ರಾಮದೇವ್,ಮೀಡಿಯಾ ಮತ್ತು ಸಂಪಾದಕೀಯ
– ಮಹೇಶ ಪ್ರಸಾದ ನೀರ್ಕಜೆ
ಸಂಪಾದಕೀಯ ತಂಡ ಬರೆದ “ಸಂವಿಧಾನವನ್ನೇ ಒಪ್ಪದ ರಾಮದೇವ ಸತ್ಯಾಗ್ರಹಕ್ಕೆ ಇಳಿದಿದ್ದಾರೆ… ಜೈ ಹೋ! ” ಈ ಲೇಖನದ ಬಗ್ಗೆ ನನ್ನ ಕೆಲವು ಅನಿಸಿಕೆಗಳು. ಇವು ಒಟ್ಟಾರೆಯಾಗಿ ಮಾಧ್ಯಮಗಳ ಬೇಜವಾಬ್ದಾರಿತನದ ಬಗ್ಗೆ ನನ್ನ ಕೆಲವು ಟಿಪ್ಪಣಿಗಳು ಕೂಡ ಹೌದು. ಸದಾ ಮಾಧ್ಯಮದ ತಪ್ಪು ಒಪ್ಪುಗಳನ್ನು ಪ್ರಕಟಿಸುವ ತಂಡ ಅದರ ಜೊತೆಜೊತೆಗೆ ಬೇರೆ ಕೆಲವು ವಿಚಾರಗಳನ್ನು ಕೂಡ ಬರೆಯುತ್ತದೆ. ಅದರಲ್ಲೂ ವಿಶೇಷವಾಗಿ ಧಾರ್ಮಿಕ ಸಂಪ್ರದಾಯವಾದಿಗಳ ಬಗ್ಗೆ, ಮೂಢ ನಂಬಿಕೆಗಳ ಬಗ್ಗೆ ಸಾಕಷ್ಟು ಬರಹಗಳನ್ನು ಬರೆದಿದ್ದಾರೆ. ಅವರ ಕೆಲವು ಪ್ರಯತ್ನಗಳ ಬಗೆಗೆ ನನಗೆ ಹೆಮ್ಮೆಯಿದೆ. ಅದರಲ್ಲೂ ಜಿ ಕನ್ನಡ ವಾಹಿನಿಯಲ್ಲಿ ನಡೆಯುತ್ತಿದ್ದ ಬೃಹತ್ ಬ್ರಹ್ಮಾಂಡ ಕಾರ್ಯಕ್ರಮದ ಬಗೆಗಿನ ವಿರೋಧ ಎಲ್ಲರ ಗಮನ ಸೆಳೆದಿತ್ತು. ಆದರೆ ಮೊದಲಿನಿಂದಲೂ ಕೂಡ ನನಗೆ ಸಂಪಾದಕೀಯ ತಂಡದ ಬಗೆಗೆ ಕೆಲವು ಅನುಮಾನಗಳಿವೆ. ಮೊದಲನೆಯದಾಗಿ ತನ್ನ TRP ಹೆಚ್ಚಿಸಿ ಕೊಳ್ಳಲೋ ಎಂಬಂತೆ ಬ್ಲಾಗಿನಲ್ಲಿ ಎಲ್ಲೆಂದರಲ್ಲಿ ಅನಾಮಿಕ ಪ್ರತಿಕ್ರಿಯಗಳ ಮಹಾಪೂರ. ಈ ಪ್ರತಿಕ್ರಿಯೆಗಳನ್ನು ಯಾರು ಬರೆಯುತ್ತಾರೆ, ಅವರ ಪ್ರತಿಕ್ರಿಯೆಗಳಲ್ಲಿ ಏನಾದರು ಕುತ್ಸಿತ ಉದ್ದೇಶಗಳಿವೆಯೇ ಇತ್ಯಾದಿ ಪ್ರಶ್ನೆಗಳು ನನಗೆ ಮೊದಲಿನಿಂದಲೂ ಇವೆ. ಅಲ್ಲದೆ ಮೂಢ ನಂಬಿಕೆಯನ್ನು ವಿರೋಧಿಸುವ ನೆಪದಲ್ಲಿ ಎಲ್ಲಾ ಅಧ್ಯಾತ್ಮಿಕ ವ್ಯಕ್ತಿಗಳನ್ನು ಟೀಕಿಸುವ ಹುನ್ನಾರವೋ ಎಂದು ಕೂಡ ಸಂಶಯವಿದೆ. ಆದರೆ ಕೆಲವು ಬರಹಗಳಲ್ಲಿ ಉತ್ತಮ ಅಧ್ಯಾತ್ಮಿಕ ಮೌಲ್ಯಗಳನ್ನು ಅದರಲ್ಲೂ ವಿವೇಕಾನಂದ, ಬುಧ್ಧ ಗಾಂಧೀಜಿ ಬಗ್ಗೆ ಬರೆದಿದ್ದೂ ಹೌದು. ಒಟ್ಟಿನಲ್ಲಿ ನನ್ನ ಮಟ್ಟಿಗೆ ಸಂಪಾದಕೀಯ ವಿರೋಧಾಭಾಸಗಳ ಗೂಡು. ಇರಲಿ, ಈಗ ಪ್ರಸ್ತುತ ಲೇಖನದ ಬಗ್ಗೆ ಹೇಳುವುದಾದರೆ ನನ್ನ ಪ್ರಕಾರ ಇದರಲ್ಲಿ ಹಲವಾರು ತಪ್ಪುಗ್ರಹಿಕೆಗಳು, ಮತ್ತು ತಪ್ಪು ಮಾಹಿತಿಗಳು ಕಾಣಸಿಗುತ್ತವೆ. ಅವುಗಳನ್ನು ಪಟ್ಟಿ ಮಾಡಿ, ನಿಜ ಸಂಗತಿಯನ್ನು ಹೊರಗೆಡಹುವ ಒಂದು ಪ್ರಯತ್ನ ಇದು.
ಬಾನಿನಂಗಳದಲ್ಲೊಂದು ಸೌಂದರ್ಯ ಸ್ಪರ್ಧೆ
ನವನೀತ್ ಪೈ
ನಿಸರ್ಗ ದೇವತೆಯ ಎಲ್ಲಾ ಋತುಗಳಿಗೂ ತನ್ನದೇ ಆದ ಸೌಂದರ್ಯವಿದೆ. ಕೆಲವರಿಗೆ ಮುಂಜಾವಿನ ಮಂಜು ಸುಂದರ, ಕೆಲವರಿಗೆ ಮಳೆಗಾಲದ ಧಾರಾಕಾರ ಮಳೆ ಸುಂದರ, ಕೆಲವರಿಗೆ ಮುಸ್ಸೊಜೆಯ ಸೂರ್ಯಾಸ್ತ ಸುಂದರವಾದರೆ ಕೆಲವರಿಗೆ ಪೂರ್ಣಿಮೆಯ ರಾತ್ರಿ ಸೊಬಗು.
ಅಂದು ನಿದ್ದೆ ಬಾರದ ಕಾರಣ ಯಾವುದೋ ಒಂದು ಕಾದಂಬರಿಯ ಪುಟ ತಿರಿಗಿಸುತ್ತಾ ಕುಳಿತಿದ್ದೆ. ನಡುವೆ ತುಸು ವಿರಾಮ ಬೇಕೆನಿಸಿ ಅಂಗಳಕ್ಕೆ ಕಾಲಿಟ್ಟಾಗಷ್ಟೇ ತಿಳಿಯಿತು ಅಂದು ಹುಣ್ಣಿಮೆಯೆಂದು. ಬಾನಿನಂಗಳದಲ್ಲಿ ಚಂದಿರ ತನ್ನ ಸಮಸ್ತ ಕಾಂತಿಯಿಂದ ಕಂಗೊಳಿಸುತ್ತಾ ಚಿನ್ನದ ಬಟ್ಟಲಿನಂತೆ ಕಾಣಿಸುತ್ತಿದ್ದ. ನೆರೆಯ ಹೊಲಗಳಲ್ಲಿ ಹಾಲು ಚೆಲ್ಲಿದಂತೆ ಬೆಳದಿಂಗಳು ಹಬ್ಬಿತ್ತು. ತಂಗಾಳಿ ಗಿಡ ಮರಗಳನ್ನು ಅಪ್ಪಿ ಮಾಡುವ ನಿನಾದ ಇಂಪಾಗಿತ್ತು. ಚಂದಿರನನ್ನು ನೋಡುತ್ತಾ ಕುಳಿತುಕೊಳ್ಳಬೇಕೆನಿಸಿತು. ಚಂದಿರನೇತಕೆ ಓಡುವನಮ್ಮ ಮೋಡಕೆ ಬೆದರಿಹನೆ ಹಾಡು ಬಾಲ್ಯವನ್ನು ನೆನಪಿಸಿತು. ಚಂದಿರನಿಗೆ ಆಕರ್ಷಿತವಾಗಿ ಹಾರುತ್ತಿದ್ದ ಬೆಳ್ಳಕ್ಕಿ ಚಂದಿರನಲ್ಲೇ ಮನೆ ಮಾಡಿತು. ಈ ನಯನ ಮನೋಹರ ದೃಶ್ಯಕ್ಕೆ ಕಣ್ಣುಗಳೇ ಕ್ಯಾಮರಗಳಾದವು.
ಗಗನದಲ್ಲಿ ಚಂದಿರ ಮತ್ತು ತಾರೆಗಳ ನಡುವೆ ಸೌಂದರ್ಯ ಸ್ಪರ್ಧೆ ಏರ್ಪಟ್ಟಿತು. ಆಗಸವೇ ವೇದಿಕೆಯಾಯಿತು, ಮೋಡಗಳೇ ಪರದೆಗಳಾದವು, ಪರ್ವತ ಶ್ರೇಣಿಗಳೇ ನಿರ್ಣಾಯಕರಾದವು, ಸಮುದ್ರ ಸಾಗರಗಳೇ ಪ್ರೇಕ್ಷಕರಾದವು. ಮೋಡದ ಪರದೆ ಸರಿದಾಗ ಸ್ಪರ್ಧೆ ಆರಂಭವಾಯಿತು. ಚಂದಿರನ ಸೊಬಗನ್ನು ನೋಡಿ ಸಾಗರಗಳು ಚಂದಿರನನ್ನು ಅಪ್ಪಲು ಉಕ್ಕಿದವು. ಚಂದಿರ ಮಾರ್ಜಾಲದಂತೆ ಪೂರ್ವದಿಂದ ಪಶ್ಚಿಮಕ್ಕೆ ಅಡಿಯಿರಿಸುತ್ತಿದ್ದ. ನಿರ್ಣಾಯಕರು ಚಂದಿರನ ಮಾರ್ಜಾಲ ನಡಿಗೆಯಿಂದ ಆಕರ್ಷಿತರಾಗಿ ಪ್ರಾಥಮಿಕ ಸುತ್ತುಗಳಲ್ಲಿ ಚಂದಿರನಿಗೆ ಹೆಚ್ಚಿನ ಅಂಕಗಳನ್ನು ನೀಡಿದರು. ಅಹಂಕಾರದಿಂದ ಬೀಗಿದ ಚಂದ್ರ ತಾರೆಗಳನ್ನು ಹೀಯಾಳಿಸಿದ. ಬಾನಿಗೆಲ್ಲಾ ತಾನೇ ರಾಜ ಎಂದು ಮೆರೆದ.
ಸಂಘೇ ಶಕ್ತಿ ಕಲೌ ಯುಗೇ ಎಂದು ಅರಿತು ತಾರೆಗಳೆಲ್ಲಾ ಒಂದಾದರು. ಒಗ್ಗಟ್ಟಿನಲ್ಲಿ ಬಲವಿದೆ ಎಂಬುದನ್ನು ಮನಗೊಂಡರು. ಸೋಲೇ ಗೆಲುವಿನ ಸೋಪಾನ ಎಂಬುದನ್ನು ಅರಿತು ಕಷ್ಟಪಟ್ಟು ಮುಂದಿನ ಸ್ಪರ್ಧೆಗಳಲ್ಲಿ ಭಾಗವಹಿಸಿದರು. ಚಂದಿರನು ಎಲ್ಲರನ್ನು ಹೀಯಾಳಿಸಿದ್ದರಿಂದ ಏಕಾಂಗಿಯಾದ. ಕೃಷ್ಣ ಪಕ್ಷ ಆರಂಭವಾಯಿತು. ದಿನೇ ದಿನೇ ಚಂದಿರ ಕುಗ್ಗುತ್ತಾ ಹೋದ ಮಾತ್ರವಲ್ಲದೆ ಸ್ಪರ್ಧೆಗಳಲ್ಲಿ ಆಸಕ್ತಿ ಕಳೆದುಕೊಂಡು ತಡವಾಗಿ ಆಗಮಿಸುತ್ತಿದ್ದ. ತಾರೆಗಳು ಏಕತಾನತೆಯಿಂದ ಒಂದೇ ರೀತಿಯಾಗಿ ಮಿಂಚುತ್ತಿದ್ದವು. ಚಂದಿರನ ಬೆಳದಿಂಗಳು ಕ್ಷೀಣಿಸುತ್ತಿರುವಾಗ ತಾರೆಗಳ ಬೆಳಕೆ ಬಾನನ್ನು ತುಂಬಿತು. ಚಂದಿರನಿಲ್ಲದ ಬಾನನ್ನು ಊಹಿಸಬಹುದಾದರೂ ತಾರೆಗಳಿಲ್ಲದ ಬಾನನ್ನು ಊಹಿಸಲೂ ಸಾಧ್ಯವಿಲ್ಲ. ಅಂತು ಸ್ಪರ್ಧೆಯ ನಿರ್ಣಾಯಕ ಘಟ್ಟ ಬಂದೇ ಬಿಟ್ಟಿತು. ಆ ದಿನ ಸೋಲು ತನಗೆ ಕಟ್ಟಿಟ್ಟ ಬುತ್ತಿ ಎಂದು ತಿಳಿದ ಚಂದಿರ ಸ್ಪರ್ಧೆಗೆ ಆಗಮಿಸಲೇ ಇಲ್ಲ. ಅಂದು ಅಮಾವಾಸ್ಯೆ ಆಗಿತ್ತು ತಾರೆಗಳ ಬೆಳಕೇ ಬಾನನ್ನು ತುಂಬಿತ್ತು. ಸೌಂದರ್ಯ ಸ್ಪರ್ಧೆಯನ್ನು ತಾರೆಗಳೇ ಗೆದ್ದರು. ಚಂದಿರನನ್ನು ತಮ್ಮೊಂದಿಗೆ ಸೇರಿಸಿಕೊಂಡರು. ಚಂದಿರನು ಶುಕ್ಲ ಪಕ್ಷದಲ್ಲಿ ಹಿಗ್ಗುತ್ತಾ ಸಾಗಿದ. ಮತ್ತಷ್ಟು ಓದು 
ಗೋವಿ೦ದ ಪೈ ಎಂಬ ಅದ್ಭುತ…!
-ಸಾತ್ವಿಕ್
ಕನ್ನಡದ ಮೊದಲ ರಾಷ್ಟ್ರಕವಿ ಗೋವಿ೦ದ ಪೈ ಅವರದು ಬಹುಮುಖೀ ವ್ಯಕ್ತಿತ್ವ. ಸಾಹಿತ್ಯಿಕ ಸಾಧನೆಯ೦ತೆ ಸ೦ಶೋಧನಾ ಕಾರ್ಯದಲ್ಲೂ ಅವರದು ಎತ್ತಿದ ಕೈ. ಬಹುಭಾಷಾ ವಿಶಾರದ ಕೂಡ. ಗೋವಿ೦ದ ಪೈ ಅವರದು ಶ್ರೀಮ೦ತ ಸಾಹುಕಾರ ಬಾಬಾ ಪೈ ಮನೆತನ. ಅವರ ಜನನ ೧೮೮೩ ರ ಮಾರ್ಚ್ ೨೩ ನೆಯ ತಾರೀಕಿನ೦ದು ತಾಯಿ ದೇವಕಿಯಮ್ಮ ಅವರ ತವರುಮನೆಯಾದ ಮ೦ಜೇಶ್ವರದಲ್ಲಿ ಆಯಿತು. ದೇವಕಿಯಮ್ಮ ಶ್ರೀಮ೦ತರಾದ ಲಕ್ಷ್ಮಣ ಶ್ಯಾನುಭೋಗರ ಮಗಳು. ಗೋವಿ೦ದ ಪೈ ಮತ್ತು ಅವರ ಸೋದರ, ಸೋದರಿಯರು ಕೂಡ ಮ೦ಜೇಶ್ವರದಲ್ಲೇ ಹುಟ್ಟಿಬೆಳೆದವರು. ಗೋವಿ೦ದ ಪೈ ಅವರ ಹೆಸರಿನ ಜೊತೆಗಿರುವ ಎ೦. ಅಕ್ಷರವನ್ನು ಇದರಿ೦ದಾಗಿಯೇ ಮ೦ಜೇಶ್ವರ ಗೋವಿ೦ದ ಪೈ ಎ೦ದು ಗುರುತಿಸುವುದು೦ಟು. ಆದರೆ ಅವರ ತ೦ದೆಯ ಮನೆ ಮ೦ಗಳೂರು. ಅವರ ತ೦ದೆ ಶ್ರೀ ಸಾಹುಕಾರ ತಿಮ್ಮಪ್ಪ ಪೈ ಅವರಿಗಿದ್ದ ನಾಲ್ಕು ಗ೦ಡುಮಕ್ಕಳಲ್ಲಿ ಇವರೇ ಹಿರಿಯವರು. ಅಲ್ಲದೇ ಮೂವರು ಹೆಣ್ಣುಮಕ್ಕಳು ಕೂಡಾ ಇದ್ದರು. ಗೋವಿ೦ದ ಪೈ ಅವರಿಗೆ ಮಾಳಪ್ಪ ಪೈ ಎ೦ಬ ಮನೆಯ ಪ್ರೀತಿಯ ಅಡ್ಡ ಹೆಸರು ಇತ್ತೆ೦ದು ತಿಳಿದುಬರುತ್ತದೆ.
ಗೋವಿ೦ದ ಪೈಗಳ ಆರ೦ಭಿಕ ವಿದ್ಯಾಭ್ಯಾಸ ಮ೦ಗಳೂರಿನ ಮಿಶನ್ ಶಾಲೆಯಲ್ಲಿ ನಡೆಯಿತು. ನ೦ತರ ಕೆನರಾ ಹೈಸ್ಕೂಲ್‌ನಲ್ಲಿ ಸ್ಕೂಲ್ ಫೈನಲ್ ಪರೀಕ್ಷೆ ಪಾಸು ಮಾಡಿದರು. ಮ೦ಗಳೂರಿನ ಸರಕಾರಿ ಕಾಲೇಜಿನಲ್ಲಿ ಇ೦ಟರ್ ಮೀಡಿಯೇಟ್ ವಿದ್ಯಾಭ್ಯಾಸವನ್ನು ಮುಗಿಸಿ, ಮು೦ದಿನ ಓದಿಗಾಗಿ ಮದ್ರಾಸಿನ ಕ್ರಿಶ್ಚಿಯನ್ ಕಾಲೇಜು ಸೇರಿದರು. ಅಲ್ಲಿ ಪೈ ಅವರಿಗೆ ಸಹಪಾಠಿಯಾಗಿ ದೊರೆತದ್ದು ದೇಶದ ಪ್ರಸಿದ್ಧ ತತ್ವಶಾಸ್ತ್ರಜ್ಞರಾದ, ಮು೦ದೆ ರಾಷ್ಟ್ರಪತಿಯೂ ಆದ ಡಾ.ಎಸ್.ರಾಧಾಕೃಷ್ಣನ್ ಅವರು. ಇ೦ತಹ ಪರಿಸರದಿ೦ದ ಪೈ ಅವರ ಅನುಭವ ಕ್ಷೇತ್ರ ವಿಸ್ತೃತವಾಯಿತು. ಅಲ್ಲದೆ ಇವರು ಬಿ.ಎ. ಕಲಿಯುವಾಗಲೇ ಲ್ಯಾಟಿನ್, ಫ್ರೆ೦ಚ್ ಮೊದಲಾದ ಪಾಶ್ಚಾತ್ಯ ಭಾಷೆಗಳನ್ನೂ ಸ೦ಸ್ಕೃತ, ಬ೦ಗಾಳಿ, ಪಾಳಿ ಮು೦ತಾದ ಭಾರತೀಯ ಭಾಷೆಗಳನ್ನೂ ಕಲಿತರು. ಇವರಿಗೆ ಇಪ್ಪತ್ತೆರಡು ಭಾಷೆಗಳ ಮೇಲೆ ಪ್ರಭುತ್ವವಿತ್ತು. ಈ ಮಧ್ಯೆ ಅವಘಡವೊ೦ದು ಸ೦ಭವಿಸಿತು. ಇವರು ಬಿ.ಎ ಪರೀಕ್ಷೆಯ ಇ೦ಗ್ಲಿಷ್ ಭಾಷೆಯ ಪತ್ರಿಕೆಗಳನ್ನು ಮಾತ್ರ ಬರೆದಿದ್ದರು. ಆಗ ತ೦ದೆಯವರು ಅನಾರೋಗ್ಯಕ್ಕೆ ತುತ್ತಾದ ವಿಷಯ ತಿಳಿಯಿತು. ಮದರಾಸಿನಿ೦ದ ಹಿ೦ದಿರುಗಿದ ಪೈ ಅವರು ಮತ್ತೆ ಮದ್ರಾಸಿಗೆ ಮರಳಿಲ್ಲ. ಮು೦ದೆ ಮನೆಯೇ ಅವರ ಸರ್ವಸಾಧನೆಯ ಕೇ೦ದ್ರವಾಯಿತು. ಬಿ.ಎ. ಪರೀಕ್ಷೆಯಲ್ಲಿ ಬರೆದ ಇ೦ಗ್ಲಿಷ್ ಭಾಷೆಯ ಪತ್ರಿಕೆಯ ಫಲಿತಾ೦ಶವೂ ಪ್ರಕಟಗೊ೦ದು ಸುವರ್ಣ ಪದಕವೂ ಸಿಕ್ಕಿತು. ಆದರೆ ಗೋವಿ೦ದ ಪೈ ತಮ್ಮ ವಿದ್ಯಾಭ್ಯಾಸವನ್ನು ಮದ್ರಾಸಿನಲ್ಲಿ ಮತ್ತೆ ಮು೦ದುವರೆಸಲು ಆಸಕ್ತರಾಗಲಿಲ್ಲ.ತಮ್ಮ ಬಿ.ಎ ವಿದ್ಯಾಭ್ಯಾಸವನ್ನು ನಿಲ್ಲಿಸಿ, ಮ೦ಜೇಶ್ವರದಲ್ಲಿ ನೆಲೆಸಿದ ಗೋವಿ೦ದ ಪೈ ಅವರಿಗೆ ವಿವಾಹಯೋಗ ಕೂಡಿಬ೦ತು.
ಆಯುರ್ವೇದವನ್ನು ಕಂಡರೆ ಪಾಶ್ಚಾತ್ಯರಿಗೆ ಭೀತಿ!
ಇಂಗಿಷ್ ವೈದ್ಯ ಪದ್ಧತಿಯು ಯಾವುದೇ ರೋಗವನ್ನು ಸಂಪೂರ್ಣ ಗುಣ ಮಾಡುವುದಿಲ್ಲ. ರೋಗದ ಲಕ್ಷಣಗಳನ್ನು ತಟಸ್ಥಗೊಳಿಸುವ ಮೂಲಕ ಆ ರೋಗವನ್ನು ಅಜ್ಞಾತವಾಗಿಡುತ್ತದೆ ಅಷ್ಟೆ. ಗುಳಿಗೆಗಳು ರೋಗಲಕ್ಷಣಗಳನ್ನು ತಟಸ್ಥವಾಗಿಸುವ ಕಾರಣ ರೋಗ ಗುಣವಾಗಿದೆ ಎಂಬ ಭ್ರಾಂತಿಗೊಳಗಾಗುತ್ತೇವೆ. ಆದರೆ ಆಯುರ್ವೇದ ವೈದ್ಯ ಪದ್ಧತಿ ಹಾಗಲ್ಲ, ರೋಗಮೂಲ ಏನು ಎಂಬುದನ್ನು ಅರಿತುಕೊಂಡು ಅದಕ್ಕೆ ಚಿಕಿತ್ಸೆ ಮಾಡುತ್ತದೆ. ಶುಭ ಮುಂಜಾನೆಯ ಮೂವತ್ತು ಗೆಳೆಯರು..!
-ರವಿ ಮುರ್ನಾಡು
ನಿಮಗೆ ಪರಿಚಯಿಸಬೇಕು ನನ್ನ ಗೆಳೆಯರನ್ನು. ನಂಟನ್ನು ಹಾಗೇ ಬದುಕಿನಲ್ಲಿ ಗಂಟು ಹಾಕಬೇಕು. ಲೆಕ್ಕವಿಲ್ಲದ ರಾತ್ರಿಗಳ ಕಳೆದು, ಪ್ರತಿ ಮುಂಜಾನೆಯ ಲೆಕ್ಕ ತೆಗೆಯುವುದು ತುಂಬಾ ಇಷ್ಟದ ಕೆಲಸ. ರಾತ್ರಿಯ ಲೆಕ್ಕವಿಟ್ಟವರದ್ದು ಕತ್ತಲೆಯ ಕೆಲಸ. ಹಗಲಿನ ಲೆಕ್ಕವಿಟ್ಟವರದ್ದು ಪುಟದ ದಾಖಲೆಯ ಕೆಲಸ. ಹಗಲು-ರಾತ್ರಿಯ ನಡುವೆ ಅಳಿಸಿ ಹೋಗುವ ನಗುವಿನ ಗಳಿಗೆಗಳು ಮತ್ತೆ ಬರಲಿ ಎಂಬುದು ಎಲ್ಲರ ಕನಸು. ಮತ್ತೆ ಮತ್ತೆ ಒತ್ತರಿಸುವ ದುಃಖ್ಖ ಮತ್ತೇ ಬಾರದಿರಲೀ ಎಂಬ ಪ್ರಾರ್ಥನೆ.
ಆ ಬಂಧವನ್ನು ಹಾಗೆಯೇ ಉಳಿಸುತ್ತಾ ಬಂದಿದ್ದೇನೆ. ಅವರು ಮನುಷ್ಯ ಭಾಷೆಗೆ ನಿಲುಕದ ನಕ್ಷತ್ರಗಳು. ಪ್ರತೀ ನನ್ನ ಮುಂಜಾನೆಗೆ ” ಶುಭ” ಮುಂಜಾವಿನ ಭಾಷ್ಯ ಬರೆಯುತ್ತಾರೆ. ಚಿನ್ನದ ಅಕ್ಷರಗಳಲ್ಲಿ ಬರೆದಿಡುವ ಆನಂದ ಅದು. ಶುಭಾಶಯ ಅಂದಾಗ ಮನೆ-ಮನೆಯ ದಿನಗಳು ಆಲೋಚನೆಗೆ ಬರುತ್ತವೆ. ಬೆಳಿಗ್ಗೆ ಎದ್ದು ಹೊರ ಬಂದಾಗ ಹಲವರ- ಪರಿಚಿತರ ಶುಭಾಶಯಗಳು ಎದುರುಗೊಳ್ಳುತ್ತವೆ. ನಮ್ಮೆಲ್ಲರ ಹಗಲು ಹುಟ್ಟುವುದೇ ಆವಾಗ. ಮನುಷ್ಯನ ಮನಸ್ಸನ್ನು ಅಂತಹ ಸಂದರ್ಭಗಳು ನಿರ್ಧರಿಸುತ್ತವೆ. ರಾತ್ರಿ ನಿದ್ದೆಗೆ ಜಾರಿದ ಮೇಲೆ ಶರೀರ ಒಂಟಿ. ಮನಸ್ಸು ಕೂಡ. ಬೆಳಿಗ್ಗೆ ಎದ್ದಾಗಲೇ ಗೊತ್ತಾಗುವುದು ನಾವು ಹೇಗೆ ಎಂದು. ಸಂಸಾರ ಅನ್ನುವ ಜಗತ್ತಿನಲ್ಲಿ ಅದರ ಪರಿಕಲ್ಪನೆಯ ಚಿತ್ರಣ ಮೂಡುವುದು ಹೇಗೋ?. ಮನೆ ಎಂದರೆ ಒಂದು ಜಗತ್ತು. ಗಂಡ-ಹೆಂಡತಿ- ಮಕ್ಕಳು ಮತ್ತು ಅದರೊಳಗೆ ಬೇರುಬಿಟ್ಟ ಸಂಬಂಧಗಳು. ಅದೊಂದು ವರ್ತುಲ ಬೆಳಗ್ಗಿನ ಗಳಿಗೆಗೆಳನ್ನು ಹಗಲಿಗೆ ಹಂಚಿಕೊಂಡು ದೀಪ ಹಚ್ಚಿದ ದಿನಗಳನ್ನು ಕಾಯುತ್ತಿದ್ದೇನೆ.!!
ಅವರ ನಗು ಕಾಣದೆಯೂ ಇರಬಹುದು…ನನ್ನ ಗೆಳೆಯರ ಮಾತುಗಳು ಅರ್ಥವಾಗದೆಯೂ ಇರಬಹುದು….ಚಿತ್ತಪಟದಲ್ಲಿ ಭಾವವಾಗಿಸುತ್ತೇನೆ. ಭಾವದ ಭಾವಚಿತ್ರವಾಗಿಸುತ್ತೇನೆ. ಭಾವಚಿತ್ರಗಳು ಹಾಗೆಯೇ…ನಗುವಂತಿದ್ದರೆ ಎಲ್ಲರಿಗೂ ನಗುತ್ತಿರುತ್ತವೆ. ದುಃಖ್ಖದಲ್ಲಿದ್ದರೆ, ಎಲ್ಲರ ಮುಂದೆ ಅಳುತ್ತಿರುತ್ತದೆ. ಸುಖ-ದುಃಖ್ಖವನ್ನು ನಿರಂತರ ಪ್ರತಿಫಲಿಸುವ ಒಂದು ಶಕ್ತಿ ಎಂದರೆ ಅದು ಭಾವಚಿತ್ರ. ಅದಕ್ಕೆ ಮನುಷ್ಯರು ಭಾವಚಿತ್ರವನ್ನು ಹೆಚ್ಚು ಇಷ್ಟ ಪಡುತ್ತಾರೆ. ಮತ್ತಷ್ಟು ಓದು 
ಇದು ಹಿಂದಿ ಹೇರಿಕೆ ಬೂತದ ಕೈಚಳಕ
ಸರಕಾರ ತನ್ನ ಕಾರ್ಯಗಳು ಜನರಿಗೆ ತಲುಪಿಸೊಕ್ಕೆ ಪತ್ರಿಕೆಗಳನ್ನ ಅವಲಂಬಿಸಿದೆ. ಕೆಲವು ಪ್ರಮುಕ ಕಾರ್ಯಗಳನ್ನ/ ಸೌಲಬ್ಯಗಳನ್ನ ಪತ್ರಿಕೆಗಳಲ್ಲಿ ಜಾಹಿರಾತು ನೀಡಿತ್ತೆ. ಪತ್ರಿಕೆಗಳಲ್ಲಿ ಜಾಹಿರಾತನ್ನ ನೋಡೊ ಜನ, ಆ ಕಾರ್ಯ/ಸೌಲಬ್ಯದ ಲಾಬ ಪಡೆದುಕೊಳ್ಳಬೇಕು ಅನ್ನೊದು ಉದ್ದೇಶ(?).ಆದರೆ ಸರಕಾರ ಈ ಜಾಹಿರಾತು ನೀಡೋ ವಿಶಯದಲ್ಲೂ ತಾರತಮ್ಯ ಮಾಡಿ ತನ್ನ ಕಾರ್ಯ/ ಸೌಲಬ್ಯ ಗಳು ಕನ್ನಡಿಗರಿಗೆ ಸಿಗಬಾರ್ದು ಅನ್ನೊ ತರ ನಡೆದುಕೊಳ್ತಿರೋದು ಮಾತ್ರ ನಿಗೂಡ! ಇದೋ ಹೀಗೆ ಅಂತೀರ- ಕನ್ನಡ ಪತ್ರಿಕೆಗಳಲ್ಲಿ ಕನ್ನಡವಲ್ಲದ, ಕನ್ನಡಿಗರಿಗೆ ಅರಿವಿಲ್ಲದ ಹಿಂದಿ ಬಾಶೆಯಲ್ಲಿ ಜಾಹಿರಾತು ನೀಡೋದು.
ಈ ಕೆಲ್ಸವನ್ನ ಸರಕಾರ ಬಹಳ ವ್ಯವಸ್ತಿತವಾಗಿ ಮಾಡ್ತಿದೆ. ಇದರ ಕೆಲವು ಕೆಲವು ಸ್ಯಾಂಪಲ್ ಗಳು-
೧. ಕೆಲವು ವರ್ಶಗಳ ಹಿಂದೆ ನೈರುತ್ಯ ರೈಲ್ವೆ ,ಡಿ ದರ್ಜೆ ನೌಕರರಿಗೆ(೭ ಅತವಾ ೮ ನೇ ತರಗತಿ ಪಾಸಾದವರಿಗೆ) ಅರ್ಜೆಗೆ ಅಹ್ವಾನಿಸಿ, ಕನ್ನಡವಲ್ಲದ ಬಾಶೆಯಲ್ಲಿ ಯಾವುದೋ ಒಂದೆರಡು ಚಿಕ್ಕ ಪತ್ರಿಕೆಗಳಲ್ಲಿ ಜಾಹಿರಾತು ನೀಡಿತ್ತಂತೆ. ಆ ಜಾಹಿರಾತು ಓದೋಕ್ಕೆ ಆಗದ ಕನ್ನಡದವರು ಅರ್ಜಿ ಹಾಕಿದ್ದೆ ಕಡಿಮೆ ಜನ. ಎಂತಾ ದುರಂತ.
ಮತ್ತಷ್ಟು ಓದು 
ಬೆಂಗಳೂರಿನಲ್ಲಿ ನಡೆದ ಭ್ರಷ್ಟಾಚಾರ ವಿರೋಧಿ ಆಂದೋಲನ…
– ಚೇತನ್ ಜೀರಾಳ್
ಬಹುಷಃ ಕಳೆದ ಕೆಲವು ತಿಂಗಳಿಂದ ದೇಶದ ಪ್ರತಿಯೊಬ್ಬ ಪ್ರಜೆಯು ಮಾತನಾಡುತ್ತಿರುವುದು ದೇಶದಲ್ಲಿ ವ್ಯಾಪಕವಾಗಿರುವ ಭ್ರಷ್ಟಾಚಾರದ ಬಗ್ಗೆ. ಈ ಭ್ರಷ್ಟಾಚಾರ ಅನ್ನೋ ಮಹಾಮಾರಿ ಪ್ರತಿಯೊಂದು ಕ್ಷೇತ್ರದಲ್ಲೂ ತನ್ನ ಕರಾಳ ಬಾಹುವನ್ನು ಚಾಚಿದೆ. ಭ್ರಷ್ಟಾಚಾರ ಸಮಾಜದ ನೈತಿಕತೆಯ ಜೊತೆಗೆ , ಇಡೀ ನಾಡನ್ನೇ ಅಧೋಗತಿಯತ್ತ ಕೊಂಡ್ಯೊಯುತ್ತದೆ. ಇಂದು ಭ್ರಷ್ಟಾಚಾರ ಅನ್ನುವುದು ಜಾತಿ, ಮತ, ಧರ್ಮ, ಭಾಷೆ ಹೀಗೆ ಎಲ್ಲವನ್ನು ಮೀರಿ ಬೆಳೆದು ನಿಂತು ನಮ್ಮ ನಾಡಿನ ಏಳಿಗೆಗೆ ಮಾರಕವಾಗಿ ಪರಿಣಮಿಸಿದೆ. ಕೇಂದ್ರ ಹಾಗೂ ರಾಜ್ಯ ಅನ್ನೋ ಭೇದವಿಲ್ಲದೇ ಭ್ರಷ್ಟಾಚಾರ ಇಂದು ಸಮಾಜದ ಎಲ್ಲ ಕ್ಷೇತ್ರಗಳಲ್ಲೂ ನೆಲೆಗೊಂಡಿದೆ. ಭ್ರಷ್ಟಾಚಾರ ಅಳಿಯದ ಹೊರತು ನಮ್ಮ ರಾಜ್ಯ ಏಳಿಗೆ ಕಾಣುವುದಕ್ಕೆ ಸಾಧ್ಯವೇ ಇಲ್ಲಾ. ಈ ಭ್ರಷ್ಟಾಚಾರ ಎಂಬ ರಕ್ಷಸವನ್ನು ನಾವೆಲ್ಲಾ ಸೇರಿ ಹೊಡೆದು ಹಾಕಲೇ ಬೇಕು.
ಮನೆಮಗಳಿಗೊಂದು ಗಿಡ ನೆಡುವ ಧರ್ ಹರಾ ನಮಗೂ ಆದರ್ಶವಾಗಲಿ…
– ಚಿತ್ರ ಸಂತೋಷ್
ಹೆಣ್ಣುಮಗಳಿಗಾಗಿ ಗಿಡಗಳನ್ನು ನೆಡುವ ಬಿಹಾರದ ಧರ್‌ಹರಾ ಗ್ರಾಮದ ‘ವಿಶಿಷ್ಟ ಸಂಸ್ಕೃತಿ’ಯನ್ನು ನೋಡಿ ಅಮೆರಿಕಾವೇ ನಿಬ್ಬೆರಗಾಗಿತ್ತು. ಅಮೆರಿಕ ರಾಯಭಾರಿ ಮೆಲನ್ನೆ ವರ್ರ್ ಈ ಗ್ರಾಮವನ್ನು ಮನತುಂಬಾ ಕೊಂಡಾಡಿ, ಈ ಗ್ರಾಮ ವಿಶ್ವಕ್ಕೆ ಮಾದರಿ ಎಂದಿದ್ದರು. ಆದರೆ, ನಮ್ಮದೇ ನೆಲದ ಇಂಥದ್ದೊಂದು ಅಪೂರ್ವ ಸಂಸ್ಕೃತಿಯನ್ನು ನಮ್ಮನೆಯ ಸಂಸ್ಕೃತಿಯನ್ನಾಗಿ ಬೆಳೆಸುವ ‘ಕರ್ತವ್ಯ’ವನ್ನು ನಾವಿನ್ನೂ ಮಾಡೇ ಇಲ್ಲ!
ಬಿಟಿಯಾಕೀ ಜನ್ಮ್ ಹೋನಾ, ಹಮಾರೆ ಲಿಯೇ ತೋ ಬಹುತ್ ಖುಷಿಕೀ ಬಾತ್ ಹೈ. ಬಿಟಿಯಾ ಹಮಾರೆ ಲಿಯೇ ಬೋಜ್ ನಹೀ ಹೈ, ಉನ್ಕೋ ಬಿ ಪಡಾಯೆತೋ ಓಬಿ ಸಾಕ್ಷರ್ ಬನಾಯೇಂಗೆ, ಶಾದಿಬೀ ಕರೇಂಗೆ. ಕ್ಯಾಂಕೀ ಬಿಟಿಯಾ ಧೋ ಘರ್ ಕೀ ಚಿರಾಗ್ ಹೈ….(ನಮಗೆ ಹೆಣ್ಣು ಮಕ್ಕಳು ಹುಟ್ಟುವುದೆಂದರೆ ಅದೊಂದು ಸಂಭ್ರಮ, ಹೆಮ್ಮೆ. ಹೆಣ್ಣು ಮಕ್ಕಳು ನಮಗೆ ಹೊರೆಯಲ್ಲ. ಗಂಡು ಮಕ್ಕಳಂತೆ ಹೆಣ್ಣು ಮಕ್ಕಳಿಗೂ ಶಿಕ್ಷಣ ನೀಡ್ತೀವಿ. ಮದುವೆ ಮಾಡ್ತೀವಿ. ಏಕೆಂದರೆ ಹೆಣ್ಣು ಮಕ್ಕಳು ಎರಡು ಕುಟುಂಬಗಳ ಬಾಂಧವ್ಯವನ್ನು ಬೆಸೆಯುವ ಕೊಂಡಿ)
ಥತ್! ಇದ್ಯಾವುದೋ ಭಾಷಣಕಾರನ ಬೊಗಳೆ ಮಾತುಗಳು ಎಂದೆನಿಸಬಹುದು. ಆದರೆ, ನಿಮ್ಮ ಊಹೆ ಖಂಡಿತಾ ತಪ್ಪು. ಇದು ಕ್ಷಣ ಕ್ಷಣದ ಬದುಕನ್ನೂ ಕೂಲಿ-ನಾಲಿ ಮೂಲಕ ಕಂಡುಕೊಳ್ಳುವ ಜನಸಾಮಾನ್ಯರ ಮಾತು. ಇವರಿಗೆ ಹೆಣ್ಣು ಮಕ್ಕಳು ಹುಟ್ಟಿದರೆ ಹಬ್ಬದ ಸಂಭ್ರಮ. ನಮ್ಮ ಮನೆಮಗಳು ಹುಟ್ಟಿದರೆ, ಅವಳ ಬದುಕು ಅವಳೇ ಕಟ್ಟಿಕೊಳ್ಳುತ್ತಾಳೆ ಅನ್ನೋ ಗಟ್ಟಿ ನಂಬಿಕೆ ಅವರದು. ಹೆಣ್ಣು ಭ್ರೂಣ ಹತ್ಯೆ, ವರದಕ್ಷಿಣೆಗಾಗಿ ಪತ್ನಿಯನ್ನು ಪೀಡಿಸುವುದು ಅಥವಾ ಹೆಣ್ಣು ಮಗಳ ಮದುವೆಗಾಗಿ ಲಕ್ಷಾಂತರ ರೂಪಾಯಿ ಸಾಲಮಾಡಿ ಜೀವನಡೀ ಸಾಲ ತೀರಿಸಲು ಪರದಾಡುವುದು…ಇದೆಲ್ಲಾ ಈ ಊರಿನಲ್ಲಿ ಇನ್ನೂ “ಅಪರಿಚಿತ” ಸುದ್ದಿಗಳು. ಇದ್ಯಾವ ಸಂಸ್ಕೃತಿ, ಇದ್ಯಾವ ಊರು? ಅಂತೀರಾ…
ಚಿತ್ರದುರ್ಗ: ಒಂದು ಅಪರೂಪ ಐತಿಹಾಸಿಕ ತಾಣ.
– ಆರ್.ರಾಘವೇಂದ್ರ, ಚಳ್ಳಕೆರೆ
ಇತಿಹಾಸ ಪ್ರಸಿದ್ಧ ಚಿತ್ರದುರ್ಗ ಜಿಲ್ಲೆಯು ಚಳ್ಳಕೆರೆ, ಚಿತ್ರದುರ್ಗ, ಹಿರಿಯೂರು, ಹೊಳಲ್ಕೆರೆ, ಹೊಸದುರ್ಗ ಮತ್ತು ಹೊಳಲ್ಕೆರೆ ಎಂಬ ಆರು ತಾಲ್ಲೂಕು ಕೇಂದ್ರಗಳನ್ನೊಳಗೊಂಡಂತೆ ೧೮೫ ಗ್ರಾಮ ಪಂಚಾಯಿತಿ ಕೇಂದ್ರಗಳಿಂದ ಕೂಡಿರುತ್ತದೆ. ಚಿತ್ರದುರ್ಗ ಜಿಲ್ಲೆಯು ೮೩೮೮ ಚ.ಕಿ.ಮೀ. ವಿಸ್ತೀರ್ಣ ಹೊಂದಿದ್ದು, ಒಟ್ಟು ೧೫,೧೦,೨೨೭ ಜನಸಂಖ್ಯೆ ಇರುತ್ತದೆ.
ಜಿಲ್ಲೆಯ ಆರು ತಾಲ್ಲೂಕುಗಳ ಪೈಕಿ, ಚಿತ್ರದುರ್ಗ ತಾಲ್ಲೂಕು ಸಾಪೇಕ್ಷಿತವಾಗಿ ಅಭಿವೃದ್ಧಿ ಹೊಂದಿದ ತಾಲ್ಲೂಕಿನ ಗುಂಪಿನಲ್ಲಿದ್ದರೆ, ಚಳ್ಳಕೆರೆ, ಹೊಳಲ್ಕೆರೆ, ಹಿರಿಯೂರು, ಹೊಸದುರ್ಗ ಅತಿ ಹಿಂದುಳಿದ ತಾಲ್ಲೂಕುಗಳ ಗುಂಪಿನಲ್ಲಿವೆ ಹಾಗೂ ಮೊಳಕಾಲ್ಮೂರು ತಾಲ್ಲೂಕು ಅತ್ಯಂತ ಹಿಂದುಳಿದ ತಾಲ್ಲೂಕಿನ ಗುಂಪಿನಲ್ಲಿದೆ. ಆದರೆ ರಾಜ್ಯದ ಹಿಂದುಳಿದ ಪ್ರದೇಶವಾಗಿದ್ದರೂ, ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಸಾಧನೆ ಮಾಡಿದೆ. ಅದು ಹೇಗೆಂದರೆ ಶೈಕ್ಷಣಿಕ ಕ್ಷೇತ್ರದಲ್ಲಿ ಸಾಕ್ಷರತೆ ಪ್ರಮಾಣ, ಮಕ್ಕಳು-ಉಪಾಧ್ಯಾಯರ ಅನುಪಾತ, ೬-೧೪ ವಯೋಮಾನದಲ್ಲಿ ಶಾಲೆ ಸೇರದ ಮಕ್ಕಳ ಪ್ರಮಾಣ, ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ದಾಖಲಾತಿ ಇವುಗಳ ಮೇಲೆ ನಾವು ಜಿಲ್ಲೆಯ ಶೈಕ್ಷಣಿಕ ಪ್ರಗತಿಯನ್ನು ಕಾಣಬಹುದು. ಆದರೆ ಶಿಕ್ಷಣ ಕ್ಷೇತ್ರದಲ್ಲಿ ಹಿಂದುಳಿದ ಪ್ರದೇಶವೆಂದು ಮೊಳಕಾಲ್ಮೂರು ತಾಲ್ಲೂಕು ಒಂದೇ. ಚಿತ್ರದುರ್ಗವು ತಾಮ್ರದ ಖನಿಜ ಸಂಪತ್ರವನ್ನು ಇಂಗಳದಾಳ್‌ನಲ್ಲಿ ಒಳಗೊಂಡಿದೆ.
ಸಾಹಿತ್ಯ ಕ್ಷೇತ್ರದ ಮೇರುವ್ಯಕ್ತಿಯಾದ ರಸಕವಿ ‘ಕುವೆಂಪು’ರವರನ್ನೇ ಶಿಷ್ಯರಾಗಿ ಪಡೆದಂತಹ ಕೀರ್ತಿ ಟಿ.ಎಸ್.ವೆಂಕಣ್ಣಯ್ಯರವರದು. ತಳಕಿನ ಕುಟುಂಬದ ತ.ಸು.ಶಾಮರಾಯರು, ತ.ರಾ.ಸು., ಅಂಬುಜಾ ತ.ರಾ.ಸು., ರವರು ಸೇರಿದಂತೆ, ಬೆಳಗೆರೆ ಮನತೆನದ ಬೆಳಗೆರೆ ಚಂದ್ರಶೇಖರಶಾಸ್ತ್ರಿ, ಬೆಳಗೆರೆ ಕೃಷ್ಣಶಾಸ್ತ್ರಿ, ಬೆಳಗೆರೆ ಜಾನಕಮ್ಮ ಮುಂತಾದ ಸಾಹಿತ್ಯ ಗಣಿಗಳು ಚಿತ್ರದುರ್ಗದ ಸಾಹಿತ್ಯವನ್ನು ಅಮರವಾಗಿಸಿದ್ದಾರೆ. ತ.ರಾ.ಸು. ರವರ ದುರ್ಗಾಸ್ತಮಾನ, ನಾಗರಹಾವು ಹಾಗೂ ಇತರೆ ಕೃತಿಗಳು ವಿಶ್ವಕ್ಕೆ ಚಿತ್ರದುರ್ಗದ ಪರಿಚಯವನ್ನು ಬಹುಸುಂದರವಾಗಿ ಮಾಡಿಕೊಟ್ಟಿದೆ. ‘ಬಿ.ಎಲ್.ವೇಣು’ ರವರ ‘ಕಲ್ಲರಳಿ ಹೂವಾಗಿ’ ಚಲನಚಿತ್ರವು ರಾಷ್ಟ್ರಮಟ್ಟದಲ್ಲಿ ಪ್ರಶಂಸೆ ಪಡೆದಿದ್ದು, ಖ್ಯಾತ ಸಂಶೋಧಕರಾದ ಹುಲ್ಲೂರು ಶ್ರೀನಿವಾಸ ಜೋಯಿಸರು, ಪ್ರೋ. ಲಕ್ಷ್ಮಣ ತೆಲಗಾವಿ, ಪ್ರೋ. ಬಿ.ರಾಜಶೇಖರಪ್ಪ, ಜಾನಪದ ತಜ್ಞರಾದ ಡಾ.ಮೀರಾಸಾಬಿಹಳ್ಳಿ ಶಿವಣ್ಣ, ಮಲ್ಲಿಕಾರ್ಜುನ ಕಲಮರಹಳ್ಳಿ, ನೇಮಿಚಂದ್ರ, ಮುಂತಾದವರು ಸೇರಿದಂತೆ ಅನೇಕ ಸಾಹಿತ್ಯ ಕಣ್ಮಣಿಗಳನ್ನೊಳಗೊಂಡಿದ್ದು, ದುರ್ಗವು ಸಾಹಿತ್ಯದ ಗಣಿಯಾಗಿದೆ. ಮತ್ತಷ್ಟು ಓದು 
ಕನ್ನಡ ಟಿವಿ ವಾಹಿನಿಗಳು ಹಾಗೂ ಮೂಢನಂಬಿಕೆಗಳ ಪ್ರಸಾರ
ಕನ್ನಡದ ಎಲ್ಲ ಟಿವಿ ವಾಹಿನಿಗಳೂ ಜ್ಯೋತಿಷ್ಯವೆಂಬ ಅವೈಜ್ಞಾನಿಕ ಹಾಗೂ ಮೂಢನಂಬಿಕೆಗಳನ್ನು ಬಲಪಡಿಸುವ ಕಾರ್ಯಕ್ರಮಗಳನ್ನು ಪ್ರಸಾರ ಮಾಡುತ್ತಿದ್ದು ಇದು ಮಾಧ್ಯಮಗಳಿಗೆ ಇರಬೇಕಾದ ಜವಾಬ್ದಾರಿಗೆ ವಿರುದ್ಧವಾದುದು. ವಿಜ್ಞಾನದ ಆವಿಷ್ಕಾರವಾದ ಟಿವಿಯನ್ನು ತಮ್ಮವ್ಯಾಪಾರ ಹೆಚ್ಚಿಸಿಕೊಳ್ಳಲು ಜ್ಯೋತಿಷಿಗಳಿಗೆ ಮಧ್ಯವರ್ತಿಗಳಾಗಿ ಕೆಲಸ ಮಾಡುತ್ತಿರುವ ಟಿವಿ ವಾಹಿನಿಗಳು ಯಾವುದೇ ನಾಚಿಕೆ ಇಲ್ಲದೆ ಈ ಕೆಲಸದಲ್ಲಿ ತೊಡಗಿವೆ. ವಿಜ್ಞಾನಿಗಳು ಶ್ರಮ ವಹಿಸಿ ಸಂಶೋಧಿಸಿದ ಟಿವಿ ಮಾಧ್ಯಮ ಇಂದು ಅವೈಜ್ಞಾನಿಕ ವಿಚಾರಗಳು ಹಾಗೂ ಮೂಢನಂಬಿಕೆಗಳನ್ನು ಬಲಪಡಿಸಲು ದುರುಪಯೋಗವಾಗುತ್ತಿದೆ. ಇದನ್ನು ಪ್ರಜ್ಞಾವಂತರು ವಿರೋಧಿಸಬೇಕಾಗಿದೆ. ಮಾಧ್ಯಮಗಳಿಗೆ ಜನರನ್ನು ವಿಚಾರವಂತರನ್ನಾಗಿ ಮಾಡುವ ಮಹತ್ತರ ಜವಾಬ್ದಾರಿ ಇದೆ. ಇದನ್ನು ಕಡೆಗಣಿಸಿ ೨೧ ಶತಮಾನದಲ್ಲೂ ಜ್ಯೋತಿಷ್ಯ, ವಾಸ್ತು ಎಂಬ ವೈಜ್ಞಾನಿಕ ಆಧಾರಗಳಿಲ್ಲದ ಪುರೋಹಿತಶಾಹಿ ವಿಚಾರಗಳನ್ನು ಜನರ ಮೇಲೆ ಹೇರಲು ಯತ್ನಿಸುತ್ತಿರುವ ಟಿವಿ ವಾಹಿನಿಗಳ ಧೋರಣೆಯನ್ನು ವಿಚಾರವಂತರು, ಸಾಹಿತಿಗಳು, ವಿಜ್ಞಾನಿಗಳು, ತಂತ್ರಜ್ಞರು, ಪ್ರಜ್ಞಾವಂತರು ವಿರೋಧಿಸಬೇಕಾಗಿದೆ.
ಇಂದು ದೇಶಾದ್ಯಂತ ಭ್ರಷ್ಟಾಚಾರದ ವಿರುದ್ಧ ಹೋರಾಟ ರೂಪುಗೊಳ್ಳುತ್ತಿರುವ ಹೊತ್ತಿನಲ್ಲಿ ಮೂಢನಂಬಿಕೆಗಳನ್ನು ಬಲಪಡಿಸುವ ಪುರೋಹಿತಶಾಹಿ ಕುತಂತ್ರದ ವಿರುದ್ಧವೂ ಹೋರಾಟ ನಡೆಯಬೇಕಾದ ಅಗತ್ಯ ಇದೆ. ಕಷ್ಟಪಟ್ಟು ದುಡಿದು ತಿನ್ನುವುದರ ಬದಲು ಕೆಲವು ಪುರೋಹಿತಶಾಹಿಗಳು ಜ್ಯೋತಿಷ್ಯ, ವಾಸ್ತುವಿನ ಹೆಸರಿನಲ್ಲಿ ಜನರ ನಂಬಿಕೆಗಳನ್ನು, ಜನರ ಭಯವನ್ನು ತಮ್ಮ ಜೇಬು ತುಂಬಿಸಿಕೊಳ್ಳಲು ಸುಲಭೋಪಾಯವಾಗಿ ಬಳಸಿಕೊಳ್ಳುತ್ತಿರುವುದೂ ಒಂದು ರೀತಿಯ ಭ್ರಷ್ಟಾಚಾರವಲ್ಲವೇ? ಇಂಥ ಭ್ರಷ್ಟಾಚಾರಕ್ಕೆ ಟಿವಿ ವಾಹಿನಿಗಳು ಕೈಗೂಡಿಸುತ್ತಿರುವುದು ಎಷ್ಟರ ಮಟ್ಟಿಗೆ ಸಮಂಜಸವೆಂದು ಟಿವಿ ವಾಹಿನಿಗಳನ್ನು ನಡೆಸುವವರು ಆತ್ಮವಿಮರ್ಶೆ ಮಾಡಿಕೊಳ್ಳಬೇಕಾದ ಅಗತ್ಯ ಇದೆ. ಜ್ಯೋತಿಷ್ಯ, ವಾಸ್ತು ಇಲ್ಲದೆ ಪಾಶ್ಚಾತ್ಯ ರಾಷ್ಟ್ರಗಳು ಅಭಿವೃದ್ಧಿ ಸಾಧಿಸಿವೆ. ಹೀಗಿರುವಾಗ ನಮ್ಮ ಟಿವಿ ವಾಹಿನಿಗಳು ಜ್ಯೋತಿಷ್ಯ, ವಾಸ್ತುಗಳನ್ನು ತಲೆಯ ಮೇಲೆ ಹೊತ್ತುಕೊಂಡು ಮೆರೆಸುತ್ತ್ತಿರುವುದು ಯಾವ ಪುರುಷಾರ್ಥ ಸಾಧನೆಗಾಗಿ ಎಂದು ನಾವು ಕೇಳಬೇಕಾಗಿದೆ. ಮತ್ತಷ್ಟು ಓದು 





