ಸುಭಾಷರ ನೆನಪಿನೊಂದಿಗೆ ಮರೆಯಬಾರದ ಹೆಣ್ಣು
– ಚೇತನಾ ತೀರ್ಥಹಳ್ಳಿ
ಹೆಣ್ಣು- ಮಣ್ಣಿನ ಹಿಂದೆ ಬಿದ್ದವರೆಲ್ಲ ಕೆಡುತ್ತಾರೆ- ಹಾಗನ್ನುತ್ತಾರಲ್ಲವೆ? ಆದರೆ, ಸುಭಾಷರು ಮಾತ್ರ ಕೆಡಲಿಲ್ಲ. ಬದಲಾಗಿ ಉನ್ನತ ಗೌರವವನ್ನೇ ಪಡೆದರು. ಶತಮಾನಗಳ ಕಾಲ ಉಳಿಯುವಂತಾದರು. ಯಾಕೆ ಗೊತ್ತಾ? ಅವರು ಹಂಬಲಿಸಿದ ನೆಲ ಭಾರತ. ಮತ್ತು, ಅವರು ಪ್ರೇಮಿಸಿದ ಹೆಣ್ಣು ಎಮಿಲೀ!……….. ಸುಭಾಷ್ ಅವರನ್ನ ನೆನೆಸಿಕೊಂಡರೆ, ಎಮಿಲಿಗೂ ನಮ್ಮಿಂದ ಒಂದು ಗೌರವ ಸಲ್ಲಲಿ ಅಂತ ಹಾರೈಸ್ತಾ….
“ನಿನ್ನ ನೋಡಲು ಮತ್ತೆಂದೂ ಸಾಧ್ಯವಾಗದೆ ಹೋಗಬಹುದು. ಆದರೆ ನನ್ನ ನಂಬು. ನೀನು ಸದಾ ನನ್ನ ಹೃದಯದಲ್ಲಿ, ಆಲೋಚನೆಗಳಲ್ಲಿ, ಕನಸಲ್ಲಿ ಇದ್ದೇ ಇರುತ್ತೀಯೆ. ಹಾಗೇನಾದರೂ ವಿಧಿ ನಮ್ಮಿಬ್ಬರನ್ನು ಶಾಶ್ವತವಾಗಿ ಅಗಲಿಸಿದನೆಂದುಕೋ… ಮುಂದಿನ ಹುಟ್ಟಿನಲ್ಲಿ ಮತ್ತೆ ನಿನ್ನ ಸೇರಲು ನಾನು ಪರಿತಪಿಸುವೆ. ನನ್ನ ಕಿನ್ನರೀ… Jeden tag denke ich an sie- ನಿನ್ನನ್ನ ಪ್ರತಿದಿನವೂ ನೆನೆಸಿಕೊಳ್ಳುತ್ತೇನೆ”
( ಸುಭಾಷ್ ಚಂದ್ರ ಬೋಸ್, ಎಮಿಲೀ ಶೆಂಕಲ್ ಗೆ ಬರೆದ ಪತ್ರದಲ್ಲಿ)
ನರನರದಲ್ಲಿ ನೆಲದ ಉನ್ಮಾದ. ಹೋರಾಟದ ಕೆಚ್ಚು. ತನ್ನನ್ನೇ ದೇಶದ ಹೆಸರಿಗೆ ಬರೆದಿಟ್ಟ ಪ್ರೌಢ ಗಂಡಸಿನ ಎದೆಯಲ್ಲೂ ಒಂದು ಬೆಚ್ಚಗಿನ ಗೂಡು. ಪುಟ್ಟದೊಂದು ಖಾಸಗಿ ಬದುಕು. ಅಲ್ಲಿ, ಮೊಗೆದಷ್ಟೂ ಚಿಮ್ಮುವ ಪ್ರೀತಿ. ಎದೆ ಸೀಯುವ ವಿರಹದ ಕಾವು. ಕಾಸಗಲ ಕಣ್ಣೆದುರು ಮುಕ್ತ ಭಾರತದ ಕನಸು. ಒಳಗಿನೊಳಗಲ್ಲಿ ಅವಳ ಪ್ರೇಮ ಬಂಧನದ ನೆನಪು.
ಸುಭಾಷ್ ಚಂದ್ರ ಬೋಸ್… ಮತ್ತಷ್ಟು ಓದು 
ಗುಂಡಿಗೆ ಎದೆ ಕೊಟ್ಟವ ೧೩ರ ಪೋರ..!
– ರಾಕೇಶ್ ಶೆಟ್ಟಿ
ಸರಿಯಾಗಿ ಇಂದಿಗೆ ೬೯ ವರ್ಶದ ಹಿಂದಿನ,ಅಂದು ಆಗಸ್ಟ್ ೧೫ ,೧೯೪೨ನೆ ಇಸವಿ. ಆಗಿನ್ನೂ ಹುಬ್ಬಳಿಯ ಆಗಸದಲ್ಲಿ ಸ್ವಾತಂತ್ರ್ಯದ ಸೂರ್ಯ ಉದಯಿಸಿದ್ದ.ಹಕ್ಕಿಗಳ ಕಲರವದ ನಡುವೆ , ದುರ್ಗದ ಬಯಲಿನಲ್ಲಿ ‘ವಂದೇ ಮಾತರಂ’ ‘ಭಾರತ ಮಾತಾಕಿ ಜೈ’ ಘೋಷಣೆಗಳು ಮೊಳಗುತಿದ್ದವು. ಅಕ್ಕ ಪಕ್ಕದ ಮನೆಯ ಮಕ್ಕಳೆಲ್ಲ ಆಟವಾಡುತಿದ್ದರೆ ಅವನು ಮಾತ್ರ ಬೆಳಿಗ್ಗೆ ಬೇಗ ಎದ್ದು, ಶ್ವೇತವರ್ಣದ ಜುಬ್ಬಾ-ಪೈಜಾಮ ಧರಿಸಿ, ತನಗಿಂತಲೂ ಎತ್ತರವಿದ್ದ ಒಂದು ಬೊಂಬಿಗೆ ‘ತ್ರಿವರ್ಣ ಧ್ವಜ’ ಕಟ್ಟಿಕೊಂಡವನೇ ಮಲಗಿದ್ದ ತಾಯಿಯ ಬಳಿ ಹೋಗಿ ಅವಳನ್ನು ಎಬ್ಬಿಸಿ ಆಶೀರ್ವದಿಸುವಂತೆ ಕೇಳಿದ. ಶ್ವೇತ ವಸ್ತ್ರಧಾರಿಯಾಗಿ ‘ತ್ರಿವರ್ಣ ಧ್ವಜ’ವನ್ನಿಡಿದ ಮಗನನ್ನು ನೋಡಿ,
ಆ ತಾಯಿ ಕೇಳಿದಳು “ಎಲ್ಲಿ ಹೊರಟೆ ಮಗು?”
“ಅಮ್ಮ , ನಾನು ದುರ್ಗದ ಬಯಲಿನಲ್ಲಿ ನಡೆಯುತ್ತಿರುವ ‘ಕ್ವಿಟ್ ಇಂಡಿಯಾ ಚಳುವಳಿ’ಯಲ್ಲಿ ಪಾಲ್ಗೊಳ್ಳಲು ಹೊರಟಿದ್ದೇನೆ”
“ಆದರೆ ಮಗು, ಅಲ್ಲಿ ಹಿರಿಯರೇ ಇರುತ್ತಾರೆ ಕಣೋ!”
ಮತ್ತಷ್ಟು ಓದು 
ಪ್ರಜಾಪ್ರಭುತ್ವಕ್ಕೇ ಮಾರಕವಾಗುವ ವ್ಯಕ್ತಿ ಪೂಜೆ
‘ಒಂದೂರಲ್ಲಿ ಒಬ್ಬ ರಾಜ ಇದ್ದ. ಆತನಿಗೊಬ್ಬಳು ಸುರಸುಂದರಿ ಮಗಳು. ರಾಜನ ವೈರಿಗಳು ರಾಜನ ಮೇಲಿನ ದ್ವೇಷಕ್ಕೆ ಯುವರಾಣಿಯನ್ನು ಅಪಹರಿಸಿಬಿಟ್ಟರು. ಯುವರಾಣಿ ಅಘಾತಕ್ಕೊಳಗಾಗಿ ಮೂರ್ಛೆ ತಪ್ಪಿದಳು. ಆಘಾತದಿಂದ ಹೊರಬಂದ ಮೇಲೆ ನೋಡುತ್ತಾಳೆ ಯಾವುದೋ ಗುಹೆಯೊಳಗೆ ಕೈ ಕಟ್ಟಿಹಾಕಿಹಾಕಿದ್ದಾರೆ. ಹೊರಗಡೆ ಪಹರೆ. ಚಾಕಚಕ್ಯತೆಯಿಂದ ಕೈಗೆ ಕಟ್ಟಿದ್ದ ಹಗ್ಗವನ್ನು ಬಿಡಿಸಿ ವೈರಿಗಳೊಂದಿಗೆ ಶೌರ್ಯದಿಂದ ಹೊಡೆದಾಡಿ……..’ ರೀ ರೀ ರೀ ಕಥೆ ಹೋಗೋದು ಆ ರೀತಿ ಅಲ್ಲ …… ‘ಪಕ್ಕದ ದೇಶದ ಯುವರಾಜ ಏಕಾಂಗಿಯಾಗಿ ವೈರಿಗಳ ಮೇಲೆ ಕಾದಾಡಿ ಯುವರಾಣಿಯನ್ನು ರಕ್ಷಿಸುತ್ತಾನೆ. ಯುವರಾಜನ ಸಾಹಸಕ್ಕೆ ಮನಸೋತ ಯುವರಾಣಿಗೆ ಪ್ರೇಮಾಂಕುರವಾಗುತ್ತದೆ. ಹಿರಿಯರ ಆಶೀರ್ವಾದದೊಂದಿಗೆ ಮದುವೆಯಾಗಿ ನೂರ್ಕಾಲ ಚೆನ್ನಾಗಿ ಬಾಳಿ ಬದುಕುತ್ತಾರೆ’ ಇದು ಕಥೆ ಸಾಗುವ ರೀತಿ! ಚಿಕ್ಕಂದಿನಿಂದಲೂ ಈ ರೀತಿಯ ಕಥೆಗಳನ್ನೇ ಕೇಳಿ ಬೆಳೆದ ನಮಗೆ ಯುವರಾಣಿ ಅಬಲೆಯಲ್ಲ ಬಲಿಷ್ಠೆ, ತನ್ನನ್ನು ತಾನು ಕಾಪಾಡಿಕೊಳ್ಳಲು ಎಂದರೆ ಜೀರ್ಣಿಸಿಕೊಳ್ಳುವುದು ಕಷ್ಟವಾಗುತ್ತದಲ್ಲವೇ? ಯುವರಾಣಿಯ ಸಹಾಯಕ್ಕೆ ಯುವರಾಜನೊಬ್ಬ ಬೇಕೇ ಬೇಕು ಎಂಬ ಸಿದ್ಧಾಂತ ನಮ್ಮದು! ಮತ್ತಷ್ಟು ಓದು 
ಇನ್ನು10 ತಿಂಗಳಲ್ಲಿ ಭಾರತ ಚೀನಾ ನಡುವೆ ಸಂಭವನೀಯ ಯುದ್ಧ?
– ಗಣೇಶ್ ಕೆ ದಾವಣಗೆರೆ
ಚೀನಾದ ತಗಾದೆ ಶುರುವಾದಮೇಲೆ ಭಾರತ ೬೪ ಸಾವಿರ ಕೋಟಿ ರೂಪಾಯಿಗಳ ವೆಚ್ಚದಲ್ಲಿ ಸೇನೆಗೆ ಹೊಸ ಆಯಾಮ ನೀಡುವ ಯೋಜನೆಗೆ ಅಸ್ತು ಎಂದಿದೆ. ಸಾವಿರಾರು ಸೇನೆಯ ತುಕಡಿಗಳನ್ನ ಹೊಂದಿದ ಸ್ಟ್ರೈಕಿಂಗ್ ಕಾರ್ಪ್ ನಿಯೋಜಿಸಲು ಉದ್ದೇಶಿಸಿದೆ. ಹಿಂದಿನ ವಾರದ ದಿ ವೀಕ್ ಪ್ರಕಟಿಸಿರುವ ಸೇನಾ ವಲಯದ ಅಭಿಮತದ ಪ್ರಕಾರ ಚೀನಾ ನಮ್ಮ ಮೇಲೆ ಎರಗಿ ಬರುವುದು ಅಷ್ಟೇನೂ ಸುಲಭದ ಕೆಲಸವೇನಲ್ಲ. ಚೀನೀಯರು ಆಕ್ರಮಣ ಮಾಡಿದರೆ, ಭಾರತವು ಚೀನಾದ ದುರ್ಬಲ ವಲಯಗಳ ಮೇಲೆ ಆಕ್ರಮಣ ಮಾಡಲಿದೆ. ಟಿಬೆಟ್ ಮೂಲಕ ಸಾವಿರಾರು ಕಿಲೋಮೀಟರ್ ಉದ್ದದ ರೈಲು ಮಾರ್ಗ ನಿರ್ಮಿಸಿ ಸೇನೆಯನ್ನ, ಜನರನ್ನ ವಾಯುಪುತ್ರನ ವೇಗದಲ್ಲಿ ಸಾಗಿಸುತ್ತೇವೆ ಎಂದು ಬೀಗುತ್ತಿರುವ ಚೀನಾ ಅದೇ ಕಾರಣಕ್ಕಾಗಿ ಕಳವಳಗೊಂಡಿದೆ. ಟಿಬೆಟ್‌ನಲ್ಲಿರುವ ರೈಲು ಮಾರ್ಗ ಹಲವಾರು ಸೇತುವೆಗಳನ್ನ ಒಳಗೊಂಡಿದೆ. ಜೊತೆಗೆ ಅಲ್ಲಿ ಬೆಂಗಾಡು. ಎಷ್ಟೇ ಎತ್ತರದಿಂದ ನೋಡಿದರೂ ನೆಲ ಕಾಣುತ್ತದೆ. ನಾಲ್ಕು ಸೇತುವೆಗಳನ್ನ ಒಡೆದು ಹಾಕಿದರೆ ಚೀನೀಯರು ಸೇನೆಯನ್ನ ಜಮಾವಣೆ ಮಾಡಲಿಕ್ಕೆ ರೈಲನ್ನ ಬಳಸಲಿಕ್ಕೆ ಸಾಧ್ಯವೇ ಇಲ್ಲ. ಅವನ್ನ ಮರು ನಿರ್ಮಿಸಿ ರೈಲು ಚಲಿಸುವ ಹೊತ್ತಿಗೆ ವಾರಗಳೇ ಬೇಕಾಗುತ್ತವೆ. ಜೊತೆಗೆ, ಟಿಬೆಟಿನಲ್ಲಿ ಹರಿಯುವ ನದಿಗಳಿಗೆ ರಾತ್ರೋ ರಾತ್ರಿ ಸೇತುವೆಗಳನ್ನ ಕಟ್ಟಿಕೊಡುವ ಕಠಿಣ ಪರಿಶ್ರಮದ, ಚಾಣಾಕ್ಷ, ಸಮರ್ಥ ಎಂಜಿನಿಯರುಗಳ ಬಳಗವಿದೆ ಭಾರತಕ್ಕೆ. ನಮ್ಮ ಸೇನೆಯ ಎಂಜಿನಿಯರುಗಳ ಈ ಎಲ್ಲ ವಿಶೇಷಣಗಳೂ ಮೊನ್ನೆ ಮೊನ್ನೆ ಸಂಭವಿಸಿದ ಉತ್ತರಾಖಂಡದ ಪ್ರಾಕೃತಿಕ ಅವಗಢದ ಸಮಯದಲ್ಲಿ ಸಾಬೀತಾಗಿದೆ.
ಅಘೋರಿಗಳ ನಡುವೆ….. ಭಯಾನಕತೆಯ ಲೋಕದ ಅನಾವರಣ…
– ಕೆ.ಗುರುಪ್ರಸಾದ್
ಇತ್ತೀಚೆಗೆ ನನ್ನ ಗೆಳೆಯನೋರ್ವನ ಬಳಿ ಒಂದು ಪುಸ್ತಕ ನೋಡಲು ಸಿಕ್ಕಿತ್ತು. ” ಅಘೋರಿಗಳ ನಡುವೆ” ಮೂಲ “ಸುರೇಶ್ ಸೋಮಪುರ” ಬರೆದಿರುವ ಪುಸ್ತಕ ” ಎಮ್. ಎ. ನಾಗರಾಜ್ ರಾವ್ ” ಅವರು ಕನ್ನಡಕ್ಕೆ ಅನುವಾದಿಸಿದ್ದಾರೆ.(ಬಹಳ ವರ್ಷಗಳ ಹಿಂದೆ ಸುಧಾ ವಾರ ಪತ್ರಿಕೆಯಲ್ಲಿ ಧಾರಾವಾಹಿಯಾಗಿ ಬಂದಿತ್ತಂತೆ) ಕುಂಭಮೇಳದ ಸಂಧರ್ಭಗಳಲ್ಲಿ ಕಾಣಸಿಗುವ “ಅಘೋರಿ” ಗಳ ಜೀವನ ಶೈಲಿಯನ್ನ ಸುರೇಶ್ ಸೋಮಪುರ ಅವರು ತಮ್ಮ ಪುಸ್ತಕದ ವಸ್ತುವನ್ನಾಗಿಸಿದ್ದಾರೆ. ನಿಜಕ್ಕೂ, ಈ ಪುಸ್ತಕದ ಪುಟಗಳನ್ನು ತಿರುಗಿಸುತ್ತಾ ಹೋದಂತೆ ಭಯಾನಕತೆಯ ಅನಾವರಣವಾಗುತ್ತಾ ಹೋಗುತ್ತದೆ. ಅಘೋರಿಗಳ ಜೀವನ ಅಂದರೆ ಈ ರೀತಿಯಲ್ಲೂ ಇರುತ್ತಾ ಅನ್ನುವಷ್ಟು ಭೀಕರವಾಗಿರುತ್ತಾ ಅಂತನಿಸತೊಡಗುತ್ತದೆ. ಅದಕ್ಕೆ ಅಲ್ವಾ ಅಘೋರಿಗಳನ್ನ ಹಠಯೋಗಿಗಳು ಅಂತ ಕರೆಯೋದು. ಹಿಮಾಲಯದ ಮಂಜಿನಲ್ಲಿ ನಗ್ನರಾಗಿ ಮಲಗುವುದು, ಚೂಪಾದ ಮೊಳೆಯ ಹಾಸಿಗೆಯ ಮೇಲೆ ಮಲಗುವುದು, ಸೂಜಿಯಿಂದ ಚುಚ್ಚಿಸಿಕೊಂಡು ತಮ್ಮನ್ನು ತಾವು ನೋಯಿಸಿಕೊಳ್ಳುವುದು ಇವೆಲ್ಲಾ ಅವರ ಹಠಯೋಗದ ಕೆಲವು ನಿದರ್ಶನಗಳು.
ಒಬ್ಬ ಅಘೋರಿಯಿಂದಾದ ತನ್ನ ಗೆಳೆಯನ ಸಾವು , ಲೇಖಕರನ್ನು ಈ ಅಘೋರಿಗಳ ಸಿದ್ಧಿಯ ಹಿಂದಿನ ರಹಸ್ಯವನ್ನು ತಿಳಿದುಕೊಳ್ಳಲು ಕಾತರರಾಗುವಂತೆ ಮಾಡುತ್ತದೆ. ಅದೃಷ್ಟವಶಾತ್ ಲೇಖಕರಿಗೆ ಅಜ್ನಾತ ಸ್ಥಳವೊಂದರಲ್ಲಿ ನಡೆಯುವ ಈ ಅಘೋರಿಗಳ ಸಾಧನಾ ಶಿಬಿರಕ್ಕೆ ಅತಿಥಿಯಾಗಿ ಹೋಗುವ ಅವಕಾಶ ಸಿಗುತ್ತದೆ. ಆ ಸಾಧನಾ ಶಿಬಿರದಲ್ಲಿ ಲೇಖಕರ ಸಹಾಯಕ್ಕಾಗಿ ಸಿಗುವ ಅಘೋರಿಯೊಬ್ಬ ತನ್ನ ಪೂರ್ವಾಶ್ರಮದಲ್ಲಿ ಒಬ್ಬ ಡಾಕ್ಟರ್ ಆಗಿದ್ದಿರುತ್ತಾನೆ ಅನ್ನೋ ವಿಷಯ ನಿಜಕ್ಕೂ ನಮ್ಮಲ್ಲಿ ಆಶ್ಚರ್ಯವನ್ನುಂಟುಮಾಡುತ್ತದೆ. ಅಲ್ಲಿಂದ ಮುಂದೆ ಓದುತ್ತಿದ್ದಂತೆ ನಿಮ್ಮ ಕಣ್ಣೆದುರು ಭಯ ಸುಳಿದಾಡಲು ಪ್ರಾರಂಭವಾಗುತ್ತದೆ. ತಮ್ಮ ಮಂತ್ರಶಕ್ತಿಯ ಬಲದಿಂದಾಗಿ ಈ ಅಘೋರಿಗಳು ಅನೇಕ ಸಿದ್ಧಿಗಳನ್ನು ಕರಗತ ಮಾಡಿಕೊಂಡಿರುತ್ತಾರಂತೆ. ಅವರಿಗೆ ತಮ್ಮ ಮಂತ್ರಶಕ್ತಿಯ ಮೇಲೆ ಬಲವಾದ ನಂಬಿಕೆ. ಸಾಧಾನಾ ಶಿಬಿರವನ್ನು ತಲುಪುತ್ತಿದ್ದಂತೆಯೇ ಲೇಖಕರಿಗೆ ಇದರ ಅನುಭವವಾಗುತ್ತದೆ. ನಿರ್ಮಲ್ ಆನಂದ್ ಅನ್ನುವ ಅಘೋರಿಯೊಬ್ಬ ಲೇಖಕರ ಕೈಗಳನ್ನು ಗೋಡೆಗೆ ಅಂಟುವಂತೆ ಮಾಡುತ್ತಾನೆ. ಅದೆಷ್ಟೇ ಪ್ರಯತ್ನ ಪಟ್ಟರೂ ಲೇಖಕರಿಗೆ ತಮ್ಮ ಕೈಗಳನ್ನು ಹಿಂಪಡೆಯಲಾಗುವುದಿಲ್ಲ. ಇದೊಂದು ಸಣ್ಣ ಉದಾಹರಣೆ… ಹೀಗೆ ಮುಂದೆ ಹೋದಂತೆಲ್ಲಾ ಲೇಖಕರು ಅನುಭವಿಸಿದ ಭೀಕರತೆಯನ್ನು ನಿಮ್ಮ ಕಂಗಳಿಗೆ ಉಣಬಡಿಸುತ್ತಾರೆ.
ಭಯೋತ್ಪಾದನೆ, ರಾಜಕೀಯ ನೇತಾರರು ಮತ್ತು ಮಾಧ್ಯಮಗಳು
ತೀರಾ ಇತ್ತೀಚಿನವರೆಗೂ ಭಯೋತ್ಪಾದನಾ ಧಾಳಿಗಳಿಗೆ ಸಂಬಂಧಿಸಿದಂತೆ ಇರಾಕ್ ಮತ್ತು ಪಾಕಿಸ್ತಾನಗಳ ನಂತರ ಭಾರತ ವಿಶ್ವದಲ್ಲಿ ಮೂರನೆಯ ಸ್ಥಾನದಲ್ಲಿತ್ತು. ಈಗಲೂ ಈ ದೇಶದಲ್ಲಿ ಭಯೋತ್ಪಾದನಾ ಕೃತ್ಯಗಳೇನೂ ಗಮನಾರ್ಹವಾಗಿ ತಗ್ಗಿಲ್ಲ. ಆಂತರ್ಯುದ್ಧದ ದಳ್ಳುರಿಗೆ ಸಿಲುಕಿರುವ ಸಿರಿಯಾ, ಲಿಬಿಯಾಗಳು ಭಾರತವನ್ನು ಕೆಳಕ್ಕೆ ತಳ್ಳಿವೆ ಅಷ್ಟೆ. ಅಂಕಿಅಂಶಗಳ ಪ್ರಕಾರ ೧೯೮೧ರಲ್ಲಿ ಖಲಿಸ್ತಾನ್ ಚಳುವಳಿ ಆರಂಭವಾದಂದಿನಿಂದ ಈ ದೇಶದಲ್ಲಿ ನಾಲ್ಕುಸಾವಿರ್ವಕ್ಕೂ ಅಧಿಕ ಭಯೊತ್ಪಾದನಾ ಧಾಳಿಗಳಾಗಿವೆ ಮತ್ತು ಈ ಪಿಡುಗಿಗೆ ದಿನಕ್ಕೆ ಸರಾಸರಿ ನಾಲ್ವರು ಭಾರತೀಯರು ಬಲಿಯಾಗುತ್ತಿದ್ದಾರೆ.ಮಹಾರಾಷ್ಟ್ರಕ್ಕೆ ಬೆಳಗಾವಿ,ಕೇರಳಕ್ಕೆ ಕಾಸರಗೋಡು,ಕರ್ನಾಟಕಕ್ಕೆ…!?
‘ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು
ಬದುಕಿ ಬಲುಹಿನ ನಿಧಿಯು ಸದಾಭಿಮಾನದ ಗೂಡು’
ಅಂತ ‘ಹುಯಿಲಗೋಳ ನಾರಾಯಣರಾಯ’ರು ಏಕೀಕರಣಕ್ಕೆ ಮೊದಲು ಬರೆದಿದ್ದರು.
‘ಹೊತ್ತಿತೋ ಹೊತ್ತಿತು ಕನ್ನಡದ ದೀಪ
ಮುಗಿಯಿತೋ ಮುಗಿಯಿತು ಶತಮಾನಗಳ ಶಾಪ’
ಅಂತ ಏಕೀಕರಣದ ನಂತರ ಬರೆದವರು ‘ಸಿದ್ದಯ್ಯ ಪುರಾಣಿಕ್’.
ಇವೆರಡು ಹಾಡುಗಳನ್ನ ವರ್ಷಕ್ಕೊಮ್ಮೆ ರಾಜ್ಯೋತ್ಸವದ ದಿನಗಳಲ್ಲಿ(ದಿನಗಳಲ್ಲಾದರೂ!) ನಾವು ಹಾಗೂ ನಮ್ಮ ರಾಜಕಾರಣಿಗಳು ನೆನಪಿಸಿಕೊಳ್ಳುತ್ತೇವೆ. ಆದರೆ ಇಲ್ಲಿ ಕೆಳಗೆ ಇನ್ನೊಂದು ನತದೃಷ್ಟ ಹಾಡಿದೆ ನೋಡಿ.ಬಹಳಷ್ಟು ಜನ ಇದನ್ನ ಮರೆತಿದ್ದಾರೆ, ಹಲವರಿಗೆ ನೆನಪಿಸಿಕೊಳ್ಳುವುದು ಬೇಕಾಗಿಲ್ಲ,ಇನ್ನುಳಿದವರಿಗೆ ಇದರ ಬಗ್ಗೆ ಗೊತ್ತೇ ಇಲ್ಲ!
‘ಬೆಂಕಿ ಬಿದ್ದಿದೆ ನಮ್ಮ ಮನೆಗೆ
ಓ ಬೇಗ ಬನ್ನಿ
ಕನ್ನಡ ಗಡಿಯ ಕಾಯೋಣ ಬನ್ನಿ
ಕನ್ನಡ ನುಡಿಯ ಕಾಯೋಣ ಬನ್ನಿ’
ಅಂತ ಬರೆದ ‘ಕಯ್ಯಾರ ಕಿಞಞಣ್ಣ ರೈ’ ಇಡಿ ಕಾಸರಗೋಡಿನ ಜನತೆಯ ನೋವನ್ನ ಈ ಸಾಲುಗಳಲ್ಲಿ ಅಭಿವ್ಯಕ್ತ ಪಡಿಸಿದ್ದರು. ಮತ್ತಷ್ಟು ಓದು 
ಅವಮಾನಿಸಲು ಕರೆಸಿದವರು ಬಿರುದುಕೊಟ್ಟು ಕಳುಹಿಸಿದರು
– ಸಂತೋಷ್ ತಮ್ಮಯ್ಯ
೧೯೪೭. ಹಳೆಯ ದೆಹಲಿಯ ಪುರಾನಾ ಕಿಲಾ. ದೇಶಕ್ಕೆ ಸ್ವಾತಂತ್ರ್ಯ ಬಂದು ಅತ್ತ ಲಾಲ್ ಕಿಲಾದಲ್ಲಿ ತಿರಂಗಾ ಹಾರಿ ಜನರು ಕುಣಿಯುತ್ತಿದ್ದರೆ ಪುರಾನಾ ಕಿಲಾಕ್ಕೆ ಆ ಭಾಗ್ಯವಿರಲಿಲ್ಲ. ಏಕೆಂದರೆ ಅದೇ ಹೊತ್ತಿಗೆ ದೇಶವೂ ತುಂಡಾಗಿ, ಪಾಕಿಸ್ಥಾನದಿಂದ ರಾಶಿರಾಶಿ ಹೆಣಗಳೂ , ಹಿಂಡುಹಿಂಡಾಗಿ ನಿರ್ವಸಿತರೂ ದಿಕ್ಕಿಲ್ಲದೆ ಬರುತ್ತಿದ್ದರು. ಆಗ ಅವರಿಗೆಲ್ಲಾ ತಾತ್ಕಾಲಿಕ ನೆಲೆಯನ್ನು ಕೊಟ್ಟಿದ್ದು ಈ ಪುರಾನಾ ಕಿಲಾ. ಹಳೆಯ ಕೋಟೆ. ಧ್ವಜ ಹಾರದ ಕೋಟೆ. ಹಾರಿಸಿದರೂ ಯಾರೂ ಸಂತೋಷ ಪಡದಿರುವಂಥ ಕೋಟೆ. ದೂರದ ಮುಲ್ತಾನ್, ಸಿಂಧ್, ಪಂಜಾಬ್‌ಗಳಿಂದ ಬಂದವರೆಲ್ಲಾ ಅಲ್ಲಿ ನೆರೆದು ಬೇರೆಯೇ ಆದ ಒಂದು ಭಾರತ ಅಲ್ಲಿ ನಿರ್ಮಾಣವಾಗಿತ್ತು. ಪುನರ್ವಸತಿ ಆಗುವವರೆಗೆ ಅವರಿಗೆಲ್ಲಾ ಅದೇ ಮನೆ. ಅದೇ ನೆಲೆ. ಅಂಥ ಒಂದು ದಿನ ಸಂಘಟನೆಯೊಂದು ನಿರ್ವಸಿತರಿಗೆ ಆಹಾರದ ಪೊಟ್ಟಣಗಳನ್ನು ವಿತರಣೆ ಮಾಡುತ್ತಿತ್ತು. ಅಲ್ಲಿ ಹನ್ನೆರಡು ವರ್ಷದ ಬಾಲಕ ಜನರ ನಡುವೆ ನುಸುಳುತ್ತಿದ್ದ. ದೊಡ್ಡ ಕೈಗಳ ಮಧ್ಯೆ ಸಣ್ಣ ಕೈಗೆ ಪೊಟ್ಟಣಗಳು ಎಟುಕುತ್ತಿರಲಿಲ್ಲ. ದೊಡ್ಡ ಕೈಗಳು ಸಂತ್ರಪ್ತವಾದ ಮೇಲೆ ಹಸಿದಿದ್ದ ಆ ಬಾಲಕನಿಗೂ ಆಹಾರದ ಪೊಟ್ಟಣ ಸಿಕ್ಕಿತ್ತು.
ಆ ಬಾಲಕ ಮುಂದೆ ಫ್ಲೈಯಿಂಗ್ ಸಿಕ್ಖ್ ಎಂದೇ ಹೆಸರಾದ ಖ್ಯಾತ ಅಥ್ಲೆಟ್ ಮಿಲ್ಖಾ ಸಿಂಗ್. ಪುರಾನಾ ಕಿಲಾದಲ್ಲಿ ಆಹಾರದ ಪೊಟ್ಟಣವನ್ನು ವಿತರಿಸಿದ ಆ ಸಂಘಟನೆ ರಾಷ್ಟ್ರೀಯ ಸ್ವಯಂಸೇವಕ ಸಂಘ ಅಂದರೆ ಆರೆಸ್ಸೆಸ್ಸ್. ಆ ಬಾಲಕ ಫ್ಲೈಯಿಂಗ್ ಸಿಕ್ಖ್ ಆಗುವಲ್ಲಿ ಆ ಆಹಾರ ಪೊಟ್ಟಣದ ಪಾತ್ರವೂ ಇದೆ. ಯಾರೂ ಹೇಳದಿದ್ದರೂ, ಯಾರೂ ಬರೆಯದಿದ್ದರೂ, ಯಾರೂ ತೋರಿಸದಿದ್ದರೂ ಅದರ ಪಾತ್ರವನ್ನು, ಅಂದಿನ ಸತ್ಯವನ್ನು ಅಲ್ಲಗೆಳೆಯಲಾಗದು. ದೇಶವಿಭಜನೆಯ ಮಹಾದುರಂತದ ಒಂದು ಉಳಿಕೆ, ಒಂದು ಚಿಹ್ನೆ, ಒಂದು ಜೀವಂತ ಸ್ಮಾರಕವಾದವರು ಸರ್ದಾರ್ ಮಿಲ್ಖಾ ಸಿಂಗ್. ದೇಶ ವಿಭಜನೆಯ ಹೊತ್ತಲ್ಲಿ ಪಾಕಿಸ್ಥಾನದಿಂದ ಓಡಿ ಭಾರತಕ್ಕೆ ಬಂದವರಿಗೆಲ್ಲಾ ಲಾಲ್ ಕೃಷ್ಣ ಅಧ್ವಾನಿ, ಸರ್ದಾರ್ ಮನಮೋಹನ ಸಿಂಗರಾಗುವ ಅದೃಷ್ಟವಿರಲಿಲ್ಲ. ಅಂಥವರಲ್ಲಿ ಮಿಲ್ಖಾ ಸಿಂಗ್‌ರಂಥವರೇ ಹೆಚ್ಚಿದ್ದರೆಂಬುದು ಇತಿಹಾಸದ ವಾಸ್ತವ. ಅದು ತಿಳಿಯುವುದು ಮಿಲ್ಖಾ ಸಿಂಗನ The Race of my life ನಂಥ ಆತ್ಮ ಕಥೆಗಳಿಂದ.
ಸಾವಿರ ರುಪಾಯಿಯ ಫೋಟೋ ಮತ್ತು ಲಕ್ಷದ ಪ್ರಚಾರ
ಡಾ ಅಶೋಕ್ ಕೆ ಆರ್.
ವೈಯಕ್ತಿಕ
ವಿಷಯದಿಂದ ಲೇಖನವೊಂದನ್ನು ಪ್ರಾರಂಭಿಸುವುದು ಅಷ್ಟೇನೂ ಸರಿಯಲ್ಲವಾದರೂ ಈ ಲೇಖನಕ್ಕೆ ಪೂರಕವಾಗಿರುವ ಘಟನೆಯಾಗಿರುವುದರಿಂದ ಹೇಳುತ್ತಿದ್ದೇನೆ, ಕ್ಷಮೆಯಿರಲಿ. ಮದುವೆಯಾಗುವ ದಿನ ಹೊಸದೇನನ್ನಾದರೂ ಮಾಡಬೇಕೆಂಬ ಆಸೆಯಿಂದ ನನ್ನ ಗೆಳೆಯನೊಬ್ಬ ಮದುವೆಗೆ ಬಂದವರಿಗೆಲ್ಲ ಒಂದೊಂದು ಗಿಡ ಹಂಚಿದ್ದ, ಒಟ್ಟು ಎರಡು ಸಾವಿರ ಗಿಡಗಳು. ಬಂದವರಿಗೆಲ್ಲ ಯಾವುದಾದರೊಂದು ಪುಸ್ತಕವನ್ನು ತಾಂಬೂಲದ ರೂಪದಲ್ಲಿ ಕೊಡಬೇಕೆಂಬುದು ನನ್ನಾಸೆಯಾಗಿತ್ತು. ಮದುವೆ ನಿಶ್ಚಿತವಾಗುವಷ್ಟರೊಳಗೆ ನನ್ನದೇ ಹದಿನೈದರಷ್ಟು ಕಥೆಗಳು ವಿವಿಧ ಪತ್ರಿಕೆಗಳಲ್ಲಿ ಪ್ರಕಟವಾಗಿದ್ದ ಕಾರಣ ನನ್ನದೇ ಕಥಾ ಸಂಕಲನ ಬಿಡುಗಡೆಗೊಳಿಸಿ ಮದುವೆಮನೆಯಲ್ಲೇ ತಾಂಬೂಲದ ಜೊತೆಗೆ ಕೊಡುವ ನಿರ್ಧಾರವೂ ಆಯಿತು. ಮಾಧ್ಯಮದವರನ್ನೂ ಕರೆಯುವ ತೀರ್ಮಾನವನ್ನೂ ಕೈಗೊಂಡೆವು. ಮದುವೆ ದಿನ ತಾಳಿ ಕಟ್ಟಿದ ಮೇಲೆ ಪುಸ್ತಕ ಬಿಡುಗಡೆ ಕಾರ್ಯಕ್ರಮವಿತ್ತು. ಮಾಧ್ಯಮದವರು ವಿಡಿಯೋ ಕ್ಯಾಮೆರಾಗಳ ಜೊತೆಗೆ ಬಂದು ಮುಂದಿನ ಸಾಲಿನಲ್ಲಿ ಆಸೀನರಾಗಿದ್ದರು. ಆಗ ಗಾಬರಿಯಾಗಿದ್ದು ಹುಡುಗಿ ಮತ್ತು ನನ್ನ ಮನೆ ಕಡೆಯ ನೆಂಟರು!! ಕೆಲವರಿಗಷ್ಟೇ ಪುಸ್ತಕ ಬಿಡುಗಡೆಯ ಬಗ್ಗೆ ತಿಳಿಸಿದ್ದೆವು, ಇನ್ನುಳಿದವರಿಗೆ ಅಂದೇ ತಿಳಿಯಲಿ ಎಂದು ಸುಮ್ಮನಿದ್ದೆವು. ಮೀಡಿಯಾದವರು ಕ್ಯಾಮೆರ ಸಮೇತ ದಾಂಗುಡಿಯಿಟ್ಟಿದ್ದು ಕಂಡು ಗಾಬರಿಗೊಂಡ ಜನ ಅವರ ಬಳಿ ಹೋಗಿ ಏನು ಸಮಾಚಾರ ಎಂದು ವಿಚಾರಿಸಿ ಪುಸ್ತಕ ಬಿಡುಗಡೆಯ ಬಗ್ಗೆ ತಿಳಿದು ನಿಟ್ಟುಸಿರುಬಿಟ್ಟರು!! ಜನ ಗಾಬರಿಗೊಂಡಿದ್ದಾದರೂ ಯಾಕೆ? ಯಾವುದೇ ದೃಶ್ಯ ಮಾಧ್ಯಮದಲ್ಲಿ ಮದುವೆಯ ಸುದ್ದಿ ಬರುವುದು ಹುಡುಗ/ಹುಡುಗಿ ಓಡಿ ಹೋದಾಗ ಅಥವಾ ಮತ್ಯಾವುದೋ ರಂಪ ರಾಮಾಯಣವಾದಾಗ. ಮಾಧ್ಯಮದವರಿದ್ದಾರೆಂದರೆ ಅಲ್ಲೇನೋ ಕೆಟ್ಟದ್ದು ನಡೆಯುತ್ತಿದೆ ಎಂಬ ಭಾವನೆಯೇ ತುಂಬಿ ಹೋಗಿದೆ ಜನರಲ್ಲಿ. ಅದೇ ಕಾರಣದಿಂದ ನನ್ನ ಮದುವೆಯ ದಿನ ನೆಂಟರಿಷ್ಟರು ಗಾಬರಿಯಾಗಿದ್ದರು! ಇದು ನಮ್ಮ ಮಾಧ್ಯಮಗಳು ಬೆಳೆಸಿಕೊಂಡಿರುವ ಪ್ರಭಾವಳಿ! ಮತ್ತಷ್ಟು ಓದು 
ಮೋದಿ ಸ್ವಲ್ಪ ಸಿಹಿ , ಸ್ವಲ್ಪ ಕಹಿ
– ಕೆ.ಎಂ.ವಿಶ್ವನಾಥ (ಮಂಕವಿ) ಮರತೂರ
ನಮ್ಮ ಭಾರತ ಬಹು ಭವ್ಯವನ್ನು ಮೆರೆಯುವ ದೇಶ, ಪ್ರಪಂಚದಲ್ಲೆ ಉತ್ತಮವಾದ ಇತಿಹಾಸ ಹೊಂದಿರುವ ದೇಶ ಅನೇಕ ಅದ್ಭುತಗಳಿಗೆ ಹೆಸರಾದ ದೇಶ , ರಾಜಕೀಯದಲ್ಲಿ ಈಡಿ ಪ್ರಪಂಚವೆ ಕಣ್ಣರಳಿಸಿ ನೋಡುವಂತೆ ಇರುವ ದೇಶ , ಇಂದಿನ ರಾಜಕೀಯ ಏಕೊ ಬೇಸರ ಮೂಡಿಸುತ್ತಿದೆ. ಏಕೆಂದರೆ ಎಲ್ಲವು ಗಿಮಿಕ್ ಬರಿ ಜಾಹಿರಾತು ಜೀವನ ಜಾಹಿರಾತಿನಲ್ಲಿ ರಾಜಕೀಯ ನೈಜವಾಗಿ ಜನರ ಮುಟ್ಟು ಕೆಲಸಗಳು ಆಗುತ್ತಿಲ್ಲ ಎಂಬುವುದು ಭಾರತೀಯರ ಪಾಲಿಗೆ ಕಹಿಸತ್ಯ.
ಇತ್ತಿಚಿಗೆ ನಮ್ಮ ಅಂತರಜಾಲ ತಾಣಗಳಲ್ಲಿ ಮಾನ್ಯ ಮೋದಿಯವರ ವಿಚಿತ್ರ ಜಾಹಿರಾತುಗಳನ್ನು ನೋಡಿ ಗಾಬರಿ ಹುಟ್ಟಿಸುತ್ತವೆ. ಇನ್ನೇನು ತಾನು ಈ ದೇಶದ ಪ್ರಧಾನಿಯಾಗಿರುವೇನು ಎಂಬ ಕಲ್ಪನೆ ಅವು ನೊಡುಗರಿಗೆ ಮೂಡಿಸುತ್ತವೆ. ಮುಗ್ದ ಜನರನ್ನು ಇನ್ನಷ್ಟು ಮಂದರನ್ನಾಗಿ ಮಾಡುವ ಈ ಜಾಹಿರಾತುಗಳು ಅವರಿಂದ ಅದೆಷ್ಟು ಹಣ ವಸೂಲಿ ಮಾಡಬಹುದು ಲೆಕ್ಕಹಾಕಿ ನಾಳೆ ಇವರು ನಮ್ಮ ದೇಶದ ಪ್ರಧಾನಿಯಾದರೆ ಈಡಿ ನಮ್ಮ ದೇಶವನ್ನು ಜಾಹಿರಾತಿನಲ್ಲಿ ಮುಳಗಿಸುವುದರಲ್ಲಿ ಸಂದೇಹವೆ ಇಲ್ಲಾ.
ಮೊನ್ನೆ ಪ್ರತಾಪ ರವರು ಬರೆದ ಮೋದಿ ಯಾರು ತುಳಿಯದ ಹಾದಿ ಪುಸ್ತಕ ಓದಿದೆ ಅಲ್ಲಿ ಪುಸ್ತಕ ದುದ್ದಕ್ಕು ಅವರ ವ್ಯಕ್ತಿತ್ವ ಬಹಳ ಮಾರ್ಮಿಕವಾಗಿ ಬರೆದಿದ್ದಾರೆ. ಅವರು ಅತಿ ಚಿಕ್ಕ ವಯಸ್ಸಿನಲ್ಲಿಯೆ ಈ ರಾಜಕೀಯ ಹಾದಿ ಹಿಡಿದು ಆರ್ ಎಸ್ ಎಸ್ ನ ಪಕ್ಕ ಕಾರ್ಯಕರ್ತನಾಗಿ ಮತ್ತೆ ಅದೆ ಗರಡಿಯಲ್ಲಿ ಪಳಗಿದ ಹುಲಿ ಎಂಬ ಮಾತು ಒಂದಡೆ ಕೇಳಿ ಬರುತ್ತದೆ. ಅವರ ಛಲ ಸಾಧನೆ ಎಲ್ಲವು ಮೆಚ್ಚಲೇಬೇಕು ಒಬ್ಬ ವ್ಯಕ್ತಿ ಯಾರ ಸಹಾಯವಿಲ್ಲದೆ ರಾಜಕೀಯ ರಂಗದಲ್ಲಿ ಅಷ್ಟು ಮೇಲೆತ್ತರಕ್ಕೆ ಬೆಳಿಯುವವುದು ಸಾಮಾನ್ಯವಾದ ಮಾತಲ್ಲಾ, ಆದರೆ ತಾನು ಈ ದೇಶದ ಪ್ರಧಾನಿಯಾಗಬೇಕು ಎನ್ನುವುದು ಸಾಮಾನ್ಯ ಜನ ಮಾತಾಡಿ ಅವರಿಗೆ ಗೌರವದಿಂದ ಸೂಚಿಸಬೇಕು, ಆದರೆ ಅದೇಕೊ ಮೋದಿಯವರು ಈ ಜಾಹಿರಾತಿನ ಸಹಾಯ ಪಡೆದು ತಾವು ಮುಂದಿನ ಪ್ರಧಾನಿಯೆಂದು ಬಿಂಬಿಸುತ್ತಿರುವರು ತಿಳಿಯದು, ಇದು ಹುಲಿಗೆ ಹೋಲಿಸುವ ರೀತಿ ಸರಿಯೆ ನೀವೆ ಯೋಚಿಸಿ.
ಮತ್ತಷ್ಟು ಓದು 






