೋದಕ್ಕಿಂತ ಶಂಕರ್ ನಾಗ್ ಅಭಿನಯದ ‘ನೋಡಿ ಸ್ವಾಮಿ ನಾವಿರೋದೇ ಹೀಗೆ’ ಚಿತ್ರದ ಟೈಟಲ್ ಹಾಡು ನೆನಪಾಯಿತು ಎನ್ನಬಹುದು. ನಗರದ ಗಲ್ಲಿಮೂಲೆಗಲ್ಲಿ ತನ್ನ MAT ಬೈಕಿನ ಮೇಲೆ ಕೂತು ಹಾಡುತ್ತಾ ಸಾಗುವ ಚಿತ್ರದ ದೃಶ್ಯದ ತುಣುಕು, ದಿನ ಬೆಳಗಾದರೆ ಬೆಳ್ಳನೆಯ ಬಟ್ಟೆಗಳನ್ನು ತೊಟ್ಟು ‘ನಾನೇ ಸಾಚಾ ಆತ ಮಾತ್ರ ನೀಚ’ ಎಂಬಂತೆ ಎಲ್ಲೆಂದರಲ್ಲಿ ಬೈಯುವ ಭಾಷಣಗಳನ್ನು ಮಾಡುತ್ತಾ ಓಟಿಗಾಗಿ ಊರೂರು ಸುತ್ತುತ್ತಾ ಕೊನೆಗೆ ಅಪ್ಪಿ ತಪ್ಪಿ ಆತನೇ ಎದುರಿಗೆ ಪ್ರತ್ಯಕ್ಷವಾದರೆ ‘ಹಿಂದಿ ಚೀನೀ ಬಾಯಿ ಬಾಯಿ’ ಎಂಬುವಂತೆ ತಬ್ಬಿಕೊಂಡು ಮುತ್ತಿಡುವುದೊಂದೇ ಬಾಕಿ ಏನೋ ಎಂಬ ಧಾಟಿಯಲ್ಲಿ ನಟಿಸುತ್ತಾ ನಿಲ್ಲುವ ರಾಜಕಾರಣಿಗಳನ್ನು ನೆನೆಪಿಸುತ್ತಿತ್ತು. ಅವರುಗಳ ಹಿಂದೆಯೇ ನಮ್ಮ ಶಂಕರ್ ಗುರು ‘ನೋಡಿ ಸ್ವಾಮಿ ಇವ್ರ್ ಇರೋದೇ ಹೀಗೆ’ ಎಂದು ಹಾಡಿದಂತೆ ಭಾಸವವಾಗುತ್ತಲಿತ್ತು. ನಿಂತ ನೆರಳಿಗೆ ಆಗದ ಮಾಜಿ ಸಿಎಮ್ ಗಳಿಬ್ಬರು ವೇದಿಕೆಯೊಂದರ ಮೇಲೆ ಕೈ ಕೈ ಕುಲುಕುತ್ತಾ ‘ಪಾಲಿಟಿಕ್ಸ್ ಅಪಾರ್ಟ್, ನಾವಿಬ್ಬರು ಅತ್ಯುತ್ತಮ ಸ್ನೇಹಿತರು’ ಎಂದಾಗ ನೆರೆದಿದ್ದ ನೂರಾರು ಅಭಿಮಾನಿಗಳು ತಲೆಯನ್ನು ಕೆರೆದುಕೊಳ್ಳುತ್ತಾ ಒಬ್ಬರನ್ನೊಬ್ಬರು ಮಿಕ ಮಿಕ ನೋಡತೊಡಗಿದಂತೂ ಸುಳ್ಳಲ್ಲ. ರಾಜ್ಯದ ಹಿರಿಯ ರಾಜಕಾರಣಿಗಳಾಗಿ ಅಂತವರ ಬಾಯಿಂದ ಇಂಥ ಹಿರಿಯ ಮಾತುಗಳು ಬರುವುದು ತಪ್ಪೇನಿಲ್ಲ. We Should Appreciate that. ಆದರೆ ಇಂದು ಹೀಗಂದು ನಾಳೆ ಮತ್ತದೇ ಮೈ ಮೈ.. ತು ತು .. ಎಂದು ಬೆಂಕಿಕಾರುವ ಮಾತುಗಳಾದರು ಏತಕ್ಕೆ ಸ್ವಾಮಿ? ಮಿಗಿಲಾಗಿ ಇಂತಹ ಪೊಳ್ಳು ಮಾತುಗಳ ಸರದಾರರಾಗಿ ಅವರುಗಳಿಗೇ ಇರದ ವೈರತ್ವವನ್ನು ಒಬ್ಬ ಕಾಮನ್ ಸಿಟಿಸನ್ ಆಗಿ ನಾವ್ಯಕ್ಕೆ ಕಟ್ಟಿಕೊಳ್ಳಬೇಕು ಹೇಳಿ? ಮತ್ತಷ್ಟು ಓದು
ಬದುಕುವ ಹಾದಿಯ ತೋರಿಸಿ ಹೋದ ಮಹಾನಾಯಕ
– ರಾಕೇಶ್ ಶೆಟ್ಟಿ
ಹಿಂದೊಮ್ಮೆ ಗೆಳೆಯರ ಜೊತೆಗೆ ರಾಜಕೀಯ ಮಾತನಾಡುವಾಗ,ನರೇಂದ್ರ ಮೋದಿಯವರ ನಂತರ ಆ ಜಾಗಕ್ಕೆ ಅವರಷ್ಟೇ ಸಮರ್ಥ ಹಾಗೂ ಅವರಂತಹದ್ದೇ ವ್ಯಕ್ತಿತ್ವವುಳ್ಳ ಮತ್ತೊಬ್ಬ ವ್ಯಕ್ತಿ ಬಿಜೆಪಿಯಲ್ಲಿದ್ದಾರೆಯೇ? ಎಂಬ ಪ್ರಶ್ನೆ ಬಂದಿತ್ತು. ಇದ್ದಾರೆ! ಆ ವ್ಯಕ್ತಿಯ ಹೆಸರು ಮನೋಹರ್ ಪರಿಕ್ಕರ್ ಎಂದಿದ್ದೆ. ಬೆಂಗಳೂರಿನಲ್ಲಿ ಸ್ವಾಮಿ ವಿವೇಕಾನಂದರ ೧೫೦ನೇ ಜಯಂತಿಗೆ ಮುಖ್ಯ ಅತಿಥಿಯಾಗಿ ಬಂದಿದ್ದಾಗ ಅವರನ್ನು ಹತ್ತಿರದಿಂದ ನೋಡುವ,ಒಡನಾಡುವ ಅವಕಾಶ ಸಿಕ್ಕಿತ್ತು. ಯಾವುದೇ ಹಮ್ಮುಬಿಮ್ಮಿಲ್ಲದ ಸರಳ ವ್ಯಕ್ತಿತ್ವ ಅವರದ್ದು.
ಪ್ರಧಾನಿ ಮೋದಿಯವರು, ಪರಿಕ್ಕರ್ ಅವರಿಗೆ ತಮ್ಮ ಸಂಪುಟದ ಅತಿ ಮಹತ್ವದ ರಕ್ಷಣಾ ಖಾತೆಯನ್ನು ನೀಡಿದ್ದರು. ಪರಿಕ್ಕರ್ ಅವರು ಒಲ್ಲದ ಮನಸ್ಸಿನಿಂದಲೇ ತಮ್ಮ ರಾಜಕೀಯ ಅಖಾಡ ಗೋವಾವನ್ನು ಬಿಟ್ಟು ದೆಹಲಿಗೆ ಬಂದಿದ್ದರು.ಒಳ್ಳೆಯ ಪ್ಯಾಕೇಜುಗಳು ಯಾವಾಗಲೂ ಲಿಮಿಟೆಡ್ ಎಡಿಷನ್ನಿನಲ್ಲಿ ಬರುತ್ತವಂತೆ. ಪರಿಕ್ಕರ್ ಅವರ ವಿಷಯದಲ್ಲಿ ಈ ಮಾತು ನಿಜವಾಗಿ ಹೋಯಿತು. ೬೩ ನಿಜಕ್ಕೂ ಸಾಯುವ ವಯಸ್ಸಲ್ಲ. ವರ್ಷದ ಹಿಂದೆ ಅವರಿಗೆ ಪ್ಯಾಂಕ್ರಿಯಾಸ್ ಕ್ಯಾನ್ಸರ್ ಇದೆ ಎಂದಾಗಲೇ ಸ್ವಚ್ಛ ಹಾಗೂ ದಕ್ಷ ರಾಜಕಾರಣದೆಡೆಗೆ ಆಸಕ್ತಿಯಿರುವವರ ಮನಸ್ಸುಗಳು ಮುದುಡಿ ಹೋಗಿತ್ತು. ಒಂದು ವರ್ಷ ಕ್ಯಾನ್ಸರಿನೊಂದಿದೆ ಬಡಿದಾಡುತ್ತಲೇ ಇದ್ದರೂ ತಮ್ಮ ಕರ್ತವ್ಯ ಪ್ರಜ್ಞೆಯನ್ನು ಅವರು ಮರೆಯಲೇ ಇಲ್ಲ.ತೀರಾ ಇತ್ತೀಚೆಗಷ್ಟೇ ತೀವ್ರ ಅನಾರೋಗ್ಯದ ನಡುವೆಯೇ ದೈನಂದಿನ ಕೆಲಸಗಳನ್ನು ನಿರ್ವಹಿಸಿದ್ದರು.ಸದನದಲ್ಲಿ ಬಜೆಟ್ ಕೂಡ ಮಂಡಿಸಿದ್ದರು ಪುಣ್ಯಾತ್ಮ.
ಪುಲ್ವಾಮ ದಾಳಿ: ಭಾರತ ಕಲಿತ ಪಾಠ
– ವರುಣ್ ಕುಮಾರ್
ಫೆಬ್ರವರಿ ೧೪ನೇ ತಾರೀಖು ಭಾರತದ ಸೈನಿಕರ ಪಾಲಿಗೆ ಅತ್ಯಂತ ಕರಾಳ ದಿನ. ಕಳೆದ ದಶಕದಲ್ಲಿಯೇ ನಡೆದ ಅತ್ಯಂತ ಘೋರ ಉಗ್ರರ ದಾಳಿ ಅಮಾಯಕ ಸೈನಿಕರ ಸಾವಿಗೆ ಕಾರಣವಾಗಿ ಇಡೀ ದೇಶವೇ ಮಮ್ಮಲ ಮರುಗಿತು. ಪ್ರಪಂಚದೆಲ್ಲೆಡೆಯಿಂದ ಈ ಘಟನೆಯ ಬಗ್ಗೆ ಖಂಡನೆ ವ್ಯಕ್ತವಾಗಿ ಭಾರತದ ಜೊತೆ ನಾವಿದ್ದೇವೆ ಎಂಬ ಸಂದೇಶವನ್ನು ರವಾನಿಸಿ ಬೆಂಬಲವನ್ನು ವ್ಯಕ್ತಪಡಿಸಿದರು. ಈ ದಾಳಿಯ ಬಳಿಕ ಭಾರತದಲ್ಲಿ ನಡೆದ ಬೆಳವಣಿಗೆಗಳ ಹಾಗೂ ಈ ದಾಳಿಯಿಂದ ಭಾರತ ಕಲಿಯಬೇಕಾದ ಪಾಠಗಳೇನು ಎಂಬುದಾಗಿ ವಿಶ್ಲೇಷಿಸೋಣ.
ಭಾರತದೊಳಗಿನ ಉಗ್ರರು:
ಹೌದಲ್ಲವೇ, ನಮಗೆ ಈ ಉಗ್ರರದಾಳಿಯ ಬಳಿಕ ಹಲವಾರು ಉಗ್ರರು ನಮ್ಮ ದೇಶದೊಳಗೆ ಅಣಬೆಗಳಂತೆ ಹುಟ್ಟಿಕೊಳ್ಳತೊಡಗಿದರು. ಪಾಕಿಸ್ತಾನ್ ಜಿಂದಾಬಾದ್, ಇದು ನಿಜವಾದ ಸರ್ಜಿಕಲ್ ಸ್ಟ್ರೈಕ್ ಇತ್ಯಾದಿ ಬರಹಗಳನ್ನು ಒಳಗೊಂಡ ಅನೇಕ ದೇಶದ್ರೋಹಿ ಪೋಸ್ಟ್ ಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಾಕಲಾರಂಭಿಸಿದರು. ಪಂಜಾಬ್ ಎಂದಿಗೂ ದೇಶಪ್ರೇಮಿಗಳನ್ನು ಕೊಟ್ಟಂತಹ ರಾಜ್ಯ ಆದರೆ ಅದೇ ರಾಜ್ಯದ ಸಚಿವನಾದ ಸಿಧುರವರು ಪಾಕಿಸ್ತಾನದ ಜೊತೆ ಮಾತುಕತೆ ಭಾರತ ಮುಂದಾಗಬೇಕು ಎಂದು ಸಲಹೆ ನೀಡಿದರು. ಇದರ ಬೆನ್ನಿಗೆ ಸಮಯಕ್ಕೆ ತಕ್ಕಂತೆ ಬಣ್ಣ ಬದಲಾಯಿಸುವ ಪ್ರಕಾಶ್ ರೈ ಒಂದು ಹಂತದಲ್ಲಿ ಭಾರತದ ಜೊತೆ ನಾವಿದ್ದೇವೆ ಎಂದು ಬೆಂಬಲ ನೀಡಿದರು. ಆದರೆ ಮರುದಿನ ಬಿಜೆಪಿಯ ಬಗ್ಗೆ ಮೋದಿಯವರ ಬಗ್ಗೆ ಟೀಕಿಸಿ ಘಟನೆಯನ್ನು ರಾಜಕೀಯಗೊಳಿಸಿದರು. ಕಮಲ್ ಹಾಸನ್ ಅಂತಹ ಸ್ವಯಂಘೋಷಿತ ನಾಯಕರು ಸೈನಿಕರು ಸಾಯಲೆಂದೇ ಸೇನೆಗೆ ಸೇರುತ್ತಾರೆ ಎಂದು ಹೇಳಿಕೆಗಳನ್ನು ಕೊಟ್ಟಾಗ ಇದು ಹುತಾತ್ಮರಾದ ಸೈನಿಕರ ಕುಟುಂಬಗಳಿಗೆ ಯಾವ ರೀತಿ ನೋವಾಗಬಹುದು ಎಂಬ ಕಾಳಜಿಯಿಲ್ಲದೆ ಮಾತನಾಡಿದರು. ಮತ್ತಷ್ಟು ಓದು
ಅಬ್ಬಾ..ಈ ದೇಶದಲ್ಲಿ ಅದೆಂತಹ ಅಸಹಿಷ್ಣುತೆ..!
– ವರುಣ್ ಕುಮಾರ್
ಪುತ್ತೂರು
- ಈ ದೇಶದಲ್ಲಿ ಅಸಹಿಷ್ಣುತೆ ತಾಂಡವವಾಡುತ್ತಿದೆ – ಶಾರುಖ್ ಖಾನ್
- ನನ್ನ ಪತ್ನಿಗೆ ಮತ್ತು ನನಗೆ ಈ ದೇಶದಲ್ಲಿ ಇರಲು ಭಯವಾಗುತ್ತಿದೆ, ಯಾಕೆಂದರೆ ಇಲ್ಲಿ ಅಸಹಿಷ್ಣುತೆ ಇದೆ – ಅಮೀರ್ ಖಾನ್
- ನನ್ನ ಮೊಮ್ಮಕ್ಕಳಿಗೆ ಈ ದೇಶದಲ್ಲಿರಲು ಭಯವಾಗುತ್ತಿದೆ – ನಾಸೀರುದ್ದಿನ್ ಷಾ
ಹೌದಲ್ಲವೇ, ಇವರು ಹೇಳಿದಂತೆ ಕಳೆದ ನಾಲ್ಕೂವರೆ ವರ್ಷಗಳಿಂದ ಎಷ್ಟೊಂದು ಅಸಹಿಷ್ಣುತೆ ಇದೆಯಲ್ಲವೆ, ಎಲ್ಲ ಕಡೆಗಳಲ್ಲಿ ಗೋವಿನ ಹೆಸರಲ್ಲಿ ಕೊಲೆ,ಸುಲಿಗೆ ಧರ್ಮದ ಹೆಸರಲ್ಲಿ ಗಲಭೆ, ಅಲ್ಪಸಂಖ್ಯಾತರಿಗಂತೂ ಉಸಿರುಗಟ್ಟಿದ ಸ್ಥಿತಿ. ಒಂದೇ ಎರಡೇ, ಇದಕ್ಕೆಲ್ಲ ಯಾರು ಮುಖ್ಯ ಕಾರಣ ಕೇಂದ್ರ ಸರ್ಕಾರ. ಅದರಲ್ಲೂ ಮುಖ್ಯವಾಗಿ ಮೋದಿ. ಈ ಮನುಷ್ಯ ಬಂದ ಮೇಲಂತೂ ಈ ದೇಶದ ಬಗ್ಗೆ ತಾತ್ಸರ ಮೂಡುವಂತೆ ಮಾಡಿದ್ದಾನೆ. ಅಲ್ಲವೇ.. ಅಷ್ಟಕ್ಕೂ ಮೋದಿಯ ಬಗ್ಗೆ ಈ ನಮ್ಮ ದೇಶಭಕ್ತ(?)ರಿಗೆ ಯಾಕೆ ಇಷ್ಟೊಂದು ಕೋಪ ಸ್ವಲ್ಪ ಮೆಲುಕು ಹಾಕೋಣ. ಮತ್ತಷ್ಟು ಓದು
ಮೋದಿರಾಗಾ ಸರಿಸಿ ಮತ ಹಾಕಲು ಮತ್ತೊಂದು ಹೆಸರು ಹೇಳುವಿರಾ?
– ಗೋಪಾಲಕೃಷ್ಣ
ಚಿಕ್ಕಮಗಳೂರು
ಹಾಗೆ ಒಮ್ಮೆ ಕಲ್ಪಿಸಿಕೊಳ್ಳಿ; 2014ರಲ್ಲಿ ನರೇಂದ್ರ ಮೋದಿಯವರಿಗೆ ಬಹುಮತ ಸಿಗದೇ ಇದ್ದಿದ್ದರೆ, 18 ಸ್ಥಾನಗಳನ್ನು ಗೆದ್ದಿದ್ದ ಶಿವಸೇನೆ, 16 ಸದಸ್ಯರನ್ನು ಹೊಂದಿದ್ದ ಚಂದ್ರಬಾಬು ನಾಯ್ಡು, 37 ಸ್ಥಾನ ಹೊಂದಿದ್ದ ಎಐಎಡಿಎಂಕೆ ಹೇಗೆಗೆಲ್ಲಾ ‘ಪೊಲಿಟಿಕಲ್ ಬ್ಲಾಕ್‍ಮೇಲ್’ ಮಾಡಬಹುದಿತ್ತು! ಅಂದು ಎನ್‍ಡಿಎ ಮೈತ್ರಿಕೂಟದ 336 ಸದಸ್ಯರಲ್ಲಿ 282 ಸ್ಥಾನಗಳೊಂದಿಗೆ ಬಿಜೆಪಿ ಸ್ಪಷ್ಟ ಬಹುಮತ ಪಡೆದಿತ್ತು. ಬಿಜೆಪಿ ಎನ್ನುವುದಕ್ಕಿಂತಲೂ ನರೇಂದ್ರ ಮೋದಿಯವರಿಗಾಗಿ ದೇಶ ನೀಡಿದ್ದ ಸ್ಪಷ್ಟ ಜನಾದೇಶವದು. ಹೀಗಿದ್ದರೂ ಶಿವಸೇನೆ ಪ್ರತಿಬಾರಿಯೂ ಕಿತಾಪತಿ ಮಾಡುತ್ತಲೇ ಬರುತ್ತಿದೆ. ಚಂದ್ರಬಾಬು ನಾಯ್ಡು ಅತ್ತಲಿಂದ ಇತ್ತ ಇತ್ತಲಿಂದ ಅತ್ತ ಜಿಗಿಯುತ್ತಲೇ ಇದ್ದಾರೆ. ಇನ್ನು ಜಯಲಲಿತಾ ಬದುಕಿದ್ದಿದ್ದರೆ ಅದು ಇನ್ನೊಂದು ರೀತಿಯ ರಾಜಕಾರಣವಾಗುತ್ತಿತ್ತು ಬಿಡಿ. ಮತ್ತಷ್ಟು ಓದು
ಕನ್ನಡಿಗನೊಬ್ಬನ ಕ್ಲಾಸಿಕ್ ವಿಮಾನಗಳು ಆಗಸದಲ್ಲಿ ಹಾರುವುದನ್ನು ನೋಡಲು ಇನ್ನೆಷ್ಟು ದಶಕಗಳು ಕಾಯಬೇಕೋ?!
– ಸುಜಿತ್ ಕುಮಾರ್
‘ಈತ ನಮ್ಮ ನೂರು ಬಿಲಿಯನ್ ಕಂಪನಿಯ ಚೇರ್ಮ್ಯಾನ್. ಅಪ್ಪನ ಕಂಪನಿಯನ್ನು ಮುನ್ನಡಿಸಿಕೊಂಡು ಬಂದು ಎದ್ವಾ ತದ್ವಾ ಸಾಲವನ್ನು ಮಾಡಿ ತೀರಿಸಲಾಗದೆ ಇಂದು ವಿದೇಶದಲ್ಲಿ ಅಡಗಿ ಕೂತಿದ್ದಾನೆ. ಆತ ಮಾಡಿರುವ ಸಾಲದ ಮೊತ್ತ ಹೆಚ್ಚು ಕಡಿಮೆ ನಮ್ಮ ಇಡೀ ಕಂಪನಿಯ ರೆವೆನ್ಯೂ ಮೊತ್ತಕ್ಕೆ ಸಮ. ನಮ್ಮ ಕಂಪನಿಯನ್ನಷ್ಟೇ ಅಲ್ಲದೆ ನಮ್ಮನ್ನು ನಂಬಿಕೊಂಡು ಕೂತಿರುವ ಇನ್ನೂ ಹತ್ತಾರು ಕಂಪನಿಗಳ ಭವಿಷ್ಯದೊಟ್ಟಿಗೆ ಚೆಲ್ಲಾಡಿ ಮರೆಯಾದವನಿವ’ ಎಂಬ ಮಾತುಗಳಿಗೆ ಪೂರಕವಾಗಿರುವ ಹಾಗು ಅದೇ ಪೇಜಿನಲ್ಲಿ ಕಂಪನಿಯ ಇತರ ಉದ್ಯೋಗಿಗಳನ್ನು Mr. ಅಥವ Mrs. ಎಂಬ ಗೌರವ ಸೂಚಕಗಳನ್ನು ಬಳಸಿ ಸಂಭೋದಿಸಿವುದು ಒಂದೆಡೆಯಾದರೆ ಇನ್ನೊಂದೆಡೆ ಅಲ್ಲೇ ಕಂಪನಿಯ ಚೇರ್ಮ್ಯಾನ್ ನನ್ನು ಕೇವಲ ಹೆಸರಿನಿಂದಷ್ಟೇ ಕರೆಯುವ ಕಂಪನಿಯ ವೆಬ್ಸೈಟ್ ಅನ್ನು ಎಲ್ಲಿಯಾದರೂ ಕಂಡಿರುವಿರಾ? ಇಲ್ಲವಾದರೆ ಒಂದು ಕಾಲಕ್ಕೆ ಇಡೀ ವಿಶ್ವದಲ್ಲೇ ಟಾಪ್ ಸ್ಪಿರಿಟ್ ಕಂಪನಿಗಳಲ್ಲಿ ಒಂದಾಗಿ ಇಂದು ಅಕ್ಷರ ಸಹ ತನ್ನ ಉಳಿವಿಗಾಗಿ ಪರದಾಡುತ್ತಿರುವ ಯುಬಿ.ಗ್ರೂಪ್ಸ್ ನ ವೆಬ್ಸೈಟ್ ಗೆ ಒಮ್ಮೆ ಭೇಟಿ ಕೊಡಿ. ತನಗೆ ಅನ್ನ ಕೊಟ್ಟ ಒಡೆಯನಾದರೂ, ತಪ್ಪು ಮಾಡಿದಾಗ ಆತನನ್ನು ಕಳ್ಳನೆಂದೇ ಕರೆಯುತ್ತೀವಿ ಎಂಬಂತಿದೆ ಅಲ್ಲಿಯ ಬೋರ್ಡ್ ಆಫ್ ಡೈರೆಕ್ಟರ್ ಗಳ ಮಾತುಗಳು. ಮತ್ತಷ್ಟು ಓದು
ಮೋದಿ ಮತ್ತೊಮ್ಮೆ ಎನ್ನುವುದಕ್ಕಿಂತ, ಮೋದಿ ಮತ್ತೆ ಮತ್ತೆ ಎನ್ನಿ!
– ಸಾಗರ ಮುಧೋಳ
ಕಳೆದ ಒಂದು ದಶಕದ ಹಿಂದೆ ಯಾರಾದರೂ ಒಬ್ಬ ವಿದ್ಯಾರ್ಥಿ ಅಥವಾ ಯುವಕ ತಾನೂ ಜೀವನದಲ್ಲಿ ಉನ್ನತವಾದುದನ್ನು ಸಾಧಿಸಬೇಕು ಅಂದುಕೊಂಡಿದ್ದರೆ, ಅದು ಅವನ ದೃಷ್ಟಿಯಲ್ಲಿ ವಿಜ್ಞಾನಿ, ಅಧ್ಯಾಪಕ, ಅಧಿಕಾರಿ, ವೈದ್ಯ ಹೀಗೆ ಹಲವು ಬಗೆಯಲ್ಲಿ ಯೋಚಿಸುತ್ತಿದ್ದ. ಆದರೆ, ತಪ್ಪಿಯೂ ನಾನೊಬ್ಬ ರಾಜಕಾರಣಿಯಾಗಬೇಕೆಂದು ಚಿಂತಿಸುತ್ತಿರಲಿಲ್ಲ. ರಾಜಕಾರಣವೆಂದರೆ ಅದೊಂದು ಸಮಾಜದ ಬಹು ಜನರ ಆಶೋತ್ತರಗಳಿಂದ ಅಸ್ಪೃಶ್ಯವಾಗಿಯೇ ಉಳಿದ ಕ್ಷೇತ್ರ. ಅಲ್ಲಿ ಮಾನವೀಯತೆ, ಪ್ರಾಮಾಣಿಕತೆ, ಒಳ್ಳೆಯತನಕ್ಕೆ ಬೆಲೆಯೇ ಇಲ್ಲ. ರಾಜಕಾರಣವಿರುವುದೇ ದುಡ್ಡು ಮಾಡುವುದಕ್ಕೆ, ಜನರನ್ನು ಮೋಸ ಮಾಡುವುದಕ್ಕೆ ಎನ್ನುವುದು ನಾಡಿನ ಹಲವರಿಂದ ಅಸ್ಖಲಿತವಾಗಿ ಹೊಮ್ಮುತ್ತಿದ್ದ ವಾಣಿ. ಯಾರೊಬ್ಬರೂ ಊಹಿಸಿರಲಿಲ್ಲ! 2014 ರ ಸಂದರ್ಭದಿಂದ ಈ ದೇಶದಲ್ಲಿ ಬಾಲಿವುಡ್, ಕ್ರಿಕೆಟ್ ಗಿಂತ ಅತಿ ಹೆಚ್ಚು ಚರ್ಚೆ ಮತ್ತು ಮೆಚ್ಚುಗೆ ಪಡೆದ ವಿಷಯ ರಾಷ್ಟ್ರದ ರಾಜಕೀಯವೇ ಆಯಿತು. ಮೋದಿ ಎಂದರೆ ಅವರೊಬ್ಬ Political leader ಅಲ್ಲ, ಬದಲಾಗಿ ದೇಶದ ಬ್ರಾಂಡ್! ಮೋದಿ ಟೀ,ಮೋದಿ ಕುರ್ತಾ,ಮೋದಿ ಜಾಕೆಟ್ ಎಲ್ಲವೂ ಬ್ರಾಂಡ್. ಮೋದಿಗೆ ಸಂಬಂಧಿಸಿರುವುದೆಲ್ಲವು ಬ್ರಾಂಡ್. ಹಿಂದೆ ಅಪ್ಪ -ಅಮ್ಮ ಮನೆಯಲ್ಲಿ ರಾತ್ರಿ ನ್ಯೂಸ್ ನೋಡುತ್ತಿರಬೇಕಾದರೆ, ತಮ್ಮನ್ನು ಇಂದಿನ ಕ್ರಿಕೆಟ್ ಮ್ಯಾಚನ್ನು ನೋಡುವುದರಿಂದ ತಪ್ಪಿಸಿರುವವರ ಕಡೆ ಮಕ್ಕಳು ಶಪಿಸುತ್ತಾ ಮೂಗು ಮುರಿಯುತ್ತಿದ್ದರು. ಆದರೆ ಮೋದಿ ಎಂಟ್ರಿ ಕೊಟ್ಟ ಮೇಲೆ ಸಕುಟುಂಬ ಸಮೇತರಾಗಿ ಮನೆಯ ಟಿ.ವಿ. ಪರದೆಯ ಮೇಲೆ ಮೋದಿ ಗಾಥೆಯನ್ನು ನೋಡಲು ಶುರುಹಚ್ಚಿದರು. 2014 ರಲ್ಲಿ ಮೋದಿ ಗೆಲ್ಲುವುದು ಅನಿವಾರ್ಯ ಮಾತ್ರವಲ್ಲ, ಅಂತಿಮವಾದ ಪೂರ್ವ ನಿಯೋಜಿತ ತೀರ್ಮಾನವಾಗಿತ್ತು. Breaking news ಗಾಗಿ ಹಪಹಪಿಸುತ್ತಿದ್ದ ನ್ಯೂಸ್ ಚಾನೆಲ್ ಗಳಿಗೆ ಮೋದಿಯಿಂದ ಪ್ರತಿದಿನ Breaking news ಸಿಗುವ ಹಾಗಾಯಿತು. ಕೊನೆಗೆ ಮೋದಿ ಸುನಾಮಿಯ ಎದುರು ಪ್ರತಿಪಕ್ಷಗಳು ಕೊಚ್ಚಿಕೊಂಡು ಹೋದವು. ಅತ್ತ ನಾಯಕತ್ವವುಯಿಲ್ಲದೆ, ಇತ್ತ ಧ್ಯೇಯೋದ್ದೇಶಗಳು ಇಲ್ಲದ ಪ್ರತಿಪಕ್ಷಗಳು ಮೋದಿಯ ವಿಜಯಕ್ಕೆ ತಲೆ ಬಾಗಲೇ ಬೇಕಾಯಿತು. ಮೋದಿ ಈ ದೇಶದ ಪ್ರಧಾನಮಂತ್ರಿ ಎಂದು ಜನ ಹೇಳುತ್ತಿರುವಾಗ, ” ನಾನು ಈ ದೇಶದ ಪ್ರಧಾನಮಂತ್ರಿಯಲ್ಲ, 125 ಕೋಟಿ ಭಾರತೀಯರ ಪ್ರಧಾನ ಸೇವಕ” ಎಂದ ಮೋದಿಯ ಕೃತಜ್ಞತಾ ಭಾವಕ್ಕೆ ಇಡೀ ದೇಶ ಶರಣೆಂದಿತು. ಮತ್ತಷ್ಟು ಓದು
ನಮೋ “ಅರಿಹಂತಾಯ” : ವಿಕ್ಷಿಪ್ತ ಶಕ್ತಿಗಳ ಅಣ್ವಸ್ತ್ರ ಬೆದರಿಕೆಗೆ ಭಾರತದ ಸುರಕ್ಷಾ ಕವಚ.
– ಶ್ರೇಯಾಂಕ ಎಸ್ ರಾನಡೆ
“ಅರಿಹಂತ” ಅಂದರೆ ಸಂಸ್ಕೃತ ಭಾಷೆಯಲ್ಲಿ “ಶತ್ರುಗಳ ವಿನಾಶಕ” ಎಂದರ್ಥ ( ಅರಿ=ಶತ್ರು. ಹಂತ = ವಿನಾಶಕ ). ‘ಐಎನ್‍ಎಸ್ ಅರಿಹಂತ್’ ಭಾರತದ ಮೊದಲ ಸ್ವದೇಶಿ ನಿರ್ಮಿತ ಅಣ್ವಸ್ತ್ರ ಜಲಾಂತರ್ಗಾಮಿ ನೌಕೆ. ನವೆಂಬರ್ 5 ಕ್ಕೆ ಅರಿಹಂತ ಹಿಂದೂ ಮಹಾಸಾಗರದಲ್ಲಿ ಸುಮಾರು 300 ಮೀಟರ್ ಆಳಕ್ಕೆ ಧುಮುಕಿ ಮೊದಲ ಹಂತದ ಗಸ್ತು ಪರೀಕ್ಷಣವನ್ನು ಯಶಸ್ವಿಯಾಗಿ ಪೂರೈಸಿದೆ. ಇದರ ಲೋಕಾರ್ಪಣೆಯೊಂದಿಗೆ ಭಾರತ ದೇಶ ಭೂ(ಪೃಥ್ವಿ, ಅಗ್ನಿ ಕ್ಷಿಪಣಿಗಳು), ವಾಯು ಹಾಗೂ ಜಲ ಹೀಗೆ ಮೂರೂ ಮಾಧ್ಯಮಗಳಲ್ಲಿಯೂ ನ್ಯೂಕ್ಲಿಯರ್ ಶಸ್ತ್ರ ಬಲವಿರುವ “ಅಣ್ವಸ್ತ್ರ ತ್ರಿವಳಿ” ಶಕ್ತಿಯಾಗಿದೆ. ರಷ್ಯ, ಅಮೆರಿಕ, ಫ್ರಾನ್ಸ್, ಇಂಗ್ಲೆಂಡ್, ಚೀನ ದೇಶಗಳನ್ನು ಹೊರತುಪಡಿಸಿ ಪರಮಾಣು ತಂತ್ರಜ್ಞಾನದ ಜಲಾಂತರ್ಗಾಮಿಯನ್ನು ಅಭಿವೃದ್ಧಿಪಡಿಸಿ ಬಳಸುತ್ತಿರುವ “ಅಣ್ವಸ್ತ್ರ ತ್ರಿವಳಿ” ಸಾಮಾರ್ಥ್ಯವಿರುವ ವಿಶ್ವದ ಆರನೇ ದೇಶ ಭಾರತ. ಏಷ್ಯಾದ ಖಂಡದ ಎರಡನೇ ದೇಶ. ಮತ್ತಷ್ಟು ಓದು
ನಿಂದಕರಿಂದಲೇ ಸಂತೋಷ, ನಿಂದಕರಿದ್ದರೆ ಸಂತೋಷ
– ಬಿದರೆಪ್ರಕಾಶ್
“ನಿಂದಕರಿರಿಬೇಕು, ನಿಂದಕರಿರಬೇಕು
ದುಷ್ಟ ಜನರು ಸೃಷ್ಟಿಯೊಳಿದ್ದರೆ
ಶಿಷ್ಟ ಜನರಿಗೆಲ್ಲಾ ಕೀರ್ತಿಗಳು”
ಎಂದು ಅಂದು ಹಾಡಿದ ಪುರಂದರ ದಾಸರ ನುಡಿಗಳು ಎಂದಿಗೂ ಎಂದೆಂದಿಗೂ ಪ್ರಸ್ತುತವೆಂದು ಇತ್ತೀಚೆಗಿನ ಕೆಲವು ಹಿದ್ಯಮಾನಗಳಿಂದ ವೇದ್ಯವಾಗುತ್ತದೆ.. ಹೌದು, ಪುರಂದರದಾಸರ ವಾಣಿಯಂತೆ ದುಷ್ಟ ಜನರಿಂದಲೇ ಶಿಷ್ಟ ಜನರಿಗೆ ಕೀರ್ತಿಗಳು ಲಭ್ಯವಾಗಿವೆ. ಹಾಗೆಂದು ಈ ಶಿಷ್ಟ ಜನರು ಕೀರ್ತಿಗಾಗಿ ಆಸೆ ಪಟ್ಟವರಲ್ಲ, ಪರರ ತಂಟೆಗೆ ಹೋದವರಲ್ಲ, ಕರ್ತವ್ಯಮುಖಿಯಾಗಿ ತಮ್ಮ ಜವಾಬ್ದಾರಿಯನ್ನು ನಿರ್ವಹಿಸುತ್ತಿದ್ದ ಈ ಇಬ್ಬರು ವ್ಯಕ್ತಿಗಳು ಇಂದು ಖ್ಯಾತಿಗೆ, ಕೀರ್ತಿಗೆ ಭಾಜನರಾಗುತ್ತಿದ್ದಾರೆಂದರೆ ಅದಕ್ಕೆ ಕಾರಣ ಈ ನಿಂದಕರೇ. ಬಹುಷಃ ಈ ನಿಂದಕರಿರದಿದ್ದರೆ ಈ ಇಬ್ಬರು ವ್ಯಕ್ತಿಗಳು ಇಂದಿಗೂ ತೆರೆಮರೆಯಲ್ಲಿಯೇ ಇರುತ್ತಿದ್ದರೇನೋ. ಹಿನ್ನೆಲೆಯಲ್ಲೇ ತಮ್ಮ ಜವಾಬ್ದಾರಿಯನ್ನು ನಿರ್ವಹಿಸುತ್ತಿದ್ದ ಈ ಇಬ್ಬರನ್ನು ಮುನ್ನಲೆಗೆ ತಂದು ನಿಲ್ಲಿಸಿರುವುದು ಈ ನಿಂದಕರೇ. ಅದಕ್ಕಾಗಿಯೇ ಈ ನಿಂದಕರಿಗೆ ಧನ್ಯವಾದ ಹೇಳಲೇಬೇಕು.
ಸಮಾಜಕ್ಕೋಸ್ಕರ ತಮ್ಮ ಜೀವನವನ್ನು ಕೊಟ್ಟು ಪ್ರಚಾರಕರಾಗಿ,ರಾಜ್ಯ ಬಿಜೆಪಿಯಲ್ಲಿ ಕೇಂದ್ರ ಬಿಂದುವಿನಂತೆ ಕಳೆದ ಹತ್ತು ವರ್ಷಗಳಿಂದ ತಮಗೆ ಕೊಟ್ಟ ಜವಾಬ್ದಾರಿಯನ್ನು ನಿರ್ವಹಿಸುತ್ತಿರುವ ಬಿ.ಎಲ್.ಸಂತೋಷ್(ಸಂತೋಷ್‌ಜೀ)ರವರು ಒಬ್ಬರಾದರೆ,ಪತ್ರಕರ್ತರಾಗಿ ಅಂಕಣಕಾರರಾಗಿ ರಾಷ್ಟ್ರೀಯ ವಿಚಾರಗಳನ್ನು ಪ್ರತಿಪಾದಿಸುತ್ತಾ, ಜೀವನಕ್ಕಿಂತ ಅಧ್ಯಯನಕ್ಕೇ ಆದ್ಯತೆ ಕೊಟ್ಟು, ಕಾರ್ಯನಿರ್ವಹಿಸುತ್ತಿರುವ ಸಂತೋಷ್ ತಮ್ಮಯ್ಯ ಮತ್ತೋರ್ವರು. ಸಂತೋಷ್‌ಜೀರವರು ರಾಜಕೀಯ ಕ್ಷೇತ್ರದಲ್ಲಿದ್ದರೂ ಎಂದಿಗೂ ಪ್ರಚಾರ ಪ್ರಿಯರಾಗಲಿಲ್ಲ. ತಮ್ಮಲ್ಲಿರುವ ಅಗಾಧ ಸಂಘಟನಾ ಸಾಮರ್ಥ್ಯವನ್ನು ಕಳೆದ ಹತ್ತು ವರ್ಷಗಳಿಂದ ಬಿಜೆಪಿಯನ್ನು ಕಟ್ಟುವುದಕ್ಕಾಗಿಯೇ ಧಾರೆ ಎರೆಯುತ್ತಿರುವ ಇವರು ಮತ್ತು ಇವರ ಸಾಮರ್ಥ್ಯ ಬಿಜೆಪಿಯ ಒಳಗಿರುವವರಿಗೆ ಮತ್ತು ಪರಿವಾರದ ಕಾರ್ಯಕರ್ತರುಗಳಿಗೆ ಮಾತ್ರ ಪರಿಚಯವಿತ್ತು.ಅದೇ ರೀತಿ ಅಸೀಮ ಪತ್ರಿಕೆಯ ಸಂಪಾದಕರಾಗಿ,ಹೊಸದಿಗಂತ ಪತ್ರಿಕೆಯ ಅಂಕಣಕಾರರಾಗಿ ಓದು ಮತ್ತು ಬರಹಗಳನ್ನು ಮಾತ್ರ ಅಂಟಿಸಿಕೊಂಡು, ಅಧ್ಯಯನದ ಮೂಲಕ ಅಗಾಧ ಬರವಣಿಗೆಯ ಸಾಮರ್ಥ್ಯವನ್ನು ಹೊಂದಿದ್ದ, ಸಂಕೋಚ ಸ್ವಭಾವದ ಸಂತೋಷ್ ತಮ್ಮಯ್ಯ ಸಹ ಎಂದೂ ಮುನ್ನಲೆಗೆ ಬಂದವರಲ್ಲ. ತಮ್ಮ ತಮ್ಮ ಕ್ಷೇತ್ರಗಳಲ್ಲಿ ತಮಗಿರುವ ಶಕ್ತಿಯನ್ನು ವಿನಿಯೋಗಿಸಿ ತೆರೆಮರೆಯಲ್ಲಿಯೇ ಕಾರ್ಯ ನಿರ್ವಹಿಸುತ್ತಿದ್ದ ಈ ಇಬ್ಬರನ್ನೂ ನಿಂದಕರುಗಳು ಜನರ ಮುಂದೆ ತಂದು ನಿಲ್ಲಿಸಿಬಿಟ್ಟಿದ್ದಾರೆ. ಈ ಕಾರಣದಿಂದಾಗಿಯೇ ಸಂತೋಷ್‌ಜೀ ಮತ್ತು ಸಂತೋಷ್ ತಮ್ಮಯ್ಯ ಇಬ್ಬರ ಹೆಸರು ಜನಜನಿತಾಗುತ್ತಿದೆ. ಇವರಿಬ್ಬರ ಸಾಮರ್ಥ್ಯದ ಅರಿವು ಜನರಿಗೆ ಆಗತೊಡಗಿದೆ. ಅದಕ್ಕೇ ಅಂದು ಪುರಂದರ ದಾಸರು ಹೇಳಿದ ’ಶಿಷ್ಟ ಜನರ ಕೀರ್ತಿಗಳಿಗೆ ನಿಂದಕರಿರಬೇಕು, ನಿಂದಕರಿರಿಬೇಕು’ ಎಂಬ ನುಡಿ ಇಂದೂ ಪ್ರಸ್ತುತವೆಂಬುದು ರುಜುವಾತಾಗಿಬಿಟ್ಟಿದೆ.
ಬಿ.ಎಲ್.ಸೋತೋಷ್, ಬಹಳಷ್ಟು ಜನರು ಸಂತೋಷ್‌ಜೀ ಎಂದು ಆತ್ಮೀಯವಾಗಿ, ಗೌರವಪೂರ್ವಕವಾಗಿ ಕರೆಸಿಕೊಳ್ಳುವ ಇವರು ಬಿಜೆಪಿಯಲ್ಲಿ ’ಸಂಘಟನಾ ಕಾರ್ಯದರ್ಶಿ’ ಎಂದರೆ ಹೇಗಿರಬೇಕು ಎಂಬುದಕ್ಕೆ ಮಾದರಿಯಾಗಿ ಬಿಜೆಪಿಯ ಸಂಘಟನೆಗಾಗಿ ತಮ್ಮ ಜೀವನವನ್ನು ಸಮರ್ಪಿಸಿ ಕಾರ್ಯನಿರ್ವಹಿಸುತ್ತಿರುವವರು.ಬಿಜೆಪಿಯನ್ನು ಸಂಘಟನಾತ್ಮಕವಾಗಿ ಶಕ್ತವಾಗಿಸುವಲ್ಲಿ ಸಂತೋಷ್‌ಜೀಯವರ ಪಾತ್ರ ಅಸದಳವಾದುದು ಎಂಬುದನ್ನು ಬಿಜೆಪಿಯಲ್ಲಿ ಅವರನ್ನು ಸಹಿಸಿಕೊಳ್ಳದವರೂ ಒಪ್ಪಿಕೊಳ್ಳುತ್ತಾರೆ.
ಪಟೇಲ್ ಎಂಬ ಉಕ್ಕಿನ ಪುರುಷ, ಸ್ವತಂತ್ರ ಭಾರತದ ಐಕ್ಯತೆಯ ಪ್ರತೀಕ.
– ಶ್ರೇಯಾಂಕ ಎಸ್ ರಾನಡೆ.
“ಪ್ರಾಚೀನ ಭಾರತ ಅನೇಕ ವರ್ಷಗಳ ಕಾಲ ಬ್ರಿಟಿಷರ ಗುಲಾಮಗಿರಿಯಲ್ಲಿತ್ತು ಎಂಬುದು ಅತ್ಯಂತ ತಲೆತಗ್ಗಿಸುವ ವಿಚಾರ. ಆದರೆ ಈಗ ಸ್ವಾತಂತ್ರ್ಯ ಲಭಿಸಿದೆ. ಎಲ್ಲಾ ಭಾರತೀಯರ ಕರ್ತವ್ಯವೆಂದರೆ ಸ್ವತಂತ್ರ ಭಾರತ ಮತ್ತೊಮ್ಮೆ ಗುಲಾಮವಾಗದಂತೆ ನೋಡಿಕೊಳ್ಳಬೇಕು. ಏನಿದ್ದರೂ ಅದು ಮುಂದೆ ಸಾಗಬೇಕು, ಹಿನ್ನಡೆಯಬಾರದು ಆಗಲೇ ಸ್ವಾತಂತ್ರ್ಯಕ್ಕೆ ನಿಜವಾದ ಅರ್ಥ ಒದಗುತ್ತದೆ.”- ಸರ್ದಾರ್ ವಲ್ಲಭಭಾಯಿ ಪಟೇಲ್. ಮತ್ತಷ್ಟು ಓದು