ಸ್ವ ರಕ್ಷಣೆಯಿಂದ ರಾಷ್ಟ್ರರಕ್ಷಣೆ: ರಕ್ಷಾಬಂಧನ ಸಂದೇಶ

ಅಕಟಕಟ ಸಂಸಾರವನು ನೆಚ್ಚಿಕೆಡಬ್ಯಾಡ
ಡಾ. ಶ್ರೀಪಾದ ಭಟ್
ಸಹಾಯಕ ಪ್ರಾಧ್ಯಾಪಕ
ಡಾ. ಡಿ ವಿ ಗುಂಡಪ್ಪಕನ್ನಡಅಧ್ಯಯನಕೇಂದ್ರ,
ತುಮಕೂರು ವಿಶ್ವವಿದ್ಯಾನಿಲಯ, ತುಮಕೂರು
ಶ್ರೀಪಾದರಾಜರು (1404-1502) ಹರಿದಾಸ ಸಾಹಿತ್ಯದ ಪ್ರಮುಖ ಕೀರ್ತನಕಾರರಲ್ಲಿ ಒಬ್ಬರು. ಚನ್ನಪಟ್ಟಣ ಬಳಿಯ ಅಬ್ಬೂರಿನವರಾದ ಇವರನ್ನುಪುರಾಣೋಕ್ತ ಹರಿಭಕ್ತಧ್ರುವನ ಅವತಾರ ಎಂದು ಹೇಳಲಾಗುತ್ತದೆ. ವಿಜಯನಗರ ಅರಸರ ರಾಜಗುರುಗಳಾಗಿದ್ದ ಇವರು ಪುರಂದರ, ಕನಕರ ಗುರುಗಳಾಗಿದ್ದ ವ್ಯಾಸತೀರ್ಥರ ಗುರುಗಳೂ ಹೌದು. ಭ್ರಮರಗೀತ, ವೇಣುಗೀತ, ಗೋಪಿಗೀತ, ಮಧ್ವನಾಮ ಇವರ ಪ್ರಮುಖರಚನೆಗಳು. ರಂಗವಿಠಲ ಎಂಬ ಅಂಕಿತದಲ್ಲಿ ಇವರು ಕೀರ್ತನೆಗಳನ್ನೂ ರಚಿಸಿದ್ದಾರೆ. ‘ನೀ ಇಟ್ಟ ಹಂಗೆ ಇರುವೆನೋ ಹರಿಯೇ’;‘ಕಣ್‍ಗಳಿದ್ಯಾತಕೋ ಕಾವೇರಿರಂಗನ ನೋಡದಾ’;‘ಭೂಷಣಕೆ ಭೂಷಣ…’ ಮೊದಲಾದವು ಅವರ ಅತ್ಯಂತ ಜನಪ್ರಿಯ ಕೀರ್ತನೆಗಳಾಗಿ ಜನಮನದಲ್ಲಿ ನೆಲೆನಿಂತಿವೆ. ‘ಅಕಟಕಟ ಸಂಸಾರವನು ನೆಚ್ಚಿಕೆಡಬ್ಯಾಡ’ ಎಂಬುದು ಅವರ ಅನೇಕಾನೇಕ ಕೀರ್ತನೆಗಳಲ್ಲೊಂದು. ಮತ್ತಷ್ಟು ಓದು
ಸದ್ದಿಲ್ಲದೇ ಸ್ತ್ರೀ ಶಿಕ್ಷಣಕ್ಕೆ ನಾಂದಿ ಹಾಡಿದ ಹರಿಕಾರ – ಶ್ರೀ ಶಿವಕುಮಾರ ಸ್ವಾಮೀಜಿ.
– ಡಾ.ಸುದರ್ಶನ ಗುರುರಾಜರಾವ್
ಸರಿ ಸುಮಾರು ನೂರಾಹನ್ನೊಂದು ವರ್ಷಗಳ ಕಾಲ ದೇಶಸೇವೆಯೇ ಈಶಸೇವೆ ಎಂದೆನ್ನುತ್ತಾ, ಜನತೆಯಲ್ಲಿಯೇ ಜನಾರ್ದನನನ್ನು ಕಂಡು ನಮ್ಮನ್ನಗಲಿದ ಯುಗಪುರುಷ, ನಡೆದಾಡುವ ದೇವರೆಂದೇ ಜನಮಾನಸಗಳಲ್ಲಿ ನೆಲೆಯಾಗಿದ್ದ ಶ್ರೀ ಶಿವಕುಮಾರಸ್ವಾಮಿಗಳು ನಮ್ಮನ್ನು ತೊರೆದು ನೈತಿಕವಾಗಿ ದಿನೇ ದಿನೇ ಅಧೋಗತಿಗಿಳಿಯುತ್ತಿರುವ ನಮ್ಮ ಸಮಾಜವನ್ನು ಆ ಮೂಲಕವಾಗಿ ಸಾತ್ವಿಕ ಸಮುದಾಯವನ್ನು ಅನಾಥರನ್ನಾಗಿ ಮಾಡಿ ಹೋದದ್ದು ದುಃಖಕರವಾದ ಸಂಗತಿಯೇ ಸರಿ. ಕಾಲನ ಕರೆಗೆ ಓಗೊಡದವರಾರು?
ಸ್ವಾಮೀಜಿಗಳ ಬಗ್ಗೆ ಅವರು ಹಗಲಿರುಳು ದುಡಿದು ಕಾಯಾ ವಾಚಾ ಮನಸಾ ದೀನರ ಕರೆಗೆ ಓಗೊಟ್ಟದ್ದು, ಏನೂ ಇದ್ದಿಲ್ಲದ ಒಂದು ಬಿಡಿ ಮಠವನ್ನು ಬೃಹತ್ ಸಂಸ್ಥೆಯನ್ನಾಗಿ ಬೆಳೆಸಿದ್ದು, ಆ ಮೂಲಕವಾಗಿ ಲಕ್ಷಾಂತರ ಜೀವಗಳ ಅಭಿವೃದ್ಧಿಗೆ ಕಾರಣರಾದದ್ದು , ಜಾತ್ಯಾತೀತರೆಂದು ಕೊಚ್ಚಿಕೊಳ್ಳುವ ಸರಕಾರಗಳ ಅನೀತಿಯ ಕಾಕದೃಷ್ಟಿಗೆ ಬಿದ್ದು ಕಷ್ಟ ಅನುಭವಿಸಿದರೂ ಒಂದೇ ಒಂದು ಮಾತನಾಡದೆ ಮಠದ ಮಕ್ಕಳಿಗೆ ಅನ್ನಪೋಷಣೆ ವಿದ್ಯಾದಾನಗಳನ್ನು ಅವಿರತವಾಗಿ ಮುಂದುವರಿಸಿದ್ದು ಎಲ್ಲವನ್ನು ಕೇಳಿ, ಓದಿ ತಿಳಿದಿದ್ದೇವೆ. ಇವೆಲ್ಲದರ ನಡುವೆ ತುಮಕೂರಿನ ಆಸುಪಾಸಿನಲ್ಲಿ ನಾನಾ ಕಾರಣಗಳಿಗೆ ವಿದ್ಯಾಭ್ಯಾಸಕ್ಕೆ ಅವಕಾಶವಿಲ್ಲದ ಹೆಣ್ಣುಮಕ್ಕಳಿಗೆ ವಿದ್ಯಾಭ್ಯಾಸಕ್ಕೆ ಅವಕಾಶ ಮಾಡಿಕೊಟ್ಟ ಸಮಾನತೆಯ ಹರಿಕಾರ ಶ್ರೀ ಸ್ವಾಮೀಜಿಗಳು ಎಂಬುದು ಬಹುತೇಕರಿಗೆ ತಿಳಿದಿಲ್ಲದ ವಿಚಾರ.
ಸಿದ್ಧಗಂಗಾ ಮಠದ ಶಾಲೆಯ ಮೊತ್ತ ಮೊದಲ ವಿದ್ಯಾರ್ಥಿನಿಯಾದ ನನ್ನ ತಾಯಿಯ ಅನುಭವದ ಪರಿಚಯ ಈ ಲೇಖನದ ಉದ್ದೇಶ. ಇದನ್ನು ಹೇಳುವಾಗ, ಬರೆಯುವಾಗ ಭಕ್ತಿ, ಕೃತಜ್ಞತೆಗಳು ಎದೆತುಂಬಿ ನಿಂತಿವೆ ಎಂದು ಪ್ರತ್ಯೇಕವಾಗಿ ಹೇಳಬೇಕಿಲ್ಲವಷ್ಟೇ. ಮತ್ತಷ್ಟು ಓದು
ಶಬರಿಮಲೆ: ಇದು ಹಿಂದೂಗಳ ಸೋಲೇ ?
– ವರುಣ್ ಕುಮಾರ್
ಪುತ್ತೂರು
ಕಳೆದ ಕೆಲ ತಿಂಗಳುಗಳಿಂದ ಚರ್ಚೆಗೆ ಗ್ರಾಸವಾಗಿರುವ ಸುದ್ದಿ ಎಂದರೆ ಅದು ಶಬರಿಮಲೆಗೆ ಮಹಿಳಾ ಪ್ರವೇಶದ ಕುರಿತಾಗಿ ಬಂದಂತಹ ತೀರ್ಪು. ಈ ಕುರಿತಾಗಿ ಚರ್ಚೆಗಳು, ವಾದ- ವಿವಾದಗಳು,ಸಂಭಾಷಣೆಗಳು ಈಗ ಅತಿ ಸಾಮಾನ್ಯ. ಆದರೆ ಶಬರಿಮಲೆಯು ಇಂತಹ ಚರ್ಚೆಗಳಿಗೆ ಗುರಿಯಾಗುತ್ತಿರುವುದು ಇದು ಮೊದಲ ಬಾರಿಯೇನಲ್ಲ. ಇದರ ಕುರಿತಾದ ಒಂದು ಸಣ್ಣ ಅವಲೋಕನೆಯು ಈ ಕೆಳಗಿನಂತಿದೆ. ಮತ್ತಷ್ಟು ಓದು
ಸಮಾನತೆಯ ಪ್ರಶ್ನೆ, ಸಾಮರಸ್ಯದ ಸಂಕೇತ ಶಬರಿಮಲೆ
– ಸ್ನೇಹಾ ಸಾಗರ
ಕೆಲ ದಿನಗಳ ಪ್ರಶ್ನೆಯಲ್ಲ, ಹಲವು ವರ್ಷಗಳ ಪ್ರಶ್ನೆ. ‘ಶಬರಿಮಲೆಗೆ ಹೆಣ್ಣಿಗೇಕೆ ಪ್ರವೇಶವಿಲ್ಲ’ ಎನ್ನುವುದು. ಹೆಣ್ಣೆೆಂದೆರೆ ಅಪವಿತ್ರತೆ ಎನ್ನುವುದೋ, ಪಂದಳದ ರಾಜ ಹೆಣ್ಣಿನ ವಿರೋಧಿ ಎನ್ನುವುದೋ ಅಥವಾ 48 ದಿನಗಳ ಕಠಿಣ ವೃತ ಮತ್ತು ದೊಡ್ಡ ಪಾದ, ಸಣ್ಣ ಪಾದಗಳನ್ನು ಹತ್ತಿ ದೇವರ ದರ್ಶನ ಪಡೆಯುವುದು ಹೆಣ್ಣಿನ ಶಕ್ತಿಗೆ ಆಗದ್ದು ಎನ್ನುವುದೋ. ಒಟ್ಟಿನಲ್ಲಿ ಶಬರಿಮಲೆ ಅಂದಿಗೂ – ಇಂದಿಗೂ ಪ್ರಶ್ನೆೆಯೇ, ವಿವಾದವೇ. ಆದರೆ ಅದು ಯಾರಿಗೆ ಎನ್ನುವುದು ದೊಡ್ಡ ಪ್ರಶ್ನೆೆ. ಭಾರತವೆಂದರೆ ಪರಂಪರೆ, ಭಾರತವೆಂದರೆ ಸಂಸ್ಕೃತಿ – ಸಂಪ್ರದಾಯ ಎನ್ನುವರಿಗೆ ಹಾಗೂ ದೇವರೊಡನೆ ಸಂಪ್ರದಾಯ, ಸಂಸ್ಕೃತಿಗಳ ಬಗ್ಗೆೆ ನಂಬಿಕೆಗಳನ್ನು ಉಳಿಸಿಕೊಂಡು ಬಂದವರಿಗೆ ಖಂಡಿತ ಶಬರಿಮಲೆಯ ಈ ಕಟ್ಟುಪಾಡು ಸಮಸ್ಯೆೆಯೇ ಅಲ್ಲ. ಮತ್ತಷ್ಟು ಓದು
ಓ ‘ಸಂಬಂಧ’ಗಳೇ ನೀವ್ಯಾಕೆ ಇಷ್ಟು ‘ಬಿಜಿ’!
– ಸುವರ್ಣ ಹೀರೆಮಠ
ಆ ಕಾಲವೇ ಹಾಗಿತ್ತು. ಮುಖಾಮುಖಿ ಮಾತು, ಸಂಬಂಧಗಳಿಗೆ ಬೆಲೆ ಇತ್ತು. ಜತೆಯಾಗಿ ಊಟ, ಆಟ, ಪಾಠ ನಮ್ಮದಾಗುತ್ತಿತ್ತು. ಆದರೆ ಈಗ ಕಾಲ ಆಗಿಲ್ಲ. ವೈಯಕ್ತಿಕ ಹಿತಾಸಕ್ತಿ ಸಾಧನೆ, ಕೆಲಸದ ಒತ್ತಡ ಎಲ್ಲವನ್ನು ನುಂಗುತ್ತಿದೆ. ಸಂಬಂಧವೆಂಬುದು ದೂರದ ಬೆಟ್ಟವಾಗುತ್ತಿದೆ. ಹತ್ತಿರ ಹೋಗಿ ನೋಡಿದಾಗ, ಅದು ಕೈಗೆ ಸಿಗದ ವಸ್ತು ಎಂಬುದು ತಿಳಿಯುತ್ತದೆ. ನಾವೆಲ್ಲ ಯಾಕೆ ಹೀಗೆ ಆಗುತ್ತಿದ್ದೇವೆ ? ದೊಡ್ಡ ಗ್ರಾತ್ರದ ಕಟ್ಟಡ ಕಟ್ಟಬೇಕು. ರೋಬೊ ಕಂಡುಹಿಡಿಯಬೇಕು ನಿಜ. ಆದರೆ ನಾವೇ ರೋಬೊ ಆಗಬಾರದು. ನಿಂತ ಕಟ್ಟಡವೂ ಆಗಬಾರದು. ಮತ್ತಷ್ಟು ಓದು
ಬುದ್ಧಿಜೀವಿಗಳ ಐಡಿಯಾಲಜಿ ಹಾಗೂ ಭಾರತೀಯ ಸಾಧಕರ ಸಹಜತರ್ಕ
– ವಿನಾಯಕ ಹಂಪಿಹೊಳಿ
“ಕಡಲೆಯು ಬಡವರ ಗೋಡಂಬಿ” ಎಂಬ ಮಾತನ್ನು ನಾವೆಲ್ಲರೂ ಕೇಳಿರುತ್ತೇವೆ. ಇದರ ಅರ್ಥವೇನು ಎಂಬುದು ಏನೂ ಕಲಿಯದ ಮನುಷ್ಯನಿಗೂ ಬೇಗನೇ ಅರ್ಥವಾಗುತ್ತದೆ. ಈ ಮಾತನ್ನು ನಮ್ಮ ಅಜ್ಜನಿಗೋ, ಅಜ್ಜಿಗೋ ಹೇಳಿ, ಇದರ ಅರ್ಥವೇನು ಎಂದು ಕೇಳಿದರೆ ಅವರು ಏನು ಹೇಳಬಹುದು? “ಗೋಡಂಬಿಯಿಂದ ಆರೋಗ್ಯಕ್ಕೆ ಏನೆಲ್ಲ ಪ್ರಯೋಜನವಿದೆಯೋ, ಆ ಪ್ರಯೋಜನವನ್ನು ಕಡಲೆಯಿಂದಲೂ ಪಡೆಯಬಹುದು; ಅದೂ ಕೂಡ ಕಡಿಮೆ ಖರ್ಚಿನಲ್ಲಿ.” ಎಂಬ ವಿವರಣೆ ಅವರಿಂದ ಬರಬಹುದು.
ಈಗ ನಾವು ನಮ್ಮ ಹಿರಿಯರ ಬಳಿ, “ಈ ಮಾತಿನಲ್ಲಿ ಬಹಳ ಗಹನ ಅರ್ಥವಿದೆ, ಇದು ಗೋಡಂಬಿಯ ಶ್ರೇಷ್ಠತೆಯನ್ನು ಧಿಕ್ಕರಿಸಿ, ಆಹಾರಗಳೆಲ್ಲವೂ ಸಮಾನ ಎಂಬುದನ್ನು ಸಾರುವ ಅರ್ಥವು ಇದರಲ್ಲಿ ಅಡಗಿದೆ” ಎಂದರೆ ಅವರಿಗೇನು ಅರ್ಥವಾಗಲು ಸಾಧ್ಯ? “ಏನೋಪ್ಪಾ! ಅಷ್ಟೆಲ್ಲ ಗೊತ್ತಿಲ್ಲ” ಎಂದು ನುಣುಚಿಕೊಳ್ಳುತ್ತಾರೆ. ಆಗ ನಮಗೆ “ನಮ್ಮ ಪೂರ್ವಜರಲ್ಲಿ ತಾರ್ಕಿಕ ಸಾಮರ್ಥ್ಯವೇ ಇರಲಿಲ್ಲ. ತರ್ಕಮಾಡಿ ವಿಚಾರಿಸುವ ಬುದ್ಧಿಯೇ ಇಲ್ಲದೇ ಮೌಢ್ಯದಲ್ಲಿ ಇದ್ದರು. ತರ್ಕಬದ್ಧವಾಗಿ ಯೋಚಿಸುವದನ್ನು ನಾವು ರೂಢಿಸಿಕೊಂಡು ಮೌಢ್ಯದಿಂದ ಹೊರಬರಬೇಕು.” ಎಂದೆಲ್ಲ ಭಾವಿಸುತ್ತೇವೆ. ಮತ್ತಷ್ಟು ಓದು
ಬುದ್ಧಿಜೀವಿಗಳು ಹಾಗೂ ಪೌರಾಣಿಕ ವ್ಯಕ್ತಿಗಳು
– ವಿನಾಯಕ ವಿಶ್ವನಾಥ ಹಂಪಿಹೊಳಿ
ಈ ಲೇಖನವು ಭಾರತೀಯ ಸಂಸ್ಕೃತಿಯಲ್ಲಿ ಪರಂಪರಾಗತವಾಗಿ ಹರಿದು ಬಂದಿರುವ ಪೌರಾಣಿಕ ಕಥೆಗಳಲ್ಲಿ ಕಂಡು ಬರುವ ವ್ಯಕ್ತಿಗಳ ಕುರಿತು ನಮ್ಮ ದೇಶದ ಬುದ್ಧಿಜೀವಿಗಳು ಯಾವ ಅಭಿಪ್ರಾಯವನ್ನು ಹೊಂದಿದ್ದಾರೆ ಎನ್ನುವದನ್ನು ಸಮಂಜಸವಾಗಿ ವಿವರಿಸುವ ಒಂದು ಚಿಕ್ಕ ಪ್ರಯತ್ನವಾಗಿದೆ. ಬೇರೆ ಬೇರೆ ಪೌರಾಣಿಕ ವ್ಯಕ್ತಿಗಳ ಕುರಿತು ಬುದ್ಧಿಜೀವಿಗಳು ಏಕೆ ಬೇರೆ ಬೇರೆ ನಿಲುವುಗಳನ್ನು ತಾಳುತ್ತಾರೆ ಹಾಗೂ ಒಂದೇ ಪೌರಾಣಿಕ ವ್ಯಕ್ತಿಯ ಕುರಿತು ಮೇಲ್ನೋಟಕ್ಕೆ ಪರಸ್ಪರ ವಿರೋಧಾಭಾಸದಂತೆ ಕಾಣುವ ಹೇಳಿಕೆಗಳನ್ನು ಏಕೆ ಕೊಡುತ್ತಾರೆ ಎನ್ನುವದನ್ನು ಇಲ್ಲಿ ವಿವರಿಸಲು ಯತ್ನಿಸಲಾಗಿದೆ. ಮತ್ತಷ್ಟು ಓದು
ಕಾರಂತ ಸಾಹಿತ್ಯ: ಪರಿಸರ ವಿನಾಶ ಮತ್ತು ವಲಸೆ ರಾಜಕಾರಣ (ಭಾಗ-೩)
– ದೇವು ಹನೆಹಳ್ಳಿ
ಬಂಡಿಮಠ, ಹನೆಹಳ್ಳಿ ಗ್ರಾಮ,
ಬಾರಕೂರು, ಉಡುಪಿ ತಾಲೂಕು-ಜಿಲ್ಲೆ.
ಪರಿಸರ ವಿನಾಶ ಮತ್ತು ವಲಸೆ ರಾಜಕಾರಣ (ಭಾಗ-೧)
ಪರಿಸರ ವಿನಾಶ ಮತ್ತು ವಲಸೆ ರಾಜಕಾರಣ (ಭಾಗ-೨)
ಸ್ವಾತಂತ್ರ್ಯಾ ನಂತರದ ಭಾರತದಲ್ಲಿ ಇಬ್ಬರು, ಅಪ್ಪಳಸ್ವಾಮಿ ಮತ್ತು ಆರೋಕ್ಯಸ್ವಾಮಿ ಎಂಬ ಅಧಿಕಾರಿಗಳ ಹುನ್ನಾರದಲ್ಲಿ ಸಹ್ಯಾದ್ರಿಯ ಮಲೆ, ಇಳಿಜಾರು ಮತ್ತು ತಪ್ಪಲಿನ ಅರಣ್ಯವೆಲ್ಲ ಕೇರಳೀಯರ ವಶವಾದ ಪ್ರಸ್ತಾಪದೊಂದಿಗೆ ನಿರೂಪಣೆ ಮುಖ್ಯ ಮಜಲನ್ನು ತಲುಪುತ್ತದೆ. ಇದಕ್ಕೆ ಎರಡು ಮುಖ. ಒಂದು, ಅರಣ್ಯ ನಾಶ ಇನ್ನೊಂದು, ಸ್ಥಳೀಯರಿಗಾಗುವ ವಂಚನೆ. ಈ ಹಿಂದೆ ಹೇಳಿದ ಸೌಂದರ್ಯ, ಪರಿಪೂರ್ಣತೆ, ಪಂಥಾಹ್ವಾನ ಈ ಯಾವ ಸೆಲೆ, ಸೆಳೆತವೂ ಇಲ್ಲದ, ಲಾಭಕೋರತನವೊಂದೇ ಮಾರ್ಗದರ್ಶಿಯಾಗಿರುವ ರೂಕ್ಷ ಪ್ರಪಂಚದ ಒಂದು ಬೀಭತ್ಸ ಚಿತ್ರಣವನ್ನು ಈ ಕಾದಂಬರಿಯಲ್ಲಿ ಕಾಣುತ್ತೇವೆ. ಕಾರಂತರು ಬಳಸುವ ಅವರ ಇಷ್ಟದ ಪದ `ಚೆಲುವು’ ಒಮ್ಮೆಯೂ ಈ ಕಾದಂಬರಿಯಲ್ಲಿ ಬಂದಿಲ್ಲ. ಪರಿಸರ ನಾಶದ ಜತೆಗೆ ಹೊರಗಿನ ಜನರ ಅವ್ಯಾಹತ ನುಸುಳುವಿಕೆಯಿಂದ ಜನಸಂಖ್ಯಾನುಪಾತ demography, ಏರುಪೇರಾಗಿ ಸಾಂಸ್ಕೃತಿಕ ಅವನತಿಯನ್ನೂ ಕಾಣುತ್ತೇವೆ. ನಿಸರ್ಗವೆಂದರೆ ವಿಶ್ವಾತ್ಮಕ ವ್ಯಕ್ತಿತ್ವವೆಂಬ ಭಾವ ಅಳಿದು ಅದು ಕೇವಲ ಒಂದು ಕಚ್ಚಾವಸ್ತುಗಳ ಮಂಡಿ ಎಂದಾಯಿತು. ಮತ್ತಷ್ಟು ಓದು
ರಾಜೀವ್ ಮಲ್ಹೋತ್ರ ಸಂವಾದ : ಭಾಗ ೨
ಆಂಗ್ಲಮೂಲ : ಶ್ರೀ ರಾಜೀವ್ ಮಲ್ಹೋತ್ರ
ಕನ್ನಡ ಅನುವಾದ : ಶ್ರೀ ಹುಲ್ಲುಮನೆ ಶ್ರೀಧರ
ರಾಜೀವ್ ಮಲ್ಹೋತ್ರ ಸಂವಾದ : ಅಯೋಧ್ಯೆ,ಸತಿ ಪದ್ಧತಿ ಮತ್ತಿತರ ವಿಷಯಗಳು – 1
ಉದಾರವಾದಿಗಳು ಮತ್ತು ಕ್ರಿಶ್ಚಿಯನ್ ಮತಕ್ಕೆ ಸೇರಿಸಿಕೊಳ್ಳುವ/ ಪ್ರಚಾರಕರ (ಇವಾನ್ಜಲಿಸ್ಟ್‌ಗಳ) ನಡುವೆ ಹೊಂದಾಣಿಕೆ:
ಬ್ರಿಟಿಷ್ ಸಂಸತ್ತಿನಲ್ಲಿ ಎಡ್ವಿನ್ ಬೆರ್ಕ್ ಸ್ಪಷ್ಟವಾಗಿ ಹೇಳಿದ್ದಿದೆ- ’ಓಕ್ ಮರಗಳನ್ನು ಥೇಮ್ಸ್ ನದಿಯ ದಂಡೆಯಿಂದ ತೆಗೆದುಕೊಂಡು ಹೋಗಿ ಗಂಗಾನದಿಯ ದಂಡೆಯುದ್ದಕ್ಕೂ ನೆಡಲಾಗದು’ ಎಂದು. ಭಾರತೀಯ ಸಂಸ್ಥಾನಗಳು ಭಾರತೀಯರ ಅಗತ್ಯಗಳನ್ನು ಪೂರೈಸುತ್ತಿದ್ದವು. ಆ ಸಂಸ್ಥೆಗಳಲ್ಲಿ ಪುನರುಜ್ಜೀವನದ ಅಗತ್ಯವಿತ್ತೇ ವಿನಃ ಅವುಗಳನ್ನು ಬದಲಿಸುವ ಅಗತ್ಯವಿರಲಿಲ್ಲ. ಆಂಗ್ಲರಲ್ಲಿ, ಸಂಸತ್ತಿನಲ್ಲಿ ಹಾಗೂ ಭಾರತದ ಆಂಗ್ಲ ಅಧಿಕಾರಿಗಳಲ್ಲಿ ಒಂದು ಬಲವಾದ ಗುಂಪಿದ್ದು ಅವರು ಭಾರತೀಯ ಸಂಸ್ಥಾನಗಳನ್ನು ಮರುನಿರ್ಮಾಣ ಮಾಡಲಿಚ್ಛಿಸಿದ್ದರು. ನಮ್ಮ ಕುತೂಹಲಕ್ಕೆ ’ಸಂಪ್ರದಾಯವಾದಿಗಳು’ (ಕನ್ಸರ್ವೇಟಿವ್‌ಗಳು) ಗಂಭೀರತೆಯಿಂದ ಭಾರತೀಯ ಸಂಸ್ಥಾನಗಳನ್ನು ಹೇಗಿದ್ದವೋ ಹಾಗೆಯೇ ಬಿಡಬೇಕೆನ್ನುತ್ತಿದ್ದರು. ’ಆಂಗ್ಲ ಉದಾರವಾದಿಗಳು’ ಭಾರತದ ಸಂಸ್ಥಾನಗಳನ್ನು ಗೊಂದಲಮಯವಾಗಿಸಲು/ ಅವ್ಯವಸ್ಥಿತಗೊಳಿಸಲು ಇಚ್ಛಿಸಿದ್ದರು. ಮತ್ತಷ್ಟು ಓದು