ವಿಷಯದ ವಿವರಗಳಿಗೆ ದಾಟಿರಿ

Posts from the ‘ಲೇಖನಗಳು’ Category

6
ಆಕ್ಟೋ

ಕಾವೇರಿಗಾಗಿ ಕರ್ನಾಟಕದ ಜನರ ಜೊತೆಯಾಗಿ

6
ಆಕ್ಟೋ

ಆಯಸ್ಕಾಂತ

-ಪ್ರಜ್ವಲ್ ಕುಮಾರ್

ಈ ಮೊಬೈಲ್ ಅಲ್ಲಿ ಬ್ಯಾಟರಿನೆ ಇರಲ್ಲ ಗೇಮ್ ಆಡೋಣ ಅಂದ್ರೆ”,

“ಲೋ! ಬ್ಯಾಟಲ್ ಫೀಲ್ಡ್ ಗೇಮ್ ಸಿ.ಡಿ. ಇದ್ರೆ ಕೊಡೋ ಆ ಗೇಮ್ ಆಡಿಲ್ಲ ನಾನು”,

“ಒಂಥರಾ ಬೋರ್ ಹೊಡೀತಾ ಇದೆ ಕಣೆ! ಯಾವ್ದಾದ್ರು ಮೂವಿ ನೋಡೋಣ? ಟಿ.ವಿ. ಆನ್ ಮಾಡು, ಹೇಯ್! ಹ್ಯಾರಿ ಪಾಟರ್ ಬರ್ತಾ ಇದೆ ಕಣೆ. ಇರ್ಲಿ ಬಿಡು”

ಪೇಟೆಯಲ್ಲಿಯೇ ಹುಟ್ಟಿ, ಬೆಳೆದ ಅದೆಷ್ಟೋ ಸಣ್ಣ ಮಕ್ಕಳು ಇಷ್ಟು ಹೊತ್ತಿನ ತನಕ ಹೇಳಿದ ರೀತಿಲೇ ಮಾತಾಡ್ತಾ ಇರೋದನ್ನ ಕೇಳ್ತಾ ಇರ್ತೀವಿ. ಅದ್ಯಾಕೋ ಗೊತ್ತಿಲ್ಲ, ಕೆಲವು ಜನ ತಮ್ಮ ಮಕ್ಕಳಿಗೆ ಮತ್ತಷ್ಟು ಓದು »

5
ಆಕ್ಟೋ

ಬೆಂಗಳೂರು ಕನ್ನಡಿಗರಿಗೊಂದು ಬಹಿರಂಗ ಪತ್ರ

-ಭರತ್ ಬಿಕೆ

ಬೆಂಗಳೂರಲ್ಲೀ ಇದೀರಾ ? ಬೆಂಗಳೂರಿಗೆ ಬಂದ್ರಾ ?? ಸಂತೋಷ 🙂 ಬೆಂಗಳೂರಲ್ಲೇ ಹುಟ್ಟೀ, ಬೆಂಗಳೂರಲ್ಲೇ ಬೆಳೆದ್ರಾ ?? ತುಂಬಾ ಸಂತೋಷ 🙂

ಬೆಂಗಳೂರಲ್ಲೇ ಬದುಕಬೇಕು ಅಂತಾ ಇದೀರಾ ?? ಇನ್ನೂ ಸಂತೋಷ:)

ಆದರೇ ಇಲ್ಲಿನ ಭಾಷೆ, ನೆಲ, ಜಲ, ವ್ಯವಸ್ಥೆ, ಅವಸ್ಥೆ,ಸಮಸ್ಯೆಗಳ ಬಗ್ಗೆ ಸ್ವಲ್ಪ ಯೋಚನೆ ಮಾಡಿದ್ದೀರಾ?  ಅದಕ್ಕಾಗಿ, ಅದಕ್ಕೆ ಸಂಬಂಧಿಸಿದ ವಿಚಾರಗಳಲ್ಲೀ ಭಾಗವಹಿಸಿದ್ದೀರಾ ??

ಸಾರ್ವಜನಿಕವಾಗಿ ?? ವಯಕ್ತಿಕವಾಗಿ ??

ಅಷ್ಟೆಲ್ಲಾ ಯಾಕೇ ಬಿಡಿ.. ಫೇಸ್ ಬುಕ್ ಪ್ರೋಫೈಲಲ್ಲೀ ಪೋಸ್ಟ್ ಮಾಡಿದಿರಾ ? ಸಂಬಂಧಿಸಿದ ಪೋಸ್ಟ್ ಗಳಿಗೇ ಲೈಕ್ ಮಾಡಿಡ್ಡೀರಾ ?? ಕಮೇಂಟ್ ಕೊಟ್ಟಿದ್ದೀರಾ ??

ಮತ್ತಷ್ಟು ಓದು »

5
ಆಕ್ಟೋ

ಹೀಗೊಂದು ಅಧುನಿಕ ತುಘಲಕ್ ಸಂಸ್ಕೃತಿ

ಮಧುಚಂದ್ರ ಭದ್ರಾವತಿ

ಅಲ್ಲೊಂದು ದೇವಸ್ಥಾನದ ವಿಮಾನ ಗೋಪುರದ ಪ್ರತಿಷ್ಠಾಪನೆಯ  ಕಾರ್ಯಕ್ರಮ. ಕಾರ್ಯಕ್ರಮ ಅಂದರೆ ವೆಲ್ಕಮ್ ಕಮಿಟಿ ಅಂತ ಒಂದು ಕಾಲದಲ್ಲಿ ಇರುತಿತ್ತು . ಅವರು  ಮಾತ್ರ ದೇವಸ್ಥಾನದ ರಾಜ ಬೀದಿಯಲ್ಲಿ  ” ಕಾರ್ಯಕ್ರಮಕ್ಕೆ  ಆಗಮಿಸುವ ಭಕ್ತಾದಿಗಳಿಗೆ ಶುಭ ಕೋರುತ್ತಿದ್ದೇವೆ ” ಅಂತ ಎಲ್ಲೋ ಒಂದು ಬೋರ್ಡ್ ಹಾಕಿ ಕೈ ತೊಳೆದುಕೊಳ್ಳುತಾ ಇದ್ದರು .

ಈಗ ಕಾಲ ಬದಲಾಗಿದೆ  ” ವಿಮಾನ ಗೋಪುರದ ಪ್ರತಿಷ್ಠಾಪನೆಯ ಕಾರ್ಯಕ್ರಮಕ್ಕೆ ಆಗಮಿಸುತ್ತಿರುವ ಭಕ್ತರಿಗೆ ಶುಭ ಕೋರುವವರು ..” ಎಂದು  ಮೂವತ್ತೆರಡು  ದಂತ ಪಂಕ್ತಿ ಗಳನ್ನು  ಪ್ರದರ್ಶಿಸುತ್ತಾ  ಕಾಲ್ಗಟೆ ಸ್ಮೈಲ್ ಕೊಡುತ್ತ ನಿಂತಿರುವ  ನರ ರೊಪದ ಅಧುನಿಕ ತುಘಲಕ  ಭಾವ ಚಿತ್ರಗಳು  ಎಲ್ಲ್ ಎಲ್ಲಿ ನೋಡಿದರು ರಾರಾಜಿಸುತ್ತಿರುತ್ತವೆ .

ಈ ರೀತಿಯ ಹುಚ್ಚು ಮನಸ್ಸಿನ ಅವಿವೇಕ ಎಲ್ಲಿಂದ ಬಂತೋ ಗೊತ್ತಿಲ್ಲ. ಕೇವಲ ಪ್ರಚಾರ ಮತ್ತು ರಾಜಕೀಯ ಲಾಭ ಮಾಡಿಕೊಳ್ಳಲು ತಮ್ಮ ಇರುವಿಕೆ ಮತ್ತು ಶಕ್ತಿ ಪ್ರದರ್ಶನ ಮಾಡಲು  ಕೀಳು ಮಟ್ಟಕ್ಕೆ ಪುಡಾರಿಗಳು ಇಳಿಯುತ್ತಾರೆ. ಆವರಿಗೆ ಸಾತ್ ನೀಡಲು ನಮ್ಮ ನೆಚ್ಚಿನ ಜನ ನಾಯಕ  ಎಂದು ಅವರ ಪಕ್ಕದಲ್ಲಿ ತಮ್ಮದೊಂದು ಮುಖಾರವಿಂದ ಇರಲಿ ಎಂದು  ಮರಿ ಪುಡಾರಿಗಳು ಊರ ತುಂಬೆಲ್ಲ ಫ್ಲೆಕ್ಷ್ ಹಾಕಿ ಮೆರೆಯುತ್ತಾರೆ.

 ಮಳೆಗಾಲಕ್ಕೆ ಸರಿಯಾಗಿ ಮಳೆ ಬರುತ್ತೋ ಇಲ್ಲವೋ, ಹಿಂದೂಗಳ ಹಬ್ಬ ಬಂದಾಗ ಹಿಂದುಗಳಿಗೆ , ಮುಸ್ಲಿಂರ ಹಬ್ಬಕ್ಕೆ ಮುಸ್ಲಿಮರಿಗೆ , ಕ್ರಿಶ್ಚಿಯನ್ನರ ಹಬ್ಬ ಬಂದಾಗ ಕ್ರಿಶ್ಚಿಯನ್ನರಿಗೆ ಶುಭಾಶಯಗಳ ಫ್ಲೆಕ್ಷ್ ಬ್ಯಾನರ್ ಮಾತ್ರ ಬಂದೆ ಬರುತ್ತೆ.

ಮತ್ತಷ್ಟು ಓದು »

3
ಆಕ್ಟೋ

ಕಾನೂನಿನಂಗಳ ೯ : ಹೆಣ್ಣಿಗೆ ಆಸ್ತಿಯಲ್ಲಿ ಸಮಾನ ಹಕ್ಕು

ಉಷಾ ಐನಕೈ  ಶಿರಸಿ

ಭಾರತೀಯ ಸಂಸ್ಕೃತಿಗೆ ಜಾಗತಿಕ ಮಟ್ಟದಲ್ಲಿ ಒಂದು ವಿಶಿಷ್ಟವಾದ ಸ್ಥಾನಮಾನ ಇದೆ. ವೈವಿಧ್ಯಮಯವಾದ ಭೌಗೋಲಿಕ ಸ್ವರೂಪ, ವಿಭಿನ್ನವಾದ ಭಾಷೆ, ಆಚಾರ, ರೂಢಿ ಹೀಗೆ ಭಾರತದಲ್ಲಿ ಸಾಂಸ್ಕೃತಿಕ ವೈವಿಧ್ಯತೆ ಅಪಾರ. ಈ ಕಾರಣಕ್ಕಾಗೇ ಭಾರತದೇಶ ಜಾಗತಿಕ ಕುತೂಹಲದ ತಾಣವಾಗಿದೆ. ಭಾರತೀಯ ಸಮಾಜಕ್ಕೆ ಸಾವಿರಾರು ವರ್ಷಗಳ ಪರಂಪರೆ ಇದೆ. ಇಷ್ಟೊಂದು ವರ್ಷ ಈ ಸಂಸ್ಕೃತಿ ಸುಸಂಬದ್ಧವಾಗಿ ಸಾಗಿಬಂದಿದೆ ಅಂದರೆ ಇದರ ಹಿಂದೆ ನ್ಯಾಯ, ನೀತಿ, ಧರ್ಮ ಮುಂತಾದವುಗಳು ಇದೆ ಅಂತಲೇ ಅರ್ಥ. ಅಂದರೆ ಒಂದು ರೀತಿಯ ಕಾನೂನುಗಳ ಪರಿಕಲ್ಪನೆಯಲ್ಲೇ ನಮ್ಮ ಸಂಸ್ಕೃತಿ ಸಾಗಿಬಂದಿದೆ. ಅದನ್ನೇ ಸಂಪ್ರದಾಯ, ರೂಢಿ, ಶ್ರುತಿ, ಸ್ಮೃತಿ, ಉಪನಿಷತ್ ಮುಂತಾದವುಗಳಾಗಿ ಕಾನೂನಿನ ಅಂಗವೆಂದು ಗುರುತಿಸಲ್ಪಟ್ಟಿವೆ. ನಾವಿಂದು ನೋಡುತ್ತಿರುವ ಹಿಂದೂ ಕಾನೂನು ಪ್ರಾಚೀನ ಭಾರತದಲ್ಲಿನ ಸಂಪ್ರದಾಯ, ಪದ್ದತಿ, ಸ್ಮೃತಿಗಳನ್ನಾಧರಿಸಿಯೇ ಇದೆ.

ಈ ಹಿಂದೂ ಕಾನೂನು ಎನ್ನುವುದು ಎಲ್ಲ ಭಾರತೀಯರಿಗೆ ಅಥವಾ ಹಿಂದೂಗಳು ಎನಿಸಿಕೊಂಡ ಭಾರತೀಯರಿಗೆ ಅನ್ವಯಿಸುತ್ತದೆ. ಇದರಲ್ಲಿ ವಿವಾಹ, ಜೀವನಾಂಶ, ದತ್ತಕ, ವಾರಸಾ, ಸಂರಕ್ಷ ಅಧಿನಿಯಮ, ಆಸ್ತಿ ವಿಭಾಗ ಮುಂತಾದವುಗಳೆಲ್ಲ ಬರುತ್ತವೆ.

ಮತ್ತಷ್ಟು ಓದು »

1
ಆಕ್ಟೋ

ಜಾತ್ಯಾತೀತ ‘ಜಿನ್ನಾ’ ಖಳ ನಾಯಕನಾದರೆ ‘ಗಾಂಧೀ’ ಯಾರು?..

– ಅಶ್ವಿನ್ ಅಮೀನ್

ಕೆಲವು ವರ್ಷಗಳ ಹಿಂದೆ ಮಾಜಿ ಉಪ ಪ್ರಧಾನಿ ಎಲ್. ಕೆ.ಅಡ್ವಾಣಿ ಯವರು ಪಾಕಿಸ್ತಾನದಲ್ಲಿರುವ ಮಹಮ್ಮದ್ ಆಲಿ ಜಿನ್ನಾ ಸಮಾಧಿಗೆ ಭೇಟಿ ಕೊಟ್ಟು ‘ಜಿನ್ನಾ ಒಬ್ಬ ಜಾತ್ಯಾತೀತ ನಾಯಕ’ ಎಂದು ಉದ್ಗರಿಸಿದ್ದರು. ಆ ಹೇಳಿಕೆ ಭಾರತದಾದ್ಯಂತ ಎಷ್ಟು ಸಂಚಲನವನ್ನು ಉಂಟು ಮಾಡಿತ್ತೆಂದರೆ ಸ್ವಪಕ್ಷೀಯರೇ ಆಡ್ವಾಣಿಯನ್ನು ವಿರೋಧಿಸತೊಡಗಿದರು.ಆದರೆ, ಅಷ್ಟು ಹಿರಿಯ ಮುತ್ಸದ್ದಿಯಾದ ಆಡ್ವಾನಿಯವರು ಯಾವುದೇ ಆಧಾರ – ಕಾರಣಗಳಿಲ್ಲದೆ ಆ ಹೇಳಿಕೆ ನೀಡಿಯಾರೇ ಎಂಬ  ಪ್ರಶ್ನೆ ನನ್ನನ್ನು ಕಾಡುತ್ತಲೇ ಇತ್ತು. ಅದಕ್ಕೆ ಉತ್ತರ ಹುಡುಕುತ್ತಾ ಇತಿಹಾಸದ ಪುಟಗಳನ್ನು ತಿರುವ ಹೊರಟ ನನಗೆ ಕಂಡು ಬಂದ ಸತ್ಯ ಮಾತ್ರ ನಿಜಕ್ಕೂ ಆಘಾತಕಾರಿ!. ‘ಧರ್ಮಕ್ಕಿಂತ ದೇಶ ಮೊದಲು, ನಾನು ಮೊದಲು ಭಾರತೀಯ’ ಎನ್ನುತ್ತಿದ್ದ ಮಹಮ್ಮದ್ ಆಲಿ ಜಿನಾ ಭಾರತವನ್ನು ಒಡೆಯುವಷ್ಟರ ಮಟ್ಟಿಗೆ ಹೋಗಲು ಕಾರಣೀಭೂತರಾದರೂ ಯಾರು? ಆ ಸತ್ಯಗಳನ್ನು ತಿಳಿಯುತ್ತಾ ಹೋದಂತೆ ಆಡ್ವಾಣಿಯವರು ಜಿನ್ನಾರ ಬಗ್ಗೆ ಅಂದು ಹೇಳಿದ ಮಾತುಗಳು ಸತ್ಯವಾಗುತ್ತಾ ಹೋಯಿತು.

ಮಹಮ್ಮದ್ ಆಲಿ ಜಿನ್ನಾ… ಆತನ ವ್ಯಕ್ತಿತ್ವ ಎಂದಿಗೂ ಒಬ್ಬ ಮುಸ್ಲಿಮನಿಗೆ ತಕ್ಕುದಾಗಿ ಇರಲಿಲ್ಲ. ಆತನೆಂದೂ ಗಡ್ಡ ಬಿಡಲಿಲ್ಲ, ಸ್ಕಲ್ ಕ್ಯಾಪ್ ಹಾಕಲಿಲ್ಲ, ದಿನಕ್ಕೆ ಐದು ಬಾರಿ ನಮಾಜ್ ಮಾಡಲಿಲ್ಲ, ಮದರಸಾದಲ್ಲಿ ಕಲಿಯಲಿಲ್ಲ… ಮದುವೆಯಾಗಿದ್ದು ಪಾರ್ಸಿ ಹುಡುಗಿಯನ್ನು, ಕಲಿತಿದ್ದು ಕ್ರೈಸ್ತ ಕಾನ್ವೆಂಟ್ ನಲ್ಲಿ, ಇಂಗ್ಲೆಂಡ್ ನಲ್ಲಿ ಉನ್ನತ ವ್ಯಾಸಾಂಗ… ಆತ ಸಿಗರೇಟು ಸೇದುತ್ತಿದ್ದ, ಹಂದಿ ಮಾಂಸ ತಿನ್ನುತ್ತಿದ್ದ, ಮದ್ಯ ಸೇವಿಸುತ್ತಿದ್ದ… ಅಂತಹ ವ್ಯಕ್ತಿ ಅದೇಗೆ ಧರ್ಮಾಂಧನಾಗಲು ಸಾಧ್ಯ…?

ಮತ್ತಷ್ಟು ಓದು »

28
ಸೆಪ್ಟೆಂ

ಪ್ರಶ್ನೆಯಾಗಿ ಕಾಡುತ್ತಿರುವ ಕರುತ್ತಮ್ಮ..

-ರಶ್ಮಿ ಕಾಸರಗೋಡು

ಹೌದು, ಈ ಕರುತ್ತಮ್ಮ ಕಾಡಿದಷ್ಟು ಇನ್ಯಾರೂ ನನ್ನನ್ನು ಕಾಡಿರಲಿಲ್ಲ. ಬಾಲ್ಯದಿಂದ ಹಿಡಿದು ಇಲ್ಲಿಯವರೆಗೆ ನಾನು ಇಷ್ಟಪಡುವ ಹೆಂಗಸರಲ್ಲಿ ಇವಳೂ ಒಬ್ಬಳು. ನಾನು ಹೀಗೆಹೇಳುತ್ತಿದ್ದರೆ ಆ ಕರುತ್ತಮ್ಮ ಯಾರು ಎಂಬ ಪ್ರಶ್ನೆ ನಿಮ್ಮನ್ನೂ ಕಾಡುತ್ತಿರಬಹುದು ಅಲ್ಲವೇ? ಅವಳು ಮತ್ಯಾರೂ ಅಲ್ಲ ಪ್ರಶಸ್ತಿ ವಿಜೇತ ಹಳೇ ಕಾಲದ ಮಲಯಾಳಂ ಚಿತ್ರ ಚೆಮ್ಮೀನ್್ನ ನಾಯಕಿ. ಚಿತ್ರದಲ್ಲಿ ಕರುತ್ತಮ್ಮನ ಪಾತ್ರ ನಿರ್ವಹಣೆ ಮಾಡಿದ್ದು ನಟಿಶೀಲ. ಮಲಯಾಳಂನಲ್ಲಿ ಚೆಮ್ಮೀನ್ ಅಂದ್ರೆ ಸಿಗಡಿ ಮೀನು. ತಗಳಿ ಶಿವಶಂಕರ ಪಿಳ್ಳೆ ಬರೆದ ಚೆಮ್ಮೀನ್ ಎಂಬ ಕಾದಂಬರಿ ಆಧರಿತ ಚಿತ್ರವಾದ ಚೆಮ್ಮೀನ್ 1965ರಲ್ಲಿ ತೆರೆಕಂಡರೂ ಅದರಯಶಸ್ಸು ಇಂದಿಗೂ ಚಿರನೂತನ. ಅವರ ಕಥೆ, ಹಾಡು, ನಟನೆ ಅಬ್ಬಾ…ಆ ಚಿತ್ರವನ್ನು ನೋಡಿಯೇ ಅನುಭವಿಸಬೇಕು.
ಚಿಕ್ಕವರಿರುವಾಗ ಶಾಲೆಯಲ್ಲಿ ಕ್ವಿಜ್್ಗೆ ಚೆಮ್ಮೀನ್ ಕಾದಂಬರಿ ಬರೆದವರು ಯಾರು? ಎಂಬ ಪ್ರಶ್ನೆ ಕಾಮನ್ ಆಗಿತ್ತು. ಮೊದಲಬಾರಿಗೆ ಚೆಮ್ಮೀನ್ ಕಾದಂಬರಿ ಬಗ್ಗೆ ಕುತೂಹಲ ಹುಟ್ಟಿಕೊಂಡದ್ದೇ ಹೀಗೆ. ಅಂತೂ ಕೊನೆಗೂ ಅದೊಂದು ದಿನ ಡಿಡಿ 1 ಚಾನೆಲ್್ನಲ್ಲಿ ಆದಿತ್ಯವಾರ ಪ್ರಾದೇಶಿಕ ಚಲನಚಿತ್ರ ವಿಭಾಗದಲ್ಲಿ ಚೆಮ್ಮೀನ್ ಚಿತ್ರ ಪ್ರಸಾರವಾಗಿತ್ತು.ನಮ್ಮ ಬ್ಲಾಕ್ ಆ್ಯಂಡ್ ವೈಟ್ ಟೀವಿಯಲ್ಲಿ ಚೆಮ್ಮೀನ್ ಚಿತ್ರ ಮೂಡಿಬರುತ್ತಿದ್ದಂತೆ ಟೀವಿಯಲ್ಲೇ ಗಮನ ಕೇಂದ್ರೀಕರಿಸಿ ಕುಳಿತಿದ್ದೆ. ಚಿತ್ರದುದ್ದಕ್ಕೂ ಕಡಲ ಕಿನಾರೆ…ಮೀನು…ಮೀನುಗಾರರ ಸಂಭಾಷಣೆ..ಅದ್ಭುತ ಸಂಗೀತ…ಒಂದಷ್ಟು ರೊಮ್ಯಾಂಟಿಕ್ ದೃಶ್ಯಗಳು…ನಾವು ಮಾತನಾಡುವ ಮಲಯಾಳಂಗೂ ಮೀನುಗಾರರು ಮಾತನಾಡುವ ಮಲಯಾಳಂಗೂವ್ಯತ್ಯಾಸವಿರುವುದರಿಂದ ಚಿತ್ರದಲ್ಲಿನ ಎಲ್ಲ ಸಂಭಾಷಣೆಗಳು ನನಗೆ ಅರ್ಥವಾಗುತ್ತಿರಲಿಲ್ಲ. ಚಿತ್ರ ನೋಡುತ್ತಿರುವಾಗ ಅವಳು ಆಗಿನ ಕಾಲದ ‘ಸೆಕ್ಸೀ ನಟಿ’ಎಂದು ಅಪ್ಪ ಹೇಳುತ್ತಿದ್ದರೆ, ಮಕ್ಕಳ ಮುಂದೆ ಹಾಗೆಲ್ಲಾ ಹೇಳ್ಬೇಡ್ರಿ ಎಂದು ಅಮ್ಮ ಗುರ್ ಅಂತಿದ್ರು 🙂

ಮತ್ತಷ್ಟು ಓದು »

28
ಸೆಪ್ಟೆಂ

ಕ್ರಾಂತಿಕಾರಿ ಹೇಗೆ ತಾನೇ ಕಾಮ್ರೆಡ್ ಆಗಬಲ್ಲ?

 -ಸಂತೋಶ್ ತಮ್ಮಯ್ಯ

ಕೇರಳದ ತ್ರಿಶೂರ್‌ನಿಂದ ಕಣ್ಣೂರಿಗೆ ಹೋಗುತ್ತಿದ್ದರೆ ದಾರಿಯುದ್ದಕ್ಕೂ ವಿಚಿತ್ರಗಳು. ಕೆಂಪು ಕಮ್ಯುನಿಸ್ಟರ ಕಛೇರಿಗಳು. ರಸ್ತೆ ಬದಿಯುದ್ದಕ್ಕೂ ಬಂಟಿಂಗ್ಸ್‌ಗಳು. ದೊಡ್ಡ ದೊಡ್ಡ ಕೌಟೌಟ್‌ಗಳು,ಫ್ಲೆಕ್ಸ್‌ಗಳು,ಬ್ಯಾನರ್‌ಗಳು.ಈ ಬ್ಯಾನರ್‌ಗಳಲ್ಲಿ ಪೊಲೀಸ್ ಠಾಣೆಗಳಲ್ಲಿ ’ಬೇಕಾಗಿದ್ದಾರೆ’ ಎಂದು ಹಾಕುವಲ್ಲಿ ಕಾಣಬಹುದಾದ ಭಾವಚಿತ್ರಗಳು.ವೊದಲ ನೋಟಕ್ಕೇ ಗೂಂಡಗಾಳು ಎಂದು ತಿಳಿದುಬಿಡುವ ವೃತ್ತಿಪರ ರೌಡಿಗಳ ಚಿತ್ರಗಳು. ಅವರೆಲ್ಲರೂ ಎಂದೋ ಸತ್ತುಹೋದವರು. ಕಮ್ಯುನಿಸ್ಟ್ ಕಾಮ್ರೆಡರ ಪ್ರಕಾರ ಅವರೆಲ್ಲರೂ ಹುತಾತ್ಮ ಕಾಮ್ರೆಡ್‌ಗಳು.ಇವನು ಕಮ್ಯುನಿಷ್ಟರ ಪ್ರಾರಬ್ಧ,ಸಾಯಲಿ ಎನ್ನುವಂತೆಯೂ ಇಲ್ಲ.ಏಕೆಂದರೆ ಈ ಸತ್ತ ಗೂಂಡಾಗಳ ಪಕ್ಕದಲ್ಲೇ ಹ್ಯಾಟು ಹಾಕಿದ ಭಗತ್ ಸಿಂಗ್ ಚಿತ್ರ. ಕಮ್ಯುನಿಸ್ಟರ ಪ್ರಕಾರ ದೇಶಕ್ಕಾಗಿ ಪ್ರಾಣ ಕೊಟ್ಟ ಭಗತ್‌ಸಿಂಗನೂ ಎಲ್ಲೋ ಕೊಲೆಯಾಗಿ ಹೋದ ರೌಡಿಗಳಿಬ್ಬರೂ ಕಾಮ್ರೆಡ್‌ಗಳು,ಶಹೀದ್‌ಗಳು. ಇಬ್ಬರಿಗೂ ಅವರದು ಲಾಲ್ ಸಲಾಂ. ಇನ್ನೊಂದೆಡೆ ದೇಶವನ್ನೇ ಅರಿಯದ ಲೋಕಲ್ ರೌಡಿ! ಕಮ್ಯುನಿಸ್ಟರ್ ಹಾಗೆಯೆ. ಅವರು ರೌಡಿಯನ್ನು ಕಾಣುವಂತೆಯೆ ಭಗತ್‌ಸಿಂಗ್‌ರನ್ನೂ ಕಾಣುತ್ತಾರೆ.ಇಬ್ಬರನ್ನೂ ಕಾಮ್ರೆಡ್ ಎಂದೇ ಭಾವಿಸುತ್ತಾರೆ.

ಈಗೊಂದು ಐದಾರು ವರ್ಷಗಳ ಹಿಂದೆ ಮಂಗಳೂರಿನಲ್ಲಿ ಫ್ರೀಡಂ ಪೆರೇಡ್ ಎಂಬ ಕಾರ್ಯಕ್ರಮ ನಡೆಯಿತು. ಕೆಎಫ್‌ಡಿಯ ಜನರನ್ನು ಎಲ್ಲೆಲ್ಲಿಂದಲೋ ಕರೆಸಿಕೊಳ್ಳಲಾಯಿತು. ಎಲ್ಲೆಲ್ಲಿಂದಲೋ ಬಸ್ಸುಗಳು ಬಂದವು. ಗಡ್ಡಧಾರಿಗಳು,ಆರ್ಮಿಯಂತೆ ಸಮವಸ್ತ್ರ ಭರಿಸಿದವರು ಬಂದಿಳಿದಿದ್ದರು. ಮುಂದೆ ಹುಣಸೂರಿನಲ್ಲಿ ಮಕ್ಕಳನ್ನು ಕೊಂದ ಆ ಸಂಘಟನೆಯ ಜನರನ್ನು ನೋಡುತ್ತಾ ಕೆಲವರು ’ಕರಾಚಿಯಾ?’ ಎಂದು ಮಾತಾಡಿಕೊಂಡರು.ಅವರೆಲ್ಲರೂ ಮಂಗಳಾ ಸ್ಟೇಡಿಯಂನಲ್ಲಿ ಸೇರಿ ಮಿಲಿಟರಿಯಂತೆ ಕವಾಯತು ನಡೆಸಿದರು. ಹಿಂದಿಯಲ್ಲಿ ಅವರನ್ನುದ್ದೇಶಿಸಿ ಒಬ್ಬ ಮಾತಾಡಿದ್ದ. ಸಾವರ್ಕರ್‌ರನ್ನು ಹಿಗ್ಗಾಮುಗ್ಗಾ ಬೈದಿದ್ದ. ಹೋಗಿ, ದನ ಕಡಿಯಿರಿ ಎಂದಿದ್ದ. ಆತ ಮಾತನಾಡುತ್ತಿದ್ದ ವೇದಿಕೆಯ ಹೆಸರು ’ಶಹೀದ್ ಭಗತ್ ಸಿಂಗ್ ವೇದಿಕೆ’ ಆಗಿತ್ತು. ಯಾವ ಭಗತ್ ಸಿಂಗ್ ದೇಶದ ಬಗ್ಗೆ ಕನಸು ಕಂಡಿದ್ದನೋ,ಯಾವ ಭಗತ್‌ಸಿಂಗ್‌ಗೆ ಸ್ಪಷ್ಟ ಸಾಮರಸ್ಯ ಸಮಾಜದ ಕಲ್ಪನೆಯಿತ್ತೋ , ಯಾವ ಭಗತ್‌ಸಿಂಗ್‌ಗೆ ದೇಶವೆನ್ನುವುದು ಉಸಿರಾಗಿತ್ತೋ ಅಂತಹ ಭಗತ್ ಸಿಂಗ್ ಇಂದು ಇವರೆಲ್ಲರ ಸ್ವತ್ತಂತೆ. ದಾಸ್ಯದ ಬಿಡುಗಡೆ ಕ್ರಾಂತಿಯಿಂದ ಅಸಾಧ್ಯ ಎಂದಿದ್ದ  ಭಗತ್ ಸಿಂಗ್‌ನ ಹೆಸರಲ್ಲಿ ಸಾವರ್ಕರ್‌ರನ್ನು ಬಯ್ಯುವುದು, ಧಾರ್ಮಿಕತೆ ಅಷ್ಟಕ್ಕಷ್ಟೇ ಎಂಬಂತಿದ್ದ ಭಗತ್‌ಸಿಂಗ್‌ನನ್ನು ನೆಪವಾಗಿಟ್ಟುಕೊಂಡು ಗೋಹತ್ಯೆಯನ್ನು ಸಮರ್ಥಿಸುವುದು , ದೇಶಪ್ರೇಮಕ್ಕೆ ಬಣ್ಣವನ್ನು  ಬಿತ್ತುವುದು ಇಂದು ನಿರಂತರ ನಡೆಯುತ್ತಿದೆ.

ಮತ್ತಷ್ಟು ಓದು »

27
ಸೆಪ್ಟೆಂ

ಕಾವೇರಿ ನದಿನೀರು ಹಂಚಿಕೆಯಲ್ಲಿ ನಾಡಿಗಾದ ಅನ್ಯಾಯ – ಕಿರು ವರದಿ

– ಜಯಪ್ರಕಾಶ್ ಪಿ., ಕರುನಾಡ ದನಿ

ಕಾವೇರಿ ನದಿಯು ಕರ್ನಾಟಕದ ಕೊಡಗು ಜಿಲ್ಲೆಯಲ್ಲಿರುವ ಬ್ರಹ್ಮಗಿರಿ ತಪ್ಪಲಿನ ’ತಲಕಾವೇರಿ’ ಯಲ್ಲಿ ಹುಟ್ಟಿ ಕರ್ನಾಟಕದ ಬಹುತೇಕ ಭಾಗದಲ್ಲಿ ಹರಿದು ತಮಿಳುನಾಡು ಮತ್ತು ಕೇರಳದ ಕೆಲ ಭಾಗಗಳಲ್ಲಿ ಹರಿದು ಹೋಗುತ್ತದೆ. 1883 ರಲ್ಲಿ ಅಂದಿನ ಮೈಸೂರು ಪ್ರಾಂತ್ಯದ ದಿವಾನರು ಕಾವೇರಿ ನದಿನೀರನ್ನು ನೀರಾವರಿ ಯೋಜನೆಗೆ ಬಳಸಿಕೊಳ್ಳಲು ಮುಂದಾದಾಗ, ಅಂದಿನ ಬ್ರಿಟಿಷ್ ಆಳ್ವಿಕೆಯಲ್ಲಿದ್ದ ಮದರಾಸು ಪ್ರಾಂತ್ಯ ಅದನ್ನು ಸಹಿಸದೆ, ಮದರಾಸಿಗೆ ಅನುಕೂಲವಾಗುವಂತ ಅನೇಕ ಕಟ್ಟಳೆಗಳನ್ನು ಮಾಡುವ ಮೂಲಕ ತಾರತಮ್ಯ ನೀತಿ ಆರಂಭಿಸಿತು. ಅಂದು ಆರಂಭವಾದ ಕಾವೇರಿ ನದಿನೀರಿನ ಸಮಸ್ಯೆ ಸುಮಾರು 120ವರ್ಷಗಳೇ ಕಳೆದಿದ್ದರೂ,ಸರಿಯಾದ ಒಂದು ನಿಷ್ಪಕ್ಷಪಾತ ಜಲನೀತಿ ಇಲ್ಲದ ಪರಿಣಾಮವಾಗಿ ಇಂದು ಬಗೆಹರಿಯದ ಕಗ್ಗಂಟಾಗಿ ಬೆಳೆದು ನಿಂತಿದೆ.
27
ಸೆಪ್ಟೆಂ

ವೇಗವಾಗಿ ಟೊರೆಂಟ್ ಕಡತವನ್ನು ಡೌನ್ಲೋಡ್ ಮಾಡಿಕೊಳ್ಳಲು

– ಆದೇಶ್ ಕುಮಾರ್

ನಿಮಗೆ ಟೊರೆಂಟ್ ಕಡತಗಳನ್ನು ಡೌನ್ಲೋಡ್ ಮಾಡಿಕೊಳ್ಳಲು ತೊಂದರೆಯಾಗುತ್ತಿರಬೇಕು ಅಥವಾ ತುಂಬಾ ನಿಧಾನವಿರಬಹುದು. ಈಗ ಈ ನಿಧಾನ ಪ್ರಕ್ರಿಯೆಯನ್ನು ತ್ವರಿತಗೊಳಿಸಲು ಇಲ್ಲೊಂದು ಚಿಕ್ಕ ಉಪಾಯವಿದೆ.

ಈ ಕೆಳಗಿನವುಗಳನ್ನು ಅಲ್ಲಿರುವಂತೆಯೇ ಪಾಲಿಸಿ
೧.ಮೊದಲು ನಿಮಗೆ ಬೇಕಾದ ಟೊರೆಂಟ್ ಅನ್ನು ನಿಮ್ಮ ಗಣಕಕ್ಕೆ ಡೌನ್ಲೋಡ್ ಮಾಡಿಕೊಳ್ಳಿ ಅಥವಾ ಅದರ ವೆಬ್ ಅಡ್ರೆಸ್ ಅನ್ನು ಕಾಪಿ ಮಾಡಿಕೊಳ್ಳಿ.
೨.ನಂತರ www.bitlet.org ವೆಬ್ಸೈಟಿಗೆ ಭೇಟಿ ನೀಡಿ.
೩. ಅಲ್ಲಿ ನಿಮ್ಮ ಗಣಕದಲ್ಲಿರುವ ಟೊರೆಂಟ್ ಅನ್ನು ಡೌನ್ಲೋಡ್ ಮಾಡಲು “Select Local Torrent” ಬಟನ್ ಒತ್ತಿ ಅಥವಾ ನಿಮ್ಮ ಬಳಿ ಆ ಟೊರೆಂಟಿನ ವೆಬ್ ಅಡ್ರೆಸ್ ಇದ್ದಲ್ಲಿ ಕೆಳಗೆ ನೀಡಿರುವ ಚಿತ್ರದಲ್ಲಿರುವಂತೆ ಅಲ್ಲಿರುವ ಬಾಕ್ಸಿನಲ್ಲಿ ಅಂಟಿಸಿ ಮತ್ತು “Download Torrent” ಬಟನ್ ಮೇಲೆ ಒತ್ತಿ.

ಮತ್ತಷ್ಟು ಓದು »