ವಿಷಯದ ವಿವರಗಳಿಗೆ ದಾಟಿರಿ

Posts from the ‘ಲೇಖನಗಳು’ Category

11
ಜನ

ಭಗವಾನ್ ರಮಣ ಮಹರ್ಷಿಗಳ ಸಂದೇಶ

ಹೆಚ್.ಎಸ್. ಪ್ರಕಾಶ್,ಹಾಸನ

ಭಗವಾನ್ ಶ್ರೀ  ರಮಣ ಮಹರ್ಷಿಗಳು ಕೊಡುತ್ತಿದ್ದ ಸಂದೇಶಗಳು ಮನನೀಯವಾಗಿರುತ್ತಿತ್ತು. ಆದರೆ, ಅವರ ಸಂದೇಶಗಳನ್ನು ಓದಿಕೊಂಡು ಅವರ ದಿನಚರಿಯನ್ನು ಗಮನಿಸಿದರೆ ಮಹರ್ಷಿಗಳೇ ಈ ಜಗತ್ತಿಗೆ ಸಂದೇಶವಾಗಿ ಕಾಣುತ್ತಿದ್ದರು. ಅವರು ಏನು ಹೇಳುತ್ತಿದ್ದರೋ ಅವರು ಅದೇ ಆಗಿರುತ್ತಿದ್ದರು. ಇದು ಅವರ ಜೀವನದುದ್ದಕ್ಕೂ  ಧಾಖಲಾಗಿದೆ.

ಒಂದು ಸಂದರ್ಭದಲ್ಲಿ ಭಗವಾನ್ ರಮಣರು ಕೈವಲ್ಯ ನವನೀತಂನ ಎರಡು ಶ್ಲೋಕಗಳನ್ನು ಉದಾಹರಿಸಿ ಆತ್ಮಜ್ಞಾನದ ಬಗ್ಗೆ ತಿಳಿಸಿದರು.  ನವನೀತಂ, ಬೃಹದ್ದಾಕರವಾದ ಆಲದ ಮರದ ಕೆಳಗೆ ನಿಂತು ” ನಾನು ಸತ್ಯವನ್ನೇ ಹೇಳುತ್ತೇನೆ, ನೀನೆ ಈ ಜಗತ್ತಿನ ಚೈತನ್ಯ. ಈ ಜಗತ್ತಿನಲ್ಲಿ ಆಗುಹೊಗುತ್ತಿರುವ ಎಲ್ಲವನ್ನು  ಸಾಕ್ಷಿಭೂತವಾಗಿ ನೋಡುತ್ತಿರುವ ನೀನು ಯಾವತ್ತು ಬದಲಾಗದ ಸ್ಥಿತಿಯಲ್ಲಿ ಇದ್ದೀಯ. ನೀನು ಭೂತ, ಭವಿಷ್ಯ ಮತ್ತು ವರ್ತಮಾನದಲ್ಲಿ ಕೊನೆಮೊದಲಿಲ್ಲದ ಸಾಗರದ ಅಲೆಗಳ ಏರಿಳಿತದಂತೆ ಸಕಲವನ್ನು ಸಾಕ್ಷಿಯಾಗಿ  ಸದಾಕಾಲ ನೋಡುತ್ತಿರುವೆ. ನಾನು ಈಗಾಗಲೇ ಲೆಕ್ಕವಿಲ್ಲದಷ್ಟು ಜನ್ಮಗಳನ್ನು ಕಳೆದ್ದಿದ್ದರೂ ದೇಹವನ್ನೇ ಆತ್ಮವೆಂದು ತಪ್ಪಾಗಿ ಗ್ರಹಿಸಿ ಎಲ್ಲಾ ಜನ್ಮಗಳನ್ನು ಹಾಳುಮಾಡಿಕೊಂಡಿದ್ದೇನೆ. ಹೆಚ್ಚು ಕಡಿಮೆ ಎಲ್ಲಾ ಜನ್ಮದಲ್ಲೂ ಮರಳುಗಾಡಿನಲ್ಲಿ ದೂರದಿಂದ ಕಾಣುವ ಜಲದಂತೆ, ಬ್ರಾಂತಿಯಲ್ಲೇ ಮುಳುಗಿ ಜನ್ಮವನ್ನು ವ್ಯರ್ಥ ಮಾಡಿಕೊಂಡಿದ್ದೇನೆ. ಕೊನೆಗೆ ‘ನಾನು ಯಾರು?’ ಎಂಬುದನ್ನು ಅರಿಯಲು ನೀನು ನನಗೆ ಬುದ್ದಿಕೊಟ್ಟ ಮೇಲೆ ನನ್ನಲ್ಲಿ ಜನ್ಮ ಜನ್ಮಗಳಿಂದ ಇದ್ದ ಎಲ್ಲಾ ಪೊರೆಯು ಕಳಚಿತು. ಈಗ ನಾನು ಮುಕ್ತನಾದೆ. ಈಗ ನನಗೆ ಸತ್ಯದ ಅರಿವಾಯಿತು.” ಎಂದು ಹೇಳಿದ್ದನ್ನು ಮಹರ್ಷಿಗಳು ಉದಾಹರಿಸಿದರು.

 ಇನ್ನೊಂದು  ಸಂದರ್ಭದಲ್ಲಿ ಮಹರ್ಷಿಗಳು ಸತ್ಯ ಮತ್ತು  ಕರ್ಮದ  ಬಗ್ಗೆ ಮಾಡಿದ ಉಪದೇಶ ಹೀಗಿದೆ. ” ಸತ್ಯ ಯಾವಾಗಲೂ ಒಂದೇ, ಕೇವಲ ಒಂದೇ. ಈ ಸತ್ಯವನ್ನು ಅನಾದಿಕಾಲದಿಂದ ಒಬ್ಬರು ಇನ್ನೊಬ್ಬರಿಗೆ ವರ್ಗಾಯಿಸುತ್ತಲೇ ಬಂದಿದ್ದಾರೆ. ಉದ್ದಾಲಕ ಮಹರ್ಷಿಯು ಶ್ವೇತಕೆತುವಿಗೆ ವರ್ಗಾಯಿಸಿದರು. ನಂತರ ಯಮಧರ್ಮ ನಚಿಕೇತುವಿಗೆ, ಯಾಜ್ಞವಲ್ಕ್ಯರು ಗಾರ್ಗಿಗೆ, ಮೈತ್ರ್ಯೇಯಿಗೆ ಮತ್ತು ಜನಕನಿಗೆ ವರ್ಗಾಯಿಸಿದರು. ವ್ಯಾಸರು ಶುಕಮುನಿಗೆ, ವಸಿಷ್ಟರು ಶ್ರೀರಾಮನಿಗೆ , ಶ್ರೀರಾಮ ಆಂಜನೇಯನಿಗೆ , ಶ್ರೀಕೃಷ್ಣ ಅರ್ಜುನನನಿಗೆ, ಶ್ರೀ ಶಂಕರರು ಮಂಡನಮಿಶ್ರರಿಗೆ, ಶ್ರೀ ರಾಮಕೃಷ್ಣರು ವಿವೇಕಾನಂದರಿಗೆ ವರ್ಗಾಯಿಸಿದರು. ಹೀಗೆ ಸತ್ಯ ವರ್ಗಾವಣೆ ಆಗುತ್ತಲೇ ಬಂದಿದೆ.ಇವೆಲ್ಲವುಗಳ ಸಾರಸಂಗ್ರಹವೇ ಉಪನಿಷತ್ತು.  ಈ ಜಗತ್ತಿನಲ್ಲಿ ಅದೆಷ್ಟೋ ಸಂತರು ನಮ್ಮ ಮೇಲೆ ಅಪಾರ ಅನುಕಂಪದಿಂದ ಈ ಸತ್ಯದ ವಿಚಾರವನ್ನು ತಿಳಿಸುವ ಕೃಪೆಯ ಅನುಗ್ರಹ ಮಾಡಿದ್ದಾರೆ. ಇವರ ಅನುಗ್ರಹದ ಅನುಕಂಪವನ್ನು ನಾವೆಲ್ಲರೂ ಅರಿಯಬೇಕಾಗಿದೆ. ಮನುಷ್ಯ ಮೊದಲು ತನ್ನ ಆತ್ಮದ   ಅರಿವನ್ನು ತಿಳಿಯಬೇಕಾಗಿದೆ. ಆತನು ದೇಹವಲ್ಲ, ಇಂದ್ರಿಯ ಅಲ್ಲ ಅಥವ ಮನಸ್ಸು ಅಲ್ಲ. ಶುಭ್ರವಾದ ನೀಲಾಕಾಶದಂತೆ ಇರುವ ಈ ಅರಿವು ನಮ್ಮ ದೇಹದೊಳಗೆ ಇದೆಯಾದರೂ, ಕಮಲದ ಎಲೆಗಳಂತೆ ನೀರಿನಲ್ಲಿದ್ದರು, ದುಂಬಿ ಗಳು ಹೂವಿನಮೇಲೆ ಇದ್ದರು, ಯಾವುದು ಯಾವುದಕ್ಕೂ ಅಂಟಿಕೊಳ್ಳದಂತೆ  ಇದೆ.  ಆಕಾಶದಂತೆ ಭೂಮಿ, ನೀರು, ಬೆಂಕಿ, ಗಾಳಿ ಎಲ್ಲೆಡೆ ವ್ಯಾಪಿಸಿದ್ದರು ಯಾವುದು ಯಾವುದಕ್ಕೂ ಅಂಟಿಕೊಂಡಿಲ್ಲ, ಇದೆ ರೀತಿ ದೇಹ ಮತ್ತು ಮನಸ್ಸಿನಲ್ಲೆಲ್ಲ ಈ ಆತ್ಮದ ಅರಿವು ವ್ಯಾಪಿಸಿದ್ದರೂ  ಯಾವುದರಿಂದಲೂ ಇದು ಬಂಧಿತವಾಗಿಲ್ಲ. ಈ ಆತ್ಮಕ್ಕೆ ಹುಟ್ಟು ಇಲ್ಲ ಸಾವು ಇಲ್ಲ ; ಯಾವ ಬಂಧನವು ಇಲ್ಲ ಬಿಡುಗಡೆಯು ಇಲ್ಲ ;ಈ ಆತ್ಮದ ಅರಿವೇ ನಮ್ಮ ನಿಜ ಸ್ವರೂಪ. ಈ ಸತ್ಯವನ್ನು  ಪ್ರತಿಯೊಬ್ಬರೂ ಅರಿಯಬೇಕಾಗಿದೆ.
10
ಜನ

ಧ್ಯಾನಸ್ಥಯೋಗಿಯಾಗಿದೆ ಮಹಾಸಹ್ಯಗಿರಿ!

-ಬಿ.ಆರ್. ಸತ್ಯನಾರಾಯಣ್

“ನಾವು ನಿಂತ ಸ್ಥಳ ಎತ್ತರವಾಗಿತ್ತು. ಸುಮಾರು ಮೂವತ್ತು ಮೈಲಿಗಳ ದೃಶ್ಯ ನಮ್ಮೆದುರಿಗಿತ್ತು. ದಿಗಂತವಿಶ್ರಾಂತವಾದ ಸಹ್ಯಾದ್ರಿ ಪರ್ವತಶ್ರೇಣಿಗಳು ತರಂಗತರಂಗಗಳಾಗಿ ಸ್ಪರ್ಧೆಯಿಂದ ಹಬ್ಬಿದ್ದುವು. ದೂರ ಸರಿದಂತೆಲ್ಲ ಅಸ್ಫುಟವಾಗಿ ತೋರುತ್ತಿದ್ದುವು. ಕಣಿವೆಗಳಲ್ಲಿ ಇಬ್ಬನಿಯ ಬಲ್ಗಡಲು ತುಂಬಿತ್ತು. ವೀಚಿವಿಕ್ಷೋಭಿತ ಶ್ವೇತಫೇನಾವೃತ ಮಹಾವಾರಿಧಿಯಂತೆ ಪಸರಿಸಿದ್ದ ತುಷಾರ ಸಮುದ್ರದಲ್ಲಿ ಶ್ಯಾಮಲಗಿರಿಶೃಂಗಳು ದ್ವೀಪಗಳಂತೆ ತಲೆಯೆತ್ತಿಕೊಂಡಿದ್ದುವು. ಕಂದರ ಪ್ರಾಂತಗಳಲ್ಲಿದ್ದ ಗದ್ದೆ ತೋಟ ಹಳ್ಳಿ ಕಾಡು ಎಲ್ಲವೂ ಹೆಸರಿಲ್ಲದಂತೆ ಅಳಿಸಿಹೋಗಿದ್ದುವು. ದೃಷ್ಟಿಸೀಮೆಯನ್ನೆಲ್ಲ ಆವರಿಸಿದ್ದ ತುಷಾರಜಲನಿಧಿಯಲ್ಲಿ ಹಡಗುಗಳಲ್ಲಿ ಕುಳಿತು ಸಂಚರಿಸಬಹುದೆಂಬಂತಿತ್ತು! ನಾವು ಮೂವರೂ ಅವಾಕ್ಕಾಗಿ ನಿಂತು ನೋಡಿದೆವು. ಇಬ್ಬನಿಯ ಕಡಲಿನಿಂದ ತಲೆಯೆತ್ತಿ ನಿಂತಿದ್ದ ಗಿರಿಶೃಂಗಗಳು ಮುಂಬೆಳಕಿನ ಹೊಂಬಣ್ಣವನ್ನು ಹೊದೆದಿದ್ದುವು. ಬಾಲಸೂರ್ಯನ ಸ್ನಿಗ್ಧಕೋಮಲ ಸುವರ್ಣಜ್ಯೋತಿಯಿಂದ ವೃಕ್ಷಾರಜಿಗಳ ಶ್ಯಾಮಲಪರ್ಣವಿತಾನಗಳಲ್ಲಿ ಖಚಿತವಾಗಿದ್ದ ಸಹಸ್ರ ಸಹಸ್ರ ಹಿಮಮಣಿಗಳು ಅನರ್ಘ್ಯರತ್ನಸಮೂಹಗಳಂತೆ ವಿರಾಜಿಸುತ್ತಿದ್ದುವು. ಬೆಳ್ನೊರೆಯಂತೆ ಹಬ್ಬಿದ ಇಬ್ಬನಿಯ ಕಡಲಿನಲ್ಲಿ ಮುಳುಗಿಹೋಗಿದ್ದ ಕಣಿವೆಯ ಕಾಡುಗಳಿಂದ ಕೇಳಿಬರುತ್ತಿದ್ದ ವಿವಿಧವಿಹಂಗಮಗಳ ಮಧುರವಾಣಿ ಅದೃಶ್ಯರಾಗಿ ಉಲಿಯುವ ಗಂಧರ್ವಕಿನ್ನರರ ಗಾಯನದಂತೆ ಸುಮನೋಹರವಾಗಿತ್ತು. ನಾವು ಮೂವರೂ ಅವಾಕ್ಕಾಗಿ ನಿಂತು ನೋಡಿದೆವು! ನೋಡಿದೆವು, ನೋಡಿದೆವು, ಸುಮ್ಮನೆ ಭಾವಾವಿಷ್ಟರಾಗಿ!”

ಸ್ನೇಹಿತರೊಂದಿಗೆ ಇರುಳು ಬೇಟೆಗೆ ಹೋಗಿದ್ದ ಯುವಕವಿ ಪುಟ್ಟಪ್ಪ, ತಾನು ಕುಳಿತಿದ್ದ ಜಾಗ, ಸಮಯ ಎಲ್ಲವನ್ನೂ ಮರೆತು ಪ್ರಕೃತಿ ಉಪಾಸಕನಾಗಿಬಿಡುತ್ತಾನೆ. ’ಜೊನ್ನದ ಬಣ್ಣದಿ ತುಂಬಿದ ಬಿಂಬದ ಹೊನ್ನಿನ ಸೊನ್ನೆಯು ಮೂಡಿದುದು’ ಎಂಬಂತೆ ಕವಿಗೆ ಕಂಡ ಚಂದ್ರೋದಯ ’ಬೇಟೆಗಾರನಿಗೆ ಬೇಟೆಯಾಗದಿದ್ದರೂ ಕಬ್ಬಿಗನಿಗೆ ಬೇಟೆಯಾಯಿತು’ ಅನ್ನಿಸಿಬಿಡುತ್ತದೆ. ಇಡೀ ರಾತ್ರಿಯನ್ನು ಹೀಗೇ ಕಳೆದು, ನಸುಕಿನಲ್ಲಿಯೇ ಬರಿಗೈಯಲ್ಲಿ ಸ್ನೇಹಿತರೊಂದಿಗೆ ಮನೆಗೆ ಹಿಂತಿರುಗುವಾಗ ’ಅರುಣೋದಯದ ಹೇಮಜ್ಯೋತಿ ಪೂರ್ವದಿಗ್ಭಾಗದಲ್ಲಿ ಪ್ರಬಲಿಸುತ್ತಿತ್ತು.’ ಬರುವ ದಾರಿಯಲ್ಲಿ ಬಂಡೆಗಳಿಂದ ಬಯಲಾದ ಪ್ರದೇಶದಲ್ಲಿ ನಿಂತು ನೋಡಿದಾಗ ಕಂಡ ದೃಶ್ಯವೇ ಮೇಲೆ ಕವಿಯ ಮಾತುಗಳಲ್ಲಿ ಮೂಡಿದೆ. ಅಂದು ಆ ದೃಶ್ಯವನ್ನು ಕವಿಗೆ ತೋರಿಸಿದ ಆ ಜಾಗವೇ ’ಕವಿಶೈಲ’. ಕುವೆಂಪು ಸಾಹಿತ್ಯದ ಪರಿಚಯವಿದ್ದವರೆಲ್ಲರಿಗೂ ’ಕವಿಶೈಲ’ ಗೊತ್ತಿರುತ್ತದೆ.

ಕುಪ್ಪಳಿ ಕವಿಮನೆಯ ಹಿಂಬದಿಗೆ ದಿಗಂತಮುಖಿಯಾಗಿರುವ ಪರ್ವತವೇ ಕವಿಶೈಲ. ಕಲೆಯ ಕಣ್ಣಿಲ್ಲದವರಿಗೆ ಒಂದು ಕಲ್ಲುಕಾಡು; ಕಲಾವಂತನಿಗೆ ಸಗ್ಗವೀಡು ಆಗಿರುವ ಕವಿಶೈಲದ ನಿಜಮನಾಮ ಆಗ್ಗೆ ’ದಿಬ್ಬಣಕಲ್ಲು’. ನಂತರ, ಅದರ ಕಾರಣದಿಂದಲೇ ಪುಟ್ಟಪ್ಪ ಕುವೆಂಪು ಆದ ಮೇಲೆ ಕವಿಶೈಲವೆಂದು ಹೆಸರು ಪಡೆದ ಗಿರಿ. ಅಲ್ಲಿಯ ಒಂದೊಂದು ವಸ್ತುಗಳು, ದೃಶ್ಯಗಳು, ಭೂತದಸಿಲೇಟು, ಬೂರುಗದ ಮರ, ನಿಲುವುಗಲ್ಲು, ಸೂರ್ಯೋದಯ, ಸೂರ್ಯಾಸ್ತ ಎಲ್ಲವೂ ಕುವೆಂಪು ಸಾಹಿತ್ಯದಲ್ಲಿ ಸ್ಥಾಯಿಯಾಗಿ, ಓದುಗರಲ್ಲಿ ಸಂಚಾರಿಯಾಗಿಬಿಟ್ಟಿವೆ.

ಬೇಟೆಗಾರರಾಗಿ ಬನಕೆ ಹೋದವರು ಮರಳಿ ಮನೆಗೆ ಬಂದುದು ಕಬ್ಬಿಗರಾಗಿ! ಕವಿಶೈಲದ ಬಗ್ಗೆ ಕವಿ ಕೇವಲ ಹನ್ನೆರಡು ದಿನಗಳಲ್ಲಿ ಆರು ಸಾನೆಟ್ಟುಗಳನ್ನು ಬರೆದಿದ್ದಾರೆ! ಮೊದಲ ಒಂದನ್ನು ಬಿಟ್ಟರೆ ಉಳಿದ ಐದು ಸಾನೆಟ್ಟುಗಳು ಐದೇ ದಿನದಲ್ಲಿ ದಿನಕ್ಕೊಂದರಂತೆ ರಚನೆಯಾಗಿವೆ! ಮಲೆನಾಡಿನ ಚಿತ್ರಗಳು ಪುಸ್ತಕದಲ್ಲಿ ಮೇಲೆ ವರ್ಣಿಸಿರುವ ಕವಿಶೈಲದ ವರ್ಣನೆಗೆ ಸಂವಾದಿಯಾಗಿ ೧೬.೪.೧೯೩೪ರಲ್ಲಿ ಮೊದಲನೆಯ ಸಾನೆಟ್ ರಚಿತವಾಗಿದೆ. ಮತ್ತಷ್ಟು ಓದು »

9
ಜನ

ಸಂಸ್ಕೃತಿ ಸಂಕಥನ – 17 ಜಾತಿ, ರಿಲಿಜನ್ ಹಾಗೂ ಸೆಕ್ಯುಲರಿಸಂ ಭಗವದ್ಗೀತೆ ವಿವಾದ

-ರಮಾನಂದ ಐನಕೈ

ಕೇವಲ ಭಗವದ್ಗೀತೆ ಮಾತ್ರವಲ್ಲ, ಇತ್ತೀಚಿನ ದಿನಗಳಲ್ಲಿ ಭಾರತೀಯ ಸಂಸ್ಕೃತಿ ಹಾಗೂ ಸಂಪ್ರ ದಾಯಗಳಿಗೆ ಸಂಬಂಧಪಟ್ಟಂತೆ ಅನೇಕ ಸಂಗತಿ ಗಳು ವಿವಾದಕ್ಕೆ ಕಾರಣವಾಗುತ್ತಿವೆ. ಹಾಗೂ ಇವೆಲ್ಲ ರಾಜಕೀಯ ಸ್ವರೂಪ ಪಡೆದು ಸೆಕ್ಯುಲರ್ ಪ್ರಭುತ್ವ ಸಂದಿಗ್ಧದಲ್ಲಿ ಸಿಲುಕುವಂತಾಗುತ್ತಿದೆ. ಹಾಗಾದರೆ ಈ ದೇಶದಲ್ಲಿ ಏನು ನಡೆಯುತ್ತಿದೆ?

ಭಗವದ್ಗೀತೆ ವಿವಾದಕ್ಕೆ ಸಂಬಂಧಪಟ್ಟಂತೆ ಪತ್ರಿಕೆಗಳಲ್ಲಿ ದಿನನಿತ್ಯ ಹೇಳಿಕೆಗಳು ಬರುತ್ತಲಿವೆ. ಈ ಕುರಿತು ಒಂದು ಅಭಿಪ್ರಾಯ ರೂಪಿಸುವ ಪ್ರಯತ್ನ ನಡೆಯುತ್ತಿದೆ. ಅಂದರೆ ಭಾರತೀಯ ಸಂಸ್ಕೃತಿಯ ಕುರಿತಾದ ಪರಸ್ಪರ ತಪ್ಪು ತಿಳುವಳಿಕೆ ಗಾಗಿ ಭಗವದ್ಗೀತೆಯನ್ನು ಬಹಿರಂಗವಾಗಿ ಹರಾಜಿಗೆ ಹಾಕುವ ಪ್ರಯತ್ನ ಮಾಡುತ್ತಿದ್ದಾರೆ. ಗೀತೆಯಿಂದ ಶೂದ್ರರಿಗೆ ಹಾಗೂ ದಲಿತರಿಗೆ ಭಾರೀ ಅಪಾಯವಿದೆ ಎಂದು ಭಯ ಹುಟ್ಟಿಸಲು ಪ್ರಯತ್ನಿ ಸುತ್ತಿದ್ದಾರೆ. ಇಲ್ಲಿ ಒಂದನ್ನು ಗಮನಿಸಬೇಕು. ಇವೆಲ್ಲ ಸಾಮಾನ್ಯ ಜನರ ಅಥವಾ ಸಮೂಹದ ಅಭಿಪ್ರಾಯಗಳಲ್ಲ. ಆಯಾ ಸಮುದಾಯದ ವಕ್ತಾರರು ಅಥವಾ ಚಿಂತಕರೆನಿಸಿಕೊಂಡವರು ಮಾಧ್ಯಮಗಳ ಮೂಲಕ ಈ ರೀತಿ ಧರ್ಮಯುದ್ಧ ಮಾಡುತ್ತಿದ್ದಾರೆ. ಗಂಡ-ಹೆಂಡತಿ ಜಗಳದಲ್ಲಿ ಕೂಸು ಬಡವಾಯ್ತು ಎಂಬಂತಾಗಿದೆ ಪರಿಸ್ಥಿತಿ. ಈ ಪರಿ ಅರೆಬರೆ ಚಿಂತಕರನ್ನು ನೋಡಿದರೆ ಒಂದು ದಿನ ದೇವರ ವಿಗ್ರಹಗಳನ್ನು ಕಿತ್ತು ಕೈಯಲ್ಲಿ ಆಯುಧ ವಾಗಿ ಹಿಡಿದು ಹೊಡೆದುಕೊಂಡರೆ ಅಚ್ಚರಿಯೇ ನಿಲ್ಲ.

ಈ ಪರಿಸ್ಥಿತಿಗೆ ಮುಖ್ಯ ಕಾರಣವೆಂದರೆ ಭಾರತೀಯ ಸಂಸ್ಕೃತಿಯನ್ನು ರಿಲಿಜನ್ ಎಂದು ವ್ಯಾಖ್ಯಾನಿಸಿಕೊಳ್ಳುತ್ತಿರುವುದು. ಯುರೋಪಿ ಯನ್ನರು ಇಡೀ ಭಾರತೀಯ ಸಂಸ್ಕೃತಿಯನ್ನು ಸೇರಿಸಿ ಹಿಂದೂಯಿಸಂ ಎಂದು ಕರೆದು ಅದಕ್ಕೆ ರಿಲಿ ಜನ್ನಿನ ಲಕ್ಷಣ ಸೇರಿಸಲು ಪ್ರಯತ್ನಿಸಿದರು. ಆದ್ದರಿಂದಲೇ ನಾವಿಂದು ಹಿಂದೂಯಿಸಂ ಅಂದರೆ ಇಸ್ಲಾಂ ಹಾಗೂ ಕ್ರಿಶ್ಚಿಯಾನಿಟಿ ಇದ್ದಹಾಗೆ ಒಂದು ಅಖಂಡವಾದ ರಿಲಿಜನ್ ಎಂದು ತಿಳಿದುಕೊಂಡಿ ದ್ದೇವೆ. ಹಾಗಾಗಿ ಹಿಂದೂ ಸಂಪ್ರದಾಯಗಳನ್ನೆಲ್ಲ ರಿಲೀಜಿಯಸ್ ಚಟುವಟಿಕೆಯೆಂಬಂತೆ ಅತ್ಯಂತ ಗುಮಾನಿಯಿಂದ ನೋಡಲಾಗುತ್ತದೆ. ರಿಲಿಜೀ ಯಸ್ ಚಟುವಟಿಕೆಗಳ ಸಾರ್ವಜನೀಕರಣವನ್ನು ಸೆಕ್ಯುಲರ್ ನೀತಿ ಒಪ್ಪುವುದಿಲ್ಲ. ಅದಕ್ಕಾಗಿ ಎಡ ಪಂಥೀಯ ಚಿಂತಕರಿಗೆ ಇಂಥ ಸಾಂಪ್ರದಾಯಿಕ ಆಚರಣೆಗಳೆಲ್ಲ ನಿಷಿದ್ಧ ಹಾಗೂ ಮೌಢ್ಯ.

ಮತ್ತಷ್ಟು ಓದು »

6
ಜನ

ಸಮಾನೋ ಮಂತ್ರ: ಸಮಿತಿ: ಸಮಾನೀ-ಒಂದು ಚಿಂತನೆ

-ಹರಿಹರಪುರಶ್ರೀಧರ್

ಅನೇಕ ದಿನಗಳಿಂದ ನನ್ನ ಮನದೊಳಗೆ ಒಂದು ಚಿಂತೆ ಕಾಡುತ್ತಿದೆ.ನಮಗೆಲ್ಲಾ ಜನ್ಮಕೊಟ್ಟಈ ನೆಲಕ್ಕೆ ಪುಣ್ಯಭೂಮಿ, ಮೋಕ್ಷಭೂಮಿ, ತ್ಯಾಗಭೂಮಿ,ದೇವಭೂಮಿ, ಎಂದೆಲ್ಲಾ ಕವಿಗಳು ಬಣ್ಣಿಸಿದ್ದಾರೆ.ನಮ್ಮ ಋಷಿಪುಂಗವರ ತಪಸ್ಸಿನಿಂದ, ಅವರ ಆದರ್ಶಮಯ ಜೀವನದಿಂದ ನಮ್ಮ ದೇಶಕ್ಕೆ “ವಿಶ್ವಗುರುವಿನ” ಸ್ಥಾನ ಲಭಿಸಿತ್ತು ಎಂಬ ವಿಚಾರವನ್ನೂ ಸಹ ಕೇಳುತ್ತೇವೆ.ನಮ್ಮ ಈ ನೆಲದಲ್ಲಿಯೇ “ಮುತ್ತು ರತ್ನಗಳನ್ನು ಬಳ್ಳದಿಂದ ಅಳೆದು ಮಾರುತ್ತಿದರೆಂದೂ” ಕೇಳಿದ್ದೇವೆ.ಇವೆಲ್ಲದರ ಜೊತೆಗೆ ನಮ್ಮ ನಿತ್ಯ ಸಂಕಲ್ಪವಾದರೋ ” ಸರ್ವೇ ಭವಂತು ಸುಖಿನ:…….ಮಾ ಕಶ್ಚಿತ್ ದು:ಖ ಭಾಗ್ಭವೇತ್”-ಎಲ್ಲರೂ ಸುಖವಾಗಿರಬೇಕು…….., ಯಾರಿಗೂ ದು:ಖ ಬರುವುದು ಬೇಡ”. ಇದು ನಮ್ಮ ನಿತ್ಯ ಪ್ರಾರ್ಥನೆ ಯಾಗಿತ್ತು. ಆದರೆ ಎಲ್ಲೋ ಎನೋ ತಪ್ಪಾಗಿದೆಯಲ್ಲಾ! ಯಾವುದೋ ಕೊಂಡಿ ಕಳಚಿದೆಯಲ್ಲಾ!!

 ಮೊನ್ನೆ ನಾನು ಅಗ್ನಿಹೋತ್ರ ಮಾಡುತ್ತಾ ಕುಳಿತಿದ್ದೆ. ನಮ್ಮಕ್ಕ ನಮ್ಮ ಮನೆಗೆ ಬಂದವರು ” ಇದೇನೋ ನೀನು “ಹೋಮ ಮಾಡುತ್ತಿದ್ದೀಯಾ? ಯಜುರ್ವೇದವರು ಮಾಡಬೇಕಾದ್ದು,ಋಗ್ವೇದಿಯಾದ ನೀನು ಮಾಡುತ್ತಿದ್ದೀಯಲ್ಲಾ!!” ವೇದಸುಧೆಯ ವಾರ್ಷಿಕೋತ್ಸವದಲ್ಲಿ ನಡೆದ ಅಗ್ನಿಹೋತ್ರ ಕಾರ್ಯಕ್ರಮದಲ್ಲಿ ಸ್ವತ: ಅಗ್ನಿಹೋತ್ರ ಮಾಡಿದ್ದ ನಮ್ಮ ಅಕ್ಕ ಶ್ರೀ ಸುಧಾಕರ ಶರ್ಮರಿಂದ ಅಗ್ನಿಹೋತ್ರದ ಅರ್ಥವಿವರಣೆಯನ್ನು ಸವಿಸ್ತಾರವಾಗಿ ಕೇಳಿದ್ದರು. ಅಂದು ಮೆಚ್ಚುಗೆ ವ್ಯಕ್ತಪಡಿಸಿದ್ದವರು. ಇವರೇ. ಆದರೆ ಅವರ ಬಾಯಲ್ಲಿಯೇ ಈ ಪ್ರಶ್ನೆ. ನಾನು ನಮ್ಮಕ್ಕನಿಗೆ ಹೇಳಿದೆ” ಆರೋಗ್ಯ ನಿಮಗೆ ಮಾತ್ರ ಬೇಕೋ? ಬೇರೆಯವರಿಗೆ ಬೇಡವೋ?

ಅವರು ನಿರುತ್ತರರಾಗಿದ್ದರು.

5
ಜನ

ಅಗೋಚರತೆ (ಇನ್ವಿಸಿಬಿಲಿಟಿ)

ರಾವ್ ಎವಿಜಿ

ಮಿಸ್ಟರ್ ಇಂಡಿಯ, ಹ್ಯಾರಿ ಪಾಟ್ಟರ್, ಟಾಮ್ ಅಂಡ್ ಜೆರ್ರಿ ಇವೇ ಮೊದಲಾದ ಕೆಲವು ಚಲನಚಿತ್ರಗಳಲ್ಲಿ ಏನೋ ಒಂದು ದ್ರಾವಣ ಕುಡಿಯುವುದರಿಂದಲೋ, ಒಂದು ವಿಶಿಷ್ಟ ಮೇಲಂಗಿ ಅಥವ ಹೊದಿಕೆಯನ್ನು ಧರಿಸುವುದರಿಂದಲೋ, ಉಂಗುರವೊಂದನ್ನು ವಿಶಿಷ್ಟ ರೀತಿಯಲ್ಲಿ ಹಾಕಿಕೊಳ್ಳುವುದರಿಂದಲೋ ತಮಗೆ ಬೇಕೆನಿಸಿದಾಗ ಅದೃಶ್ಯರಾಗುವ ಪಾತ್ರಗಳನ್ನು ನೀವು ಗಮನಿಸಿರುತ್ತೀರಿ. ಬೇಕೆನಿಸಿದಾಗ ಅದೃಶ್ಯವಾಗುವುದು, ಅರ್ಥಾತ್ ಅಗೋಚರತೆ ಸಾಧನೀಯವೇ?

ಅಪಾರದರ್ಶಕ, ಅರ್ಥಾತ್ ಅಪಾರಕ ವಸ್ತುವಿನ ಮೇಲೆ ಬಿದ್ದ ಬೆಳಕಿನ ಕಿರಣಗಳು ಪ್ರತಿಫಲನಗೊಂಡು ನಮ್ಮ ಅಕ್ಷಿಪಟಲದ ಮೇಲೆ ಬಿಂಬವನ್ನು ಮೂಡಿಸಿದರೆ ಅದು ನಮಗೆ ಗೋಚರಿಸುತ್ತದೆ (ಚಿತ್ರ ೧). ಇದಕ್ಕೆ ಬದಲಾಗಿ ವಸ್ತು ತನ್ನ ಮೇಲೆ ಬಿದ್ದ ಬೆಳಕಿನ ಕಿರಣಗಳನ್ನು ಸಂಪೂರ್ಣವಾಗಿ ಹೀರಿಕೊಂಡರೆ ಏನಾಗುತ್ತದೆ ಊಹಿಸಬಲ್ಲಿರಾ? ಶಾಸ್ತ್ರ ರೀತ್ಯಾ ಆ ವಸ್ತು ನಮಗೆ ಗೋಚರಿಸಕೂಡದಾದರೂ ಅದರ ಆಸುಪಾಸಿನ ಎಲ್ಲ ವಸ್ತುಗಳೂ ನಮಗೆ ಗೋಚರಿಸುವುದರಿಂದ ಆ ವಸ್ತು ಎಷ್ಟು ಸ್ಥಳವನ್ನು ಆಕ್ರಮಿಸಿಕೊಂಡಿದೆಯೋ ಅಷ್ಟು ಸ್ಥಳ ಕಪ್ಪಾಗಿ ಗೋಚರಿಸುತ್ತದೆ! ಅದರ ಹಿಂದೆ ಏನಿದೆಯೋ ಅದು ನಮಗೆ ಗೋಚರಿಸುವುದಿಲ್ಲ (ಚಿತ್ರ ೨). ತತ್ಪರಿಣಾಮವಾಗಿ, ಆ ವಸ್ತುವಿನ ಸ್ವರೂಪ ನಮಗೆ ಗೋಚರಿಸದೇ ಇದ್ದರೂ ಅಲ್ಲಿ ಏನೋ ಒಂದು ಇದೆ ಎಂಬುದು ತಿಳಿಯುತ್ತದೆ. ಪರಿಪೂರ್ಣ ಅಗೋಚರತೆ ಆಗಬೇಕಾದರೆ ವಸ್ತು ನಮಗೆ ಗೋಚರಿಸ ಕೂಡದು, ಅದರ ಹಿಂದಿರುವ ವಸ್ತುಗಳು ನಮಗೆ ಗೋಚರಿಸಬೇಕು (ಚಿತ್ರ ೩). ವಸ್ತು ಯಾವದೋ ಒಂದು ತಂತ್ರದಿಂದ ಪಾರಕವಾದರೆ ಇಂತು ಆಗ ಬೇಕಲ್ಲವೇ? ಇಂತಾಗುವುದರಲ್ಲಿ ಒಂದು ಸಮಸ್ಯೆ ಇದೆ. ಈ ರೀತಿ ಅಗೋಚರವಾದ ವ್ಯಕ್ತಿಯ ಮೂಲಕ, (ಅಕ್ಷಿಪಟಲವೂ ಸೇರಿದಂತೆ ಪ್ರತಿಯೊಂದು ಅಂಗದ ಮೂಲಕ) ಬೆಳಕಿನ ಕಿರಣಗಳು ಹಾದು ಹೋಗುವುದರಿಂದ ಅವನಿಗೆ ಏನೂ ಕಾಣಿಸುವದಿಲ್ಲ. ಅರ್ಥಾತ್, ಆತ ಸಂಪೂರ್ಣ ಕುರುಡು ವ್ಯಕ್ತಿ ಆಗಲೇ ಬೇಕು!! ಇಂಥ ಅಗೋಚರತೆಯಿಂದ ಏನು ಲಾಭ?

ಮತ್ತಷ್ಟು ಓದು »

4
ಜನ

ಸ್ಥಳೀಯ ಭಾಷೆಗಳ ಬಳಕೆಯ ಬಗೆಗೆ RBI ಹಾಗೂ BCSBI ಏನು ಹೇಳುತ್ತದೆ?

-ರವಿ ಸಾವ್ಕರ್

ಇತ್ತೀಚಿಗೆ ಹಲವಾರು ಕನ್ನಡಿಗ ಗ್ರಾಹಕರು ತಮಗೆ ಬ್ಯಾಂಕ್ ಗಳಲ್ಲಿ ಕನ್ನಡದಲ್ಲಿ ಸೇವೆ ಕೊಡಬೇಕು ಎಂದು ಬ್ಯಾಂಕ್ ಗಳಿಗೆ ದೂರನ್ನು ಕೊಟ್ಟಿದಾರೆ. ಕೆಲವು ಬ್ಯಾಂಕ್ ಗಳು ಗ್ರಾಹಕರ ದೂರಿಗೆ ಸ್ಪಂದಿಸಿ ಕನ್ನಡದಲ್ಲಿ ಸೇವೆ ಕೊಟ್ಟಿದಾರೆ. ಮತ್ತೆ ಕೆಲವರು ಕೊಡುವುದಿಲ್ಲ ಎಂದು ಸಾರಾಸಗಟಾಗಿ ತಿರಸ್ಕರಿಸಿದ ಸಂಗತಿಗಳು ಇದೆ.

RBI ಹಾಗೂ BCSBI ಭಾಷೆಯ ಬಳಕೆಯ ಬಗ್ಗೆ ಏನು ಹೇಳುತ್ತದೆ ಹಾಗೂ ಕನ್ನಡದಲ್ಲಿ ಸೇವೆ ಕೊಡಲು ನಿರಾಕರಿಸಿದರೆ ಬ್ಯಾಂಕ್ ಗಳ ಲೋಕಪಾಲರಿಗೆ(Banking ombudsman) ದೂರು ಕೊಡುವುದು ಹೇಗೆ ಅಂತ ಇಲ್ಲಿ ಕಲೆ ಹಾಕಲಾಗಿದೆ. ಕನ್ನಡದಲ್ಲಿ ಸೇವೆ ಸಿಗದೇ ಹೋದರೆ ಈ ನಿಯಮಗಳನ್ನು ತಿಳಿಸಿ ಬ್ಯಾಂಕ್ ಗಳಿಗೆ ದೂರು ಕೊಡಿ.

ಭಾಷಾ ಆಯಾಮದಲ್ಲಿ RBI ನಿರ್ದೇಶನ ಹೀಗಿದೆ
“In order to ensure that banking facilities percolate to the vast sections of the population,banks should make available all printed material used by retail customers including account opening forms, pay-in-slips, passbooks etc. in trilingual form i.e. English, Hindi and the concerned Regional Language.”
http://rbi.org.in/scripts/BS_ViewMasCirculardetails.aspx?Id=2673&Mode=0
“ಎಲ್ಲ ಜನರಿಗೆ ಉಪಯೋಗ ಆಗುವಂತೆ ಚೆಕ್ಕು, ಪಾಸ್ ಬುಕ್ ಗಳು ಸೇರಿದಂತೆ ಎಲ್ಲ ಮುದ್ರಿತ ಸಾಮಗ್ರಿಗಳನ್ನು (printed material) ಸ್ಥಳೀಯ ಭಾಷೆಗಳಲ್ಲಿಯೂ ಕೊಡಬೇಕು ”

ಭಾಷಾ ಆಯಾಮದಲ್ಲಿ Code of Banks Commitment to Customers ಏನು ಹೇಳುತ್ತದೆ?
“Key commitment of BCSBI is to help You To Understand How Our Financial Products And Services Work By Giving you information about them in any one or more of the following languages – Hindi, English or the appropriate local language

http://www.bcsbi.org.in/pdf/CodeOfBanks_Aug09.pdf ಮತ್ತಷ್ಟು ಓದು »

3
ಜನ

ನನ್ನ ಆಕಾಶಯಾನ

ಕವಿ ನಾಗರಾಜ್

ನನ್ನ ಮನೆಯ ಮೇಲ್ಭಾಗದ ತಾರಸಿಯಲ್ಲಿ ಕುರ್ಚಿ ಹಾಕಿಕೊಂಡು ಕುಳಿತು ಶುಭ್ರ ಆಗಸವನ್ನು ನೋಡುತ್ತಾ ಕುಳಿತಿದ್ದೆ. ನೋಡುತ್ತಾ ನೋಡುತ್ತಾ ಹೋದಂತೆ ಆಕಾಶ ಮಂದಹಾಸ ಬೀರುತ್ತಾ ತೆರೆದುಕೊಳ್ಳುತ್ತಾ ಹೋಯಿತು. ಹೊರಗಣ್ಣು, ಒಳಗಣ್ಣುಗಳನ್ನು ಅಗಲಿಸಿ ವಿಸ್ಮಯದಿಂದ ನೋಡುತ್ತಿದ್ದ ನಾನು ಒಂದು ರೀತಿಯ ಅನಿರ್ವಚನೀಯ ಭಾವಪರವಶತೆಗೆ ಒಳಗಾಗಿದ್ದೆ. ಮನದೊಳಗೆ ಅರಿವಿಲ್ಲದಂತೆ ಮಂಥನ ಆರಂಭಗೊಂಡಿತ್ತು. ಆಕಾಶ ಎಂದಾಕ್ಷಣ ಅಚಾನಕವಾಗಿ ಮೇಲೆ ನೋಡುತ್ತೇವೆ. ಹಾಗಾದರೆ ಆಕಾಶ ಮೇಲೆ ಇದೆಯೇ? ಮೇಲೆ ಇದ್ದರೆ ಎಷ್ಟು ಮೇಲೆ ಇದೆ? ನಾವು ಅದನ್ನು ಕಾಣಲು ಎಷ್ಟು ಮೇಲೆ ಹೋದರೂ ಅದು ಅಷ್ಟೂ ಅಷ್ಟೂ ಮೇಲೆಯೇ ಹೋಗುತ್ತದಲ್ಲಾ! ಹಾಗಾದರೆ ಅದು ಮರೀಚಿಕೆಯೇ? ಹಾಗಾದರೆ ನಾವು ಕಾಣುವ ಆಕಾಶ ಅನ್ನುವುದಾದರೂ ಏನು? ಅದು ನಿಜಕ್ಕೂ ಇದೆಯೇ? ಇಲ್ಲ ಎನ್ನಲಾಗುವುದಿಲ್ಲ, ಆಕಾಶ ಇದೆ. ಆದರೆ ಅದು ಹೇಗಿದೆ? ಕಂಡೂ ಕಾಣದ ಆಕಾಶ ನಿಜಕ್ಕೂ ಒಂದು ಅದ್ಭುತ. ಆಕಾಶವನ್ನು ವೈಜ್ಞಾನಿಕವಾಗಿ ವಿವರಿಸಲು ಮಾನವನಿಗೆ ಶಕ್ಯವೆಂದು ನನಗೆ ಅನ್ನಿಸುತ್ತಿಲ್ಲ. ವೈಜ್ಞಾನಿಕವಾಗಿ ವಿವರಿಸಲು ಬರುವುದಿಲ್ಲವೆಂದು ಆಕಾಶವನ್ನು ಇಲ್ಲವೆಂದು ಹೇಳಲಾಗುವುದೆ? ಕಣ್ಣಿಗೆ ಕಾಣುವುವದನ್ನು ವಿಸ್ತರಿಸಿ ಏನು ಹೇಳಬಹುದೆಂದರೆ ಇಡೀ ಬ್ರಹ್ಮಾಂಡದ ವ್ಯಾಪ್ತಿ ಎಷ್ಟು ವಿಶಾಲವೋ, ವಿಸ್ತಾರವೋ ಅಷ್ಟೂ ವಿಸ್ತಾರದಲ್ಲಿ ಆಕಾಶ ಆವರಿಸಿದೆಯೆಂದು ಮಾತ್ರ ಹೇಳಬಹುದು.
ಆಕಾಶ ಅಂದರೇನು? ಗೊತ್ತಿಲ್ಲ. ಆಕಾಶ ಎಷ್ಟು ದೊಡ್ಡದು? ಗೊತ್ತಿಲ್ಲ. ಆಕಾಶ ಹೇಗಿದೆ? ಗೊತ್ತಿಲ್ಲ. ಚಂದ್ರ ಎಲ್ಲಿದ್ದಾನೆ? ಆಕಾಶದಲ್ಲಿದ್ದಾನೆ. ಭೂಮಿ ಎಲ್ಲಿದೆ? ಅದೂ ಆಕಾಶದಲ್ಲಿದೆ. ಚಂದ್ರನ ಮೇಲೆ ನಿಂತವರಿಗೆ ಭೂಮಿ ಆಕಾಶದಲ್ಲಿರುವಂತೆ ಕಾಣುತ್ತದೆ. ಈರೀತಿ ಯೋಚಿಸಿದಾಗ ಗೊತ್ತಾಗುತ್ತದೆ, ಆಕಾಶ ಮೇಲೆ ಮಾತ್ರ ಇಲ್ಲ, ಎಲ್ಲೆಲ್ಲೂಇದೆ. ಎಲ್ಲೆಲ್ಲೂ ಅಂದರೆ ಎಲ್ಲೆಲ್ಲೂ! ಈ ಜಗತ್ತು/ವಿಶ್ವ/ಬ್ರಹ್ಮಾಂಡ ಎಂದರೆ ಕೇವಲ ಒಂದು ಭೂಮಿಯಲ್ಲ, ಒಂದು ಚಂದ್ರನಲ್ಲ, ಒಂದು ಸೂರ್ಯನಲ್ಲ. ಇಂತಹ ಅಸಂಖ್ಯ ಭೂಮಿ, ಸೂರ್ಯ, ಚಂದ್ರ, ಎಣಿಕೆಗೆ ಸಿಕ್ಕದ ಬೃಹತ್ ನಕ್ಷತ್ರಗಳ ಬೃಹತ್ ಸಮೂಹ ಇದರಲ್ಲಿದೆ. ಅಲ್ಲೆಲ್ಲಾ ಆವರಿಸಿರುವುದು ಈ ಆಕಾಶವೇ! ಅಂದರೆ ನಾವೂ ಆಕಾಶದಲ್ಲೇ ಇದ್ದೇವೆ. ಆಕಾಶ ನಮ್ಮನ್ನು ಹೊಂದಿಕೊಂಡೇ ಇದೆ! ನಾವಷ್ಟೇ ಏಕೆ, ಎಲ್ಲಾ ಚರಾಚರ, ಜೀವ, ನಿರ್ಜೀವ ವಸ್ತುಗಳನ್ನೂ ಆಕಾಶ ಆವರಿಸಿದೆ. ಅಂದರೆ ಆಕಾಶ ಸರ್ವವ್ಯಾಪಿ. ಅದು ಇಲ್ಲದ ಸ್ಥಳವೇ ಇಲ್ಲ. ಜೀವಿಗಳ ದೇಹ ಪಂಚಭೂತಗಳಿಂದ – ಜಲ, ವಾಯು, ಅಗ್ನಿ, ಭೂಮಿ ಮತ್ತು ಆಕಾಶ -ಗಳಿಂದ ಆಗಿರುವುದೆಂಬುದು ಅಂಗೀಕೃತವಾದ ವಿಚಾರ. ಅಂದರೆ ಆಕಾಶ ನಮ್ಮೊಳಗೂ ಇದೆ, ಹೊರಗೂ ಇದೆ. ಒಳಗೂ ಇರುವ, ಹೊರಗೂ ಇರುವ, ಎಲ್ಲೆಲ್ಲೂ ಇರುವ, ಅದು ಇಲ್ಲದ ಸ್ಥಳವೇ ಇರದಿರುವುದು ಆಕಾಶ ಎಂದು ಅನ್ನಿಸಿದಾಗ ನಾನು ಒಂದು ರೀತಿಯ ಆನಂದಾನುಭೂತಿ ಅನುಭವಿಸಿದೆ. ನಾವು ಆಕಾಶವನ್ನು ಕಾಣದಿರಬಹುದು. ಆದರೆ ಆಕಾಶ ಸದಾ ನಮ್ಮನ್ನು ನೋಡುತ್ತಿರುತ್ತದೆ. ಆಕಾಶದ ಕಣ್ಣು ತಪ್ಪಿಸಿ ಯಾರಾದರೂ ಏನಾದರೂ ಮಾಡಲು ಸಾಧ್ಯವೇ? ಏನಾದರೂ ನಡೆಯಲು ಸಾಧ್ಯವೇ?  ಪರಮಾತ್ಮನನ್ನು ವರ್ಣಿಸುವಾಗ ಅವನು ಸರ್ವವ್ಯಾಪಿ, ಅವನಿಲ್ಲದ ಸ್ಥಳವೇ ಇಲ್ಲ, ಅವನು ಒಳಗೂ ಇದ್ದಾನೆ, ಹೊರಗೂ ಇದ್ದಾನೆ, ಎಲ್ಲೆಲ್ಲೂ ಇದ್ದಾನೆ, ಇತ್ಯಾದಿ ಹೇಳುವುದನ್ನು ಕೇಳಿದ್ದೇವೆ. ಅವನ ಗಮನಕ್ಕೆ ಬಾರದಂತೆ ಏನೂ ಜರುಗಲು ಸಾಧ್ಯವಿಲ್ಲವೆಂದು ಹೇಳುವುದನ್ನು ಕೇಳಿದ್ದೇವೆ. ಈ ವಿಶ್ವ ಬ್ರಹ್ಮಾಂಡವನ್ನು ನಿಯಂತ್ರಿಸುವ ವಿರಾಟ್ ಶಕ್ತಿಯ ಕುರಿತು ವೇದದಲ್ಲಿ ಹೀಗೆ ಹೇಳಿದೆ;

ಮತ್ತಷ್ಟು ಓದು »

2
ಜನ

ಸಂಸ್ಕೃತಿ ಸಂಕಥನ – 16 ನೆಹರೂ ಸೆಕ್ಯುಲರಿಸಂ

 -ರಮಾನಂದ ಐನಕೈ

ನೆಹರೂರವರು ಸಂಪೂರ್ಣ ಪಾಶ್ಚಾತ್ಯ ಶಿಕ್ಷಣ ಹಾಗೂ ಪ್ರಭಾವದಿಂದ ರೂಪಗೊಂಡವರು. ಹಾಗಾಗಿ ಅವರು ಭಾರತದ ಕುರಿತು ಚಿಂತಿಸುವಾಗ ಪಶ್ಚಿಮದಿಂದ  ಪ್ರವೇಶಿಸುತ್ತಾರೆ. ಮೂಲಭೂತವಾಗಿ ನೆಹರೂರವರಿಗೆ ಭಾರತೀಯ ಸಂಸ್ಕೃತಿಯ ಬಗ್ಗೆ ಅಸಡ್ಡೆಯ ಭಾವನೆ ಇದೆ. ಈ ಭಾವನೆ ಪ್ರೊಟೆಸ್ಟಾಂಟ್ ಕ್ರಿಶ್ಚಿಯಾನಿಟಿಯಿಂದ ಬಂದಿದ್ದು. ಹಾಗಾಗಿ ನೆಹರೂ ಸೆಕ್ಯುಲರಿಸಂನಲ್ಲಿ  ಪ್ರಭುತ್ವ ಈ ಮೌಢ್ಯವನ್ನು ನಿವಾರಿಸುವ ಜವಾಬ್ದಾರಿಯನ್ನು ಹೊಂದಿರುತ್ತದೆ. ಅಂದರೆ ಪ್ರಭುತ್ವ ಹೇಗೆ ‘ತಟಸ್ಥ’ ಇದ್ದಂತಾಯಿತು?

ನೆಹರೂ ಸ್ವತಂತ್ರ ಭಾರತದ ಪ್ರಥಮ ಪ್ರಧಾನಿ. ಸ್ವಾತಂತ್ರ್ಯ ಹಾಗೂ ಸಮಾನತೆಯ ಬಗ್ಗೆ ಕಸನು ಕಂಡವರು. ಪಂಚವಾರ್ಷಿಕ ಯೋಜನೆಗಳ ಮೂಲಕ ಭಾರತವನ್ನು ಹಂತಹಂತವಾಗಿ ಪ್ರಗತಿಗೆ ತರಲು ಹೆಗಲು ಕೊಟ್ಟವರು. ಭಾರತ ಲಿಬರಲ್ ಸೆಕ್ಯುಲರ್ ರಾಷ್ಟ್ರವಾಗಿ ಪ್ರಗತಿ ಮತ್ತು ಸಮಾ ನತೆಯ ತುತ್ತತುದಿಗೆ ಹೋಗಬೇಕೆಂಬ ದೃಢವಾದ ಸಂಕಲ್ಪ ಹೊಂದಿದವರು. ಹಾಗಾದರೆ ನೆಹರೂರವರ ಪ್ರಕಾರ ಲಿಬರಲ್ ಸೆಕ್ಯುಲರ್ ನೀತಿಯೆಂದರೆ ಏನು? ಅದನ್ನೇ ನೆಹರೂ ಸೆಕ್ಯುಲರ್ ಎನ್ನುವುದು.

ಪ್ರಭುತ್ವ ಎಲ್ಲಾ ರಿಲಿಜನ್ಗಳಿಂದ ತಟಸ್ಥವಾಗಿರ ಬೇಕು ಹಾಗೂ ರಿಲಿಜನ್ನನ್ನು ತನ್ನ ಎಲ್ಲಾ ವ್ಯವಹಾರ ಗಳಿಂದ ಹೊರಗಿಡಬೇಕೆಂದು ನೆಹರೂ ಅಭಿ ಪ್ರಾಯಪಡುತ್ತಾರೆ. ಪ್ರಭುತ್ವ ರಿಲಿಜನ್ನನ್ನು ಪುರಸ್ಕರಿ ಸಿದರೆ ಆ ರಾಷ್ಟ್ರ ಒಂದು ಪ್ರಗತಿಹೀನ ರಾಷ್ಟ್ರವಾಗು ತ್ತದೆ ಎಂಬುದು ಅವರ ದೃಢವಾದ ನಂಬಿಕೆ. ನೆಹರೂ ಸೆಕ್ಯುರಿಸಂನ್ನು ವೈಜ್ಞಾನಿಕ ಸೆಕ್ಯುಲರಿಸಂ ಅಂತಲೂ ಕರೆಯುತ್ತಾರೆ. ಹಾಗಾದರೆ ಈ ವೈಜ್ಞಾನಿಕ ಸೆಕ್ಯುಲರಿಸಂ ಅಂದರೆ ಏನು?

ಮತ್ತಷ್ಟು ಓದು »

31
ಡಿಸೆ

ಹೊಸ ವರ್ಷದ ಹಾರ್ದಿಕ ಶುಭಾಶಯಗಳು ೨೦೧೨

30
ಡಿಸೆ

ದಾರಿ

-ಪ್ರೇಮಶೇಖರ

ಆ ದಾರಿ ತನ್ನನ್ನು ಊರೊಂದರೊಳಕ್ಕೆ ಕರೆದೊಯ್ಯುತ್ತದೆ ಎಂದವಳು ಊಹಿಸಿರಲೇ ಇಲ್ಲ.  ಇದೂ ಒಂದು ದಾರಿ, ಒಂದಲ್ಲಾ ಒಂದು ದಾರಿ ಹಿಡಿದು ನಡೆಯಲೇಬೇಕಲ್ಲಾ ಅಂದುಕೊಂಡು ಈ ದಾರಿ ಹಿಡಿದು ಬಂದಿದ್ದಳು.

ಕೆಂಪುಮಣ್ಣಿನ ಹಾದಿ.  ಇಕ್ಕೆಲಗಳಲ್ಲಿ ಹಚ್ಚಹಸಿರ ತಂಪಿನ ನಡುವೆ ಹಳ್ಳದಲ್ಲಿಳಿದು ದಿಣ್ಣೆಯೇರಿ ಬಳುಕಿ ಬಳುಕಿ ಸಾಗಿತ್ತು.   ಕಾಲಿಟ್ಟಾಗ ಆಕರ್ಷಕ ಅನಿಸಿದ್ದೇನೋ ನಿಜ.  ಆದರೆ ಎಷ್ಟು ಹೊತ್ತು ನಡೆದರೂ ಅದು ಮುಗಿಯುವುದೇ ಇಲ್ಲವೇನೋ ಅನ್ನುವಂತೆ ಕಂಡಾಗ ಆತಂಕಗೊಂಡಳು.  ಅದರೊಟ್ಟಿಗೆ, ಒಂದು ನರಪಿಳ್ಳೆಯೂ ಎದುರಾಗದಾಗ ಎದೆಯಲ್ಲಿ ಭಯ ಬುಗ್ಗೆಯಾಗಿ ಉಕ್ಕತೊಡಗಿತು.  ಇದು ನನಗೊಬ್ಬಳಿಗೇ ಮೀಸಲಾದ ದಾರಿಯೇನೋ ಎಂದವಳಿಗೆ ಅನುಮಾನ ಬರುವಷ್ಟರಲ್ಲಿ ದಾರಿ ಫಕ್ಕನೆ ಎಡಕ್ಕೆ ಹೊರಳಿತ್ತು.  ಆಗ ಕಂಡಿತು ಆ ಊರು.  ಅದನ್ನು ಕಾಣುತ್ತಿದ್ದಂತೇ ಅವಳು ಗಕ್ಕನೆ ನಿಂತುಬಿಟ್ಟಳು.

ಊರಿಗೆ ಹರದಾರಿ ದೂರವಿರುವಾಗಲೇ ಹೊಸಬರೆದುರು ಅಟ್ಟಹಾಸದಿಂದ ಎಗರಾಡುವ ನಾಯಿಗಳೊಂದೂ ಈ ಊರಲ್ಲಿಲ್ಲವಲ್ಲ!  ಗ್ರಾಮಸಿಂಹಗಳಿಲ್ಲದ ಊರೂ ಉಂಟೇ?  ಅವಳಿಗೆ ಅಚ್ಚರಿ.  ಮೂಗಿನ ಮೇಲೆ ಬೆರಳಿಟ್ಟುಕೊಂಡು ನಾಲ್ಕು ಹೆಜ್ಜೆ ಸರಿಸಿದವಳು ಮತ್ತಷ್ಟು ಅಚ್ಚರಿಗೊಳಗಾದಳು.  ಬೀದಿಯಲ್ಲಿ ಜನರೇ ಇಲ್ಲ!  ಹೊತ್ತು ಮಾರುದ್ದ ಏರಿ ಬಿಸಿಲು ಚುರುಗುಟ್ಟುತ್ತಿದ್ದರೂ ಈ ಊರ ಜನರ ನಿದ್ದೆ ಇನ್ನೂ ಕಳೆದಿಲ್ಲವೇ?  ಎಂಥಾ ಜನರಪ್ಪ!  ಎಂಥಾ ಊರಪ್ಪ!

ಕುತೂಹಲದಿಂದ ಎದುರಾದ ಮೊದಲ ಮನೆಯತ್ತ ನೋಡಿದರೆ ಅದರ ಬಾಗಿಲು ತೆರೆದಿದೆ!  ಹಾಗೇ ಮುಂದೆ ನೋಟ ಹೊರಳಿಸಿದರೆ ಎಲ್ಲ ಮನೆಗಳ ಬಾಗಿಲುಗಳೂ ತೆರೆದಿವೆ!  ಇದೇನು ಸೋಜಿಗ ಎಂದುಕೊಳ್ಳುತ್ತಾ ಮೊದಲ ಮನೆಯ ಬಾಗಿಲು ಸಮೀಪಿಸಿದಳು.  ಮೂರು ಮೆಟ್ಟಲುಗಳನ್ನು ಅನುಮಾನದಿಂದಲೇ ಏರಿದಳು.  ಹೊಸ್ತಿಲಲ್ಲಿ ನಿಂತು ಒಳಗಿಣುಕಿದಳು.

ಮತ್ತಷ್ಟು ಓದು »